Caste Census report: ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ; ಎಸ್ಸಿಗಳು ಫಸ್ಟ್‌, 2ನೇ ಸ್ಥಾನದಲ್ಲಿ ಮುಸ್ಲಿಮರು! - Vistara News

ಪ್ರಮುಖ ಸುದ್ದಿ

Caste Census report: ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ; ಎಸ್ಸಿಗಳು ಫಸ್ಟ್‌, 2ನೇ ಸ್ಥಾನದಲ್ಲಿ ಮುಸ್ಲಿಮರು!

Caste Census report: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಹಸ್ತಾಂತರ ಮಾಡಿದ್ದಾರೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿರುವುದು ಈ ವರದಿಯ ಸಾರವಾಗಿದೆ.

VISTARANEWS.COM


on

Population revealed in caste census report SCs first and Muslims second place
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕಾರ ಮಾಡಿದೆ. ಅಲ್ಲದೆ, ಈ ವರದಿಯನ್ನು ಬಾಕ್ಸ್‌ಗಳಲ್ಲಿ ಸೀಲ್‌ ಮಾಡಲಾಗಿದ್ದರೂ ಕೆಲವು ಅಂಶಗಳು ಸೋರಿಕೆಯಾಗಿವೆ. ಇದರ ಅನ್ವಯ ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗಗೊಂಡಿದೆ. ಇದರ ಅನ್ವಯ ಪರಿಶಿಷ್ಟ ಜಾತಿ (ಎಸ್‌ಸಿ – Scheduled Castes) ಸಮುದಾಯದವರು ಅತಿ ಹೆಚ್ಚು (1.08 ಕೋಟಿ) ಇದ್ದರೆ, ನಂತರದ ಸ್ಥಾನದಲ್ಲಿ ಮುಸ್ಲಿಂ ಸಮುದಾಯದವರು (Muslim Community) ಇದ್ದಾರೆ. ಲಿಂಗಾಯತ (Lingayat Community) ಮತ್ತು ಒಕ್ಕಲಿಗ ಸಮುದಾಯದವರು (Okkaliga Community) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಹಸ್ತಾಂತರ ಮಾಡಿದ್ದಾರೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿರುವುದು ಈ ವರದಿಯ ಸಾರವಾಗಿದೆ. ಹೀಗಾಗಿ ಇದು ರಾಜಕೀಯವಾಗಿ ಇನ್ನು ಯಾವ ತಿರುವನ್ನು ಪಡೆದುಕೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಅತಿ ಹಿಂದುಳಿದ ಸಮುದಾಯ ಯಾವುದು?

ಒಟ್ಟು 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 32 ಲಕ್ಷ ಜನ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆ 5.98 ಕೋಟಿ. ಈ ಪೈಕಿ ಅಹಿಂದ ವರ್ಗದವರು 3.96 ಕೋಟಿಯಷ್ಟಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಹಾಗೂ ಇತರರ ಸಂಖ್ಯೆ 1.87 ಕೋಟಿಯಷ್ಟಿದೆ.

192 ಹೊಸ ಜಾತಿ ದಾಖಲು

ಒಟ್ಟು ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 1.08 ಕೋಟಿ, ಪರಿಶಿಷ್ಟ ಪಂಗಡದ 40.45 ಲಕ್ಷ, ಮುಸ್ಲಿಮರು 70 ಲಕ್ಷ ಹಾಗೂ ಹಿಂದುಳಿದ ಸಮುದಾಯಕ್ಕೆ ಸೇರಿದ ಕುರುಬರು 45 ಲಕ್ಷ ಸಂಖ್ಯೆಯಲ್ಲಿದ್ದಾರೆ. ಒಟ್ಟು 816 ಇತರ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ. ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. 10ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 80 ಜಾತಿಗಳ ಹೆಸರನ್ನು ವರದಿಯಲ್ಲಿ ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಲಿವೆ.

ಜಾತಿವಾರು ಜನಸಂಖ್ಯೆಯ ವಿವರ

  • ಪರಿಶಿಷ್ಟ ಜಾತಿ(ಎಸ್’ಸಿ)- 1.08 ಕೋಟಿ
  • ಪರಿಶಿಷ್ಟ ಪಂಗಡ (ಎಸ್‌ಟಿ)- 40.45 ಲಕ್ಷ
  • ಮುಸ್ಲಿಮರು- 70 ಲಕ್ಷ
  • ಲಿಂಗಾಯತ- 65 ಲಕ್ಷ
  • ಒಕ್ಕಲಿಗ- 60 ಲಕ್ಷ
  • ಕುರುಬರು- 45 ಲಕ್ಷ
  • ಈಡಿಗ- 15 ಲಕ್ಷ
  • ವಿಶ್ವಕರ್ಮ- 15
  • ಬೆಸ್ತ- 15 ಲಕ್ಷ
  • ಬ್ರಾಹ್ಮಣ- 14 ಲಕ್ಷ
  • ಗೊಲ್ಲ (ಯಾದವ) – 10 ಲಕ್ಷ
  • ಮಡಿವಾಳ ಸಮಾಜ – 6
  • ಅರೆ ಅಲೆಮಾರಿ – 6 ಲಕ್ಷ
  • ಕುಂಬಾರ – 5 ಲಕ್ಷ
  • ಸವಿತಾ ಸಮಾಜ – 5 ಲಕ್ಷ

ವರದಿಯ ಸಾರಾಂಶ ಏನು?

  • ಒಟ್ಟು 5.98 ಕೋಟಿ ಮಂದಿಯ ಸಮೀಕ್ಷೆ
  • ಸಮೀಕ್ಷೆಯಿಂದ ಹೊರಗುಳಿದವರ ಪ್ರಮಾಣ 32 ಲಕ್ಷ
  • ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ
  • ಕರ್ನಾಟಕದಲ್ಲಿ ದಲಿತರ ಪ್ರಮಾಣವೇ ಹೆಚ್ಚು
  • ಕುರುಬರೇ ಅತ್ಯಂತ ಹಿಂದುಳಿದ ವರ್ಗ
  • ಸಮೀಕ್ಷೆಗೊಳಪಟ್ಟ ಜಾತಿಗಳ ಸಂಖ್ಯೆ 1,351
  • ಹೊಸದಾಗಿ ದಾಖಲಾದ ಜಾತಿಗಳ ಸಂಖ್ಯೆ 192
  • ಸರ್ಕಾರ ಗುರುತಿಸಿರುವ ಇತರೆ ಹಿಂದುಳಿದ ಜಾತಿಗಳು‌ (ಒಬಿಸಿ) 816

ಇದನ್ನೂ ಓದಿ: Sedition case: ರಾಜ್ಯಪಾಲರ ಅಂಗಳಕ್ಕೆ ‘ಪಾಕಿಸ್ತಾನ್‌ ಜಿಂದಾಬಾದ್‌’ ಕದನ; ಸರ್ಕಾರ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು ಜಿಲ್ಲಾಧಿಕಾರಿ ಸುಪರ್ದಿಗೆ ವರದಿ

ಜಯಪ್ರಕಾಶ್ ಹೆಗ್ಡೆ ನೀಡಿದ ವರದಿಯನ್ನು ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್ ಸುಪರ್ದಿಗೆ ರಾಜ್ಯ ಸರ್ಕಾರ ನೀಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ವರದಿಯನ್ನು ಕೊಂಡೊಯ್ದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

Kantara Movie: ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ ಮೊತ್ತಗೆ ಸೇಲ್‌ ಆಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದಾರೆ. ಹಾಗಾಗಿ, ಕಾಂತಾರ ಚಾಪ್ಟರ್‌ 1 ಕುತೂಹಲ ಹೆಚ್ಚಿಸಿದೆ. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ಸಿನಿಮಾ ಬಿಡುಗಡೆಗೆ ಮೊದಲೇ ಕಾಂತಾರ ಭರ್ಜರಿ ಆದಾಯ ಗಳಿಸಿದಂತಾಗಿದೆ.

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

Rishab Shetty

ಚಿತ್ರೀಕರಣ ಆರಂಭ

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನವಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದರೆ, ಇನ್ನೂ ಕೆಲವು ಮಾಧ್ಯಮಗಳು ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ ಎಂದು ವರದಿ ಮಾಡಿವೆ. ಹಾಗಾಗಿ, ಹೆಲಿಕಾಪ್ಟರ್‌ ಪತನವಾಗಿದೆಯೋ, ತುರ್ತು ಲ್ಯಾಂಡ್‌ ಆಗಿದೆಯೋ ಎಂಬ ಮಾಹಿತಿ ನಿಖರವಾಗಿ ಲಭ್ಯವಾಗಿಲ್ಲ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ. ಆದಾಗ್ಯೂ, ಇರಾನ್‌ ಸರ್ಕಾರದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇರಾನ್‌ ಬೆಂಗಾವಲು ಪಡೆ ಇದ್ದ ಹೆಲಿಕಾಪ್ಟರ್‌ ಪತನಗೊಂಡಿದೆ. ಅದರಲ್ಲಿ, ಇಬ್ರಾಹಿಂ ರೈಸಿ ಅವರು ಇದ್ದರೋ, ಇಲ್ಲವೋ ಎಂಬುದರ ಮಾಹಿತಿ ನಿಖರವಾಗಿಲ್ಲ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳುತ್ತಿದೆ ಎಂಬುದಾಗಿ ಸಚಿವರೊಬ್ಬರು ತಿಳಿಸಿದ್ದಾರೆ ಎಂಬುದಾಗಿ ಬಿಬಿಸಿ ವರದಿ ತಿಳಿಸಿದೆ. ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶದಲ್ಲಿ ಪತನಗೊಂಡಿರುವುದಾಗಿ ವರದಿಗಳು ಮಾಹಿತಿ ನೀಡಿವೆ. ಪತನಗೊಂಡಿರುವ ಹೆಲಿಕಾಪ್ಟರ್‌ ಪತ್ತೆಹಚ್ಚಲು ಸಿಬ್ಬಂದಿಯು ಹರಸಾಹಸ ಪಡುತ್ತಿದೆ ಎಂದು ಕೂಡ ತಿಳಿದುಬಂದಿದೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ತುರ್ತು ಭೂಸ್ಪರ್ಶ ಮಾಡಿದ ಕಾರಣದಿಂದಾಗಿ ಯಾರಿಗೂ ಅಪಾಯವಾಗಿಲ್ಲ ಎಂದು ಮತ್ತೊಂದಿಷ್ಟು ಮೂಲಗಳು ತಿಳಿಸಿವೆ.

ಇದನ್ನೂ ಓದಿ: US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Continue Reading

ಕ್ರೀಡೆ

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

PBKS vs SRH: ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​

VISTARANEWS.COM


on

PBKS vs SRH
Koo

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಹೆಡ್​ ಕ್ಲೀನ್​ ಬೌಲ್ಡ್​


ಗುರಿ ಬೆನ್ನಟ್ಟಿದ ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಹೆಡ್​ ವಿಕೆಟ್​ ಬಿದ್ದರೂ ಕೂಡ ವಿಚಲಿತರಾಗದ ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಮೊತ್ತವನ್ನು ಈ ಜೋಡಿ ಕೇವಲ 4.6 ಓವರ್​ನಲ್ಲಿ ಬಾರಿಸಿದರು. ತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮತ್ತೆ ಸಿಡಿದ ಅಭಿಷೇಕ್ ಶರ್ಮ

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಇದೇ ವೇಳೆ 37 ಸಿಕ್ಸರ್​ ಬಾರಿಸಿರುವ ವಿರಾಟ್​ ಕೊಹ್ಲಿಯ ದಾಖಲೆ ಪತನಗೊಂಡಿತು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯ 3ನೇ ಅರ್ಧಶತಕವಾಗಿದೆ.

ಇದನ್ನೂ ಓದಿ RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್​ ಬ್ಯಾಟರ್​ಗಳು ಬೃಹತ್​ ಮೊತ್ತ ಪೇರಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ ಕಾರಣ ಸೋಲಿಗೆ ತುತ್ತಾದರು.

ಪ್ರಭಾಸಿಮ್ರಾನ್ ಅರ್ಧಶತಕ ವ್ಯರ್ಥ


ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕೂಡ ಅತ್ಯಂತ ಜೋಶ್​ನಲ್ಲಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರರಾದ ​ಅಥರ್ವ ತೈಡೆ ಮತ್ತು ಪ್ರಭಾಸಿಮ್ರಾನ್ ಸಿಂಗ್ 10 ಸರಾಸರಿಯಲ್ಲಿ ರನ್​ ಗಳಿಸಿ ಮೊದಲ ವಿಕೆಟ್​ಗೆ 97 ರನ್​ ಒಟ್ಟುಗೂಡಿಸಿದರು. ಅಥರ್ವ ತೈಡೆ 46 ರನ್​ ಬಾರಿಸಿದರೆ, ಪ್ರಭಾಸಿಮ್ರಾನ್ 71 ರನ್(7 ಬೌಂಡರಿ, 4 ಸಿಕ್ಸರ್​)​ ಬಾರಿಸಿದರು. ಆ ಬಳಿಕ ಬಂದ ರೀಲಿ ರೋಸೊ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 4 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ 3 ರನ್​ ಅಂತರದಿಂದ ಅರ್ಧಶಕ ವಂಚಿತರಾದರು.

5 ನೇ ಕ್ರಮಾಂಕದಲ್ಲಿ ಆಡಲಿಳಿದ ಜಿತೇಶ್​ ಶರ್ಮ ಕೇವಲ 15 ಎಸೆತಗಳಿಂದ ಅಜೇಯ 32 ರನ್​ ಬಾರಿಸಿ ತಂಡದ ಬೃಹತ್​ ಮೊತಕ್ಕೆ ಕಾರಣರಾದರು. ಹೈದರಾಬಾದ್​ ಪರ ಎಡಗೈ ವೇಗಿ ಟಿ ನಟರಾಜ್​ 33 ರನ್​ಗೆ 2 ವಿಕೆಟ್​ ಉರುಳಿಸಿದರು. ನಾಯಕ ಪ್ಯಾಟ್​ ಕಮಿನ್ಸ್​ ಮತ್ತು ವಿಜಯಕಾಂತ್ ವ್ಯಾಸಕಾಂತ್ ತಲಾ ಒಂದು ವಿಕೆಟ್​ ಪಡೆದರು.

Continue Reading

ಆರೋಗ್ಯ

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

West Nile fever : ಕೇರಳದಲ್ಲಿ ವೆಸ್ಟ್‌ ನೈಲ್‌ ಜ್ವರವು ಹೆಚ್ಚಾಗಿ ಆವರಿಸುತ್ತಿದೆ. ಮೈಸೂರಿನ ಗಡಿಭಾಗದಲ್ಲೂ ಜ್ವರ ಹರಡುವ ಕಾರಣಕ್ಕೆ ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಈಗಾಗಲೇ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಈ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.

VISTARANEWS.COM


on

By

West Nile fever Health department on alert
Koo

ಮೈಸೂರು: ನಿಫಾ, ಕೋವಿಡ್, ಹಕ್ಕಿ ಜ್ವರ, ಹಂದಿ ಜ್ವರ ಬಳಿಕ ಈಗ ವೆಸ್ಟ್ ನೈಲ್ ಜ್ವರದ ಭೀತಿ ಹೆಚ್ಚಾಗಿದೆ. ನೆರೆಯ ಕೇರಳದಲ್ಲಿ ವೆಸ್ಟ್‌ ನೈಲ್ ಜ್ವರ (West Nile fever) ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ (Health department) ಅಲರ್ಟ್ ಆಗಿದೆ.

ಎಚ್‌ಡಿ ಕೋಟೆ ತಾಲೂಕಿನ ಡಿ.ಬಿ ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗಿದೆ. ಗಡಿ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆಯೊಂದಿಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ವೈರಸ್‌ ಕೇರಳದಲ್ಲಿ ಕಾಣಿಸಿಕೊಂಡು ನಂತರ ಕರ್ನಾಟಕಕ್ಕೂ ಹರಡಿತ್ತು. ಹೀಗಾಗಿ ಕೇರಳ ಗಡಿ ಮೂಲಕ ಮೈಸೂರಿಗೆ ಪ್ರವೇಶ ಪಡೆಯುವ ರೋಗಿಗಳಿಂದ ರಾಜ್ಯಕ್ಕೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಲಾಗುತ್ತಿದೆ.

ಎಚ್‌ಡಿ ಕೋಟೆಯ ಗಡಿ ಭಾಗದಲ್ಲಿ ಹಲವರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಜ್ವರ, ತಲೆನೋವು, ಶೀತದಿಂದ ಬಳಲುತ್ತಿದ್ದಾರೆ. ಹೀಗಾಗಿ ಎಚ್‌ಡಿಕೋಟೆಯ ತಾಲೂಕು ಆರೋಗ್ಯಾಧಿಕಾರಿಗಳು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಸ್ಯಾಂಪಲ್ ರವಾನಿಸಿದ್ದಾರೆ.

West Nile fever  Health department on alert
ಜನರಲ್ಲಿ ವೆಸ್ಟ್‌ ನೈಲ್‌ ಜ್ವರದ ಕುರಿತು ಜಾಗೃತಿ ಮೂಡಿಸುತ್ತಿರುವ ಆರೋಗ್ಯಾಧಿಕಾರಿಗಳು

ಈ ಬಗ್ಗೆ ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪಿ.ಸಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯು ಕಾಡಂಚಿನ ಗ್ರಾಮದ ಮನೆ – ಮನೆಗೆ ತೆರಳಿ ಮಾಹಿತಿ ನೀಡುತ್ತಿದ್ದೇವೆ. ಸಾಮಾನ್ಯ ಜ್ವರಕ್ಕೆ ನೀಡುವಂತೆ ವೆಸ್ಟ್ ನೈಲ್ ಜ್ವರಕ್ಕೂ ಚಿಕಿತ್ಸೆ ನೀಡಲಾಗುತ್ತದೆ.

ವೆಸ್ಟ್‌ ನೈಲ್‌ ಜ್ವರದ ಲಕ್ಷಣಗಳಿವು

1) ದಿಢೀರ್‌ ಜ್ವರ ಬರುವುದು
2) ವಿಪರೀತ ಮೈ-ಕೈ ನೋವು, ತಲೆನೋವು ಕಾಣಿಸಿಕೊಳ್ಳುವುದು
3) ದೇಹದ ಮೇಲೆ ದದ್ದುಗಳು ಕಾಣಿಸಿಕೊಳ್ಳುವುದು
4) ಕೆಲವೊಮ್ಮೆ ವಾಂತಿ ಆಗಲಿದೆ. ಇವು ವೆಸ್ಟ್ ನೈಲ್ ಜ್ವರದ ಲಕ್ಷಣಗಳಾಗಿವೆ. ಸಾಮಾನ್ಯವಾಗಿ ಈ ವೈರಸ್‌ ಸೊಳ್ಳೆಗಳಿಂದ ಹರಡುತ್ತದೆ. ಸೋಂಕಿತ ಪಕ್ಷಿಗಳನ್ನು ತಿನ್ನುವಾಗ ಸೋಂಕಿಗೆ ಒಳಗಾಗುತ್ತವೆ. ಅವು ಮನುಷ್ಯನನ್ನು ಕಚ್ಚಿದಾಗ ಈ ವೆಸ್ಟ್‌ ಬೈಲ್‌ ಜ್ವರ ಕಾಣಿಸಿಕೊಳ್ಳುತ್ತದೆ.

ಈ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವೆಸ್ಟ್ ನೈಲ್ ಜ್ವರ ಮಾರಣಾಂತಿಕವಲ್ಲ. ಹಾಗಾಗಿ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕು.

ಇದನ್ನೂ ಓದಿ: Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

ಮೈಸೂರಿನಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿಧಾನಸಭೆ ಕ್ಷೇತ್ರವಾದ ವರುಣದಲ್ಲಿ (Varuna) ಶುದ್ಧ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ತಗಡೂರು ಗ್ರಾಮದಲ್ಲಿ ಇದರಿಂದ ಜನ ಕಾಲರಾಗೆ ತುತ್ತಾಗುತ್ತಿದ್ದಾರೆ. ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಕಲುಷಿತ ನೀರು ಸೇವಿಸಿದ ಕಾರಣ 25 ಗ್ರಾಮಸ್ಥರು ಸೇರಿ 114 ಮಂದಿ ಕಾಲರಾ (Cholera) ಕಾಯಿಲೆಯಿಂದ ಬಳಲುತ್ತಿದ್ದಾರೆ. ವಾಂತಿ-ಭೇದಿಯಿಂದ ಜನ ತತ್ತರಿಸಿ ಹೋಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ತಗಡೂರು ಗ್ರಾಮವು ನಂಜನಗೂಡು ತಾಲೂಕಿಗೆ ಸೇರಿದರೂ ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ತಗಡೂರು ಗ್ರಾಮ ಪಂಚಾಯಿತಿಯ 1, 2 ಹಾಗೂ 3ನೇ ವಾಸಿಸುತ್ತಿರುವ ಜನರು ಕಾಲರಾಗೆ ತುತ್ತಾಗಿದ್ದಾರೆ. 114 ರೋಗಿಗಳಲ್ಲಿ ಐವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಕಾಲರಾ ಹರಡಲು ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಕೈ ಪಂಪ್‌ಗಳಿದ್ದರೂ ಪ್ರಯೋಜನ ಇಲ್ಲ

ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಜನಾಕ್ರೋಶದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ದಿಢೀರ್‌ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಗ್ರಾಮದಲ್ಲಿ ನೂರಾರು ಜನ ಕಾಲರಾಗೆ ತುತ್ತಾಗಿರುವ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳ ದಂಡೇ ಗ್ರಾಮಕ್ಕೆ ತೆರಳಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ನೀಡಲಾಗುತ್ತಿದೆ. ಪ್ರತಿ ಮನೆ ಮನೆಗೆ ಒಆರ್‌ಎಸ್ ಪೌಡರ್ ವಿತರಣೆ ಮಾಡಲಾಗಿದೆ. ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು, ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಷ್ಟಾದರೂ ಪಿಡಿಒ ದಿವಾಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kantara Movie
ಸಿನಿಮಾ1 min ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ35 mins ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ1 hour ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ2 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ2 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ2 hours ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ2 hours ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ3 hours ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ3 hours ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌