Yuva Rajkumar: ಇಂದು ಚಾಮರಾಜನಗರದಲ್ಲಿ 'ಯುವ' ಪರ್ವ; ಅತಿಥಿಯಾಗಿ ಬರುವ ನಟ ಯಾರು? - Vistara News

ಸ್ಯಾಂಡಲ್ ವುಡ್

Yuva Rajkumar: ಇಂದು ಚಾಮರಾಜನಗರದಲ್ಲಿ ‘ಯುವ’ ಪರ್ವ; ಅತಿಥಿಯಾಗಿ ಬರುವ ನಟ ಯಾರು?

Yuva Rajkumar: ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿ ಆಗಲು ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಬೆಂಗಳೂರಿಗೆ ಬಂದಿದ್ದಾರೆ. ಜ್ಯೂ. ಎನ್‌ಟಿಆರ್ ಚಾಮರಾಜನಗರಕ್ಕೆ ಪ್ರಯಾಣಿಸಿ ‘ಯುವ’ ಫಸ್ಟ್ ಸಾಂಗ್ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

VISTARANEWS.COM


on

Unleashing the rage of Yuva The First Single
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುವ ರಾಜ್‌ಕುಮಾರ್ (Yuva Rajkumar) ಅಭಿನಯದ ಯುವ ಸಿನಿಮಾ ಇದೇ ಮಾರ್ಚ್ 29ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದರಾಮ್ (Santhosh Anand Ram) ನಿರ್ದೇಶಿಸಿ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ‘ಯುವ’ ಚಿತ್ರದ ಮೊದಲ ಹಾಡು ಇಂದು (ಮಾ.2) ಬಿಡುಗಡೆಯಾಗಲಿದೆ. ಚಾಮರಾಜನಗರದ ರಥದ ಬೀದಿ, ಚಾಮರಾಜೇಶ್ವರ ದೇವಸ್ಥಾನ ಮೈದಾನದಲ್ಲಿ ಸಂಜೆ 5.30ರ ಸುಮಾರಿಗೆ ಕಾರ್ಯಕ್ರಮ ಶುರುವಾಗಲಿದೆ. ಸಂಜೆ 7 ಗಂಟೆ ವೇಳೆಗೆ ಆನಂದ್ ಯೂಟ್ಯೂಬ್ ಚಾನಲ್‌ನಲ್ಲಿ ಲಿರಿಕಲ್ ವಿಡಿಯೊ ಸಾಂಗ್ ಅಪ್‌ಲೋಡ್ ಆಗಲಿದೆ. ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿ ಆಗಲು ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಬೆಂಗಳೂರಿಗೆ ಬಂದಿದ್ದಾರೆ. ಜ್ಯೂ. ಎನ್‌ಟಿಆರ್ ಚಾಮರಾಜನಗರಕ್ಕೆ ಪ್ರಯಾಣಿಸಿ ‘ಯುವ’ ಫಸ್ಟ್ ಸಾಂಗ್ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಫಸ್ಟ್ ಸಾಂಗ್‌ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಅಂದಾಜು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ನಾಳೆ ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಮೊದಲ ಹಾಡು ಬಿಡುಗಡೆ!

ಪುನೀತ್ ರಾಜ್‌ಕುಮಾರ್ ಉಪಸ್ಥಿತಿಯಲ್ಲಿ ‘ಯುವ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗುತ್ತದೆ ಎಂದೂ ಹೇಳಲಾಗುತ್ತಿದೆ. ಅಪ್ಪು ಪ್ರತಿಮೆ ಅಥವಾ ಅಪ್ಪು AI ತಂತ್ರಜ್ಞಾನದ ಆಡಿಯೊ ಶುಭಾಶಯದ ಮೂಲಕ ‘ಯುವ’ ಸಾಂಗ್ ಔಟ್‌ ಆಗಲಿದೆ ಎಂದು ವರದಿಯಾಗಿದೆ.

ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಬಂಡವಾಳ ಹೂಡಿದೆ. ಖ್ಯಾತ ನಿರ್ದೇಶಕ ಸಂತೋಷ್ ಆನಂದ್​ರಾಮ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಾಡುಗಳ ಮೂಲಕ ಕ್ರೇಜ್​ ಸೃಷ್ಟಿಸಲು ಚಿತ್ರತಂಡ ರೆಡಿಯಾಗಿದೆ.ಚಿತ್ರದಲ್ಲಿ ಸಪ್ತಮಿ ಪಾತ್ರಕ್ಕೆ ಹೆಚ್ಚಿನ ಆದ್ಯತೆಯಿದ್ದು, ನಟಿ ಬಿಗ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವ-ಸಪ್ತಮಿ ಜೋಡಿ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳುತ್ತಿದೆ. ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Actor Chetan Ahimsa: ಮತ್ತೆ ಮೋದಿಯೇ ಪ್ರಧಾನಿ, ಆದರೆ ಬಿಜೆಪಿಗಿದು ಪಾಠ ಎಂದ ನಟ ಚೇತನ್!

Actor Chetan Ahimsa: ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ನಟ ಚೇತನ್ ಬರೆದುಕೊಂಡಿದ್ದಾರೆ.

VISTARANEWS.COM


on

Actor Chetan Ahimsa says NDA is needed for BJP to come to power
Koo

ಬೆಂಗಳೂರು: ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್‌ ಮೂಲಕ ನಟ ಚೇತನ್‌ ಅವರು ಹೇಳಿಕೊಂಡಿದ್ದಾರೆ.

“ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರ ಮುಂದುವರಿಸಬಹುದು. ಆದರೆ ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ. ಇದು ಒಳ್ಳೆಯದೇ. ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ” ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಚೇತನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ಸರ್ಕಾರ ರಚನೆಗೆ 272 ಸ್ಥಾನಗಳು ಸರಳ ಬಹುಮತವಾಗಿದೆ. ಎನ್‌ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಗೆಲುವುದು ಖಚಿತವಾಗಿದ್ದು ಸರ್ಕಾರ ರಚಿಸುವ ಸಾಧ್ಯತೆ ಇದೆ. ಆದರೂ 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟ ಎನ್‌ಡಿಎ ಹೊರಗಿಟ್ಟು ಸರ್ಕಾರ ರಚಿಸುವ ಲೆಕ್ಕಾಚಾರದಲ್ಲಿದೆ.

ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದಿದ್ದ ನಟ ಚೇತನ್!

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದರು.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದರು.

Continue Reading

ಸಿನಿಮಾ

Kani Kusruti: ಹಿಂದಿ ಕಲಿಯುವಷ್ಟು ದೊಡ್ಡ ನಟಿ ನಾನಲ್ಲ ಎಂದ ಕಾನ್‌ ಪ್ರಶಸ್ತಿ ವಿಜೇತೆ!

Kani Kusruti: ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿತ್ತು. ಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿತ್ತು.

VISTARANEWS.COM


on

Kani Kusruti she doesn't want to be in Bollywood, overcoming financial crunch
Koo

ಬೆಂಗಳೂರು: ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್‌ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು. ಇದೀಗ ನಟಿ ಸಂದರ್ಶನವೊಂದರಲ್ಲಿ ಹಿಂದಿ ಅಥವಾ ಪ್ಯಾನ್-ಇಂಡಿಯಾ ಚಿತ್ರದಲ್ಲಿ ಕೆಲಸ ಮಾಡುವ ಯಾವುದೇ ಆಕಾಂಕ್ಷೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಕಣಿ ಕುಸರುತಿ ಮಾತನಾಡಿ ʻʻನನಗೆ ಸದ್ಯಕ್ಕೆ ಸಿಕ್ಕಿರುವ ಯಾವುದೇ ಪಾತ್ರ ಮಲಯಾಳಂ ಆಗಿದೆ. ನಾನು ಹಿಂದಿ ಸಿನಿಮಾಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವಷ್ಟು ಭಾಷಾ ಸ್ಪಷ್ಟತೆ ನನ್ನಲಿಲ್ಲ. ಹಿಂದಿ ಕಲಿಯುವಷ್ಟು ದೊಡ್ಡ ನಟಿಯಲ್ಲ. ಮಲಯಾಳಂ ಚಿತ್ರಗಳನ್ನು ಮಾಡುವುದರಲ್ಲಿ ನನಗೆ ಸಂತೋಷವಾಗಿದೆʼʼ ಎಂದರು.

“ಯಾರೊಂದಿಗಾದರೂ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕರೆ, ಶ್ರೀರಾಮ್ ರಾಘವನ್, ಕನು ಬಹ್ಲ್ ಮತ್ತು ದಿಬಾಕರ್ ಬ್ಯಾನರ್ಜಿ ಜತೆಗೆ ಕೆಲಸ ಮಾಡುತ್ತೇನೆ. ಹಿಂದಿ ಕಲಿಯಿರಿ ಎಂದರೂ ಕಲಿಯುತ್ತೇನೆʼʼ ಎಂದರು.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ಕಣಿ ಕುಸರುತಿ ನೀಡಿದ ಸಂದರ್ಶನದಲ್ಲಿ, ʻʻಕಡಿಮೆ ಸಿನಿಮಾಗಳು ನನಗೆ ಆಫರ್‌ ಬಂದಿದ್ದವು. ಹಾಗೇ ನಿರ್ದೇಶಕ ಸುದೀಪ್ತೋ ಸೇನ್ ಅವರ ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ಕರೆ ಬಂದಿತ್ತು. ಅದನ್ನು ಕೂಡ ರಿಜೆಕ್ಟ್‌ ಮಾಡಿದ್ದೆʼʼಎಂದು ಈ ಹಿಂದೆ ಹೇಳಿಕೊಂಡಿದ್ದರು. ಈ ಹಿಂದೆ ʻಬಿರಿಯಾನಿʼ ಸಿನಿಮಾದಲ್ಲಿ ಕಣಿ ಕುಸರುತಿ ಸಾಕಷ್ಟು ವಿವಾದಗಳನ್ನು ಎದುರಿಸಿದ್ದರು. ಈ ಬಗ್ಗೆಯೂ ನಟಿ ಹೇಳಿಕೊಂಡಿದ್ದರು. ʻʻಬಿರಿಯಾನಿ ಸಿನಿಮಾ ವೇಳೆ ನಾನು ಆ ಸ್ಕ್ರಿಪ್ಟ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ನಾನು ನಿರ್ದೇಶಕ ಸಜಿನ್‌ಗೆ ಹೇಳಿದ್ದೆ. ಸಜಿನ್ ಹಿಂದುಳಿದ ಮುಸ್ಲಿಂ ಸಮುದಾಯದಿಂದ ಬಂದವರು. ಅವರು ಅವರ ಸ್ಥಾನದಲ್ಲಿಯೇ ಯೋಚಿಸುತ್ತಿದ್ದರು. ಅವರ ರಾಜಕೀಯವನ್ನು ಮಾತ್ರ ಮಾತನಾಡುತ್ತಿದ್ದರುʼʼಎಂದಿದ್ದರು.

ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿತ್ತು. ಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿತ್ತು.

ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾವು ಮಲಯಾಳಂ-ಹಿಂದಿ ಸಿನಿಮಾ ಆಗಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ. ಚಿತ್ರವು ಮೂರು ವಿಭಿನ್ನ ಮಹಿಳೆಯರ ನಡುವಿನ ಸ್ನೇಹದ ಕತೆ ಕೂಡ ಇದೆ. ಕನಿ ಕುಸರುತಿ ಮುಂದೆ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನಾಗೇಂದ್ರ ಅವರ ಮಲಯಾಳಂ ಸಿರೀಸ್‌ ಹನಿಮೂನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

Kannada New Movie: ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

VISTARANEWS.COM


on

Vijay Raghavendra gray games success
Koo

ಬೆಂಗಳೂರು: ಗಂಗಾಧರ್ ಸಾಲಿಮಠ (Kannada New Movie) ನಿರ್ದೇಶನ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ (Vijay raghavendra) ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಸಂಭ್ರಮಿದೆ. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.

ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ ಎಂದು ಮಾತನಾಡಿದ ನಿರ್ದೇಶಕ ಗಂಗಾಧರ್ ಸಾಲಿಮಠ, ʻʻಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದʼʼ ಎಂದರು.

ʻʻಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆʼʼ ಎಂದರು ನಿರ್ಮಾಪಕ ಆನಂದ್ ಮುಗದ್.

ಇದನ್ನೂ ಓದಿ: Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

ʻʻನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡುವುದಕ್ಕಿಂತ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. “ಗ್ರೇ ಗೇಮ್ಸ್” ಅನ್ನು ಜನ ಮೆಚ್ಚಿಕೊಂಡಿದ್ದಾರೆʼʼ ಎಂದು ನಟ ವಿಜಯ ರಾಘವೇಂದ್ರ ತಿಳಿಸಿದರು.

ʻʻನನ್ನ ಮಾವ ವಿಜಯ್ ರಾಘವೇಂದ್ರ ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆʼʼ ಎಂದರು ನವ ನಟ ಜೈ.

ನಟಿ ಭಾವನರಾವ್ ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Continue Reading

ಸ್ಯಾಂಡಲ್ ವುಡ್

SP Balasubrahmanyam: ಕಂಠಸಿರಿಯಿಂದಲೇ ಚಿತ್ರರಂಗದ ಸಿರಿ ಹೆಚ್ಚಿಸಿದ ಎಸ್​.ಪಿ. ಬಾಲಸುಬ್ರಹ್ಮಣ್ಯಮ್ ಜನುಮದಿನ ಇಂದು

SP Balasubrahmanyam: ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ, ತುಳು, ಪಂಜಾಬಿ, ಮರಾಠಿ ಹೀಗೆ ದೇಶದ ಎಲ್ಲ ಭಾಷೆಗಳಲ್ಲೂ ಎಸ್‌ಪಿಬಿ ಹಾಡಿದ್ದಾರೆ. ಐದು ದಶಕಗಳ ಅವಧಿಯಲ್ಲಿ 45 ಸಾವಿರ ಹಾಡುಗಳನ್ನು ಹಾಡುವುದೆಂದರೆ ಹುಡುಗಾಟವೇನಲ್ಲ. ಅದೇ ಕಾಲಕ್ಕೆ ಎಲ್ಲ ದಿಗ್ಗಜ ಸಂಗೀತ ನಿರ್ದೇಶಕರ ಜತೆ ಕೆಲಸ ಮಾಡಿದ್ದಾರೆ. ಅದರಲ್ಲೂ ತಮಿಳಿನಲ್ಲಿ ಇಳಯರಾಜಾ-ಎಸ್‌ಪಿಬಿ-ರಜಿನಿಕಾಂತ್ ಜೋಡಿ ಎಲ್ಲಡೆ ಮೋಡಿ ಮಾಡಿತ್ತು. ಕನ್ನಡದಲ್ಲೂ ಹಂಸಲೇಖ-ಎಸ್‌ಪಿಬಿ- ರವಿಚಂದ್ರನ್ ಜೋಡಿಗೆ ಇಂಥದ್ದೇ ಫ್ಯಾನ್ ಕ್ರೇಜ್ ಇತ್ತು.

VISTARANEWS.COM


on

SP Balasubrahmanyam Birth Anniversary Awards won
Koo

ಬೆಂಗಳೂರು: ಎಸ್​.ಪಿ. ಬಾಲಸುಬ್ರಹ್ಮಣ್ಯಮ್ (SP Balasubrahmanyam). ಭಾರತ ಕಂಡ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಇಂದು (ಜೂನ್ 4) ಅವರ ಜನ್ಮದಿನ. ಅವರು ಇಂದು ಇದ್ದಿದ್ದರೆ 78ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ವಿವಿಧ ಭಾಷೆಗಳಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಎಸ್.ಪಿ.ಬಿ ನಾಲ್ಕು ಭಾಷೆಗಳಲ್ಲಿ ಒಟ್ಟು 06 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದರು. 25 ಬಾರಿ ಆಂಧ್ರಪ್ರದೇಶ ಸರ್ಕಾರದ ನಂದಿ ಪ್ರಶಸ್ತಿಯನ್ನು ಪಡೆದಿದ್ದು ಮತ್ತೊಂದು ದಾಖಲೆ. ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಗೌರವ ಕೂಡ ಸಿಕ್ಕಿದೆ.

ಮದ್ರಾಸ್​ನಲ್ಲಿ 1946ರಲ್ಲಿ ಜೂನ್​ 4ರಂದು ಎಸ್​.ಪಿ. ಬಾಲಸುಬ್ರಹ್ಮಣ್ಯಮ್ ಅವರು ಜನಿಸಿದರು. ಇಂಜಿನಿಯರ್ ಆಗಬೇಕು ಎಂದು ಅವರು ಕನಸು ಕಂಡಿದ್ದರು. ಅವರಿಗೆ ಸಂಗೀತದ ಬಗ್ಗೆ ಆಸಕ್ತಿ ಇತ್ತು. ಎಸ್​ಪಿಬಿ ಮೊದಲು ಹಾಡಿದ್ದು 1966ರಲ್ಲಿ. ಅವರ ಮೊದಲ ಗಾಯನ ಮೂಡಿ ಬಂದಿದ್ದು ತೆಲುಗಿನಲ್ಲಿ. ನಂತರ ಅವರು ಕನ್ನಡಕ್ಕೂ ಕಾಲಿಟ್ಟರು.

ಎಸ್‌ಪಿಬಿ ಎಂದೇ ಖ್ಯಾತರಾಗಿದ್ದ ಎಸ್‌ ಪಿ ಬಾಲುಸುಬ್ರಹ್ಮಣ್ಯಂ (SPB) ಅವರು ತಮ್ಮ ಕಂಠಸಿರಿಯಿಂದಲೇ ಭಾರತೀಯ ಚಿತ್ರರಂಗದ ಶ್ರೀಮಂತಿಕೆಯನ್ನು ಹೆಚ್ಚಿಸಿದರು. ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗವನ್ನು ಎಸ್‌ಪಿಬಿ ಅವರನ್ನು ಹೊರಗಿಟ್ಟು ನೋಡಲು ಸಾಧ್ಯವೇ ಇಲ್ಲ. ಸುಮಾರು ಐದು ದಶಕಗಳ ಕಾಲ ಅವರು ಕೇಳುಗರನ್ನು ರಂಜಿಸಿದರು. ಸಮ್ಮೋಹನಗೊಳಿಸಿದರು! ಅದುವರೆಗೂ ಬಾಲು ಸಿನಿಮಾಗಳಲ್ಲಿ ಸಣ್ಣ ಪುಟ್ಟ ರೋಲ್‌ ಮಾಡುತ್ತಿದ್ದುದಿತ್ತು. ಇಂಥದೇ ಒಂದು ಕ್ಯಾಮಿಯೋ ರೋಲ್‌ ಶೂಟ್‌ ಮಾಡುತ್ತಿದ್ದ ಸಂದರ್ಭದಲ್ಲಿ ತರುಣ ನಿರ್ದೇಶಕ ವಸಂತ್‌ ಇವರನ್ನು ಗಮನಿಸಿದರು. ‘ಎಷ್ಟೊಂದು ಕ್ಯಾಶುಯಲ್ಲಾಗಿ, ಕ್ಯಾಮೆರಾ ಎದುರಿಗಿಲ್ಲ ಎಂಬಂತೆ ಇರುತ್ತಾರಲ್ಲʼ ಎನಿಸಿತು ಅವರಿಗೆ. ನಂತರ ಅವರನ್ನೇ ಮನಸ್ಸಿನಲ್ಲಿಟ್ಟುಕೊಂಡು ಅನಂತು ಜತೆ ಸೇರಿ ಒಂದು ಸ್ಕ್ರಿಪ್ಟ್‌ ರಚಿಸಿದರು.

ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ, ತುಳು, ಪಂಜಾಬಿ, ಮರಾಠಿ ಹೀಗೆ ದೇಶದ ಎಲ್ಲ ಭಾಷೆಗಳಲ್ಲೂ ಎಸ್‌ಪಿಬಿ ಹಾಡಿದ್ದಾರೆ. ಐದು ದಶಕಗಳ ಅವಧಿಯಲ್ಲಿ 45 ಸಾವಿರ ಹಾಡುಗಳನ್ನು ಹಾಡುವುದೆಂದರೆ ಹುಡುಗಾಟವೇನಲ್ಲ. ಅದೇ ಕಾಲಕ್ಕೆ ಎಲ್ಲ ದಿಗ್ಗಜ ಸಂಗೀತ ನಿರ್ದೇಶಕರ ಜತೆ ಕೆಲಸ ಮಾಡಿದ್ದಾರೆ. ಅದರಲ್ಲೂ ತಮಿಳಿನಲ್ಲಿ ಇಳಯರಾಜಾ-ಎಸ್‌ಪಿಬಿ-ರಜಿನಿಕಾಂತ್ ಜೋಡಿ ಎಲ್ಲಡೆ ಮೋಡಿ ಮಾಡಿತ್ತು. ಕನ್ನಡದಲ್ಲೂ ಹಂಸಲೇಖ-ಎಸ್‌ಪಿಬಿ- ರವಿಚಂದ್ರನ್ ಜೋಡಿಗೆ ಇಂಥದ್ದೇ ಫ್ಯಾನ್ ಕ್ರೇಜ್ ಇತ್ತು. ಎಲ್ಲ ಭಾಷೆ ಚಿತ್ರರಂಗದ ಉತ್ಕೃಷ್ಟ ಸಂಗೀತ ನಿರ್ದೇಶಕರ ಜತೆ ಎಸ್‌ಪಿಬಿ ಕೆಲಸ ಮಾಡಿದ್ದಾರೆ. ಹಳೆಯ ಮ್ಯೂಸಿಕ್ ಡೈರೆಕ್ಟರ್‌ಗಳಿಂದ ಹಿಡಿದು ಹೊಸ ಕಾಲದ ಮ್ಯೂಸಿಕ್‌ ಡೈರೆಕ್ಟರ್‌ಗಳವರೆಗೂ ಎಸ್‌ಪಿಬಿ ಅವರ ಗೋಲ್ಡ್ ವಾಯ್ಸ್ ಸೆರೆ ಹಿಡಿದಿದೆ.

ಇದನ್ನೂ ಓದಿ: S. P. Balasubrahmanyam: ಎಸ್‌ ಪಿ ಬಾಲುಸುಬ್ರಹ್ಮಣ್ಯಂ ಸಾವಿಗೆ ನಾನೂ ಒಬ್ಬ ಕಾರಣ ಎಂದ ಹಿರಿಯ ನಟ!

ಹುಟ್ಟಿದ್ದು ಕೋನೆಟಂಪೇಟೆಯಲ್ಲಿ…

ಎಸ್‌ಪಿಬಿ ಅವರು 1946ರ ಜೂನ್ 4ರಂದು ಇಂದಿನ ತಮಿಳುನಾಡಿನ ಕೋನೆಟಂಪೇಟೆಯಲ್ಲಿ ಜನಿಸಿದರು. ತಂದೆ ಎಸ್ ಬಿ ಸಾಂಬಮೂರ್ತಿ. ಅವರು ಉತ್ತಮ ಸಂಗೀತಗಾರರಾಗಿದ್ದರು ಮತ್ತು “ಹರಿಕಥಾ” ವಿದ್ವಾಂಸರಾಗಿದ್ದರು. ಸಹಜವಾಗಿಯೂ ಇದು ಬಾಲಕ ಎಸ್‌ಪಿಬಿ ಮೇಲೂ ಪ್ರಭಾವ ಬೀರಿತು. ಆದರೆ, ಬಾಲ್ಯದಲ್ಲಿ ಅವರೇನೂ ಶಾಸ್ತ್ರೀಯ ಸಂಗೀತವನ್ನು ಕಲಿತಿರಲಿಲ್ಲ. ಎಂಜಿನಿಯರಿಂಗ್ ಡಿಪ್ಲೋಮಾ ಮುಗಿಯುತ್ತಿದ್ದಂತೆ ಸಾರ್ವಜನಿಕವಾಗಿ ಸ್ಪರ್ಧೆಗಳಲ್ಲಿ ಅವರು ಹಾಡುತ್ತಿದ್ದರು.

ಚೆನ್ನೈನಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ ಎಸ್‌ಪಿಬಿ ಭಾಗವಹಿಸಿಿದ್ದರು. ಸ್ಪರ್ಧೆಯಲ್ಲಿ ಗೆದ್ದ ಬಾಲು ಅವರಿಗೆ ಮ್ಯೂಸಿಕ್ ಡೈರೆಕ್ಟರ್ ಎಸ್ ಪಿ ಕೋದಂಡಪಾಣಿ ಅವರು ಬಹುಮಾನ ವಿತರಿಸಿದರು. ಆ ಬಳಿಕ 1966ರಲ್ಲಿ ತೆರೆ ಕಂಡ ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ ಚಿತ್ರದಲ್ಲಿ ಹಾಡಲು ಎಸ್‌ಪಿಬಿ ಅವರಿಗೆ ಕೋದಂಡಪಾಣಿ ಅವರು ಅವಕಾಶ ನೀಡಿದರು. ಅಲ್ಲಿಂದ ಎಸ್‌ಪಿಬಿ ಹಿಂದೆ ತಿರುಗಿ ನೋಡಲಿಲ್ಲ. 1967ರಲ್ಲಿ ಅವರು ಕನ್ನಡದಲ್ಲಿ ಮೊದಲ ಹಾಡು ಹಾಡಿದರು. ನಕ್ಕರೆ ಅದೇ ಸ್ವರ್ಗದ ಚಿತ್ರದ ಮೂಲಕ ಕನ್ನಡಕ್ಕೂ ಪರಿಚಯಗೊಂಡರು. ಆ ಬಳಿಕ ಕನ್ನಡದ ಮನೆ ಮಗನಾಗಿಯೇ ಬೆಳೆದರು. ಎಸ್‌ಪಿಬಿ ಅವರು, ಒಂದೇ ದಿನದಲ್ಲಿ ತೆಲುಗು ಮತ್ತು ತಮಿಳಿನಲ್ಲಿ 19 ಸಾಂಗ್ಸ್ ರೆಕಾರ್ಡ್ ಮಾಡಿದ್ದಾರೆ. ಆನಂದ್ ಮತ್ತು ಮಿಲಿಂದ್ ಅವರ ಸಂಗೀತ ನಿರ್ದೇಶನದಲ್ಲಿ ಹಿಂದಿಯಲ್ಲಿ ಒಂದೇ ದಿನದಲ್ಲಿ 16 ಹಾಡುಗಳನ್ನು ರೆಕಾರ್ಡ್ ಮಾಡಿರುವುದು ಈವರೆಗೂ ದಾಖಲೆಯಾಗಿಯೇ ಉಳಿದಿದೆ!

ಕನ್ನಡದ ಎಲ್ಲ ನಟರಿಗೂ ಹಾಡು

ಡಾ. ವಿಷ್ಣುವರ್ಧನ್ ಅವರಿಂದ ಹಿಡಿದು ಪುನೀತ್ ರಾಜಕುಮಾರ್ ಅವರವರೆಗೂ ಎಲ್ಲ ನಾಯಕ ನಟರಿಗಾಗಿ ಹಾಡಿದ್ದಾರೆ. ಪುನೀತ್ ರಾಜಕುಮಾರ್ ನಿರ್ಮಾಣದ ಮಾಯಾಬಜಾರ್ ಚಿತ್ರದಲ್ಲಿ ಎಸ್‌ಪಿಬಿ ಅವರು ಲೋಕ ಮಾಯಾ ಬಜಾರು ಎಂಬ ಗೀತೆಯನ್ನು ಹಾಡಿದ್ದರು ಮತ್ತು ಇದರಲ್ಲಿ ಪುನೀತ್ ಅವರು ಅಭಿನಯಿಸಿದ್ದರು. ಕನ್ನಡದ ಮಟ್ಟಿಗೆ ಇದೇ ಕೊನೆಯ ಹಾಡು ಅವರದ್ದು. ಈ ಚಿತ್ರವು 2016ರಲ್ಲಿ ತೆರೆಗೆ ಬಂದಿತ್ತು. ಆ ಬಳಿಕ ಅವರು ಕೊರೊನಾ ಜಾಗೃತಿಗಾಗಿ ಕನ್ನಡದಲ್ಲಿ ಹಾಡು ಹಾಡಿದರು.

ವಿಷ್ಣುವರ್ಧನ್ ಅವರ ಚಿತ್ರಗಳಲ್ಲಿ ಎಸ್‌ಪಿಬಿ ಹಾಡುವುದು ಪಕ್ಕಾ. ಒಂದು ರೀತಿಯಲ್ಲಿ ವಿಷ್ಣು ಶರೀರವಾದರೆ, ಎಸ್‌ಪಿಬಿ ಅವರು ಶಾರೀರವಾಗಿದ್ದರು. ರೆಬೆಲ್ ಸ್ಟಾರ್ ಅಂಬರೀಷ್, ಶಶಿಕುಮಾರ್, ರವಿಚಂದ್ರನ್, ಶಂಕರ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್, ಉಪೇಂದ್ರ, ಶ್ರೀನಾಥ ಹೀಗೆ… ಪಟ್ಟಿ ಬೆಳೆಯುತ್ತದೆ. ಅದೇ ರೀತಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲೂ ಎಲ್ಲ ಸ್ಟಾರ್ ನಟರು, ಘಟಾನುಘಟಿ ಕಲಾವಿದರಿಗೆ ಹಾಡಿದ್ದಾರೆ ಎಸ್‌ಪಿಬಿ.

ಸಂಗೀತ ನಿರ್ದೇಶಕ ಉಪೇಂದ್ರ ಕುಮಾರ್ ಅವರೊಂದಿಗೆ ಎಸ್‌ಪಿಬಿ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 9 ಗಂಟೆವರೆಗೆ, ಅವರ ನಿರ್ದೇಶನದಲ್ಲಿ ಒಟ್ಟು 17 ಹಾಡುಗಳನ್ನು ರೆಕಾರ್ಡ್ ಮಾಡಿ ಕೊಟ್ಟಿದ್ದಾರೆ. ಇದೊಂದ ವಿಶಿಷ್ಟ ದಾಖಲೆಯಾಗಿ ಉಳಿದಿದೆ. ಗಾಯನದೊಂದಿಗೆ ಎಸ್‌ಪಿಬಿ ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸುಮಾರು 45 ಸಿನಿಮಾಗಳಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಇಷ್ಟೇ ಸಂಖ್ಯೆಯ ಚಿತ್ರಗಳಲ್ಲಿ ನಟಿಸಿದ್ದಾರೆ ಕೂಡ.

ಇದನ್ನೂ ಓದಿ: Legend Singer SPB | ತಮ್ಮ ಕಂಠಸಿರಿಯಿಂದಲೇ ಚಿತ್ರರಂಗದ ಸಿರಿ ಹೆಚ್ಚಿಸಿದ ಎಸ್‌ಪಿಬಿ

ಎಸ್‌ಪಿಗಾಗಿ ಡಾ.ರಾಜ್ ಹಾಡಿದ್ದರು

ಇದೊಂದು ಅಪರೂಪದ ಘಟನೆ. ಕನ್ನಡದಲ್ಲಿ ಮುದ್ದಿನಮಾವ ಸಿನಿಮಾದಲ್ಲಿ ಶಶಿಕುಮಾರ್ ಜತೆ ಎಸ್‌ ಪಿ ಬಾಲಸುಬ್ರಹ್ಮಣ್ಯ ಅವರು ನಟಿಸಿದ್ದರು. ಈ ಚಿತ್ರದಲ್ಲಿ ದೀಪಾವಳಿ ದೀಪಾವಳಿ ಗೋವಿಂದ ಲೀಲಾವಳಿ ಎಂಬ ಹಾಡು ಇದೆ. ಈ ಹಾಡಿನಲ್ಲಿ ಶಶಿಕುಮಾರ್ ಅವರಿಗೆ ಎಸ್‌ಪಿಬಿ ಹಾಡಿದ್ದಾರೆ. ಎಸ್‌ಪಿಬಿಗೆ ಯಾರು ಹಾಡಬೇಕೆಂದು ಯೋಚನೆ ಮಾಡಿದಾಗ ಹೊಳೆದಿದ್ದು ಗಾನಗಂಧರ್ವ ಡಾ. ರಾಜ್. ರಾಘವೇಂದ್ರ ರಾಜಕುಮಾರ್ ಅವರ ಮೂಲಕ ಈ ವಿಷಯವನ್ನು ಡಾ.ರಾಜ್ ಅವರ ಕಿವಿಗೆ ಹಾಕಿದರಂತೆ. ಆಗ ರಾಜಕುಮಾರ್ ಅವರು ಅಯ್ಯೋ ಅದು ನನ್ನ ಪುಣ್ಯ ಎಂದು ಬಂದು ಎಸ್‌ಪಿಗೆ ಹಾಡಿದರಂತೆ. ಈ ವಿಷಯವನ್ನು ಸ್ವತಃ ಎಸ್‌ಪಿಬಿ ಅವರು ರಿಯಾಲಿಟಿ ಶೋವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ಎಸ್‌ಪಿಬಿ ಮತ್ತು ಡಾ.ರಾಜ್ ಇಬ್ಬರೂ ಮಹಾ ಪರ್ವತ. ಅಂಥವರು ಇನ್ನೊಬ್ಬರಿಗೆ ಸ್ವರವಾಗುವುದೆಂದರೆ ಅದು ಮಹಾ ಸಂಗಮವೇ ಸರಿ. ಬಹುಶಃ ಇದೊಂದು ಅಪರೂಪದ ಘಟನೆಯಾಗಿ ಇತಿಹಾಸ ಸೇರಿದೆ.

ಕನ್ನಡಿಗರಿಂದ ವಿಶೇಷ ಪ್ರೀತಿ

ಬಹುಶಃ ಎಸ್ಪಿಬಿ ಈ ವಿಷಯವನ್ನು ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಅವರಿಗೆ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರು ಎಂದರೆ ಅಚ್ಚುಮೆಚ್ಚು. ಆಂಧ್ರದವರಾದರೂ ಕನ್ನಡಿಗರು ಅವರನ್ನು ತಮ್ಮವರೆಂದೇ ಪ್ರೀತಿಸಿದರು. ಅದಕ್ಕಾಗಿ ಅವರು ಆಗಾಗ, ಕನ್ನಡಿಗರಿಂದ ನನಗೇ ವಿಶೇಷವಾದ ಪ್ರೀತಿ ಸಿಕ್ಕಿದೆ. ಈ ಪ್ರೀತಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದರು.

ಎದೆ ತುಂಬಿ ಹಾಡಿದರು

ಎಸ್‌ಪಿಬಿ ಹಾಡಲು ನಿಂತರೆ ಸಂಗೀತದ ರಸದೌತಣ. ಅಲ್ಲಿ ಯಾವುದಕ್ಕೂ ಕೊರತೆ ಇಲ್ಲ. ಅವರು ಹಾಡಿದ ಅಷ್ಟೂ ಭಾಷೆಗಳ ಅಷ್ಟೂ ಸಾಂಗುಗಳೇ ಇದಕ್ಕೆ ನಿದರ್ಶನ. ಗಾಯನದಲ್ಲಿ ಮೇರು ಪರ್ವತವೇ ಆದ ಎಸ್‌ಪಿಬಿ, ಕನ್ನಡದಲ್ಲಿ ಎದೆ ತುಂಬಿ ಹಾಡಿದೆನು ಎಂಬ ವಿಶಿಷ್ಟ ಸಂಗೀತ ರಿಯಾಲ್ಟಿ ಶೋವನ್ನು ದೂರದರ್ಶನಕ್ಕಾಗಿ ನಡೆಸಿಕೊಂಡು ಬರುತ್ತಿದ್ದರು. ಈ ಶೋ ಮೂಲಕ ಅನೇಕ ಪ್ರತಿಭಾವಂತ ಗಾಯಕ, ಗಾಯಕಿಯರನ್ನು ಸಂಗೀತ ಲೋಕಕ್ಕೆ ಪರಿಚಯಿಸಿದ್ದಾರೆ. ಬೇರೆ ಭಾಷೆಗಳಲ್ಲೂ ಇದೇ ರೀತಿಯ ಪ್ರೋಗ್ರಾಮ್ ನಡೆಸಿ ಕೊಡುತ್ತಿದ್ದರು.

ಅರಸಿ ಬಂದ ಬಿರುದು, ಸನ್ಮಾನ

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ವಿವಿಧ ಭಾಷೆಗಳಲ್ಲಿ 45 ಸಾವಿರಕ್ಕೂ ಅಧಿಕ ಹಾಡುಗಳು ಎಸ್‌ಪಿಬಿ ಅವರ ಕಂಠಸಿರಿಯಲ್ಲಿ ಅರಳಿವೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ(ಕನ್ನಡ), ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರದ ಹಾಡುಗಳಿಗೆ 6 ಬಾರಿ ಅತ್ಯುತ್ತಮ ಗಾಯಕ ಎಂಬ ನ್ಯಾಷನಲ್ ಅವಾರ್ಡ್ ಬಂದಿದೆ. ಆಂಧ್ರ ಪ್ರದೇಶ ಸರ್ಕಾರ ನೀಡುವ ನಂದಿ ಪ್ರಶಸ್ತಿಯನ್ನು 25 ಬಾರಿ ಪಡೆದುಕೊಂಡಿದ್ದಾರೆ. ಇದೊಂದು ದಾಖಲೆಯೇ ಸರಿ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ಪ್ರಶಸ್ತಿಯೂ ಎಸ್ಪಿಬಿ ಅವರನ್ನು ಹುಡುಕಿಕೊಂಡು ಬಂದಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಎನಿಸಿಕೊಂಡಿರುವ ಪದ್ಮಶ್ರೀ ಮತ್ತು ಪದ್ಮಭೂಷಣಗಳೂ ಅವರಿಗೆ ಸಂದಿವೆ. ಈ ಬಿರುದು ಸನ್ಮಾನಗಳಿಗಿಂತಲೂ ಇಡೀ ಭಾರತದ ಸಂಗೀತ ಪ್ರಿಯರ ಹೃದಯದಲ್ಲಿ ಅವರಿಗೆ ಬೇರೆಯದ್ದೇ ಸ್ಥಾನವಿದೆ. ನಾಲ್ಕು ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ಗಾಯಕ ಇವರು. ಈ ಸಾಧನೆ ಗಾಯಕರಷ್ಟೇ ಅಲ್ಲ ಬೇರಾರೂ ಮಾಡಿಲ್ಲ ಕೂಡ. ಇಷ್ಟು ಮಾತ್ರವಲ್ಲದೇ, ತಮಿಳುನಾಡು ಸರ್ಕಾರವು ಕಲೈಂಮಣಿ ಪುರಸ್ಕಾರ ನೀಡಿದರೆ, ಪೊಟ್ಟಿ ಶ್ರೀರಾಮುಲು ತೆಲುಗು ವಿವಿ ಅವರಿಗೆ 1999ರಲ್ಲಿ ಗೌರವ ಡಾಕ್ಟರೇಟ್ ನೀಡಿತು. ಅದೇ ವರ್ಷ ಮಧ್ಯಪ್ರದೇಶ ಸರ್ಕಾರವು ಲತಾ ಮಂಗೇಶ್ಕರ್ ಪುರಸ್ಕಾರ ಪ್ರದಾನ ಮಾಡಿತು. ಸತ್ಯಂಬಾ ಮತ್ತು ಆಂಧ್ರ, ಅನಂತಪುರ ವಿವಿಗಳು ಗೌರವ ಡಾಕ್ಟರೇಟ್ ನೀಡಿವೆ.

Continue Reading
Advertisement
Election Results 2024
ಕ್ರೀಡೆ2 mins ago

Election Results 2024: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ ಪುತ್ರನಿಗೆ ಭರ್ಜರಿ ಜಯ

Odisha Assembly Result 2024
ದೇಶ4 mins ago

Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

election results 2024 ayodhya
ಪ್ರಮುಖ ಸುದ್ದಿ21 mins ago

Election Results 2024: ರಾಮ ಮಂದಿರ ನಿರ್ಮಿಸಿದರೂ ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು!

Shorapur Election Result 2024
ಕರ್ನಾಟಕ23 mins ago

Shorapur Election Result 2024: ಸುರಪುರದಲ್ಲಿ ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ಗೆ ಜಯ

Jumka Bangles Fashion
ಫ್ಯಾಷನ್26 mins ago

Jumka Bangles Fashion: ಡಿಸೈನರ್‌ ಬಳೆಗಳಿಗೆ ಜುಮ್ಕಾ ಅಲಂಕಾರ!

Kharge calls Modi's defeat, says 'we saved Constitution': Rahul Gandhi
ಪ್ರಮುಖ ಸುದ್ದಿ28 mins ago

Election Results 2024 : ಮೋದಿಯ ಸೋಲು ಎಂದ ಖರ್ಗೆ, ಸಂವಿಧಾನ ಉಳಿಸಿದೆವು ಎಂದ ರಾಹುಲ್​ ಗಾಂಧಿ

Karnataka election results 2024
ಕರ್ನಾಟಕ40 mins ago

Karnataka Election Results 2024: ಬೆಂ. ಗ್ರಾಮಾಂತರದಲ್ಲಿ ಸಹೋದರನಿಗೆ ಸೋಲು; ಜನರ ತೀರ್ಪಿನ ಬಗ್ಗೆ ಬೇರೆ ಮಾತಿಲ್ಲ ಎಂದ ಡಿಕೆಶಿ

NEET UG Results 2024
ದೇಶ51 mins ago

NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

Election Results 2024
ದೇಶ1 hour ago

Election results 2024: ಜೈಲಿನಿಂದಲೇ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರತ್ಯೇಕತಾವಾದಿಗಳು; ಇವರ ಹಿನ್ನೆಲೆ ಏನು?

Election Results 2024
ದೇಶ1 hour ago

Election Results 2024: 10 ಲಕ್ಷ ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿಯ ಶಂಕರ್‌ ಲಾಲ್ವಾನಿ! ಗರಿಷ್ಠ ವೋಟುಗಳಿಂದ ಗೆದ್ದವರ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ12 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌