Sumalatha Ambareesh: ಮೋದಿ - ಸುಮಲತಾ ಭೇಟಿ; ಮಂಡ್ಯ ಟಿಕೆಟ್‌ಗೆ ಕಸರತ್ತು; ನಾಡಿದ್ದು ಮೈಸೂರಲ್ಲಿ ಶಾ ತೀರ್ಮಾನ? - Vistara News

ಮಂಡ್ಯ

Sumalatha Ambareesh: ಮೋದಿ – ಸುಮಲತಾ ಭೇಟಿ; ಮಂಡ್ಯ ಟಿಕೆಟ್‌ಗೆ ಕಸರತ್ತು; ನಾಡಿದ್ದು ಮೈಸೂರಲ್ಲಿ ಶಾ ತೀರ್ಮಾನ?

Sumalatha Ambareesh: ಮಂಡ್ಯ ಲೋಕಸಭಾ ಕ್ಷೇತ್ರ ಈಗ ಬಿಸಿ ಬಿಸಿ ಚರ್ಚೆಯಲ್ಲಿದೆ. ಜೆಡಿಎಸ್‌ ಸಹ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ತಾವೂ ಮಂಡ್ಯಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಇನ್ನು ಸುಮಲತಾ ಅಂಬರೀಷ್‌ ಅವರು ಕಾಂಗ್ರೆಸ್‌ಗೆ ಹೋದರೆ ಅಚ್ಚರಿ ಪಡಬೇಕಿಲ್ಲ ಎಂದೂ ಹೇಳಿರುವುದು ಸಂಚಲವನ್ನು ಸೃಷ್ಟಿಸಿದೆ.

VISTARANEWS.COM


on

Sumalatha Ambareesh and PM Narendra Modi and HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಈಗ ಎಲ್ಲರ ದೃಷ್ಟಿ ಮಂಡ್ಯ ಲೋಕಸಭಾ ಕ್ಷೇತ್ರದ (Mandya Lok Sabha constituency) ಮೇಲೆ ನೆಟ್ಟಿದೆ. ಈಗಾಗಲೇ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಅವರು ತಾವು ಮಂಡ್ಯದಲ್ಲೇ ಸ್ಪರ್ಧೆ ಮಾಡುವುದಾಗಿ ಹೇಳಿದ್ದು, ಬಿಜೆಪಿಯಿಂದ ಟಿಕೆಟ್‌ ಬಯಸಿದ್ದಾರೆ. ಅಲ್ಲದೆ, ಈ ಸಂಬಂಧ ಅವರು ಒತ್ತಡದ ರಾಜಕೀಯಕ್ಕೂ ಮುಂದಾಗಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನೂ ಭೇಟಿ ಮಾಡಿ ತಾವು ಮಂಡ್ಯದ ಪ್ರಬಲ ಆಕಾಂಕ್ಷಿ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ. ಆದರೆ, ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಇರುವುದರಿಂದ ಈ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಜೆಡಿಎಸ್‌ ಬೇಡಿಕೆ ಇಟ್ಟಿದೆ. ಇದೇ ಈಗ ಎಲ್ಲ ಗೊಂದಲಕ್ಕೆ ಕಾರಣವಾಗಿದೆ. ಈ ನಡುವೆ ನವ ದೆಹಲಿ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಮಾತನಾಡಿ, ಗೃಹ ಸಚಿವರಾದ ಅಮಿತ್‌ ಶಾ (Amit Shah) ಅವರು ನಾಳೆ (ಫೆ. 10) ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲವೂ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ಇನ್ನು ಜೆಡಿಎಸ್‌ ಸಹ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ತಾವೂ ಮಂಡ್ಯಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಇನ್ನು ಸುಮಲತಾ ಅಂಬರೀಷ್‌ ಅವರು ಕಾಂಗ್ರೆಸ್‌ಗೆ ಹೋದರೆ ಅಚ್ಚರಿ ಪಡಬೇಕಿಲ್ಲ ಎಂದೂ ಹೇಳಿರುವುದು ಸಂಚಲವನ್ನು ಸೃಷ್ಟಿಸಿದೆ.

ಈ ಬಗ್ಗೆ ನವ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿ.ವೈ. ವಿಜಯೇಂದ್ರ, ಮಂಡ್ಯ ಕ್ಷೇತ್ರದ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ನಾಳೆ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರು ಮೈಸೂರಿಗೆ ಬರಲಿದ್ದಾರೆ. ನಾಡಿದ್ದು ಮೈಸೂರಿನಲ್ಲಿ ನಮ್ಮ ಕೋರ್ ಕಮಿಟಿ ಸಭೆ ನಿಶ್ಚಯವಾಗಿದೆ. ಆ ಸಭೆಯಲ್ಲಿ ಎಲ್ಲವೂ ಚರ್ಚೆ ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಬಗ್ಗೆ ಅಂದೇ ನಿರ್ಧಾರವಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ನಾವು ಮಾಡಿದ್ದ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳವನ್ನು ಕಾಂಗ್ರೆಸ್‌ ಸರ್ಕಾರ ಅನುಷ್ಠಾನ ಮಾಡಲಿ: ಬೊಮ್ಮಾಯಿ

ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸುಮಲತಾ

ಶತಾಯಗತಾಯ ಬಿಜೆಪಿಯಿಂದ ಮಂಡ್ಯ ಟಿಕೆಟ್‌ ಅನ್ನು ಪಡೆಯಬೇಕೆಂಬ ನಿಟ್ಟಿನಲ್ಲಿ ಅವಿರತ ಪ್ರಯತ್ನ ಪಡುತ್ತಿರುವ ಸಂಸದೆ ಸುಮಲತಾ ಅಂಬರೀಷ್‌ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.

ಭೇಟಿ ಬಳಿಕ ತಮ್ಮ ಸೋಷಿಯಲ್‌ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮಾತುಕತೆ ಬಗ್ಗೆ ಬರೆದುಕೊಂಡಿದ್ದಾರೆ.

ಸುಮಲತಾ ಪೋಸ್ಟ್‌ನಲ್ಲೇನಿದೆ?

“ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಧನ್ಯವಾದಗಳು.

ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರಿದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.

ಇದನ್ನೂ ಓದಿ: Congress Karnataka: ಕಾಂಗ್ರೆಸ್‌ನಲ್ಲಿ ಹೆಚ್ಚಿದ ಬಣ ರಾಜಕೀಯ; ಲೋಕಸಭೆ ಎಲೆಕ್ಷನ್‌ವರೆಗೂ ಇಲ್ಲ ನಿಗಮ-ಮಂಡಳಿ ನೇಮಕ?

ಮಾರ್ಗದರ್ಶನಕ್ಕೆ ನಾನು ಆಭಾರಿ

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿಯು ನಮ್ಮ ದೇಶದ ಎಲ್ಲ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.

ಮುಂದಿನ ಅವಧಿಯಲ್ಲಿಯೂ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಫೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಸುಮಲತಾ ಬರೆದುಕೊಂಡಿದ್ದಾರೆ. ಇದಲ್ಲದೆ, ಸುಮಲತಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸುಮಲತಾ ಕಾಂಗ್ರೆಸ್‌ಗೆ ಹೋದ್ರೆ ಅಚ್ಚರಿ ಪಡಬೇಕಿಲ್ಲ: ಜಿಟಿಡಿ

ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜತೆ ಸೇರಿ ಕಾರ್ಯತಂತ್ರ ಮಾಡುತ್ತಿದ್ದೇವೆ. ಎಚ್‌.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆರು ಕ್ಷೇತ್ರಗಳನ್ನು ಕೇಳುವಂತೆ ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಅಂಬರೀಷ್‌ ಅವರು ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಸ್ವಾಗತ ಮಾಡುತ್ತೇವೆ. ಆದರೆ, ಸುಮಲತಾ ಅವರು ಕಾಂಗ್ರೆಸ್‌ಗೆ ಹೋದರೆ ಅಚ್ಚರಿ ಪಡಬೇಕಿಲ್ಲ. ಮಾಜಿ ಸಚಿವ ನಾರಾಯಣಗೌಡ ಅವರ ಜತೆ ಸೇರಿ ಸುಮಲತಾ ಕಾಂಗ್ರೆಸ್ ಹೋಗಬಹುದು. ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ನಿಲ್ಲುವ ತೀರ್ಮಾನ ಮಾಡಿಲ್ಲ. ಕುಮಾರಸ್ವಾಮಿ ಸ್ಪರ್ಧಿಸದೇ ಇದ್ದರೆ ಗೌಡರ ಕುಟುಂಬದಿಂದ ಒಬ್ಬರೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಸುಮಲತಾ ಹೇಳಿಕೆ ಹಿಂದೆ ಇರೋ ಪ್ಲಾನ್ ಏನು?

ಈ ಹಿಂದೆ ಸುಮಲತಾ ಅಂಬರೀಷ್‌ ಹೇಳಿಕೆಯೊಂದನ್ನು ನೀಡಿದ್ದು, ಜೆಡಿಎಸ್‌ ಪಾಳೆಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಮಂಡ್ಯದಲ್ಲಿ ಬಿಜೆಪಿಗೆ ಕ್ಷೇತ್ರವನ್ನು ಬಿಟ್ಟು ಕೊಡಬೇಕು ಎಂದು ಸುಮಲತಾ ಹೇಳಿದ್ದರು. ಸುಮಲತಾ ಹೇಳಿಕೆ ಕೊಟ್ಟ ಬಳಿಕ ಮಾಜಿ ಸಚಿವ ನಾರಾಯಣ ಗೌಡರೂ ಅದನ್ನೇ ಪ್ರತಿಪಾದಿಸಿದ್ದರು. ಜೆಡಿಎಸ್‌ಗೆ ಬೇಕಿದ್ದರೆ ಬೇರೆ ಕ್ಷೇತ್ರ ಕೊಟ್ಟುಕೊಳ್ಳಲಿ ಎಂದು ಹೇಳಿದ್ದರು. ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಹೇಳಿಕೆಯಿಂದ ಮೈತ್ರಿ ನಾಯಕರಿಗೆ ಟೆನ್ಶನ್‌ ಶುರುವಾಗಿದೆ. ಹೀಗಾಗಿ ಈ ಗೊಂದಲದ ಬಗ್ಗೆ ಈ ವಾರವೇ ತೆರೆ ಎಳೆಯಲು ಬಿಜೆಪಿ ಹೈಕಮಾಂಡ್‌ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: Country made bomb: ಬಹಿರ್ದೆಸೆಗೆ ಹೋದವ ಹೊಳೆಯುವ ವಸ್ತು ಕಂಡು ಒತ್ತಿದ; ಸ್ಫೋಟಕ್ಕೆ ಕೈ ಬೆರಳು ಛಿದ್ರ!

ಸುಮಲತಾ ಅಂಬರೀಷ್‌ಗೆ ಮಂಡ್ಯ ಸಿಗೋದು ಕಷ್ಟ. ಅದು ಬಿಜೆಪಿಗಿಂತಲೂ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರವಾಗಿದೆ. ಆದರೆ, ಸುಮಲತಾ ಅವರು ಮಂಡ್ಯ ಬಿಟ್ಟು ಬೇರೆ ಕಡೆ ರಾಜಕೀಯ ಮಾಡುವುದು ಕಷ್ಟವಾಗುತ್ತದೆ. ಕಾರಣ, ಅವರ ಪುತ್ರ ಅಭಿಷೇಕ್ ಅಂಬರೀಶ್ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಅನಿವಾರ್ಯವಾಗಿದೆ. ಹೀಗಾಗಿ ಪ್ರೆಶರ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ನಾಯಕರು ಪರಿಗಣಿಸಿ ರಾಜ್ಯಸಭೆ ಇಲ್ಲವೇ ಪರಿಷತ್ ಸದಸ್ಯರನ್ನಾಗಿ ತಮ್ಮನ್ನು ಆಯ್ಕೆ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಸುಮಲತಾ ಇದ್ದಾರೆ. ಹೀಗಾಗಿ ಮಗನ ಭವಿಷ್ಯಕ್ಕಾಗಿ ಸುಮಲತಾ ಮಂಡ್ಯವನ್ನು ಬಿಡಲು ಒಪ್ಪುತ್ತಿಲ್ಲ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Rain News : ಮಳೆಯು ಅನಾಹುತವನ್ನೇ (Rain Effect) ಸೃಷ್ಟಿಸುತ್ತಿದೆ. ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಉಸಿರು ಚೆಲ್ಲಿದ್ದಾರೆ. ಇನ್ನೊಂದು ವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬಾಗಲಕೋಟೆ/ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಬಾಗಲಕೋಟೆಯ ಜಮಖಂಡಿ ನಗರದ ಮೋಮಿನ ಗಲ್ಲಿಯಲ್ಲಿ ನಿರಂತರ ಮಳೆಗೆ (Rain News) ಮಣ್ಣಿನ ಮನೆ ಕುಸಿದಿದ್ದು, ಮನೆಯೊಳಗಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟಿದ್ದಾರೆ. ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಮೃತ ದುರ್ದೈವಿ‌.

ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಈ ವೇಳೆ ಮುಸ್ತಾಕ ಮಕಬುಲ್‌ ಅವರು ಮನೆಯೊಳಗೆ ಮಲಗಿದ್ದು, ಇವರ ಮೈಮೇಲೆ ಮಣ್ಣು ಕುಸಿದ ಪರಿಣಾಮ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ- ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದಾಗ ಘಟನೆ ನಡೆದಿದೆ. ಇನ್ನೂ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರ ತೆಗೆಯಲಾಯಿತು.

ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲೂ ಮುಂದುವರಿದ ವರ್ಷಧಾರೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯು ಮುಂದುವರಿದಿದೆ. ಕೆಆರ್‌ ಸರ್ಕಲ್‌, ವಿಧಾನಸೌಧ, ಶಿವಾಜಿನಗರ, ವಸಂತ ನಗರ, ಮೆಜೆಸ್ಟಿಕ್‌, ಕೆಂಗೇರಿ, ಜ್ಞಾನಭಾರತಿ, ನಾಗರಭಾವಿ ಸುತ್ತಮುತ್ತ ಮಳೆಯಾಗಿದೆ. ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಲಘು ಮಳೆ ಸಾಧ್ಯತೆ

ಜೂನ್‌ 14ರಂದು ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Drowned in water : ಕುಟುಂಬ ಸಮೇತ ನಿಮಿಷಾಂಭ ದೇಗುಲಕ್ಕೆಂದು ಬಂದಿದ್ದ ಬಾಲಕರಿಬ್ಬರು ನೀರು ಕಂಡೊಡನೆ ನದಿಗೆ ಇಳಿದಿದ್ದರು. ಆದರೆ ಈಜಲು ಹೋಗಿ ಜಲ ಸಮಾಧಿಯಾಗಿದ್ದಾರೆ.

VISTARANEWS.COM


on

By

Drowned in water
Koo

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಮುಳುಗಿ ಬಾಲಕರಿಬ್ಬರು (Drowned in water) ದುರ್ಮರಣ ಹೊಂದಿದ್ದಾರೆ. ಮೈಸೂರಿನ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲ (Nimishamba Temple) ಬಳಿ ಘಟನೆ ನಡೆದಿದೆ. ವಿಶಾಲ್ (19), ರೋಹಣ್ (17) ಮೃತ ದುರ್ದೈವಿಗಳು.

ಕಾವೇರಿ ನದಿಯಲ್ಲಿ ವಿಶಾಲ್‌ ಹಾಗೂ ರೋಹಣ್‌ ಈಜಲು ಹೋದ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮತ್ತು ತಮಿಳುನಾಡು ಮೂಲದ ಯುವಕರು ಮೈಸೂರಿನ ಅಜ್ಜಿ ಮನೆಗೆ ಬಂದಿದ್ದರು. ಕುಟುಂಬಸ್ಥರ ಜತೆ ನಿಮಿಷಾಂಭ ದೇಗುಲಕ್ಕೆ ಬಂದಿದ್ದರು.

ಈ ವೇಳೆ ಈಜಲು ಬಾರದೆ ಇದ್ದರೂ ನೀರಿಗೆ ಇಳಿದಿದ್ದಾರೆ. ಆದರೆ ಕಳೆದೊಂದು ವಾರದಿಂದ ಸುರಿದ ಮಳೆಗೆ ನೀರಿನ ಪ್ರಮಾಣ ಹೆಚ್ಚಾಗಿತ್ತು. ನೀರಿನ ರಭಸಕ್ಕೆ ಯುವಕರಿಬ್ಬರು ಕೊಚ್ಚಿ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯ ಈಜುಗಾರರ ನೆರವಿನಿಂದ ಶವಗಳನ್ನು ಮೇಲೆಕ್ಕೆತ್ತಿಸಿದ್ದಾರೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಜ್ಜಿ ಮನೆಗೆಂದು ಬಂದವರು ವಾಪಸ್‌ ಹೆಣವಾಗಿ ಹೋಗಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ನಾಗರಾಜ (50) ಮೃತ ದುರ್ದೈವಿ.

ಚವರ್ಲೈಟ್ ಕಾರು ಹಾಗೂ ಸೂಪರ್ ಎಕ್ಸ್ ಎಲ್ ಸ್ಕೂಟರ್‌ ನಡುವೆ ಅಪಘಾತ ನಡೆದಿದೆ. ನಾಗರಾಜ ಅವರು ಸ್ಕೂಟರ್‌ನಲ್ಲಿ ಮನೆಯಿಂದ ತೋಟದ ಕಡೆಗೆ ಹೊರಟಿದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಗರಾಜ ರಸ್ತೆ ಬದಿಯ‌ ಡಿವೈಡರ್‌ ಹಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕಾರಿಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರರು

ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ.

ಹೊಳೆ ಬೈರನಹಳ್ಳಿ ಗ್ರಾಮದ ಮೂವರು ಯುವಕರು ಒಂದೇ ಬೈಕ್‌ ಹೊರಡುವಾಗ ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು. ಕೈ-ಕಾಲುಗಳಿಗೆ ಗಾಯವಾಗಿದ್ದು, ಮೂವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿಗೆ ಡಿಕ್ಕಿ

ಕಾರು ರಿವರ್ಸ್‌ ತೆಗೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಸಂಡೇ ಮಾರ್ಕೆಟ್ ಬಳಿ ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟಿಯಲ್ಲಿದ್ದ ಎಲಿಜಬೆತ್ ಕಲ್ವಕುರಿ, ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೊಬ್ಬರು ತಮ್ಮ ಕಾರನ್ನು ರಿವರ್ಸ್‌ ತೆಗೆಯುವಾಗ ಈ ಅವಘಡ ನಡೆದಿದೆ. ಗಾಯಾಳುಗಳು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Karnataka Rain : ಸತತ ಮಳೆಗೆ (Rain Effect) ಉತ್ತರ ಒಳನಾಡಿನ ಭಾಗ ತತ್ತರಿಸಿ ಹೋಗಿದೆ. ಗಂಟೆ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾಯಚೂರಿನಲ್ಲಿ ಮಳೆಗೆ ಶಾಲೆಯ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

By

Karnataka Rain Effect
Koo

ರಾಯಚೂರು: ಮಳೆ ಅವಾಂತರಕ್ಕೆ (Rain Effect) ಶಾಲೆ ಚಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ (Karnataka Rain)ಘಟನೆ ನಡೆದಿದೆ. ತರಗತಿ ನಡೆಯುತ್ತಿರುವಾಗಲೇ ಏಕಾಏಕಿ ಚಾವಣಿ ಕಳಚಿ ಮಕ್ಕಳ ಬಿದ್ದಿದ್ದು, ತಲೆ, ಕೈಗಳಿಗೆ ಗಾಯವಾಗಿದೆ.

ಪಾತಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾವಣಿ ಕುಸಿದು, ವಿದ್ಯಾರ್ಥಿ ಚಂದನಬಸವರಾಜ್‌ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಾಂತರ ಸೃಷ್ಟಿಯಾಗಿದೆ.

ಮಕ್ಕಳು ಜೀವ ಭಯದಲ್ಲಿ ಪಾಠ ಕಲಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿಇಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಠಡಿ ಸೋರುತ್ತಿರುವುದರಿಂದ ತಾತ್ಕಾಲಿಕವಾಗಿ ಬೇರೆ ತರಗತಿ ನಡೆಸಲು ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸಲು ಬಿಇಓ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಜಲಸಮಾಧಿಯಾದ ಬೃಹತ್‌ ಬಾವಿ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಮೀನಿನಲ್ಲಿದ್ದ ಬೃಹತ್ ಬಾವಿಯೊಂದು ಜಲಸಮಾಧಿಯಾಗಿದೆ. ಬಾವಿ ಸುತ್ತಲೂ ಕಲ್ಲಿನ ಗೋಡೆ ನಿರ್ಮಿಸಿದರೂ ಬಾವಿ ಕುಸಿದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಗ್ರಾಮದಲ್ಲಿ ಘಟನೆ ನಡೆದಿದೆ.

14 ಎಕರೆ ಜಮೀನಿಗಾಗಿ 60 ಲಕ್ಷ ರೂ. ಖರ್ಚು ಮಾಡಿ ಜಮೀನಿನಲ್ಲಿ ರೈತ ಸಿದ್ದಪ್ಪ ಸರಬಡಗಿ ಬಾವಿಯನ್ನು ಕಟ್ಟಿಸಿದ್ದರು. ಇದೀಗ ಸಂಪೂರ್ಣವಾಗಿ ಬಾವಿ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಚಿಂತೆಗೀಡಾಗಿದ್ದಾರೆ. 110 ಆಳದ ಬಾವಿಗೆ ಸುತ್ತಲೂ 45 ಅಡಿ ಕಲ್ಲಿನ ಗೋಡೆ ಕಟ್ಟಿಸಲಾಗಿತ್ತು. ಇದೀಗ ಬಾವಿಯೊಳಗೆ 7.5ಎಚ್‌ಪಿ 2 ಮೋಟಾರು ನೀರು ಪಾಲಾಗಿದೆ. ಬಾವಿ ಕುಸಿದಿರುವ ಹಿನ್ನೆಲೆ ಕೃಷಿಗೆ ನೀರು ಪೂರೈಸುವುದು ಹೇಗೆ ಎಂದು ಗೋಳಾಡುತ್ತಿದ್ದಾರೆ. ಕೂಡಲೇ ಸರ್ಕಾರ ಪರಿಹಾರ ಕೊಡಲಿಎಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ ಭರ್ತಿ

ಒಂದೇ ಮಳೆಗೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್‌ ಇದ್ದು, ಈಗಾಗಲೇ ನೀರಿನ ಮಟ್ಟ 588.11 ಮೀ ಬಂದಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧಾರವಾಗಿತ್ತು. ಗಾಜನೂರಿನ ತುಂಗಾ ಜಲಾಶಯದ 3.24 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿವಮೊಗ್ಗದ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿದ ಮಳೆಯಿಂದಾಗಿ ತುಂಗಾ ನದಿಯಲ್ಲಿ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಭರ್ತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ಚಿತ್ರದುರ್ಗ ಮಾತ್ರವಲ್ಲದೆ ಮಂಡ್ಯ, ರಾಮನಗರದಲ್ಲೂ ಪ್ರತಿಭಟಿಸಲಾಯಿತು. ಮಂಡ್ಯದಲ್ಲಿ ರೈತ ಸಂಘ ಪ್ರತಿಭಟಿಸಿ, ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಆಕ್ರೋಶ ಹೊರಹಾಕಿದರು.

VISTARANEWS.COM


on

By

Actor Darshan
Koo

ಮಂಡ್ಯ/ರಾಮನಗರ : ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಹಲವರು ಲಾಕ್‌ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟ ದರ್ಶನ್ ವಿರುದ್ಧ ಮಂಡ್ಯ ಅನ್ನದಾತರು ಸಿಡಿದೆದ್ದಿದ್ದರು.

ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಕರ್ನಾಟಕ ರಾಜ್ಯ ರೈತ ಸಂಘ ರ‍್ಯಾಲಿ ನಡೆಸಿ ಆಕ್ರೋಶ ಹೊರಹಾಕಿತು. ದರ್ಶನ್ ಸೇರಿ ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿದರು.

Actor darshan

ಡಾ.ರಾಜಕುಮಾರ್ ಆದರ್ಶ ಪಾಲಿಸಲಿ

ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಕ್ರೋಶ ಹೊರಹಾಕಿದರು. ದರ್ಶನ್ ಹಾಗೂ ಇತರೆ ಕನ್ನಡ ನಟರು ಡಾ.ರಾಜಕುಮಾರ್ ಆದರ್ಶ ಪಾಲಿಸಲಿ. ಕೇವಲ ಹಣಕ್ಕಾಗಿ ಕಲಾವಿದರಾಗುವುದು ಬೇಡ ಎಂದರು. ಈಗೀನ‌ ನಟರು ಪೇಯ್ಡ್ ಆಕ್ಟರ್ಸ್ ಆಗಿದ್ದಾರೆ. ಇವರಿಗೆ ಯಾವುದೇ ಮೌಲ್ಯಗಳಿಲ್ಲ.

ಪೊಲೀಸ್ ಇಲಾಖೆ ಸೂಕ್ತ ಕ್ರಮವಹಿಸಬೇಕು. ತಪ್ಪಿತಸ್ಥರಿಗೆ ಕಾನೂನು ಕ್ರಮವಾಗಬೇಕು ಎಂದು ಚನ್ನಪಟ್ಟಣದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಗ್ರಹಿಸಿದರು. ನಗರದ ಅಂಚೆಕಚೇರಿ ರಸ್ತೆಯಲ್ಲಿ ಡಾ.ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್​ ರೌಡಿ ಪಟ್ಟಿಗೆ ಸೇರ್ಪಡೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್​ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ಧರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾದ ಆರೋಪಿ ಮೇಲೆ ರೌಡಿ ಪಟ್ಟಿಯನ್ನು ತೆರೆಯಲಾಗುತ್ತದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲೂ ದರ್ಶನ್​ ಪ್ರಮುಖ ಆರೋಪಿ. ಹೀಗಾಗಿ ಅವರ ಮೇಲೆಯೂ ರೌಡಿಶೀಟರ್​ ಓಪನ್ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.

ದರ್ಶನ್​ ಈ ಹಿಂದೆಯೂ ಹಲವಾರು ಬಾರಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಬೆದರಿಕೆ, ನಿಂದನೆ ಸೇರಿದಂತೆ ನಾನಾ ರೀತಿಯಲ್ಲಿ ಅವರು ಕಾನೂನು ಕ್ರಮವನ್ನು ಎದುರಿಸಿದ್ದರು. ಹೀಗಾಗಿ ಅವರನ್ನು ರೌಡಿ ಪಟ್ಟಿಯೊಳಗೆ ಸೇರಿಸಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಪೊಲೀಸ್​ ಇಲಾಖೆಯ ಆಲೋಚನೆಯಾಗಿದೆ.

ಇದನ್ನೂ ಓದಿ: Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡುವ ಉದ್ದೇಶವಿಲ್ಲದೆ ಅಪಹರಣ ಮಾಡಿದ್ದರು. ಗಂಭೀರ ರೂಪದಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೊಲೆ ಮಾಡಿ ಶವ ಮುಚ್ಚಿಡುವ ಹಾಗೂ ಸಾಕ್ಷಿನಾಶ ಪಡಿಸುವ ಯತ್ನ ಮಾಡಿದ್ದಾರೆ. ಇವೆಲ್ಲವೂ ಅಪಾಯಕಾರಿ ಕ್ರಿಮಿನಲ್ ಚಟುವಟಿಕೆಗಳಾಗಿವೆ.

ರೌಡಿಶೀಟ್ ಓಪನ್ ಆದ್ರೆ ಏನಾಗುತ್ತೆ.?

ಇಷ್ಟು ವರ್ಷಗಳ ಕಾಲ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಹಾಗೂ ಅಪಾರ ಗೌರವ ಗಳಿಸಿಕೊಂಡಿದ್ದ ನಟ ದರ್ಶನ್ ರೌಡಿಶೀಟರ್ ಅನ್ನೋ ಕಳಂಕ ಹೊತ್ತುಕೊಳ್ಳಬೇಕಾಗುತ್ತದೆ. ಶಾಂತಿಸುವ್ಯವಸ್ಥೆಗೆ ಭಂಗ ತರುವ ಆರೋಪದ ಮೇಲೆ ಆಗಾಗ ಸಿಆರ್ಪಿಸಿ 110 ಅಡಿಯಲ್ಲಿ ಕೇಸ್ ದಾಖಲಾಗುತ್ತದೆ. ಪದೇ ಪದೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಬೇಕಾಗುತ್ತದೆ.

ಚುನಾವಣೆ ಹಾಗೂ ಇನ್ಯಾವುದಾದರೂ ತುರ್ತು ಸಂಧರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅವರ ಮನೆಯ ಮೇಲೆ ಪೊಲೀಸರು ದಾಳಿ ಮಾಡುತ್ತಾರೆ. ಯಾವುದೇ ಅನುಮತಿ ಇಲ್ಲದೆ ಪರಿಶೀಲನೆ ನಡೆಸುತ್ತಾರೆ. ರೌಡಿಚಟುವಟಿಕೆ ಸಕ್ರಿಯರಾಗಿದ್ದಾರೆ ಎಂಬ ಕಾರಣದಲ್ಲಿ ಅವರ ಮೇಲೆ ನಿಗಾ ಇಡುತ್ತಾರೆ. ಖಾಸಗಿತನ ನಷ್ಟವಾಗುತ್ತದೆ.

ತುರ್ತು ಸಂದರ್ಭದಲ್ಲಿ ತಹಸೀಲ್ದಾರರ ಮುಂದೆ ಹಾಜರಾಗಿ ಬಾಂಡ್ ಸಲ್ಲಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಪೊ ಲೀಸರು ನಡೆಸುವ ರೌಡಿ ಪೆರೇಡ್ ನಲ್ಲಿ ಇತರೆ ರೌಡಿಗಳಂತೆ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಲಿದೆ. ಅವರ ಟೀಕೆಗಳನ್ನು ಕೇಳಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Jammu Kashmir
ದೇಶ4 mins ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ11 mins ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ42 mins ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ2 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ3 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ3 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್3 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ4 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ4 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು4 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌