Rajyasabha Election : ಸೋಮಶೇಖರ್‌ ಮಾಡಿದ್ದು ರಾಜಕೀಯ ವ್ಯಭಿಚಾರ ಎಂದ ಸಿ.ಟಿ ರವಿ - Vistara News

ಚಿಕ್ಕಮಗಳೂರು

Rajyasabha Election : ಸೋಮಶೇಖರ್‌ ಮಾಡಿದ್ದು ರಾಜಕೀಯ ವ್ಯಭಿಚಾರ ಎಂದ ಸಿ.ಟಿ ರವಿ

Rajyasabha Election : ಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗ್ತೀವಿ. ಆದರೆ, ರಾಜಕಾರಣದ ವ್ಯಭೀಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

VISTARANEWS.COM


on

Rajyasabha Election CT RAVI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ರಾಜ್ಯಸಭೆ ಚುನಾವಣೆಯಲ್ಲಿ (Rajyasabha Election) ಯಶವಂತ ಪುರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ (ST Somashekhar) ಅವರು ಅಡ್ಡ ಮತದಾನ (Cross Voting) ಮಾಡಿದ್ದನ್ನು ರಾಜಕೀಯ ವ್ಯಭಿಚಾರ (Political Adultery) ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ವ್ಯಾಖ್ಯಾನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಸಿ.ಟಿ. ರವಿ ಅವರು ಅಡ್ಡ ಮತದಾನ ರಾಜಕೀಯ ವ್ಯಭಿಚಾರಕ್ಕೆ ಸಮ ಎಂದು ಹೇಳಿದರು.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಎಸ್.ಟಿ. ಸೋಮಶೇಖರ್‌ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕುವ ಮೂಲಕ ವಿಪ್‌ ಉಲ್ಲಂಘನೆ ಮಾಡಿದ್ದರು. ಅದಕ್ಕಿಂತ ಮೊದಲು ಮಾತನಾಡಿದ್ದ ಅವರು, ನನ್ನ ಕ್ಷೇತ್ರಕ್ಕೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ, ವಿಪ್‌, ಶಿಸ್ತು ಕ್ರಮ ಯಾವುದೂ ಲೆಕ್ಕಕ್ಕಿಲ್ಲ ಎಂದು ಹೇಳಿದ್ದರು.

ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಟಿ. ರವಿ ಅವರು, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದಲ್ಲ. ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಟಿಸಿದಂತೆ ಎಂದು ಹೇಳಿದರು.

ವ್ಯಭಿಚಾರಿಗಳು ಎಲ್ಲ ಕಡೆಗೆ ಸಲ್ಲುತ್ತಾರೆ ಎಂದ ಸಿ.ಟಿ ರವಿ

ʻʻಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗ್ತೀವಿ. ಆದರೆ, ರಾಜಕಾರಣದ ವ್ಯಭೀಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ. ಹಾರ್ಡ್ ಕೋರ್, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡೋರು ನಿಷ್ಠುರಕ್ಕೆ ಒಳಗಾಗುತ್ತಾರೆʼʼ ಎಂದು ಹೇಳಿದರು.

ಆದರೆ, ಹೊಂದಾಣಿಕೆ ಮಾಡಿಕೊಳ್ಳುವವರು ನಮ್ಮ ಪಕ್ಷದ ಸಿಎಂ ಮಾತ್ರವಲ್ಲ, ಬೇರೆ ಪಕ್ಷದ ಸಿಎಂ ಬಳಿಯೂ ಚೆನ್ನಾಗಿರ್ತಾರೆ ಎಂದು ಹೇಳಿದ ಅವರು, ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಅದರಲ್ಲೂ ಒಂದು ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡೋದರ ಬಗ್ಗೆ ಸಹನೆ ಇರಲೇಬಾರದು ಎಂದು ಹೇಳಿದರು. ಈ ಮೂಲಕ ಅಡ್ಡ ಮತದಾನ ಮಾಡಿದ ಎಸ್.‌ಟಿ. ಸೋಮಶೇಖರ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಪರೋಕ್ಷವಾಗಿ ಹೇಳಿದರು.

ಇದನ್ನೂ ಓದಿ : Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?

ಎಚ್‌.ಡಿ ಕುಮಾರಸ್ವಾಮಿಯಿಂದಲೂ ವಾಗ್ದಾಳಿ

ಏಸ್.ಟಿ. ಸೋಮಶೇಖರ್‌ ಒಬ್ಬ ಅವಕಾಶವಾದಿ. ಮೂರು ವರ್ಷಗಳ ಹಿಂದೆ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿ ಮಂತ್ರಿಯಾದ ಅವರು ಈಗ ತಿರುಗಿಬಿದ್ದು ಕಾಂಗ್ರೆಸ್‌ ಜತೆ ಸೇರಿಕೊಂಡಿದ್ದಾರೆ. ಇದು ಅವಕಾಶವಾದಿ ಧೋರಣೆ ಎಂದು ಎಚ್‌.ಡಿ ಕುಮಾರಸ್ವಾಮಿ ಅವರೂ ಕೂಡಾ ಕುಮಾರಸ್ವಾಮಿ ಮೇಲೆ ನೇರವಾಗಿ ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಮತ ಹಾಕುವ ಮೊದಲು ಎಸ್‌.ಟಿ ಸೋಮಶೇಖರ್‌ ಅವರು ಬಹಿರಂಗವಾಗಿ ಮಾತನಾಡಿದ್ದರು. ಯಾರು ಕ್ಷೇತ್ರಕ್ಕೆ ಅನುದಾನ ಕೊಡುತ್ತೇನೆ ಎಂದು 100% ಗ್ಯಾರಂಟಿ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ. ಹಿಂದೆ ಬಿಜೆಪಿಗೆ ಮತ ಹಾಕಿದ ಕೊಟ್ಟ ಭರವಸೆಗಳು ಯಾವುದೂ ಈಡೇರಿಲ್ಲ ಎಂದೆಲ್ಲ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿಪ್‌ನ್ನು ಕೇರ್‌ ಮಾಡಲ್ಲ, ಶಿಸ್ತು ಕ್ರಮಕ್ಕೆ ಸೊಪ್ಪು ಹಾಕಲ್ಲ ಎಂದು ಹೇಳುವ ಮೂಲಕ ತಾನು ಕಾಂಗ್ರೆಸ್‌ಗೇ ಮತ ಹಾಕುವುದು ಎಂದು ಸ್ಪಷ್ಟಪಡಿಸಿದ್ದರು. ಇದನ್ನು ಗಮನಿಸಿಯೇ ಎಚ್‌.ಡಿ ಕುಮಾರಸ್ವಾಮಿ ಅವರು ಸಿಡಿದುಬಿದ್ದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

Accident Case : ಗೊಬ್ಬರ ಚೀಲಗಳನ್ನು ಹೊತ್ತು ಬರುತ್ತಿದ್ದ ಟ್ರ್ಯಾಕ್ಟರ್‌ ಇಳಿಜಾರಿನಲ್ಲಿ ಪಲ್ಟಿಯಾಗಿದ್ದು, ಅದರಡಿ ಸಿಲುಕಿದ ಯುವಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಇತ್ತ ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್‌ ಬೋಟ್‌ ಡಿಕ್ಕಿ ಹೊಡೆದಿದ್ದು, ಬಾಲಕನೊರ್ವ ಗಾಯಗೊಂಡಿದ್ದಾನೆ.

VISTARANEWS.COM


on

By

Accident Case
Koo

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿ; ಪಾರಾದ ತಂದೆ-ಮಗ

ಮೀನುಗಾರಿಕಾ ಬೋಟ್‌ಗೆ ಟೂರಿಸ್ಟ್ ಬೋಟ್ ಡಿಕ್ಕಿಯಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ತಂದೆ- ಮಗ ಪಾರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ತನ್ಮಡಗಿಯ ಶರಾವತಿ ನದಿಯಲ್ಲಿ ಘಟನೆ ನಡೆದಿದೆ. ಮೀನುಗಾರಿಕಾ ಬೋಟ್‌ನಲ್ಲಿದ್ದ ಸಮರ್ಥ ಅಂಬಿಗ (16) ಎಂಬಾತ ಎಡಗೈಗೆ ಗಂಭೀರ ಗಾಯವಾಗಿದೆ.

ಸಮರ್ಥ ತನ್ನ ತಂದೆ ವಾಮನ ಅಂಬಿಗ ಜತೆ ಮೀನುಗಾರಿಕೆಗೆ ತೆರಳಿದ್ದ. ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೂರಿಸ್ಟ್ ಬೋಟ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

ಡಿಸೇಲ್‌ ಖಾಲಿ ಮಾರ್ಗ ಮಧ್ಯದಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್

ಕುಂದಾಪುರ- ಶಿವಮೊಗ್ಗ- ಬೆಂಗಳೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹೊಸನಗರ ಘಾಟ್‌ನ ಮಾಸ್ತಿಕಟ್ಟೆ ಬಳಿ ಡಿಸೇಲ್‌ ಖಾಲಿ ಆಗಿ ಮಾರ್ಗ ಮಧ್ಯದಲ್ಲೇ ನಿಂತು ಹೋದ ಘಟನೆ ನಡೆದಿದೆ. ಡಿಸೇಲ್ ಖಾಲಿ ಆದ ಕಾರಣ ಮಾರ್ಗ ಮಧ್ಯದಲ್ಲೇ ಬಸ್ ನಿಲ್ಲಿಸಿದ ಬಸ್ ಚಾಲಕ, ಪ್ರಯಾಣಿಕರಿಂದ ಬಸ್ ತಳ್ಳಿಸಿದ್ದಾರೆ. ನಂತರ ಪುರುಷರಿಗೆ ಟಿಕೆಟ್‌ನ ಅರ್ಧ ಹಣ ಕೊಟ್ಟು ಖಾಸಗಿ ಬಸ್‌ನಲ್ಲಿ ಕಳುಹಿಸಿದ್ದಾರೆ. ಶಕ್ತಿ ಯೋಜನೆಯಲ್ಲಿ ಪ್ರಯಾಣ ಮಾಡಿದ ಮಹಿಳೆಯರಿಗೆ ತೊಂದರೆಯುಂಟಾಯ್ತು. ಇದರಿಂದಾಗಿ ಅಧಿಕಾರಿಗಳಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದರು. ಸ್ಥಳೀಯ ಜನರ ಸಹಾಯದಿಂದ ಬೇರೆ ಬಸ್‌ನಲ್ಲಿ ಪ್ರಯಾಣಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Road Accident : ವಿಜಯನಗರದಲ್ಲಿ ಬೈಕ್‌ ಸ್ಕಿಡ್‌ ಆಗಿ ಜಲಾಶಯಕ್ಕೆ ಬಿದ್ದು, ಸವಾರನೊಬ್ಬ ಮೃತಪಟ್ಟರೆ, ಇತ್ತ ಚಿಕ್ಕಮಗಳೂರಲ್ಲಿ ನಿಯಂತ್ರಣ ತಪ್ಪಿದ ಕಾರುವೊಂದು ಕೆರೆಗೆ ಹಾರಿದ್ದು ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident in Vijayanagara
Koo

ವಿಜಯನಗರ/ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ಸವಾರರ ನಿಯಂತ್ರಣ ತಪ್ಪಿದ್ದು ಪ್ರಾಣವನ್ನೇ (Road Accident) ಕಳೆದುಕೊಂಡಿದ್ದಾರೆ. ವಿಜಯನಗರದಲ್ಲಿ ಬೈಕ್ ಸ್ಕಿಡ್‌ ಆಗಿ ಸವಾರರಿಬ್ಬರು ಜಲಾಶಯದ ಹಿನ್ನೀರಿನ ಕಂದಕಕ್ಕೆ ಹಾರಿ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರ ಪೈಕಿ ಒಬ್ಬ ಯುವಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಜಗದೀಶ್ (28) ಮೃತಪಟ್ಟವನು. ಶಶಾಂಕ್ ಪಾಟೀಲ್‌ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಬೆಂಗಳೂರಿನಿಂದ ಇಳಕಲ್‌ಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಸ್ಪಿಡ್‌ ಆಗಿ ಬಂದು ರಭಸವಾಗಿ ತುಂಗಭದ್ರಾ ಜಲಾಶಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಿಂದ ಹಾರಿ ಹಿನ್ನೀರಿಗೆ ಬಿದ್ದಿದ್ದಾರೆ. ಕೆಳಗೆ ಬೃಹತ್‌ ಗಾತ್ರದ ಕಲ್ಲುಗಳು ಇದ್ದ ಕಾರಣ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ಜಗದೀಶ್‌ ಮೃತಪಟ್ಟಿದ್ದಾನೆ. ಶಶಾಂಕ್‌ ಗಂಭೀರ ಗಾಯಗೊಂಡಿದ್ದು ಆತನನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Road Accident

ಈ ಇಬ್ಬರೂ ಇಳಕಲ್ ಮೂಲದವರು ಎಂದು ತಿಳಿದು ಬಂದಿದೆ. ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಗದೀಶ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

ಚಿಕ್ಕಮಗಳೂರಲ್ಲಿ ಕಾರು ಸಮೇತ ಕೆರೆಗೆ ಬಿದ್ದು ವ್ಯಕ್ತಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಉರುಳಿದ್ದು, ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಅಂಬಳೆ ಗ್ರಾಮದ ರಮೇಶ್ (33), ಮೃತ ದುರ್ದೈವಿ. ಚಿಕ್ಕಮಗಳೂರು ತಾಲೂಕಿನ ಅಂಬಳೆ ಕೆರೆಯಲ್ಲಿ ಘಟನೆ ನಡೆದಿದೆ. ಬುಧವಾರ ತಡರಾತ್ರಿ ರಮೇಶ್‌ ಮತ್ತು ಆತನ ಸ್ನೇಹಿತ ಸಂತೋಷ್‌ ಕಾರಿನಲ್ಲಿ ಬರುವಾಗ ನಿಯಂತ್ರಣ ತಪ್ಪಿದೆ. ಏಕಾಏಕಿ ಕಾರು ಕೆರೆಗೆ ಹಾರಿದೆ. ಕಾರು ನೀರಿನಲ್ಲಿ ಮುಳುಗಿದ್ದರಿಂದ ಹೊರಬರಲು ಆಗದೆ ರಮೇಶ್‌ ಮೃತಪಟ್ಟರೆ, ಸಂತೋಷ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರೊಳಗೆ ಇದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೆರೆಯಿಂದ ಕಾರನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

Gas Leak deaths: ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

VISTARANEWS.COM


on

gas leak deaths mysore
Koo

ಮೈಸೂರು: ಮನೆಯೊಳಗೆ ಅಡುಗೆ ಅನಿಲ ಸೋರಿಕೆಯಾದ (Gas leakage) ಪರಿಣಾಮ ಒಂದೇ ಕುಟುಂಬದ ನಾಲ್ವರು ರಾತ್ರಿ ನಿದ್ರೆಯಲ್ಲೇ ಪ್ರಾಣ (Gas Leak deaths) ಬಿಟ್ಟಿದ್ದಾರೆ. ಕಿಟಕಿ ಬಾಗಿಲುಗಳು ಭದ್ರವಾಗಿ ಮುಚ್ಚಿದ್ದರಿಂದ, ಅಡುಗೆ ಅನಿಲ (LPG) ಹೊರಹೋಗಲು ಯಾವುದೇ ಕಿಂಡಿಯಿಲ್ಲದೆ ಬಂದ್‌ ಆಗಿದ್ದು, ನಾಲ್ವರ ಜೀವ ತೆಗೆದಿದೆ.

ಮೃತಪಟ್ಟ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯ ಪಟ್ಟಣ ಗ್ರಾಮದವರು. ಕುಮಾರಸ್ವಾಮಿ (45), ಮಂಜುಳಾ (39), ಮಕ್ಕಳಾದ ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ್ದಾರೆ. ಸೋಮವಾರ ಕಡೂರಿನಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಮನೆಗೆ ಬಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಬುಧವಾರ ಬೆಳಗಿನ ಜಾವ ಆದರೂ ಎದ್ದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು ಬಾಗಿಲು ಬಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಾಲ್ವರ ಬಲಿ ಪಡೆಯಿತಾ ಗಾಳಿ ಬೆಳಕು ಇಲ್ಲದ ಮನೆ?

ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಬಟ್ಟೆ ಇಸ್ತ್ರಿ ಪೆಟ್ಟಿಗೆಗೆ ಗ್ಯಾಸ್ ಬಳಸುತ್ತಿದ್ದರು. ಇದಕ್ಕಾಗಿ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಇಟ್ಟುಕೊಂಡಿದ್ದರು. ಇದರಿಂದಲೇ ಅನಿಲ ಸೋರಿಕೆಯಾಗಿದೆ.

ಸೋಮವಾರ ರಾತ್ರಿ ಮನೆಗೆ ಬಂದವರು ಎರಡು ಕಿಟಕಿ ಬಂದ್ ಮಾಡಿಕೊಂಡು ಮಲಗಿದ್ದರು. ರೂಂನಲ್ಲಿ ಗಂಡ ಹೆಂಡತಿ, ಹಾಲ್‌ನಲ್ಲಿ ಮಕ್ಕಳಿಬ್ಬರು ಮಲಗಿದ್ದರು. ಈ ವೇಳೆ ಸೋರಿಕೆಯಾದ ಅನಿಲ ಸೇವಿಸಿ ಎಲ್ಲರೂ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬ ಮಗಳಿಂದ ಬಾಗಿಲು ತೆಗೆಯುವ ವಿಫಲ ಯತ್ನ ನಡೆದಿದೆ. ಎಲ್ಲರ ಕಿವಿ ಮತ್ತು ಮೂಗು ಬಾಯಲ್ಲಿ ರಕ್ತ ಸೋರಿದೆ. ಅಂತಿಮವಾಗಿ ಕುಟುಂಬ ದುರಂತ ಅಂತ್ಯ ಕಂಡಿದೆ.

” ಮೊಬೈಲ್‌ ಕಾಲ್‌ ರಿಸೀವ್‌ ಮಾಡದ್ದರಿಂದ ಅನುಮಾನಪಟ್ಟ ಸಂಬಂಧಿಕರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಪರಿಶೀಲಿಸಿ ನಮಗೆ ಮಾಹಿತಿ ನೀಡಿದರು. ನಾವು ಬಂದಾಗ ಗ್ಯಾಸ್ ವಾಸನೆ ಬರುತ್ತಿತ್ತು. ಮನೆಯ ಹಿಂದಿನ ಕಿಟಕಿ ತೆರೆದು ನೋಡಿದಾಗಲೂ ಸ್ಮೆಲ್ ಬರ್ತಿತ್ತು. ಫೈರ್ ಡಿಪಾರ್ಟ್ಮೆಂಟ್, ಎಫ್ಎಸ್ಐಲ್ ಬಂದು ಡೋರ್ ಒಪನ್ ಮಾಡಿದೆವು. ಮನೆಯಲ್ಲಿ ಮೂರು ಸಿಲಿಂಡರ್ ಇದೆ. ಗ್ಯಾಸ್‌ ಬಳಸಿ ಐರನ್ ಮಾಡ್ತಿದ್ದರು. ಮೇಲ್ನೋಟಕ್ಕೆ ಒಂದು ಸಿಲಿಂಡರ್ ಮಾತ್ರ ಲೀಕ್ ಆಗಿದೆ. ಉಳಿದ ಎರಡು ಸಿಲಿಂಡರ್ ಖಾಲಿ ಇತ್ತು” ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading
Advertisement
Virat Kohli
ಕ್ರೀಡೆ25 seconds ago

Virat Kohli : ಕೊಹ್ಲಿಯ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ45 mins ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ47 mins ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ49 mins ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ51 mins ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ54 mins ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ55 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ1 hour ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ1 hour ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Dengue Fever
ಆರೋಗ್ಯ1 hour ago

Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌