Stray Dogs: ಒಂಟಿ ಮಹಿಳೆ ಮೇಲೆ ದಾಳಿ ನಡೆಸಿ, ಕಚ್ಚಿ ಕೊಂದ 20 ಬೀದಿ ನಾಯಿಗಳು! - Vistara News

ದೇಶ

Stray Dogs: ಒಂಟಿ ಮಹಿಳೆ ಮೇಲೆ ದಾಳಿ ನಡೆಸಿ, ಕಚ್ಚಿ ಕೊಂದ 20 ಬೀದಿ ನಾಯಿಗಳು!

Stray Dogs: ಹಸು ಮೇಯಿಸಲು ಜಮೀನಿಗೆ ಹೋದ ಮಹಿಳೆ ಮೇಲೆ ಸುಮಾರು 20 ಬೀದಿ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Stray Dogs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಸಾಕು ನಾಯಿಗಳು ಎಷ್ಟು ಮನುಷ್ಯನಿಗೆ ಹತ್ತಿರವೋ, ಬೀದಿ ನಾಯಿಗಳು (Stray Dogs) ಅಷ್ಟೇ ಅಪಾಯಕಾರಿಯಾಗಿವೆ. ದೇಶದ ನೂರಾರು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ, ಜನರ ಮೇಲೆ ದಾಳಿ ನಡೆಸಿದ ಸುದ್ದಿಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಪಂಜಾಬ್‌ನ (Punjab) ಕಪುರ್ತಲಾ (Kapurthala) ಜಿಲ್ಲೆಯಲ್ಲಿ ಒಂಟಿ ಮಹಿಳೆ ಮೇಲೆ ಸುಮಾರು 20 ಬೀದಿ ನಾಯಿಗಳು ದಾಳಿ ನಡೆಸಿವೆ. ಮಹಿಳೆಯನ್ನು ಮನಸೋ ಇಚ್ಛೆ ಕಚ್ಚಿದ ಕಾರಣ ಆಕೆ ಮೃತಪಟ್ಟಿದ್ದಾರೆ.

ಸುಲ್ತಾನ್‌ಪುರ ಲೋಧಿ ಪಟ್ಟಣ ವ್ಯಾಪ್ತಿಯ ಪಸ್ಸಾನ್‌ ಕದಿಮ್‌ ಗ್ರಾಮದ ನಿವಾಸಿಯಾದ ಪರಿ ದೇವಿ (32) ಎಂಬ ಮಹಿಳೆಯು ಬೀದಿ ನಾಯಿಗಳ ದಾಳಿಗೆ ಬಲಿಯಾಗಿದ್ದಾರೆ. ಕಳೆದ ಮಂಗಳವಾರ (ಫೆಬ್ರವರಿ 6) ಸಂಜೆ ಹಸುಗಳನ್ನು ಮೇಯಿಸಿಕೊಂಡು ಮನಗೆ ಹಿಂತಿರುಗುವ ವೇಳೆ 20 ಬೀದಿ ನಾಯಿಗಳು ದಾಳಿ ನಡೆಸಿವೆ. ರಾತ್ರಿ 10 ಗಂಟೆಯಾದರೂ ಮಹಿಳೆ ಮನೆಗೆ ವಾಪಸಾಗದ ಕಾರಣ ಕುಟುಂಬಸ್ಥರು ಜಮೀನಿಗೆ ಹೋಗಿ ಪರಿಶೀಲಿಸಿದ್ದಾರೆ. ಆಗ, ಮಹಿಳೆಯ ಶವ ಪತ್ತೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

2 children Killed By stray dogs In Delhi

ಪಸ್ಸಾನ್‌ ಕದಿಮ್‌ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ. ಇತ್ತೀಚೆಗಷ್ಟೇ, ಇದೇ ಗ್ರಾಮದ ಮಹಿಳೆಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಗಾಯಗೊಂಡಿರುವ ಮಹಿಳೆ ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ ಕಾರಣ ಡೆಪ್ಯುಟಿ ಕಮಿಷನರ್‌ ಅಮಿತ್‌ ಕುಮಾರ್‌ ಪಂಚಾಲ್‌ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನಿಗೆ ನಾಯಿ ಬಿಸ್ಕೆಟ್! ರಾಹುಲ್ ಗಾಂಧಿ ಕೊಟ್ಟ ಸ್ಪಷ್ಟೀಕರಣ ಹೀಗಿದೆ

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ‌ ಗ್ರಾಮದಲ್ಲಿ ಬೀದಿ ನಾಯಿಗಳು ಹಸುಗೂಸನ್ನು ತಿಂದುಹಾಕಿದ್ದವು. ಡಿ.21ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೇವಿಹಾಳ ಗ್ರಾಮದ ರತ್ನಮ್ಮ ಬಡ್ನಿ ಎಂಬುವವರ ದುರಸ್ತಿ ಮನೆಯ ಹತ್ತಿರ ನವಜಾತ ಶಿಶುವನ್ನು ಎಸೆದು ಹೋಗಿದ್ದರು. ಅನೈತಿಕ ಸಂಬಂಧದಿಂದ ಜನಿಸಿದ ಮಗು ಎಂದು ಹೇಳಲಾಗಿತ್ತು. ಅನೈತಿಕ ಸಂಬಂಧಕ್ಕೆ ಈ ಮಗು ಜನಿಸಿದ್ದು, ತಮ್ಮ ಸಂಬಂಧವನ್ನು ಮುಚ್ಚಿಡಲು ಸಲುವಾಗಿ ಹುಟ್ಟಿದ ಮಗುವನ್ನು ಎಸೆದು ಹೋಗಿದ್ದಾರೆ ಎಂದು ದೂರು ನೀಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Prashant Kishor: ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ಪ್ರಶಾಂತ್‌ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತಗಳ ಮತದಾನ ಮುಕ್ತಾಯಗೊಂಡಿದೆ. ಐದು ಹಂತಗಳಲ್ಲಿಯೇ ಬಿಜೆಪಿಗೆ 300 ಸೀಟುಗಳು ಬರಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ತ, ಇಂಡಿಯಾ ಒಕ್ಕೂಟವೂ ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ, ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ.

ಬರ್ಖಾ ದತ್‌ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್‌ ಕಿಶೋರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು ನಾವು ಮಾತನಾಡುವಾಗ ಸಾಮಾನ್ಯ ಸಂಗತಿಗಳನ್ನು ಪರಿಗಣಿಸಿದರೆ ಸಾಕು ಒಂದು ಅಂದಾಜು ಸಿಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ” ಎಂದಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

Continue Reading

ದೇಶ

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

Abhijit Gangopadhyay: ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

VISTARANEWS.COM


on

Abhijit Gangopadhyay
Koo

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೆ ಚುನಾವಣಾ ಆಯೋಗ(Election Commission of India) ತಡೆಯೊಡ್ಡಿದೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಬದುಕಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಇಸಿ ಹೇಳಿತ್ತು.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳಿಂದ ಜನಪ್ರಿಯರಾದವರು. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.

ನಕಲಿ ವಿಡಿಯೋ ಎಂದ ಬಿಜೆಪಿ

ಇನ್ನು ಈ ತೃಣಮೂಲ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಇದೊಂದು ನಕಲಿ ವಿಡಿಯೋ ಎಂದು ಹೇಳಿದೆ. ಪಕ್ಷದ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಟಿಎಂಸಿ ಈ ರೀತಿ ನಕಲಿ ವಿಡಿಯೋ ಬಿಡುಗಡೆ ಮಾಡಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಕ್ತಾರ ಸಾಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ:Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!!

Continue Reading

ದೇಶ

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Chitta Ranjan Dash: ಸೋಮವಾರ (ಮೇ 20) ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್‌ ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’ ಎಂದು ಘೋಷಿಸಿದ್ದಾರೆ.

VISTARANEWS.COM


on

Chitta Ranjan Dash
Koo

ಕೋಲ್ಕತ್ತಾ: ಸೋಮವಾರ (ಮೇ 20) ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್‌ (Chitta Ranjan Dash) ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’ ಎಂದು ಘೋಷಿಸಿದ್ದಾರೆ. ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.

“ನಾನು ಆರ್‌ಎಸ್‌ಎಸ್‌ಗೆ ತುಂಬಾ ಋಣಿಯಾಗಿದ್ದೇನೆ. ಧೈರ್ಯದಿಂದ ಮಾತನಾಡಲು, ನೇರವಾಗಿರಲು, ಇತರರಿಗೆ ಸಮಾನವಾದ ದೃಷ್ಟಿಕೋನವನ್ನು ಹೊಂದಲು ಆರ್‌ಎಸ್‌ಎಸ್‌ ನನಗೆ ಕಲಿಸಿದೆ. ನಾನು ಬಾಲ್ಯ ಮತ್ತು ಯೌವನವನ್ನು ಆರ್‌ಎಸ್‌ಎಸ್‌ನೊಂದಿಗೆ ಕಳೆದಿದ್ದೇನೆ. ವೃತ್ತಿಯ ಕಾರಣದಿಂದ ನಾನು ಸುಮಾರು ವರ್ಷ ಆರ್‌ಎಸ್‌ಎಸ್‌ನಿಂದ ದೂರ ಉಳಿದಿದ್ದೆ. ಈಗ ಮರಳಲು ಸಿದ್ಧʼʼ ಎಂದು ಅವರು ಹೇಳಿದ್ದಾರೆ.

ಚಿತ್ತ ರಂಜನ್ ದಾಸ್‌ ಅವರು 1962ರಲ್ಲಿ ಒಡಿಶಾದ ಸೋನೆಪುರದಲ್ಲಿ ಜನಿಸಿದರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಉಲ್ಲುಂಡಾದಲ್ಲಿ ಪೂರೈಸಿದರು. ಬಳಿಕ ಧೆಂಕನಲ್ ಮತ್ತು ಭುವನೇಶ್ವರದಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದರು. 1985ರಲ್ಲಿ ಕಟಕ್‌ನಲ್ಲಿ ಕಾನೂನು ಪದವಿ ಪಡೆದರು. ಅವರು 1986ರಲ್ಲಿ ವಕೀಲರಾಗಿ ಹೆಸರು ನೋಂದಾಯಿಸಿಕೊಂಡರು ಮತ್ತು 1992ರಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಆಯ್ಕೆಯಾದರು.

ಅವರು 1999ರಲ್ಲಿ ಒಡಿಶಾ ಸುಪೀರಿಯರ್ ಜುಡಿಷಿಯಲ್ ಸರ್ವಿಸ್ (ಹಿರಿಯ ಶಾಖೆ)ಗೆ ನೇರ ನೇಮಕಗೊಂಡರು. 2009ರ ಅಕ್ಟೋಬರ್‌ನಲ್ಲಿ ಒಡಿಶಾ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅದಾಗಿ 15 ವರ್ಷ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಕೋಲ್ಕತ್ತಾ ಹೈಕೋರ್ಟ್‌ ನ್ಯಾಯಾಧೀಶರಾಗಿ 2022ರ ಜೂನ್‌ನಲ್ಲಿ ನಿಯುಕ್ತಿಗೊಂಡಿದ್ದರು.

“ನಾನು 37 ವರ್ಷಗಳಿಂದ ಆರ್‌ಎಸ್‌ಎಸ್‌ನಿಂದ ದೂರ ಸರಿದಿದ್ದೇನೆ. ಆದರೆ ನನ್ನ ಸದಸ್ಯತ್ವವನ್ನು ಎಂದಿಗೂ ಯಾವುದೇ ಅನುಕೂಲಕ್ಕಾಗಿ ಬಳಸಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇನೆ. ಯಾವುದೇ ಕೆಲಸಕ್ಕೆ ನನ್ನ ಅಗತ್ಯವಿದ್ದರೆ ನಾನು ಆರ್‌ಎಸ್‌ಎಸ್‌ಗೆ ಹಿಂತಿರುಗಲು ಸಿದ್ಧನಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ನಾನು ಆರ್‌ಎಸ್‌ಎಸ್‌ಗೆ ಸೇರಿದವನು ಎಂದು ಹೇಳಿದರೆ ಅದು ತಪ್ಪಲ್ಲ” ಎಂದು ಅವರು ತಿಳಿಸಿದ್ದಾರೆ.

ಚಿತ್ತ ರಂಜನ್‌ ದಾಸ್‌ ಅವರು ತಾವು ತೀರ್ಪು ನೀಡುವ ವೇಳೆ ಆತ ಶ್ರೀಮಂತ, ಬಡವ, ಕಮ್ಯುನಿಸ್ಟ್‌, ಬಿಜೆಪಿ, ಕಾಂಗ್ರೆಸ್ ಅಥವಾ ಟಿಎಂಸಿಯವನು ಎಂದು ಎಂದಿಗೂ ಬೇಧ ಮಾಡಿಲ್ಲ. ಎಲ್ಲರನ್ನೂ ಸಮಾನಾಗಿ ಪರಿಗಣಿಸಿದ್ದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

ಕೆಲವು ಹೈಕೋರ್ಟ್ ನ್ಯಾಯಾಧೀಶರು ಕಾನೂನಿನೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೆ ಆರೋಪಿಸುವ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕಳೆದ ತಿಂಗಳು ಉದ್ಯೋಗಕ್ಕಾಗಿ ನಗದು ಪ್ರಕರಣದ ತೀರ್ಪು ಪ್ರಕಟವಾದ ಒಂದು ದಿನದ ನಂತರ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ್ದ ಅವರು, “ಬಿಜೆಪಿಯವರು ಎಲ್ಲವನ್ನೂ ಖರೀದಿಸಿದ್ದಾರೆ. ನ್ಯಾಯಾಲಯಗಳೂ ಇದಕ್ಕೆ ಹೊರತಲ್ಲ. ನಾನು ಸುಪ್ರೀಂ ಕೋರ್ಟ್ ಬಗ್ಗೆ ಮಾತನಾಡುತ್ತಿಲ್ಲʼʼ ಎಂದು ಪರೀಕ್ಷವಾಗಿ ಆರೋಪಿಸಿದ್ದರು.

Continue Reading

ಪ್ರಮುಖ ಸುದ್ದಿ

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

VISTARANEWS.COM


on

NIA raid rameshwaram cafe blast
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA Raid) ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರಿನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತೀನ್‌, ಶಾಜಿಬ್‌ ಜೊತೆ ಶಾಮೀಲು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಜಿಬ್‌ಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Continue Reading
Advertisement
Meghana Raj Mother Day Gift Shopping to mother
ಸ್ಯಾಂಡಲ್ ವುಡ್40 seconds ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ9 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ9 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು25 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ31 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು46 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema56 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್1 hour ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್1 hour ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು1 hour ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌