Amit Shah: ಕೋರ್‌ ಕಮಿಟಿ ಸಭೆಗೂ ಮುನ್ನ ಅಮಿತ್‌ ಶಾ - ವಿಜಯೇಂದ್ರ ಗೌಪ್ಯ ಮಾತುಕತೆ! - Vistara News

ರಾಜಕೀಯ

Amit Shah: ಕೋರ್‌ ಕಮಿಟಿ ಸಭೆಗೂ ಮುನ್ನ ಅಮಿತ್‌ ಶಾ – ವಿಜಯೇಂದ್ರ ಗೌಪ್ಯ ಮಾತುಕತೆ!

Amit Shah: ಮೈಸೂರಿನಲ್ಲಿ ಕೋರ್‌ ಕಮಿಟಿ ಸಭೆಗಿಂತ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜತೆ ಅಮಿತ್ ಶಾ ಒನ್ ಟು ಒನ್ ಸಭೆ ನಡೆಸಿದ್ದಾರೆ. ಕೋರ್ ಕಮಿಟಿ ಸಭೆಗೂ ಮೊದಲು ವಿಜಯೇಂದ್ರ ಜತೆ ಚರ್ಚೆ ನಡೆಸಿರುವುದು ತೀವ್ರ ಕುತೂಹಲವನ್ನು ಹುಟ್ಟಿಸಿದೆ.

VISTARANEWS.COM


on

Amit Shah and Vijayendra hold secret talks ahead of core committee meeting
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ (Assembly Elections 2023) ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ, ಬಿಜೆಪಿಯ ನಂಬರ್‌ 2 ನಾಯಕ ಅಮಿತ್‌ ಶಾ (Amit Shah) ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಶನಿವಾರ ರಾತ್ರಿ ಮೈಸೂರಿಗೆ ಬಂದಿಳಿದಿದ್ದು, ಭಾನುವಾರ ಬೆಳಗ್ಗೆ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ (Suttur Jatre) ಭಾಗಿಯಾಗಿದ್ದರು. ಈಗ ಲೋಕಸಭಾ ಚುನಾವಣೆಯ (Parliament Election 2024) ತಂತ್ರಗಾರಿಕೆಗೆ ಸಂಬಂಧ ಮಹತ್ವದ ಸಭೆಯನ್ನು ನಡೆಸಲು ಮುಂದಾಗಿದ್ದಾರೆ. ಸಭೆಗಿಂತ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜತೆ ಅಮಿತ್ ಶಾ ಒನ್ ಟು ಒನ್ ಸಭೆ ನಡೆಸಿದ್ದಾರೆ. ಕೋರ್ ಕಮಿಟಿ ಸಭೆಗೂ ಮೊದಲು ವಿಜಯೇಂದ್ರ ಜತೆ ಚರ್ಚೆ ನಡೆಸಿರುವುದು ತೀವ್ರ ಕುತೂಹಲವನ್ನು ಹುಟ್ಟಿಸಿದೆ.

ಅಮಿತ್‌ ಶಾ ಅವರು ಬಿ.ವೈ. ವಿಜಯೇಂದ್ರ ಜತೆ ಚರ್ಚೆ ನಡೆಸುತ್ತಿದ್ದು, ರಾಜ್ಯದ ಪ್ರಸ್ತುತ ವಾತಾವರಣದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಮೈಸೂರಿನಲ್ಲಿ ಹಾಲಿ ಸಂಸದ ಪ್ರತಾಪ್‌ ಸಿಂಹ ಅಭ್ಯರ್ಥಿಯಾಗಿ ಮುಂದುವರಿಸಬಹುದೇ? ಮೈಸೂರಿನಲ್ಲಿನ ರಾಜಕೀಯ ವಾತಾವರಣ, ಪರಿಸ್ಥಿತಿ ಏನಿದೆ? ಯಾರಾದರೂ ವೈಯಕ್ತಿಕವಾಗಿ ಅಥವಾ ಕ್ಷೇತ್ರದಲ್ಲಿ ಹೆಸರನ್ನು ಹಾಳು ಮಾಡಿಕೊಂಡಿದ್ದಾರಾ? ಚುನಾವಣೆಯಲ್ಲಿ ಯಾವುದು ಪ್ಲಸ್‌ ಆಗಲಿದೆ? ಯಾವುದು ಮೈನಸ್‌ ಆಗಲಿದೆ? ಸಮಸ್ಯೆಗಳಿದ್ದಲ್ಲಿ ಈಗಲೇ ತಿಳಿಸಿ. ಈಗಲೇ ಸರಿಪಡಿಸಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಜೆಡಿಎಸ್‌ ಜತೆ ಹೊಂದಾಣಿಕೆ ವಿಚಾರ ಎಷ್ಟು ಪಾಸಿಟಿವ್ ಆಗಿದೆ? ಆಂತರಿಕ ಸಂಘರ್ಷ ಇದೆ ಎನ್ನುವ ಮಾಹಿತಿ ಇದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ? ಕೆಲವರನ್ನು ರಾಜ್ಯಸಭೆಯಿಂದ, ಮತ್ತೆ ಕೆಲವರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ನಿರ್ಧಾರ ಮಾಡಿದ್ದೇವೆ. ರಾಜ್ಯದಲ್ಲಿ ಕೇಂದ್ರದ ಹಾಲಿ ಸಚಿವರನ್ನು ನಿಲ್ಲಿಸಿದರೆ ಗೆಲ್ಲುವ ಕ್ಷೇತ್ರಗಳಿವೆಯಾ? ಆ ರೀತಿ ಇದ್ದರೆ ಯಾವ ಕ್ಷೇತ್ರ ಬಿಜೆಪಿಗೆ ಹೆಚ್ಚು ಪಾಸಿಟಿವ್ ಇದೆ? 28 ಕ್ಷೇತ್ರದಲ್ಲಿ ಹಾಲಿ ಗೆಲ್ಲಬಹುದಾದ ಕ್ಷೇತ್ರಗಳೆಷ್ಟು? ಕಾಂಗ್ರೆಸ್ ಕಣಕ್ಕಿಳಿಸುವ ಯಾವ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ? ಅಲ್ಲಿ ಬಿಜೆಪಿ ಗೆಲ್ಲಲು ಯಾವ ರೀತಿಯ ವಾತಾವರಣವನ್ನು ಕಲ್ಪಿಸಬಹುದು? ಅನೇಕ ವಿಚಾರಗಳನ್ನು ವಿಜಯೇಂದ್ರ ಜತೆಯಲ್ಲಿ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Amit Shah: ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿರುವ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಉಳಿದ ನಾಯಕರ ಜತೆಯೂ ಒನ್‌ ಟು ಒನ್‌ ಚರ್ಚೆ?

ಬಳಿಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಆರ್‌ಎಸ್‌ಎಸ್ ಮುಖಂಡ ರಾಜೇಶ್, ಮಾಜಿ ಸಚಿವ ಸಿ.ಟಿ.ರವಿ ಅವರೊಂದಿಗೆ ಸಹ ಏಕಾಂಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ತಲಾ ಐದು ನಿಮಿಷ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾವೆಲ್ಲ ವಿಷಯಗಳ ಬಗ್ಗೆ ಚರ್ಚೆ ಎಂದು ಹೇಳಿದ್ದ ಬಿ.ವೈ. ವಿಜಯೇಂದ್ರ

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ನಾಲ್ಕು ಲೋಕಸಭಾ ಕ್ಷೇತ್ರದಿಂದ ಕಾರ್ಯ ತಂತ್ರ ಹೇಗಿರಬೇಕು? ಜೆಡಿಎಸ್ – ಬಿಜೆಪಿ ಹೊಂದಾಣಿಕೆ ಇರುವ ಕಾರಣ ಒಟ್ಟಾಗಿ ಚುನಾವಣೆ ಎದುರಿಸುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಇಲ್ಲಿ ಚರ್ಚೆ ನಡೆಸಲಾಗುವುದು. ಸಿಎಂ ತವರೂರಿಂದ ಈ ಬಾರಿ ಚುನಾವಣಾ ಕಾರ್ಯತಂತ್ರ ಆರಂಭವಾಗಿದ್ದು ವಿಶೇಷ ಅಲ್ಲ. ಚಾಮರಾಜನಗರ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಹುಡುಕಬೇಕು. ಮಂಡ್ಯದಲ್ಲಿ ಬದಲಾದ ರಾಜಕೀಯ ಸ್ಥಿತಿಯಲ್ಲಿ ಜೆಡಿಎಸ್ ಆ ಸ್ಥಾನ ಕೇಳುತ್ತಿದೆ ಅಂತ ಟಿವಿಯಲ್ಲಿ ನೋಡಿದ್ದೇವೆ. ಆದರೆ, ನಮ್ಮಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ಇವತ್ತು ಆ ಬಗ್ಗೆ ಚರ್ಚೆ ಆದರೂ ಆಗಬಹುದು ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Lok Sabha Election 2024: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

VISTARANEWS.COM


on

Lok Sabha Election 2024
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ. ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Continue Reading

ಕರ್ನಾಟಕ

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹುಬ್ಬಳ್ಳಿ ಅಂಜಲಿ ಹತ್ಯೆ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಬಳಿಕ ಈಗ ಮತ್ತೊಬ್ಬ ಯುವತಿ ಭೀಕರವಾಗಿ ಕೊಲೆಯಾಗಿದ್ದಾಳೆ. ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಇದನ್ನೂ ಓದಿ | Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ. ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಗಂಭೀರತೆಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂಬುದನ್ನು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಕಿಡಿಕಾರಿದರು.

ಅಧಿಕಾರಿಗಳ ವರ್ಗಾವಣೆ ದಂಧೆ

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌, ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಕರಲ್ಲಿ ಭಯ

ರಾಜ್ಯದಲ್ಲಿ ಕಡುಬಡ‌ವರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಜನರು ಬೀದಿಗಿಳಿಯುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಕೊಲೆ, ಹತ್ಯೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಯಾರೋ ಒಬ್ಬ ಅಧಿಕಾರಿ‌ಯನ್ನು ಅಮಾನತ್ತು ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.

ಅಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ

ದುಷ್ಕರ್ಮಿಯಿಂದ ಹತ್ಯೆಗೀಡಾದ ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಭಾವಚಿತ್ರಕ್ಕೆ ಸಚಿವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Harish Poonja: ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Harish Poonja
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ಕೇಸ್‌ ದಾಖಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Prajwal Revanna Case
Devaraje Gowda’s Claim About DK Shivakumar’s Rs 100 Crore Is True: Says R Ashok

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

Continue Reading

ರಾಜಕೀಯ

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

R Ashok: ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

R Ashok
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ. ಇದರಿಂದ ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎನಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಆಡಿಯೊ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಇದನ್ನೂ ಓದಿ | BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

ಇದನ್ನೂ ಓದಿ | Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

ದೇವೇಗೌಡರ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್‌ ತಿಳಿಸಿದರು.

Continue Reading
Advertisement
Healthy Diet
ಆರೋಗ್ಯ3 mins ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ22 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ24 mins ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ50 mins ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ52 mins ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ1 hour ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ2 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ2 hours ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Dina Bhavishya
ಭವಿಷ್ಯ4 hours ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ8 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ17 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ19 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌