Karnataka Budget Session 2024: ದೇವಸ್ಥಾನಗಳ ಆದಾಯ 1 ಕೋಟಿ ಇದ್ದರೆ ಸರ್ಕಾರಕ್ಕೆ 10 ಲಕ್ಷ ರೂ. ಸಿಗುವಂತೆ ವಿಧೇಯಕ! - Vistara News

ರಾಜಕೀಯ

Karnataka Budget Session 2024: ದೇವಸ್ಥಾನಗಳ ಆದಾಯ 1 ಕೋಟಿ ಇದ್ದರೆ ಸರ್ಕಾರಕ್ಕೆ 10 ಲಕ್ಷ ರೂ. ಸಿಗುವಂತೆ ವಿಧೇಯಕ!

Karnataka Budget Session 2024: ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಗಿದ್ದು, ಇದರ ಅನುಸಾರ ಇನ್ನು ಮುಂದೆ 1 ಕೋಟಿ ರೂಪಾಯಿಗೂ‌ ಆದಾಯ ಮೀರಿದ ದೇವಸ್ಥಾನಗಳು ಆದಾಯದ ಶೇ.10ರಷ್ಟು ಹಣ ಸಲ್ಲಿಕೆ ಮಾಡಬೇಕು. ಅಂದರೆ, ಒಂದು ದೇವಸ್ಥಾನದ ಆದಾಯ 1 ಕೋಟಿ ರೂ. ಇದ್ದರೆ, ಸರ್ಕಾರಕ್ಕೆ 10 ಲಕ್ಷ ರೂಪಾಯಿ ನೀಡಬೇಕಿದೆ.

VISTARANEWS.COM


on

Karnataka Budget Session 2024 Temple with revenue of Rs 1 crore to get 10 to govt‌
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಬುಧವಾರ (ಫೆ. 21) ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ, ಪೊಲೀಸ್ (ತಿದ್ದುಪಡಿ) ವಿಧೇಯಕ ಸೇರಿ ಹಲವು ವಿಧೇಯಕಗಳ ಮಂಡನೆಯಾಗಿದ್ದು, ಕೆಲವು ಅಂಗೀಕಾರಗೊಂಡಿವೆ. ವಿಧಾನಪರಿಷತ್‌ನಲ್ಲಿ ಹಲವು ಬಿಲ್‌ಗಳನ್ನು ಮಂಡಿಸಲಾಗಿದ್ದು, ಚರ್ಚೆಗಳ ಬಳಿಕ ಅಂಗೀಕಾರಗೊಂಡಿವೆ. ಇದೇ ವೇಳೆ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕವನ್ನು (Hindu Religious Institutions and Charitable Endowments Bill) ಮಂಡಿಸಿ ಅಂಗೀಕಾರ ಪಡೆಯಲಾಗಿದ್ದು, ಇದರ ಅನುಸಾರ ಇನ್ನು ಮುಂದೆ 1 ಕೋಟಿ ರೂಪಾಯಿಗೂ‌ ಆದಾಯ ಮೀರಿದ ಸರ್ಕಾರಿ ದೇವಸ್ಥಾನಗಳು ಆದಾಯದ ಶೇ.10ರಷ್ಟು ಹಣ ಸಲ್ಲಿಕೆ ಮಾಡಬೇಕು. ಅಂದರೆ, ಒಂದು ದೇವಸ್ಥಾನದ ಆದಾಯ 1 ಕೋಟಿ ರೂ. ಇದ್ದರೆ, ಸರ್ಕಾರಕ್ಕೆ 10 ಲಕ್ಷ ರೂಪಾಯಿ ನೀಡಬೇಕಿದೆ.

ದೇವಸ್ಥಾನಗಳ ಆದಾಯ 1 ಕೋಟಿ ಇದ್ದರೆ ಸರ್ಕಾರಕ್ಕೆ 10 ಲಕ್ಷ!

ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕದ ಮೇಲೆ ಚರ್ಚೆ ನಡೆದಿದ್ದು, ದೇವಸ್ಥಾನಗಳ ಜತೆಗೆ ದೈವಸ್ಥಾನಗಳ ಅಭಿವೃದ್ಧಿ ಮತ್ತು ಪಾತ್ರಿಗಳಿಗೆ ದೇವಸ್ಥಾನಗಳ ಅರ್ಚಕರ ಮಾದರಿಯಲ್ಲಿ ಮಾಸಿಕ ವೇತನದ ಬಗ್ಗೆ ಗಮನ ಹರಿಸುವಂತೆ ಸರ್ಕಾರಕ್ಕೆ ಸ್ಪೀಕರ್ ಸಲಹೆ ನೀಡಿದರು. ಈ ಬಗ್ಗೆ ಏನೇನು ಕ್ರಮವನ್ನು ಸೇರಿಸಬಹುದೋ ಅದನ್ನು ಮಾಡುವುದಾಗಿ ಈ ವೇಳೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಮುಜರಾಯಿ ಇಲಾಖೆಗೆ ದೇವಸ್ಥಾನಗಳು ಕೊಡುತ್ತಿದ್ದ ಆದಾಯದ ಹಣವನ್ನು ರಾಜ್ಯ ಸರ್ಕಾರ ದ್ವಿಗುಣಗೊಳಸಿದೆ. ಇನ್ನು ಮುಂದೆ 10 ಲಕ್ಷದಿಂದ 1 ಕೋಟಿ ರೂಪಾಯಿ ಆದಾಯದ ದೇವಸ್ಥಾನಗಳು ಆದಾಯದ ಶೇ. 5ರಷ್ಟು ಹಣವನ್ನು ಸರ್ಕಾರಕ್ಕೆ ನೀಡಬೇಕು. 1 ಕೋಟಿ ರೂಪಾಯಿಗೂ‌ ಆದಾಯ ಮೀರಿದ ದೇವಸ್ಥಾನಗಳು ಆದಾಯದ ಶೇ.10ರಷ್ಟು ಹಣ ಸಲ್ಲಿಕೆ ಮಾಡಬೇಕು ಎಂದು ವಿಧೇಯಕದಲ್ಲಿ ಹೇಳಲಾಗಿದೆ.

ಅಲ್ಲದೆ, ಸಿ ಗ್ರೇಡ್ ದೇಗುಲದ ಅರ್ಚಕರು, ಸಿಬ್ಬಂದಿಗೆ ವಿಮೆ ಸೌಕರ್ಯ ಒದಗಿಸಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ ಅವರ ಕುಟುಂಬದವರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಲು ಅವಕಾಶ ನೀಡಲಾಗಿದೆ. ಈ ಮುಂಚೆ ಮೃತಪಟ್ಟರೆ ಅವರ ಕುಟುಂಬದವರಿಗೆ 35 ಸಾವಿರ ರೂಪಾಯಿಯನ್ನು ಕೊಡಲಾಗುತ್ತಿತ್ತು. ಜತೆಗೆ ಅರ್ಚಕರು, ದೇಗುಲ ಸಿಬ್ಬಂದಿ ಮಕ್ಕಳ ವಿದ್ಯಾಭ್ಯಾಸಕ್ಕೆ 5 ಸಾವಿರ ರೂ. ನಿಂದ 5೦ ಸಾವಿರ ರೂ. ವರೆಗೆ ಸ್ಕಾಲರ್ ಶಿಪ್ ಕೊಡಲು ಅವಕಾಶವನ್ನು ಈ ವಿಧೇಯಕದ ಮೂಲಕ ಕಲ್ಪಿಸಲಾಗಿದೆ.

ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 35 ಸಾವಿರ ದೇವಸ್ಥಾನಗಳಿದ್ದು, ಈ ಪೈಕಿ 205 ಎ ಗ್ರೇಡ್, 193 ಬಿ ಗ್ರೇಡ್ ಮತ್ತು 34 ಸಾವಿರ ಸಿ ಗ್ರೇಡ್ ದೇವಸ್ಥಾನಗಳಿವೆ. ಈ ಎಲ್ಲ ದೇಗುಲಗಳು ಈ ನಿಯಮಗಳಿಗೆ ಒಳಪಡುತ್ತವೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಈ ವರ್ಷ 45 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದು, 52 ಕೋಟಿ ರೂಪಾಯಿ ಆದಾಯ ಬಂದಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮೂಲಸೌಕರ್ಯಗಳ ಅಭಿವೃದ್ಧಿ ಇನ್ನಷ್ಟು ಆಗಬೇಕಿದೆ. ಇದಕ್ಕಾಗಿ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲು ಸರ್ಕಾರ ಮುಂದಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕಾಯ್ದೆ ತರಲು ಮುಂದಾಗಿದ್ದೇವೆ ಎಂದು ಈ ವೇಳೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಸ್ತಾಪ ಮಾಡಿದರು. ಇದಕ್ಕೆ ವಿಪಕ್ಷಗಳ ಸದಸ್ಯರು ಮೆಚ್ಚುಗೆ ಸೂಚಿಸಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಈ ವಿಧೇಯಕದಲ್ಲಿ ಮೈಸೂರು ದಸರಾ ಅಭಿವೃದ್ಧಿ ಸಮಿತಿಯನ್ನೂ ಸೇರಿಸಿ ಎಂದು ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ರಾಮಲಿಂಗಾ ರೆಡ್ಡಿ ಒಪ್ಪಿಗೆ ಸೂಚಿಸಿದರು.

30 ಹಳೆಯ ಕಾನೂನು ರದ್ದು

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಇದೇ ವೇಳೆ ಮಂಡನೆ ಮಾಡಲಾಯಿತು. ಅಲ್ಲದೆ, ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಮಂಡನೆ ಮಾಡಲಾಗಿದ್ದು, ಇದರನ್ವಯ 30 ಹಳೆಯ ಕಾನೂನುಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.

ಪೊಲೀಸರ ವರ್ಗಾವಣೆ ಅವಧಿ ಕನಿಷ್ಠ 2 ವರ್ಷಕ್ಕೆ ನಿಗದಿ

ಪೊಲೀಸ್ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಅಂಗೀಕಾರವನ್ನು ಪಡೆಯಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ಗಾವಣೆ ಅವಧಿಯು ಕನಿಷ್ಠ ಎರಡು ವರ್ಷಕ್ಕೆ ನಿಗದಿಗೊಳಿಸಲು ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ.

ಇದನ್ನೂ ಓದಿ: Karnataka Budget Session 2024: ಅನಧಿಕೃತ ಹುಕ್ಕಾಬಾರ್‌ ತೆರೆದ್ರೆ 3 ವರ್ಷ ಜೈಲು; ಮಸೂದೆ ಪಾಸ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ರಚಿಸಿ; ಸ್ಪೀಕರ್‌ ಸಲಹೆ

ಈ ವೇಳೆ ಮಾತನಾಡಿದ ಸ್ಪೀಕರ್‌ ಯು.ಟಿ. ಖಾದರ್‌, ಕುಕ್ಕೆ ಸುಬ್ರಹ್ಮಣ್ಯ ದೇಗುಲ ಪ್ರಾಧಿಕಾರ ರಚಿಸಲು ಸಲಹೆ ನೀಡಿದರು. ಅದಕ್ಕೆ ಸ್ಪಂದಿಸಿದ ಸಚಿವ ರಾಮಲಿಂಗಾ ರೆಡ್ಡಿ, ಮುಂದಿನ ಅಧಿವೇಶನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಪ್ರಾಧಿಕಾರಕ್ಕೆ ವಿಧೇಯಕ ತರುವುದಾಗಿ ಭರವಸೆ ನೀಡಿದರು. ಈ ವೇಳೆ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮತ್ತು ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

BY Vijayendra: ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ. ಅಭಿವೃದ್ಧಿ ಇಲ್ಲ. ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ. ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆಯೂ ದಿನೇದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸರ್ಕಾರ ಬಂದ ಬಳಿಕ‌ ಕಲಬುರಗಿಯಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗಿದೆ. 3-4 ತಿಂಗಳಿನಿಂದ 450ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ ಎಂದು ಆತಂಕ ವ್ಯಕ್ತಪಡಿಸಿದರು.

VISTARANEWS.COM


on

Siddaramaiah government performance is zero says BY Vijayendra
Koo

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರ್ಕಾರದ (Congress Government) ಸಾಧನೆ ಶೂನ್ಯ. ಇದು ಕೊಲೆಗಡುಕರ ಸರ್ಕಾರವಾಗಿದೆ. ಕರ್ನಾಟಕ ಎಂದರೆ ಕೊಲೆಗಡುಕರ ಸರ್ಕಾರ ಎಂದು ದೇಶದೆಲ್ಲೆಡೆ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಾತು ಕೇಳುತ್ತಿದೆ. ಕೊಲೆ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದೆ. ಲವ್ ಜಿಹಾದ್ (Love Jihad) ಪ್ರಕರಣದಲ್ಲಿ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದೆ. ಕೊಲೆಗಡುಕರಿಗೆ ಶಕ್ತಿ ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಕಾರಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ. ಅಭಿವೃದ್ಧಿ ಇಲ್ಲ. ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ. ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆಯೂ ದಿನೇದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ, ಮನೆಗೆ ನುಗ್ಗಿ ಅಂಜಲಿ ಹತ್ಯೆ, ಕೊಡಗಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ, ಕೊಡಗಿನಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಾರು ಹರಿಸಿ ಹತ್ಯೆ ಮಾಡಲಾಗಿದೆ. ಈ ಸರ್ಕಾರ ಬಂದ ಬಳಿಕ‌ ಕಲಬುರಗಿಯಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗಿದೆ. 3-4 ತಿಂಗಳಿನಿಂದ 450ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಇದರಿಂದ ರಾಜ್ಯವೇ ದೇಶದ ಮುಂದೆ ತಲೆ ತಗ್ಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿ.ವೈ. ವಿಜಯೇಂದ್ರ ಅಸಮಾಧಾನ ಹೊರಹಾಕಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿಟ್ಟ 25 ಸಾವಿರ ಕೋಟಿ ಮೊತ್ತವನ್ನು ಬೇರೆಡೆಗೆ ವರ್ಗಾವಣೆ ಮಾಡಿ ಅನ್ಯಾಯ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಕೊಡುತ್ತಿದ್ದ 4 ಸಾವಿರವನ್ನು ತಡೆ ಹಿಡಿದಿದ್ದಾರೆ ಎಂದರಲ್ಲದೆ, ಪ್ರಕೃತಿ ವಿಕೋಪ ನಿಧಿಯಡಿ ಎಷ್ಟು ಹಣ ನೀಡಿದ್ದೀರಿ ಎಂದು ಪ್ರಶ್ನಿಸಿದರು. ಬರಗಾಲದ ಸಂದರ್ಭದಲ್ಲೂ 7 ತಾಸು ವಿದ್ಯುತ್ ಕೊಡದ ನಿಷ್ಕ್ರಿಯ ಸರ್ಕಾರ ಇಲ್ಲಿದೆ ಎಂದು‌ ಬಿ.ವೈ. ವಿಜಯೇಂದ್ರ ದೂರಿದರು.

ಅಭಿವೃದ್ಧಿ ಎಂದು ಬಿಂಬಿಸುವ ಕೆಲಸ

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರ್ಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.‌

ರಾಜ್ಯದ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಮಾತನಾಡುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿ ಜತೆ ಜತೆಗೇ ಈ ನಾಡಿನ ಜನಸಾಮಾನ್ಯರೂ ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದೆ ಎಂದು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದರು.

ಬರಗಾಲದ ವಿಚಾರದಲ್ಲಿ ಸರ್ಕಾರದ ನಡವಳಿಕೆ ಅಕ್ಷಮ್ಯ ಅಪರಾಧ

ಗ್ಯಾರಂಟಿಯನ್ನೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ. ಬರಗಾಲದ ವಿಚಾರದಲ್ಲಿ ಸರ್ಕಾರದ ನಡವಳಿಕೆ ಅಕ್ಷಮ್ಯ ಅಪರಾಧ. ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು. ಆದರೆ, ಚುನಾಯಿತ ಸರ್ಕಾರದ ಜವಾಬ್ದಾರಿ‌ ಏನು? ಮುಖ್ಯಮಂತ್ರಿಗಳ ಹೊಣೆ ನಿಭಾಯಿಸುತ್ತಿದ್ದಾರೆ ಎಂದು ರೈತರಿಗೆ ಯಾವತ್ತೂ ಅನಿಸಿಲ್ಲ ಎಂದು ಬಿ.ವೈ.ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಗಂಭೀರವಾದ ಅಥವಾ ಜವಾಬ್ದಾರಿಯುತ ಸ‌ರ್ಕಾರವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಬಗೆಗಿನ ಸರ್ಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಅವರು ತಿಳಿಸಿದರು.‌

ಸಿಎಂ ಒಳಗೊಂಡಂತೆ ಸಚಿವರು ಕರ್ನಾಟಕ ಸರ್ಕಾರ, ಕರ್ನಾಟಕದ ಅಭಿವೃದ್ಧಿ ದೇಶಕ್ಕೇ ಮಾದರಿ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಒಬ್ಬರು ಕಾಂಗ್ರೆಸ್ ನಾಯಕರು ಅಸಾಧ್ಯವಾದುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎನ್ನುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸರ್ಕಾರದ ವೈಫಲ್ಯಗಳನ್ನು ತೆರೆದಿಡುವುದು ನಮ್ಮ ಕರ್ತವ್ಯವೂ ಹೌದು ಎಂದು ನುಡಿದರು.‌

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನ್ನು ಕೇಳಿದರೆ, ಗ್ಯಾರಂಟಿಯೇ ಈ ರಾಜ್ಯದ ಅಭಿವೃದ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಗ್ಯಾರಂಟಿಗೆ ಪ್ರಚಾರ ಕೊಟ್ಟು, ಅದರ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಜತೆ ಸಂಘರ್ಷದ ಹಾದಿ

ಕೇಂದ್ರ ಸರ್ಕಾರದ ಜತೆ ಸಂಘರ್ಷದ ಹಾದಿಯನ್ನು ತೆಗೆದುಕೊಂಡಿರುವುದೇ ಈ ಸರ್ಕಾರದ ಸಾಧನೆಯಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವುದು, ಗೂಬೆ ಕೂರಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆದಿಯಾಗಿ ಎಲ್ಲರೂ ಎಲ್ಲ ವಿಚಾರದಲ್ಲೂ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು ಕೇಂದ್ರ ಸರ್ಕಾರದತ್ತ ಯಶಸ್ವಿಯಾಗಿ ಬೊಟ್ಟು ಮಾಡುತ್ತಾ ಬಂದಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ಬೆಲೆ ಏರಿಕೆಯ ಕೊಡುಗೆಯನ್ನು ರಾಜ್ಯ ಸರಕಾರ ಜನರಿಗೆ ಕೊಟ್ಟಿದೆ. ಸ್ಟ್ಯಾಂಪ್ ಪೇಪರ್ ದರ ಹೆಚ್ಚಳ, ವಿದ್ಯುತ್ ದರ ಏರಿಕೆ, ಪಹಣಿ ಪತ್ರ ಶುಲ್ಕ ಏರಿಕೆ ಮಾಡಿದ್ದಾರೆ. ರೈತರು ಟ್ರಾನ್ಸ್‍ಫಾರ್ಮರ್ ಪಡೆಯಲು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ 25 ಸಾವಿರ ಕಟ್ಟಿದರೆ ಸಾಕಿತ್ತು. ಈಗ ಟಿಸಿ ಪಡೆಯಲು 2.5 ಲಕ್ಷದಿಂದ 3 ಲಕ್ಷ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ರಾಜ್ಯ ಸರಕಾರ ತಂದಿದೆ. ಇದೊಂದು ನೀಚ ನಿರ್ಧಾರ ಎಂದು ಟೀಕಿಸಿದರು. ಬರಗಾಲದ ಸಂದರ್ಭದಲ್ಲೂ ರಾಜ್ಯ ಸರಕಾರವು ರೈತವಿರೋಧಿ ಎಂದು ಸಾಬೀತಾಗಿದೆ ಎಂದರು.

ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿಗೆ ಯಥೇಚ್ಛವಾಗಿ ನೀರು ಬಿಟ್ಟಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ತಮಿಳುನಾಡಿಗೆ ನೀರು ಬಿಟ್ಟು ಬೆಳೆದು ನಿಂತ ಬೆಳೆಗೆ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ಹೋರಾಟ ಮಾಡಿದ ರೈತರನ್ನು ಜೈಲಿಗೆ ಅಟ್ಟುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುವ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು.

ಇದನ್ನೂ ಓದಿ: 2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

ಫಲಿತಾಂಶ ಬಳಿಕ ಹಣೆಬರಹ ಗೊತ್ತಾಗುತ್ತೆ

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಈ ಸರ್ಕಾರದ ಹಣೆಬರಹ ಗೊತ್ತಾಗಲಿದೆ. ಮೋದಿಜೀ ಅವರ ಮೋದಿ ಗ್ಯಾರಂಟಿ ಬಗ್ಗೆ ಜನತೆ ಭರವಸೆ ಇಟ್ಟು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರಕಾರವು ಅಭಿವೃದ್ಧಿಯ ಕಡೆ ಗಮನ ಕೊಡಬೇಕು; ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Reservation in Outsourcing: ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ.

VISTARANEWS.COM


on

Reservation in outsourcing
Koo

ಬೆಂಗಳೂರು: ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು. ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್‌. ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದ್ದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ:

  1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
  3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
  4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
  5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
  6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
  7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
  8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
  9. ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ನಾಯತ್ತ ಸಂಸ್ಥೆಗಳು | ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ | Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

ಈ ಹಿಂದೆ ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಇರಲಿಲ್ಲ. ಆದರೆ, ಮೀಸಲಾತಿ ನೀಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದೆ.

Continue Reading

ವಿಜಯನಗರ

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಸಹೋದರಿಯರು ಶಾಲಾ ಕಾಲೇಜಿಗೆ ಸುರಕ್ಷಿತವಾಗಿ ಹೋಗಿ ಬರುವುದು ಕಷ್ಟವಾಗಿದೆ. ಹುಬ್ಬಳ್ಳಿಯಲ್ಲಿ ಬೆಳಗಿನಜಾವ 6 ಗಂಟೆಗೆ ಅಂಜಲಿ ಎಂಬ ಸಹೋದರಿಯ ಹತ್ಯೆಯಾಗಿದೆ. ಇದಕ್ಕು ಒಂದು ತಿಂಗಳ ಮುನ್ನ ನೇಹ ಹಿರೇಮಠ ಎನ್ನುವ ಸಹೋದರಿಯ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಅರ್ಜುನ ಮಡಿವಾಳರ ಎನ್ನುವ ವ್ಯಾಪಾರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಕಿಡಿಕಾರಿದ್ದಾರೆ.

VISTARANEWS.COM


on

MLC N Ravikumar Spoke in North East Graduate Constituency Election Preliminary meeting in hosapete
Koo

ಹೊಸಪೇಟೆ(ವಿಜಯನಗರ): ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಆದರೆ ಕಾಂಗ್ರೆಸ್‌ನ ಅನೇಕರಲ್ಲಿ ಈ ಬಗ್ಗೆ ಸಂತಸ ಕಾಣುತ್ತಿಲ್ಲ. ಬದಲಾಗಿ ಅನೇಕ ಹಿರಿಯ ಕಾಂಗ್ರೆಸಿಗರಲ್ಲಿ ಅಸಮಾಧಾನ ಇದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ (MLC Election) ಹೇಳಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ವಿಜಯನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸೋಮವಾರ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಒಂದೇ ಸಲಕ್ಕೆ 6 ಸಾವಿರ ರೂಪಾಯಿ ಹಾಕಿದ್ದಾರೆ. ಆಗಲೂ ಕಾಂಗ್ರೆಸ್‌ಗೆ ಮತ ಬೀಳುವುದಿಲ್ಲ ಎನ್ನುವ ಕಾರಣಕ್ಕೆ ಪ್ರತಿ ಮತಕ್ಕೆ ಹಣ ನೀಡಿ ಆಮಿಷ ಒಡ್ಡಿದ್ದಾರೆ. ಕೆಲ ಕ್ಷೇತ್ರದಲ್ಲಿ 300 ಕೋಟಿ ಹಣ ಖರ್ಚು ಮಾಡಿರುವ ಮಾಹಿತಿ ನಮಗಿದೆ ಎಂದು ಆರೋಪಿಸಿದ ಅವರು, ಇಷ್ಟಾದರೂ ಸಹ ಕಾಂಗ್ರೆಸ್‌ಗಿಂತ ಬಿಜೆಪಿಯೇ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಸಹೋದರಿಯರು ಶಾಲಾ ಕಾಲೇಜಿಗೆ ಸುರಕ್ಷಿತವಾಗಿ ಹೋಗಿ ಬರುವುದು ಕಷ್ಟವಾಗಿದೆ. ಹುಬ್ಬಳ್ಳಿಯಲ್ಲಿ ಬೆಳಗಿನಜಾವ 6 ಗಂಟೆಗೆ ಅಂಜಲಿ ಎಂಬ ಸಹೋದರಿಯ ಹತ್ಯೆಯಾಗಿದೆ. ಇದಕ್ಕು ಒಂದು ತಿಂಗಳ ಮುನ್ನ ನೇಹ ಹಿರೇಮಠ ಎನ್ನುವ ಸಹೋದರಿಯ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಅರ್ಜುನ ಮಡಿವಾಳರ ಎನ್ನುವ ವ್ಯಾಪಾರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಕಿಡಿಕಾರಿದರು.

10ನೇ ತರಗತಿ ಫಲಿತಾಂಶ ಗಣನೀಯ ಕುಸಿತ

ಹತ್ತನೇ ತರಗತಿ ಫಲಿತಾಂಶದಲ್ಲಿ ಗಣನೀಯ ಕುಸಿತ ಕಂಡಿದೆ. ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ. ಈ ಸಚಿವನಿಗೆ ಯಾವುದೇ ಗಾಂಭೀರ್ಯ ಇಲ್ಲ. ಶರಣರು, ಸಂತರು ಜನಿಸಿ ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಡಿನಲ್ಲಿ ಇಂತಹ ಸಚಿವ ಶಿಕ್ಷಣ ಖಾತೆ ಮಂತ್ರಿಯಾಗಿರುವುದು ಶೋಚನೀಯ. ರಾಜ್ಯದ ಸಾವಿರಾರು ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ, ಶಿಕ್ಷಕರ ನೇಮಕಾತಿ ಇಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆಯಾಗಬೇಕಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮತ ಹಾಕದಂತೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ರನ್ನು ಗೆಲ್ಲಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಯುದ್ಧೋಪಾದಿಯಲ್ಲಿ ಮತದಾರರ ಮನೆಗೆ ತೆರಳಿ ಪಕ್ಷ ಹಾಗೂ ನನ್ನ ಪರ ಕೆಲಸ ಮಾಡಿದ್ದೀರಿ. ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡುವ ಸಂಕಲ್ಪ ನಮ್ಮದೆಲ್ಲರದ್ದೂ ಇದೆ. ಜನರ ಒಲವು ಬಿಜೆಪಿ ಪರ ಇದೆ. ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದ್ದು, ಇಡೀ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

ಅಮರನಾಥ ಪಾಟೀಲ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಹಾಕಿಸುವ ಮೂಲಕ ಗೆಲ್ಲಿಸೋಣ ಎಂದು ಅವರು ಮನವಿ ಮಾಡಿದರು.

ಪದವೀಧರ ಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಪ್ರಥಮ ಪ್ರಾಶಸ್ತ್ಯದ ಮತ ಹಾಕಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

ಈ ವೇಳೆ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಒಬಿಸಿ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಮುಖಂಡರಾದ ಎಚ್. ಪೂಜಪ್ಪ, ಚಂದ್ರಶೇಖರ ಪಾಟೀಲ ಹಲಗೇರಿ, ಓದೋಗಂಗಪ್ಪ, ಸಂಜೀವರೆಡ್ಡಿ, ಬಲ್ಲಾಹುಣ್ಸಿ ರಾಮಣ್ಣ, ಕಿಚಿಡಿ ಕೊಟ್ರೇಶ್ ಹಾಗೂ ಕೆ.ಎಲ್.‌ ಮಹೇಶ್ವರಸ್ವಾಮಿ, ಸಿದ್ಧಾರ್ಥ ಸಿಂಗ್, ಬಸವರಾಜ ಕರ್ಕಿಹಳ್ಳಿ, ಬಿ. ಶಂಕರ್, ಶಂಕರ್ ಮೇಟಿ, ಸಾಲಿ ಸಿದ್ದಯ್ಯಸ್ವಾಮಿ, ಶಿವಶಂಕರ್ ಸೇರಿದಂತೆ ವಿವಿಧ ಮೋರ್ಚಾಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Phone Tapping: ರಾಜ್ಯ ಸರ್ಕಾರ ರೇವಣ್ಣ-ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Phone Tapping
Koo

ಬೆಂಗಳೂರು: ರಾಜ್ಯ ಸರ್ಕಾರ ಫೋನ್‌ ಟ್ಯಾಪಿಂಗ್‌ (Phone Tapping) ಮಾಡುತ್ತಿದೆ ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಪೋನ್ ಕದ್ದಾಲಿಕೆ ಸರ್ಕಾರ ಮಾಡಿಲ್ಲ. ಅಂಥ ಮುಟ್ಟಾಳ್ ಕೆಲಸ ನಮ್ಮ ಸರ್ಕಾರ ಮಾಡಲ್ಲ. ಫೋನ್‌ ಕದ್ದಾಲಿಸಲು ಅವರೇನು ಭಯೋತ್ಪಾದಕರಾ? ಅವರು ನಮ್ಮ ನಾಯಕರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರೇವಣ್ಣ-ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಸರ್ಕಾರ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇನ್ನು ಸಿಡಿ ಶಿವು ಎಂಬ ಎಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೂ ಅದಕ್ಕೂ ಯಾವುದೇ ತರಹದ ಸಂಬಂಧವಿಲ್ಲ. ಅದಕ್ಕೆ ಉತ್ತರ ಕೊಡುವ ಸಂದರ್ಭ ಇಲ್ಲ. ನನ್ನ ಹೆಸರು ಹೇಳಲಿಲ್ಲ ಅಂದ್ರೆ ಎಂದರೆ ಅವರಿಗೆ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಎಥಿಕ್ಸ್ ಬಿಟ್ಟು ಅನೇಕ ವಿಚಾರಗಳು ಚರ್ಚೆ ಮಾಡುತ್ತೀದ್ದೀರಿ, ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಅವರು ಹೇಳಿದ್ದಾರೆ. ಕಾನೂನು ಇದೆ, ಕಾನೂನು ಪ್ರಕಾರ ನಡೆಯುತ್ತದೆ. ಅವರು ಏನು ಬೇಕಾದರೂ ಹೇಳಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

ದೇವರಾಜೇಗೌಡ- ಶಿವರಾಮೇಗೌಡ ಆಡಿಯೊ ಲೀಕ್ ವಿಚಾರಕ್ಕೆ ಸ್ಪಂದಿಸಿ, ನಮಗೆ ಸಂಬಂಧವಿಲ್ಲ, ನೀವು ಉಂಟು ಅವರುಂಟು. ನೀವು ಮಾತನಾಡಬಹುದು, ನಾನು ಯಾರ ಬಳಿಯೂ ಮಾತನಾಡಿಲ್ಲ. ನಾನು ಯಾರಿಗೂ ಜಿಪಿಎ ಕೊಟ್ಟಿಲ್ಲ. ನಾನು ರಾಜಕಾರಣಿ, ನೂರಾರು ಜನ ಬಿಜೆಪಿ, ದಳ, ಸಾರ್ವಜನಿಕರು, ಅಧಿಕಾರಿಗಳು ಭೇಟಿ ಮಾಡಲು ಬರುತ್ತಾರೆ. ಏನೇನು ಮಾಹಿತಿ ಕೊಡಬೇಕು ಎಂದು ಬರುತ್ತಾರೆ. ಅವರು ಬಿಜೆಪಿಯವರು (ದೇವರಾಜೇಗೌಡ) ಭೇಟಿ ಮಾಡಲು ಸಮಯ ಕೇಳಿದ್ದರು. ನಾನು ಸಮಯ ಕೊಡಲಿಲ್ಲ, ಬಂದರೂ ಒಂದು ನಿಮಿಷ ಯಾರದೋ ಹತ್ತಿರ ಮಾತನಾಡಿದ್ರು, ನಾನು ಒಂದು ನಿಮಿಷವೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರಿಕ ಪ್ರಜ್ಞೆ ಇದೆ. ಅದನ್ನು ಇನ್ನೊಂದು ಸಾರಿ ಆ ಸುದ್ದಿನ ನನ್ನ ಬಳಿ ಕೇಳಬೇಡಿ ಎಂದು ಹೇಳಿದರು.

ತಿಹಾರ್ ಜೈಲಿಗೆ ಹೋದಾಗ ತಾಯಿಗೆ ಸಾಂತ್ವನ ಹೇಳಿದ್ದೆ ಎಂಬ ಎಚ್‌ಡಿಕೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಸಾರಿ ಅವರ ಪರಿಸ್ಥಿತಿ ನೋಡಿ ಅಯ್ಯೋ ಅನ್ನಿಸುತ್ತಿದೆ. ನಾನು ಅವತ್ತು ಹೇಳಿದ್ದೇನೆ, ಇವತ್ತೂ ಹೇಳ್ತೀನಿ, ಮುಂದಕ್ಕೂ ಹೇಳ್ತೀನಿ ಎಂದರು.

ಒಂದು ವರ್ಷ ಸರ್ಕಾರ ಐಸಿಯುನಲ್ಲಿತ್ತು ಎಂಬ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಏನಾಯ್ತು ಅಂತ ಜನ ಹೇಳಬೇಕು, ನಾಯಕರು ಹೇಳೋದಲ್ಲ. ಹೆಣ್ಣು ಮಕ್ಕಳು ಬದುಕಿನಲ್ಲಿ ಬದಲಾವಣೆ ಯಾವ ಮಟ್ಟಕ್ಕೆ ಆಗಿದೆ ಅಂತ ತಾಯಂದಿರು ಹೇಳಬೇಕು. ಎಲೆಕ್ಷನ್‌ಗೂ ಮುಂಚೆ ಕುಮಾರಸ್ವಾಮಿಯವರೇ ನುಡಿಮುತ್ತು ಹೇಳಿದ್ರಲ್ಲ. ಅವರ ನುಡಿಮುತ್ತುಗಳು ಅವರ ಪಾರ್ಟಿಯ ನುಡಿಮುತ್ತುಗಳು ನಿಮ್ಮ ಹತ್ತಿರ ದಾಖಲೆ ಇದೆಯಲ್ಲ. ನಮ್ಮ ಬಗ್ಗೆ ಅವರು ಹೇಳಲೇಬೇಕು, ನಮ್ಮ ಬಗ್ಗೆ ಶಹಬ್ಬಾಷ್ ಗಿರಿ ಕೊಡಿ ಅಂತ ಕೇಳಕ್ಕಾಗಲ್ಲ, ಕೇಳೋದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ | HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ನಿಮ್ಮೆಲ್ಲರ ಸಹಕಾರ, ಜನರಿಗೆ ಬಹಳ ತೃಪ್ತಿಕರವಾಗಿ ಸರ್ಕಾರ ನಡೆಸಿದ್ದೇವೆ. ಬರೀ ಗ್ಯಾರಂಟಿ ಒಂದೇ ಅಲ್ಲ, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಗಲ್ಲು ಹಾಕಿದ್ದೇವೆ. ಎಲೆಕ್ಷನ್ ಮತ್ತೆ ಬಂತು, ಮುಂದೆ ಅವನ್ನು ಕಾರ್ಯರೂಪಕ್ಕೆ ತರಲು ಸಜ್ಜಾಗಿದ್ದೇವೆ. ಸಿಎಂ ಸಹ ಮೊನ್ನೆ ಸಭೆ ನಡೆಸಿ, ಟೆಂಡರ್ ಕರೆಯಲು ಹೇಳಿದ್ದಾರೆ ಎಂದು ತಿಳಿಸಿದರು.

Continue Reading
Advertisement
Karnataka weather Forecast
ಕರ್ನಾಟಕ14 mins ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ17 mins ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ23 mins ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ30 mins ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ43 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ45 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ51 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ53 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ1 hour ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ1 hour ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌