Vishnu Naik: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿಷ್ಣು ನಾಯ್ಕ ನಿಧನ - Vistara News

ಶ್ರದ್ಧಾಂಜಲಿ

Vishnu Naik: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿಷ್ಣು ನಾಯ್ಕ ನಿಧನ

Vishnu Naik: ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಷ್ಣು ನಾಯ್ಕ ಅವರು, ತಮ್ಮ 50 ವರ್ಷಗಳ ಸಾಹಿತ್ಯ ಕೃಷಿಯಲ್ಲಿ 25 ಸಂಪಾದಿತ ಕೃತಿಗಳನ್ನು ಒಳಗೊಂಡು 66 ಕೃತಿಗಳನ್ನು ರಚಿಸಿದ್ದಾರೆ.

VISTARANEWS.COM


on

Rajyotsava awardee Vishnu Naik passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕೋಲಾ: ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಂಕೋಲಾ ತಾಲೂಕಿನ ಅಂಬಾರಕೊಡ್ಲದ ವಿಷ್ಣು ನಾಯ್ಕ (80) (Vishnu Naik) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಸೊಗಡಿನೊಂದಿಗಿದ್ದ ಇವರ ಬರವಣಿಗೆ ಎಂಥವರನ್ನೂ ಆಕರ್ಷಿಸುತ್ತಿತ್ತು. ಸರಿಸುಮಾರು 50 ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಸಾಹಿತ್ಯ ಲೋಕದ ಚೇತನ ಇನ್ನಿಲ್ಲವಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವಿಷ್ಣು ನಾಯ್ಕ ಅವರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ವಿಷ್ಣು ನಾಯ್ಕ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

1944ರಲ್ಲಿ ತಾಲೂಕಿನ ಅಂಬಾರಕೊಡ್ಲದಲ್ಲಿ ಜನಿಸಿದ್ದ ವಿಷ್ಣು ನಾಯ್ಕ ಅವರು ಅಂಬಾರಕೊಡ್ಲ ಹಾಗೂ ಅಂಕೋಲಾದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಷ್ಣು ನಾಯ್ಕ ಅವರು, ತಮ್ಮ 50 ವರ್ಷಗಳ ಸಾಹಿತ್ಯ ಕೃಷಿಯಲ್ಲಿ 25 ಸಂಪಾದಿತ ಕೃತಿಗಳನ್ನು ಒಳಗೊಂಡು 66 ಕೃತಿಗಳನ್ನು ರಚಿಸಿದ್ದಾರೆ.

ಕವನ, ನಾಟಕ, ಅಂಕಣ, ವಿಮರ್ಶೆ, ಕಥಾಸಂಕಲನ ಮತ್ತು ಜೀವನ ಪರಿಚಯಗಳ ಕೃತಿಗಳನ್ನು ಬರೆದಿದ್ದಾರೆ. 2007ರಲ್ಲಿ ಭಟ್ಕಳದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ರಾಘವೇಂದ್ರ ಪ್ರಕಾಶನದ ಮಾಲೀಕರು

ರಾಘವೇಂದ್ರ ಪ್ರಕಾಶನದ ಮಾಲೀಕರು ಆಗಿದ್ದ ಇವರು, ಅನೇಕ ಪ್ರಮುಖ ಕೃತಿಗಳನ್ನು ಬರೆದಿದ್ದಾರೆ. ಸುಮನ, ಆ ರೀತಿ ಈ ರೀತಿ, ನನ್ನ ಅಂಬಾರಕೊಡಲು, ವಾಸ್ತವ, ಹೊಸಭತ್ತ ಮುಚ್ಚಿದ ಬಾಗಿಲು ಮತ್ತು ಮರಿಗುಬ್ಬಿ, ನೋವು ಪ್ರೀತಿಯ ಪ್ರಶ್ನೆ (ಕವನ ಸಂಗ್ರಹಗಳು) ಕಣ್ಣೀರ ಕತೆಗಳು (ಸಂಕಲನ) ಅಯ್ನೋರ ಪೂಜೆ; ಒಂದು ಹನಿ ಮತ್ತು ಇತರ ಬೀದಿನಾಟಕಗಳು; ಯುದ್ಧ (ನಾಟಕಗಳು) ಡಾ. ಗೌರೀಶ ಕಾಯ್ಕಿಣಿ ಸಮಗ್ರ ಸಂಪುಟಗಳು (ಸಂಪಾದನೆ) ದುಡಿಯುವ ಕೈಗಳ ಹೋರಾಟದ ಕತೆ (ಮಾನವಿಕ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರ ಈ ಪ್ರಕಾಶನದಲ್ಲಿ 183 ಗ್ರಂಥಗಳನ್ನು ಪ್ರಕಟಿಸಿದ್ದರು.

ಸಂದ ಪ್ರಶಸ್ತಿಗಳು ಹಲವು

ಕೆ.ಎಚ್. ಪಾಟೀಲರ ಸಂಪಾದಕತ್ವದಲ್ಲಿ ಹೊರ ತರುತ್ತಿದ್ದ ‘ವಿಶಾಲ ಕರ್ನಾಟಕ’ ದೈನಿಕ ಪತ್ರಿಕೆಯ ಪಾಕ್ಷಿಕ ಅಂಕಣಕಾರರಾಗಿ, ಮಂಗಳೂರಿನ ವಡ್ಡರ್ಸೆ ರಘುರಾಮ ಶೆಟ್ಟರ ಸಂಪಾದಕತ್ವದಲ್ಲಿ ತರುತ್ತಿದ್ದ ‘ಮುಂಗಾರು’ ದೈನಿಕ ಪತ್ರಿಕೆಯ ವರದಿಗಾರರಾಗಿ, ‘ಕರಾವಳಿ ಮುಂಜಾವು’, ‘ಕರಾವಳಿ ಸುಪ್ರಭಾತ’, ‘ಮುನ್ನಡೆ’, ‘ತೇಜಸ್ವಿ ಪ್ರಪಂಚ’, ಮುಂತಾದ ಪತ್ರಿಕೆಗಳ ಅಂಕಣಕಾರರಾಗಿ ಕಾರ್ಯನಿರ್ವಹಣೆ. ಇವರ ಸಾಹಿತ್ಯ ಕೊಡುಗೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಆದರ್ಶ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಗ್ರಂಥ ಪ್ರಕಾಶಕ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟರ ಕನ್ನಡ ಪರಿಚಾರಕ ಪ್ರಶಸ್ತಿ, ಬೇಂದ್ರೆ ಕಾವ್ಯ ಪ್ರಶಸ್ತಿ, ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ, ಚೌಡಯ್ಯ ಸಾಹಿತ್ಯ ಪ್ರಶಸ್ತಿಗಳು ಅವರನ್ನರಸಿವೆ. ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ, ರಾಜ್ಯದಲ್ಲಿ ನಡೆದಿದ್ದ ಹಲವಾರು ಸಾಹಿತ್ಯ ಗೋಷ್ಠಿಗಳ ಅಧ್ಯಕ್ಷತೆಯನ್ನು ವಹಿಸಿ ಮುನ್ನಡೆಸಿದ್ದರು.

ಮನೆಯ ಮಹಡಿಯಲ್ಲಿ ಸಾಹಿತ್ಯ ವಸ್ತು ಸಂಗ್ರಹಾಲಯ ಸ್ಥಾಪಿಸಿದ್ದ ಅವರು ಅಲ್ಲಿ ನಾಡಿನ ಹೆಸರಾಂತ ಸಾಹಿತಿಗಳೊಂದಿಗೆ ನಡೆಸಿದ ಪತ್ರ ವ್ಯವಹಾರ, ಉಭಯ ಕುಶಲೋಪರಿ ವಿನಿಮಯ, ಹೆಸರಾಂತ ಸಾಹಿತಿಗಳ ಕೈಬರಹ, ದಿನಕರ ದೇಸಾಯಿ ಅವರ ಸಾಹಿತ್ಯ ಕೃತಿಗಳನ್ನು ಇರಿಸಿದ್ದರು. ಅಲ್ಲದೆ, ದೇಶಿ ವಸ್ತುಗಳ ಸಂಗ್ರಹವನ್ನೂ ಇರಿಸಿದ್ದರು.

ವಿಷ್ಣು ನಾಯ್ಕ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ 11.30ಕ್ಕೆ ಅಂಬಾರಕೊಡ್ಲ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Uttara Kannada News: ಅಳಿವಿನಂಚಿನಲ್ಲಿರುವ ಹಾರ್ನ್‌ಬಿಲ್ ಪಕ್ಷಿ ಪ್ರಬೇಧವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯ; ಸ್ಮಿತಾ ಬಿಜ್ಜೂರ್

ಕಂಬನಿ ಮಿಡಿದ ಉ.ಕ. ಜಿಲ್ಲಾ ಕಸಾಪ

“ನಾಡಿನ ಹಿರಿಯ ಸಾಹಿತಿ, ಕವಿ, ಅಂಕೋಲೆಯ ವಿಷ್ಣು ನಾಯ್ಕರು ನಮ್ಮನಗಲಿದರೆಂದು ತಿಳಿಸಲು ವಿಷಾಧಿಸುವೆ. ತಮ್ಮ ಪ್ರಗತಿಪರ ಬರಹ, ಚಿಂತನಶೀಲ ಮಾತು, ಜೀವನ ಪ್ರೀತಿಯ ಕಾವ್ಯ, ಶಿಸ್ತಿನ ಸಂಘಟನೆ, ಸರಳತೆಯ ಬದುಕಿನ ಮೂಲಕ ನಾಡಿನಾದ್ಯಂತ ಚಿರ ಪರಿಚಿತರಾಗಿದ್ದ ವಿಷ್ಣು ನಾಯ್ಕರು, ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಅಗಿದ್ದ ಇವರು ಶೈಕ್ಷಣಿಕವಾಗಿ, ಸಾಹಿತ್ಯಿಕವಾಗಿ ನನ್ನ ಗುರುಗಳೂ ಕೂಡಾ ಆಗಿದ್ದರು. ಇವರ ಅಗಲಿಕೆ ವೈಯಕ್ತಿಕವಾಗಿ ನನಗಂತೂ ಸಹಿಸಿಕೊಳ್ಳಲಾಗದಂತಹ ವೇದನೆಯಾಗಿದೆ. ನಾಡಿನ ಅಕ್ಷರಲೋಕಕ್ಕೂ ತುಂಬಲಾರದ ನಷ್ಟ. ಉಸಿರು ನಿಲ್ಲಿಸಿದ ಆ ಹಿರಿಯ ಚೇತನಕ್ಕೆ ನಮನಗಳು” ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್. ವಾಸರೆ ಕಂಬನಿ ಮಿಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ಬಳ್ಳಾರಿ

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

A Devendra Gowda: ಬಳ್ಳಾರಿ ತಾಲೂಕಿನ ಎಂ‌.ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರಗೌಡ (90) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

VISTARANEWS.COM


on

A Devendra Gowda passed away in Ballari
Koo

ಬಳ್ಳಾರಿ: ಬಳ್ಳಾರಿ ತಾಲೂಕಿನ ಎಂ‌. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ (90) (A Devendra Gowda) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಮೃತರು ಪುತ್ರ ನಟರಾಜ್‌ ಗೌಡ ಸೇರಿದಂತೆ ನಾಲ್ಕು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Continue Reading

ಬಳ್ಳಾರಿ

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Dr Vinayaka Prasanna: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ(50) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Dr Vinayaka Prasanna passed away
Koo

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ (50) (Dr Vinayaka Prasanna) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ತಾಯಿ ಶಕುಂತಲ, ಪತ್ನಿ ಡಾ‌. ವನಜ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಯಿತು. ಬಳಿಕ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರೊ. ಡಾ.ವಿನಾಯಕ ಪ್ರಸನ್ನ ಅವರ ನಿಧನಕ್ಕೆ ವಿಮ್ಸ್ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Continue Reading

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading
Advertisement
ICMR Dietary Guidelines
ಆರೋಗ್ಯ12 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು15 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ47 mins ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ59 mins ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ1 hour ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

prajwal revanna case women
ಪ್ರಮುಖ ಸುದ್ದಿ1 hour ago

Prajwal Revanna Case: “ಟ್ರಾನ್ಸ್‌ಫರ್‌ಗಾಗಿ ಪೀಡಿಸಿ ತಿಂದ…” ಪ್ರಜ್ವಲ್‌ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಯಿಂದಲೂ ದೂರು!

Dog Bite in Belgavi
ಬೆಳಗಾವಿ2 hours ago

Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

Indian Sailors Released
ವಿದೇಶ2 hours ago

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Sanjiv Goenka
ಪ್ರಮುಖ ಸುದ್ದಿ2 hours ago

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ17 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ23 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ24 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌