HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ - Vistara News

ವಿಧಾನಮಂಡಲ ಅಧಿವೇಶನ

HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

HSRP Number Plate: ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿಕೊಂಡಿಲ್ಲ. 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್‌ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಮಧು ಮಾದೇಗೌಡ ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಅವಧಿಯನ್ನು ವಿಸ್ತರಣೆ ಮಾಡುವುದಾಗಿ ಹೇಳಿದೆ.

VISTARANEWS.COM


on

HSRP Number Plate period extended again 3 month Government announced in Legislative Council
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನ ಪರಿಷತ್: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದಿದೆ. ಈ ವಿಚಾರವು ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಚರ್ಚೆಯಾಗಿದೆ. ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೂ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್‌ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಈವರೆಗೆ ಹೆಚ್ಚಿನ ವಾಹನಗಳು ನೋಂದಣಿ ಮಾಡಿಸಿಕೊಂಡಿಲ್ಲ. 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಅಲ್ಲದೆ, ಇದರ ಬಗ್ಗೆ ಆನ್‌ಲೈನ್‌ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ ಮಾಡುವುದರ ಜತೆಗೆ ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಆಗ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ನೋಂದಣಿಯನ್ನು ವಿಸ್ತರಣೆ ಮಾಡುವ ಬಗ್ಗೆ ಸರ್ಕಾರವೂ ಚಿಂತನೆ ನಡೆಸಿದ್ದು, ಮತ್ತೆ ಮೂರು ತಿಂಗಳು ಮುಂದಕ್ಕೆ ಹಾಕುತ್ತೇವೆ. ಅಲ್ಲದೆ, ಈ ಸಂಬಂಧ ಆನ್‌ಲೈನ್ ವಂಚನೆ ಬಗ್ಗೆ ಗಮನಹರಿಸುತ್ತೇವೆ ಎಂದು ಹೇಳಿದರು.

ಮೇ 17ರವರೆಗೆ ಅವಕಾಶ?

ಈಗ ಮತ್ತೆ ಮೂರು ತಿಂಗಳು ಅವಧಿಯನ್ನು ವಿಸ್ತರಣೆ ಮಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಆದರೆ, ದಿನಾಂಕವನ್ನು ಹೇಳಿಲ್ಲ. ಹೀಗಾಗಿ ಈಗಿನ ದಿನಾಂಕಕ್ಕೆ ಸರಿಯಾಗಿ ಮುಂದಕ್ಕೆ ಹಾಕಿದರೆ ಮೇ 17ರವರೆಗೆ ಅವಕಾಶವನ್ನು ನೀಡಿದಂತಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ನಿಖರ ಮಾಹಿತಿ ಗೊತ್ತಾಗಲಿದೆ. ಈ ಮೊದಲು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ಫೆ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಈಗ ಮುಂದಕ್ಕೆ ಹೋಗಿರುವುದು ವಾಹನ ಸವಾರರು ಅಲ್ಪ ನಿರಾಳವಾಗುವಂತೆ ಮಾಡಿದಂತಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ಅಧಿಸೂಚನೆ ಹೊರಡಿಸಿದ್ದ ಸರ್ಕಾರ

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನವಾಗಿತ್ತು

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಬಳಿಕ ವಿಸ್ತರಣೆ ಮಾಡಲಾಗುತ್ತಾ ಬರುತ್ತಿದೆ.

ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? ಇಲ್ಲಿದೆ ವಿಡಿಯೊ

ಹೆಚ್ಚುವರಿ ಹಣ ವಸೂಲಿ ಮಾಡಿದರೆ ದೂರು ನೀಡಿ: ರಾಮಲಿಂಗಾ ರೆಡ್ಡಿ

HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ಮೇ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ | Gruha Lakshmi: ಗೃಹಲಕ್ಷ್ಮಿ ಹಣ ಯಾರಿಗೆ ಬಂತು? ತಿಳಿಯುವ ಸರಳ ಉಪಾಯ ಇಲ್ಲಿದೆ!

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಧಾನಮಂಡಲ ಅಧಿವೇಶನ

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Budget Session : ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಬಿಜೆಪಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ವಾರ್‌ ನಡೆಯಿತು. ಅದು ದೇಶಪ್ರೇಮ, ದೇಶದ್ರೋಹ ಹಾಗೂ ಜೈ ಶ್ರೀರಾಮ್‌, ಜೈ ಸೀತಾರಾಮ್‌ ಫೈಟ್‌

VISTARANEWS.COM


on

Budget session Siddaramaiah
Koo

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ (Budget Session) ಗುರುವಾರ ಬಿಜೆಪಿಯ ಜೈ ಶ್ರೀರಾಮ್‌ (Jai Shri Ram Slogan) ಘೋಷಣೆಗೆ ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಜೈ ಸೀತಾರಾಮ್‌ (Jai Seetharam) ಘೋಷಣೆಯ ಮೂಲಕ ಸಡ್ಡು ಹೊಡೆದರು!

ಬುಧವಾರ ಬಜೆಟ್‌ ಅಧಿವೇಶನದಲ್ಲಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಸೌಧದ ಎದುರು ನಡೆದ ʻಪಾಕಿಸ್ತಾನ್‌ ಜಿಂದಾಬಾದ್‌ʼ (Pakistan Zindabad) ವಿವಾದದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಧ್ವನಿ ಎತ್ತಿದರು. ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳದೆ ‌ ಸರ್ಕಾರ ವಿಳಂಬ ಮಾಡುತ್ತಿದೆ. ಕೆಲವರನ್ನು ಕರೆಸಿ ವಿಚಾರಣೆಯ ನೆಪದಲ್ಲಿ ಅವರಿಗೆ ಬಿರಿಯಾನಿ ತಿನ್ನಿಸುತ್ತಿದೆ ಎಂದು ಆರೋಪಿಸಿದರು. ಆಗ ಸಿದ್ದರಾಮಯ್ಯ ಅವರು ಸಿಟ್ಟಿಗೆದ್ದು ದೇಶಪ್ರೇಮದ ವಿಚಾರದಲ್ಲಿ ನಾವು ನಿಮ್ಮಿಂದ ಕಲಿಯಬೇಕಾಗಿಲ್ಲ. ಆರೆಸ್ಸೆಸ್‌ನವರು ಬ್ರಿಟಿಷರ ಜತೆ ಕೈಜೋಡಿಸಿದವರು. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ ಹೆಡಗೇವಾರ್‌ ಅವರಾಗಲೀ, ನಂತರ ಸರಸಂಘಚಾಲಕರಾಗಿದ್ದ ಗೋಳ್ವಳ್ಕರ್‌ ಅವರಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ ಎಂದು ಹೇಳಿದರು.

ಆಗ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಾವಿಯ ಸುತ್ತ ಭಜನೆ ಮಾಡುವ ರೀತಿಯಲ್ಲಿ ಓಡಾಡಿದರು. ಕಾಂಗ್ರೆಸ್‌ ಸತ್ತೋಯ್ತು, ಚಟ್ಟ ಕಟ್ಟಿ ಎಂದೆಲ್ಲ ಭಜನೆ ಮಾಡುತ್ತಾ ಸಾಗಿದರು. ಜತೆಗೆ ಜೈ ಶ್ರೀರಾಮ್‌ ಘೋಷಣೆ ಮೊಳಗಿಸಿದರು. ಆಗ ಸಿದ್ದರಾಮಯ್ಯ ಅವರು ಜೈಶ್ರೀ ರಾಮ್‌ ಘೋಷಣೆಗೆ ಪ್ರತಿಯಾಗಿ ಜೈ ಸೀತಾರಾಮ್‌ ಘೋಷಣೆ ಕೂಗಿದರು. ಬಿಜೆಪಿಯವರು ರಾಮಾಯಣವನ್ನೂ ಓದಿಲ್ಲ, ಮಹಾಭಾರತವನ್ನೂ ಓದಿಲ್ಲ ಎಂದರು.

ನಾವೂ ರಾಮನ ಭಕ್ತರೇ ಎಂದ ಸಿದ್ದರಾಮಯ್ಯ

ಅವರು ಮಾತೆತ್ತಿದರೆ ಜೈಶ್ರೀರಾಮ್‌ ಅನ್ನುತ್ತಾರೆ. ನಾವೇನು ರಾಮನ ಭಕ್ತರಲ್ಲವೆ? ನಮ್ಮ ಊರಿನಲ್ಲಿ ಎರಡು ರಾಮ ಮಂದಿರ ಕಟ್ಟಿಸಿದ್ದೇನೆ. ನಾನು ರಾಮನ ಭಕ್ತನಲ್ಲವೇ? ಎಂದು ಸಿದ್ದರಾಮಯ್ಯ ಕೇಳಿದರು.

ಇವರು ರಾಮ- ಸೀತೆಯರನ್ನು ಬೇರೆ ಮಾಡಿದ್ದಾರೆ. ಅವರು ಜೈ ಶ್ರೀ ರಾಮ್‌ ಎನ್ನುತ್ತಾರೆ. ಅದಕ್ಕಾಗಿ ನಾವು ಜೈ ಸೀತಾರಾಮ್‌ ಎಂದು ಹೇಳುತ್ತೇವೆ. ಮಹಾತ್ಮಾ ಗಾಂಧೀಜಿ ಹೇಳಿದ ಸೀತಾರಾಮನಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ರಾಷ್ಟ್ರಭಕ್ತರು. ಈ ದೇಶದ ಜನರನ್ನು ಪ್ರೀತಿಸುವವರು. ಎಲ್ಲ ಧರ್ಮದ ಜನರನ್ನು ಪ್ರೀತಿಸುವವರು ಕಾಂಗ್ರೆಸ್‌ ಪಕ್ಷದವರು. ಇವರ ತರ ಬುರ್ಖಾ ಹಾಕಿದವರು, ಟೋಪಿ ಹಾಕಿದವರು ಬರಬೇಕಾಗಿಲ್ಲ ಎನ್ನುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕೆಣಕಿದರು.

ಇದನ್ನು ಓದಿ : Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ

ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ. ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ದಾರೆ. ಈಗ ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ ಎಂದು ಹೇಳಿದರು.

ಬರ ಪರಿಹಾರಕ್ಕೆ ಪ್ರಸ್ತಾವನೆ ಅಕ್ಟೋಬರ್‌ ನಲ್ಲಿಯೇ ಕಳಿಸಿದ್ದೆವು. ನೇರವಾಗಿ ಪ್ರಧಾನಮಂತ್ರಿಯವರು ಹಾಗೂ ಅಮಿತ್‌ ಷಾ ಅವರನ್ನು ಭೇಟಿ ಮಾಡಿದೆ. 240 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಪರಿಹಾರ ನೀಡುವಂತೆ ಮನವಿ ಮಾಡಿದೆ. ಡಿಸೆಂಬರ್‌ 23ರಂದು ಸಭೆ ಕರೆಯುವುದಾಗಿ ಕೇಂದ್ರ ಸಚಿವರು ಹೇಳಿದರೂ ಈ ವರೆಗೆ ಸಭೆ ನಡೆಸಿಲ್ಲ.. ನಮ್ಮ ಸಂಸದರು ಈ ಬಗ್ಗೆ ಮೌನ ವಹಿಸಿದ್ದಾರೆ. ಕರ್ನಾಟಕದ ಜನ ಇವರನ್ನು ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಹಣ ಬರುತ್ತದೆ ಎಂದು ಪದೇಪದೆ ಹೇಳುತ್ತಾರೆ. ಈ ಹಣ ಯಾರಿಂದ ಬರುತ್ತದೆ? ನಮ್ಮ ತೆರಿಗೆಯಿಂದ. ಆದ್ದರಿಂದಲೇ ನಾವು ಹೇಳುವುದು ನಮ್ಮ ತೆರಿಗೆ ನಮ್ಮ ಹಕ್ಕು. ಸೆಸ್‌, ಸರ್ಚಾರ್ಜ್‌ ನಲ್ಲಿ ನಮಗೆ ಪಾಲು ಕೊಡುವುದಿಲ್ಲ. ಸೆಸ್‌, ಸರ್ಚಾರ್ಜ್‌ ಮೂಲ 5,52,000 ಕೋಟಿ ರೂ. ಸಂಗ್ರಹವಾಗಿದೆ. ಸೆಸ್‌ ಸರ್ಚಾರ್ಜ್‌ 1958 ರಿಂದ ವಿಧಿಸಲಾಗುತ್ತಿದೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ 1999 ರ ವರೆಗೆ ಸೆಸ್‌ ಸರ್ಚಾರ್ಜ್‌ ನಲ್ಲಿ ರಾಜ್ಯಕ್ಕೆ ಪಾಲು ದೊರೆಯುತ್ತಿದ್ದು. ಸಂವಿಧಾನ ತಿದ್ದುಪಡಿ ಮಾಡಿ ಇದನ್ನು ಸ್ಥಗಿತಗೊಳಿಸಲಾಯಿತು. ಕನಿಷ್ಠ ತೆರಿಗೆಯ 50% ಆದರೂ ನಮಗೆ ಕೊಡಬೇಕು. 4.71% ರಿಂದ 3.64% ಗೆ ಕಡಿಮೆಯಾಗಿದೆ.. ಇದರ ಅರಿವಾಗಿಯೇ 15ನೇ ಹಣಕಾಸು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದ್ದು ಎಂದು ವಿವರಿಸಿದರು.

ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ

ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21ರಲ್ಲಿ ಶೇ. 3ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುವುದಾಗಿ ಸದನಕ್ಕೆ ಭರವಸೆ ನೀಡುತ್ತೇನೆ. 2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್‌ ವೇಳೆಗೆ 5.23 ಲಕ್ಷ ಕೋಟಿ ಇದೆ. ಇವರು ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ ಎಂದು ಹೇಳಿದರು.

Continue Reading

ವಿಧಾನಮಂಡಲ ಅಧಿವೇಶನ

Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

Budget Session : ಕೇಂದ್ರ ಸರ್ಕಾರದವರು ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಕದ್ದು ತಮ್ಮ ಯೋಜನೆ ಅಂತಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಅವರು ಮಾತನಾಡಿದರು.

VISTARANEWS.COM


on

Budget session Siddaramaiah Modi guarantee
Koo

ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿಗಳನ್ನು (Congress Guarantees) ಕದ್ದು ಮೋದಿ ಗ್ಯಾರಂಟಿ (Modi Guarantee) ಎಂದು ಪ್ರಚಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ (Budget Session) ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಲ್ಲಿ (Central Government Schemes) ರಾಜ್ಯದ ಪಾಲೇ ಅಧಿಕವಿರುತ್ತದೆ ಎಂದು ಲೆಕ್ಕ ನೀಡಿದರು.

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದರು.

ರಾಜ್ಯದ ಸ್ವಂತ ತೆರಿಗೆ ಶೇ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆ ಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಮಾತ್ರ ಕೇವಲ ಕೇವಲ ಕೇವಲ ಶೇ. 22% ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮಿಂದ ಪಡೆದ ಹಣ ನ್ಯಾಯಯುತವಾಗಿ ವಾಪಸ್‌ ಕೊಡುವುದಿಲ್ಲ

ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ. ರೈಲ್ವೇಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ. 50ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ ಎಂದು ರಾಜ್ಯಗಳಿಗೆ ತೆರಿಗೆಯಲ್ಲಿ ಆಗುತ್ತಿರುವ ಅನ್ಯಾಯದ ಪಟ್ಟಿಯನ್ನೇ ಸಿದ್ದರಾಮಯ್ಯ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ರಾಜ್ಯದ ಪಾಲೇ ಅಧಿಕ

ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ ಎಂದರು.
ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ ಎಂದರು. 2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಸರ್ಕಾರ ಕೊಟ್ಟರೆ ನಮ್ಮ.ಪಾಲು 472 ಕೋಟಿ ರೂ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ 594 ಕೋಟಿ ಕೇಂದ್ರ ಕೊಟ್ಟರೆ ರಾಜ್ಯ ಸರ್ಕಾರ 346 ಕೋಟಿ ರೂ. ನೀಡಿ ಹೆಚ್ಚುವರಿಯಾಗಿ 967 ಕೋಟಿ ರೂ.ಗಳನ್ನು ನೀಡಿದೆ. ಆಯುಷ್ಮಾ ನ್ ಭಾರತ್ ಯೋಜನೆಯಡಿ 187 ಕೋಟಿ ರೂ.ಗಳನ್ನು ಕೇಂದ್ರ ನೀಡಿದ್ದರೆ 124 ಕೋಟಿ ರೂ ಜೊತೆಗೆ 624 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಕೇಂದ್ರದವರು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದ ಸಿದ್ದರಾಮಯ್ಯ

ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 350 ಕೋಟಿ ನೀಡಿದೆ ಅದರ ಜೊತೆಗೆ 8569 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೊಟ್ಟಿದೆ. ಒಟ್ಟಾರೆಯಾಗಿ 13005 ಕೋಟಿ ರೂ.ಗಳು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬರುತ್ತದೆ ಅಷ್ಟೇ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ. 35ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ. ಪಿಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ. ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50.ಲಕ್ಷ ರೂ. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಜಿಎಸ್‌ಟಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರೂ ಮಾತ್ರ ಎಂದರು. ಇದರಲ್ಲಿ ನಮ್ಮ ಹೆಸರಿಲ್ಲ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ ಸಿಎಂ ಮೋದಿ ಗ್ಯಾರಂಟಿ ಎಂದು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದರು.

Continue Reading

ರಾಜಕೀಯ

Budget Session : 40 ಗಂಟೆ ಕಳೆದರೂ ಜಿಂದಾಬಾದ್‌ ಉಗ್ರರ ಸೆರೆ ಇಲ್ಲ; ಬಿಜೆಪಿ ವಾಕೌಟ್‌

Budget Session : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಉಗ್ರರನ್ನು 40 ಗಂಟೆಗಳ ಆದರೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ವಿಧಾನಭೆಯಿಂದ ಸಭಾತ್ಯಾಗ ಮಾಡಿದರು.

VISTARANEWS.COM


on

Budget Session BJP Walk out
Koo

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ (Pakistan zindabad) ಘೋಷಣೆ ಕೂಗಿದ ಧೂರ್ತರ ವಿರುದ್ಧ 40 ಗಂಟೆ ಕಳೆದರೂ ಕ್ರಮ ಕೈಗೊಂಡಿಲ್ಲ. ಅವರಿಗೆ ರಕ್ಷಣೆ ಕೊಡಲಾಗುತ್ತಿದೆ ಎಂದು ಆಪಾದಿಸಿ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ಸಭಾತ್ಯಾಗ (BJP Walks out from Assembly) ಮಾಡಿದೆ. ಬಜೆಟ್‌ ಅಧಿವೇಶನದ (Budget Session) ಕೊನೆಯ ದಿನವಾದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚರ್ಚೆಯ ಮೇಲೆ ಉತ್ತರ ನೀಡುತ್ತಿದ್ದಾಗ ಬಿಜೆಪಿ ಶಾಸಕರು ಧರಣಿ ನಡೆಸಿದರು, ಭಜನೆ ನಡೆಸಿದರು. ಅಂತಿಮವಾಗಿ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು. ಬಳಿಕ ಎಲ್ಲರೂ ರಾಜಭವನಕ್ಕೆ ತೆರಳಿದರು. ಅದರ ನಡುವೆ ಜೈ ಮೋದಿ, ಜೈ ಶ್ರೀರಾಮ್‌ ಘೋಷಣೆಗಳೂ ಮೊಳಗಿದವು.

ಅಧಿವೇಶನ ಸಮಾವೇಶಗೊಳ್ಳುತ್ತಿದ್ದಂತೆಯೇ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಅವರು, ʻʻಈ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಇನ್ನೂ ಅದು ಎದ್ದೇ ಇಲ್ಲ. ದೇಶದ್ರೋಹಿಗಳನ್ನು ಶಿಕ್ಷಿಸುವ ಧೈರ್ಯ ತೋರಿಲ್ಲʼʼ ಎಂದು ಆಕ್ಷೇಪಿಸಿದರು.

ʻʻನಾನು ಸಿನಿಯರ್ ಶಾಸಕನಾಗಿದ್ದೇನೆ. ಹಲವು ವರ್ಷಗಳಿಂದ ಸರ್ಕಾರಗಳನ್ನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆಯವರು ಗೃಹ ಸಚಿವರಾಗಿದ್ದರು. ಆಗ ದಲಿತ ಸಮುದಾಯದ ಆರು ಜನರನ್ನ ಸಜೀವ ದಹನ ಮಾಡಲಾಗಿತ್ತು. ಆಗ ಸದನದಲ್ಲಿ ಖರ್ಗೆಯವರು ಕಣ್ಣೀರು ಹಾಕಿದ್ದರು. ಆದರೆ, ಈಗಿನ ಗೃಹ ಸಚಿವರು ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರೂ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು 40 ಗಂಟೆ ಕಳೆದರೂ ಒಬ್ಬರನ್ನೂ ಬಂದಿಸಿಲ್ಲ ಅಂತ ಹೇಳಿದ ಮೇಲೆ ಇವರು ಅಧಿಕಾರದಲ್ಲಿ ಇರಲು ಲಾಯಕ್ ಇಲ್ಲʼʼ ಎಂದರು. ಬಳಿಕ ಇತರ ಶಾಸಕರ ಜತೆ ಸದನದ ಬಾವಿಗೆ ಇಳಿದರು.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಆಗ ಗೃಹ ಸಚಿವ ಪರಮೇಶ್ವರ್‌ ಅವರು, ಎಫ್ಎಸ್ಎಲ್ ರಿಪೋರ್ಟ್ ಬರಲಿ. ಏಳು ಜನರ ಬಳಿ ಹೇಳಿಕೆ ಪಡೆದಿದ್ದೇವೆ. ಇದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ʻʻಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರೆ ಕ್ರಮ ನಿಶ್ಚಿತ. ನಾವು ದೇಶಭಕ್ತಿಯನ್ನು ಇವರಿಂದ ಕಲಿಯುವ ಅಗತ್ಯವಿಲ್ಲ. ಎಫ್ಎಸ್ಎಲ್ ರಿಪೋರ್ಟ್ ಬರಲಿ. ನಾವು ಯಾರನ್ನೂ ಸಹ ರಕ್ಷಣೆ ಮಾಡಲ್ಲ.ʼʼ ಎಂದರು. ಸದನದ ಬಾವಿಯಲ್ಲಿ ಇಳಿದು ಗದ್ದಲ ಮಾಡುವುದು ಸರಿಯಲ್ಲ ಎಂದು ಹೇಳಿದರು.

Budget Session Siddaramaiah RSS Leaders

ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿರುವ ನಡುವೆಯೇ ಬಜೆಟ್ ಮೇಲೆ ಚರ್ಚೆಗೆ ಸಿಎಂ ಉತ್ತರ ನೀಡಲು ಆರಂಭಿಸಿದರು. ಆಗ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಬಿಜೆಪಿ ಶಾಸಕರು ಪೇಪರ್‌ಗಳನ್ನು ಹರಿದು ಹಾಕಿದರು. ಸಿದ್ದರಾಮಯ್ಯ ಅವರ ಮಾತುಗಳನ್ನು ಸುಳ್ಳು ಸುಳ್ಳು.. ಬುರುಡೆ ಬುರುಡೆ ಎಂದು ರೇಗಿಸಿದ ಬಿಜೆಪಿ ಶಾಸಕರು, ನ್ಯಾಯ ಬೇಕು ಅಂತ ಬಾವಿಯಲ್ಲಿ ಸುತ್ತು ಹೊಡೆದರು.

ಕಟ್ಟಿ ಕಟ್ಟಿ ಕಾಂಗ್ರೆಸ್ ಗೆ ಚಟ್ಟ ಕಟ್ಟಿ.. ಸತ್ತೋಯಿತು, ಸತ್ತೋಯಿತು.. ಕಾಂಗ್ರೆಸ್ ಸತ್ತೋಯಿತು ಎಂದು ಬಿಜೆಪಿ ಭಜನೆ ಶುರು ಮಾಡಿತು. ʻʻಮೊದಲು ಸಿಎಂ ರಾಜೀನಾಮೆ ಕೊಡಬೇಕು. ವಿಧಾನ ಸೌಧಕ್ಕೆ ಭಯೋತ್ಪಾದಕರನ್ನು ಕರೆ ತಂದಿದ್ದು ಇವರು. ಇವರ ನಡೆ ವಿರೋಧಿಸಿ ನಾವು ರಾಜಭವನ ಚಲೋ ಮಾಡ್ತೀವಿ. ರಾಜಭವನ ತೆರಳಿ ಸರ್ಕಾರದ ವಿರುದ್ಧ ದೂರು ಕೊಡ್ತೀವಿ. ಸದನದಿಂದ ವಾಕ್ ಔಟ್ ಮಾಡ್ತೀವಿʼʼ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು. ಬಳಿಕ ಬಿಜೆಪಿ ಸದಸ್ಯರು ಸದನದಿಂದ ಹೊರನಡೆದರು.

Continue Reading

ರಾಜಕೀಯ

Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

Budget Session : ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್‌ ನಾಯಕರು ಎಂದಾದರೂ ಭಾಗವಹಿಸಿದ್ದರಾ? ಎಂದು ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ವಿಧಾನಸಭೆಯಲ್ಲಿ ಮಾತನಾಡಿದರು.

VISTARANEWS.COM


on

Budget Session Siddaramaiah RSS Leaders
Koo

ಬೆಂಗಳೂರು: ಬಿಜೆಪಿಯವರು ರಾಜ್ಯದಲ್ಲಿ (BJP Karnataka) ಇದುವರೆಗೆ ಒಂದೇ ಒಂದು ಬಾರಿಯೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಮೂರು ಬಾರಿ ಅಧಿಕಾರಕ್ಕೆ ಏರಿದರೂ ಹಿಂಬಾಗಿಲಿನಿಂದ ಬಂದವರು. ಜನ ಇವರಿಗೆ ಯಾವತ್ತೂ ಅವಕಾಶ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಹೇಳಿದರು. ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಆಯವ್ಯಯ ಭಾಷಣ (Budget Session) ಕುರಿತ ಚರ್ಚೆಗೆ ಉತ್ತರ ನೀಡಿದರು.

ಬಿಜೆಪಿಯವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಆರ್.ಎಸ್.‌ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತಲ್ಲ, ಅದು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ್‌ ಹೆಡಗೇವಾರ್‌ (Keshav Baliram Hedagevar) ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ? ಮತ್ತೊಬ್ಬ ಸರಸಂಘಚಾಲಕ ಗೋಳ್ವಳ್ಕರ್‌ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ರಾ? ಯಾವತ್ತೂ ಇಲ್ಲ ಎಂದು ಹೇಳಿದರು ಸಿದ್ದರಾಮಯ್ಯ.

ಅನಂತಕುಮಾರ್‌ ಹೆಗಡೆ ಅವರು ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Budget Session Siddaramaiah RSS Leaders1

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರು 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ. ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

Budget Session Siddaramaiah RSS Leaders1

ಮುಖ್ಯಮಂತ್ರಿಗಳ ಉತ್ತರದ ಇತರ ಮುಖ್ಯಾಂಶಗಳು

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ.

ಇದನ್ನೂ ಓದಿ : Budget Session: ನೀವು ತನಿಖೆ ಮಾಡುವಷ್ಟರಲ್ಲಿ ಬಾಂಬ್‌ ಇಟ್ಟು ಓಡಿ ಹೋಗುತ್ತಾರೆ; ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕೆಂಡ

ಇದು ಹೇಗೆ ಅಭಿವೃದ್ಧಿ ಶೂನ್ಯ ಹೇಗೆ?

ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದರು ಸಿದ್ದರಾಮಯ್ಯ.

Continue Reading
Advertisement
Karnataka weather Forecast
ಮಳೆ17 mins ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ47 mins ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Dina Bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Fire Accident
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ7 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ7 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ7 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ7 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ8 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ8 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌