Job for Kannadigas: ನೋಟಿಸ್ ಬೋರ್ಡ್‌ನಲ್ಲಿ ಕನ್ನಡಿಗರಿಗೆ ನೀಡಿದ ಉದ್ಯೋಗದ ಮಾಹಿತಿ ಪ್ರದರ್ಶನ: ಸಮಿತಿ ರಚಿಸಿದ ತಂಗಡಗಿ - Vistara News

ರಾಜಕೀಯ

Job for Kannadigas: ನೋಟಿಸ್ ಬೋರ್ಡ್‌ನಲ್ಲಿ ಕನ್ನಡಿಗರಿಗೆ ನೀಡಿದ ಉದ್ಯೋಗದ ಮಾಹಿತಿ ಪ್ರದರ್ಶನ: ಸಮಿತಿ ರಚಿಸಿದ ತಂಗಡಗಿ

Job for Kannadigas: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಎಮ್‌ಎನ್‌ಸಿ (ಬಹುರಾಷ್ಟ್ರೀಯ) ಕಂಪನಿಗಳು ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು (ಡೇಟಾ) ತಮ್ಮ ಕಚೇರಿಯ ಆವರಣದ ನೋಟಿಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ರಾಜ್ಯ ಸರ್ಕಾರ ಮುಂದಾಗಿದೆ.

VISTARANEWS.COM


on

Job for Kannadigas Display of job information given to Kannadigas on notice board Thangadagi forms committee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಎಮ್‌ಎನ್‌ಸಿ (ಬಹುರಾಷ್ಟ್ರೀಯ) ಕಂಪನಿಗಳು (MNC Companies) ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು (ಡೇಟಾ) ತಮ್ಮ ಕಚೇರಿಯ ಆವರಣದ ನೋಟಿಸ್ ಬೋರ್ಡ್‌ನಲ್ಲಿ (Job for Kannadigas) ಕಡ್ಡಾಯವಾಗಿ ಪ್ರದರ್ಶಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಎರಡು ದಿನಗಳ ಹಿಂದಷ್ಟೇ ಸದನದಲ್ಲಿ ಉತ್ತರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ (Shivaraj Thangadagi) ಈ ನಿಟ್ಟಿನಲ್ಲಿ ಕ್ರಮ ವಹಿಸಿದ್ದಾರೆ. ಈಗ ಶಿವರಾಜ ತಂಗಡಗಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಿದ್ದಾರೆ.

ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಭಾಷೆಯಲ್ಲಿ ಇರಬೇಕು ಎಂಬುದು ಸೇರಿದಂತೆ ಕನ್ನಡಿಗರ ಉದ್ಯೋಗದ ಬಗ್ಗೆ ಖಾತ್ರಿಪಡಿಸಲು ತರಲಾದ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2024’ ಕುರಿತು ವಿಧಾನ ಪರಿಷತ್ತಿನಲ್ಲಿ ಚರ್ಚೆ ನಡೆದಿತ್ತು. ಈಗ ಈ ನಿಟ್ಟಿನಲ್ಲಿ ಕ್ರಮವಹಿಸಲು ಸರ್ಕಾರ ಮುಂದಾಗಿದೆ.

ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು ನೇಮಿಸಿಕೊಂಡಿರುವ ಕನ್ನಡಿಗರ ದತ್ತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಈಗ ರೂಪುಗೊಂಡಿರುವ ಸಮಿತಿಯು ಇದಕ್ಕೊಂದು ರೂಪುರೇಷೆಯನ್ನು ಸಿದ್ಧಪಡಿಸಲಿದೆ ಎನ್ನಲಾಗಿದೆ.

ಈ ಬಗ್ಗೆ ಸಚಿವ ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಎಂಎನ್‌ಸಿ ಕಂಪನಿಗಳಲ್ಲಿ ನೇಮಕಗೊಂಡ ಕನ್ನಡಿಗ ಉದ್ಯೋಗಿಗಳ ದತ್ತಾಂಶವನ್ನು ಆಯಾ ಕಂಪನಿಗಳ ಆವರಣದಲ್ಲಿ ಬೋರ್ಡ್‌ ಮೂಲಕ ಪ್ರದರ್ಶನ ಮಾಡಬೇಕು ಎಂಬ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಕಾರ್ಯವಿಧಾನ ಹೇಗಿರಬೇಕು? ಎಂಬ ಬಗ್ಗೆ ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದು, ಅನೇಕ ಇಲಾಖೆಗಳ ಕಾರ್ಯದರ್ಶಿಗಳ ಸಲಹೆಯನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ನಿಯಮಗಳನ್ನು ರೂಪಿಸಿ ಕೈಗಾರಿಕೆಗಳು ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.

ಏನಿದರ ಕಾನೂನು ಉದ್ದೇಶ?

ಕರ್ನಾಟಕದಲ್ಲಿರುವ ಕೈಗಾರಿಕೆಗಳು ಉದ್ದಿಮೆ ಸಂಸ್ಥೆಗಳಲ್ಲಿ ಉದ್ಯೋಗಿಗಳ ಭಾಷಿಕ ವಿವರವನ್ನು ಡ್ಯಾಷ್‌ಬೋರ್ಡ್‌ನಲ್ಲಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದರಿಂದ ಉದ್ದಿಮೆ ಆರಂಭಿಸಿದವರು ಯಾವ ಯಾವ ಭಾಷೆಯವರಿಗೆ ಉದ್ಯೋಗ ನೀಡಿದ್ದಾರೆ. ಅದರಲ್ಲಿ ಕನ್ನಡಿಗರ ಸಂಖ್ಯೆ ಎಷ್ಟು ಎಂಬುದನ್ನು ಎಲ್ಲರಿಗೂ ಗೊತ್ತಾಗುವ ರೀತಿಯಲ್ಲಿ ಡ್ಯಾಷ್‌ ಬೋರ್ಡ್‌ನಲ್ಲಿ ಪ್ರಕಟಿಸುವಂತೆ ಕ್ರಮ ಕೈಗೊಳ್ಳುವುದು ಇದರ ಹಿಂದಿರುವ ಉದ್ದೇಶವಾಗಿದೆ.

ಕನ್ನಡ ನಾಮಫಲಕ ಕಡ್ಡಾಯಕ್ಕೆ ತಗಾದೆ ತೆಗೆದ ಮಹಾರಾಷ್ಟ್ರ, ಕೇಸ್‌ ಹಾಕಲು ಚಿಂತನೆ

ಕನ್ನಡದ ವಿಚಾರದಲ್ಲಿ ರಾಜ್ಯದೊಂದಿಗೆ ಮಹಾರಾಷ್ಟ್ರ ಸರ್ಕಾರ (Maharashtra Government) ಹೊಸದೊಂದು ತಗಾದೆ ತೆಗೆಯುತ್ತಿದೆ. ರಾಜ್ಯದ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ (60% Kannada in signboards mandatory) ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರದ (Karnataka Government) ನಡೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಪ್ರಶ್ನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ಕರ್ನಾಟಕ ವಿಧಾನ ಪರಿಷತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ಅನ್ನು ಅಂಗೀಕರಿಸಿದ ಒಂದು ದಿನದ ನಂತರ, ಮಹಾರಾಷ್ಟ್ರ ಸರ್ಕಾರವು ಅದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ರಾಜ್ಯದ ಎಲ್ಲ ಫಲಕಗಳು, ಸೈನ್‌ಬೋರ್ಡ್‌ಗಳಲ್ಲಿ 60 ಪ್ರತಿಶತ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ವಿಧೇಯಕದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಜ್ಜಾಗಿದ್ದು, ಫೆಬ್ರವರಿ 21ರಂದು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಣಯಕ್ಕೆ ಬಂದಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಸರ್ಕಾರದ ನಡೆ ವಿರುದ್ಧ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಕ್ಷೇಪ ವ್ಯಕ್ತಪಡಿಸಿತ್ತು.

ಕರ್ನಾಟಕ- ಮಹಾರಾಷ್ಟ್ರ ಅಂತಾರಾಜ್ಯ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಚಿಂತನೆ ನಡೆದಿದೆ. ಅಂತಾರಾಜ್ಯ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಕರ್ನಾಟಕ ಸರ್ಕಾರ ವಿವಾದಿತ ಪ್ರದೇಶಗಳಲ್ಲಿ, ಮುಖ್ಯವಾಗಿ ಕರ್ನಾಟಕದ ನಾಲ್ಕು ಗಡಿ ಜಿಲ್ಲೆಗಳಲ್ಲಿ ಈ ಕಾಯಿದೆಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂಬುದು ಮಹಾರಾಷ್ಟ್ರ ಸರ್ಕಾರ ಮತ್ತು ಎಂಇಎಸ್‌ನ ವಾದವಾಗಿದೆ.

ಬೆಳಗಾವಿಯಲ್ಲಿನ ಎಂಇಎಸ್ ನಿಯೋಗ ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕೊಲ್ಲಾಪುರದಲ್ಲಿ ಭೇಟಿ ಮಾಡಿದೆ. “ಕರ್ನಾಟಕದಲ್ಲಿ ಮರಾಠಿಗರು ಎದುರಿಸುತ್ತಿರುವ ಮಾನಸಿಕ ಕಿರುಕುಳದ ಬಗ್ಗೆ ನಾವು ಸಿಎಂಗೆ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ವ್ಯಾಪಾರದ ನಾಮಫಲಕಗಳಲ್ಲಿ 60% ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವುದು ಇತ್ಯಾದಿ ನಿಯಮಗಳು ಮರಾಠಿ ನಾಗರಿಕರಿಗೆ ಅವರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸಿದಂತೆʼʼ ಎಂದು ಎಂಇಎಸ್ ವಕ್ತಾರ ವಿಕಾಸ ಕಲಘಟಗಿ ಹೇಳಿದ್ದಾರೆ.

“ಮುಖ್ಯಮಂತ್ರಿಯವರು ವ್ಯಾಪಾರ ನಾಮ ಫಲಕಗಳಲ್ಲಿ ಕನ್ನಡ ಭಾಷೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲು ಬದ್ಧರಾಗಿದ್ದಾರೆ” ಎಂದು ಕಲಘಟಗಿ ಹೇಳಿದರು.

ಕನ್ನಡ ನಾಮಫಲಕ ಅಳವಡಿಕೆಗೆ ಫೆ.28 ಕೊನೆಯ ದಿನ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ ಅನ್ವಯ ಬೆಂಗಳೂರು ಹಾಗೂ ರಾಜ್ಯದ ಎಲ್ಲ ಅಂಗಡಿ ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ ಮಾಡಲಾಗಿದ್ದು, ಇದನ್ನು ಅಳವಡಿಸಲು ಫೆ.28 ಕೊನೆಯ ದಿನವಾಗಿದೆ.

“ಈ ಆದೇಶ ಪಾಲನೆ ಮಾಡದವರ ಪರವಾನಗಿ ರದ್ದು ಮಾಡುವುದು ಅನಿವಾರ್ಯವಾಗಲಿದೆ. ಕನ್ನಡ ನಾಮಫಲಕ ಅಳವಡಿಸಿದವರಿಗೆ ಬಿಬಿಎಂಪಿ ವತಿಯಿಂದ ಅಭಿನಂದನಾ ಪತ್ರ ನೀಡಲಾಗುವುದು” ಎಂದು ಬಿಬಿಎಂಪಿ ಪ್ರಕಟಣೆ ನೀಡಿದೆ.

ಇದನ್ನೂ ಓದಿ: ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸ್‌; ರಾಜ್ಯಪಾಲರು ಮರುಪರಿಶೀಲಿಸಲಿ ಎಂದ ಡಿಕೆಶಿ

ಗಡಿ ವಿವಾದ ಸಭೆ

ಈ ನಡುವೆ, ಮಹಾರಾಷ್ಟ್ರ ಸರ್ಕಾರ ಅಂತಾರಾಜ್ಯ ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿರುವ ಮೊಕದ್ದಮೆಯನ್ನು ಬಲಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಕರ್ನಾಟಕ ಸರ್ಕಾರ 20 ಮೇ 2023ರಂದು ಅಧಿಕಾರ ವಹಿಸಿಕೊಂಡಾಗಿನಿಂದ ಅಂತಾರಾಜ್ಯ ಗಡಿ ವಿವಾದದ ಬಗ್ಗೆ ಒಂದೇ ಒಂದು ಸಭೆ ನಡೆಸಿಲ್ಲ. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಈ ಬೆಳವಣಿಗೆಗಳ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ತಾಕೀತು ಮಾಡಿದ್ದು, ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

HD Kumaraswamy: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಭಾರತೀಯ ಉಕ್ಕು ಪ್ರಾಧಿಕಾರದ ಬಗ್ಗೆ ಮಾಹಿತಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಕಬ್ಬಿಣ ಮತ್ತು ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡಲು ಮನವಿ ಮಾಡಿದ್ದಾರೆ.

VISTARANEWS.COM


on

HD Kumaraswamy
Koo

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಭಾರತೀಯ ಉಕ್ಕು ಪ್ರಾಧಿಕಾರದ (Steel Authority of India Limited (SAIL)) ಅಧ್ಯಕ್ಷ ಅಮರೀಂದು ಪ್ರಕಾಶ್ ಸೇರಿ ವಿವಿಧ ಅಧಿಕಾರಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನೂತನ ಸಚಿವರಿಗೆ ಭಾರತೀಯ ಉಕ್ಕು ಪ್ರಾಧಿಕಾರದ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಸಂಸ್ಥೆಯ ಯೋಜನೆಗಳು, ಚಟುವಟಿಕೆಗಳ ಬಗ್ಗೆ ತಿಳಿಸಿದ್ದಾರೆ. ಬಿಲಾಯ್ ಸೇರಿ ಇನ್ನಿತರೆ ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡುವಂತೆ ಸಚಿವರನ್ನು ಅಧಿಕಾರಿಗಳು ಕೋರಿದ್ದಾರೆ. ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಅಧಿಕಾರಿಗಳ ಜತೆ ಪ್ರಮುಖವಾಗಿ ಸಚಿವ ಎಚ್‌.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

ಸೋಮವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರು, ನಿರುದ್ಯೋಗ ಸೇರಿ ದೇಶದ ಇತರ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಮುಂದಿನ 15 ದಿನದಲ್ಲಿ ಬೃಹತ್ ಕೈಗಾರಿಕಾ ಇಲಾಖೆ ಕುರಿತು ವಿಷನ್ ಡಾಕ್ಯುಮೆಂಟ್ ಸಿದ್ದಪಡಿಸಲಿದ್ದೇನೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನ ಪಡೆದು ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದರು.

ಉತ್ಪಾದನಾ ಕ್ಷೇತ್ರದಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಇಲಾಖೆಯಲ್ಲೂ ಹೊಸ ಬದಲಾವಣೆ ತರಲು ಪ್ರಯತ್ನ ಮಾಡು ತ್ತೇನೆ. ಇದಕ್ಕಾಗಿ ದೇಶಾದ್ಯಂತ ಸುತ್ತಾ ಡಲು ನಿರ್ಧರಿಸಿದ್ದೇನೆ. ಉದ್ಯಮಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನನ್ನ ಮುಂದೆ ದೊಡ್ಡ ಸವಾಲಿದೆ. ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಕರ್ನಾಟಕದಲ್ಲೂ ವಿಐಎಸ್‌ಎಲ್ ಸೇರಿ ಹಲವಾರು ಸಮಸ್ಯೆಗಳಿವೆ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಪ್ರಾಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ನನ್ನದೇ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದರು.

Continue Reading

ದೇಶ

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Narendra Modi: ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಸೋಮವಾರ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು. ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಕ್ಯಾಬಿನೆಟ್‌ನ ಭಾಗವಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ 71 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಯಿತು (Cabinet 3.0). ಈ ವೇಳೆ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಮತ್ತು ನಿಮ್ಮ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಗತ್ಯವಿದ್ದಾಗ ಮಾತ್ರ ಮಾತನಾಡಿ” ಎಂದು ನಲಹೆ ನೀಡಿದರು.

“ಸಮಯಕ್ಕೆ ಸರಿಯಾಗಿ ಸಚಿವಾಲಯವನ್ನು ತಲುಪಬೇಕು. ಇದು ಕಚೇರಿ ಸಿಬ್ಬಂದಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆʼʼ ಎಂದು ಪ್ರಧಾನಿ ಕೇಂದ್ರ ಸಚಿವರಿಗೆ ಕಿವಿ ಮಾತು ಹೇಳಿದರು. “ಕಡತದ ಬಗ್ಗೆ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಂದಿಗೆ ಚರ್ಚೆ ನಡೆಸಿ. ಅವರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಿ” ಎಂದು ಮೋದಿ ಸಚಿವರಿಗೆ ಸಲಹೆ ನೀಡಿದರು.

ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇನ್ನು ಆರಂಭದಲ್ಲಿ ಅವರು ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಮೋದಿ ಸಹಿ ಹಾಕಿದ್ದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದ್ದರು. ಈ ಯೋಜನೆ ಮೂಲಕ 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಪ್ರತಿಭಾ ಪಾಟೀಲ್‌, ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಸೋಮವಾರ ಅಧಿಕಾರ ವಹಿಸಿಕೊಂಡ ಕೂಡಲೇ ಮೋದಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಇದನ್ನೂ ಓದಿ: Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು. ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

Continue Reading

Lok Sabha Election 2024

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Narendra Modi: ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಮರಳಿ ಬಂದಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಸೋಮವಾರ ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ ಮತ್ತು ಎಚ್‌.ಡಿ.ದೇವೇಗೌಡ ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

VISTARANEWS.COM


on

Narenda Modi
Koo

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಸೋಮವಾರ (ಜೂನ್‌ 10) ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 30 ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿದಂತೆ ಇತರ 71 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು.

ಸದ್ಯ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇವೇಗೌಡ ಅವರ ಜೆಡಿಎಸ್‌ ಬೆಂಬಲ ನೀಡಿದೆ. ಕರ್ನಾಟಕದಲ್ಲಿ ಮೂರು ಕಡೆ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿಗಳ ಪೈಕಿ ಇಬ್ಬರು ಜಯ ಗಳಿಸಿದ್ದಾರೆ. ಈ ಪೈಕಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

ರಾಜ್ಯಕ್ಕೆ 5 ಸಚಿವ ಸ್ಥಾನ

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

Continue Reading

ಪ್ರಮುಖ ಸುದ್ದಿ

salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

salaries of prime minister ಸಂಬಳದ ವಿಷಯಕ್ಕೆ ಬಂದಾಗ ಎಲ್ಲರ ತಲೆಯಲ್ಲಿಯೂ ಒಂದು ಯೋಚನೆ ಇರುತ್ತದೆ. ಈ ದೇಶದ ಆಡಳಿತವನ್ನು ನಡೆಸುವ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳಿಗೆ ಸಂಬಳ ಎಷ್ಟಿರಬಹುದು ಎಂದು. ಅವರ ಸಂಬಳ, ಸಿಗುವ ಸವಲತ್ತುಗಳ ಕುರಿತು ಒಂದಷ್ಟು ಮಾಹಿತಿಗಳು ಇಲ್ಲಿವೆ ನೋಡಿ. ಪ್ರಧಾನಿ ಮತ್ತು ರಾಷ್ಟ್ರಪತಿಗೆ ಇರುವ ಸೌಕರ್ಯದ ಮಾಹಿತಿಯನ್ನು ತಿಳಿದುಕೊಂಡಿರಿ.

VISTARANEWS.COM


on

salaries of prime minister
Koo

ದೆಹಲಿ: ನೀವು ಯಾವುದಾದರೂ ಕೆಲಸದಲ್ಲಿ ಇದ್ದರೆ ನಿಮಗೆಷ್ಟು ಸಂಬಳ ಕೊಡುತ್ತಾರೆ ಎಂದು ಯಾರಾದರೂ ಕೇಳಿಯೇ ಕೇಳುತ್ತಾರೆ. ಕೆಲಸಕ್ಕಿಂತ ಹೆಚ್ಚಾಗಿ ಸಂಬಳವೇ ಎಲ್ಲರ ಕಣ್ಣನ್ನು ಸೆಳೆಯುತ್ತದೆ. ಇನ್ನು ಕೆಲವರಿಗೆ ಹೀಗೆ ಕೇಳುವುದು ಒಂದು ಕುತೂಹಲವಾಗಿರುತ್ತದೆ. ಸಣ್ಣಪುಟ್ಟ ಕಂಪನಿಯಲ್ಲಿ ಕೆಲಸ ಮಾಡುವವರನ್ನು ಬಿಡದವರು ಇನ್ನು ದೇಶದ ಆಡಳಿತದ ಚುಕ್ಕಾಣಿ ಹಿಡಿದವರನ್ನು ಬಿಡುತ್ತಾರಾ….? ದೇಶದಲ್ಲಿ ಹಲವಾರು ಉನ್ನತ ಹುದ್ದೆಗಳಿವೆ. ಅದರಲ್ಲಿ ದೇಶದ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಬಹಳ ಮುಖ್ಯವಾದ ಹುದ್ದೆಗಳಾಗಿವೆ. ಸಾಮಾನ್ಯ ಹುದ್ದೆಗಳನ್ನು ಪಡೆದಿರುವವರಿಗೆ ತಿಂಗಳಿಗೆ ಕೈತುಂಬಾ ಸಂಬಳ ಬರುತ್ತದೆ. ಹಾಗಾದ್ರೆ ದೇಶದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಹುದ್ದೆಗೆ ಎಷ್ಟು ಸಂಬಳವಿರಬಹುದು (salaries of prime minister) ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ವಿವರ ಇಲ್ಲಿದೆ ನೋಡಿ.

ರಾಷ್ಟ್ರಪತಿ

ದೇಶದ ಮೂರು ಉನ್ನತ ಹುದ್ದೆಗಳಲ್ಲಿ ರಾಷ್ಟ್ರಪತಿ ಹುದ್ದೆ ಒಂದು. 2018ರಲ್ಲಿ ಭಾರತದ ರಾಷ್ಟ್ರಪತಿಗಳ ವೇತನವನ್ನು ತಿಂಗಳಿಗೆ 1.50 ಲಕ್ಷದಿಂದ 5 ಲಕ್ಷಕ್ಕೆ ಪರಿಷ್ಕರಿಸಲಾಯಿತು.  ಹಾಗೇ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ನಲ್ಲಿ ಭಾರತೀಯ ರಾಷ್ಟ್ರಪತಿಗಳ ಗೌರವಧನವನ್ನು ಜನವರಿ 2006ರಿಂದ ಜಾರಿಗೆ ಬರುವಂತೆ ಕೊನೆಯ ಬಾರಿಗೆ ಪರಿಷ್ಕರಿಸಲಾಗಿರುವುದಾಗಿ ತಿಳಿಸಿದ್ದರು. ಹಾಗಾಗಿ ಗೃಹ ವ್ಯವಹಾರ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ  ರಾಷ್ಟ್ರಪತಿಗಳ ಸವಲತ್ತಿನ ವಿವರ ಹೀಗಿದೆ:

-ರಾಷ್ಟ್ರಪತಿ ವಿಮಾನ, ರೈಲು ಅಥವಾ ಸ್ಟೀಮರ್ ಗಳ ಮೂಲಕ ದೇಶದ ಯಾವ ಪ್ರದೇಶಕ್ಕೂ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು. ಹಾಗೇ ಅವರ ಜೊತೆ ಸಹಾಯಕ್ಕಾಗಿ ಒಬ್ಬ ವ್ಯಕ್ತಿಯನ್ನು ಕರೆತರಬಹುದಾಗಿದೆ. ಅವರ ಖರ್ಚನ್ನು ಸರ್ಕಾರವೇ ಭರಿಸುತ್ತದೆ.

-ರಾಷ್ಟ್ರಪತಿ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ಪಡೆಯಬಹುದಾಗಿದೆ.

-ಸುಸಜ್ಜಿತ ಬಾಡಿಗೆ ಮುಕ್ತ ಮನೆ, ಎರಡು ಉಚಿತ ಲ್ಯಾಂಡ್ ಲೈನ್ ಗಳು ( ಇದರಲ್ಲಿ ಒಂದು ಇಂಟರ್ ನೆಟ್ ಸಂಪರ್ಕಕ್ಕಾಗಿ ), ಮೊಬೈಲ್ ಫೋನ್, ಮನೆಯ ನಿರ್ವಹಣೆಯ ಜೊತೆಗೆ ಐದು ವೈಯಕ್ತಿಕ ಸಿಬ್ಬಂದಿಗಳನ್ನು ನೀಡಲಾಗುತ್ತದೆ.

-ಒಂದು ವೇಳೆ ರಾಷ್ಟ್ರಪತಿ, ಹುದ್ದೆಯಲ್ಲಿರುವಾಗಲೇ ಮರಣ ಹೊಂದಿದರೆ ಅವರ ಸಂಗಾತಿಗೆ ನಿವೃತ್ತಿಯ ವೇಳೆ ರಾಷ್ಟ್ರಪತಿಗೆ ನೀಡಲಾಗುವಂತಹ ಕುಟುಂಬ ಪಿಂಚಣಿಯನ್ನು ಐವತ್ತು ಪ್ರತಿಶತ ಪಿಂಚಣಿ ದರದಲ್ಲಿ ಜೀವಮಾನವಿಡೀ ನೀಡಲಾಗುವುದು.

-ಹಾಗೇ ರಾಷ್ಟ್ರಪತಿಯ ಸಂಗಾತಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಸಹ ನೀಡಲಾಗುವುದು.

ಉಪರಾಷ್ಟ್ರಪತಿ

ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಉಪರಾಷ್ಟ್ರಪತಿಯ ಗೌರವಧನವನ್ನು ತಿಂಗಳಿಗೆ 1.25 ಲಕ್ಷದಿಂದ 4 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದರು. ಅದಕ್ಕೆ ಸಂಬಂಧಿಸಿದ ಸವಲತ್ತುಗಳ ವಿವರ ಇಲ್ಲಿದೆ:

– ಉಪರಾಷ್ಟ್ರಪತಿಯು ಉಚಿತ ವಸತಿ, ವೈಯಕ್ತಿಕ ಭದ್ರತೆ, ವೈದ್ಯಕೀಯ ಆರೈಕೆ, ರೈಲು ಮತ್ತು ವಿಮಾನ ಪ್ರಯಾಣ, ಸ್ಥಿರ ದೂರವಾಣಿ ಸಂಪರ್ಕ, ಮೊಬೈಲ್ ಫೋನ್ ಸೇವೆ ಮತ್ತು ಸಿಬ್ಬಂದಿಯನ್ನು ಪಡೆಯಬಹುದಾಗಿದೆ.

-ನಿವೃತ್ತಿಯ ನಂತರ ಅವರು ಖಾಸಗಿ ಕಾರ್ಯದರ್ಶಿ, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ, ವೈಯಕ್ತಿಕ ಸಹಾಯಕ ಮತ್ತು ಇಬ್ಬರು ಪ್ಯೂನ್ ಗಳನ್ನು ಒಳಗೊಂಡಿರುವ ಕಾರ್ಯದರ್ಶಿ ಸಿಬ್ಬಂದಿಯನ್ನು ಹೊಂದಬಹುದಾಗಿದೆ. ಮತ್ತು ಅಂತಹ ಕಾರ್ಯದರ್ಶಿ ಸಿಬ್ಬಂದಿಗಳ ನಿರ್ವಹಣೆಗಾಗಿ ಅವರು ಸಂಬಳವನ್ನು ನೀಡಬೇಕಾಗುತ್ತದೆಯಂತೆ.

ಇದನ್ನೂ ಓದಿ:Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

ಪ್ರಧಾನ ಮಂತ್ರಿ

ಭಾರತದ ಪ್ರಧಾನ ಮಂತ್ರಿಗಳು ತಿಂಗಳಿಗೆ 1.66 ಲಕ್ಷ ರೂ. ಸಂಬಳವನ್ನು ಪಡೆಯುತ್ತಾರೆ. ಇತರ ಭತ್ಯೆಗಳು ಬೇರೆ ಇರುತ್ತವೆ. ಅವರಿಗೆ ನೀಡಲಾದ ಸವಲತ್ತುಗಳ ವಿವರ ಇಲ್ಲಿದೆ:

-ಅವರ ಭದ್ರತೆಗೆ ವೈಯಕ್ತಿಕ ಸಿಬ್ಬಂದಿಗಳ ವಿಶೇಷ ರಕ್ಷಣಾ ತಡವನ್ನು ನಿಯೋಜಿಸಲಾಗುತ್ತದೆ.

-ಪ್ರಧಾನಿಯವರು ಪ್ರಯಾಣಿಸಲು ಒಂದು ವಿಶೇಷವಾದ ವಿಮಾನ –ಏರ್ ಇಂಡಿಯಾ ಒನ್ ಅನ್ನು ನೀಡಲಾಗುತ್ತದೆ.

– ರೇಸ್ ಕೋರ್ಸ್ ರಸ್ತೆಯ 7 ರಲ್ಲಿ ಅವರಿಗೆ ಅಧಿಕೃತ ನಿವಾಸವನ್ನು ನೀಡಲಾಗುತ್ತದೆ.

  • – ಉಚಿತ ವೈದ್ಯಕೀಯ ಸೌಲಭ್ಯ, ಉಚಿತ ಸಾರಿಗೆ ಸೌಲಭ್ಯ ಇತ್ಯಾದಿ ಸೌಕರ್ಯಗಳು ಪ್ರಧಾನಿಗಿರುತ್ತವೆ.
  • – ನಿವೃತ್ತಿಯ ಬಳಿಕವೂ ಪ್ರಧಾನಿಯಾಗಿದ್ದವರು ಮತ್ತು ಅವರ ಕುಟುಂಬಕ್ಕೆ ಉಚಿತ ಸೌಕರ್ಯ ಮುಂದುವರಿಯುತ್ತವೆ.
Continue Reading
Advertisement
Paris Olympics 2024
ಕ್ರೀಡೆ3 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

Parliament Session 2024
ದೇಶ33 mins ago

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

HD Kumaraswamy
ಕರ್ನಾಟಕ38 mins ago

HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

Narendra Modi
ದೇಶ48 mins ago

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Actor Darshan
ಸಿನಿಮಾ58 mins ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Danielle Wyatt Marriage
ಕ್ರೀಡೆ1 hour ago

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Actor Darshan
ಕರ್ನಾಟಕ1 hour ago

Actor Darshan: ಒಂದಲ್ಲ, ಎರಡಲ್ಲ, 3 ಕೇಸ್‌ಗಳಲ್ಲಿ ದರ್ಶನ್‌ಗೆ ಸಂಕಷ್ಟ; ಆರೋಪ ಸಾಬೀತಾದರೆ ಯಾವ ಶಿಕ್ಷೆ?

Supreme Court
ದೇಶ1 hour ago

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Actor Darshan
ಸಿನಿಮಾ1 hour ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Actor Darshan
ಕರ್ನಾಟಕ2 hours ago

Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಸಿನಿಮಾ58 mins ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಟ್ರೆಂಡಿಂಗ್‌