Jain University: ಮಹಿಳಾ ಸಬಲೀಕರಣ ಪ್ರತಿಯೊಬ್ಬರ ಕರ್ತವ್ಯ: ಸಚಿವ ಡಾ.ಎಂ.ಸಿ.ಸುಧಾಕರ್ - Vistara News

ಬೆಂಗಳೂರು

Jain University: ಮಹಿಳಾ ಸಬಲೀಕರಣ ಪ್ರತಿಯೊಬ್ಬರ ಕರ್ತವ್ಯ: ಸಚಿವ ಡಾ.ಎಂ.ಸಿ.ಸುಧಾಕರ್

Jain University: ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ʼThe Myriad Facets of Women : ಎ ಸೆಲೆಬ್ರೇಷನ್ ಆಫ್ ದಿ ಎಕ್ಸ್‌ಟ್ರಾರ್ಡಿನರಿʼ ಸಮ್ಮೇಳನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾತನಾಡಿದ್ದಾರೆ.

VISTARANEWS.COM


on

Dr MC Sudhakar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾಲಯದ (JAIN (Deemed-to-be University)) ಸೆಂಟರ್‌ ಫಾರ್‌ ಎಜುಕೇಶನಲ್‌ ಟ್ರಾನ್ಸ್‌ಫರ್ಮೇಶನ್ ಥ್ರೋ ಟೆಕ್ನಾಲಜಿ (CETT) ಸಂಸ್ಥೆಯಲ್ಲಿ ಮಾರ್ಚ್‌ 1 ಮತ್ತು 2ರಂದು ʼThe Myriad Facets of Women : ಎ ಸೆಲೆಬ್ರೇಷನ್ ಆಫ್ ದಿ ಎಕ್ಸ್‌ಟ್ರಾರ್ಡಿನರಿʼ ಎಂಬ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.

ಮಹಿಳಾ ಸಬಲೀಕರಣ ಮತ್ತು ಆತ್ಮವಿಶ್ವಾಸ ನಿರ್ಮಾಣ, ಕಲೆ ಮತ್ತು ವೈದಿಕ ಸಂಸ್ಕೃತಿ, ಸುಸ್ಥಿರ ಅಭಿವೃದ್ಧಿ, ಕ್ರೀಡೆ, ಭವಿಷ್ಯದ ಪೀಳಿಗೆಗೆ ಸ್ಫೂರ್ತಿ, ಜ್ಞಾನ ಹಂಚಿಕೆ, ಮಾರ್ಗದರ್ಶನ ಮತ್ತು ರೋಲ್ ಮಾಡೆಲ್‌ಗಳು, ನೆಟ್‌ವರ್ಕಿಂಗ್ ಮತ್ತು ಸಹಯೋಗ ಮತ್ತು ಇತರ ವಿಷಯಗಳ ಕುರಿತು ಸಂಶೋಧನಾ ಪ್ರಬಂಧ ಪ್ರಸ್ತುತಿಗಳ ಮೂಲಕ ಚರ್ಚಿಸುವುದು ಈ ಸಮ್ಮೇಳನದ ಹಿಂದಿನ ಮುಖ್ಯ ಉದ್ದೇಶವಾಗಿತ್ತು.

ಮುಖ್ಯ ಅತಿಥಿಗಳಾದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಮೊದಲಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯʼ ಹಾರ್ದಿಕ ಶುಭಾಶಯಗಳನ್ನು ಕೋರಿ, ಶಿಕ್ಷಣದ ಪರಿವರ್ತನಾ ಶಕ್ತಿ ಬಗ್ಗೆ ಮಾತನಾಡಿದರು. ವಿದ್ಯಾವಂತ ಮಹಿಳೆಯರು ವಿದ್ಯೆ ಬಿಟ್ಟು ಮದುವೆಯಾಗಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿಯನ್ನು ಹೊತ್ತುಕೊಂಡ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು, ಅಂದಿನ ಡೈರಿ ಕೆಲಸಕ್ಕೆ ಮಹಿಳೆಯರ ಐತಿಹಾಸಿಕ ಸಂಪರ್ಕವನ್ನು ಮತ್ತು ಇಂದಿನ ಕಾರ್ಪೊರೇಟ್ ಸಮಾಜದ ಜವಾಬ್ದಾರಿ ಹೊತ್ತುಕೊಂಡ ಅವರ ಪರಿವರ್ತನೆಯ ಬಗ್ಗೆ ಮಾತನಾಡಿದರು.

ಮಹಿಳಾ ಸಬಲೀಕರಣ ಪ್ರತಿಯೊಬ್ಬರ ಕರ್ತವ್ಯ. ಸ್ತ್ರೀಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಹಿಳಾ ಸಮಾನತೆಗೆ ಒತ್ತು ನೀಡಬೇಕು. ಸವಾಲುಗಳನ್ನು ಜಯಿಸುವುದು ಮತ್ತು ಜೀವನದ ವಿವಿಧ ಅಂಶಗಳಲ್ಲಿ ಅಭಿವೃದ್ಧಿ ಹೊಂದುವ ಅಗತ್ಯವಿದೆ ಎಂದು ಡಾ.ಸುಧಾಕರ್ ಹೇಳಿದರು.

ಇನ್ನು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಡಿ ಮೌದ್ಗಿಲ್ ಅವರು, ಅತ್ಯುತ್ತಮ ಸಾರ್ವಜನಿಕ ಸೇವೆಗಾಗಿ ಐಪಿಎಸ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದರು. ಡಾ.ಧರಣಿದೇವಿ ಮಾಲಗತ್ತಿ ಅವರು ಕಲೆ ಮತ್ತು ಸಂಸ್ಕೃತಿಯಲ್ಲಿ ಎಕ್ಸಲೆನ್ಸ್ ಪ್ರಶಸ್ತಿಗೆ ಭಾಜನರಾದರು. ರುಕ್ಮಿಣಿ ಕೃಷ್ಣಸ್ವಾಮಿ ವಿಶೇಷ ಶಿಕ್ಷಣದಲ್ಲಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, ನಳಿನಿ ಶೇಖರ್ ಅವರಿಗೆ ಪರಿಸರ ಸುಸ್ಥಿರತೆಯಲ್ಲಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಎಂಎಸ್‌ ವಿದ್ಯಾ ಸಾಗರ್ ಅವರಿಗೆ ಬಾಹ್ಯಾಕಾಶ ಸಂಶೋಧನೆಯಲ್ಲಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದ್ದು, ಡಾ. ಪ್ರಭಾ ಚಂದ್ರ ಅವರು ಮಾನಸಿಕ ಯೋಗಕ್ಷೇಮದಲ್ಲಿ ನಿಮ್ಹಾನ್ಸ್ ಎಕ್ಸಲೆನ್ಸ್ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟರು. ಎಂಎಸ್‌ ನಬಿಲಾ ಜಮಾಲ್ ಅವರಿಗೆ ಮಾಧ್ಯಮದಲ್ಲಿ ಎಕ್ಸಲೆನ್ಸ್ ಪ್ರಶಸ್ತಿಯನ್ನು ನೀಡಲಾಯಿತು.

ಮಂಗಳಾ ಎನ್. ಸಂಚಾರಿ ಅವರಿಗೆ ಕಲೆ ಮತ್ತು ರಂಗಭೂಮಿಯಲ್ಲಿ ಎಕ್ಸಲೆನ್ಸ್ ಪ್ರಶಸ್ತಿ, ಮಾಲತಿ ಕೃಷ್ಣಮೂರ್ತಿ ಹೊಳ್ಳ ಅವರಿಗೆ ಕ್ರೀಡೆಯಲ್ಲಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ. ಆಶಾ ವಿ. ಸ್ವಾಮಿ ಅವರಿಗೆ ಸಮಾಜ ಸೇವೆಯಲ್ಲಿ ಎಕ್ಸಲೆನ್ಸ್ ಪ್ರಶಸ್ತಿ ಮತ್ತು ಡಾ. ಶ್ವೇತಾ ಸಿಂಗ್ ಅವರು ಉದ್ಯಮಶೀಲತೆಯಲ್ಲಿ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ | Raja Marga Column : ಪೋಷಕರೇ, ಮಕ್ಕಳ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ

ಅಂತಿಮವಾಗಿ, ಪ್ರೊ. ನಿಲೋಫರ್ ಖಾನ್ ಅವರು ಉನ್ನತ ಶಿಕ್ಷಣದಲ್ಲಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟರು. ಅಲ್ಲದೆ, ಸಮ್ಮೇಳನದಲ್ಲಿ ಸಂಶೋಧನಾ ವಿದ್ವಾಂಸರು ಮತ್ತು ವಿದ್ಯಾರ್ಥಿಗಳಿಂದ 412 ಕ್ಕೂ ಹೆಚ್ಚು (Research Paper Presentations) ಸಂಶೋಧನಾ ಪ್ರಬಂಧವನ್ನು ಮಂಡಿಸಿಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ.

VISTARANEWS.COM


on

Vistara editorial
Koo

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ. ಘನ ತ್ಯಾಜ್ಯ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ. ಒಂದು ರೀತಿಯಿಂದ ಇದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಇರುವುದು ಒಳ್ಳೆಯದು.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ. ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ. ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ. ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ.

2012ರಿಂದಲೇ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್, ಬಿಬಿಎಂಪಿಯ ಕಿವಿ ಹಿಂಡುತ್ತ ಬಂದಿದೆ. ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ಅದರನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ.

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ. ಆದರೆ ಸಂಸ್ಥೆ ಬದಲಾಯಿಸಿದ ಮಾತ್ರಕ್ಕೆ ನಿರ್ವಹಣೆ ಉತ್ತಮಗೊಳ್ಳುತ್ತದೆ ಎಂದೇನಿಲ್ಲ. ಕಂಪನಿಗೂ ಬಿಬಿಎಂಪಿಗೂ ಹಂಚಿಕೊಳ್ಳಲಾದ ಕಾರ್ಯಗಳಲ್ಲಿ ಭಿನ್ನಮತ ತಲೆದೋರಬಾರದು. ಕಸದ ಸಮಸ್ಯೆಯಿಂದ ಬಿಬಿಎಂಪಿ ಜಾರಿಕೊಳ್ಳಲು ಇದು ನೆಪ ಆಗಬಾರದು. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಇದನ್ನೂ ಓದಿ: Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Continue Reading

ಕರ್ನಾಟಕ

Martin Movie: ಬಹುನೀರಿಕ್ಷಿತ ʼಮಾರ್ಟಿನ್ʼ ರಿಲೀಸ್ ಡೇಟ್ ಫಿಕ್ಸ್‌; 3 ವರ್ಷಗಳ ನಂತರ ತೆರೆಗೆ ಆ್ಯಕ್ಷನ್ ಪ್ರಿನ್ಸ್ ಎಂಟ್ರಿ

Martin Movie: ʼಮಾರ್ಟಿನ್ʼ ಸಿನಿಮಾ, ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

VISTARANEWS.COM


on

Martin Movie
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಫಿಕ್ಸ್‌ ಆಗಿದೆ. ಎ.ಪಿ. ಅರ್ಜುನ್ ನಿರ್ದೇಶನದ ʼಮಾರ್ಟಿನ್ʼ (Martin Movie) ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜುಗೊಂಡಿದ್ದು, ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ.

ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಬಂದ್‌ ಆಗಲಿವೆ ಎಂಬ ಸುದ್ದಿ ಹರಿದಾಡುತ್ತಿರುವ ನಡುವೆ ‘ಮಾರ್ಟಿನ್’ ಚಿತ್ರತಂಡ ಬಿಗ್ ಅನೌನ್ಸ್‌ಮೆಂಟ್ ಮಾಡಿದೆ. ಈ ಚಿತ್ರವು ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಉದಯ್ ಕೆ.ಮೆಹ್ತಾ ಈ ಅದ್ಧೂರಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸುಮಾರು ದಿನಗಳಿಂದ ಸಿ.ಜಿ ಕೆಲಸಗಳಲ್ಲಿ ನಿರತವಾಗಿದ್ದ ಮಾರ್ಟಿನ್ ಚಿತ್ರತಂಡ, ಇದೀಗ ರಿಲೀಸ್‌ ದಿನಾಂಕ ಘೋಷಣೆ ಮಾಡಿದೆ. ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಚಿತ್ರವು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ನಿರ್ದೇಶಕ ಎ.ಪಿ.ಅರ್ಜುನ್ ಮಾತನಾಡಿ, ರಿಲೀಸ್ ಯಾವಾಗ? ಯಾವಾಗ? ಅಂತ ಅಭಿಮಾನಿಗಳು ಕೇಳುತ್ತಿದ್ದರು. ಇದೀಗ ಫೈನಲ್‌ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದೇವೆ. ಅಕ್ಟೋಬರ್ 11ಕ್ಕೆ‌ ನಿಮ್ಮ ಮುಂದೆ ಬರುತ್ತೇವೆ. ನಾನು ಮಾತನಾಡಲ್ಲ, ನಮ್ಮ ಸಿನಿಮಾ ಮಾತನಾಡುತ್ತೆ. ಏನೇ ಸಮಸ್ಯೆ ಬಂದರೂ‌ ಒದ್ದಾಡಿ, ಗುದ್ಡಾಡಿ ಕೊನಗೂ ಸಿನಿಮಾ ಮುಗಿಸಿದ್ದೇವೆ. ತಮಿಳುನಾಡು, ಹೈದರಾಬಾದ್, ಕೇರಳ, ಮುಂಬೈಗೆ ಹೋಗಿ ಪ್ರಮೋಷನ್ ಮಾಡಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಇರಲಿ. ನನ್ನ ಎಲ್ಲಾ ಸಿನಿಮಾಗಳನ್ನು ಮಗು ಥರ ಟ್ರೀಟ್ ಮಾಡ್ತೀನಿ, ಮಾರ್ಟಿನ್ ಆರನೇ ಸಿನಿಮಾ. ನನ್ನ ಪಾಲಿಗೆ ಇದು ಆರನೇ ಮಗು ಎಂದು ಹೇಳಿದರು.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಲು ಸಾಲು ಸಿನಿಮಾಗಳಲ್ಲಿ ಧ್ರುವ ಬ್ಯುಸಿ

ನಿರ್ದೇಶಕ ಪ್ರೇಮ್‌ ಹಾಗೂ ಧ್ರುವ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು.ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಧ್ರುವ ಸರ್ಜಾ ರೈನಾ ಎಂಬ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಮಾಸ್ ಲುಕ್‌ನಲ್ಲಿ ಧ್ರುವ ಸರ್ಜಾ ಕಂಡಿದ್ದಾರೆ. ಶಿವಾರ್ಜುನ್ ನಿರ್ದೇಶನ ಹಾಗೂ ಉದಯ ಮೆಹ್ತಾ ನಿರ್ಮಾಣ ಈ ಚಿತ್ರಕ್ಕಿದೆ.

Continue Reading

ಕರ್ನಾಟಕ

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Liquor ban: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

VISTARANEWS.COM


on

Liquor ban
Koo

ಬೆಂಗಳೂರು: ಮದ್ಯಪ್ರಿಯರಿಗೆ ಕಹಿ ಸುದ್ದಿ ಹೊರಬಿದ್ದಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿಯಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಒಂದು ವಾರದ ಕಾಲ ಮದ್ಯದಂಗಡಿಗಳು ಕ್ಲೋಸ್‌‌ ಆಗುವ ಹಿನ್ನೆಲೆ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳು ಮುಗಿಬೀಳುತ್ತಿದ್ದಾರೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತದೆ. ಅದೇ ರೀತಿ, ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇದನ್ನೂ ಓದಿ | D‌rinking Water: ಅಧಿಕಾರಿಗಳೇ ಹುಷಾರ್! ನೀರಿನಿಂದ ಆರೋಗ್ಯ ಕೈಕೊಟ್ರೆ ಶಿಸ್ತು ಕ್ರಮ: ಡಿಕೆಶಿ ವಾರ್ನಿಂಗ್

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಅಂದೂ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

Excise revenue excise department went beyond the target and 15 percent more income

ಬೆಂಗಳೂರು: ಈ ಬೇಸಿಗೆಯಲ್ಲಿ ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ (Beer Shortage) ತೀವ್ರವಾಗಿ ಕಾಡಿತ್ತು. ಅಂದರೆ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗಿರಲಿಲ್ಲ. ಆದರೂ ರಾಜ್ಯದಲ್ಲಿ ಬಂಪರ್ ಮದ್ಯ (Excise revenue) ಮಾರಾಟವಾಗಿದೆ. ಮದ್ಯ ದರ ಏರಿಕೆಯ ನಡುವೆ ಅಬಕಾರಿ ವರಮಾನ ಶೇ. 15ರಷ್ಟು ಹೆಚ್ಚಳವಾಗಿದೆ.

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಸೃಷ್ಟಿಯಾಗಿತ್ತು ಮದ್ಯದ ಅಭಾವ

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿರಲಿಲ್ಲ. ಹೀಗಾಗಿ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿದಿತ್ತು.

ರಾಜ್ಯದಲ್ಲಿ ಬೇಸಿಗೆ ವೇಳೆ ಅಂದರೆ ಏಪ್ರಿಲ್‌, ಮೇ ವೇಳೆ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಬೇಸಿಗೆ‌ಗೆ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಸೇಲ್‌ ಆಗುತ್ತಿತ್ತು. ಹೀಗಾಗಿ ಬೇಸಿಗೆ ವೇಳೆ ನಿತ್ಯ ಸರಿ ಸುಮಾರು ಮೂರೂವರೆ ಲಕ್ಷ ಲೀಟರ್‌ ಬಿಯರ್‌ ಹೆಚ್ಚುವರಿಯಾಗಿ ಬೇಕಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿರಲಿಲ್ಲ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿತ್ತು. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳು ಹೇಳಿದ್ದವಾದರೂ ಬೇಸಿಗೆ ತೀವ್ರ ಅಭಾವ ಉಂಟಾಗಿತ್ತು.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿತ್ತು. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿತ್ತು.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Continue Reading

ರಾಜಕೀಯ

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

HD Kumaraswamy: ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ?ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

HD Kumaraswamy slams CM Siddaramaiah about devegowda statement
Koo

ಬೆಂಗಳೂರು: ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ದಯಮಾಡಿ ವಕೀಲಿಕೆ ಮಾಡಬೇಡಿ

ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಶಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.

ಅತ್ಯಾಚಾರ ಅಮಾನುಷ ಸರಿ, ವಿಡಿಯೊ ಹಂಚುವುದೇನು?

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೊಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು (‌ಡಿಸಿಎಂ ಡಿ.ಕೆ. ಶಿವಕುಮಾರ್) ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವ್‌ಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಿಮ್ಮ ಡಿಸಿಎಂ ಅನ್ನು ಪ್ರಶ್ನಿಸಿದ್ದೀರಾ?

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, ಬ್ರೋಕರ್ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರ್ಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವ್‌ ಅನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ, ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ, ನೀವು ಹೇಳಿದ್ದೇನು? ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ನಮ್ಮ ಮನೆಗಳ ಮೇಲೆ ಕಳ್ಳಕಿವಿ ಇಟ್ಟಿದ್ದೀರಿ

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ?

ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. ಇನ್ನು, ಎಸ್‌ಐಟಿ ತನಿಖೆ ಅಂತೀರಾ? ಎಸ್‌ಐಟಿ ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್‌ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರ್ಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್‌ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸುಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ? ಎಂದು ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ

ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರನ್ನು ಟುಮಾರೋ ಲ್ಯಾಂಡ್ ( Tomorrow Land) ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Continue Reading
Advertisement
Narendra Modi
ದೇಶ3 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ3 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು3 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ3 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ4 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ4 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ5 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ5 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ5 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್5 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌