Karnataka Budget Session 2024: 'ವಿಪಕ್ಷದವರು ಗೂಂಡಾಗಳು' ಎಂಬ ಸಿಎಂ ಹೇಳಿಕೆಗೆ ಟಿ.ಎ. ಶರವಣ ಕಿಡಿ - Vistara News

ರಾಜಕೀಯ

Karnataka Budget Session 2024: ‘ವಿಪಕ್ಷದವರು ಗೂಂಡಾಗಳು’ ಎಂಬ ಸಿಎಂ ಹೇಳಿಕೆಗೆ ಟಿ.ಎ. ಶರವಣ ಕಿಡಿ

Karnataka Budget Session 2024: ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷದ ಸದಸ್ಯರನ್ನು ಗುಂಡಾಗಳಿಗೆ ಹೋಲಿಸಿ, ಥೂ, ಛಿ ಎಂದು ಬೆದರಿಸಲು ಪ್ರಯತ್ನಿಸಿದ್ದಾರೆ. ಇದು ಖಂಡನೀಯವಾಗಿದೆ. ಅವರು ತಮ್ಮ ಪದ ಬಳಕೆ ಬಗ್ಗೆ ಕನಿಷ್ಠ ವಿಷಾದ ಸೂಚಿಸುವ ಕೆಲಸವನ್ನೂ ಮಾಡಿಲ್ಲ ಎಂದು ಟಿ.ಎ. ಶರವಣ ಅಸಮಾಧಾನವನ್ನು ಹೊರಹಾಕಿದ್ದಾರೆ.

VISTARANEWS.COM


on

Karnataka Budget Session 2024 Opposition is goondas says CM and TA Sharavana condemn this statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಸದನದಲ್ಲಿ (Karnataka Budget Session 2024) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಪದ ಬಳಕೆ ಬಗ್ಗೆ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ. ಈ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿರುವ ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಸಿದ್ದರಾಮಯ್ಯ ಅವರು ವಿಪಕ್ಷದ ಸದಸ್ಯರನ್ನು ಗುಂಡಾಗಳಿಗೆ ಹೋಲಿಸಿ, ಥೂ, ಛಿ ಎಂದು ಬೆದರಿಸಲು ಪ್ರಯತ್ನಿಸಿದ್ದಾರೆ. ಇದು ಖಂಡನೀಯವಾಗಿದೆ. ಅವರು ತಮ್ಮ ಪದ ಬಳಕೆ ಬಗ್ಗೆ ಕನಿಷ್ಠ ವಿಷಾದ ಸೂಚಿಸುವ ಕೆಲಸವನ್ನೂ ಮಾಡಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ನಡೆಯುತ್ತಿದ್ದ ಕಲಾಪದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪದಪ್ರಯೋಗದಿಂದ ಅಸಮಾಧಾನಗೊಂಡ ವಿಪಕ್ಷ ಸದಸ್ಯರು ಸಭಾತ್ಯಾಗವನ್ನು ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಉತ್ತರವನ್ನು ಸೌಜನ್ಯದಿಂದ ಕೇಳಿಸಿಕೊಳ್ಳುತ್ತಿದ್ದೆವು. ಪದೇ ಪದೆ ಅವರು ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ಆಗ ಆಕ್ಷೇಪಿಸಿದಾಗ ‘ನೀವು ವಿಪಕ್ಷ ಸದಸ್ಯರು ಗೂಂಡಾಗಳಾ? ಥೂ, ಛೀ ಎಂದು ನಮ್ಮನ್ನೆಲ್ಲ ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಟೀಕಿಸಿದರು.‌

ಆರೂವರೆ ಕೋಟಿ ಜನರನ್ನು ಪ್ರತಿನಿಧಿಯಾಗಿರುವ ಮುಖ್ಯಮಂತ್ರಿಗಳು ಅಸಾಂವಿಧಾನಿಕ ಪದವನ್ನು ಬಳಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪದ ಬಳಕೆಗೆ ವಿಷಾದ ಸೂಚಿಸಿಲ್ಲ. ಸಿಎಂ ಅವರ ವರ್ತನೆ, ಪದ ಪ್ರಯೋಗದಿಂದ ನಮಗೆ ಬಹಳ ನೋವಾಗಿದೆ. ಆದ್ದರಿಂದ ವಿಪಕ್ಷದ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ದೇವೆ ಎಂದು ಟಿ.ಎ. ಶರವಣ ತಿಳಿಸಿದರು.

Karnataka Budget Session 2024 Opposition is goondas says CM and TA Sharavana condemn this statement

ರಾಜ್ಯದ ಜನರು ಮುಖ್ಯಮಂತ್ರಿಗಳ ವರ್ತನೆಗೆ ತಕ್ಕ ಉತ್ತರವನ್ನು ಸೂಕ್ತ ಸಮಯದಲ್ಲಿ ನೀಡುತ್ತಾರೆ ಎಂದು ತಿಳಿಸಿದ ಅವರು, ಇವತ್ತು ಕಲಾಪವನ್ನು ಬಹಿಷ್ಕರಿಸಿದ್ದೇವೆ. ಮುಖ್ಯಮಂತ್ರಿಗಳು ಮಾತ್ರವಲ್ಲದೆ, ಸಚಿವರು ಕೂಡ ಪದೇ ಪದೆ ಎದ್ದುನಿಂತು ವಿಪಕ್ಷದವರಿಗೆ ಮಾತನಾಡಲು ಅವಕಾಶವನ್ನೇ ಕೊಟ್ಟಿಲ್ಲ ಎಂದು ಟಿ.ಎ. ಶರವಣ ಕಿಡಿಕಾರಿದರು.

ಬಿಜೆಪಿಯವರು ಗೂಂಡಾಗಳು ಎಂದ ಸಿಎಂ

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದ ವ್ಯತ್ಯಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ವಿಪಕ್ಷಗಳ ಗದ್ದಲದಿಂದ ಆಕ್ರೋಶಗೊಂಡು, “ಏನು ಗೂಂಡಾಗಿರಿ ಮಾಡ್ತೀರಾ? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ಹೇಳಿರುವುದು ಈಗ ಗಲಾಟೆಗೆ ಕಾರಣವಾಗಿದೆ. ಈ ಸಂಬಂಧ ವಿಪಕ್ಷಗಳು ಕೆರಳಿದ್ದು ಗದ್ದಲ ಎಬ್ಬಿಸಿದ್ದಾರೆ. ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ 10 ನಿಮಿಷ ಕಾಲ ವಿಧಾನ ಪರಿಷತ್ ಕಲಾಪವನ್ನು ಸಭಾಪತಿಗಳು ಮುಂದೂಡಿದ್ದಾರೆ.

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದಲ್ಲಿನ ವ್ಯತ್ಯಾಸದ ಬಗ್ಗೆ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಈ ಗದ್ದಲಗಳು ನಡೆದಿವೆ. ಕರ್ನಾಟಕ ಇವತ್ತು ತೆರಿಗೆ ಪಾವತಿಸುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ, ನಮಗೆ ಬರುವ ತೆರಿಗೆ ಆದಾಯದ ಪಾಲು ಕಡಿಮೆ ಆಗುತ್ತಿದೆ ಎಂದು ಹೇಳಿದರು.

ಹದಿನಾಲ್ಕು ಮತ್ತು ಹದಿನೈದನೇ ಹಣಕಾಸು ಆಯೋಗ ಶಿಫಾರಸು ಮಾಡುವಾಗ 18-19ರ ಬಜೆಟ್ ಗ್ರಾತ್ರ ಇತ್ತು. ಬಳಿಕ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋಯಿತು. ಹೀಗಾಗಿ ಅದರ ಪಾಲು ಹೆಚ್ಚಾಗಬೇಕಿತ್ತು. ಈ ಹಿನ್ನೆಲೆಯಲ್ಲಿ 14ನೇ ಹಣಕಾಸು ಆಯೋಗವು ಶೇ. 42 ಕೊಡಲು ಹೇಳಿತ್ತು. ಆದರೆ, 15ನೇ ಆಯೋಗದಲ್ಲಿ ಇದರ ಪ್ರಮಾಣ ಕಡಿಮೆಯಾಗಿದೆ. ಈ ಎರಡೂ ಹಣಕಾಸು ಆಯೋಗದಲ್ಲಿ ವರ್ಷವಾರು ಕಡಿಮೆ ತೆರಿಗೆ ಪಾವತಿ ಆಗುತ್ತಿದೆ. ಮೊದಲ ವರದಿಯಲ್ಲಿ 5495 ಕೋಟಿ ಕೊಡಲು ಶಿಫಾರಸು ಆಗಿತ್ತು. ಅಂತಿಮ ವರದಿಯಲ್ಲಿ ಕೆರೆ ಹಾಗೂ ಫೆರಿಫರಲ್ ರಿಂಗ್ ರೋಡ್‌ಗಾಗಿ 6000 ಕೋಟಿ ರೂಪಾಯಿ ನೀಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಂಕಿ-ಅಂಶಗಳನ್ನು ತೆರೆದಿಟ್ಟರು.

ಕರ್ನಾಟಕಕ್ಕೆ 11 ಸಾವಿರ ಕೋಟಿ ರೂ. ಕೊಡಲು 15ನೇ ಹಣಕಾಸು ಆಯೋಗದಿಂದ ಶಿಫಾರಸು ಮಾಡಲಾಗಿತ್ತು. ಆದರೆ, ಈ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ. ಇದನ್ನೇ ಸೆಂಟ್ರಲ್ ಫೈನಾನ್ಸ್ ಮಿನಿಸ್ಟರ್ ವಾದ ಮಾಡಲು ಹೊರಟಿದ್ದಾರೆ. ಪ್ರಶ್ನೆ ಮಾಡಿದರೆ ಹಣಕಾಸು ಆಯೋಗ ಅಟಾನಮಸ್ ಬಾಡಿಯಾಗಿದೆ. ನಾವು ಅದರ ವರದಿಯನ್ನಷ್ಟೇ ಅನುಷ್ಠಾನ ಮಾಡುತ್ತೇವೆ ಎನ್ನುತ್ತಾರೆ.‌ ಅದರಂತೆ ಮಾಡಿದರೂ ನಮಗೆ ಹಣ ಬಿಡುಗಡೆ ಆಗಬೇಕಿತ್ತು. ಅದನ್ನಿನ್ನೂ ಅವರು ಮಾಡಿಲ್ಲ. ಈ ಹಿಂದಿನ ಸರ್ಕಾರದ ಗಮನಕ್ಕೆ ಈ ವಿಚಾರವನ್ನು ತಂದಿದ್ದೆ. ವಿಶೇಷ ಅನುದಾನ ಪಡೆಯಲು ಕ್ರಮ ವಹಿಸಿ ಎಂದು ಮನವಿ ಮಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ವಿಪಕ್ಷದವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ. ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ. ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದ್ದವರದ್ದೇನು ಮಾತು? ಎಂದು ಪ್ರಶ್ನೆ ಮಾಡಿದರು. ಆಗ ಮತ್ತೆ ವಿಪಕ್ಷದವರು ಗದ್ದಲ ಮಾಡಿದರು. ಆಗ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ಸದಸ್ಯರ ಮನವೊಲಿಕೆಗೆ ಪ್ರಯತ್ನಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಮ್ಮ ಫ್ಯಾಕ್ಟ್ ಉತ್ತರ ಸಹಿಸಲು ಸಾಧ್ಯ ಆಗುತ್ತಿಲ್ಲ. ನೀವು ಎಷ್ಟೇ ಕೂಗಾಡಿದರೂ ಅದು ಸತ್ಯವೇ. ನಿರ್ಮಲಾ ಸೀತಾರಾಂ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, “ಸಿಎಂ ಆನ್ಸರ್ ಬೇಡ” ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ; ನಿಜ ಕಾರಣ ಬಿಚ್ಚಿಟ್ಟ ಬಿ.ವೈ. ವಿಜಯೇಂದ್ರ

ಘೋಷಣೆ ನಡುವೆ ಸಿಎಂ ಉತ್ತರವನ್ನು ಮುಂದುವರಿಸಿದರು. “ಅವರೇ ಬಜೆಟ್‌ನಲ್ಲಿ ಒಪ್ಪಿಕೊಂಡಿದ್ದ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಆದರೆ, ನಾವು ಯೋಜನೆ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂಪಾಯಿಗಳ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದರು.

ನೀವು ಗೂಂಡಾಗಳು ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಉತ್ತರದಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ಗದ್ದಲ ನಡೆಸಿದರು. ಆಗ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಉತ್ತರ ಕೊಟ್ಟ ಮೇಲೆ ಹೇಳಿ. ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ. ಏಳು ಕೋಟಿ ಜನ ನೋಡುತ್ತಾ ಇದ್ದಾರೆ. ಎದ್ದು ನಿಂತಿದ್ದಾರೆ ಎಂದರೆ? ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ ಎಂದು ಹೇಳಿದರು. ಆಗ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎದ್ದುನಿಂತು, ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು, ನೀವಾ ನಾವಾ? ಈಗ ನಮಗೆ ಗೂಂಡಾಗಿರಿ ಎಂದು ಹೇಳುತ್ತೀರಾ? ಅಂದು ತೊಡೆ ತಟ್ಟಿದ್ದು ಯಾರು? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ, ನೀವು ಗೂಂಡಾಗಳು. ನಿಮ್ಮ ಗೂಂಡಾಗಿರಿಗೆ ನಾವು ಹೆದರಲ್ಲ. ನಾನು ಸತ್ಯವನ್ನೇ ಹೇಳುತ್ತಾ ಇದ್ದೇನೆ ಎಂದು ಹೇಳಿದರು. ಆಗ ಎದ್ದನಿಂತ ವಿಪಕ್ಷ ಬಿಜೆಪಿಯವರು ಗಲಾಟೆ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಜನ ಇವರಿಗೆ ಛೀ.. ಥೂ.. ಅಂತಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳಿದರು. ಆಗ ತೀವ್ರ ಗದ್ದಲವಾಗಿದ್ದರಿಂದ ಸಭಾಪತಿಯವರು ಪರಿಷತ್ ಕಲಾಪವನ್ನು ಮುಂದೂಡಿಕೆ ಮಾಡಿದರು. ಆಗ ವಿಪಕ್ಷ ಬಿಜೆಪಿಯವರು, ಗೂಂಡಾ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Petrol Diesel Price Hike: ಜಿಎಸ್‌ಟಿಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿವೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Petrol Diesel Price Hike
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ (Petrol Diesel Price Hike) ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ. ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಮೋದಿ ಸರ್ಕಾರವೇ ಸೃಷ್ಟಿಸಿದೆ, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ತೆರಿಗೆ ಹೆಚ್ಚಳ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ, ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆಯೇ ಹೊರತು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ. 40 ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದೂವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್‌ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಸುಪ್ರೀಂ ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3454 ಕೋಟಿ ರೂ. ಪರಿಹಾರ ನೀಡಿದ್ದಾರೆ. ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್‌ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ ಅವರ ಆರ್ಥಿಕ ಶಕ್ತಿ ಹೆಚ್ಚಾಗುವುದಿಲ್ಲವೇ? ಉಚಿತ ವಿದ್ಯುತ್‌ ನೀಡಿದರೆ ಅವರಿಗೆ ಉಳಿತಾಯವಾಗುವುದಿಲ್ಲವೇ? ಹೆಚ್ಚುವರಿ ಅಕ್ಕಿ ಕೇಳಿದರೆ, ಕೊಟ್ಟಿಲ್ಲ. ಯಾರಾದರೂ ಮಾತಾಡಿದರೇ? ಎಂದು ಪ್ರಶ್ನಿಸಿದರು.

ಈ ಬೆಲೆ ಏರಿಕೆಯಿಂದ ಸುಮಾರು 3,000 ಕೋಟಿ ರೂ. ಸಂಪನ್ಮೂಲ ದೊರೆಯಲಿದೆ. ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂ. ಅಗತ್ಯವಿದೆ. ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದರು.

ಇದನ್ನೂ ಓದಿ | Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ಸಮರ್ಥಿಸಿಕೊಂಡರು.

Continue Reading

ಕರ್ನಾಟಕ

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Rahul Gandhi: ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Rahul Gandhi
Koo

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ (Rahul Gandhi) ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ (YouTuber Ajeet Bharti) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಯುಟ್ಯೂಬರ್‌ ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ಆ ರೀತಿ ಯಾವುದೇ ಭಾಷಣದಲ್ಲಿ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗೂ ಕೋಮು ದ್ವೇಷ ಹರಡಲು ಸ್ವಯಂ ಘೋಷಿತ ಪತ್ರಕರ್ತ, ಲೇಖಕ ಅಜಿತ್ ಭಾರತಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಯುಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಜಿತ್ ಭಾರತಿ ಅವರ ಯೂಟ್ಯೂಬ್ ಚಾನೆಲ್‌ಗೆ 5.56 ಲಕ್ಷ ಚಂದಾದಾರರು ಇದ್ದಾರೆ. ಅವರ ಇತ್ತೀಚಿನ ಹೆಚ್ಚಿನ ವಿಡಿಯೊಗಳು ಎರಡು ಲಕ್ಷಕ್ಕೂ ಹೆಚ್ಚು ವೀವ್ಸ್‌ ಕಂಡಿವೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ನಲ್ಲಿ ಅವರು ಪತ್ರಕರ್ತ ಮತ್ತು ಲೇಖಕ ಎಂದು ಬರೆದುಕೊಂಡಿದ್ದಾರೆ. ರಾಹುಲ್‌ ಗಾಂಧಿ ಅವರ ಬಗ್ಗೆ ಮಾಡಿರುವ ವಿಡಿಯೊ ಸಂಬಂಧ‌ ಇದೀಗ ಇವರ ವಿರುದ್ಧ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ!; ಇವಿಎಂ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

DK Shivakumar

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

ಪ್ರಮುಖ ಸುದ್ದಿ

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

DK Shivakumar: ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

ಕರ್ನಾಟಕ

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Petrol Diesel Price Hike: ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

VISTARANEWS.COM


on

Petrol Diesel Price Hike
Koo

ಬೆಂಗಳೂರು: ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ (Petrol Diesel Price Hike) ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದು, ಈ ಕೆಳಗಿನ ಅಂಶಗಳನ್ನು ಪ್ರಸ್ತಾವಿಸಿ ರಾಜ್ಯ ಸರ್ಕಾರವ ವಿರುದ್ಧ ಕಿಡಿಕಾರಿದ್ದಾರೆ.

1) ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ.

2) ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ.

3) ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ.

4) ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ.

5) ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ.

6) ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ.

Continue Reading
Advertisement
Health Tips Kannada
Latest4 mins ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ22 mins ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest43 mins ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ45 mins ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ58 mins ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ2 hours ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ2 hours ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ2 hours ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest2 hours ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest2 hours ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು8 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು8 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌