Karnataka Budget 2024 : ನಾವು ಮನುಜರು : ಶಾಲೆಗಳಲ್ಲಿ ಇನ್ನು ವಾರಕ್ಕೆ 2 ಗಂಟೆ ಸಾಮರಸ್ಯ ಪಾಠ - Vistara News

ಕರ್ನಾಟಕ ಬಜೆಟ್ 2024

Karnataka Budget 2024 : ನಾವು ಮನುಜರು : ಶಾಲೆಗಳಲ್ಲಿ ಇನ್ನು ವಾರಕ್ಕೆ 2 ಗಂಟೆ ಸಾಮರಸ್ಯ ಪಾಠ

Karnataka Education 2024 : ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು ಮನುಜರು ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದರು.

VISTARANEWS.COM


on

Karnataka Budget 2024 communal harmony1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೈಚಾರಿಕ ಶಿಕ್ಷಣವನ್ನು ಪ್ರತಿಪಾದನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ ಎರಡು ಗಂಟೆ ವೈಚಾರಿಕ ಮತ್ತು ಸಾಮರಸ್ಯ ಪಾಠ (Scientific and harmonious) ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2024) ಮಂಡಿಸಿದ ಅವರು, ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ʻನಾವು ಮನುಜರುʼ (Navu Manujaru) ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊ೦ಡ ತರಗತಿಗಳನ್ನು ನಡೆಸಲಾಗುವುದು ಎಂದು ಪ್ರಕಟಿಸಿದರು.

ಶಾಲೆಯ ಮಕ್ಕಳಿಗೆ ನಮ್ಮ ರಾಷ್ಟಧರ್ಮ ಯಾವುದು ಎಂದು ಕೇಳಿದರೆ, ಭಾವೈಕ್ಯತೆಯೇ, ಸಾಮರಸ್ಯವೇ, ಪ್ರಜಾಪ್ರಭುತ್ವವೇ ನಮ್ಮ ರಾಷ್ಟಧರ್ಮ ಎಂದು ಹೇಳಿ. ಸಂವಿಧಾನವೇ ರಾಷ್ಟ್ರೀಯ ಗ್ರಂಥ ಎಂದು ನಮ್ಮ ಮಕ್ಕಳಿಗೆ ಹೇಳಿಕೊಡಿ ಎಂಬ ಪದ್ಮಶ್ರೀ ಪುರಸ್ಕೃತ ಸಂತ ಇಬ್ರಾಹಿಂ ಸುತಾರ ಅವರ ಮಾತುಗಳನ್ನು ಅವರು ಉಲ್ಲೇಖಿಸಿದರು.

ಪ್ರಾಥಮಿಕ ಶಿಕ್ಷಣಕ್ಕೆ ಇನ್ನೇನು ಕೊಡುಗೆ?

  1. ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
  2. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ.
  3. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.
  4. ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್‌.ಆರ್‌. ಅನುದಾನದಡಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
  5. 3ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು 1-81, ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು

ಇದನ್ನೂ ಓದಿ : Karnataka Budget 2024 : ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಉತ್ಪನ್ನಗಳ ಮಾರಾಟಕ್ಕೆ ಕಿಸಾನ್‌ ಮಾಲ್‌

  1. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮರು ಸಿಂಚನ
  2. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
  3. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್‌ ಲ್ಯಾಬ್‌, ಇಂಟರ್‌ನೆಟ್‌ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್‌ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
  4. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್‌) ಶಾಲೆಗಳಾಗಿ ಪರಿವರ್ತಿಸಲಾಗುವುದು.
  5. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
  6. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 10 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
  7. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
  8. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000. ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್‌ ಮತ್ತು ನೀರಿನ ಸೌಲಭ್ಯ

  1. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟ ರೂ. ವೆಚ್ಚವಾಗಲಿದೆ.
  2. ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ೩ ವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಸಾಲ ಮಾಡಿ ತುಪ್ಪ ತಂದ ಸಿದ್ದರಾಮಯ್ಯ: ಗ್ಯಾರಂಟಿಗೆ ಮೋಸವಿಲ್ಲ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸರ್ವಸ್ಪರ್ಶಿ. ಆದರೆ, ಅದು ಯಾವುದನ್ನೂ ತಟ್ಟಿದಂತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ಇಟ್ಟಿರುವ ಸಿದ್ದರಾಮಯ್ಯ ತಮ್ಮ ಬಜೆಟ್‌ ಗಾಗಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಸಾಲದ ಮೂಲಕ ಹೊಂದಾಣಿಕೆ ಮಾಡಬೇಕಾಗಿದೆ.

VISTARANEWS.COM


on

Karnataka Budget 2024 Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲ ಮಾಡಿ ತುಪ್ಪ ತಂದಿದ್ದಾರೆ. ರಾಜ್ಯದ ಜನತೆಗೆ ಅದನ್ನು ಹಿತವಾಗಿ ಹಂಚಿದ್ದಾರೆ. ಹೊಸತೇನೂ ಇಲ್ಲವಾದರೂ ಹೊತ್ತಿನ ಊಟಕ್ಕೆ ಸಾಕಾಗುವಂತೆ ಬಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭಾರಿ ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ: ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ (Karnataka Budget 2024) ಸಿಂಪಲ್‌ ವಿಮರ್ಶೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. 2023ರ ಜುಲೈ 7ರಂದು ಮಂಡಿಸಿದ ಬಜೆಟ್‌ ಕೇವಲ ಎಂಟು ತಿಂಗಳಿಗೆ ಸೀಮಿತವಾಗಿತ್ತು. ಶುಕ್ರವಾರ ವಿಧಾನಸಭೆಯಲ್ಲಿ ಅವರು ಸುಮಾರು ಮೂರು ಗಂಟೆ 14 ನಿಮಿಷಗಳ ಸುದೀರ್ಘ ಕಾಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಎಲ್ಲ ಪ್ರಮುಖ ಕ್ಷೇತ್ರಗಳಿಗೆ ಬಿಡಿ ಬಿಡಿಯಾಗಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರವು (Budget layout) 3,71,383 ಕೋಟಿ ರೂ. ಅಂದರೆ 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ (Loan Responsibility). ಹಾಗಂತ ಇದು ವಿತ್ತೀಯ ಶಿಸ್ತಿನ ಒಳಗೇ ಇರುವ ಪ್ರಮಾಣವಾಗಿರುವುದರಿಂದ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ. ಆದರೆ, ಈ ಬಜೆಟ್‌ನ ಅಂತ್ಯದಲ್ಲಿ ರಾಜ್ಯಕ್ಕೆ ಒಟ್ಟು 6.65 ಲಕ್ಷ ಕೋಟಿ ರೂ. ಸಾಲದ ಹೊರೆ ಎದುರಾಗಿದೆ. ಅಂದರೆ ಪ್ರತಿಯೊಬ್ಬ ನಾಗರಿಕನ ತಲೆಯ ಮೇಲೆ ತಲಾ ಒಂದು ಲಕ್ಷ ರೂ ಸಾಲದ ಹೊರೆ ಇದೆ.

ಏನಿಲ್ಲ ಏನಿಲ್ಲ ಎಂದ ಬಿಜೆಪಿ ಬಹಿಷ್ಕಾರ ನಡುವೆಯೇ ಬಜೆಟ್‌ ಮಂಡನೆ

ಈ ಬಾರಿಯ ಬಜೆಟ್‌ ಮಂಡನೆಗೆ ಪ್ರತಿಪಕ್ಷವಾದ ಬಿಜೆಪಿ ಶಾಸಕರು ʻಏನಿಲ್ಲ ಏನಿಲ್ಲʼ ಎಂಬ ಜನಪ್ರಿಯ ಹಾಡನ್ನು ಬಳಸಿಕೊಂಡು ಪ್ಲೇಕಾರ್ಡ್‌ಗಳನ್ನು ಹಿಡಿದುಕೊಂಡು ಬಂದಿದ್ದರು. ಬಜೆಟ್‌ ಮಂಡನೆಯ ಮೇಲೆ ಇವುಗಳನ್ನು ಪ್ರದರ್ಶಿಸಿ ಕಾಂಗ್ರೆಸ್‌ ಸರ್ಕಾರದ ಬಜೆಟ್‌ನಲ್ಲಿ ಏನೇನೂ ಇಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಸುದೀರ್ಘ ಬಜೆಟ್‌ ಮಂಡಿಸಿದರು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಎಲ್ಲ ವಿತ್ತೀಯ ಮೂಲಗಳಿಂದು ಬರುವ ಒಟ್ಟು ಆದಾಯವು 2.66 ಲಕ್ಷ ಕೋಟಿ ಆಗುವುದರಿಂದ ಉಳಿದ ಮೊತ್ತವನ್ನು ಸಾಲವಾಗಿ ತರಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಅನುದಾನ

ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ.

Karnataka Budget Session 2024 Rs 52009 crore earmarked for 5 guarantee scheme

ಯಾವ ಗ್ಯಾರಂಟಿಗೆ ಎಷ್ಟು?

  1. ಗೃಹ ಜ್ಯೋತಿ: 9,657 ಕೋಟಿ ರೂ.
    ಅನ್ನ ಭಾಗ್ಯ: 8,079 ಕೋಟಿ ರೂ.
    ಶಕ್ತಿ: 5,015 ಕೋಟಿ ರೂ.
    ಯುವನಿಧಿ: 650 ಕೋಟಿ ರೂ.
    ಗೃಹ ಲಕ್ಷ್ಮಿ :28,608 ಕೋಟಿ ರೂ.
    ಒಟ್ಟು: 52,009 ಕೋಟಿ ರೂ.

ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಹೇಗಿದೆ?

Karnataka Budget 2024 Yavudakke Estu

ಶಿಕ್ಷಣ- 44422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂ.
ಇಂಧನ- 23159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂ.
ಒಳಾಡಳಿತ ಸಾರಿಗೆ- 19777 ಕೋಟಿ ರೂ.
ನೀರಾವರಿ- 19179 ಕೋಟಿ ರೂ.
ನಗರಾಭಿವೃದ್ಧಿ – 18155 ಕೋಟಿ ರೂ.
ಕಂದಾಯ- 16170 ಕೋಟಿ ರೂ.
ಆರೋಗ್ಯ – 15145 ಕೋಟಿ ರೂ.
ಸಮಾಜ ಕಲ್ಯಾಣ- 13334 ಕೋಟಿ ರೂ.
ಲೋಕೋಪಯೋಗಿ- 10424 ಕೋಟಿ ರೂ.
ಆಹಾರ ಮತ್ತು ನಾಗರಿಕ ಪೂರೈಕೆ- 9963 ಕೋಟಿ ರೂ.
ಕೃಷಿ ತೋಟಗಾರಿಕೆ- 6688 ಕೋಟಿ ರೂ.
ಪಶುಸಂಗೋಪನೆ- 3307 ಕೋಟಿ ರೂ.
ಇತರೆ- 124593 ಕೋಟಿ ರೂಪಾಯಿ

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಕಟಿಸಿದ ಪ್ರಮುಖ ಕೊಡುಗೆಗಳ ಪಟ್ಟಿ ಇಲ್ಲಿದೆ

  1. ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ. ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
  • ಯಾವುದೇ ಆದಾಯವಿಲ್ಲದ 34,165 “ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ Vision Group ರಚನೆ.
  • 29,523 “ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್‌ ಖಾತೆಗೆ ತಸ್ತಿಕ್‌ ಮೊತ್ತ ಜಮೆ ಮಾಡಲು ಕ್ರಮ.
  • ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ IML ಹಾಗೂ ಬಿಯರ್‌ ಸ್ಲಾಬ್‌ಗಳ ಪರಿಷ್ಕರಣೆ.
  • ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!
Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

Karanataka Budget 2024: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್‌ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.

VISTARANEWS.COM


on

Karnataka Budget 2024 Walkout
2021ರಲ್ಲಿ ಸಿದ್ದರಾ‌ಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್‌ ಬಹಿಷ್ಕಾರದ ಚಿತ್ರ.
Koo

ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.

Karnataka Budget 2024 BJP Walkout
ಬಜೆಟ್‌ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.

ಬಿಎಸ್‌ವೈ ಬಜೆಟ್‌ನಿಂದ ವಾಕೌಟ್‌ ಮಾಡಿದ್ದ ಸಿದ್ದರಾಮಯ್ಯ

ʻʻಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಸನ್ಮಾನ್ಯ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆʼʼ ಎಂದು ಆರ್‌. ಆಶೋಕ್‌ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ : Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು‌ ಆಕ್ಷೇಪಿಸಿದ್ದರು.

Continue Reading
Advertisement
prajwal revanna case 4th
ಕ್ರೈಂ11 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್18 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

IND vs ENG
ಕ್ರಿಕೆಟ್20 mins ago

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

VHP leader murder
ದೇಶ23 mins ago

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್40 mins ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Mass Shooting
ವಿದೇಶ59 mins ago

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Inzamam Ul Haq
ಕ್ರೀಡೆ1 hour ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ1 hour ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್2 hours ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 1
ಕ್ರೈಂ2 hours ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌