Subramanian Swamy: ಮ್ಯಾಕ್ಸ್‌ ಲೈಫ್‌ ಮೂಲಕ ಆಕ್ಸಿಸ್ ಬ್ಯಾಂಕ್‌ ಅಕ್ರಮ ಲಾಭ: ಸುಬ್ರಮಣಿಯನ್‌ ಸ್ವಾಮಿ ಆರೋಪ - Vistara News

ಪ್ರಮುಖ ಸುದ್ದಿ

Subramanian Swamy: ಮ್ಯಾಕ್ಸ್‌ ಲೈಫ್‌ ಮೂಲಕ ಆಕ್ಸಿಸ್ ಬ್ಯಾಂಕ್‌ ಅಕ್ರಮ ಲಾಭ: ಸುಬ್ರಮಣಿಯನ್‌ ಸ್ವಾಮಿ ಆರೋಪ

ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ (Max Life Insurance) ಕಂಪನಿಯ ಷೇರುಗಳನ್ನು ಒಳಗೊಂಡ ವಹಿವಾಟುಗಳ ಮೂಲಕ ಬ್ಯಾಂಕ್ ಅನ್ಯಾಯವಾಗಿ ಲಾಭ ಗಳಿಸಿದೆ (Unjust Gains) ಎಂದು ಸುಬ್ರಮಣಿಯನ್ ಸ್ವಾಮಿ (Subramanian Swamy) ಪ್ರತಿಪಾದಿಸಿದ್ದಾರೆ.

VISTARANEWS.COM


on

subramanian swamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ (BJP) ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಅವರು ಆಕ್ಸಿಸ್ ಬ್ಯಾಂಕ್ (Axis Bank) ಮೇಲೆ ಗಂಭೀರ ಆರೋಪ ಮಾಡಿದ್ದು, ಸರಿಸುಮಾರು 5,100 ಕೋಟಿ ರೂಪಾಯಿಗಳ ಆರ್ಥಿಕ ಅವ್ಯವಹಾರವನ್ನು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ (Max Life Insurance) ಕಂಪನಿಯ ಷೇರುಗಳನ್ನು ಒಳಗೊಂಡ ವಹಿವಾಟುಗಳ ಮೂಲಕ ಬ್ಯಾಂಕ್ ಅನ್ಯಾಯವಾಗಿ ಲಾಭ ಗಳಿಸಿದೆ (Unjust Gains) ಎಂದು ಸ್ವಾಮಿ ಪ್ರತಿಪಾದಿಸಿದ್ದಾರೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ಸಂಕ್ಷಿಪ್ತವಾಗಿ ವಿಚಾರಣೆ ನಡೆಸಿತು.

ಆಕ್ಸಿಸ್ ಬ್ಯಾಂಕ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅರ್ಜಿಯ ಪೂರ್ವ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ನ್ಯಾಯಾಲಯವು ಮಾರ್ಚ್ 13ಕ್ಕೆ ಪ್ರಕರಣವನ್ನು ಮುಂದೂಡಿತು.

ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಮತ್ತು ಮ್ಯಾಕ್ಸ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್‌ನ ವಂಚನೆ ಚಟುವಟಿಕೆಗಳನ್ನು ತನಿಖೆ ಮಾಡಲು ಸಾರ್ವಜನಿಕ ಹಿತಾಸಕ್ತಿಯಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಮನವಿ ಒತ್ತಾಯಿಸಿದೆ.

ಮ್ಯಾಕ್ಸ್ ಲೈಫ್‌ನ ಈಕ್ವಿಟಿ ಷೇರುಗಳ ಖರೀದಿ ಮತ್ತು ಮಾರಾಟದಿಂದ ಆಕ್ಸಿಸ್ ಬ್ಯಾಂಕ್ ಮತ್ತು ಅದರ ಗುಂಪು ಘಟಕಗಳು ಅನಗತ್ಯ ಲಾಭ ಗಳಿಸಿವೆ. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಈ ವಹಿವಾಟುಗಳನ್ನು ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ.

ಬ್ಯಾಂಕ್‌ಗಳ ನಿರ್ವಹಣೆಯನ್ನು ಬ್ಯಾಂಕಿಂಗ್ ಅನುಭವವಿಲ್ಲದ ಬೇರೆ ವೃತ್ತಿಪರರಿಗೆ ಹಸ್ತಾಂತರಿಸಲಾಗುತ್ತಿದೆ. ಅನ್ಯಾಯದ ಮತ್ತು ಪಾರದರ್ಶಕವಲ್ಲದ ವಿಧಾನಗಳ ಮೂಲಕ ಷೇರುಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಮನವಿ ಹೇಳಿದೆ.

ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಷೇರು ವ್ಯವಹಾರಗಳಲ್ಲಿ 5,100 ಕೋಟಿ ರೂಪಾಯಿಗಳ ಅನ್ಯಾಯದ ಲಾಭಗಳ ಬಗ್ಗೆ ಮಾಡಲಾದ ಆರೋಪಗಳಲ್ಲಿ ಹುರುಳಿಲ್ಲ ಹಾಗೂ ಅದರಿಂದ ಯಾವುದೇ ದುಷ್ಪರಿಣಾಮವಿಲ್ಲ ಎಂದು ಆಕ್ಸಿಸ್ ಬ್ಯಾಂಕ್ ಎಕ್ಸ್ಚೇಂಜ್ ಫೈಲಿಂಗ್‌ನಲ್ಲಿ ಸ್ಪಷ್ಟಪಡಿಸಿದೆ.

ಮ್ಯಾಕ್ಸ್ ಲೈಫ್‌ನ ಷೇರುಗಳ ವಹಿವಾಟುಗಳಿಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಸರ್ಕಾರಿ ಅನುಮೋದನೆಯನ್ನು ಸಂಸ್ಥೆ ಪಡೆದುಕೊಂಡಿದೆ. ಯಾವುದೇ ಆಧಾರರಹಿತ ಆರೋಪಗಳ ವಿರುದ್ಧ ಬ್ಯಾಂಕ್ ಅನ್ನು ರಕ್ಷಿಸಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಆಕ್ಸಿಸ್‌ ಬ್ಯಾಂಕ್ ಹೇಳಿದೆ.

2021ರಲ್ಲಿ ಆಕ್ಸಿಸ್ ಬ್ಯಾಂಕ್ ಮತ್ತು ಇತರ ಗುಂಪು ಘಟಕಗಳು ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್‌ನಲ್ಲಿ 12.02% ಪಾಲನ್ನು ಖರೀದಿಸಿದ್ದವು. ಕಳೆದ ವರ್ಷ ಆಗಸ್ಟ್‌ನಲ್ಲಿ, ಬ್ಯಾಂಕ್‌ನ ಮಂಡಳಿಯು 7% ಹೆಚ್ಚಿನ ಪಾಲನ್ನು ಖರೀದಿಸಲು ಜೀವ ವಿಮಾದಾರರಲ್ಲಿ 1,612 ಕೋಟಿ ರೂ.ಗಳ ಹೆಚ್ಚಿನ ಹೂಡಿಕೆಯನ್ನು ಅನುಮೋದಿಸಿತ್ತು. ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಫೆಬ್ರವರಿಯಲ್ಲಿ ಈ ಹೆಚ್ಚುವರಿ ಷೇರು ಖರೀದಿಗೆ ತನ್ನ ಒಪ್ಪಿಗೆ ನೀಡಿದೆ.

ಮ್ಯಾಕ್ಸ್ ಲೈಫ್‌ನಲ್ಲಿ ಹೆಚ್ಚುವರಿ ಪಾಲನ್ನು ಖರೀದಿಸಲು ಆಕ್ಸಿಸ್ ಬ್ಯಾಂಕ್ ಮತ್ತು ಗ್ರೂಪ್ ಘಟಕಗಳ ಎರಡನೇ ಪ್ರಯತ್ನ ಇದಾಗಿದೆ. 2022ರ ಅಕ್ಟೋಬರ್‌ನಲ್ಲಿ, IRDAI ಮ್ಯಾಕ್ಸ್ ಲೈಫ್‌ಗೆ ರೂ 3 ಕೋಟಿ ದಂಡ ಮತ್ತು ಆಕ್ಸಿಸ್ ಬ್ಯಾಂಕ್‌ಗೆ ರೂ 2 ಕೋಟಿ ದಂಡ ವಿಧಿಸಿತ್ತು. ಮ್ಯಾಕ್ಸ್ ಲೈಫ್‌ನ ವ್ಯವಹಾರದ ಅನುಮೋದನೆಯನ್ನು ಪಡೆಯಲು ಕಂಪನಿಯು ನೀಡಿದ ವಿವರಗಳಲ್ಲಿ ವಂಚನೆಯಿದೆ ಎಂದು ವಿಮಾ ನಿಯಂತ್ರಕರು ಹೇಳಿದ್ದರು. ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಒಪ್ಪಂದದಲ್ಲಿ ಅನಗತ್ಯ ಲಾಭ ಗಳಿಸಿದ್ದಕ್ಕಾಗಿ ದಂಡ ವಿಧಿಸಲಾಗಿತ್ತು.

ಇದನ್ನೂ ಓದಿ: Subramanian Swamy: ಮೋದಿಯನ್ನು ಫಾಲೋ ಮಾಡುವವರು ಮೂರ್ಖರು ಎಂದ ಸುಬ್ರಮಣಿಯನ್‌ ಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

Stock Market Crash : ಇಂದು, ಭಾರತದ ಷೇರು ಮಾರುಕಟ್ಟೆ ವಿಶ್ವದ ಅಗ್ರ 5 ಆರ್ಥಿಕತೆಗಳ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಮೋದಿ ಸರ್ಕಾರದ ಅಡಿಯಲ್ಲಿ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಪಿಎಸ್​ಯುಗಳ ಮಾರುಕಟ್ಟೆ ಮೊತ್ತ 4 ಪಟ್ಟು ಹೆಚ್ಚಾಗಿದೆ. ಆದರೆ ರಾಹುಲ್ ಅದನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

VISTARANEWS.COM


on

Stock Market Crash
Koo

ನವದೆಹಲಿ: ಷೇರು ಮಾರುಕಟ್ಟೆ ಜೂ. 4ಕ್ಕೆ ಪತನಗೊಂಡಿರುವುದು (Stock Market Crash) ಒಂದು ಹಗರಣ. ಮೋದಿ ಹಾಗೂ ಅಮಿತ್​ ಶಾ ಇದನ್ನು ನಡೆಸಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿದ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ರಾಹುಲ್ ಗಾಂಧಿ ಇನ್ನೂ ಹೊರಬಂದಿಲ್ಲ. ಈಗ, ಅವರು ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ಪಿತೂರಿ ನಡೆಸುತ್ತಿದ್ದಾರೆ. ಇಂದು, ಭಾರತವು ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ತಡೆಯಲು ರಾಹುಲ್ ಯತ್ನಿಸುತ್ತಿದ್ದಾರೆ ಎಂದು ಎಂದು ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮೋದಿ ಸರ್ಕಾರದ ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನಮ್ಮ ಮಾರುಕಟ್ಟೆ ಸಾಮರ್ಥ್ಯ 5 ಟ್ರಿಲಿಯನ್ ಡಾಲರ್ ದಾಟಿದೆ. ಇಂದು, ಭಾರತದ ಷೇರು ಮಾರುಕಟ್ಟೆ ವಿಶ್ವದ ಅಗ್ರ 5 ಆರ್ಥಿಕತೆಗಳ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಮೋದಿ ಸರ್ಕಾರದ ಅಡಿಯಲ್ಲಿ ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಪಿಎಸ್​ಯುಗಳ ಮಾರುಕಟ್ಟೆ ಮೊತ್ತ 4 ಪಟ್ಟು ಹೆಚ್ಚಾಗಿದೆ. ಆದರೆ ರಾಹುಲ್ ಅದನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

ಷೇರು ಮಾರುಕಟ್ಟೆ ಹಗರಣ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇರವಾಗಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ ನಂತರ ಬಿಜೆಪಿ ಈ ಪ್ರತಿಕ್ರಿಯೆ ನೀಡಿದೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಐದು ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ನಿರ್ದಿಷ್ಟ ಹೂಡಿಕೆ ಸಲಹೆ ಏಕೆ ನೀಡಿದರು? ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಷೇರುಗಳನ್ನು ತಿರುಚಿದ್ದಕ್ಕಾಗಿ ಸೆಬಿ ತನಿಖೆಯಲ್ಲಿರುವ ಒಂದೇ ವ್ಯವಹಾರ ಗುಂಪಿನ ಒಡೆತನದ ಒಂದೇ ಮಾಧ್ಯಮಕ್ಕೆ ಎರಡೂ ಸಂದರ್ಶನಗಳನ್ನು ಏಕೆ ನೀಡಲಾಯಿತು ಎಂದು ರಾಹುಲ್ ಗಾಂಧಿ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಗೋಯಲ್, 10 ವರ್ಷಗಳ ಹಿಂದೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಆ ಸಮಯದಲ್ಲಿ ಭಾರತದ ಮಾರುಕಟ್ಟೆ ಕ್ಯಾಪ್ 67 ಲಕ್ಷ ಕೋಟಿ ರೂ. ಇಂದು ಮಾರುಕಟ್ಟೆ ಕ್ಯಾಪ್ 415 ಲಕ್ಷ ಕೋಟಿ ರೂ.ಗೆ ಏರಿದೆ.

ಇದನ್ನೂ ಓದಿ: Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

“ಜೂನ್ 4 ರಂದು ಬಿಜೆಪಿ ದಾಖಲೆಯ ಸಂಖ್ಯೆಯನ್ನು ತಲುಪುತ್ತಿದ್ದಂತೆ, ಷೇರು ಮಾರುಕಟ್ಟೆಯೂ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ” ಎಂದು ಪ್ರಧಾನಿ ಮೋದಿ ಮೇ 23 ರಂದು ಹೇಳಿದ್ದರು.

ಕೇಂದ್ರ ಗೃಹ ಸಚಿವ ಶಾ, ಈ ಹಿಂದೆಯೂ ಮಾರುಕಟ್ಟೆ ಕುಸಿದಿದೆ. ಆದ್ದರಿಂದ ಇದನ್ನು ನೇರವಾಗಿ ಚುನಾವಣೆಗೆ ಲಿಂಕ್ ಮಾಡಬಾರದು. ಕೆಲವು ವದಂತಿಗಳು ಪತನ ಹೆಚ್ಚಿಸಿರಬಹುದು. ನನ್ನ ಅಭಿಪ್ರಾಯದಲ್ಲಿ, ಜೂನ್ 4 ರೊಳಗೆ ಖರೀದಿಸಿ. ಮಾರುಕಟ್ಟೆಯು ಉತ್ತುಂಗಕ್ಕೇರಲಿದೆ.” ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Sunil Chhetri :ಕುವೈತ್ ವಿರುದ್ಧದ ಡ್ರಾದ ನಂತರ ಎರಡೂ ತಂಡದ ಆಟಗಾರರು ಅವರಿಗೆ ಗಾರ್ಡ್​ ಆಫ್​ ಹಾನರ್​ ಸಲ್ಲಿಸಿದರು. ಈ ವೇಳೆ ಛೆಟ್ರಿ ಆನಂದ ಭಾಷ್ಪ ಸುರಿಸಿದರು. ಭಾರತೀಯ ಅಭಿಮಾನಿಗಳಿಂದ ಭಾರಿ ಹರ್ಷೋದ್ಗಾರ ಗೌರವ ಸಲ್ಲಿಸಿದರು. ಆಟಗಾರರು ಅವರಿಗೆ ಅಭಿನಂದನೆ ಸಲ್ಲಿಸಿದರು.

VISTARANEWS.COM


on

sunil chhetri
Koo

ಕೋಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ 58,000 ಕ್ಕೂ ಹೆಚ್ಚು ಅಭಿಮಾನಿಗಳ ಸಮ್ಮುಖದಲ್ಲಿ ಭಾರತ ಫುಟ್ಬಾಲ್ ತಾರೆ ಸುನಿಲ್ ಛೆಟ್ರಿ (Sunil Chhetri) ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ವಿದಾಯ ಹೇಳಿದರು. ಕತಾರ್ ವಿರುದ್ಧದ ಪಂದ್ಯದ ಫಲಿತಾಂಶವು ಡ್ರಾದಲ್ಲಿ ಕೊನೆಗೊಂಡ ಕಾರಣ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತದ ಪ್ರಗತಿ ಹಾದಿಗೆ ಅಡಚಣೆ ಉಂಟಾಯಿತು. ಇದು ಭಾರತದ ಫುಟ್ಬಾಲ್ ಪಾಲಿಗೆ ಬೇಸರದ ವಿಷಯ. ಆದಾಗ್ಯೂ ಅಭಿಮಾನಿಗಳು ಕೆಲವು ಕ್ಷಣಗಳವರೆಗೆ ನಿರಾಶೆ ಬದಿಗಿಟ್ಟರು. ಛೆಟ್ರಿಗೆ ಪ್ರೇಕ್ಷಕರು ಗಾರ್ಡ್​ ಆಫ್​ ಹಾನರ್ ಸಲ್ಲಿಸಿದರು.

ಕುವೈತ್ ವಿರುದ್ಧದ ಡ್ರಾದ ನಂತರ ಎರಡೂ ತಂಡದ ಆಟಗಾರರು ಅವರಿಗೆ ಗಾರ್ಡ್​ ಆಫ್​ ಹಾನರ್​ ಸಲ್ಲಿಸಿದರು. ಈ ವೇಳೆ ಛೆಟ್ರಿ ಆನಂದ ಭಾಷ್ಪ ಸುರಿಸಿದರು. ಭಾರತೀಯ ಅಭಿಮಾನಿಗಳಿಂದ ಭಾರಿ ಹರ್ಷೋದ್ಗಾರ ಗೌರವ ಸಲ್ಲಿಸಿದರು. ಆಟಗಾರರು ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಪಂದ್ಯದಲ್ಲಿ, 39 ವರ್ಷದ ಆಟಗಾರ ಅತ್ಯಂತ ಉತ್ಸಾಹದಲ್ಲಿದ್ದಂತೆ ಕಂಡರು. ತಮ್ಮ ಯುವ ಸಹ ಆಟಗಾರರನ್ನು ಮೀರಿಸಿ ಓಡಾಡುತ್ತಿದ್ದರು. ತಮ್ಮ 151 ನೇ ಪ್ರದರ್ಶನದಲ್ಲಿ 94 ಗೋಲುಗಳ ದಾಖಲೆಯ ಸಂಖ್ಯೆಯನ್ನು ಸೇರಿಸುವ ಭರವಸೆಯಲ್ಲಿದ್ದರು. ಆದಾಗ್ಯೂ, ಭಾರತದ ದಾಖಲೆಯ ಗೋಲ್ ಸ್ಕೋರರ್​ಗೆ ಪರಿಪೂರ್ಣ ವಿದಾಯ ಸಿಗಲಿಲ್ಲ, ಕುವೈತ್ ಆಟದಲ್ಲಿ ಪ್ರಾಬಲ್ಯ ಸಾಧಿಸಿತು.

ಛೆಟ್ರಿ 94ಗೋಲ್​ಗಳ ಸರದಾರ

39 ವರ್ಷದ ಛೆಟ್ರಿ, 94 ಗೋಲುಗಳನ್ನು ಗಳಿಸುವ ಮೂಲಕ ಕ್ರೀಡೆಯ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ಗೋಲ್ ಸ್ಕೋರರ್ ಆಗಿ ತಮ್ಮ 19 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ಪೋರ್ಚುಗಲ್​ನ ಕ್ರಿಸ್ಟಿಯಾನೊ ರೊನಾಲ್ಡೊ (128 ಗೋಲುಗಳು), ಇರಾನ್​ನ ಅಲಿ ಡೇಯ್ (108 ಗೋಲುಗಳು) ಮತ್ತು ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ (106 ಗೋಲುಗಳು) ಅವರಿಗಿಂತ ಮೊದಲಿನ ಸ್ಥಾನಗಳಲ್ಲಿ ಇದ್ದಾರೆ.

ಪೋಷಕರು ಭಾಗಿ

ಛೆಟ್ರಿ ಅವರ ಅಂತಾರಾಷ್ಟ್ರೀಯ ಫುಟ್ಬಾಲ್​​ಗೆ ವಿದಾಯ ಹೇಳಿರುವುದು ಹೃದಯಸ್ಪರ್ಶಿ ಕ್ಷಣವಾಗಿತ್ತು. ಏಕೆಂದರೆ ಭಾವನಾತ್ಮಕ ಬೀಳ್ಕೊಡುಗೆಯಲ್ಲಿ ಅವರ ಹೆತ್ತವರಾದ ಖಾರ್ಗಾ ಮತ್ತು ಸುಶೀಲಾ, ಅವರ ಪತ್ನಿ ಸೋನಮ್ ಭಟ್ಟಾಚಾರ್ಯ ಮತ್ತು ಹಲವಾರು ಅಧಿಕಾರಿಗಳು ಮತ್ತು ಮಾಜಿ ಆಟಗಾರರು ಹಾಜರಿದ್ದರು, ಇದು ಅವರು ಭಾರತೀಯ ಫುಟ್ಬಾಲ್ ಮೇಲೆ ಬೀರಿದ ಆಳ ಪ್ರಭಾವಕ್ಕೆ ಸಾಕ್ಷಿಯಾಗಿದೆ.

ಒಂದು ವೇಳೆ ಭಾರತ ಕತಾರ್ ತಂಡವನ್ನು ಸೋಲಿಸಲು ವಿಫಲವಾದರೆ, ಪ್ರಸ್ತುತ ನಾಲ್ಕು ಅಂಕಗಳನ್ನು ಹೊಂದಿರುವ ಕುವೈತ್ ಜೂನ್ 11 ರಂದು ಅಫ್ಘಾನಿಸ್ತಾನವನ್ನು ಸೋಲಿಸಿದರೆ ವಿಶ್ವಕಪ್ ಅರ್ಹತಾ ಸುತ್ತಿನ ಮೂರನೇ ಸುತ್ತಿಗೆ ಪ್ರವೇಶಿಸಬಹುದು.

Continue Reading

ಬೆಂಗಳೂರು

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Trekking Tragedy: ಉತ್ತರಾಖಂಡದ ಚಾರಣ ದುರಂತದಲ್ಲಿ ಬದುಕುಳಿದ 13 ಚಾರಣಿಗರನ್ನು ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಬೆಂಗಳೂರಿಗೆ ಕರೆತೆರಲಾಗಿದೆ.

VISTARANEWS.COM


on

Trekking tragedy
Koo

ದೇವನಹಳ್ಳಿ: ಉತ್ತರಾಖಂಡದ ಚಾರಣ ದುರಂತದಲ್ಲಿ (Trekking Tragedy) ಬದುಕುಳಿದ 13 ಕನ್ನಡಿಗ ಚಾರಣಿಗರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಡೆಹ್ರಾಡೂನ್‌ನಿಂದ ಸಚಿವ ಕೃಷ್ಣ ಭೈರೇಗೌಡ ಜೊತೆಗೆ ಚಾರಣಿಗರು ನಗರಕ್ಕೆ ಬಂದಿಳಿದರು.

ಉತ್ತರಾಖಂಡ ಉತ್ತರಕಾಶಿ ಬಳಿಯ ಸಹಸ್ತ್ರ ತಾಲ್‌ಗೆ ಚಾರಣಕ್ಕೆ (uttarakhand trekking tragedy) ರಾಜ್ಯದ 18 ಮಂದಿ ಸೇರಿ 22 ಮಂದಿ ತೆರಳಿದ್ದರು. ಈ ವೇಳೆ ಪ್ರತಿಕೂಲ ಹವಾಮಾನದಿಂದ 9 ಮಂದಿ ಮೃತಪಟ್ಟಿದ್ದರು. ಉಳಿದ 13 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರೆಲ್ಲಾ ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಡೆಹ್ರಾಡೂನ್‌ನಿಂದ 6E6136 ಇಂಡಿಗೋ ವಿಮಾನದ ಮೂಲಕ ಕೆಂಪೇಗೌಡ ಏರ್‌ಪೋರ್ಟ್‌ಗೆ 13 ಮಂದಿ ಕನ್ನಡಿಗರು ಆಗಮಿಸಿದ್ದಾರೆ. ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ವಿವಿಧೆಡೆ ಸಿಲುಕಿದ್ದ 13 ಮಂದಿ ಕನ್ನಡಿಗರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ 13 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗಿದೆ.

ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ತ್ರತಾಲ್‌ ಶಿಖರ (Sahstra Tal Summit) ಏರಲು ಹೋಗಿದ್ದ ಬೆಂಗಳೂರಿನ 22 ಮಂದಿಯ ಚಾರಣಿಗರ (Trekkers) ತಂಡದಲ್ಲಿ 13 ಮಂದಿ ಮಾತ್ರ ಪಾರಾಗಿದ್ದಾರೆ. 9 ಮಂದಿ ಮೃತಪಟ್ಟಿದ್ದಾರೆ. ವಿಪರೀತ ಹಿಮಗಾಳಿ (blizzard), ಪ್ರತಿಕೂಲ ಹವಾಮಾನದಿಂದಾಗಿ ಈ ದುರ್ಘಟನೆ (Trekking Tragedy) ಸಂಭವಿಸಿದೆ. ಚಾರಣಿಗರಲ್ಲಿ ಬದುಕುಳಿದವರು ಅಲ್ಲಿ ಏನು ನಡೆಯಿತು ಎಂಬ ಚಿತ್ರಣವನ್ನು ಕೊಟ್ಟಿದ್ದಾರೆ.

ಕರ್ನಾಟಕ ಮೌಂಟನೀರಿಂಗ್ ಇನ್ಸ್ಟಿಟ್ಯೂಟ್ ಮುಖಾಂತರ ಉತ್ತರಾಖಂಡದ ಸಹಸ್ತ್ರತಾಲ್‌ಗೆ ಮೇ 29ರಂದು ಕರ್ನಾಟಕದ 22 ಜನರ ಗುಂಪು ಚಾರಣಕ್ಕೆ ತೆರಳಿತ್ತು. 21 ಚಾರಣಿಗರು ಮತ್ತು ಒಬ್ಬರು ಗೈಡ್ ಅನ್ನೊಳಗೊಂಡ ಟೀಂ ಇದಾಗಿತ್ತು. ಅಲ್ಲಿನ ಕುಫ್ರಿ ಟಾಪ್‌ ಎಂಬ ಶಿಖರಕ್ಕೆ ಹತ್ತಿ ಮರಳುತ್ತಿದ್ದಾಗ ಹವಾಮಾನ ಕೆಟ್ಟು ವಿಪರೀತ ಹಿಮಗಾಳಿ ಬೀಸಲಾರಂಭಿಸಿದೆ. ಇಳಿಯುವ ದಾರಿ ಮುಚ್ಚಿಹೋಗಿದ್ದು, ಹಿಂದಿರುಗಲು ಗೊತ್ತಾಗಿಲ್ಲ. ಎಲ್ಲರೂ ಅಲ್ಲೇ ಬಂಡೆಗಳನ್ನು ಆಶ್ರಯಿಸಿ ಪಾರಾಗಲು ಯತ್ನಿಸಿದ್ದಾರೆ. ಆದರೆ 9 ಜನ ಮೃತಪಟ್ಟಿದ್ದಾರೆ. ನಿನ್ನೆ 5 ಜನರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಗ್ಗೆ 4 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಇಂದು ಸಂಜೆ ಬೆಂಗಳೂರಿಗೆ ಮೃತದೇಹಗಳನ್ನು ತರುವ ಸಾಧ್ಯತೆ ಇದೆ. ವಿಶೇಷ ವಿಮಾನದಲ್ಲಿ ಮೃತ ದೇಹಗಳು ರವಾನೆಯಾಗಲಿವೆ. ಸಚಿವ ಕೃಷ್ಣಬೈರೇಗೌಡ ಡೆಹ್ರಾಡೂನ್‌ಗೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಪಡೆಯುತ್ತಿದ್ದಾರೆ.

ಬದುಕುಳಿದ ಚಾರಣಿಗ, 52 ವರ್ಷದ ಮಧು ಕಿರಣ್ ರೆಡ್ಡಿ ಎಂಬವರು ಘಟನೆಯನ್ನು ವಿವರಿಸಿದ್ದಾರೆ: “ನಮ್ಮಲ್ಲಿ ಹೆಚ್ಚಿನವರು ಅನುಭವಿ ಚಾರಣಿಗರು. 25ರಿಂದ 30 ಚಾರಣ ಮಾಡಿದ್ದೇನೆ. ಜೂನ್ 3ರ ಮಧ್ಯಾಹ್ನ ಸಹಸ್ತ್ರ ತಾಲ್ ಶಿಖರದಲ್ಲಿ ಸಂತೋಷದಿಂದ ಸಮಯ ಕಳೆದ ನಂತರ ನಮ್ಮ ಗುಂಪು ಬೇಸ್ ಕ್ಯಾಂಪ್‌ಗೆ ಹಿಂತಿರುಗುತ್ತಿತ್ತು. ಇಬ್ಬರು ಸದಸ್ಯರು ಮುಖ್ಯ ಗುಂಪಿನ ಮುಂದೆ ಇದ್ದರು. ಅವರಿಗೆ ಏನೂ ಆಗಲಿಲ್ಲ. ಮಧ್ಯಾಹ್ನ 3.30ರ ಸುಮಾರಿಗೆ ಹಿಮ ಬಿರುಗಾಳಿ ಬೀಸಲಾರಂಭಿಸಿತು. ಗೋಚರತೆ ತಪ್ಪಿಹೋಯಿತು. ಅಲ್ಲಿಯವರೆಗೆ ಚಾರಣಕ್ಕೆ ಏನೂ ಕಷ್ಟವಾಗಿರಲಿಲ್ಲ. ಹಿಮಗಾಳಿ ನಾಲ್ಕು ಗಂಟೆಗಳ ಕಾಲ ಬೀಸಿತು. ನಮಗಿಂತ ಒಂದು ಅಡಿ ಮುಂದಿರುವುದೂ ಕಾಣುತ್ತಿರಲಿಲ್ಲ.”

“ಹಿಂತಿರುಗುವ ದಾರಿ ಕಾಣುವವರೆಗೆ ಅಲ್ಲಿಯೇ ಇರಲು ನಿರ್ಧರಿಸಿದೆವು. ನಾವೆಲ್ಲ ದೊಡ್ಡ ಬಂಡೆಯ ಕೆಳಗೆ ಆಶ್ರಯ ಪಡೆದೆವು. ಆ ರಾತ್ರಿಯಲ್ಲಿ ಚಳಿಯಿಂದಾಗಿ ನಮ್ಮ ಮುಂದೆಯೇ ಇಬ್ಬರು ಸತ್ತರು. ಬೆಳಗಿನ ವೇಳೆಗೆ ಇತರ ಇಬ್ಬರು ಸಾವನ್ನಪ್ಪಿದರು. ಮರುದಿನ ಇನ್ನೂ ಐದು ಮಂದಿ ಸಾವನ್ನಪ್ಪಿದರು. ಅಂತಿಮವಾಗಿ ನಮ್ಮ ದಾರಿ ಕಾಣಲಾರಂಭಿಸಿದಾಗ ಹಿಂದಿರುಗಿದೆವು. ನಮ್ಮ ಮೂಲ ಶಿಬಿರದಿಂದ ಕೇವಲ ಒಂದು ಗಂಟೆ ದೂರದಲ್ಲಿದ್ದೆವು ಎಂಬುದು ನಂತರ ಗೊತ್ತಾಯಿತು” ಎಂದು ಅವರು ಹೇಳಿದ್ದಾರೆ.

ಎಲ್ಲಾ ಒಂಬತ್ತು ಮಂದಿ ಹೈಪೋಥರ್ಮಿಯಾದಿಂದ ಸಾವನ್ನಪ್ಪಿದ್ದಾರೆ. ಗುಂಪಿನ ಎಲ್ಲಾ ಸದಸ್ಯರ ಬಳಿಯೂ ಸಾಕಷ್ಟು ಥರ್ಮಲ್‌ಗಳು, ರಕ್‌ಸಾಕ್‌ಗಳು ಮತ್ತು ಪೊಂಚೋಗಳನ್ನು ಒಳಗೊಂಡಂತೆ ಅಗತ್ಯ ಸಿದ್ಧತೆಗಳಿದ್ದರೂ ಹೀಗಾಗಿದೆ.

ಬದುಕುಳಿದ ಚಾರಣಿಗರ ತಂಡದೊಂದಿಗೆ ಡೆಹ್ರಾಡೂನ್‌ನಲ್ಲಿ ಸಚಿವ ಕೃಷ್ಣಬೈರೇಗೌಡ ಮುಖಾಮುಖಿಯಾಗಿದ್ದು, ಅಲ್ಲಿ ನಡೆದದ್ದೇನು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

“ಜೂನ್ 3ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.

ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಿಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.

ಜೂನ್ 4ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.

ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.”

ಮೃತಪಟ್ಟವರು:

1) ಸುಜಾತ, ಬೆಂಗಳೂರು -52 ವರ್ಷ
2) ಸಿಂಧು , ಪ್ರಾಯ-47 ವರ್ಷ
3) ಚಿತ್ರಾ, ಪ್ರಾಯ-48 ವರ್ಷ
4) ಪದ್ಮಿನಿ ವಯಸ್ಸು 45 ವರ್ಷ
5) ವೆಂಕಟೇಶ್‌ ಪ್ರಸಾದ್‌ 52 ವರ್ಷ
6) ಅನಿತಾ, ಪ್ರಾಯ 61 ವರ್ಷ
7) ಆಶಾ ಸುಧಾಕರ, ಪ್ರಾಯ 72 ವರ್ಷ
8) ಪದ್ಮನಾಭನ್ ಕೆಪಿಎಸ್‌, ವಯಸ್ಸು 50 ವರ್ಷ
9) ವಿನಾಯಕ್

ರಕ್ಷಣೆಗೊಳಗಾದವರು:

1) ಸೌಮ್ಯಾ, 36 ವರ್ಷ
2) ವಿನಯ್, 49 ವರ್ಷ
3) ಶಿವಜ್ಯೋತಿ- 46 ವರ್ಷ
4) ಸುಧಾಕರ್‌, 64 ವರ್ಷ
5) ಸ್ಮೃತಿ, 41 ವರ್ಷ
6) ಸೀನಾ, 48 ವರ್ಷ
7) ಮಧುರೆಡ್ಡಿ- 52 ವರ್ಷ
8) ಜಯಪ್ರಕಾಶ್- 61 ವರ್ಷ
9) ಭರತ್- 53 ವರ್ಷ
10) ಅನಿಲ್ ಭಟ್- 52 ವರ್ಷ
11)‌ ವಿವೇಕ್ ಶ್ರೀಧರ್
12) ರಿತಿಕಾ ಜಿಂದಾಲ್
13) ನವೀನ್ ಎ.

ಇದನ್ನೂ ಓದಿ: Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

Continue Reading

ಪ್ರಮುಖ ಸುದ್ದಿ

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Unemployment Rate : ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ

VISTARANEWS.COM


on

Unemployment Rate
Koo

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತವು ಉದ್ಯೋಗದ ಪ್ರಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ವರದಿಯೊಂದು ಹೇಳಿದೆ ಭಾರತದ ನಿರುದ್ಯೋಗ ದರವು 2023ರಲ್ಲಿ ಶೇಕಡಾ 3.1 ಕ್ಕೆ ಇಳಿಕೆಯಾಗಿದ್ದು. ಇದು 2022 ರಲ್ಲಿ ಶೇಕಡಾ 7 ರಷ್ಟಿತ್ತು ಎಂದು ಕ್ಯಾಪ್​ಜೆಮಿನಿ ರೀಸರ್ಚ್​ ಸೆಂಟರ್​ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿಡಿಪಿಯಲ್ಲಿನ ಒಟ್ಟು ಶೇಕಡಾವಾರು ರಾಷ್ಟ್ರೀಯ ಉಳಿತಾಯವು 2022 ರಲ್ಲಿ ಶೇಕಡಾ 29.9 ಕ್ಕೆ ಹೋಲಿಸಿದರೆ 2023 ರಲ್ಲಿ ಶೇಕಡಾ 33.4 ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ವಿಚಾರದಲ್ಲಿ ಜಾಗತಿಕವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಅತ್ಯುತ್ತಮವಾಗಿದೆ. ಇಲ್ಲಿ ಎಚ್ಎನ್​ಡಬ್ಲ್ಯುಐ ಸಂಪತ್ತಿನ ಬೆಳವಣಿಗೆಯನ್ನು ಕ್ರಮವಾಗಿ ಶೇಕಡಾ 12.4 ಮತ್ತು ಶೇಕಡಾ 7.9 ಮತ್ತು ಎಚ್​ಎನ್​ಡಬ್ಲ್ಯು ಜನಸಂಖ್ಯೆಯ ಬೆಳವಣಿಗೆ ಕ್ರಮವಾಗಿ ಶೇಕಡಾ 12.2 ಮತ್ತು ಶೇಕಡಾ 7.8 ರಷ್ಟು ದಾಖಲಾಗಿದೆ.

ಈ ಎರಡೂ ದೇಶಗಳಲ್ಲಿನ ಸಂಪತ್ತಿನ ಬೆಳವಣಿಗೆಯು ಸ್ಥಿರ ಆರ್ಥಿಕತೆ ಮತ್ತು ಈಕ್ವಿಟಿ ಮಾರುಕಟ್ಟೆಗಳ ದೃಢವಾದ ಕಾರ್ಯಕ್ಷಮತೆ ಆಗಿದೆ ಎಂದು ವರದಿ ತೋರಿಸಿವೆ. ಕಳೆದ ಆರು ತ್ರೈಮಾಸಿಕಗಳಲ್ಲಿ ಭಾರತದ ಆರ್ಥಿಕತೆಯು ತನ್ನ ತ್ವರಿತ ಗತಿಯಲ್ಲ ಬೆಳೆದಿದೆ. ಇದು ದೃಢವಾದ ಖಾಸಗಿ ಬಳಕೆ ಮತ್ತು ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಗಳಿಂದ ಆಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

2022 ರಲ್ಲಿ ಶೇಕಡಾ 6 ರಷ್ಟು ಹೆಚ್ಚಳದ ನಂತರ ದೇಶದ ಮಾರುಕಟ್ಟೆ ಬಂಡವಾಳೀಕರಣವು ಕಳೆದ ವರ್ಷ ಶೇಕಡಾ 29 ರಷ್ಟು ಹೆಚ್ಚಾಗಿದೆ. ಸುಧಾರಿತ ಬಂಡವಾಳ ವೆಚ್ಚ, ಬಲವಾದ ಬ್ಯಾಂಕಿಂಗ್ ವ್ಯವಸ್ಥೆ, ಸಾಲದ ಬೆಳವಣಿಗೆ, ವಾಹನಗಳು ಮತ್ತು ವಿದ್ಯುತ್​ಗೆ ಹೆಚ್ಚಿದ ಬೇಡಿಕೆ ಮತ್ತು ಡಿಜಿಟಲೀಕರಣ-ಚಾಲಿತ ಉತ್ಪಾದನೆಗಳ ಹೆಚ್ಚಳದಂತಹ ಅಂಶಗಳು ಈ ಪ್ರವೃತ್ತಿಯನ್ನು ಹೆಚ್ಚಿಸಿದೆ ಎಂದು ವರದಿಯು ತಿಳಿಸಿದೆ.

ವಿದೇಶಿ ಬಂಡವಾಳ ಹೂಡಿಕೆ (ಎಫ್ಪಿಐ) ಹರಿವು 2023-24ರಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಒಟ್ಟು ಎಫ್ಪಿಐ ಒಳಹರಿವು 24.9 ಬಿಲಿಯನ್ ಡಾಲರ್ (ಡಿಸೆಂಬರ್ 6 ರವರೆಗೆ) ಹಿಂದಿನ ಎರಡು ವರ್ಷಗಳ ನಿವ್ವಳ ಹೊರಹರಿವಿಗೆ ಹೋಲಿಸಿದರೆ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

Continue Reading
Advertisement
Stock Market Crash
ಪ್ರಮುಖ ಸುದ್ದಿ1 hour ago

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

sunil chhetri
ಪ್ರಮುಖ ಸುದ್ದಿ2 hours ago

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Shri Bhandara Keri Mutt Shri Vidyesh Theertha Swamiji ashirvachan
ಕರ್ನಾಟಕ2 hours ago

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Gadag News
ಕರ್ನಾಟಕ3 hours ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ3 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ4 hours ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ4 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು4 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ4 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ4 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌