Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು - Vistara News

ರಾಜಕೀಯ

Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು

Karnataka Budget Session 2024: ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದಾದರೆ ಬಹಿರಂಗ ಚರ್ಚೆ ಮಾಡೋಣ. ಅಲ್ಲಿಗೆ ಆರ್ಥಿಕ ತಜ್ಞರು, ಮಾಧ್ಯಮಗಳು, ಸಾರ್ವಜನಿಕರು ಬರಲಿ. ಎಲ್ಲರ ಮುಂದೆ ಮುಂದೆ ಚರ್ಚೆ ನಡೆಸೋಣ. ಅನ್ಯಾಯ ಎಂದಾದರೆ ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಅವರು ಮಾತನಾಡುತ್ತಿದ್ದಾಗ ನಿಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾಕೆ ಸುಮ್ಮನಿದ್ದರು? ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

VISTARANEWS.COM


on

Karnataka Budget Session 2024 HD Kumaraswamy challenges CM to discussion on Centre grant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ನೇರ ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕರೆಸಿ ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂಪಾಯಿಯಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್‌ಡಿಆರ್‌ಎಫ್‌ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ, ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ. ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ!! ಎನ್ನುವಂತೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ

ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ.‌ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೇಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ಖರ್ಗೆ ಯಾಕೆ ಸುಮ್ಮನೆ ಇದ್ದರು?

ರಾಜ್ಯಕ್ಕೆ ಅನ್ಯಾಯವಾದರೆ ನಾವು ಸುಮ್ಮನೆ ಇರುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆಯಲ್ಲಿ ಮೇಕೆದಾಟು ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಾತನಾಡಿದಾಗ ರಾಜ್ಯವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸದಸ್ಯರು ಯಾಕೆ ಬೆಂಬಲ ಕೊಡಲಿಲ್ಲ? ಅವರು ದನಿ ಎತ್ತಿದರೆ ನಿಮ್ಮ ಪಕ್ಷದ ಒಬ್ಬರೂ ಮಾತನಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದ್ದರಲ್ಲ, ಭಾವಿ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದೀರಿ. ಅವರೇಕೆ ಮಾತನಾಡಲಿಲ್ಲ? ಇಲ್ಲಿ ಅನ್ಯಾಯ ಆಗಿದ್ದರೆ ಅವರು ಬಾಯಿ ತೆಗೆಯಬೇಕಿತ್ತಲ್ಲ? ಅವರು ಯಾಕೆ ಮೌನವಾಗಿ ಇದ್ದರು? ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Ramanagara Lawyers: ರಾಮನಗರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ; ರಾಜಕೀಯ ಬಿಟ್ಟರೆ ವಕೀಲರ ಜತೆ ಚರ್ಚೆ: ಡಿಕೆಶಿ

ಮಾಜಿ ಸಚಿವ ಸಿಸಿ ಪಾಟೀಲ್, ಶಾಸಕರಾದ ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್ ಅವರು ಈ ಸಂದರ್ಭದಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

MLC Election: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

VISTARANEWS.COM


on

MLC Election
Koo

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Continue Reading

ದೇಶ

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Arvind Kejriwal: ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಅರೆಸ್ಟ್‌ ಆಗಿ, ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮರ ಸಾರಿದ್ದಾರೆ. ತಮ್ಮ ಪಕ್ಷದ ನಾಯಕರನ್ನು ಒಬ್ಬರಾದ ಮೇಲೊಬ್ಬರಂತೆ ಜೈಲಿಗೆ ತಳ್ಳಿ ಆಪ್‌ ಪಕ್ಷದ ಧ್ವನಿ ಅಡಗಿಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ಇಂದು ದೆಹಲಿಯ ಬಿಜೆಪಿ ಕಚೇರಿ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ. ಒಬ್ಬರ ನಂತರ ಒಬ್ಬರನ್ನು ನೀವು ಜೈಲಿಗೆ ತಳ್ಳುತ್ತಿದ್ದೀರಿ. ಮಾನ್ಯ ಪ್ರಧಾನಮಂತ್ರಿಗಳೇ, ನೀವು ಆಪ್‌ ನಾಯಕರನ್ನು ಅರೆಸ್ಟ್‌ ಮಾಡಿಸುವ ಆಟ ಆಡುತ್ತಿದ್ದೀರಿ. ನಾಳೆ ಮಧ್ಯಾಹ್ನ ನಾನು ಪಕ್ಷದ ಎಲ್ಲಾ ಮುಖಂಡರು, ಶಾಸಕರು, ಸಂಸದರ ಜೊತೆಗೆ ಬಿಜೆಪಿ ಪ್ರಧಾನ ಕಚೇರಿಎ ಹೋಗುತ್ತಿದ್ದೇನೆ. ನಿಮಗೆ ಯಾರನ್ನು ಅರೆಸ್ಟ್‌ ಮಾಡಬೇಕು ಅಂತಾ ಅನಿಸುತ್ತದೆಯೋ ಅವರನ್ನು ಅರೆಸ್ಟ್‌ ಮಾಡಿ. ಇಲ್ಲ ಎಲ್ಲರನ್ನೂ ಅರೆಸ್ಟ್‌ ಮಾಡೋವುದಾದರೆ ಮಾಡಿ ಎಂದು ಹೇಳಿದ್ದಾರೆ.

ಆಪ್‌ ಪಕ್ಷದ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್‌, ಮನೀಷ್‌ ಸಿಸೋಡಿಯಾ, ಅದಾದ ಬಳಿಕ ನನ್ನನ್ನು ಬಿಜೆಪಿ ಟಾರ್ಗೆಟ್‌ ಮಾಡಿ ಜೈಲಿಗೆ ಕಳುಹಿಸಿದೆ. ಇದೀಗ ಇತರ ನಾಯಕರೂ ಅವರ ಪಟ್ಟಿಯಲ್ಲಿದ್ದಾರೆ. ಬಿಜೆಪಿ ಹೀಗೆಲ್ಲಾ ಮಾಡಲು ಕಾರಣವೇನು? ಕಾರಣ ಇಷ್ಟೇ ನಾವು ದಿಲ್ಲಿಯಲ್ಲಿ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಅದು ಅವರಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ನಮ್ಮನ್ನು ಈ ರೀತಿಯಾಗಿ ಹತ್ತಿಕ್ಕುತ್ತಿದೆ ಎಂದು ಅವರು ಕಿಡಿ ಕಾಡಿದ್ದಾರೆ.

ಇದನ್ನೂ ಓದಿ:Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ.

Continue Reading

ಕರ್ನಾಟಕ

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

MLC Election: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ

VISTARANEWS.COM


on

MLC Election Withdrawal of nomination paper says Suresh Sajjan
Koo

ಬೆಂಗಳೂರು: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (MLC Election) ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದರು.

ಇದನ್ನೂ ಓದಿ: Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದು ತಿಳಿಸಿದರು. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದರು.

ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಅಮರನಾಥ ಪಾಟೀಲ್‌ ಅವರ ಗೆಲುವಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಸಜ್ಜನ್ ತಿಳಿಸಿದರು.

Continue Reading

ಕರ್ನಾಟಕ

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿ ನೋಡಿದರೆ ಅಲ್ಲಿ ಕೊಲೆ, ಸುಲಿಗೆಗಳು ಆಗುತ್ತಿವೆ. ಅತ್ಯಾಚಾರ ಪ್ರಕರಣಗಳು, ಲವ್ ಜಿಹಾದ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಪ್ರಶ್ನೆ ಕಾಡುತ್ತಿದೆ ಎಂದು ದೂರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಅಂಶಗಳನ್ನು ಮುಂದಿಟ್ಟು ಇಂದು ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಪರಾಧ ಪ್ರಮಾಣ ಹೆಚ್ಚಳದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP State President B Y Vijayendra latest statement in bengaluru
Koo

ಬೆಂಗಳೂರು: ವಿಧಾನಪರಿಷತ್ತಿನ ವಿವಿಧ ಕ್ಷೇತ್ರಗಳಲ್ಲಿ ಇರುವ ಸಮಸ್ಯೆಗಳು ಶೀಘ್ರವೇ ಪರಿಹಾರಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿಧಾನಪರಿಷತ್ತಿನ ಪದವೀಧರ- ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿ 4 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡು ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ನಿನ್ನೆ 6 ಕ್ಷೇತ್ರಗಳಿಗೆ ಬಿಜೆಪಿಯಿಂದ ಉಸ್ತುವಾರಿಗಳನ್ನೂ ನೇಮಿಸಿದ್ದೇವೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ಹಿರಿಯ ಮುಖಂಡ ಸುರೇಶ್ ಸಜ್ಜನ್ ಅವರು ಕಳೆದೆರಡು ವರ್ಷಗಳಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಪ್ರವಾಸ ಮಾಡಿ, ಸಂಘಟನೆ ಮಾಡಿ ಆಕಾಂಕ್ಷಿಯಾಗಿದ್ದು, ನಾಮಪತ್ರ ಸಲ್ಲಿಸಿದ್ದರು. ಸುರೇಶ್ ಸಜ್ಜನ್ ಅವರು ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಚುನಾವಣಾ ಅಖಾಡದಿಂದ ಹಿಂದೆ ಸರಿದು ಬಿಜೆಪಿ ಬೆಂಬಲಿಸಲು ಮುಂದಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದರ ಪರಿಣಾಮವಾಗಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಅನುಕೂಲವಾಗಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಲಿಂಗರಾಜ್ ಅವರ ಹೆಸರನ್ನು ಘೋಷಿಸಲಾಗಿತ್ತು. ನಂತರ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಡಲಾಗಿತ್ತು. ನಾಮಪತ್ರ ಸಲ್ಲಿಸಿದ್ದ ಲಿಂಗರಾಜ್ ಅವರ ಮನವೊಲಿಕೆ ಮಾಡಿ ನಾಮಪತ್ರ ಹಿಂದಕ್ಕೆ ಪಡೆಯುವುದಾಗಿ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಎರಡೂ ಕ್ಷೇತ್ರದಲ್ಲೂ ಕೂಡ ಸಮಸ್ಯೆಗಳು ಇತ್ಯರ್ಥವಾಗಿವೆ. ಬೇರೆ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವ ಕೆಲಸವನ್ನು ಇವತ್ತು ಮತ್ತು ನಾಳೆ ಮಾಡಲಿದ್ದು, ಅವು ಪರಿಹಾರ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿ ನೋಡಿದರೆ ಅಲ್ಲಿ ಕೊಲೆ, ಸುಲಿಗೆಗಳು ಆಗುತ್ತಿವೆ. ಅತ್ಯಾಚಾರ ಪ್ರಕರಣಗಳು, ಲವ್ ಜಿಹಾದ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಪ್ರಶ್ನೆ ಕಾಡುತ್ತಿದೆ ಎಂದು ದೂರಿದರು. ಈ ಅಂಶಗಳನ್ನು ಮುಂದಿಟ್ಟು ಇವತ್ತು ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಪರಾಧ ಪ್ರಮಾಣ ಹೆಚ್ಚಳದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪೊಲೀಸ್‌ ವ್ಯವಸ್ಥೆ ಸರಿ ಇಲ್ಲ, ಯಾರೇನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ, ಸರ್ಕಾರ ಬಿಗಿ ಕ್ರಮ ಕೈಗೊಳ್ಳದ ಕಾರಣ ದಿನೇ ದಿನೇ ಕೊಲೆ ಪ್ರಕರಣ ಹೆಚ್ಚಾಗಿದೆ ಎಂದು ಆರೋಪಿಸಿದರು. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದ ಅವರು, ಮಹಿಳೆಯರ ಸುರಕ್ಷತೆ ಪ್ರಶ್ನೆ ನಿಟ್ಟಿನಲ್ಲಿ ನಾವು ಕೂಡ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಸಿಬಿಐ ತನಿಖೆಗೆ ಒತ್ತಾಯ

ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಕೊಡಲು ಒತ್ತಾಯಿಸುತ್ತಿದ್ದೇವೆ. ದಿನನಿತ್ಯ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತಡ ಮಾಡದೆ ಈ ಪೆನ್‌ಡ್ರೈವ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.

ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ? ಇದರಲ್ಲಿ ಸರ್ಕಾರದ ಘಟಾನುಘಟಿಗಳ ಹೆಸರುಗಳೂ ಕೇಳಿಬರುತ್ತಿವೆ. ಎಸ್‍ಐಟಿಯಿಂದ ಪಾರದರ್ಶಕ ತನಿಖೆ ಮಾಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು, ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬಿಟ್ಟು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಅವರು ಒತ್ತಾಯಿಸಿದರು.

Continue Reading
Advertisement
yelahanka flyover
ಬೆಂಗಳೂರು3 mins ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ4 mins ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ9 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

viral video
ವೈರಲ್ ನ್ಯೂಸ್30 mins ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Murder case
ಕ್ರೈಂ32 mins ago

Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

Sobhita Dhulipala golden new look from Cannes Film Festival
ಬಾಲಿವುಡ್46 mins ago

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

IPL 2024 Man commits suicide after taking loan for IPL betting
ರಾಯಚೂರು53 mins ago

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

MLC Election
ಕರ್ನಾಟಕ56 mins ago

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

Kannada New Movie anartha cinema teaser Out
ಸ್ಯಾಂಡಲ್ ವುಡ್1 hour ago

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Air india
ದೇಶ1 hour ago

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌