Aadhaar seeding: ಪಹಣಿಗೂ ಮಾಡಿ ಆಧಾರ್ ಲಿಂಕ್;‌ 'ಲಿಂಕಿಂಗ್‌' ಲೋಕದಲ್ಲಿ ರೈತ ಹೈರಾಣ! - Vistara News

ಬೆಂಗಳೂರು

Aadhaar seeding: ಪಹಣಿಗೂ ಮಾಡಿ ಆಧಾರ್ ಲಿಂಕ್;‌ ‘ಲಿಂಕಿಂಗ್‌’ ಲೋಕದಲ್ಲಿ ರೈತ ಹೈರಾಣ!

Aadhaar seeding: ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ ಒಂದು ಕಡೆ ಲಿಂಕ್‌ ಮಾಡುತ್ತಾ ಇರಬೇಕು ಎಂಬ ಬಗ್ಗೆ ಅರವಿಂದ ಸಿಗದಾಳ್‌ ಬರೆದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದು ರೈತರಿಗೆ ಸಂಬಂಧಪಟ್ಟ ಸುದ್ದಿ. ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್‌ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಎಂಬ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಮೇಲುಕೊಪ್ಪದ ಅರವಿಂದ ಸಿಗದಾಳ್ (Aravind Sigadal) ಅವರು ತಮ್ಮ ಅನಿಸಿಕೆಯನ್ನು ಹೀಗೆ ಹಂಚಿಕೊಂಡಿದ್ದಾರೆ.

ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ ಒಂದು ಕಡೆ ಲಿಂಕ್‌ ಮಾಡುತ್ತಾ ಇರಬೇಕು.

ಆಧಾರ್‌ ಸೀಡಿಂಗ್‌ ಬಗ್ಗೆ ರೈತರಿಗೆ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ಕಿರಿಕಿರಿ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಹಣಿಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿದ್ದು, ಎಲ್ಲರೂ ಆದಷ್ಟು ಬೇಗ ಮಾಡಿಸಿಕೊಳ್ಳಿ ಎಂದು ಹೇಳುತ್ತಲೇ ಈಗಿರುವ ವ್ಯವಸ್ಥೆಯಲ್ಲಿನ ನ್ಯೂನತೆಯನ್ನು ಎತ್ತಿ ತೋರಿಸಿದ್ದಾರೆ. ಚಿಕ್ಕಮಗಳೂರಿನ ಮೇಲುಕೊಪ್ಪದಿಂದ ಒಬ್ಬರ ರೈತ ಆಧಾರ್‌ ಲಿಂಕ್‌ ಮಾಡಲು ಹೋದರೆ ಎಷ್ಟು ಸಮಯ ಬೇಕು? ಎಷ್ಟು ಖರ್ಚಾಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ.

ಅರವಿಂದ ಸಿಗದಾಳ್ ಅವರ ಸೋಷಿಯಲ್‌ ಮೀಡಿಯಾ ವಾಲ್‌ನಲ್ಲೇನಿದೆ?

ಬೇಸಾಯ ಮತ್ತು ಹಾರ್ವೆಸ್ಟಿಂಗ್ ಭಾಗವಾಗಿ ಭತ್ತ, ಅಡಿಕೆ, ಕಾಫಿ, ಮೆಣಸಿಗೆ ಪ್ರತಿ ತಿಂಗಳು ಕೆಲಸ ಇದ್ದೇ ಇರುತ್ತದೆ. ಇದನ್ನು “ಲಿಂಕ್‌” ಮಾದರಿಯಲ್ಲಿ ಹೇಳುವುದಾದರೆ, ತೋಟ – ಗದ್ದೆಗಳಿಗೆ ಗೊಬ್ಬರ ಲಿಂಕ್ ಮಾಡಬೇಕು, ಸುಣ್ಣ ಲಿಂಕ್ ಮಾಡಬೇಕು, ಕಳೆ ತೆಗೆಯುವ ಯಂತ್ರ ಲಿಂಕ್ ಮಾಡಬೇಕು, ಕಪ್ಪು ಹೆರೆಯುವ- ಅಂಚು ಕಡಿಯುವ ಕೆಲಸಗಳನ್ನು ಲಿಂಕ್ ಮಾಡಬೇಕು, ಕಾಪರ್ ಸಲ್ಫೇಟ್ ಲಿಂಕ್ ಮಾಡಬೇಕು, ಮೇಲುಗೊಬ್ಬರ ಲಿಂಕ್ ಮಾಡಬೇಕು…. ಹೀಗೆ ಮಾಡುತ್ತಲೇ ಇರಬೇಕು.

ಅದೇ ರೀತಿ ರೈತರು:

  • ಫ್ರೂಟ್ ಐಡಿಗೆ ಆಧಾರ್ ಲಿಂಕ್,
  • ಬೆಳೆ ಸರ್ವೆ ಆ್ಯಪ್‌ಗೆ ಆಧಾರ್ ಲಿಂಕ್,
  • ತೋಟದಲ್ಲಿ ಬಳಸುವ RTI ನೋಂದಾಯಿತ ಗಾಡಿಗಳಿಗೆ ಎಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಲಿಂಕ್,
  • ಬ್ಯಾಂಕಿಗೆ ಆಧಾರ್ ಲಿಂಕ್,
  • ಉಳಿತಾಯ ಖಾತೆಗೆ ಎನ್‌ಪಿಸಿಐ ಲಿಂಕ್,
  • ಬೆಳೆ ಸರ್ವೆಗೆ ಪಹಣಿ ಲಿಂಕ್,
  • ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್,
  • ಪಾನ್ ಕಾರ್ಡ್‌ಗೆ ಆಧಾರ್ ಲಿಂಕ್,

ಮೇಲುಗೊಬ್ಬರ ಕೊಟ್ಟಂತೆ ಎಲ್ಲ ಕಡೆಗೂ ವರ್ಷಕ್ಕೊಮ್ಮೆ ಕೆವೈಸಿ (KYC) ಲಿಂಕ್ ಅನ್ನು ಮಾಡಿಸುತ್ತಿರಬೇಕು.

ಈಗ ಪಹಣಿಗೆ ಆಧಾರ್ ಸೀಡಿಂಗ್!!!

ಅದೃಷ್ಟ ಚನಾಗಿದ್ದರೆ, ಮನೆಯಲ್ಲಿ ನೆಟ್ವರ್ಕ್ ಸಿಕ್ಕಿದರೆ ಅಂಗಳದ ತುದಿ ನಿಂತು ಪಹಣಿಗೆ ಆಧಾರ್ ಸೀಡಿಂಗ್ ಮಾಡಿಕೊಳ್ಳಬಹುದು. ಇಲ್ಲವಾದರೆ, ಗ್ರಾಮ ಲೆಕ್ಕಿಗ, ಪಿಡಿಒಗಳನ್ನು ಭೇಟಿ ಮಾಡಿ, ಅಲ್ಲಿ ಸರ್ವರ್ ಸರಿ ಇದ್ದರೆ (ಹೆಚ್ಚಿನ ಸಂದರ್ಭದಲ್ಲಿ ಸರ್ವರ್ ಸರಿ ಇರೊಲ್ಲ!!?) ಅಧಿಕಾರಿಗಳು ಫೀಲ್ಡ್ ವರ್ಕಿಗೆ ಹೋಗಿಲ್ಲ ಅಂದರೆ (!!?) ಅಲ್ಲಿ ಹೋಗಿ ಮಾಡಿಸಿಕೊಳ್ಳಬಹುದು!!

ನಮ್ಮ ಮೇಲುಕೊಪ್ಪದಿಂದ (ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ) ರೈತರು ತಮ್ಮ ಭಂಡಿಗಡಿ ಗ್ರಾಮ ಪಂಚಾಯಿತಿ ಅಥವಾ ಗ್ರಾಮ ಲೆಕ್ಕಿಗ ಕಚೇರಿಗೆ ಹೋಗಲು 32 ಕಿಲೋಮೀಟರ್ ದೂರವನ್ನು ಎರಡು ಬಸ್‌ಗಳಲ್ಲಿ ಪ್ರಯಾಣಿಸಿ ತಲುಪಬೇಕು. ಬೆಳಗ್ಗೆ ಎಂಟು ಗಂಟೆ ಬಸ್‌ನಲ್ಲೇ ಹೊರಟರೆ ಕೊಪ್ಪ-ಹರಿಹರಪುರ-ಭಂಡಿಗಡಿಯನ್ನು ಎರಡು ಬಸ್‌ನಲ್ಲಿ ತಲುಪಿ, ಫೀಲ್ಡ್ ವರ್ಕ್‌ಗೆ ಹೋದವರನ್ನು ಕಾದು, ಸರ್ವರ್ ಸರಿ ಹೋಗುವವರೆಗೆ ವಿಶ್ರಮಿಸಿ, ಅದೃಷ್ಟ-ಹಣೇಬರಹಗಳನ್ನು ಪರೀಕ್ಷಿಸಿ, ಇಡೀ ದಿನವನ್ನು ವ್ಯಯಿಸಿ, ಬಸ್‌ ಚಾರ್ಜ್ 120 ರೂಪಾಯಿಯನ್ನು ಖರ್ಚು ಮಾಡಿ, ಲಿಂಕೇಜ್ ವ್ಯವಹಾರ ಮುಗಿದರೆ ಮುಗಿಸಿಕೊಂಡು, ಅದೇ ಮಾರ್ಗದಲ್ಲಿ ಮತ್ತೆ ಎರಡು ಬಸ್ ಹಿಡಿದು ಸಂಜೆ ಆರೂವರೆಗೆ ಮನೆಗೆ ಬಂದು ಲಿಂಕ್ ಆಗಬಹುದು!!!

ಪಹಣಿಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿದ್ದು ಎಲ್ಲರೂ ಆದಷ್ಟು ಬೇಗ ಮಾಡಿಸಿಕೊಳ್ಳಿ.

ತಿಂಗಳಿಗೊಂದರಂತೆ ಲಿಂಕೇಜ್ ಮಾಡುವ ಸರ್ಕಾರದ ಈ ಲಿಂಕೇಜ್ ಬೇಸಾಯ ಪದ್ಧತಿ ನೋಡಿದ ಮೇಲೆ ನಮಗೆ ಉಳಿಯುವ ಕಟ್ಟ ಕಡೆಯ ಧೈರ್ಯದ ಪ್ರಶ್ನೆ:

ಈಗಾಗಲೇ ಬೆಳೆ ಸರ್ವೆಗೆ ಆಧಾರ್ ಲಿಂಕ್ ಆಗಿದೆ, ಫ್ರೂಟ್ ಐಡಿಗೆ ಪಹಣಿ ಲಿಂಕ್ ಆಗಿದೆ. ಈಗ ಪಹಣಿಗೆ ಆಧಾರ್ ಬೀಜ ಬಿತ್ತೋಕೆ (ಸೀಡಿಂಗ್) ರೈತರೇ ಈ ಬರಗಾಲದಲ್ಲಿ ಸುಸ್ತಾಗಿ ಸಾಯಬೇಕಾ?

ಕಂದಾಯ ಇಲಾಖೆಯ ನಡಿಗೆ ಪ್ರತಿ ಗ್ರಾಮದ ಕಡೆಗೆ ಅಂತ ಊರು ತುಂಬ ಪ್ಲಾಸ್ಟಿಕ್ ಫ್ಲೆಕ್ಸ್ ಹಾಕಿ, ಟಿವಿಯಲ್ಲಿ ಜಾಹೀರಾತು ಕೊಟ್ಟು ಬಡ್ಕಂಡಿದ್ರಲ್ಲ!!?, ಆ ಸ್ಕೀಮಿನಲ್ಲಿ ಈ ‘ಲಿಂಕನ್ನು’ ಸೇರಿಸೋಕಾಗಲ್ವಾ?

ಇದನ್ನೂ ಓದಿ: Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಸರ್ಕಾರ, ಜನ ಪ್ರತಿನಿಧಿಗಳು, ಅಧಿಕಾರಿಗಳು ಎಲ್ಲ ಸೇರಿಕೊಂಡು ಯಾಕೆ ಹೀಗೆ ರೈತರ ಜೀವ ತಿಂತೀರಿ ಮಾರ್ರೆ!!!?” ಎಂದು ಅರವಿಂದ ಸಿಗದಾಳ್ ಅವರು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Liquor Ban : ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಡ್ರೈ ಡೇ ಹಿನ್ನೆಲೆಯಲ್ಲಿ ಜೂನ್‌ 1ರ ಸಂಜೆ 4 ಗಂಟೆಯಿಂದಲೇ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

VISTARANEWS.COM


on

By

Liquor ban
Koo

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ (MLC Election) ಮತ್ತು ಲೋಕಸಭಾ ಚುನಾವಣೆಯ (lok sabha election 2024) ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲ ವಾರದಲ್ಲಿ ಮದ್ಯ ಮಾರಾಟವನ್ನು (Liquor Ban) ನಿಷೇಧಿಸಿದೆ. ಅದರಂತೆ ಜೂನ್‌ 1ರ ಸಂಜೆ 4ಕ್ಕೆ ಎಲ್ಲ ಲಿಕ್ಕರ್‌ ಶಾಪ್‌, ವೈನ್‌ ಶಾಪ್‌, ಬಾರ್‌ಗಳು ಬಂದ್‌ ಆಗಿರಲಿದೆ. ಇನ್ನೂ ಹೋಟೆಲ್‌ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವನೆಗೆ ಮಾತ್ರ ವಿನಾಯಿತಿ ನೀಡಲಾಗಿದ್ದು, ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಬಾರ್‌ಗಳು ಒಂದು ವಾರ ಪೂರ್ತಿ ಕ್ಲೋಸ್‌ ಆಗುವುದಿಲ್ಲ. ಒಟ್ಟು ನಾಲ್ಕುವರೆ ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. 5 ದಿನಗಳ ಕಾಲ ಲಿಕ್ಕರ್ ಬ್ಯಾನ್ ಎಂಬ ವಿಚಾರ ಮುಂದಿಟ್ಟುಕೊಂಡು ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಉಚ್ಚ ನ್ಯಾಯಾಲಯವು ನಮ್ಮ ಆದೇಶವನ್ನು ಎತ್ತಿ‌ಹಿಡಿದೆ. ಎಂಎಲ್‌ಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ಮತ ಎಣಿಕೆ ಎರಡು ಒಟ್ಟಿಗೆ ಬಂದಿದೆ.

ಜೂನ್ 3ರ ಸಂಜೆ 4 ಗಂಟೆ ವರೆಗೂ ಪರಿಷತ್ ಚುನಾವಣೆ ನಡೆಯುತ್ತದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿ 48 ಗಂಟೆಗಳ ಮದ್ಯ ಮಾರಾಟ ನಿಷೇಧ ಆಗುತ್ತದೆ. ಹೀಗಾಗಿ ಶನಿವಾರ ಸಂಜೆಯಿಂದಲೇ (ಜೂನ್‌ 1) ಮದ್ಯ ಮಾರಾಟ ನಿಷೇಧಸಲಾಗಿದೆ. ಆದರೆ ಜೂನ್ 3ರಂದು ಸಂಜೆ 4 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಬಾರ್‌ ಮತ್ತು ರೆಸ್ಟೋರಂಟ್‌ಗಳಲ್ಲಿ ಲಿಕ್ಕರ್ ಸೇಲ್ ಬ್ಯಾನ್ ಇದೆ ಹೊರತು, ಆಹಾರಕ್ಕೆ ಯಾವುದೇ ನಿಷೇಧ ಇಲ್ಲ ಎಂದರು.

Liquor ban

ಇನ್ನೂ ಲೋಕಸಭಾ ಮತ ಎಣಿಕೆ ಕಾರ್ಯ ಇರುವುದರಿಂದ ಜೂನ್ 3ರ ಮಧ್ಯರಾತ್ರಿ 12ರಿಂದ ಜೂನ್ 4ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್ 5 ರಂದು ಲಿಕ್ಕರ್ ಬ್ಯಾನ್ ಇರುವುದಿಲ್ಲ. ನಂತರ ಜೂನ್‌ 6 ರಂದು ಮತ ಎಣಿಕೆ ಕಾರ್ಯ ಇದೆ. ಹೀಗಾಗಿ ಒಟ್ಟಾರೆ ನಾಲ್ಕುವರೆ ದಿನಗಳು ಮಾತ್ರ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ದಯಾನಂದ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Prajwal Revanna Case: ಎಸ್‌ಐಟಿ ವಿಚಾರಣೆ ವೇಳೆ ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆ ತೀವ್ರಗೊಂಡಿದೆ. ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌, ಯಾವುದೇ ಪ್ರಶ್ನೆಗೂ ಉತ್ತರಿಸದೇ ಸುಮ್ಮನಿರುವುದರಿಂದ ಬಾಯಿಬಿಡಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಸಿದ್ಧತೆ ನಡೆಯುತ್ತಿದೆ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇಂದು ಪ್ರಜ್ವಲ್‌ನ ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಹೊಳೆನರಸೀಪುರ ಪೊಲೀಸರಿಗೆ ಬಂದೋಬಸ್ತ್ ಏರ್ಪಡಿಸಲು ಸೂಚನೆ ನೀಡಲಾಗಿದೆ. ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಸ್ಥಳ ಮಹಜರು ನಡೆಯಲಿದೆ.

ಏನೇ ಕೇಳಿದ್ರೂ ಲಾಯರ್‌ ಬಳಿ ಕೇಳಿ ಹೇಳುವೆ ಎನ್ನುವ ಸಂಸದ

ನೆನ್ನೆ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎನ್ನಲಾಗಿದೆ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದು ಪ್ರಜ್ವಲ್ ಹೇಳಿದ್ದಾರೆ, ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ, ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಹತ್ತಿರ ಮಾತನಾಡಿ ಹೇಳುವೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ.

ಮೊಬೈಲ್ ಪತ್ತೆ ಮಾಡೋದೆ ಸವಾಲು

ವಿಚಾರಣೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಸವಾಲಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಆದರೆ, ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದಿರುವ ಪ್ರಜ್ವಲ್, ಮೊಬೈಲ್ ಕಳೆದುಹೋಗಿದ್ದಕ್ಕೆ ನಾನು ಸ್ಥಳೀಯ ಠಾಣೆಯಲ್ಲೂ ದೂರು ನೀಡಿದ್ದೆ. ಕೆಎಸ್‌ಪಿ ಆ್ಯಪ್‌ ಮೂಲಕವೂ ದೂರು ದಾಖಲಿಸಿದ್ದೆ. ಕಳೆದ ವರ್ಷ ಮಾರ್ಚ್ 29 ರಂದು ಪಿಎ ಭರತ್ ರಾಜ್ ಮೂಲಕ ದೂರು ನೀಡಲಾಗಿದೆ. ಪೊಲೀಸರು ಕೂಡ ಕೇಸ್ ದಾಖಲಿಸಿಕೊಂಡು, ಮೊಬೈಲ್ ಪತ್ತೆಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

ಪ್ರಜ್ವಲ್ ಹೇಳಿಕೆ ಬೆನ್ನಲ್ಲೇ ಹೊಳೆನರಸೀಪುರ ಪೊಲೀಸರನ್ನು ಎಸ್‌ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ಈ ವೇಳೆ ಮೊಬೈಲ್ ಕಳೆದುಹೋದ ಬಗ್ಗೆ ಎನ್‌ಸಿಆರ್ ದಾಖಲಾಗಿರುವ ಮಾಹಿತಿ ಸಿಕ್ಕಿದೆ. ಆದರೆ ಎಷ್ಟೇ ಹುಡುಕಿದರೂ ಮೊಬೈಲ್ ಸಿಕ್ಕಿಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಹೀಗಾಗಿ‌ ಮೊಬೈಲ್ IMEI ನಂಬರ್ ಪಡೆದು ಮೊಬೈಲ್ ಪತ್ತೆ ಮುಂದಾದ ಎಸ್‌ಐಟಿ ಮುಂದಾಗಿದೆ.

ನೆನ್ನೆ ರಾತ್ರಿ 9 ಗಂಟೆಯವರೆಗೆ ಪ್ರಜ್ವಲ್ ವಿಚಾರಣೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ನಂತರ ಪ್ರಜ್ವಲ್‌ಗೆ ಊಟದ ವ್ಯವಸ್ಥೆ ಮಾಡಿದ್ದರು. ರಾತ್ರಿ 11.30ರ ತನಕ ನಿದ್ದೆ ಬರದೇ ಕೂತಿದ್ದ ಪ್ರಜ್ವಲ್‌, ನಂತರ ನಿದ್ದೆಗೆ ಜಾರಿದ್ದರು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ‌ ಅಸಮರ್ಪಕ ಉತ್ತರಗಳನ್ನು ನೀಡಿದ ಹಿನ್ನೆಲೆಯಲ್ಲಿ ಇಂದು ಕೂಡ ವಿಚಾರಣೆ ನಡೆಸಿ ಲೈಂಗಿಕ ದೌರ್ಜನ್ಯ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

6 ದಿನಕ್ಕೆ ಮುಗಿಯಲ್ವಾ ಪ್ರಜ್ವಲ್ ಪೊಲೀಸ್ ಕಸ್ಟಡಿ?

ಸದ್ಯ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಕ್ತೈಂ ನಂಬರ್ 107 ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೂರು ಎಫ್‌ಐಆರ್‌ಗಳಿಗೆ ಪ್ರತ್ಯೇಕ ತನಿಖಾಧಿಕಾರಿ ನೇಮಕ ಮಾಡಲಾಗಿದೆ. ಹೀಗಾಗಿ ಹೊಳೆ ನರಸೀಪುರ ಕೇಸ್ ಕಸ್ಟಡಿ ಮುಗಿದ ಬಳಿಕ ಸಿಐಡಿ ಸೈಬರ್ ಠಾಣೆಯ ಎಫ್‌ಐಆರ್ ಮೇರೆಗೆ ಅರೆಸ್ಟ್ ಮಾಡಲಾಗುತ್ತದೆ. ಸಿಐಡಿಯ ಎರಡೂ ಎಫ್‌ಐಆರ್‌ಗಳಲ್ಲಿ ಪ್ರತ್ಯೇಕವಾಗಿ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲು ಎಸ್‌ಐಟಿ ನಿರ್ಧಾರ ಮಾಡಿದೆ. ಹೀಗಾಗಿ 10 ರಿಂದ 15 ದಿನ ಪ್ರಜ್ವಲ್ ಪೊಲೀಸ್ ಕಸ್ಟಡಿಯಲ್ಲೇ ಇರುವ ಸಾಧ್ಯತೆ ಇದೆ. ಹೀಗಾಗಿ 6 ದಿನಕ್ಕೇ ಪ್ರಜ್ವಲ್‌ ವಿಚಾರಣೆ ಮುಗಿಯುವುದಿಲ್ಲ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Bhavani Revanna: ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತನಿಖೆಗೆ ತಾನು ಲಭ್ಯ ಇರುತ್ತೇನೆ ಎಂದು ತಿಳಿಸಿದ್ದ ಭವಾನಿ, ಮಧ್ಯಾಹ್ನ ಎರಡು ಗಂಟೆಯಾದರೂ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗಾಗಿ ಬಂದ ಎಸ್‌ಐಟಿ ಅಧಿಕಾರಿಗಳು ಮನೆಯ ಆವರಣದಲ್ಲೇ ಜೀಪ್‌ನಲ್ಲಿ ಕಾದು ಕುಳಿತರು.

VISTARANEWS.COM


on

bhavani revanna SIT team
Koo

ಹಾಸನ: ಕೆ.ಆರ್‌ ನಗರದ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸಿನಲ್ಲಿ (kidnap Case) ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Revanna) ಅವರ ವಿಚಾರಣೆಗಾಗಿ ಹೊಳೆನರಸೀಪುರದ (Holenarasipura) ಅವರ ಮನೆಗೆ ಆಗಮಿಸಿರುವ ಎಸ್‌ಐಟಿ (SIT) ಟೀಮ್‌, ಭವಾನಿ ಅವರ ದರ್ಶನಕ್ಕಾಗಿ ಬೆಳಗಿನಿಂದ ಕಾದು ಕುಳಿತಿತು. ಆದರೆ ಭವಾನಿ ಅವರು ಮನೆಯಲ್ಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬ ಸುಳಿವನ್ನೂ ನೀಡಿಲ್ಲ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತನಿಖೆಗೆ ತಾನು ಲಭ್ಯ ಇರುತ್ತೇನೆ ಎಂದು ತಿಳಿಸಿದ್ದ ಭವಾನಿ, ಮಧ್ಯಾಹ್ನ ಎರಡು ಗಂಟೆಯಾದರೂ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗಾಗಿ ಬಂದ ಎಸ್‌ಐಟಿ ಅಧಿಕಾರಿಗಳು ಮನೆಯ ಆವರಣದಲ್ಲೇ ಜೀಪ್‌ನಲ್ಲಿ ಕಾದು ಕುಳಿತರು. ಮನೆಯ ನೆಲಮಾಳಿಗೆಯಲ್ಲಿ ಭವಾನಿ ಅವರ ʼಒಂದು ಕೋಟಿ ರೂಪಾಯಿʼ ಬೆಲೆಯ ಕಾರು ನಿಂತಿದ್ದು, ಕಾರನ್ನು ಮನೆಯಲ್ಲೇ ಬಿಟ್ಟು ಭವಾನಿ ತೆರಳಿದ್ದಾರೆ. KA-05-AL-8055 (BOSS) ನಂಬರ್‌ನ ಕಿಯಾ ಕಾರ್ನಿವಲ್ ಕಾರನ್ನು ಮನೆಯ ನೆಲಮಾಳಿಗೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಕಾರಿನ ಪಕ್ಕದಲ್ಲೇ ನಿಲ್ಲಿಸಲಾಗಿದೆ.

ನಿನ್ನೆ ಕಿಡ್ನಾಪ್‌ ಕೇಸ್‌ನಲ್ಲಿ ಭವಾನಿ ಅವರ ಜಾಮೀನು ಅರ್ಜಿ ವಜಾ ಆಗಿತ್ತು. ಹೀಗಾಗಿ ಇವತ್ತೋ ನಾಳೆಯೋ ಭವಾನಿ ಬಂಧನ ಆಗುವುದು ಖಚಿತವಾಗಿದೆ. ಹೀಗಾಗಿ ಎಸ್‌ಐಟಿ ಮುಂದೆ ಬಾರದೆ ತಪ್ಪಿಸಿಕೊಂಡಿದ್ದಾರೆ. ಬಂಧನ ಭೀತಿಯಿಂದ ವಿಚಾರಣೆಗೆ ಗೈರುಹಾಜರಾಗಿದ್ದಾರೆ ಎಂದು ಭಾವಿಸಲಾಗಿದೆ. ಭವಾನಿ ಅವರ ಬರವಿಗಾಗಿ ಸಂಜೆ 5 ಗಂಟೆಯವರೆಗೂ ಎಸ್‌ಐಟಿ ತಂಡ ಕಾಯಲಿದೆ ಎಂದು ತಿಳಿದುಬಂದಿದೆ.

ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು. ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ. ಇನ್ನು ಪ್ರಕರಣದಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ, ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿತ್ತು. 50 ಕೋಟಿ ಅಧಿಕ ಹಣ ಅಕ್ರಮವಾಗಿದ್ದರೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಬೇಕು ಎಂಬ ಕೇಂದ್ರ ಹಣಕಾಸು ಸಚಿವಾಲಯದ ಸುತ್ತೋಲೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ದೂರು ಮನವಿ ಪತ್ರ ಸಲ್ಲಿಸಿದೆ. ಹಾಗಾಗಿ ಪ್ರಕರಣದಲ್ಲಿ ಬಹುತೇಕ ಸಿಬಿಐ ಎಂಟ್ರಿಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಪ್ರಕರಣದ ಮಾಹಿತಿ ಪಡೆದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕರಣದ ಬಗ್ಗೆ ತೆಲಂಗಾಣ ಸಿಎಂ ಬಳಿ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣದ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ನಾಗೇಂದ್ರ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿಎಂ, ಡಿಸಿಎಂಗೆ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಕೂಡ ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡಲಾಗಿದೆ.ಇದು ಪಕ್ಷ ಮತ್ತು ಸರ್ಕಾರಕ್ಕೆ ಡ್ಯಾಮೇಜ್. ಮೊದಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಳ್ಳಿ. ತನಿಖೆಯಲ್ಲಿ ತಪ್ಪಿತಸ್ಥರಲ್ಲ ಅಂತ ಸಾಬೀತಾದ್ರೆ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಿಬಿಐ ತನಿಖೆ ಬಗ್ಗೆ ಡಿಕೆಶಿ ಏನು ಹೇಳಿದರು?

ವಾಲ್ಮೀಕಿ ನಿಗಮ ಹಗರಣದ ತನಿಖೆಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿ, ಪತ್ರ ಬರೆಯಲಿ, ತಪ್ಪಿಲ್ಲ. ಅದಕ್ಕೆ ಒಂದು ವಿಧಾನ ಇದೆ. ಇಷ್ಟು ಕೋಟಿ ಅಕ್ರಮ ಇದ್ದಾಗ ನಾನು ಕೊಟ್ಟರೂ ಅಥವಾ ನೀವು ಕೊಡದೇ ಇದ್ದರೂ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಮಗೆ ಗೊತ್ತಿಲ್ಲ ಅಂತ ತಿಳಿದುಕೊಳ್ಳಬೇಡಿ. ಯಾವುದಾದರೂ ಬ್ಯಾಂಕ್‌ನಲ್ಲಿ ಈ ರೀತಿಯಾದರೆ ಯಾವ ಸರ್ಕಾರವೂ ತನಿಖೆಗೆ ಕೊಡಬೇಕು ಅಂತಿಲ್ಲ. ಅವರು ತಗೋಬೇಕು ಅಂತೇನು ಇಲ್ಲ. ನ್ಯಾಚುರಲ್ ಆಗಿ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಾವು ತನಿಖೆಗೆ ಸಹಕರಿಸುತ್ತೇವೆ, ರಾಜಕೀಯ ಇಲ್ಲದೇ ತನಿಖೆ ನಡೆಸಲಿ. ಸದ್ಯಕ್ಕೆ ಸಿಬಿಐ ಬರುವ ಸಂದರ್ಭ ಇಲ್ಲ, ನಾವೇ ತನಿಖೆ ಮಾಡ್ತೀವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

Continue Reading
Advertisement
Shah Rukh Khan shooting for King in Spain
ಬಾಲಿವುಡ್1 min ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು10 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ13 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ17 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ28 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ29 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Kichcha Sudeep joined hands with Sandesh
ಸ್ಯಾಂಡಲ್ ವುಡ್37 mins ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ52 mins ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ1 hour ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ2 hours ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು10 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌