Virat Kohli: ತೆಂಡೂಲ್ಕರ್ ಆಯ್ತು ಈಗ ಕೊಹ್ಲಿ ಸರದಿ; ಡೀಪ್‌ಫೇಕ್ ಮೂಲಕ ಬೆಟ್ಟಿಂಗ್ ಆ್ಯಪ್​​ ಪ್ರಚಾರ - Vistara News

ಕ್ರೀಡೆ

Virat Kohli: ತೆಂಡೂಲ್ಕರ್ ಆಯ್ತು ಈಗ ಕೊಹ್ಲಿ ಸರದಿ; ಡೀಪ್‌ಫೇಕ್ ಮೂಲಕ ಬೆಟ್ಟಿಂಗ್ ಆ್ಯಪ್​​ ಪ್ರಚಾರ

ವಿರಾಟ್ ಕೊಹ್ಲಿ ಬೆಟ್ಟಿಂಗ್​ ಆ್ಯಪ್​ಗಳಲ್ಲಿ ಯುವ ಜನರನ್ನು ಉತ್ತೇಜಿಸುವಂತೆ ಪ್ರಮೋಷನ್ ಮಾಡುತ್ತಿವ ಡೀಪ್‌ಫೇಕ್‌ ವಿಡಿಯೊವೊಂದು(deepfake videos) ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

VISTARANEWS.COM


on

Virat Kohli Deepfake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇತ್ತೀಚೆಗೆ ಸಚಿನ್‌ ತೆಂಡೂಲ್ಕರ್‌(Sachin Tendulkar) ಅವರ ಡೀಪ್‌ಫೇಕ್‌(Deepfake) ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಬೆಟ್ಟಿಂಗ್​ ಗೇಮಿಂಗ್ ಆ್ಯಪ್​ಗಳಲ್ಲಿ ಯುವ ಜನರನ್ನು ಉತ್ತೇಜಿಸುವಂತೆ ಪ್ರಚಾರ ಮಾಡುತ್ತಿರುವ ವಿಡಿಯೊವೊಂದು ಕಲ ದಿನಗಳ ಹಿಂದೆ ಭಾರಿ ವೈರಲ್​ ಆಗಿತ್ತು. ಬಾರಿ ಸುದ್ದಿಯಾಗಿತ್ತು. ಈ ಬಗ್ಗೆ ಸಚಿನ್​ ಕಳವಳ ವ್ಯಕ್ತಪಡಿಸಿದ್ದರು. ಇದೀಗ ವಿರಾಟ್​ ಕೊಹ್ಲಿಯ(Virat Kohli) ಡೀಪ್‌ಫೇಕ್‌ ವಿಡಿಯೊ ವೈರಲ್​ ಆಗಿದೆ.

ವಿರಾಟ್ ಕೊಹ್ಲಿ ಬೆಟ್ಟಿಂಗ್​ ಆ್ಯಪ್​ಗಳಲ್ಲಿ ಯುವ ಜನರನ್ನು ಉತ್ತೇಜಿಸುವಂತೆ ಪ್ರಮೋಷನ್ ಮಾಡುತ್ತಿವ ಡೀಪ್‌ಫೇಕ್‌ ವಿಡಿಯೊವೊಂದು(deepfake videos) ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ನಕಲಿ ವಿಡಿಯೋದಲ್ಲಿ ಕೊಹ್ಲಿ ಕೇವಲ ಮೂರು ದಿನದಲ್ಲಿ 1 ಸಾವಿರ ರೂ. ಬಂಡವಾಳ ಹಾಕಿ 81 ಸಾವಿರ ರೂ. ಪಡೆದಿರುವುದಾಗಿ ಹೇಳಿದ್ದಾರೆ.

ತಂತ್ರಜ್ಞಾನದ ದುರ್ಬಳಕೆ ಆಗುತ್ತಿರುವುದನ್ನು ನೋಡಿದರೆ ತುಂಬಾ ಬೇಸರವಾಗುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ದೂರುಗಳು ಹಾಗೂ ಎಚ್ಚರಿಕೆಗಳಿಗೆ ಸ್ಪಂದಿಸುವ ಅಗತ್ಯವಿದೆ. ಡೀಪ್‌ಫೇಕ್‌ ಹಾಗೂ ತಪ್ಪು ಮಾಹಿತಿ ಹರಡುವಿಕೆಯನ್ನು ತಡೆಯಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಚಿನ್​ ಹೇಳಿದ್ದರು.

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ದೇಶಾದ್ಯಂತ ಭಾರಿ ಸಂಚಲನ ಉಂಟು ಮಾಡಿತ್ತು. ಪ್ರಮುಖ ಸೆಲೆಬ್ರಿಟಿಗಳು ಕೃತ್ಯವನ್ನು ಖಂಡಿಸಿದ್ದರ ಜತೆಗೆ ಕ್ರಮಕ್ಕೆ ಆಗ್ರಹಿಸಿದ್ದರು. ಇದಾದ ನಂತರ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ 465 (ನಕಲು), 469 (ಗೌರವಕ್ಕೆ ಧಕ್ಕೆ), ಮಾಹಿತಿ ತಂತ್ರಜ್ಞಾನ ಕಾಯ್ದೆ (2000)ಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಪ್ರಮುಖ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದರು. ರಶ್ಮಿಕಾ ಮಂದಣ್ಣ ಅವರ ಬಳಿಕ ಕತ್ರಿನಾ ಕೈಫ್‌, ಕಾಜೋಲ್‌, ಆಲಿಯಾ ಭಟ್‌ ಸೇರಿ ಹಲವರ ಡೀಪ್‌ಫೇಕ್‌ ವಿಡಿಯೊಗಳು ಸುದ್ದಿಯಾಗಿದ್ದವು.

ಇದನ್ನೂ ಓದಿ  Deepfake Scam: ಡೀಪ್‌ಫೇಕ್‌ ಬಳಸಿ ಕಂಪನಿಗೆ 200 ಕೋಟಿ ರೂ. ವಂಚಿಸಿದ ದುಷ್ಟರು! ಹೇಗೆ?

ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಚಿಂತನೆ


ಡೀಪ್‌ಫೇಕ್‌ ವಿಡಿಯೊಗಳು ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ವಿಡಿಯೊ ಪಸರಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಡೀಪ್‌ಫೇಕ್‌ ಈಗ ಸಮಾಜಕ್ಕೆ ಮಾರಕವಾಗುತ್ತಿದೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ, ಕ್ಷಿಪ್ರವಾಗಿ ಕಠಿಣ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಇದರ ದಿಸೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಡೀಪ್‌ಫೇಕ್‌ ನಿಯಂತ್ರಣದ, ಕ್ರಮ ತೆಗೆದುಕೊಳ್ಳುವುದರ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಮುಂಬರುವ ಡಿಸೆಂಬರ್‌ನಲ್ಲಿ ಇದರ ಕುರಿತು ಮತ್ತಷ್ಟು ಚರ್ಚಿಸಲಾಗುತ್ತದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನೂ ಇದಕ್ಕಾಗಿ ಬಳಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

T20 ವಿಶ್ವಕಪ್

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Pakistan Players: ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ.

VISTARANEWS.COM


on

Pakistan Players
Koo

ನ್ಯೂಯಾರ್ಕ್​: ಎಲ್ಲ ದೇಶಗಳು ಟಿ20 ವಿಶ್ವಕಪ್​ ಟ್ರೋಫಿ(T20 World Cup) ಗೆಲ್ಲುವತ್ತ ಗಮನಹರಿಸಿದರೆ, ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನದ ಆಟಗಾರರು(Pakistan Players) ಆರ್ಥಿಕ ಸಂಕಷ್ಟದಿಂದ ಪಾರಾಗುವತ್ತ ಗಮನ ಹರಿಸಿದಂತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಆಟಗಾರರು ದಂಧೆಗೆ ಇಳಿದು ವಿವಾದಕ್ಕೀಡಾಗಿದ್ದಾರೆ.

ಪಾಕಿಸ್ತಾನದ ಆಟಗಾರರು ಖಾಸಗಿ ಔತಣಕೂಟ(Pakistan Players Host Private Dinner) ಒಂದನ್ನು ಆಯೋಜಿಸಿ ಈ ಔತಣಕೂಟದಲ್ಲಿ ಅಭಿಮಾನಿಗಳು ಕೂಡ ಪಾಲ್ಗೊಳ್ಳಬಹುದು ಎಂದು ಹೇಳಲಾಗಿದೆ. ಆದರೆ ಒಂದು ಕ್ಷರತ್ತು ಕೂಡ ವಿಧಿಸಿದೆ. ಈ ಔತಣ ಕೂಟದಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳು 25 ಯುಎಸ್​ ಡಾಲರ್​ ಪಾವತಿಸಬೇಕು ಎಂದು ಹೇಳಿದೆ. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪಾಕ್​ ಆಟಗಾರರನ್ನು ಸ್ವತಃ ಪಾಕಿಸ್ತಾನದ ಜನರೇ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದಾರೆ. ಇಷ್ಟು ಗತಿಗೆಟ್ಟು ನೀವು ದೇಶವನ್ನು ಪ್ರತಿನಿಧಿಸಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಅಭಿಮಾನಿಗಳು ನೀಡಿದ 25 ಯುಎಸ್ ಡಾಲರ್​ಗಳನ್ನೆಲ್ಲ ಒಟ್ಟುಗೂಡಿಸಿ ಅಂತಿಮವಾಗಿ ಎಲ್ಲ ಆಟಗಾರರು ಸಮಾನವಾಗಿ ಹಂಚಿಕೊಂಡು ಹಣ ಗಳಿಸುವುದು ಆಟಗಾರರ ಉಪಾಯವಾಗಿತ್ತು. ಆದರೆ, ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್ ಆಡಲು ತೆರಳಿದ ತಂಡವೊಂದು ಔತಣಕೂಟ ಏರ್ಪಡಿಸಿ ಅಭಿಮಾನಿಗಳಿಂದ ದುಡ್ಡುಗಳಿಸಲು ಮುಂದಾಗುತ್ತಿರುವ ಅತ್ಯಂತ ನಾಚಿಕೆಗೇಡಿನ ಸಂಗತಿ. ಇದೊಂದು ದರೋಡೆ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕೂಡ ಕಾರಣವಿದೆ, ಇಷ್ಟೆಲ್ಲಾ ನಡೆದರೂ ಪಾಕ್​ ಕ್ರಿಕೆಟ್​ ಮಂಡಳಿ ಈ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಈ ಕೃತ್ಯದ ಹಿಂದೆ ಮಂಡಳಿಯ ಕೈವಾಡವಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 9, ಭಾನುವಾರ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

Virat Kohli: ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 World Cup)​ ಕ್ರಿಕೆಟ್​ ಟೂರ್ನಿಯಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಹೊಂದಿರುವ ಟೀಮ್​ ಇಂಡಿಯಾದ ವಿರಾಟ್​ ಕೊಹ್ಲಿ(Virat Kohli) ಇದೀಗ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲು ಸಜ್ಜಾಗಿ ನಿಂತಿದ್ದಾರೆ. ಈ ಬಾರಿ ಕೊಹ್ಲಿ ಕಣ್ಣಿಟ್ಟಿರುವ ದಾಖಲೆ ಎಂದರೆ ಬೌಂಡರಿಯದ್ದು.

ಇಂದು(ಬುಧವಾರ) ನಡೆಯುವ ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನ ಪಡೆಯಲಿದ್ದಾರೆ. ಜಯವರ್ಧನೆ 111 ಬೌಂಡರಿ ಬಾರಿಸಿದ್ದರೆ, ಕೊಹ್ಲಿ ಸದ್ಯ 103* ಬೌಂಡರಿ ದಾಖಲಿಸಿದ್ದಾರೆ.

ಟ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಸಾಧಕರು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ27103*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ರೋಹಿತ್​ ಶರ್ಮಭಾರತ3691*
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ3486
ಕ್ರಿಸ್​ ಗೇಲ್​ವೆಸ್ಟ್​ ಇಂಡೀಸ್​3178
ಜಾಸ್​ ಬಟ್ಲರ್​ಇಂಗ್ಲೆಂಡ್​2769*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2568*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.

ವರ್ಷ ಏಕದಿನ ಪ್ರಶಸ್ತಿ ಗೆದ್ದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಕೆಲವು ದಿನಗಳ ಹಿಂದಷ್ಟೇ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದರು. ಕೊಹ್ಲಿ 2023ರ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 24 ಇನ್ನಿಂಗ್ಸ್‌ನಲ್ಲಿ 72.47ರ ಸರಾಸರಿಯಲ್ಲಿ 1,377 ರನ್‌ ಕಲೆಹಾಕಿದ್ದರು. 6 ಶತಕಗಳು ಮತ್ತು 8 ಅರ್ಧ ಶತಕಗಳು ಬಾರಿಸಿದ್ದರು.

2023ರಲ್ಲಿ ಭಾರತದ ಏಷ್ಯಾ ಕಪ್‌ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೂಪರ್‌-4 ಹಂತದ ಪಾಕಿಸ್ಥಾನ ವಿರುದ್ಧದ ಹೈ ವೋಲ್ಟೇಜ್​ ಪಂದ್ಯದಲ್ಲಿ 94 ಎಸೆತಗಳಲ್ಲಿ ಅಜೇಯ 122 ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಏಕದಿನ ವಿಶ್ವಕಪ್‌ನಲ್ಲಿಯೂ 11 ಪಂದ್ಯಗಳಲ್ಲಿ 765 ರನ್‌ ಬಾರಿಸಿ ಗಮನ ಸೆಳೆದಿದ್ದರು. ಇದೇ ವೇಳೆ ಕಿವೀಸ್​ ವಿರುದ್ಧದ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿ ಏಕದಿನದಲ್ಲಿ 50 ಶತಕಗಳ ಸಾಧನೆಗೈದಿದ್ದರು. ಈ ಮೂಲಕ ಸಚಿನ್‌ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಮುರಿದಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿಯೂ ಅಮೋಘ ಬ್ಯಾಟಿಂಗ್​ ನಡೆಸುವ ವಿಶ್ವಾಸದಲ್ಲಿದ್ದಾರೆ.

Continue Reading

ಕ್ರೀಡೆ

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

R Ashwin: ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

VISTARANEWS.COM


on

R Ashwin
Koo

ಚೆನ್ನೈ: ಮುಂಬರುವ ಐಪಿಎಲ್​ 2025(IPL 2025) ಆಟಗಾರರ ಮೆಗಾ ಹರಾಜಿಗೆ(IPL 2025 Auction) ಮುನ್ನವೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜಸ್ಥಾನ್​​ ರಾಯಲ್ಸ್​ ತಂಡದ ಆರ್​. ಅಶ್ವಿನ್​(R Ashwin) ಮರಳಿ ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಗೆ(CSK) ಮರಳಿದ್ದಾರೆ. 2008 ರಿಂದ 2015 ರವರೆಗೆ ಅಶ್ವಿನ್​ ಚೆನ್ನೈ ತಂಡದ ಪರ ಆಡಿದ್ದರು. ಇದೀಗ ಅವರಿಗೆ ಫ್ರಾಂಚೈಸಿ ಹೊಸ ಜವಾಬ್ದಾರಿ ನೀಡಿದೆ. ಆಟಗಾರನಾಗಿ ಅಲ್ಲ. ಬದಲಾಗಿ ಸಿಎಸ್‌ಕೆಯ ಹೈ-ಪರ್ಫಾರ್ಮೆನ್ಸ್ ಸೆಂಟರ್‌ ಕೇಂದ್ರದಲ್ಲಿ ಆಟಗಾರರ ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಸುಧಾರಣೆಯ ಮಾಡುವ ಜವಾಬ್ದಾರಿ ನೀಡಿದೆ.

‘ಕ್ರಿಕೆಟ್ ಅನ್ನು ಬೆಳೆಸುವುದು ಮತ್ತು ಕ್ರಿಕೆಟ್ ಬಳಗಕ್ಕೆ ಕೊಡುಗೆ ನೀಡುವುದು ನನ್ನ ಮುಖ್ಯ ಗುರಿಯಾಗಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಸಂಸ್ಥೆಗೆ ಇದೀಗ ಮರಳಿರುವುದು ಸಂತೋಷವಾಗಿದೆ.’ ಎಂದು ಅಶ್ವಿನ್ ಹೇಳಿದ್ದಾರೆ.

‘ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದರು.

ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ Ravichandran Ashwin : ಪಂದ್ಯದ ನಡುವೆ ಪತಿ ಎದುರಿಸಿದ ಕಷ್ಟಗಳನ್ನು ವಿವರಿಸಿದ ಆರ್​. ಅಶ್ವಿನ್ ಪತ್ನಿ

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಕ್ರೀಡೆ

India vs Ireland: ರೋಹಿತ್​ ಜತೆ ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭ?

India vs Ireland: ಒಂದು ವೇಳೆ ಕೊಹ್ಲಿ ಓಪನಿಂಗ್‌ ಬಂದರೆ ಜೈಸ್ವಾಲ್‌ ವನ್‌ಡೌನ್‌ನಲ್ಲಿ ಬರಬಹುದು. ಜೈಸ್ವಾಲ್​ ಆರಂಭಿಕ ಆಟಗಾರನಾಗಿರುವ ಕಾರಣ ಅವರು ಮಧ್ಯಮ ಕ್ರಮಾಂಕಕ್ಕೆ ಒಗ್ಗಿಕೊಳ್ಳುವರೇ ಎನ್ನುವ ಪ್ರಶ್ನೆಯೂ ಇಲ್ಲಿ ಸಹಜವಾಗಿಯೇ ಮೂಡಿದೆ

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಭಾರತ(India vs Ireland) ತಂಡ ತನ್ನ ಟಿ20 ವಿಶ್ವಕಪ್(​T20 World Cup 2024) ಅಭಿಯಾನವನ್ನು ಇಂದು(ಬುಧವಾರ) ಆರಂಭಿಸಲಿದೆ. ಎದುರಾಳಿ ಐರ್ಲೆಂಡ್​. ಆದರೆ, ಪಂದ್ಯಕ್ಕೂ ಮುನ್ನವೇ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲವೊಂದು ಮೂಡಿದೆ. ಇದೆಂದರೆ ರೋಹಿತ್​ ಶರ್ಮ(Rohit Sharma) ಜತೆ ಇಂದು ಭಾರತದ ಇನಿಂಗ್ಸ್​ ಆರಂಭಿಸುವುದು ಯಾರು ಎನ್ನುವುದು.

ಸದ್ಯದ ಮಾಹಿತಿ ಪ್ರಕಾರ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ಅವರ ಹೇಳಿಕೆ ಗಮನಿಸುವಾಗ ರೋಹಿತ್ ಶರ್ಮ ಮತ್ತು ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭಿಸುವ ಸಾಧ್ಯತೆ ಕಂಡುಬಂದಿದೆ. ಒಂದು ವೇಳೆ ಕೊಹ್ಲಿ ಓಪನಿಂಗ್‌ ಬಂದರೆ ಜೈಸ್ವಾಲ್‌ ವನ್‌ಡೌನ್‌ನಲ್ಲಿ ಬರಬಹುದು. ಜೈಸ್ವಾಲ್​ ಆರಂಭಿಕ ಆಟಗಾರನಾಗಿರುವ ಕಾರಣ ಅವರು ಮಧ್ಯಮ ಕ್ರಮಾಂಕಕ್ಕೆ ಒಗ್ಗಿಕೊಳ್ಳುವರೇ ಎನ್ನುವ ಪ್ರಶ್ನೆಯೂ ಇಲ್ಲಿ ಸಹಜವಾಗಿಯೇ ಮೂಡಿದೆ. ಉಳಿದ ಕ್ರಮಾಂಕದಲ್ಲಿ ಯಾವುದೇ ಗೊಂದಲ ಇಲ್ಲ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಹೀಗಿರುವಾಗ ರೋಹಿತ್​ ಮತ್ತು ವಿರಾಟ್​ ಆರಂಭಿಕರಾಗಿ ಕಣಕ್ಕಿಳಿದು ಉಭಯ ಆಟಗಾರರು ಬೇಗನೆ ವಿಕೆಟ್​ ಕಳೆದುಕೊಂಡರೆ ಆ ಬಳಿಕ ತಂಡಕ್ಕೆ ಯಾರು ಆಸರೆಯಾಗಬಲ್ಲರು ಎನ್ನು ಪ್ರಶ್ನೆ ಕೂಡ ಹುಟ್ಟಿಕೊಳ್ಳಲಿದೆ. ಕ್ರಿಕೆಟ್​ ಪಂಡಿತರ ಪ್ರಕಾರ ರೋಹಿತ್​ ಜತೆ ಜೈಸ್ವಾಲ್​ ಅವರೇ ಆಡಿದರೆ ಉತ್ತಮ ಎನ್ನುವ ಸಲಹೆ ನೀಡಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್​ ಯಾದವ್​, ರಿಷಭ್​ ಪಂತ್​, ಹಾರ್ದಿಕ್​ ಪಾಂಡ್ಯ ಅವರಂತ ಹೊಡಿ ಬಡಿ ಬ್ಯಾಟರ್​ಗಳಿದ್ದರೂ ಕೂಡ ಇವರ ಪ್ರದರ್ಶನದ ಮೇಲೆ ಹೆಚ್ಚಿನ ನಂಬಿಕೆ ಇಡುವಂತಿಲ್ಲ. ಬಡಬಡನೆ ಒಂದೆರಡು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ವಿಕೆಟ್​ ಕಳೆದುಕೊಳ್ಳುತ್ತಾರೆ. ನಿಂತು ಆಡುವ ಕಲೆ ಇವರಿಗೆ ಅಷ್ಟಾಗಿ ತಿಳಿದಿಲ್ಲ. ಬೌಲಿಂಗ್​ ಬಗ್ಗೆ ತಂಡಕ್ಕೆ ಯಾವುದೇ ಚಿಂತೆಯಿಲ್ಲ. ಜಸ್​ಪ್ರೀತ್​ ಬುಮ್ರಾ, ಕುಲ್​ದೀಪ್​ ಯಾದವ್​, ಚಹಲ್​, ಸಿರಾಜ್​ ಮತ್ತು ಜಡೇಜಾ ಈ ಪಿಚ್​ನಲ್ಲಿ ಉತ್ತಮ ಪ್ರದರ್ಶನ ತೋರುವ ನಿರೀಕ್ಷೆ ಇದೆ.

ಇದನ್ನೂ ಓದಿ India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಪಂತ್​-ಸ್ಯಾಮ್ಸನ್​ ಮಧ್ಯೆ ಯಾರಿಗೆ ಅವಕಾಶ?


ವಿಕೆಟ್​ ಕೀಪರ್​ಗಳಾಗಿರುವ ರಿಷಭ್​ ಪಂತ್​ ಮತ್ತು ಸಂಜು ಸ್ಯಾಮ್ಸನ್​ ಮಧ್ಯೆಯೂ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಂತ್​ ಅರ್ಧಶತಕ ಬಾರಿಸಿದರೂ ಕೂಡ ಮೂಲಗಳ ಪ್ರಕಾರ ಸಂಜು ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ ಅನೇಕ ಮಾಜಿ ಹಿರಿಯ ಆಟಗಾರರು ಪಂತ್​ಗೆ ಅವಕಾಶ ನೀಡಿದರೆ ಸೂಕ್ತ ಎನ್ನುತ್ತಿದ್ದಾರೆ. ಇದನ್ನು ಗಮನಿಸುವಾಗ ಪಂತ್​ ಮೊದಲ ಆಯ್ಕೆ ಕೀಪರ್ ಅಲ್ಲ ಎಂದು ಭಾಸವಾಗುತ್ತಿದೆ.

Continue Reading
Advertisement
Operation London Cafe movie will be released very soon
ಕರ್ನಾಟಕ2 mins ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ8 mins ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

HD Kumaraswamy
ಕರ್ನಾಟಕ9 mins ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್19 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ36 mins ago

Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Vitamin A
ಆರೋಗ್ಯ40 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್43 mins ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ54 mins ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Environment Month celebration by Toyota Kirloskar Motor
ಕರ್ನಾಟಕ1 hour ago

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

Mutual Funds
ವಾಣಿಜ್ಯ1 hour ago

Mutual Funds: ಪಿಎಸ್‌ಯು ಷೇರುಗಳಲ್ಲಿ 90,000 ಕೋಟಿ ರೂ. ನಷ್ಟ ಅನುಭವಿಸಿದ ಮ್ಯೂಚುವಲ್ ಫಂಡ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌