KL Rahul : ರಾಜ್​ಕೋಟ್​ ಟೆಸ್ಟ್​ನಿಂದ ಕೆಎಲ್ ರಾಹುಲ್ ಔಟ್, ದೇವದತ್ ಪಡಿಕ್ಕಲ್​ಗೆ ಚಾನ್ಸ್​ - Vistara News

ಪ್ರಮುಖ ಸುದ್ದಿ

KL Rahul : ರಾಜ್​ಕೋಟ್​ ಟೆಸ್ಟ್​ನಿಂದ ಕೆಎಲ್ ರಾಹುಲ್ ಔಟ್, ದೇವದತ್ ಪಡಿಕ್ಕಲ್​ಗೆ ಚಾನ್ಸ್​

KL Rahul : ಎರಡನೇ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿದ್ದ ಕೆ. ಎಲ್​ ರಾಹುಲ್ ಮೂರನೇ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯದೆ ಇದೆ ಎಂದು ಹೇಳಲಾಗಿತ್ತು. ಆದರೆ ಅವರು ಬೆಂಗಳೂರಿನ ಎನ್​ಸಿಎನಲ್ಲಿಯೇ ಉಳಿದುಕೊಂಡಿದ್ದಾರೆ.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುಜರಾತ್​ನ ರಾಜ್​ಕೊಟ್​​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್​​ ಕೆಎಲ್ ರಾಹುಲ್ (KL Rahul) ಹೊರಗುಳಿದಿದ್ದಾರೆ. ಅವರ ಬದಲಿ ಕರ್ನಾಟಕ ತಂಡದ ಎಡಗೈ ಬ್ಯಾಟರ್​ ದೇವದತ್ ಪಡಿಕ್ಕಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಸೋಮವಾರ ರಾಜ್​ಕೋಟ್​​ನಲ್ಲಿ ಭಾರತ ತಂಡವನ್ನು ಸೇರಬೇಕಿತ್ತು. ಆದರೆ ರಾಹುಲ್ ಇನ್ನೂ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಅವರನ್ನು ಕೈಬಿಡಲಾಗಿದೆ. ಗಾಯದಿಂದಾಗಿ ರಾಹುಲ್ ವಿಶಾಖಪಟ್ಟಣಂ ಟೆಸ್ಟ್​​ನಿಂದ ಹೊರಗುಳಿದಿದ್ದರು. ಫಿಟ್ನೆಸ್​ಗೆ ಒಳಪಟ್ಟು ಕೊನೆಯ ಮೂರು ಟೆಸ್ಟ್​ಗಳಿಗೆ ತಂಡದ ಭಾಗವಾಗಿ ಹೆಸರಿಸಲ್ಪಟ್ಟಿದ್ದರು. ಆದರೆ ಇದೀಗ ಅವರು ತಂಡದಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದಾರೆ.

ಅತ್ಯುತ್ತಮ ಪ್ರಥಮ ದರ್ಜೆ ಋತುವಿನ ಮಧ್ಯದಲ್ಲಿದ್ದ ದೇವದತ್​​ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಮೊದಲ ಕರೆಯನ್ನು ಪಡೆದಿದ್ದಾರೆ. 23 ವರ್ಷದ ಕರ್ನಾಟಕದ ಬ್ಯಾಟರ್​​ ಕೆಲವು ದಿನಗಳ ಹಿಂದೆ ತಮಿಳುನಾಡು ವಿರುದ್ಧ 151 ರನ್ ಗಳಿಸಿದ್ದರು. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್​​ನಲ್ಲಿ 105 ರನ್ ಗಳಿಸುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನ ಹಾಲಿ ಋತುವಿನಲ್ಲಿ ಇದು ಅವರ ಮೂರನೇ ಶತಕವಾಗಿದೆ.

ಶ್ರೇಯಸ್ ಅಯ್ಯರ್, ಅನುಭವಿ ಆಟಗಾರರಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಹಿಂದಿಕ್ಕಿರುವ ಪಡಿಕ್ಕಲ್​ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜ್​ಕೋಟ್​ನಲ್ಲಿ ಹೊಸ ಮುಖಗಳನ್ನು ಆಯ್ಕೆ ಮಾಡಲಿದೆ. ವಿಶಾಖಪಟ್ಟಣಂನಲ್ಲಿ ಪಾದಾರ್ಪಣೆ ಮಾಡಿದ ರಜತ್ ಪಾಟಿದಾರ್ ಮತ್ತು ಚೊಚ್ಚಲ ಪಂದ್ಯವಾಡುವ ಸರ್ಫರಾಜ್ ಖಾನ್ ಮೇಲೆ ಆಯ್ಕೆದಾರರು ನಂಬಿಕೆ ಇಡುವ ಸಾಧ್ಯತೆಗಳಿವೆ.

ಇದನ್ನೂ ಓದಿ : Reece Topley : ಆರ್​ಸಿಬಿ ವೇಗದ ಬೌಲರ್​ ರೀಸ್​ ಟಾಪ್ಲೆ​ ಈ ಬಾರಿಯ ಐಪಿಎಲ್​ಗೂ ಅಲಭ್ಯ?

ಮೂರನೇ ಪಂದ್ಯದಕ್ಕೆ ಭಾರತ ತಂಡ ಈ ರೀತಿ ಇದೆ.

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ದೇವದತ್ ಪಡಿಕ್ಕಲ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Attica Babu: ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ಅಟ್ಟಿಕಾ ಆಬು ವಿರುದ್ಧ ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ.

VISTARANEWS.COM


on

Attica Babu
Koo

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಬುಧವಾರ (ಜೂನ್‌ 26) ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ (Bengaluru) ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಪೊಲೀಸರು ಅಟ್ಟಿಕಾ ಬಾಬು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2022ರಲ್ಲೂ ಬಂಧಿಸಲಾಗಿತ್ತು

ಎರಡನೇ ಮದುವೆಯಾಗಿ, ಮೋಸ ಮಾಡಿದ್ದಾರೆ ಎಂಬುದಾಗಿ ಮಹಿಳೆಯೊಬ್ಬರು ದೂರು ನೀಡಿದ ಕಾರಣ 2022ರಲ್ಲೂ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದರು. ಶೇಖ್‌ ಮಿನಾಜ್‌ ಎಂಬ ಮಹಿಳೆಯು ಹಲ್ಲೆ ಹಾಗೂ ಮೋಸ ಮಾಡಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಮಹಿಳೆ ದೂರಿನ ಹಿನ್ನೆಲೆಯಲ್ಲಿ ಅಟ್ಟಿಕಾ ಬಾಬು ವಿರುದ್ಧ ಹಲ್ಲೆ, ವರದಕ್ಷಿಣೆ ಕಿರುಕುಳದ ಪ್ರಕರಣ ಕೂಡ ದಾಖಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಅಟ್ಟಿಕಾ ಬಾಬು ಬಿಡುಗಡೆಯಾಗಿದ್ದರು.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಪ್ರಮುಖ ಸುದ್ದಿ

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

Terrorists Killed: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿಯು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಕಣಿವೆಯಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದರು. ಅಲ್ಲದೆ, ಉಗ್ರರನ್ನು ನಿರ್ಮೂಲನೆ ಮಾಡಲು ಸೂಚನೆ ನೀಡಿದ್ದರು. ಅದರಂತೆ, ಯೋಧರು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Terrorists Killed
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಸಿಬ್ಬಂದಿ ಕೈಗೊಂಡ ಕಾರ್ಯಾಚರಣೆಯು ಯಶಸ್ವಿಯಾಗಿದೆ. ಮೂವರೂ ಉಗ್ರರನ್ನು ಹತ್ಯೆಗೈಯುವಲ್ಲಿ (Terrorists Killed) ಯೋಧರು ಯಶಸ್ವಿಯಾಗಿದ್ದಾರೆ. ಅಮೆರಿಕದಲ್ಲಿ ತಯಾರಿಸಿದ ಎಂ4 ರೈಫಲ್‌ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ಭದ್ರತಾ ಸಿಬ್ಬಂದಿಯು ವಶಪಡಿಸಿಕೊಂಡಿದ್ದಾರೆ. ಮೂವರು ಉಗ್ರರ ಶವಗಳು ಕೂಡ ಸಿಕ್ಕಿವೆ. ಆದರೆ, ಅವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ. ಮೂವರೂ ಪಾಕಿಸ್ತಾನದವರು ಎಂಬ ಮಾಹಿತಿ ಲಭ್ಯವಾಗಿದೆ.

ದೋಡಾ ಜಿಲ್ಲೆ ಗಂಡೋಹ್‌ ಪ್ರದೇಶದ ಬಜಾದ್‌ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಕುರಿತು ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಬುಧವಾರ (ಜೂನ್‌ 26) ಬೆಳಗ್ಗೆ 9.50ರ ಸುಮಾರಿಗೆ ಕಾರ್ಯಾಚರಣೆ ಕೈಗೊಂಡಿದ್ದು, ಇದೇ ವೇಳೆ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಬದಲಾಗಿದ್ದು, ಮೊದಲಿಗೆ ಭದ್ರತಾ ಸಿಬ್ಬಂದಿಯು ಒಬ್ಬ ಉಗ್ರನನ್ನು ಹತ್ಯೆಗೈದಿದ್ದಾರೆ. ನಂತರೂ ಕಾರ್ಯಾಚರಣೆ ನಡೆಸಿ, ಇನ್ನಿಬ್ಬರನ್ನು ಕೂಡ ಹೊಡೆದುರುಳಿಸಿದ್ದಾರೆ.

ಜೂನ್ 11, 12ರಂದು ಚಟ್ಟರ್ಗಲ್ಲಾ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಇದಕ್ಕೆ ಸೇನೆ ಪ್ರತಿಕಕಾರ ತೀರಿಸಿಕೊಳ್ಳುತ್ತಿದ್ದು, ಈಗಾಗಲೆ 7-8 ಭಯೋತ್ಪಾದಕರು ಸತ್ತಿದ್ದಾರೆ. ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಇದರ ಜತೆಗೆ ಮಂಗಳವಾರ ಸಂಜೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ರಜೌರಿ ಜಿಲ್ಲೆಯ ಪಿಂಡ್ ಗ್ರಾಮದಿಂದ ಚೀನಾದ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಭದ್ರತಾ ಪಡೆಯ ಸಿಬ್ಬಂದಿ ತಿಳಿಸಿದ್ದಾರೆ. ಮೂರು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಕನಿಷ್ಠ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಈ ಮೂಲಕ ಗಡಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಒಳನುಸುಳುವ ಭಯೋತ್ಪಾದಕರ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಹತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಐವರು ಲಷ್ಕರ್ ಉಗ್ರರ ಹತ್ಯೆ

Continue Reading

ಕರ್ನಾಟಕ

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

DK Shivakumar: ಬಿಜೆಪಿ ರೈತರ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar statement about milk price hike
Koo

ಬೆಂಗಳೂರು: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು: ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Kempegowda Jayanti: ರಾಜ್ಯ ಸರ್ಕಾರದಿಂದ ಆಚರಿಸುವ ಕೆಂಪೇಗೌಡ ಜಯಂತಿಗೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ.

VISTARANEWS.COM


on

kempegowda Jayanti
Koo

ಬೆಂಗಳೂರು: ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಒಕ್ಕಲಿಗ ಸಂಘ ತಿರುಗಿಬಿದ್ದಿದೆ. ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿ ರಾಜ್ಯ ಒಕ್ಕಲಿಗರ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ವತಿಯಿಂದ ಜೂನ್‌ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ. ಆದರೆ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ | Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading
Advertisement
Attica Babu
ಕರ್ನಾಟಕ25 mins ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Terrorists Killed
ಪ್ರಮುಖ ಸುದ್ದಿ1 hour ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ2 hours ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ2 hours ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ2 hours ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು2 hours ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು2 hours ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ2 hours ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ2 hours ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ2 hours ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌