Job Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿದೆ 836 ಹುದ್ದೆ; ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ - Vistara News

ಉದ್ಯೋಗ

Job Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿದೆ 836 ಹುದ್ದೆ; ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕ ಫೆಬ್ರವರಿ 20.

VISTARANEWS.COM


on

cisf
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (Central Industrial Security Force -CISF) ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ (CISF LDCE ASI Recruitment 2024). ಒಟ್ಟು 836 ಹುದ್ದೆಗಳು ಖಾಲಿ ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಫೆಬ್ರವರಿ 20 (Job Alert).

ಹುದ್ದೆಗಳ ವಿವರ

ಕಾನ್‌ಸ್ಟೇಬಲ್‌ / ಜಿಡಿ ಮತ್ತು ಕಾನ್‌ಸ್ಟೇಬಲ್‌ / ಟಿಎಂ ಅಥವಾ ಐದು ವರ್ಷಗಳ ಸಂಯೋಜಿತ ನಿಯಮಿತ ಸೇವೆಯನ್ನು ಹೆಡ್ ಕಾನ್‌ಸ್ಟೇಬಲ್‌ / ಜಿಡಿ, ಕಾನ್‌ಸ್ಟೇಬಲ್‌ / ಜಿಡಿ ಮತ್ತು ಗ್ರೇಡ್‌ನಲ್ಲಿ ಮೂಲ ತರಬೇತಿಯ ಅನುಭವ ಹೊಂದಿರುವವರು ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಯು ಸಿಐಎಸ್‌ಎಫ್‌ ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2024ರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವಿಭಾಗದ ಅಭ್ಯರ್ಥಿಗಳಿಗೆ 649, ಎಸ್‌ಸಿ ಅಭ್ಯರ್ಥಿಗಳಿಗೆ 125 ಮತ್ತು ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 62 ಹುದ್ದೆಗಳಿವೆ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ ಇದೆ. ಗಮನಿಸಿ ಒಬಿಸಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ಇಲ್ಲ.

ಆಯ್ಕೆ ವಿಧಾನ

ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ:

  • ಮೊದಲ ಹಂತದಲ್ಲಿ ಅಭ್ಯರ್ಥಿಗಳ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತದೆ. ಅವರು ಉತ್ತಮ ಸೇವಾ ದಾಖಲೆ ಮತ್ತು ಶಿಸ್ತುಬದ್ಧ ಜೀವನ ಹೊಂದಿರಬೇಕು.
  • ಎರಡನೇ ಹಂತದಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ. ಸಾಮಾನ್ಯ ಬುದ್ಧಿಮತ್ತೆ, ತಾರ್ಕಿಕ ಶಕ್ತಿ, ಸಾಮಾನ್ಯ ಅರಿವು, ವೃತ್ತಿಪರ ಜ್ಞಾನ, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ಸಂವಹನ ಕೌಶಲ್ಯಗಳಂತಹ ವಿಷಯಗಳಲ್ಲಿ ವಿವಿಧ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡ ಲಿಖಿತ ಪರೀಕ್ಷೆ ಇದಾಗಿದೆ.
  • ಮೂರನೇ ಹಂತದಲ್ಲಿ ಅಭ್ಯರ್ಥಿಗಳ ದೈಹಿಕ ಮಾನದಂಡ ಪರೀಕ್ಷೆ ನಡೆಸಲಾಗುತ್ತದೆ.
  • ನಾಲ್ಕನೇ ಹಂತ ಪುರುಷ ಮತ್ತು ಮಹಿಳಾ ಸ್ಪರ್ಧಿಗಳಿಗೆ ನಿರ್ದಿಷ್ಟ ಮಾನದಂಡಗಳನ್ನು ಒಳಗೊಂಡ ಓಟದ ಸ್ಪರ್ಧೆ ಏರ್ಪಡಿಸಲಾಗುತ್ತದೆ.
  • ಐದು ಮತ್ತು ಕೊನೆಯ ಹಂತದಲ್ಲಿ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ನಿಮ್ಮ ವಿವರ, ಮೊಬೈಲ್‌ ನಂಬರ್‌ ದಾಖಲಿಸಿ ಹೆಸರು ನೋಂದಾಯಿಸಿ.
  • ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಉಪಯೋಗಿಸಿ ಲಾಗಿನ್‌ ಆಗಿ.
  • ಹೊಸ ಪೇಜ್‌ನಲ್ಲಿ CISF Head Constable-2024 ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ಭರ್ತಿ ಮಾಡಿದ ಬಳಿಕ Save & Preview ಬಟನ್‌ ಕ್ಲಿಕ್‌ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ಫಾರಂ ಸಲ್ಲಿಸಿ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ದಕ್ಷಿಣ ರೈಲ್ವೆ ವಲಯದಿಂದ 2,860 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Job News: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

VISTARANEWS.COM


on

Job News
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಶೀಘ್ರದಲ್ಲಿಯೇ ಈ ಕುರಿತಾದ ಅಧಿಸೂಚನೆ ಹೊರ ಬೀಳಲಿದೆ (Job News).

ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಜೂನ್‌ 3ರಂದು ಪ್ರಕಟಣೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಬೋಧಕ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ-ಇದರಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುವುದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 10 ಸಾವಿರ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಅತಿಥಿ ಶಿಕ್ಷಕರು ನೇಮಕಗೊಂಡ ಸ್ಥಳಕ್ಕೆ ಮುಂದೆ ಖಾಯಂ ಶಿಕ್ಷಕರು ನಿಯುಕ್ತಿಗೊಂಡರೆ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಕೈ ಬಿಟ್ಟು, ತಾಲೂಕಿನಲ್ಲಿ ಖಾಲಿ ಇರುವ ಇತರ ಕಡೆಗೆ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.

ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ತಾಲೂಕುವಾರು ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಯ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ.

ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ

ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ. ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Job Alert: 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28.

VISTARANEWS.COM


on

Job Alert
Koo

ನವದೆಹಲಿ: ಭಾರತೀಯ ವಾಯುಪಡೆ (Indian Air Force)ಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಬಹುತೇಕರಲ್ಲಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ. 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಫ್ಲೈಯಿಂಗ್: 29, ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): 156, ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್): 119 ಮತ್ತು ಫ್ಲೈಯಿಂಗ್: ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಸ್ಕೀಮ್‌ ಅಡಿಯಲ್ಲಿ ಶೇ. 10ರಷ್ಟು ಹುದ್ದೆಗಳಿವೆ.
ಫ್ಲೈಯಿಂಗ್ ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ತೇರ್ಡೆಯಾಗಿರಬೇಕು.
ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್) ಹುದ್ದೆಗಳಿಗೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ಓದಿ, ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ

ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (Air Force Common Admission Test)ಗೆ ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿಯನ್ನು ಗಮನಿಸಿ. ಫ್ಲೈಯಿಂಗ್‌ ಬ್ರ್ಯಾಂಚ್‌ಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಗ್ರೌಂಡ್‌ ಡ್ಯೂಟಿ (ಟೆಕ್ನಿಕಲ್‌ / ನಾನ್‌ ಟೆಕ್ನಿಕಲ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವರ್ಷ 20 ವರ್ಷ ಮತ್ತು ಗರಿಷ್ಠ ವಯಸ್ಸು 26 ವರ್ಷ.

ಅರ್ಜಿ ಶುಲ್ಕ

ಎಎಫ್‌ಸಿಎಟಿ ಪ್ರವೇಶ ಶುಲ್ಕ 550 ರೂ. ಇನ್ನು ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಇದಕ್ಕಾಗಿ ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್, ಇ-ಚಲನ್‌ ಬಳಸಬಹುದು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಒಟ್ಟು 300 ಅಂಕಗಳಿಗೆ ನಡೆಯಲಿದೆ. 100 ಪ್ರಶ್ನೆಗಳು ಇರಲಿದ್ದು, ಎರಡು ಗಂಟೆ ಅವಧಿಯನ್ನು ಹೊಂದಿದೆ. ಲಿಖಿತ ಪರೀಕ್ಷೆ ಜನರಲ್‌ ಅವರ್ನೆಸ್‌, ವರ್ಬಲ್‌ ಎಬಿಲಿಟಿ, ನ್ಯುಮೆರಿಕಲ್‌ ಎಬಿಲಿಟಿ ಮತ್ತು ರೀಸನಿಂಗ್‌ & ಮಿಲಿಟರಿ ಅಪ್ಟಿಟ್ಯೂಡ್‌ ಟೆಸ್ಟ್‌ ಅನ್ನು ಒಳಗೊಂಡಿದೆ.

Indian Air Force Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು, ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ನಂತರ ತೆರೆದುಕೊಳ್ಳುವ ಹೊಸ ಪುಟದಲ್ಲಿರುವ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ವಾಣಿಜ್ಯ

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ವಿಶ್ವ
ಇತರ ಪ್ರಸಿದ್ಧ ಕಂಪನಿಗಳು ಭಾರತದಲ್ಲಿ ಎಂಜಿನಿಯರ್ ಗಳಿಗೆ ಎಷ್ಟು ಸಂಬಳ ಪಾವತಿ (Highest Salary Paying Companies) ಮಾಡುತ್ತಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Highest Paying Companies
Koo

ಗೂಗಲ್ (Google), ಅಮೆಜಾನ್ (amazon), ಮೈಕ್ರೋ ಸಾಫ್ಟ್ (microsoft) ಸೇರಿದಂತೆ ವಿಶ್ವ ಪ್ರಸಿದ್ಧ ಕಂಪನಿಗಳ ಸ್ಯಾಲರಿ ಪ್ಯಾಕೇಜ್ (Highest Salary Paying Companies) ಎಷ್ಟಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ಈ ಕುರಿತು ಇದೀಗ ಎಕ್ಸ್ ನಲ್ಲಿ (x) ಮಾಹಿತಿ ವೈರಲ್ (viral) ಆಗಿದ್ದು, ವಿಶ್ವ ಪ್ರಸಿದ್ಧ ಕಂಪನಿಗಳ ಎಂಜಿನಿಯರ್ ಗಳು ವಾರ್ಷಿಕ ಸರಾಸರಿ 26 ಸಾವಿರ ರೂ.ನಿಂದ 66 ಲಕ್ಷ ರೂ. ವರೆಗೆ ಸಂಬಳ ಪಡೆಯುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ಬಳಿಕ ಗೊಜೆಕ್, ಮೈಕ್ರೋಸಾಫ್ಟ್, ಝೀಟಾ, ಅಡೋಬ್ ಮತ್ತು ಸೇಲ್ಸ್‌ಫೋರ್ಸ್‌ನಲ್ಲಿ ಎಂಜಿನಿಯರ್‌ ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಇದರಲ್ಲಿ ಕ್ರಮವಾಗಿ 59.7 ಲಕ್ಷ, 58.5 ಲಕ್ಷ, 58 ಲಕ್ಷ, 56.3 ಲಕ್ಷ, ಮತ್ತು 56.1 ಲಕ್ಷ ಸಂಬಳ ಪಡೆಯುವ ಎಂಜಿನಿಯರ್ ಗಳು ಇದ್ದಾರೆ.

ಬಳಿಕದ ಸ್ಥಾನದಲ್ಲಿ ವಿಎಂ ವೇರ್, ಶೇರ್ ಚಾಟ್, ಗೋಲ್ಡ್ ಮನ್, ಪೇ ಪಾಲ್, ಮಿಂತ್ರಾ, ವಾಲ್ ಮಾರ್ಟ್, ಸರ್ವಿಸ್ ನೌ, ಫ್ಲಿಪ್ ಕಾರ್ಟ್, ರಝೋರ್ ಪೇ, ಒರಾಕಲ್, ಅಮೆಜಾನ್ ಕೂಡ ಸೇರಿದೆ. ಇದರಲ್ಲಿ ಬಹುತೇಕ ಎಂಜಿನಿಯರ್‌ಗಳ ಸಂಬಳ 51.4 ಲಕ್ಷ ರೂ. ವರೆಗೆ ಇದೆ. ಟೆಕೀವ್ನ್, ಸಿಸ್ಕೊ, ಪೇ ಟಿಎಂ, ಕ್ವ್ಯಾಲ್ ಕಾಮ್, ಸ್ಯಾಪ್, ಓಯೋ ಕಂಪೆನಿಗಳ ಎಂಜಿನಯರ್ ಗಳಿಗೆ 5೦ ಲಕ್ಷ ರೂ.ವರೆಗೆ ವಾರ್ಷಿಕ ಪಾವತಿ ಮಾಡಲಾಗುತ್ತದೆ.


ಉಳಿದಂತೆ ಐಬಿಎಂ, ಸ್ಯಾಮ್ ಸಂಗ್, ಅಕ್ವೆವೆಂಚರ್, ಕಾಗ್ನಿಜೆಂಟ್, ಇನ್ಫೋಸಿಸ್, ಕ್ಯಾಂಪ್ಗೆಮಿನಿ, ಟಿಸಿಎಸ್ ಕಂಪೆನಿಗಳಲ್ಲಿ ಎಂಜಿನಿಯರ್ ಗಳಿಗೆ ಗರಿಷ್ಠ ವಾರ್ಷಿಕ ಪಾವತಿ 30 ಲಕ್ಷ ರೂ.ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಹೆಚ್ಚು ಮತ್ತು ಕಡಿಮೆ ಪಾವತಿಸುವ ಕಂಪನಿಗಳ ಮಾಹಿತಿ ಸಂಗ್ರಹಕ್ಕಾಗಿ ಒಟ್ಟು 25,000 ಮಂದಿಯ ಸಂಬಳವನ್ನು ವಿಶ್ಲೇಷಿಸಲಾಗಿದೆ ಎಂದು ಎಕ್ಸ್ ಬಳಕೆದಾರರು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಸಂಬಳ ಪಾವತಿಯ ಬಗ್ಗೆ ಪಾರದರ್ಶಕತೆ ಬಹಳ ಮುಖ್ಯ ಎಂದಿರುವ ಅವರು ಇದರಲ್ಲಿ ಮೂಲ ವೇತನದಲ್ಲಿ ಕೊಂಚ ವ್ಯತ್ಯಾಸವಿರಬಹುದು ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಗಮನಿಸಿ; 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 30. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading
Advertisement
Election Results 2024 modi face 400 par
ಪ್ರಮುಖ ಸುದ್ದಿ29 mins ago

Election Results 2024: ಎನ್‌ಡಿಎ 400 ಸ್ಥಾನ ತಲುಪಲು ಈ ರಾಜ್ಯಗಳೇ ಹೆದ್ದಾರಿ! ಸಮೀಕ್ಷೆಗಳು ಹೇಳಿದ್ದೇನು?

Lok Sabha Election Result 2024 Live
ದೇಶ1 hour ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Benefits Of Litchi
ಆರೋಗ್ಯ1 hour ago

Benefits Of Litchi: ಸಿಹಿಯಾದ, ರುಚಿಯಾದ ಲಿಚಿ ಹಣ್ಣನ್ನು ತಿಂದರೆ ಆರೋಗ್ಯ ಲಾಭ ಹಲವಾರು

Exit Poll 2024
ಪ್ರಮುಖ ಸುದ್ದಿ1 hour ago

Election Results 2024: ಇಂದು ಹೊರಬೀಳಲಿದೆ ಫಲಿತಾಂಶ; ಎಕ್ಸಿಟ್‌ ಪೋಲ್‌ಗಳು ಹೇಳಿದ್ದೇನು?

karnataka weather Forecast
ಮಳೆ2 hours ago

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Home Remedies For Mosquito Bite
ಆರೋಗ್ಯ2 hours ago

Home Remedies For Mosquito Bite: ಸೊಳ್ಳೆ ಕಚ್ಚಿದ ಜಾಗದಲ್ಲಿ ವಿಪರೀತ ಉರಿಯೇ? ಈ ಸರಳ ಮನೆಮದ್ದುಗಳನ್ನು ಬಳಸಿ

Lok Sabha Election Result
ದೇಶ3 hours ago

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Dina Bhavishya
ಭವಿಷ್ಯ3 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mallikarjun Kharge
Lok Sabha Election 20249 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ9 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 hour ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ16 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ17 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌