Karnataka Weather : ಬೇಸಿಗೆ ಆರಂಭದಲ್ಲೇ 40ರ ಗಡಿದಾಟಲಿದ್ಯಾ ಗರಿಷ್ಠ ತಾಪಮಾನ! - Vistara News

ಮಳೆ

Karnataka Weather : ಬೇಸಿಗೆ ಆರಂಭದಲ್ಲೇ 40ರ ಗಡಿದಾಟಲಿದ್ಯಾ ಗರಿಷ್ಠ ತಾಪಮಾನ!

Karnataka Weather Forecast : ಬೇಸಿಗೆ ಆರಂಭದಲ್ಲೇ ತಾಪಮಾನದ ಏರಿತಳಿತಕ್ಕೆ ಜನರು ಕಂಗಲಾಗಿದ್ದಾರೆ. ಬಿಸಿಲ ಧಗೆ ಹೆಚ್ಚಲಿದ್ದು, ಒಣಹವೆ (Dry Weather) ಇರಲಿದೆ.

VISTARANEWS.COM


on

Maximum temperature crosses 40dc
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕುಂತರೂ ನಿಂತರೂ ಬಿಸಿಲಿನದ್ದೇ ಚಿಂತೆಯಾಗಿದೆ. ಮುಂಜಾನೆ ಸೂರ್ಯ ನೆತ್ತಿಗೆ ಬಂದರೆ ಸಾಕು ಬಿಸಿಲ ಧಗೆಗೆ ಜನರು ತತ್ತರಿಸಿ (Karnataka Weather Forecast) ಹೋಗುತ್ತಿದ್ದಾರೆ. ಸದ್ಯ ಇದೇ ವಾತಾವರಣವೂ ಭಾನುವಾರವೂ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಒಳನಾಡಲ್ಲಿ ಶುಷ್ಕ ವಾತಾವರಣವೇ (Dry Weather) ಆವರಿಸಲಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕಲಬುರಗಿಯಲ್ಲಿ ಬಿಸಿಲ ಧಗೆ

ರಾಜ್ಯದಲ್ಲಿ ಶುಕ್ರವಾರ ಒಣ ಹವೆ ವಾತಾವರಣ ಇತ್ತು. ಅತೀ ಗರಿಷ್ಠ ಉಷ್ಣಾಂಶ 37.8 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿತ್ತು ಇದರಿಂದಾಗಿ ಬಿಸಿಲ ಧಗೆ ಹೆಚ್ಚಳಗೊಂಡಿತ್ತು. ಕನಿಷ್ಠ ಉಷ್ಣಾಂಶ 15.1 ಡಿ.ಸೆ. ಮಂಡ್ಯದಲ್ಲಿ ದಾಖಲಾಗಿತ್ತು. ಕೋಲಾರಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕನಿಷ್ಠ ತಾಪಮಾನ ಏರಿಕೆ

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ತುಮಕೂರು, ರಾಮನಗರ ಮತ್ತು ಬೆಳಗಾವಿ ಸೇರಿದಂತೆ ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ನಿಂದ 15 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ನಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌; ಟೆಕ್ನಾಲಜಿ ಬಳಸಿ ವಿದ್ರೋಹಿಗಳ ಹಿಡಿಯಲು ಸಿಎಂ ಖಡಕ್‌ ಸೂಚನೆ

ವಿಟಮಿನ್‌ ಮಾತ್ರೆಗಳನ್ನು ಅತಿಯಾಗಿ ಸೇವಿಸಬೇಡಿ!

ವಿಟಮಿನ್‌ಗಳು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಪೋಷಕಾಂಶಗಳು. ಶರೀರ ಆರೋಗ್ಯವಾಗಿರಲು ಮಾತ್ರವಲ್ಲ, ತನ್ನ ಕೆಲಸವನ್ನು ಮಾಡಿಕೊಳ್ಳಲು ಸಹ ಜೀವಸತ್ವಗಳ ಅಗತ್ಯವಿದೆ. ಆಹಾರದ ಮೂಲಕ ದೊರೆಯುವ ಈ ಸತ್ವಗಳು ಸಾಕಾಗದು ಎನಿಸಿದ ಬಹಳಷ್ಟು ಮಂದಿ ವಿಟಮಿನ್‌ ಪೂರಕಗಳನ್ನು ಸೇವಿಸುತ್ತಾರೆ. ಇದಕ್ಕೆ ವೈದ್ಯರ ಸಲಹೆ ಅಗತ್ಯ. ಪೂರಕಗಳನ್ನು ತಮ್ಮಷ್ಟಕ್ಕೆ ಇಷ್ಟ ಬಂದಂತೆ ಸೇವಿಸಿದರೆ ಸಮಸ್ಯೆಗಳಾಗಬಹುದು. ಕಾರಣ, ವಿಟಮಿನ್‌ ಅತಿಯಾದರೆ (Side Effects of Vitamin) ಅದಕ್ಕೂ ಅಡ್ಡಪರಿಣಾಮಗಳಿಗೆ. ಏನದು?
ಜೀವಸತ್ವಗಳಲ್ಲಿ ಕೆಲವು ನೀರಿನಲ್ಲಿ ಕರಗಬಲ್ಲಂಥವು, ಕೆಲವು ಕೊಬ್ಬಿನಲ್ಲಿ ಕರಗಬಲ್ಲವು. ನೀರಲ್ಲಿ ಕರಗಬಲ್ಲ ಸಿ ವಿಟಮಿನ್‌ನಂಥವು ಕೊಂಚ ಹೆಚ್ಚಾದರೆ ಅತಿಯಾದ ದುಷ್ಪರಿಣಾಮಗಳೇನು ಆಗುವುದಿಲ್ಲ. ಕಾರಣ, ಇವು ಹೆಚ್ಚಾದಷ್ಟು ಮೂತ್ರದಲ್ಲಿ ಹೊರಗೆ ಹೋಗಿಬಿಡುತ್ತದೆ. ಆದರೆ ಕೊಬ್ಬಿನಲ್ಲಿ ಕರಗಬಲ್ಲ ವಿಟಮಿನ್‌ ಎ, ಡಿ, ಇ ಮತ್ತು ಕೆ-ನಂಥವು ಸಮಸ್ಯೆಗಳು ತರಬಲ್ಲವು. ಏಕೆಂದರೆ, ದೇಹದ ಕೊಬ್ಬಿನ ಕೋಶಗಳಲ್ಲಿ ಉಳಿಯುವ ಇವನ್ನು ದೇಹದಿಂದ ವರ್ಜಿಸುವುದು ಕಷ್ಟವಾಗಿಬಿಡಬಹುದು. ಯಾವ ವಿಟಮಿನ್‌ ಅತಿಯಾದರೆ ಆರೋಗ್ಯದ ಮೇಲಿನ ಪರಿಣಾಮವೇನು ಎಂಬುದನ್ನು ಗಮನಿಸೋಣ.

Vitamin A

ವಿಟಮಿನ್‌ ಎ

ಯಾವುದೇ ಜೀವಸತ್ವಗಳು ಆಹಾರದ ಮೂಲಕ ದೇಹ ಸೇರಿದರೆ ಹೆಚ್ಚು ಸುರಕ್ಷಿತ. ಹಾಗಲ್ಲದೆ ಪೂರಕಗಳನ್ನು ಸೇವಿಸುವಾಗ ಮಾತ್ರ ಎಚ್ಚರ ಬೇಕು. ಎ ಜೀವಸತ್ವ ಹೆಚ್ಚಾದರೆ ತಲೆನೋವು, ತಲೆಸುತ್ತು, ಹೊಟ್ಟೆ ತೊಳೆಸುವುದು, ಚರ್ಮದ ಕಿರಿಕಿರಿ, ಮೂಳೆ ಮತ್ತು ಕೀಲುಗಳಲ್ಲಿ ನೋವುಗಳು ಸಾಮಾನ್ಯವಾಗಿ ಕಂಡುಬರುವಂಥ ಅಡ್ಡ ಪರಿಣಾಮಗಳು. ಆದರೆ ವಿಪರೀತ ಹೆಚ್ಚಾದ ಪ್ರಕರಣಗಳಲ್ಲಿ, ದೃಷ್ಟಿದೋಷ, ಮೂಳೆಗಳಲ್ಲಿ ಉರಿಯೂತ, ಕೂದಲು ಉದುರುವುದು, ಚರ್ಮ ಒಣಗುವುದು, ಯಕೃತ್‌ಗೆ ಹಾನಿಯಾಗುವಂಥದ್ದು ಕಂಡು ಬರಬಹುದು.

Vitamin D

ವಿಟಮಿನ್‌ ಡಿ

ಆಹಾರದ ಮೂಲಕ ಅಥವಾ ಸೂರ್ಯನ ಬೆಳಕಿನ ಮೂಲಕ ನಮ್ಮ ದೇಹ ಸೇರುವ ರೀತಿಯೇ ಸೂಕ್ತವಾದದ್ದು. ಆದರೆ ವಿಟಮಿನ್‌ ಡಿ ಕೊರತೆಯಾದ ಸಂದರ್ಭಗಳಲ್ಲಿ ವೈದ್ಯರ ಸೂಚನೆಯ ಮೇರೆಗೆ ಪೂರಕ ಮಾತ್ರೆಗಳನ್ನು ಸೇವಿಸಬೇಕು. ಅದಿಲ್ಲದಿದ್ದರೆ, ಹೊಟ್ಟೆ ತೊಳೆಸುವುದು, ವಾಂತಿ, ಅಶಕ್ತತೆ ಕಾಡಬಹುದು. ತೀವ್ರವಾದ ಪ್ರಕರಣಗಳಲ್ಲಿ ರಕ್ತದಲ್ಲಿ ಕ್ಯಾಲ್ಶಿಯಂ ಮಟ್ಟ ಏರುವುದು ಅಥವಾ ಕಿಡ್ನಿ ತೊಂದರೆಗಳು ಬಾಧಿಸಬಹುದು.

Vitamin E

ಇ ಜೀವಸತ್ವ

ಈ ವಿಟಮಿನ್‌ ಅಧಿಕವಾದರೆ ಆಗುವ ಅಡ್ಡ ಪರಿಣಾಮಗಳು ತೀವ್ರವಾಗುವ ಸಾಧ್ಯತೆ ಹೆಚ್ಚು. ಇದು ಕಾಡುವುದು ಆಂತರಿಕ ರಕ್ತಸ್ರಾವದ ರೂಪದಲ್ಲಿ. ನೈಸರ್ಗಿಕವಾಗಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯಲ್ಲಿ ಹೆಚ್ಚುವರಿ ವಿಟಮಿನ್‌ ಇ ಅಡ್ಡಗಾಲು ಹಾಕುತ್ತದೆ. ಇದರಿಂದ ಹೆಮೊರೇಜ್‌ಗಳ ಭೀತಿ ಹೆಚ್ಚಬಹುದು. ಇದಲ್ಲದೆ, ದುಷ್ಪರಿಣಾಮ ಸೌಮ್ಯ ಸ್ವರೂಪದಲ್ಲಿದ್ದರೆ, ವಾಂತಿ, ಡಯರಿಯ, ಹೊಟ್ಟೆ ನೋವು, ತಲೆನೋವು, ಅಲರ್ಜಿಯ ಸೂಚನೆಗಳು ಕಾಡಬಹುದು.

Vitamin k

ವಿಟಮಿನ್‌ ಕೆ

ಈ ಸತ್ವವು ಹೆಚ್ಚಾಗುವ ಮಟ್ಟಿಗೆ ದೇಹ ಸೇರುವ ಸಾಧ್ಯತೆ ಉಳಿದವಕ್ಕೆ ಹೋಲಿಸಿದರೆ ಕಡಿಮೆ. ಆದಾಗ್ಯೂ ಕೆ ಜೀವಸತ್ವ ಹೆಚ್ಚಾದರೆ ಕೆಂಪುರಕ್ತಕಣಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿ, ಯಕೃತ್‌ಗೂ ತೊಂದರೆ ನೀಡಬಹುದು. ರಕ್ತ ನೀರಾಗುವಂಥ ಔಷಧಿ ಸೇವಿಸುವವರಲ್ಲಿ, ಈ ಔಷಧಿಯ ಪರಿಣಾಮದಲ್ಲೂ ಅಡ್ಡಗಾಲು ಹಾಕುತ್ತದೆ ಕೆ ಜೀವಸತ್ವ.

Vitamin c

ವಿಟಮಿನ್‌ ಸಿ

ಈವರೆಗೆ ಹೇಳಿದ ಜೀವಸತ್ವಗಳೆಲ್ಲವೂ ಕೊಬ್ಬಿನಲ್ಲಿ ಕರಗುವಂಥವು. ಇನ್ನು ಮೇಲಿನವು ನೀರಲ್ಲಿ ಕರಗಬಲ್ಲ ಜೀವಸತ್ವಗಳು. ಆಸ್ಕಾರ್ಬಿಕ್‌ ಆಮ್ಲವೆಂದೂ ಕರೆಯಲಾಗುವ ಇದು ಹೆಚ್ಚಾದರೆ ಸಾಮಾನ್ಯವಾಗಿ ಮೂತ್ರದ ಮೂಲಕ ದೇಹದಿಂದ ಹೊರಹೋಗುತ್ತದೆ. ಈ ಮಿತಿಯನ್ನೂ ಮೀರಿ ವಿಟಮಿನ್‌ ಸಿ ಸೇವಿಸಿದರೆ, ಜೀರ್ಣಾಂಗಗಳ ತೊಂದರೆ ಬಾಧಿಸಬಹುದು. ಇನ್ನೂ ಹೆಚ್ಚಾದರೆ ಮೂತ್ರಪಿಂಡಗಳಲ್ಲಿ ಕಲ್ಲುಗಳು ಉಂಟಾಗಬಹುದು.

Vitamin b

ವಿಟಮಿನ್‌ ಬಿ

ಇದರಲ್ಲಿ ಹಲವಾರು ವಿಟಮಿನ್‌ಗಳಿವೆ. ಒಂದೊಂದನ್ನೂ ಪ್ರತ್ಯೇಕವಾಗಿ ಹೇಳುವುದಾದರೆ- ವಿಟಮಿನ್‌ ಬಿ೩ ಹೆಚ್ಚಾದರೆ, ಚರ್ಮ ಕೆಂಪಾಗಿ ಬಿಸಿಯಾಗುವುದು, ಹೃದಯ ಬಡಿತ ಏರುವುದು, ವಾಂತಿ, ಯಕೃತ್‌ಗೆ ಹಾನಿ ಮತ್ತು ಜೀರ್ಣಾಂಗಗಳ ಸಮಸ್ಯೆ ಉಂಟಾಗಬಹುದು. ವಿಟಮಿನ್‌ ಬಿ೬ ಹೆಚ್ಚಾದರೆ, ನರಗಳಿಗೆ ಹಾನಿಯಾಗಬಹುದು, ಸ್ನಾಯುಗಳು ದುರ್ಬಲವಾಗಬಹುದು.

ಫಾಲಿಕ್‌ ಆಮ್ಲ ಅಥವಾ ಬಿ9 ಜೀವಸತ್ವ ಅತಿಯಾದರೆ, ವಿಟಮಿನ್‌ ಬಿ12 ಕೊರತೆಯನ್ನು ಮರೆಮಾಚಿಬಿಡುತ್ತದೆ. ಇದರಿಂದ ನರಗಳ ಸಮಸ್ಯೆಯೂ ತಲೆದೋರಬಹುದು. ವಿಟಮಿನ್‌ ಬಿ12 ವಿಪರೀತವಾದರೆ ತಲೆನೋವು, ತಲೆಸುತ್ತು, ವಾಂತಿ, ಒತ್ತಡಗಳು ಕಾಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಯಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಯಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Heavy Rain: ಶಿರಾ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ. ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

VISTARANEWS.COM


on

Due to heavy rain in Shira water entered houses and shops
Koo

ಶಿರಾ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, (Heavy Rain) ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾನುವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ ಚರಂಡಿಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದ ಕಾರಣ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಇದನ್ನೂ ಓದಿ: IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಇನ್ನು ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು, ವಿದ್ಯುತ್‌ ಉಪಕರಣಗಳು ಸೇರಿದಂತೆ ಇತರೆ ವಸ್ತುಗಳು ನೀರು ಪಾಲಾಗಿವೆ.

ಆಕಳು ಕರು ರಕ್ಷಣೆ

ಭಾರೀ ಮಳೆಗೆ ನಗರದ 18ನೇ ವಾರ್ಡ್‌ನ ದೊಡ್ಡಕೆರೆ ಅಂಗಳದ ಬಳಿ ಚರಂಡಿಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಆಕಳ ಕರುವನ್ನು ಸ್ಥಳೀಯ ಯುವಕರು ರಕ್ಷಿಸಿ, ಚರಂಡಿಯಿಂದ ಹೊರ ತೆಗೆದಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಇದನ್ನೂ ಓದಿ: Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

Rain news: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ನೂರಾರು ಪ್ರಯಾಣಿಕರು ಮಳೆಗೆ ಸಿಕ್ಕಿಹಾಕಿಕೊಂಡರು. ತುಮಕೂರು ಮುಂತಾದ ಕಡೆ ಮಳೆ ಹಾವಳಿ ಎಬ್ಬಿಸಿದೆ.

VISTARANEWS.COM


on

rain news charamadi ghat traffic jam
Koo

ಚಿಕ್ಕಮಗಳೂರು: ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ (Charmadi Ghat) ಹೆದ್ದಾರಿಯಲ್ಲಿ (Highway) ಮಳೆಯ ಪರಿಣಾಮ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಹಾಳಾಗಿ ನಿಂತುದರಿಂದ ನೂರಾರು ಪ್ರಯಾಣಿಕರು ಮಳೆಯಲ್ಲಿ (Rain news) ಸಿಲುಕಿಕೊಂಡು ಪಾಡು ಪಟ್ಟಿದ್ದಾರೆ. ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ದಾರಿ ಕಾಣದೆ ವಾಹನ ಸವಾರರು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿದುದರಿಂದ ಟ್ರಾಫಿಕ್‌ ಜಾಮ್‌ (Traffic jam) ಉಂಟಾಯಿತು. ಜೊತೆಗೆ ಎರಡು ಕೆಎಸ್‌ಆರ್‌ಟಿಸಿ ಬಸ್ಸುಗಳು ಕೆಟ್ಟು ನಿಂತ ಪರಿಣಾಮ, ವಾಹನಗಳು ಅತ್ತಿತ್ತ ಹೋಗಲಾಗದೆ ಪ್ರಯಾಣಿಕರು ಬವಣೆ ಅನುಭವಿಸಿದರು.

ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಮಳೆಯ ನಡುವೆ KSRTC ಬಸ್ಸುಗಳೆರಡು ಕೆಟ್ಟು ರಸ್ತೆ ಮಧ್ಯದಲ್ಲಿ ನಿಂತವು. ಬಸ್ಸುಗಳು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಯಿತು. ಹೀಗಾಗಿ ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತವು. ನಿರಂತರ ಮಳೆಯಲ್ಲಿ ಪ್ರಯಾಣಿಕರು ಬಾಕಿಯಾದರು. ಮಂಗಳೂರಿಗೆ ರೋಗಿಯನ್ನು ಒಯ್ಯುತ್ತಿದ್ದ ಒಂದು ಆಂಬ್ಯುಲೆನ್ಸ್ ಟ್ರಾಫಿಕ್ ನಡುವೆ ಸಿಲುಕಿಕೊಂಡಿತು. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಹರಸಾಹಸಪಟ್ಟರು.

ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಕೊಪ್ಪ, ಕಡೂರು, ಕಳಸಾಪುರ, ಪಂಚನಹಳ್ಳಿ, ಬೀರೂರು, ಶಿವನಿ, ಬೆಳವಾಡಿ, ಮೂಡಿಗೆರೆ, ಹಿರೇನಲ್ಲೂರು, ಚಿಕ್ಕನಲ್ಲೂರು, ಭಾಗದಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ಸ್ಥಗಿತವಾಗಿದೆ.

ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮದಲ್ಲಿ ರೈತ ಬಸವರಾಜು ಎಂಬವರಿಗೆ ಸೇರಿದ 4 ಎಕರೆ ಬಾಳೆ ತೋಟ ಭಾರಿ ಗಾಳಿ ಮಳೆಗೆ ನೆಲಕಚ್ಚಿದೆ. ಕೇವಲ ಇನ್ನೊಂದು ತಿಂಗಳಲ್ಲಿ ಕಟಾವಿಗೆ ಬರಬೇಕಿದ್ದ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ

ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ರಾತ್ರಿಯಿಡೀ ಸುರಿದ ಮಳೆಗೆ ಹೊಂಗೆ ಹಳ್ಳ ಉಕ್ಕಿ ಹರಿಯುತ್ತಿದ್ದು, ಅಜ್ಜಂಪುರ ತಾಲೂಕಿನ ಐತಿಹಾಸಿಕ ಶಿವನಿ ಕೆರೆಗೆ ಭಾರಿ ಪ್ರಮಾಣದ ನೀರು ಬಂದಿದೆ. ಹೊಂಗೆ ಹಳ್ಳದ ಸುತ್ತಮುತ್ತಲಿನ ಕೆಲವು ತೋಟಗಳು ಜಲಾವೃತವಾಗಿವೆ. ಸೇತುವೆ ರಸ್ತೆಯ ಮೇಲೆ ಹಳ್ಳದ ನೀರು ಹರಿಯಿತು.

ದೇವಾಲಯದ ಶಿಖರಕ್ಕೆ ಸಿಡಿಲು

ಯಾದಗಿರಿ: ಜಿಲ್ಲೆಯ ದೋರನಹಳ್ಳಿ ಗ್ರಾಮದ ಶ್ರೀ ಪರಮಾನಂದೇಶ್ವರ ದೇವಸ್ಥಾನದ ಶಿಖರಕ್ಕೆ ಸಿಡಿಲು ಅಪ್ಪಳಿಸಿದ್ದು, ಮೇಲ್ಭಾಗದಿಂದ ಕೆಳಭಾಗದವರಗೆ ಹಾನಿಯಾಗಿದೆ. ದೇವಸ್ಥಾನದಲ್ಲಿ ಮಲಗಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರು: ತುಮಕೂರು ‌ಜಿಲ್ಲೆಯಲ್ಲಿ‌ ತಡರಾತ್ರಿ ಮಳೆ ಅಬ್ಬರಕ್ಕೆ ಹೆಚ್ ಬೈರಾಪುರ ಗ್ರಾಮದ ಎರಡು ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೆಚ್ ಬೈರಾಪುರ ಗ್ರಾಮದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡಿದರು.

rain news tumkur

ತುಮಕೂರು ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್‌ನ ಕೆಲ ಮನೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿದೆ. ವಾಣಿಜ್ಯ ಮಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗಿದ್ದ ಅಪಾರ ಪ್ರಮಾಣದ ಧವಸ ಧಾನ್ಯ, ಪೀಠೋಪಕರಣಗಳು ನೀರು ಪಾಲಾಗಿವೆ. ಶಿರಾ ನಗರಸಭೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ 18ನೇ ವಾರ್ಡ್ ಜನ ಆಕ್ರೋಶಿಸಿದ್ದಾರೆ.

ಮಗುಚಿದ ಬೋಟ್‌, ಪ್ರಯಾಣಿಕರ ರಕ್ಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಪ್ರವಾಸಿ ಬೋಟ್ ಪಲ್ಟಿಯಾಗಿದ್ದು, ಸಮುದ್ರದ ಹಿನ್ನೀರಿನಲ್ಲಿ ಮಗುಚಿದ ಪ್ರವಾಸಿಗರ ಬೋಟ್‌ನಿಂದ 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಯಿತು.

Tourist boat capsizes

ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯಿತು. ಮೂಡಂಗಿಯ ಗಣೇಶ, ರಮೇಶ ಎನ್ನುವವರಿಗೆ ಸೇರಿದ ಪ್ರವಾಸಿ ಬೋಟ್ ಇದಾಗಿದ್ದು, ನಿಗದಿಗಿಂತ ಹೆಚ್ಚಿನ ಜನರನ್ನು ದೋಣಿಯಲ್ಲಿ ಹತ್ತಿಸಿಕೊಂಡಿದ್ದರಿಂದ ಮಗುಚಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Continue Reading
Advertisement
Karnataka weather Forecast
ಮಳೆ9 mins ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಯಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ12 mins ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ18 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ22 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ33 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ35 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ46 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್47 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ49 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ52 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌