Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ - Vistara News

ರಾಜಕೀಯ

Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ

Blast in Bengaluru: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Blast in Bengaluru Experimental preparation for serial blasts says CT Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ ಪ್ರಕರಣ (Blast in Bengaluru) ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೆಂಡಕಾರಿದ್ದಾರೆ. ಮತಾಂಧತೆಯ ಅತಿರೇಕದ ಪರಿಣಾಮವಾಗಿ ಪಾಕಿಸ್ತಾನದ ಪ್ರೀತಿಯನ್ನು ಬೆಳಗಾವಿ, ವಿಧಾನಸೌಧದಲ್ಲಿ ವ್ಯಕ್ತಪಡಿಸಲಾಗಿದೆ. ದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿ ಎಂದು ಅನುಮಾನ ಮೂಡುವಂತಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿ.ಟಿ. ರವಿ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಬಾಂಬ್ ಸ್ಫೋಟದ ಕುರಿತ ಸಮಗ್ರ ತನಿಖೆಯನ್ನು ಎನ್.ಐ.ಎ.ಗೆ ಒಪ್ಪಿಸಬೇಕು.‌ ಬ್ರ್ಯಾಂಡ್ ಬೆಂಗಳೂರಿಗೆ ಬಾಂಬ್ ಭೀತಿ ಎದುರಾಗಿದೆ. ಶುಕ್ರವಾರ (ಮಾ. 1) ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು. ಈ ಮೂಲಕ ಮುನ್ಸೂಚನೆ ಕೊಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಭಯೋತ್ಪಾದಕರು ಸ್ಲೀಪರ್ ಸೆಲ್ ಆಗಿ ಮಾಡಿಕೊಂಡದ್ದು ಹೊಸತಲ್ಲ. ತರಬೇತಿ ಕೇಂದ್ರವಾಗಿಯೂ ಕರ್ನಾಟಕವನ್ನು ಬಳಸಿಕೊಂಡಿದ್ದಾರೆ. ಕೊಪ್ಪದಲ್ಲಿ ಹಿಂದೆ ಬಂದೂಕು, ಬಾಂಬ್ ತಯಾರಿಸುವ ತರಬೇತಿಯನ್ನು ಕೊಡಲಾಗುತ್ತಿತ್ತು. ತೀರ್ಥಹಳ್ಳಿಯಲ್ಲಿ ಕುಕ್ಕರ್ ಬಾಂಬ್ ತಯಾರಿಸಲಾಗುತ್ತಿತ್ತು. ಕೊಡಗಿನಲ್ಲೂ ಭಯೋತ್ಪಾದಕರಿಗೆ ತರಬೇತಿ ಕೊಡಲಾಗುತ್ತಿತ್ತು. ಈ ಎಲ್ಲ ಮಾಹಿತಿ ಸರ್ಕಾರದ ಬಳಿ ಇದೆ ಎಂದು ‌ಸಿ.ಟಿ. ರವಿ ವಿವರಿಸಿದರು.

ದೇಶದ ಉತ್ತರ ಭಾಗದಲ್ಲಿ ಬಾಂಬ್ ಸ್ಫೋಟದ ಸದ್ದು ಕ್ಷೀಣವಾಗಿದೆ. ಬಹುತೇಕ ನಿಂತುಹೋಗಿದೆ. ಭಾರತದ ದಕ್ಷಿಣ ಭಾಗದಲ್ಲಿ ಕೇರಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಿ.ಟಿ. ರವಿ ಆಗ್ರಹಿಸಿದರು.

ಮತಾಂಧತೆಯ ಅತಿರೇಕದಿಂದ ಭಯೋತ್ಪಾದನೆ ಆರಂಭ

ಭಯೋತ್ಪಾದನೆ ಆರಂಭವಾಗುವುದೇ ಮತಾಂಧತೆಯ ಅತಿರೇಕದಿಂದ ಎಂದು ಹೇಳಿದ ಸಿ.ಟಿ.ರವಿ, ಮತಾಂಧತೆಯ ಅತಿರೇಕವನ್ನು ಕೋವಿಡ್ ಸಂದರ್ಭದಲ್ಲಿ ಹಲವೆಡೆ ಗಮನಿಸಿದ್ದೇವೆ. ಪಾದರಾಯನಪುರದಲ್ಲಿ ಕೋವಿಡ್ ವಾರಿಯರ್ಸ್‍ಗಳ ಮೇಲೆ ದಾಳಿ ನಡೆದಿತ್ತು. ಡಿ.ಜೆ.ಹಳ್ಳಿ- ಕೆಜೆ.ಹಳ್ಳಿ ಗಲಭೆ ಸಂದರ್ಭದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಸುಟ್ಟಿದ್ದರು. 200ಕ್ಕೂ ಹೆಚ್ಚು ಮನೆಗಳ ವಾಹನಗಳನ್ನು ಸುಟ್ಟದ್ದಲ್ಲದೆ, ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದರು ಎಂದು ಆಕ್ರೋಶವನ್ನು ಹೊರಹಾಕಿದರು.

ಹಿಂದೆ ಕೊಯಮತ್ತೂರಿನಲ್ಲಿ ಸರಣಿ ಸ್ಫೋಟ ನಡೆದಿತ್ತು. ಈಗ ಆ ಥರ ಸರಣಿ ಸ್ಫೋಟದ ತಯಾರಿ ಮಾಡುತ್ತಿದ್ದಾರೆ. ಮತಾಂಧ ಶಕ್ತಿಗಳು ಮತ್ತು ಭಯೋತ್ಪಾದಕರು ಕೈಜೋಡಿಸಿದ್ದಾರೆ ಎಂಬ ಸಂಶಯ ಇದೆ. ಈ ಸರ್ಕಾರ ಬಂದ ಬಳಿಕ ಎನ್‍ಐಎ ಬಂಧಿತ ಶಂಕಿತ ಭಯೋತ್ಪಾದಕರ ಸಂಖ್ಯೆ 21 ಎಂದು ಸಿ.ಟಿ. ರವಿ ತಿಳಿಸಿದರು.‌

ಜುಲೈನಲ್ಲಿ 5 ಜನರು, ಡಿಸೆಂಬರ್‌ನಲ್ಲಿ 8, ಜನವರಿಯಲ್ಲಿ ದಾಳಿ ಸಂಚಿನಲ್ಲಿ 8 ಜನ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಹಿಂದೆ ಭಟ್ಕಳವನ್ನು ಜೈನರ ಕಾಶಿ ಎಂದು ಕರೆಯಲಾಗುತ್ತಿತ್ತು. ಈಗ ಅದು ಭಯೋತ್ಪಾದಕರ ನೆಲೆಯಾಗಿದೆ. ಭಯೋತ್ಪಾದಕರ ಜತೆ ಭಟ್ಕಳದ ಹೆಸರು ತಳಕು ಹಾಕಿಕೊಂಡಿದೆ (ಉದಾ: ಯಾಸೀನ್ ಭಟ್ಕಳ್) ಎಂದು ಸಿ.ಟಿ. ರವಿ ಹೇಳಿದರು.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ – ಮಂಗಳೂರು ಬ್ಲಾಸ್ಟ್‌ಗೆ ಸಾಮ್ಯತೆ; ಇಲ್ಲ ಅಂದ್ರು ಸಿಎಂ, ಇದೆ ಅಂದ್ರು ಡಿಸಿಎಂ!

ಇದೆಲ್ಲವನ್ನೂ ಗಮನಿಸಿದಾಗ ಭಾರತವನ್ನು ಆಕ್ರಮಿಸಿ ಇಸ್ಲಾಮಿ ರಾಷ್ಟ್ರವಾಗಿ ಮಾಡುವ ಅರಬ್ ಯೋಜನೆಯ ಪ್ರಕಾರ ನಡೆಯುವಂತಿದೆ. ಆ ಯೋಜನೆಯಂತೆ ಗಾಂಧಾರ ಕಳಕೊಂಡಿದ್ದು, ಅದು ಅಪಘಾನಿಸ್ತಾನವಾಗಿದೆ. ಸಿಂಧ್ ಕಳಕೊಂಡಿದ್ದು, ಪಾಕಿಸ್ತಾನವಾಗಿದೆ. ಬಂಗಾಲ ತುಂಡರಿಸಿ ಬಾಂಗ್ಲಾದೇಶ ಮಾಡಲಾಗಿದೆ. ಕಾಶ್ಮೀರವನ್ನು ಭಾರತದಿಂದ ತುಂಡರಿಸುವ ಸಂಚು ಕೂಡ ಆ ಯೋಜನೆಯ ಮುಂದುವರಿದ ಭಾಗವಾಗಿತ್ತು. ಸಿಮಿ ಕಚೇರಿ ಮೇಲೆ ದಾಳಿ ನಡೆದಾಗ ನಕ್ಷೆ ಲಭಿಸಿತ್ತು. ಮೊಘಲರ ಆಳ್ವಿಕೆ ಇದ್ದ ಪ್ರದೇಶಗಳನ್ನು ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂದು ಯೋಜನೆ ರೂಪಿಸಿ ಹಲವು ರೀತಿಯ ತಯಾರಿ ಮಾಡುತ್ತಿದ್ದ ಮಾಹಿತಿ ಅದರಲ್ಲಿತ್ತು. ಇದು ಅದರ ಮುಂದುವರಿದ ಭಾಗ ಇರಬಹುದು. ಇದರ ಸಮಗ್ರ ತನಿಖೆ ಮಾಡಲು ಇದನ್ನು ಎನ್‍ಐಎಗೆ ಒಪ್ಪಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Pralhad Joshi: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

union minister Pralhad Joshi latest statement in bidar
Koo

ಬೀದರ್‌: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು.

ಬೀದರ್‌ನಲ್ಲಿ ಗುರುವಾರ ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾದಕ ವಸ್ತು ಮಾರಾಟ

ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಶಾಂತಿ-ಸುವ್ಯವಸ್ಥೆ ಹಾಗೂ ಅಭಿವೃದ್ಧಿಗಾಗಿ ಈ ಬಾರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕು ಎಂದ ಅವರು, ಕರ್ನಾಟಕದ ಕನ್ನಡಿಗರ ಉಳಿವಿಗಾಗಿ, ಒಳ್ಳೆಯ ಭವಿಷ್ಯಕ್ಕಾಗಿ ನಾವೆಲ್ಲರೂ ಇಂದು ಶ್ರಮಿಸಬೇಕಾಗಿದೆ ಎಂದು ಎರಡು ಪಕ್ಷಗಳ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಈ ಸಂದರ್ಭದಲ್ಲಿ ಸಂಸದ ಭಗವಂತ್ ಖೂಬ, ಬಸವ ಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ, ವಿಧಾನ ಪರಿಷತ್ತಿನ ಸದಸ್ಯರಾದ ರಘುನಾಥ ಮಲ್ಕಾಪುರೆ, ರವಿ ಕುಮಾರ್, ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆಂಪುರ ಉಪಸ್ಥಿತರಿದ್ದರು.

Continue Reading

ರಾಜಕೀಯ

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

Prajwal Revanna Case: ಸಂಸದ ಪ್ರಜ್ವಲ್‌ ರೇವಣ್ಣರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ. ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಪ್ರಜ್ವಲ್‌ ರೇವಣ್ಣ ವಿರುದ್ಧ ಗುಡುಗಿದ್ದಾರೆ.

VISTARANEWS.COM


on

Prajwal Revanna Case Surrender Now Devegowda warning to Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡ (HD Devegowda) ಅವರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ.

ಈ ಬಗ್ಗೆ ಮೊಮ್ಮಗ, ಸಂಸದ ಪ್ರಜ್ವಲ್‌ ರೇವಣ್ಣರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ಎಚ್‌.ಡಿ. ದೇವೇಗೌಡರ ಪತ್ರದಲ್ಲೇನಿದೆ?

ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ,
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲನ ಚಟುವಟಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ದೇವೇಗೌಡರು ಪ್ರಜ್ವಲ್‌ ಕುರಿತಾಗಿ ಬರೆದ ಪತ್ರದ ಪೂರ್ಣ ಸಾರ ಈ ಪಿಡಿಎಫ್‌ನಲ್ಲಿದೆ. ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಓದಬಹುದು.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ.

ಪ್ರಜ್ವಲ್‌ಗೆ ಎಚ್ಚರಿಕೆ

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ, ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ಇದನ್ನೂ ಓದಿ: Prajwal Revanna Case: ರಾಹುಲ್‌ ಗಾಂಧಿ ಗೆದ್ದರೂ ಸಂಸತ್‌ ಸದಸ್ಯತ್ವ ರದ್ದು ಮಾಡಲು ಜೆಡಿಎಸ್‌ ಮೆಗಾ ಪ್ಲ್ಯಾನ್‌!

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ” ಎಂದು ಎಚ್‌.ಡಿ. ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Continue Reading

ದೇಶ

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

West Bengal Violence: ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

West Bengal Violence
Koo

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆ (Lok Sabha Election 2024)ಯ ಆರನೇ ಹಂತದ ಮತದಾನಕ್ಕೂ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ(West Bengal Violence) ನಡೆದಿದೆ. ನಂದಿಗ್ರಾಮ ಜಿಲ್ಲೆಯಲ್ಲಿ ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತೆಯೊಬ್ಬರ ಹತ್ಯೆ ನಡೆದಿದ್ದು, ಇದರಲ್ಲಿ ಟಿಎಂಸಿ(TMC) ಮುಖಂಡರದ್ದೇ ಕೈವಾಡ ಇದೆ ಎಂದು ಆರೋಪಿಸಿ ಬಿಜೆಪಿ(BJP) ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣ ತರಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.

ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಜಿಲ್ಲೆಯ ಸೋನಾಚೂರ ಪ್ರದೇಶದಲ್ಲಿ ಹಿಂಸಾಚಾರದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಪೊಲೀಸರನ್ನು ನಿಯೋಜಿಸಲಾಗಿದೆ.

ಬಿಜೆಪಿ ಆರೋಪ ಏನು?

ಚುನಾವಣೆ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರು ಸೇರದಂತೆ ಅನೇಕ ಬಿಜೆಪಿಗರು ಸೋನಾಚೂರ ಪ್ರದೇಶದಲ್ಲಿ ಸಮಾಜದ್ರೋಹಿ ಚಟುವಟಿಕೆ ವಿರುದ್ಧ ನಿಗಾ ವಹಿಸುವ ನಿಟ್ಟಿನಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮೋಟರ್‌ ಬೈಕ್‌ನಲ್ಲಿ ಬಂದ ಕೆಲವು ಟಿಎಂಸಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋತಿಬಾಲಾ ಎಂಬ ಕಾರ್ಯಕರ್ತೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಆಕೆಯ ಮಗ ಸೇರಿದಂತೆ ಅನೇಕರಿಗೆ ಗಂಭೀರ ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಪ್ರತಿಕ್ರಿಯಿಸಿದ್ದು, ಕಳೆದ ವಾರ ಹಲ್ದೀಯಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ತಮ್ಮ ಸೋಲಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಘೋಷಣೆ ಹೊರಡಿಸಿದ್ದರು. ಇದೀಗ ಅದನ್ನು ಮಾಡಿ ತೋರಿಸಿದ್ದಾರೆ ಎಂದು ಎಕ್ಸ್‌ ಮೂಲಕ ಕಿಡಿ ಕಾರಿದ್ದಾರೆ. ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದೆ

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading

ಪ್ರಮುಖ ಸುದ್ದಿ

CM Siddaramaiah: ರೈತರ ಬರ ಪರಿಹಾರ ಸಮಸ್ಯೆಯಾದರೆ ಸಹಿಸುವುದಿಲ್ಲ- ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಮಳೆಗಾಲ ಆರಂಭ ಆಗುತ್ತಿದೆ. ರೈತರಿಗೆ ಗೊಬ್ಬರ (fertilizer) ಮತ್ತು ಬಿತ್ತನೆ ಬೀಜ‌ (seed) ಸಮಸ್ಯೆ ಆಗಬಾರದು. ಸಾಲದ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದರು.

VISTARANEWS.COM


on

cm siddaramaiah meet 2
Koo

ಬೆಂಗಳೂರು: ಬರ ಪರಿಹಾರ (drought relief) ಕೆಲವು ಕಡೆ ಸಮಸ್ಯೆ ಆಗಿದೆ. ಅದನ್ನ ಸರಿಪಡಿಸುವ ಜವಾಬ್ದಾರಿ ನಿಮ್ಮದೇ ಆಗಿದೆ. ರೈತರಿಗೆ (farmers) ಯಾವುದೇ ಸಮಸ್ಯೆ ಆದರೂ ಸಹಿಸುವುದಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರಗಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬರ ಹಾಗೂ ಮುಂಗಾರು (monsoon) ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಡಿಯೋ ಸಂವಾದ ನಡೆಸಿದರು. ಮಳೆಗಾಲ ಆರಂಭ ಆಗುತ್ತಿದೆ. ರೈತರಿಗೆ ಗೊಬ್ಬರ (fertilizer) ಮತ್ತು ಬಿತ್ತನೆ ಬೀಜ‌ (seed) ಸಮಸ್ಯೆ ಆಗಬಾರದು. ಸಾಲದ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಿ ಎಂದು ಸಿಎಂ ನಿರ್ದೇಶಿಸಿದರು.

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಕಾಲರಾ ಕಂಡುಬಂದರೆ ಅಧಿಕಾರಿ ಸಸ್ಪೆಂಡ್‌

ಕುಡಿಯುವ ನೀರಿನಿಂದಾಗಿ ಕಾಲರಾ (cholera) ಉಂಟಾದರೆ ಅದಕ್ಕೆ ಕಾರಣರಾದ ಎಂಜಿನಿಯರ್‌ಗಳನ್ನು ಹಾಗೂ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗುತ್ತದೆ ಎಂದು ಕೂಡ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ, ಡಿಸಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಾಕೀತು ಮಾಡಿದರು.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ ಎಂದರು.

500ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಲು ಸಿಎಂ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Continue Reading
Advertisement
Rajakaluve
ಸಂಪಾದಕೀಯ5 mins ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ6 mins ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ11 mins ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ49 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ2 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ2 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ2 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ2 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ19 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌