Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ! - Vistara News

ಬೆಳಗಾವಿ

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

Love Case : ಹಳೇ ಪ್ರೇಮಿಯೊಬ್ಬ ಪ್ರೇಯಸಿಯ ಪತಿಗೆ ತಾನು ಕಳೆದಿದ್ದ ಖಾಸಗಿ ಕ್ಷಣದ ವಿಡಿಯೊ ಹಾಗೂ ಫೋಟೊವನ್ನು ಕಳಿಸಿದ್ದಾನೆ. ಇದೀಗ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರೇಮಿಯನ್ನು
(Belgavi News) ಬಂಧಿಸಿದ್ದಾರೆ.

VISTARANEWS.COM


on

He sent a private photo video of his girlfriend
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಾಗಲ್‌ ಪ್ರೇಮಿಯೊಬ್ಬನ ಹುಚ್ಚಾಟಕ್ಕೆ ನವ ವಿವಾಹಿತೆಯೊಬ್ಬಳ ಜೀವನವೇ ಹಾಳಾಗಿದೆ. ಪ್ರೇಯಸಿ ಬೇರೆನೊಬ್ಬನನ್ನು ಮದುವೆ ಆದಳೆಂದು ಸಿಟ್ಟಾದ ಮುತ್ತುರಾಜ್‌ ಎಂಬಾತ ಆಕೆಯೊಂದಿಗೆ ಕಳೆದಿದ್ದ ಖಾಸಗಿ ಫೋಟೊ, ವಿಡಿಯೊವನ್ನು ಪತಿಗೆ ಕಳಿಸಿದ್ದಾನೆ. ಬೆಳಗಾವಿಯ ಕಿತ್ತೂರು ಪಟ್ಟಣದಲ್ಲಿ ಘಟನೆ (Belgavi News) ನಡೆದಿದೆ.

ನವ ವಿವಾಹಿತೆಗೆ ವಿಲನ್‌ ಆದ ಹಳೇ ಪ್ರೇಮಿ ಮುತ್ತುರಾಜ್‌ ವಿರುದ್ಧ ದೂರು ನೀಡಲು ಹೋದರೆ ಪೊಲೀಸರು ನಿರಾಕರಿಸಿದ್ದರು ಎನ್ನಲಾಗಿದೆ. ನೀವೇ ಕರೆದುಕೊಂಡು ಬನ್ನಿ ಎಂದು ಪೊಲೀಸರು ಯುವತಿಯನ್ನೇ ದಬಾಯಿಸಿದ್ದಾರೆ ಎಂಬ ಆರೋಪವಿದೆ. ನೊಂದ ಯುವತಿ ನನಗೆ ಏನಾದರೂ ಆದರೆ ಅದಕ್ಕೆ ನೇರ ಕಾರಣ ಪೊಲೀಸರೇ ಎಂದಿದ್ದಳು. ಇದೀಗ ಎಚ್ಚೆತ್ತುಕೊಂಡಿರುವ ಕಿತ್ತೂರು ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನೂ ಬಂಧಿಸಿದ್ದಾರೆ. ಮುತ್ತುರಾಜ್ ಸೇರಿ ಒಟ್ಟು ಎಂಟು ಮಂದಿ ವಿರುದ್ಧ ಸೆಕ್ಷನ್ 143,147, 417, 376, 323, 504, 506ರ ಅಡಿ ದೂರು ದಾಖಲಿಸಿಕೊಂಡಿದ್ದಾರೆ.

He sent a private photo video of his girlfriend
ಬಂಧಿತ ಆರೋಪಿ ಮುತ್ತುರಾಜ್‌

ಆರೋಪಿ ಮುತ್ತುರಾಜ್ (24) ಯುವತಿಯನ್ನು ಪುಸಲಾಯಿಸಿ ಪ್ರೀತಿ ಬಲೆಗೆ ಬೀಳಿಸಿಕೊಂಡಿದ್ದ. ಇವರಿಬ್ಬರು ಹಲವಾರು ವರ್ಷಗಳ ಕಾಲ ಪ್ರೀತಿಸಿದ್ದರು. ಪ್ರೀತಿ ನೆಪದಲ್ಲೆ ಮನೆಗೆ ಬಂದಿದ್ದ ಮುತ್ತುರಾಜ್‌ ಮದುವೆ ಆಗುವುದಾಗಿ ನಂಬಿಸಿ, ಆಕೆಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದ. ಆ ಸಂದರ್ಭದಲ್ಲಿ ಆಕೆಗೆ ತಿಳಿಯದ ಹಾಗೇ ಖಾಸಗಿ ಕ್ಷಣದ ಫೋಟೊ ಹಾಗೂ ವಿಡಿಯೊಗಳನ್ನು ಸೆರೆಹಿಡಿದುಕೊಂಡಿದ್ದ.

ಇದನ್ನೂ ಓದಿ: Murder Case : ತಮ್ಮನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ ಅಣ್ಣ

ಬಳಿಕ ಮದುವೆ ಆಗು ಎಂದಾಗ ಮಾತು ಮರೆಸುತ್ತಿದ್ದ. ಯುವತಿ ಒತ್ತಾಯ ಮಾಡಿದಾಗ ಮದುವೆಗೆ ನಿರಾಕರಿಸಿ ಮೋಸ ಮಾಡಿದ್ದ. ಮಾತ್ರವಲ್ಲದೇ ಈ ವಿಷಯವನ್ನೆಲ್ಲ ಮನೆಯಲ್ಲಿ ಹೇಳಿದರೆ, ನಿನ್ನ ಹಾಗೂ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾನೆ. ಈತನ ಸಹವಾಸವೇ ಬೇಡವೆಂದು ದೂರದ ಯುವತಿ ಇತ್ತೀಚೆಗೆ ಮನೆಯಲ್ಲಿ ತೋರಿಸಿದ್ದ ಬೇರೊಬ್ಬ ಯುವಕನನ್ನು ಮದುವೆ ಆಗಿದ್ದಳು.

ಈ ವಿಷಯ ತಿಳಿಯುತ್ತಿದ್ದಂತೆ ಸಿಟ್ಟಾದ ಮುತ್ತುರಾಜ್‌, ಆಕೆಯೊಟ್ಟಿಗೆ ಕಳೆದಿದ್ದ ಖಾಸಗಿ ಕ್ಷಣದ ಫೋಟೊ ಹಾಗೂ ವಿಡಿಯೊವನ್ನು ನೇರವಾಗಿ ಗಂಡನ ಮನೆಯವರಿಗೆ ತೋರಿದ್ದಾನೆ. ಇದನ್ನೂ ಕೇಳಲು ಹೋದರೆ ಯುವತಿಗೂ ಹಾಗೂ ಪೋಷಕರಿಗೆ ಹಲ್ಲೆ ಮಾಡಿದ್ದಾನೆ. ಇತ್ತ ಗಂಡನ ಕುಟುಂಬಸ್ಥರು ನವ ವಿವಾಹಿತೆಯನ್ನು ಹೊರ ಹಾಕಿದ್ದಾರೆ.

ಮತ್ತೊಂದು ಕಡೆ ಮುತ್ತುರಾಜ್‌ ಕುಟುಂಬಸ್ಥರು ಇವರಿಬ್ಬರ ಮದುವೆಗೆ ನಿರಾಕರಿಸಿದ್ದಾರೆ. ದಿಕ್ಕುತೋಚದಂತಾಗಿ ಮುತ್ತುರಾಜ್‌ ಮನೆ ಎದುರಿಗೆ ಧರಣಿಯನ್ನು ಕುಳಿತಿದ್ದಳು. ಸಂತ್ರಸ್ತೆ ಯುವತಿ ಹಾಗೂ ಪೋಷಕರು ದೂರು ಕೊಡಲು ಹೋದರೆ ಇತ್ತ ಪೊಲೀಸರು ಸರಿಯಾಗಿ ಸ್ಪಂದಿಸಿರಲಿಲ್ಲ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಮುತ್ತುರಾಜ್‌ನನ್ನು ಬಂಧಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Belagavi Violence: ಕ್ರಿಕೆಟ್‌ ವಿಚಾರಕ್ಕೆ ಗಲಾಟೆ, 8 ಮಂದಿಗೆ ಗಾಯ, ಪೊಲೀಸರ ಮುಂದೆಯೇ ತಲ್ವಾರ್‌ ಎಸೆದು ಅಟ್ಟಹಾಸ!

Belagavi Violence: ಈ ವೇಳೆ ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಲಾಗಿದ್ದು, ಅಬ್ದುಲ್ ಎಂಬಾತ ನಡು ರಸ್ತೆಯಲ್ಲಿ ತಲ್ವಾರ್ ಝಳಪಿಸಿದ್ದಾನೆ ಎಂದು ಆರೋಪಿಸಲಾಗಿದೆ. ಶಾಂತಿ ಸ್ಥಾಪನೆಗಾಗಿ ಸ್ಥಳದಲ್ಲಿ ಮೂರು ಕೆಎಸ್ಆರ್‌ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ.

VISTARANEWS.COM


on

belagavi violence
Koo

ಬೆಳಗಾವಿ: ಕ್ರಿಕೆಟ್ (cricket) ಆಟದ ವೇಳೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ (Belagavi Violence) ಸೃಷ್ಟಿಯಾದ ಘಟನೆ ಬೆಳಗಾವಿ (Belagavi crime) ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಪುಂಡರು ತಲ್ವಾರ್‌ (talvar show) ಝಳಪಿಸಿ, ಎಸೆದು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಾಟ (Stone pelting) ನಡೆಸಿದ್ದಾರೆ. ಇದರಿಂದ ಈ ಪ್ರದೇಶದಲ್ಲಿ ಬಿಗುವಿನ (Belagavi tense) ವಾತಾವರಣ ಉಂಟಾಗಿದೆ.

ಶಹಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಅಳ್ವಾನ್ ಗಲ್ಲಿಯಲ್ಲಿ ಘಟನೆ ನಡೆದಿದೆ. ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಹುಟ್ಟಿಕೊಂಡಿದೆ. ಬಳಿಕ ಗಲಾಟೆಯಲ್ಲಿ ಹಿಂದೂ- ಮುಸ್ಲಿಂ ಎರಡೂ ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದು, ಹೊಡೆದಾಡಿಕೊಂಡಿದ್ದಾರೆ. ಯುವಕರ‌ ನಡುವಿನ ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆಗೂ ಗಾಯವಾಗಿದೆ.

ಈ ವೇಳೆ ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಲಾಗಿದ್ದು, ಅಬ್ದುಲ್ ಎಂಬಾತ ನಡು ರಸ್ತೆಯಲ್ಲಿ ತಲ್ವಾರ್ ಝಳಪಿಸಿದ್ದಾನೆ ಎಂದು ಆರೋಪಿಸಲಾಗಿದೆ. ಶಾಂತಿ ಸ್ಥಾಪನೆಗಾಗಿ ಸ್ಥಳದಲ್ಲಿ ಮೂರು ಕೆಎಸ್ಆರ್‌ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ.

ಸಿಸಿಟಿವಿಯಲ್ಲಿ ಕಲ್ಲು, ತಲ್ವಾರ್ ಎಸೆಯುವ ದೃಶ್ಯ ಸೆರೆಯಾಗಿದೆ. ಪೊಲೀಸ್‌ ಜೀಪ್‌ ಬರುತ್ತಿದ್ದಂತೆಯೇ ಅದರತ್ತ ಒಂದು ಕೋಮಿನ ಯುವಕರು ತಲ್ವಾರ್‌ ಎಸೆದಿದ್ದಾರೆ. ಇದರಿಂದ ಭಯಭೀತರಾದ ಹಿಂದೂಗಳು ಮಹಿಳಾ ಪೊಲೀಸ್ ಅಧಿಕಾರಿಗೆ ತಮ್ಮತ್ತ ತಲ್ವಾರ್ ಎಸೆದಿರುವುದನ್ನು ತೋರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಚಾರ ತಿಳಿದ ಕೂಡಲೇ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಶಹಾಪುರ ಪೊಲೀಸ್ ಠಾಣೆಗೆ ಆಗಮಿಸಿದ್ದು, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ. ನಗರದ ತುಂಬೆಲ್ಲಾ ರೌಂಡ್ಸ್ ಹಾಕಲು ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ನಿಗಾ ಇರಿಸಲು ಸೂಚಿಸಿದ್ದಾರೆ.

ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದ್ದರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಯಾರೂ ಸುಳ್ಳು ವದಂತಿ ಹರಡಬಾರದು ಎಂದು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದ್ದಾರೆ.

ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

ಗದಗ: ಭಾವಂದಿರು ಬಂದು ಥಳಿಸಿ ತನ್ನ ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋದರು ಎಂಬ ಕಾರಣಕ್ಕೆ ಪತಿ ಮಹಾಶಯನೊಬ್ಬ ನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಗದಗ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.

ಈಶಪ್ಪ ಕಟ್ಟಿಮನಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಸಾವಿಗೆ ಭಾವಂದಿರೇ (ಪತ್ನಿಯ ಸಹೋದರರು) ಕಾರಣ ಎಂದು‌ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗದಗನ ಬಸವೇಶ್ವರ ನಗರದಲ್ಲಿ‌ನ ಸರ್ಕಾರಿ ಶಾಲೆ ನಂ. 6 ರಲ್ಲಿ ಶಿಕ್ಷಕನಾಗಿದ್ದ ಈಶಪ್ಪ ಕಳೆದ ರಾತ್ರಿ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಗೆ ಆಕೆಯ ಸಹೋದರರಾದ ಅನಿಲ್‌ ಪವಾರ ಮತ್ತು ಮಂಜುನಾಥ ಪವಾರ ಎಂಬುವವರು ಮನಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಸಹೋದರಿಯೊಂದಿಗೆ ಭಾವ ಜಗಳ ಮಾಡುತ್ತಿರುವುದನ್ನು ನೋಡಿಕೊಂಡು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು ನಮ್ಮ ತಂಗಿ ಜತೆಗೆ ಯಾಕೆ ಜಗಳ ಮಾಡುತ್ತೀಯಾ ಎಂದು ಈಶಪ್ಪನಿಗೆ ಎರಡು ಬಾರಿಸಿದ್ದಾರೆ. ಅಲ್ಲದೆ, ಈ ವೇಳೆ ಸಾಕಷ್ಟು ಗಲಾಟೆಗಳು ಸಹ ನಡೆದಿವೆ ಎನ್ನಲಾಗಿದೆ.

ಕೊನೆಗೆ ಮಾತಿಗೆ ಮಾತು ಬೆಳೆದಿದ್ದರಿಂದ ಅನಿಲ್‌ ಮತ್ತು ಮಂಜುನಾಥ ಅವರು ಇನ್ನು ತಮ್ಮ ತಂಗಿ ಇಲ್ಲಿ ಇರುವುದು ಸರಿಯಲ್ಲ. ಆಕೆಯನ್ನು ತವರು ಮನೆಗೆ ಕರೆದೊಯ್ಯುವುದೇ ಸರಿ ಎಂದು ನಿರ್ಧರಿಸಿ ಅಲ್ಲಿಂದ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಇದರಿಂದ ಮನನೊಂದ ಈಶಪ್ಪ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಈ ವೇಳೆ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಸಾವಿಗೆ ಭಾವಂದಿರಾದ ಅನಿಲ್‌ ಮತ್ತು ಮಂಜುನಾಥ್‌ ಅವರೇ ಕಾರಣ ಎಂದು ದೂರಿದ್ದಾರೆ. ನನ್ನ ಸಾವಿಗೆ ಇವರಿಬ್ಬರೂ ಕಾರಣರಾಗಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು ಎಂದು ಉಲ್ಲೇಖಿಸಿದ್ದಾರೆ. ಗದಗ ನಗರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇದನ್ನೂ ಓದಿ: Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Crew on OTT
ಸಿನಿಮಾ2 mins ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು2 mins ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್2 mins ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ22 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ32 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ38 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ47 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ48 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ49 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

RBI Dividend
ದೇಶ1 hour ago

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌