Joe Root : ರೋಹಿತ್ ಶರ್ಮಾ ದಾಖಲೆ ಸರಿಟ್ಟಿದ ಇಂಗ್ಲೆಂಡ್ ಬ್ಯಾಟರ್​ ಜೋ ರೂಟ್​ - Vistara News

ಪ್ರಮುಖ ಸುದ್ದಿ

Joe Root : ರೋಹಿತ್ ಶರ್ಮಾ ದಾಖಲೆ ಸರಿಟ್ಟಿದ ಇಂಗ್ಲೆಂಡ್ ಬ್ಯಾಟರ್​ ಜೋ ರೂಟ್​

Joe Root : ಜೊ ರೂಟ್​ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್​​ ಪಂದ್ಯದ ಮೊದಲ ದಿನ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

VISTARANEWS.COM


on

Joe Root
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಜೆಎಸ್​ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್ಮನ್ ಜೋ ರೂಟ್ (Joe Root) ತಮ್ಮ 31 ನೇ ಟೆಸ್ಟ್ ಶತಕವನ್ನು ಬಾರಿಸಿದರು. 33ರ ಹರೆಯದ ರೂಟ್​ 219 ಎಸೆತಗಳಲ್ಲಿ ಭಾರತದ ವಿರುದ್ಧ 10ನೇ ಟೆಸ್ಟ್ ಶತಕ ಬಾರಿಸಿದರು. ಅವರ ಇನ್ನಿಂಗ್ಸ್ ಒಂಬತ್ತು ಬೌಂಡರಿಗಳನ್ನು ಒಳಗೊಂಡಿವೆ. ಇದಲ್ಲದೆ, ಅವರು ಭಾರತದ ವಿರುದ್ಧ 10 ಶತಕಗಳನ್ನು ಬಾರಿಸಿದ ಕ್ರೀಡಾ ಇತಿಹಾಸದಲ್ಲಿ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾರತದ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿ ಇಲ್ಲಿದೆ.

  • 10 ಶತಕ- ಜೋ ರೂಟ್ (52 ಇನ್ನಿಂಗ್ಸ್)
  • 9 ಶತಕ ಸ್ಟೀವನ್ ಸ್ಮಿತ್ (37)
  • 8 ಶತಕ- ಗ್ಯಾರಿ ಸೋಬರ್ಸ್ (30)
  • 8 ಶತಕ- ವಿವಿಯನ್ ರಿಚರ್ಡ್ಸ್ (41)
  • 8 ಶತಕ- ರಿಕಿ ಪಾಂಟಿಂಗ್ (51)

ಒಟ್ಟಾರೆಯಾಗಿ, ನಿರ್ದಿಷ್ಟ ರಾಷ್ಟ್ರದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಗಳಿಸಿದ ಪಟ್ಟಿಯಲ್ಲಿ ರೂಟ್ ಆರನೇ ಸ್ಥಾನದಲ್ಲಿದ್ದಾರೆ. ಇಲ್ಲಿದೆ ಪಟ್ಟಿ.

  • 19 ಶತಕ – ಬ್ರಾಡ್ಮನ್ ವಿರುದ್ಧ ಇಂಗ್ಲೆಂಡ್
  • 13 ಶತಕ – ಗವಾಸ್ಕರ್ ವಿರುದ್ಧ ವೆಸ್ಟ್ ಇಂಡೀಸ್
  • 12 ಶತಕ – ಹಾಬ್ಸ್ ವಿರುದ್ಧ ಆಸ್ಟ್ರೇಲಿಯಾ
  • 12 ಶತಕ- ಸ್ಟೀವ್​ ಸ್ಮಿತ್ ವಿರುದ್ಧ ಇಂಗ್ಲೆಂಡ್
  • 11 ಶತಕ- ಸಚಿನ್ ವಿರುದ್ಧ ಆಸ್ಟ್ರೇಲಿಯಾ
  • 10 ಶತಕ- ರೂಟ್ ವಿರುದ್ಧ ಭಾರತ*

ರೋಹಿತ್ ದಾಖಲೆ ಸರಿಗಟ್ಟಿದ ರೂಟ್​

ಇದು ರೂಟ್ ಅವರ 47 ನೇ ಅಂತಾರಾಷ್ಟ್ರೀಯ ಶತಕವಾಗಿದೆ. ಸಕ್ರಿಯ ಆಟಗಾರರಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಸರಿಗಟ್ಟಿದರು.

  • 80 – ವಿರಾಟ್ ಕೊಹ್ಲಿ
  • 49 – ಡೇವಿಡ್ ವಾರ್ನರ್
  • 47 – ಜೋ ರೂಟ್
  • 47 – ರೋಹಿತ್ ಶರ್ಮಾ
  • 45 – ಕೇನ್ ವಿಲಿಯಮ್ಸನ್
  • 44 – ಸ್ಟೀವನ್ ಸ್ಮಿತ್

ಇದನ್ನೂ ಓದಿ : R Ashwin : ಕ್ರಿಕೆಟ್​ ದಂತಕತೆಗಳ ಎಲೈಟ್​ ಪಟ್ಟಿ ಸೇರಿದ ಆರ್​ ಅಶ್ವಿನ್​; ಏನಿದು ಸಾಧನೆ?

ಈ ಸರಣಿಯಲ್ಲಿ ಬ್ಯಾಟಿಂಗ್​ನೊಂದಿಗೆ ಕಳಪೆ ಫಾರ್ಮ್​ನಲ್ಲಿದ್ದ ರೂಟ್​ಗೆ ಇದು ಹೆಚ್ಚು ಅಗತ್ಯವಾದ ಶತಕವಾಗಿತ್ತು. ಇದಲ್ಲದೆ, ಅವರ ಶಾಟ್​ಗಳ ಆಯ್ಕೆ ಮತ್ತು ಅವರು ‘ಬಾಜ್ಬಾಲ್’ ಶೈಲಿಯ ಆಟಕ್ಕೆ ಸರಿಹೊಂದುತ್ತದೆಯೇ ಎಂಬ ಬಗ್ಗೆ ಪ್ರಶ್ನೆಗಳು ಇದ್ದವು. ಆದಾಗ್ಯೂ, ಈ ಇನಿಂಗ್ಸ್​ನಲ್ಲಿ ರೂಟ್ ಸಾಂಪ್ರದಾಯಿಕ ಶೈಲಿಯ ಬ್ಯಾಟಿಂಗ್​ಗೆ ಮರಳಿದ್ದಾರೆ . ಶತಕದ ನಂತರ, ನಾಯಕ ಬೆನ್ ಸ್ಟೋಕ್ಸ್ ಅವರ ಪ್ರತಿಕ್ರಿಯೆಯೂ ವೈರಲ್ ಆಗಿದೆ.

ಅಲಸ್ಟೇರ್ ಕುಕ್ ದಾಖಲೆ ಮುರಿದ ಜೋ ರೂಟ್

ಊಟದ ವಿರಾಮದ ಮೊದಲು ರವೀಂದ್ರ ಜಡೇಜಾ ಕೇವಲ ಮೂರು ರನ್ ಗಳಿಸಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ ವಿಕೆಟ್ ಪಡೆದರು. ಬಳಿಕ ವಿಕೆಟ್ ಕೀಪರ್-ಬ್ಯಾಟ್​​ ಬೆನ್ ಫೋಕ್ಸ್ ಅವರೊಂದಿಗೆ ನಿರ್ಣಾಯಕ ಪಾಲುದಾರಿಕೆಯನ್ನು ಪಡೆದ ಜೋ ರೂಟ್ ಇನ್ನಿಂಗ್ಸ್ ಇಂಗ್ಲೆಂಡ್ ಇನಿಂಗ್ಸ್​ ಸ್ಥಿರಗೊಳಿಸಿದರು. ಅಲ್ಲದೆ 108 ಎಸೆತಗಳಲ್ಲಿ ಅರ್ಧಶತಕ ದಾಟಿದರು.

ಈ ಮೂಲಕ ಇಂಗ್ಲೆಂಡ್ ಪರ ಅತಿ ಹೆಚ್ಚು ಬಾರಿ ಅರ್ಧ ಶತಕ ಬಾರಿಸಿದ ಅಲೆಸ್ಟರ್ ಕುಕ್ ದಾಖಲೆಯನ್ನು ಜೋ ರೂಟ್ ಮುರಿದಿದ್ದಾರೆ. ನಾಲ್ಕನೇ ಕ್ರಮಾಂಕದ ಬ್ಯಾಟರ್​​ ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ 91 ನೇ 50 ಪ್ಲಸ್ ಸ್ಕೋರ್ ಪೂರ್ಣಗೊಳಿಸಿದರು. ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್​​ನಲ್ಲಿ 90 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿರುವ ಅಲೆಸ್ಟರ್ ಕುಕ್ ಎರಡನೇ ಸ್ಥಾನದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Accident Case: ಕಾರು ಡಿಕ್ಕಿ ರಭಸಕ್ಕೆ ಹತ್ತಾರು ಅಡಿ ದೂರ ಹಾರಿ ಬಿದ್ದ ಮಹಿಳೆ; ಭಯಾನಕ ವಿಡಿಯೊ

Accident Case: ದಿನ ಬೆಳಗಾದರೆ ಅಲ್ಲೊಂದು ಆ್ಯಕ್ಸಿಡೆಂಟ್, ಇಲ್ಲೊಂದು ಆಕ್ಸಿಡೆಂಟ್ ಎಂಬ ಸುದ್ದಿ ಕೇಳುತ್ತೇವೆ. ಜನಸಂಖ್ಯೆ ಜಾಸ್ತಿ ಆದ ಹಾಗೇ ವಾಹನಗಳ ಸಂಖ್ಯೆಯೂ ಜಾಸ್ತಿ ಆಗಿದೆ. ಮಹಾರಾಷ್ಟ್ರದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸುಮಾರು ದೂರದವರೆಗೆ ಹಾರಿ ಬಿದ್ದು ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದ ಘಟನೆ ನಡೆದಿದೆ.

VISTARANEWS.COM


on

Accident Case
Koo

ಮಹಾರಾಷ್ಟ್ರ : ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Accident Case ) ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ದಿನದಲ್ಲಿ ಒಂದಲ್ಲ ಒಂದು ಕಡೆ ರಸ್ತೆ ಅಪಘಾತ ಸಂಭವಿಸುತ್ತಿರುತ್ತದೆ. ಅದರಲ್ಲೂ ಡಬಲ್ ರೋಡ್ ಆದ ಮೇಲಂತೂ ವಾಹನಗಳ ವೇಗಕ್ಕೆ ಮಿತಿಯೇ ಇಲ್ಲ, ಮನುಷ್ಯರ ಜೀವಕ್ಕೂ ಬೆಲೆಯೇ ಇಲ್ಲದಂತಾಗಿದೆ. ಶಾಲಾ ಮಕ್ಕಳು ಓಡಾಡುವ ಸ್ಥಳ, ಜನಸಂದಣಿ ಹೆಚ್ಚಾಗಿರುವ ಸ್ಥಳ, ತಿರುವುಗಳಲ್ಲಿ ಕೂಡ ನಿಧಾನವಾಗಿ ಚಲಿಸುವ ಬದಲು ವೇಗವಾಗಿ ಬಂದು ಡಿಕ್ಕಿ ಹೊಡೆದು ಹೋಗುತ್ತಿರುತ್ತಾರೆ. ಟ್ರಾಫಿಕ್ ರೂಲ್ಸ್ ಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಹತ್ತಾರು ಅಡಿ ದೂರ ಹಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಸ್ವರಾಜ್ ಚೌಕ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಹಿಳೆ ರಸ್ತೆ ದಾಟುವಾಗ ಬಿಳಿ ಬಣ್ಣದ ವ್ಯಾಗನ್ ಆರ್ ಕಾರೊಂದು ಅತಿವೇಗವಾಗಿ ಬಂದು ಆಕೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಕೆ ಸುಮಾರು ದೂರದವರೆಗೆ ಹಾರಿ ಬಿದ್ದು ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಆಗ ಅಲ್ಲಿದ್ದವರು ಆಕೆಯ ಸಹಾಯಕ್ಕೆ ಧಾವಿಸಿದರು. ನಂತರ ಚಾಲಕನೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆಕೆ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.


ಸಂತ್ರಸ್ತೆಯ ಹೆಸರು ರೇಖಾ ಎಂದು ತಿಳಿದು ಬಂದಿದೆ. ಆರೋಪಿ ಚಾಲಕ 24 ವರ್ಷ ವಯಸ್ಸಿನ ವಿನಯ್ ವಿಲಾಸ್ ನಾಯಕ್, ಆತ ಪೊಲೀಸ್ ಅಧಿಕಾರಿಯ ಮಗ ಎಂದು ವರದಿಯಾಗಿದೆ. ಈ ಪ್ರಕರಣ ಪಿಂಪ್ರಿ-ಚಿಂಚ್‌ವಾಡ್‌ನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 ಮತ್ತು 337 ಮತ್ತು ವೋಟಾರು ವಾಹನ ಕಾಯ್ದೆಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಆರೋಪಗಳು ದಾಖಲಾಗಿದೆ.

ಇದನ್ನೂ ಓದಿ: Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

ವರದಿಗಳ ಪ್ರಕಾರ ಚಾಲಕ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಿಂಪ್ರಿ-ಚಿಂಚ್‌ವಾಡ್‌ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಇದು ಕುಡಿದು ವಾಹನ ಚಲಾಯಿಸಿದ ಪ್ರಕರಣವಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading

ದೇಶ

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Narendra Modi: ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಹಾಗೆಯೇ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ, ಫಲಿತಾಂಶವನ್ನೂ ಮೋದಿ ಸ್ಮರಿಸಿದರು. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Narendra Modi
Koo

ರೋಮ್: ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ವಿದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಿ-7 ಶೃಂಗಸಭೆಯಲ್ಲಿ (G7 Summit Italy) ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಅವರು, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

“ತಂತ್ರಜ್ಞಾನವನ್ನು ಸೃಜನಶೀಲತೆಯ ಸೃಷ್ಟಿಗಾಗಿ, ಅಭಿವೃದ್ಧಿಗಾಗಿ, ಏಳಿಗೆಗಾಗಿ ಬಳಸಬೇಕೇ ಹೊರತು, ವಿನಾಶಕ್ಕಾಗಿ ಅದನ್ನು ಬಳಸಬಾರದು. ಜಗತ್ತಿನಾದ್ಯಂತ ಬೇರೂರಿರುವ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ಇಂದು ತಂತ್ರಜ್ಞಾನವನ್ನು ಬಳಸಬೇಕಾಗಿದೆ. ಭಾರತವು, ಇಂತಹ ಪ್ರಯತ್ನ ಮಾಡುತ್ತಿದೆ. ಕೃತಕ ಬುದ್ಧಿಮತ್ತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏಳಿಗೆಯತ್ತ ಮುಂದೆ ಸಾಗುತ್ತಿದೆ. ಎಲ್ಲರಿಗೂ ಕೃತಕ ಬುದ್ಧಿಮತ್ತೆ (AI For All) ಎಂಬ ತತ್ವದೊಂದಿಗೆ, ಕೃತಕ ಬುದ್ಧಿಮತ್ತೆ ಬಳಕೆಗೆ ರಾಷ್ಟ್ರೀಯ ಸ್ಟ್ರ್ಯಾಟಜಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ತಿಳಿಸಿದರು.

ಚುನಾವಣೆ ಗೆಲುವಿನ ಪ್ರಸ್ತಾಪ

ಕಳೆದ ಲೋಕಸಭೆ ಚುನಾವಣೆ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ಇತ್ತೀಚೆಗೆ ಭಾರತದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಯಿತು. ತಂತ್ರಜ್ಞಾನದ ಸಹಾಯದಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲಾಯಿತು. ಜಗತ್ತಿನ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ನಡೆದ ಚುನಾವಣೆ ಫಲಿತಾಂಶವನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಿಸಲಾಯಿತು. ನಮ್ಮ ದೇಶದ ಜನ ನನಗೆ ಮೂರನೇ ಬಾರಿಗೆ ಸೇವೆ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ನಾನು ಧನ್ಯನಾಗಿದ್ದೇನೆ” ಎಂದು ಹೇಳಿದರು.

“ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಕಳೆದ ಆರು ದಶಕಗಳಲ್ಲಿಯೇ ಮೊದಲ ಬಾರಿಗೆ ನಮ್ಮ ದೇಶದ ಜನ ಸತತ ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ. ಭಾರತದ ಮತದಾರರು ನೀಡಿದ ಜಯವು ಪ್ರಜಾಪ್ರಭುತ್ವದ ಜಯವಾಗಿದೆ” ಎಂದು ಹೇಳಿದರು. ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಮೋದಿ ಪ್ರಸ್ತಾಪಿಸಿದರು.

ಇದನ್ನೂ ಓದಿ: Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Continue Reading

ಕರ್ನಾಟಕ

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Teachers Transfer 2024: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಜೂನ್‌ 15ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Teachers Transfer 2024
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಲಿದೆ. ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ (Lok Sabha Election 2024) ಘೋಷಣೆ ಮತ್ತು ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು.

ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗುತ್ತದೆ. ಅಂತೆಯೇ ಈ ಬಾರಿಯ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿತ್ತು. ವರ್ಗಾವಣೆಗೆ ಪೂರಕವಾದ ಇ.ಇ.ಡಿ.ಎಸ್ ದತ್ತಾಂಶ, ಖಾಲಿ ಹುದ್ದೆಗಳ ಮಾಹಿತಿ, ಶಾಲಾ ವಲಯಗಳ ಮಾಹಿತಿಯನ್ನು ಪರಿಷ್ಕರಿಸಲಾಗಿತ್ತು.

ಆನ್‌ಲೈನ್‌ ಪ್ರಕ್ರಿಯೆ

ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆಗಳು ಆನ್​ಲೈನ್ ಮೂಲಕವೇ ನಡೆಯಲಿದೆ. ಶಿಕ್ಷಕರ (Weighted score) ಅಂಕಗಳ ಪ್ರಕಟ, ಆಕ್ಷೇಪಣೆ ಸಲ್ಲಿಕೆ, ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ ಪರಿಶೀಲನೆ, ಅರ್ಜಿಗಳ ಅನುಮೋದನೆ/ ತಿರಸ್ಕಾರ, ಕರಡು ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಣೆಯಾಗಿದೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇರುತ್ತದೆ. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ಹಲವರು ಬದಲಾವಣೆ

ಶಿಕ್ಷಕರ ಸಂಘಗಳ ಕೋರಿಕೆ ಮೇರೆಗೆ ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ವಲಯ ವರ್ಗಾವಣೆಯನ್ನು ಕೈಬಿಡುವ ಸಾಧ್ಯತೆ ಇದೆ. ಅಭಿಮತ ವರ್ಗಾವಣೆ ಸೇರಿದಂತೆ ಪರಸ್ಪರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಂತೆ ಶಿಕ್ಷಣ ಸಚಿವರಿಂದ ಕಡತ ಅನುಮೋದನೆಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Continue Reading

ಭವಿಷ್ಯ

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 26:31 ವಾರ: ಶನಿವಾರ
ನಕ್ಷತ್ರ: ಉತ್ತರ ಪಾಲ್ಗುಣಿ 08:12 ಯೋಗ: ವ್ಯತಿಪಾತ 20:08
ಕರಣ: ಬಾಲವ 13:18 ಅಮೃತ ಕಾಲ: ಬೆಳಗಿನ ಜಾವ 04:28 ರಿಂದ 06:16ರವರೆಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥೋತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
05:54 ರಿಂದ 07:30
ಯಮಗಂಡಕಾಲ: ಮಧ್ಯಾಹ್ನ 01:57
ರಿಂದ 03:34

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಆಧ್ಯಾತ್ಮಿಕ ವಿಚಾರಗಳಿಂದ, ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ:ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿ, ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ :ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿಯಾಗಬಹುದು. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಇರಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Accident Case
Latest9 mins ago

Accident Case: ಕಾರು ಡಿಕ್ಕಿ ರಭಸಕ್ಕೆ ಹತ್ತಾರು ಅಡಿ ದೂರ ಹಾರಿ ಬಿದ್ದ ಮಹಿಳೆ; ಭಯಾನಕ ವಿಡಿಯೊ

karnataka weather forecast
ಮಳೆ11 mins ago

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Life Insurance
ಮನಿ-ಗೈಡ್14 mins ago

Life Insurance: ಜೀವ ವಿಮೆ ನಿಯಮಗಳಲ್ಲಿ ಹಲವು ಬದಲಾವಣೆ; ಐಆರ್‌ಡಿಎಐಯಿಂದ ಗ್ರಾಹಕಸ್ನೇಹಿ ಕ್ರಮ

Betel leaves health benefits
ಆರೋಗ್ಯ34 mins ago

Betel Leaves Health Benefits: ರಾತ್ರಿ ಊಟದ ಬಳಿಕ ವೀಳ್ಯದೆಲೆ ಸೇವನೆ ಆರೋಗ್ಯಕ್ಕೆ ಉತ್ತಮ

Narendra Modi
ದೇಶ40 mins ago

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Teachers Transfer 2024
ಕರ್ನಾಟಕ1 hour ago

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Aamras
ದೇಶ2 hours ago

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

International Yoga Day 2024
ಆರೋಗ್ಯ2 hours ago

International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

T20 World Cup 2024
ಕ್ರಿಕೆಟ್7 hours ago

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ13 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು14 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು14 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ15 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌