Karnataka Budget Session 2024: ಕಾಂಗ್ರೆಸ್‌ ಸೇರುವಂತೆ ಜೆಡಿಎಸ್‌ನ ಬೋಜೇಗೌಡರಿಗೆ ಸದನದಲ್ಲೇ ಆಹ್ವಾನ ಕೊಟ್ಟ ಸಿದ್ದರಾಮಯ್ಯ! - Vistara News

ರಾಜಕೀಯ

Karnataka Budget Session 2024: ಕಾಂಗ್ರೆಸ್‌ ಸೇರುವಂತೆ ಜೆಡಿಎಸ್‌ನ ಬೋಜೇಗೌಡರಿಗೆ ಸದನದಲ್ಲೇ ಆಹ್ವಾನ ಕೊಟ್ಟ ಸಿದ್ದರಾಮಯ್ಯ!

Karnataka Budget Session 2024: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದವರು ರಾಷ್ಟ್ರೀಯವಾದಿಗಳಲ್ವಾ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ? ಎಂದು ವಿಧಾನ ಪರಿಷತ್‌ನಲ್ಲಿ ಬಿಜೆಪಿಯನ್ನು ಕುಟುಕಿದ ಸಿಎಂ ಸಿದ್ದರಾಮಯ್ಯ, ಬೋಜೇಗೌಡರಿಗೆ ಕಾಂಗ್ರೆಸ್‌ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದರು.

VISTARANEWS.COM


on

Karnataka Budget Session 2024 Siddaramaiah invites JDS member Boje Gowda to join Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ರಾಷ್ಟ್ರೀಯವಾದ, ಜಾತ್ಯತೀತವಾದದ ಬಗ್ಗೆ ಚರ್ಚೆಗಳು ನಡೆದಿವೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಬಿಜೆಪಿಯನ್ನು ಕುಟುಕಿದರು. ಅಲ್ಲದೆ, ಪರಿಷತ್‌ನಲ್ಲಿದ್ದ ಜೆಡಿಎಸ್ ಸದಸ್ಯ ಬೋಜೇಗೌಡ (Boje Gowda) ಅವರಿಗೆ ಕಾಂಗ್ರೆಸ್‌ಗೆ ಬರುವಂತೆ ಆಹ್ವಾನ ನೀಡಿದರು.

ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆ ಬಗ್ಗೆ ವಿವರಣೆ ನೀಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಭಾರತದ ಇತಿಹಾಸ ಮತ್ತು ಚರಿತ್ರೆಯಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್‌ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್ತಿನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್‌ನ ಸದಸ್ಯ ಬೋಜೇಗೌಡರು ಮಧ್ಯ ಪ್ರವೇಶಿಸಿ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಲು ಮುಂದಾದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ “ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ಗೌರವದಿಂದ ಸ್ವೀಕರಿಸಿದ ಬೋಜೇಗೌಡರು ಕೈ ಮುಗಿದು ಕುಳಿತರು.

ಸಂಪಾದಕೀಯಗಳ ಶ್ಲಾಘನೆ

ರಾಜ್ಯಪಾಲರ ಭಾಷಣವನ್ನು ಮೆಚ್ಚಿ ವಿಶ್ಲೇಷಣೆ ಮಾಡಿ ಬರೆದ ನಾಡಿದ ಪ್ರಮುಖ ಪತ್ರಿಕೆಗಳ ಸಂಪಾದಕೀಯಗಳು ಮತ್ತು ವರದಿಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣವನ್ನು ಸುಳ್ಳು ಎಂದು ಹೇಳುತ್ತೀರಲ್ಲವಾ? ಇದೇನು ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Ramanagara Lawyers: ರಾಮನಗರ ವಿವಾದ; ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು, ಚಾಂದ್‌ ಪಾಷಾ ಮೇಲೆ ಕ್ರಮ: ಪರಮೇಶ್ವರ್

ನಿಮ್ಮ ದಾಖಲೆ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ

ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಭರ್ಜರಿಯಾಗಿ ಜಯಗಳಿಸಿದ ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಭಾಧ್ಯಕ್ಷರೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ. ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ” ಎಂದು ಬಸವರಾಜ ಹೊರಟ್ಟಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಐದು ಹಾಗೂ ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.

VISTARANEWS.COM


on

Legislative Council Election
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ (Legislative Council Election) ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS) ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಕಣಕ್ಕಿಳಿದಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಈಗ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading

ದೇಶ

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Navneet Rana:15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: ಬಿಜೆಪಿ ನಾಯಕಿ ನವನೀತ್‌ ರಾಣಾ(Navneet Rana) ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ(Asaduddin Owaisi) ನಡುವಿನ ವಾಕ್ಸಮರ ಮುಂದುವರೆದಿದೆ. 15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮನನ್ನು ನಾನು ಮಾತ್ರ ನಿಯಂತ್ರಿಸಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಹೋದರ ಅಸಾದುದ್ದೀನ್‌ ಓವೈಸಿ ಹೇಳುತ್ತಿದ್ದಾರೆ. ಇದು ಒಳ್ಳೆಯ ವಿಚಾರ. ಇದು ನಿಮಗೆ ಅರ್ಥ ಆಗಿದ್ದು ಒಳ್ಳೆಯದ್ದಾಯಿತು. ಇಲ್ಲದಿದರೆ ರಾಮ ಭಕ್ತರು ಮತ್ತು ಮೋದಿಯವರ ಸಿಂಹಗಳು ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನೆ ಮೂಡಿಸಿದೆ.

‍ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ನಾನು ಇಲ್ಲೇ ನಿಂತಿದ್ದೇನೆ ಅದೇನು ಮಾಡುತ್ತೀರೋ ಮಾಡಿ ಎಂದು ಟಾಂಗ್‌ ಕೊಟ್ಟಿದ್ದರು. ಮಹಾರಾಷ್ಟ್ರದಿಂದ ಬಂದ ಎಂಪಿ ಸಾಹೇಬರು ಇಲ್ಲಿ ನಮ್ಮ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ನನ್ನ ತಮ್ಮ ಅಕ್ಬರುದ್ದೀನ್‌ ಓವೈಸಿ ಪರಿಸ್ಥಿತಿಯನ್ನು ಅವನದ್ದೇ ರೀತಿಯಲ್ಲಿ ತಿಳಿಗೊಳಿಸಲು ಮುಂದಾಗಿದ್ದ. ಆದರೆ ನಾನೇ ಅವನನ್ನು ತಡೆದು ನಿಲ್ಲಿಸಿದೆ ಎಂದು ಹೇಳಿದ್ದರು.

Continue Reading

ದೇಶ

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Election Commission: ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದರು.

VISTARANEWS.COM


on

Election Commission
Koo

ನವದೆಹಲಿ: ಮತದಾನ ಪ್ರಮಾಣ ವರದಿ ಬಿಡುಗಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ (Mallikarjun Kharge)ಗೆ ಭಾರತೀಯ ಚುನಾವಣಾ ಆಯೋಗ(Election Commission) ಪ್ರತಿಕ್ರಿಯಿಸಿದ್ದು, ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ನಡೆಸುತ್ತಿರುವ ಪ್ರಯತ್ನ ಎಂದು ಟಾಂಗ್‌ ಕೊಟ್ಟಿದೆ. ಖರ್ಗೆ ಪತ್ರಕ್ಕೆ ಪತ್ರದ ಮೂಲಕ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಚುನಾವಣಾ ಆಯೋಗದ ಬಗ್ಗೆ ಸಲ್ಲದ ಆರೋಪ ಮಾಡುವ ಮೂಲಕ ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಕೈಗೊಳ್ಳಲು ಅಡೆತಡೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಕಿಡಿಕಾರಿದೆ.

ಖರ್ಗೆ ಪತ್ರ ಬರೆದಿದ್ದೇಕೆ?

ಲೋಕಸಭೆ ಚುನಾವಣೆಯ ಮೊದಲ 2 ಹಂತದಲ್ಲಿ ನಡೆದ ಮತದಾನ ಪ್ರಮಾಣದ ಬಗ್ಗೆ ತಡವಾಗಿ ಮಾಹಿತಿ ನೀಡಿರುವ ಆಯೋಗಕ್ಕೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತದಾನ ಮುಗಿದು ಒಂದು ವಾರದ ಬಳಿಕ ಮೊದಲ ಹಂತದಲ್ಲಿ ಶೇ. 5.5ರಷ್ಟು, ಎರಡನೇ ಹಂತದಲ್ಲಿ ಶೇ. 5.74ರಷ್ಟು ಮತ ಪ್ರಮಾಣ ಹೆಚ್ಚಳ ಮಾಡಿ ದತ್ತಾಂಶ ಬಿಡುಗಡೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ಹೇಳಿದ್ದರು.

EC ಪ್ರತಿಕ್ರಿಯೆ ಏನು?

ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗ, ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಖರ್ಗೆಯವರು ಇಂತಹ ಗೊಂದಲಗಳನ್ನು ಜನರಲ್ಲಿ ಹುಟ್ಟು ಹಾಕೋದು ಸರಿಯಲ್ಲ. ಅವರು ಬರೆದಿರುವ ಪತ್ರ ರಾಜಕೀಯ ಪ್ರೇರಿತವಾಗಿದೆ. ಸಾರ್ವಜನಿಕವಾಗಿ ಸಂಶಯ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಅರಾಜಕ ಪರಿಸ್ಥಿತಿ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇಂತಹ ನಿರಾಧಾರ ಹೇಳಿಕೆಗಳಿಂದ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿ ಆತಂಕ ಉಂಟು ಮಾಡಿದ್ದಾರೆ ಎಂದು ಕಿಡಿ ಕಾರಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ ಪ್ರಮಾಣದ ದತ್ತಾಂಶಗಳ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವೋಟರ್‌ ಟರ್ನ್‌ ಔಟ್‌ ಆಪ್‌ನಲ್ಲಿ ಸಾರ್ವಜನಿಕವಾಗಿ ಈ ಮಾಹಿತಿ ಲಭ್ಯವಿದೆ. ಪ್ರತಿ ಬೂತ್‌ ಏಜೆಂಟ್‌ಗಳಿಗೆ ಮತದಾನ ಪ್ರಮಾಣದ ಬಗ್ಗೆ ಪೂರ್ಣ ವಿವರ ನೀಡಲು ಸೂಚಿಸಲಾಗಿರುತ್ತದೆ. ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಮತ ಎಣಿಕೆ ಮಾಡಲಾಗುತ್ತದೆ. ಇಲ್ಲಿ ಸಂಶಯ ಪಡುವಂತಹ ಯಾವುದೇ ಕಾರ್ಯ ನಡೆಯುವುದಿಲ್ಲ. ಪದೇ ಪದೆ ದತ್ತಾಂಶಗಳನ್ನು ಬದಲಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

ಇನ್ನು ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗದೊಂದಿಗೆ ಇಂಡಿಯಾ ಮಿತ್ರಪಕ್ಷಗಳ ನಿಗದಿತ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪತ್ರ ಮತ್ತು ಪ್ರತಿಕ್ರಿಯೆಯನ್ನು ಪಕ್ಷವು ಪ್ರಸ್ತಾಪಿಸಲಿದೆ ಎಂದು ಹೇಳಿದ್ದಾರೆ.

Continue Reading
Advertisement
car catches fire
ಕ್ರೈಂ37 mins ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ1 hour ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು1 hour ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು2 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್2 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ4 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ4 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ4 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ4 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ4 hours ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು9 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ19 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌