Bomb threat : ಸಿಎಂ, ಡಿಸಿಎಂಗೇ ಬಾಂಬ್‌ ಬೆದರಿಕೆ;‌ ಬಸ್‌, ದೇವಾಲಯದಲ್ಲೂ ಸ್ಫೋಟ? ಬೇಡಿಕೆ ಏನು? - Vistara News

ಬೆಂಗಳೂರು

Bomb threat : ಸಿಎಂ, ಡಿಸಿಎಂಗೇ ಬಾಂಬ್‌ ಬೆದರಿಕೆ;‌ ಬಸ್‌, ದೇವಾಲಯದಲ್ಲೂ ಸ್ಫೋಟ? ಬೇಡಿಕೆ ಏನು?

Bomb Threat : ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಬಳಿಕ ಮತ್ತೊಂದು ಬಾಂಬ್‌ ಬಿದ್ದಿದೆ. ರಾಜ್ಯದ ಸಿಎಂ, ಡಿಸಿಎಂ ಮತ್ತು ಸಚಿವರಿಗೇ ಬಾಂಬ್‌ ಬೆದರಿಕೆ ಈಮೇಲ್‌ ಬಂದಿದೆ.

VISTARANEWS.COM


on

Bomb Threat Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್‌ ಸ್ಫೋಟ (Blast in bengaluru) ಸಂಭವಿಸಿ ಆತಂಕದ ಅಲೆಗಳನ್ನು ಸೃಷ್ಟಿಸಿದೆ. ಈ ಪ್ರಕರಣದ ರೂವಾರಿ ಯಾರು ಎನ್ನುವ ಬಗ್ಗೆ ವಿಡಿಯೋ ಸಾಕ್ಷ್ಯಗಳು ಸಿಕ್ಕಿ 100 ಗಂಟೆಗಳೇ ಸಮೀಪಿಸಿದರೂ ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ನಡುವೆ, ದುಷ್ಕರ್ಮಿಗಳು ರಾಜ್ಯ ಸರ್ಕಾರಕ್ಕೇ ಬಾಂಬಿಡುವ ಎಚ್ಚರಿಕೆ (Bomb Threat) ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಮಾರ್‌, ಗೃಹ ಸಚಿವ ಪರಮೇಶ್ವರ್‌ ಸೇರಿದಂತೆ ಹಲವು ನಾಯಕರಿಗೆ ಈಮೇಲ್‌ ಬಾಂಬ್‌ ಬೆದರಿಕೆ ಹಾಕಲಾಗಿದೆ. 25 ಲಕ್ಷ ಡಾಲರ್‌ (20 ಕೋಟಿ ರೂ.) ನೀಡದೇ ಹೋದರೆ ಅನಾಹುತ ಖಚಿತ ಎಂದೂ ದುಷ್ಕರ್ಮಿ ಇಮೇಲ್‌ನಲ್ಲಿ ಬೆದರಿಕೆ ಹಾಕಿದ್ದಾನೆ.

ಶಾಹಿದ್‌ ಖಾನ್‌ ಎಂಬ ಹೆಸರಿನ ವ್ಯಕ್ತಿ ಕಳುಹಿಸಿದ್ದಾನೆ ಎಂದು ಹೇಳಲಾದ ಬೆದರಿಕೆ ಈಮೇಲ್‌ನಲ್ಲಿ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟಗಳು ಸಂಭವಿಸಲಿವೆ ಎಂದು ಎಚ್ಚರಿಕೆ ನೀಡಲಾಗಿದೆ. ಶನಿವಾರ 2.48ಕ್ಕೆ ನಗರದ ಹಲವು ಕಡೆ ಬಾಂಬ್‌ಗಳು ಸ್ಫೋಟಿಸಲಿವೆ ಎಂದು ಈಮೇಲ್‌ ಸಂದೇಶದಲ್ಲಿ ತಿಳಿಸಲಾಗಿದೆ.

ಕೇವಲ ಸಿಎಂ, ಡಿಸಿಎಂ, ಸಚಿವರು ಮಾತ್ರವಲ್ಲ, ಬಸ್‌, ರೈಲು, ದೇವಾಲಯಗಳು, ಹೋಟೆಲ್‌ಗಳು ಹಾಗೂ ಉತ್ಸವಗಳಲ್ಲಿ ಕೂಡಾ ಬಾಂಬ್‌ ಸ್ಫೋಟ ಸಂಘಟಿಸಲಾಗುವುದು ಎಂದು ಈಮೇಲ್‌ನಲ್ಲಿ ತಿಳಿಸಲಾಗಿದೆ.

ಅಂಬಾರಿ, ಪಲ್ಲಕ್ಕಿ ಉತ್ಸವ ಬಸ್‌ ಗಳನ್ನು ಸ್ಫೋಟಿಸುವ ಬೆದರಿಕೆ

ಇದೇ ಈ ಮೇಲ್‌ನಲ್ಲಿ ರಾಜ್ಯ ಸರ್ಕಾರಿ ಸಾರಿಗೆ ಸಂಸ್ಥೆಗೆ ಸೇರಿರುವ ಅಂಬಾರಿ, ಪಲ್ಲಕ್ಕಿ ಉತ್ಸವ ಬಸ್‌ಗಳನ್ನು ಬಾಂಬ್‌ ಇಟ್ಟು ಸ್ಫೋಟಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಇದನ್ನೂ ಓದಿ : Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

ಅಧಿಕಾರಿಗಳಿಂದ ತನಿಖೆ ಆರಂಭ

ಬೆಂಗಳೂರಿನಲ್ಲಿ ತಿಂಗಳ ಹಿಂದೆ ಕೆಲವೊಂದು ಪ್ರಮುಖ ಶಾಲೆಗಳಿಗೆ ಈ ಮೇಲ್‌ ಮೂಲಕ ಬೆದರಿಕೆ ಒಡ್ಡಲಾಗಿತ್ತು. ಬೆಳ್ಳಂಬೆಳಗ್ಗೆ ಬಂದ ಈಮೇಲ್‌ನಿಂದ ಶಾಲೆಗಳು ಆತಂಕಕ್ಕೊಳಗಾಗಿದ್ದವು. ಅಧಿಕಾರಿಗಳು ತನಿಖೆ ನಡೆಸಿದಾಗ ಇದು ಸುಳ್ಳು ಬೆದರಿಕೆ ಎನ್ನುವುದು ಸಾಬೀತಾಯಿತು. ಹಾಗಂತ ಯಾವುದೇ ಬೆದರಿಕೆ ಕರೆ ಬಂದರೂ ಸಂಪೂರ್ಣ ತಪಾಸಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಅದರಂತೆಯೇ ಈಗ ಸಿಎಂ, ಡಿಸಿಎಂ ಸೇರಿದಂತೆ ಪ್ರಮುಖ ನಾಯಕರಿಗೆ ಬಂದಿರುವ ಬೆದರಿಕೆ ಸಂದೇಶದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈಮೇಲ್‌ನಲ್ಲಿ ಎಲ್ಲೆಲ್ಲಿ ಸ್ಫೋಟ ನಡೆಸಲಾಗುತ್ತದೆ. ಯಾವ ಯಾವ ಸ್ಫೋಟಕಗಳ ಬಳಕೆಯಾಗುತ್ತದೆ ಎಂಬ ವಿವರ ನೀಡಲಾಗಿದೆ ಎನ್ನಲಾಗಿದೆ. ಇದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಬೆಂಗಳೂರು ಸೇಫಾ ಎಂಬ ಪ್ರಶ್ನೆ

ಈ ನಡುವೆ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಹಾಗೂ ಸಿಎಂ,ಡಿಸಿಎಂಗೇ ಬೆದರಿಕೆ ಕರೆ ಬಂದಿರುವುದು ಬೆಂಗಳೂರು ಸೇಫಾ ಎನ್ನುವ ಪ್ರಶ್ನೆಯನ್ನು ಮತ್ತೆ ಹುಟ್ಟು ಹಾಕಿದೆ. ಸಾರ್ವಜನಿಕವಾಗಿ ಇಷ್ಟೊಂದು ಧೈರ್ಯವಾಗಿ ಬಾಂಬ್‌ ಸ್ಫೋಟಿಸುವ, ಬೆದರಿಕೆ ಹಾಕುವುದು ನಡೆಯುತ್ತಿದೆ. ಈ ಪ್ರಕರಣಗಳನ್ನು ಬಿಟ್ಟುಬಿಡಬಾರದು. ಯಾರು ಈ ರೀತಿ ಬೆದರಿಕೆ ಹಾಕುತ್ತಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದು ಬೇರೆಯವರಿಗೆ ಪಾಠವಾಗಬೇಕು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ. ಇನ್ನು ಪ್ರಕರಣದಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ, ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿತ್ತು. 50 ಕೋಟಿ ಅಧಿಕ ಹಣ ಅಕ್ರಮವಾಗಿದ್ದರೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಬೇಕು ಎಂಬ ಕೇಂದ್ರ ಹಣಕಾಸು ಸಚಿವಾಲಯದ ಸುತ್ತೋಲೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ದೂರು ಮನವಿ ಪತ್ರ ಸಲ್ಲಿಸಿದೆ. ಹಾಗಾಗಿ ಪ್ರಕರಣದಲ್ಲಿ ಬಹುತೇಕ ಸಿಬಿಐ ಎಂಟ್ರಿಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಪ್ರಕರಣದ ಮಾಹಿತಿ ಪಡೆದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕರಣದ ಬಗ್ಗೆ ತೆಲಂಗಾಣ ಸಿಎಂ ಬಳಿ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣದ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ನಾಗೇಂದ್ರ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿಎಂ, ಡಿಸಿಎಂಗೆ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಕೂಡ ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡಲಾಗಿದೆ.ಇದು ಪಕ್ಷ ಮತ್ತು ಸರ್ಕಾರಕ್ಕೆ ಡ್ಯಾಮೇಜ್. ಮೊದಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಳ್ಳಿ. ತನಿಖೆಯಲ್ಲಿ ತಪ್ಪಿತಸ್ಥರಲ್ಲ ಅಂತ ಸಾಬೀತಾದ್ರೆ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಿಬಿಐ ತನಿಖೆ ಬಗ್ಗೆ ಡಿಕೆಶಿ ಏನು ಹೇಳಿದರು?

ವಾಲ್ಮೀಕಿ ನಿಗಮ ಹಗರಣದ ತನಿಖೆಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿ, ಪತ್ರ ಬರೆಯಲಿ, ತಪ್ಪಿಲ್ಲ. ಅದಕ್ಕೆ ಒಂದು ವಿಧಾನ ಇದೆ. ಇಷ್ಟು ಕೋಟಿ ಅಕ್ರಮ ಇದ್ದಾಗ ನಾನು ಕೊಟ್ಟರೂ ಅಥವಾ ನೀವು ಕೊಡದೇ ಇದ್ದರೂ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಮಗೆ ಗೊತ್ತಿಲ್ಲ ಅಂತ ತಿಳಿದುಕೊಳ್ಳಬೇಡಿ. ಯಾವುದಾದರೂ ಬ್ಯಾಂಕ್‌ನಲ್ಲಿ ಈ ರೀತಿಯಾದರೆ ಯಾವ ಸರ್ಕಾರವೂ ತನಿಖೆಗೆ ಕೊಡಬೇಕು ಅಂತಿಲ್ಲ. ಅವರು ತಗೋಬೇಕು ಅಂತೇನು ಇಲ್ಲ. ನ್ಯಾಚುರಲ್ ಆಗಿ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಾವು ತನಿಖೆಗೆ ಸಹಕರಿಸುತ್ತೇವೆ, ರಾಜಕೀಯ ಇಲ್ಲದೇ ತನಿಖೆ ನಡೆಸಲಿ. ಸದ್ಯಕ್ಕೆ ಸಿಬಿಐ ಬರುವ ಸಂದರ್ಭ ಇಲ್ಲ, ನಾವೇ ತನಿಖೆ ಮಾಡ್ತೀವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ ಸುಮಾರು 80 ಕೋಟಿ ಹಣ ಅಕ್ರಮ ವರ್ಗಾವಣೆಯಾಗಿದೆ. ಯಾವ ಕಂಪೆನಿಗೆ ಎಷ್ಟು ಹಣ ವರ್ಗಾವಣೆಯಾಗಿದೆ ಎಂಬ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದಿರುವುದರಿಂದ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ. ಹೀಗಾಗಿ ಅವ್ಯವಹಾರದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ನಡುವೆ ಹಗರಣದಲ್ಲಿ ಒಟ್ಟು 16 ಕಂಪನಿಗಳಿಗೆ ಸುಮಾರು 80 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ತಲೆ ದಂಡ ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ಎಸ್‌ಐಟಿ ವರದಿ ಬಳಿಕವೂ ಸಿಬಿಐ ಎಂಟ್ರಿ ಬಹುತೇಕ ಖಚಿತ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ದೂರಿನ ಅನ್ವಯ ಸಿಬಿಐ ಎಂಟ್ರಿ ಸಾಧ್ಯತೆ ಇದೆ. ಇನ್ನು ಪ್ರಕರಣದಲ್ಲಿ ಐಟಿ ಕಂಪನಿಗಳು, ಸೆಕ್ಯೂರಿಟಿ ಏಜೆನ್ಸಿಗಳು, ಡಿಟೆಕ್ಟಿವ್ ಕಂಪನಿಗಳು ಹಾಗೂ ಎಂಟು ಜನರ ವೈಯಕ್ತಿಕ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಒಟ್ಟು 16 ಕಂಪನಿಗಳಿಗೆ 79.30 ಕೋಟಿ ವರ್ಗಾವಣೆಯಾಗಿದೆ ಎನ್ನಲಾಗಿದೆ.

ಐದು ಹಂತದಲ್ಲಿ ಹಣ ವರ್ಗಾವಣೆ

ಮಾರ್ಚ್ 6

ಮೊದಲ ಹಣ ವರ್ಗಾವಣೆ ಮಾರ್ಚ್ 6ರಂದು ನಡೆದಿದೆ. ನಾಲ್ಕು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ 20 ಕೋಟಿಯನ್ನು ಅಧಿಕಾರಿಗಳು ವರ್ಗಾಯಿಸಿದ್ದಾರೆ.

ಮಾರ್ಚ್ 11

ಎರಡನೇ ಹಣ ವರ್ಗಾವಣೆ ನಡೆದಿರೋದು ಮಾರ್ಚ್ 11 ರಂದು. ಎರಡು ಕಂಪನಿಗಳಿಗೆ 9 ಕೋಟಿ 60 ಲಕ್ಷ ವರ್ಗಾವಣೆ ಮಾಡಲಾಗಿದೆ.

ಮಾರ್ಚ್ 30

ಮೂರನೇ ವರ್ಗಾವಣೆ ಮಾರ್ಚ್ 30ರಂದು ನಡೆದಿದೆ. ಬರೋಬ್ಬರಿ 40.10 ಕೋಟಿ ಮೊತ್ತ ವರ್ಗಾವಣೆ ಮಾಡಲಾಗಿದೆ ಒಟ್ಟು ಎಂಟು ಕಂಪನಿಗಳಿಗೆ ನಾಲ್ಕು ಕೋಟಿ 10 ಲಕ್ಷ ವರ್ಗಾವಣೆ ಆಗಿದೆ.

ಏಪ್ರಿಲ್ 23

ನಾಲ್ಕನೇ ಹಣ ವರ್ಗಾವಣೆ ಏಪ್ರಿಲ್ 2ರಂದು ಆಗಿದೆ. ಒಂದು ಕಂಪನಿಯ ಅಕೌಂಟ್‌ಗೆ 4.50 ಕೋಟಿ ವರ್ಗಾವಣೆ ಮಾಡಲಾಗಿದೆ

ಮೇ 6

ಐದನೇ ಹಣ ವರ್ಗಾವಣೆ ಮೇ 6 ರಂದು ನಡೆದಿದೆ. 5.10 ಕೋಟಿ ವರ್ಗಾವಣೆ ಮಾಡಲಾಗಿದೆ. ಒಂದು ಕಂಪನಿಯ ಅಕೌಂಟ್‌ಗೆ ಹಣ ವರ್ಗಾವಣೆ ಆಗಿದೆ.

ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ?

  1. ಟಾಲೆನ್ ಕ್ಯೂ ಸಾಫ್ಟ್‌ವೇರ್ ಇಂಡಿಯಾ ಪ್ರೈ. ಲಿ. – 5,10,00,000 ರೂ
  2. ಸಿಸ್ಟಮ್ ಅಂಡ್ ಸರ್ವೀಸ್ ಕಂಪೆನಿ – 4,55,00,000 ರೂ
  3. ರಾಮ್ ಎಂಟರ್‌ಪ್ರೈಸಸ್ – 5,07,00,000 ರೂ.
  4. ಸ್ಕಿಲ್ ಮ್ಯಾಪ್ ಟ್ರೈನಿಂಗ್ ಅಂಡ್ ಸರ್ವಿಸಸ್ ಪ್ರೈ. ಲಿ. – 4,84,00,000 ರೂ.
  5. ಸ್ವಾಪ್‌ ಡಿಸೈನ್ ಪ್ರೈ. ಲಿ – 5,15,00,000 ರೂ.
  6. ಜಿ.ಎನ್ ಇಂಡಸ್ಟ್ರೀಸ್ – 4,42,00,000 ರೂ.
  7. ನಾವೆಲ್ ಸೆಕ್ಯುರಿಟಿ ಸರ್ವಿಸಸ್ ಪ್ರೈ. ಲಿ. – 4,56,00,000 ರೂ.
  8. ಸುಜಲ್ ಎಂಟರ್‌ಪ್ರೈಸಸ್ – 5,63,00000 ರೂ.
  9. ಗ್ರಾಬ್ ಎ ಗ್ರಬ್ ಸರ್ವಿಸಸ್ ಪ್ರೈ. ಲಿ. – 5,88,00,000 ರೂ.
  10. V6 ಬ್ಯುಸಿನೆಸ್ ಸರ್ವಿಸಸ್ – 4,50,01,500 ರೂ.
  11. ನಿತ್ಯಾ ಸೆಕ್ಯುರಿಟಿ ಸರ್ವಿಸಸ್ – 4,47,50,000 ರೂ.
  12. ವೋಲ್ಟಾ ಟೆಕ್ನಾಲಜಿ ಸರ್ವಿಸಸ್ – 5,12,50,000 ರೂ.
  13. ಅಕಾರ್ಡ್ ಬ್ಯುಸಿನೆಸ್ ಸರ್ವಿಸಸ್ – 5,46,85,000 ರೂ.
  14. ಹ್ಯಾಪಿಯಸ್ಟ್ ಮೈಂಡ್ಸ್ ಟೆಕ್ನಾಲಜಿ ಲಿಮಿಟೆಡ್ – 4,53,15,000 ರೂ.
  15. ಮ್ಯಾನ್ಹು ಎಂಟರ್‌ಪ್ರೈಸಸ್ – 5,01,50,000 ರೂ.
  16. ವೈ.ಎಂ ಎಂಟರ್‌ಪ್ರೈಸಸ್ – 4,98,50,000 ರೂ.

ಎಂಡಿ, ಲೆಕ್ಕಾಧಿಕಾರಿ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಜೆ. ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರುಶುರಾಮ್‌ ಜಿ. ದುರ್ಗಣ್ಣನವರ್ ಬಂಧಿತರು. ಹಗರಣ ಬೆಳಕಿಗೆ ಬಂದ ನಂತರ ಮೇ 30ರಂದು ಇಬ್ಬರನ್ನೂ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದ ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬ್ಯಾಂಕ್‌ಗಳಿಗೆ ವರ್ಗಾವಣೆ ಆಗಿರುವ ಮಾಹಿತಿ ಬಿಡುಗಡೆ ಮಾಡಿದ ಬಿಜೆಪಿ, ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದೆ.

ಎಕ್ಸ್‌ ವೇದಿಕೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಭ್ರಷ್ಟಾತಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ತಮ್ಮ ಭ್ರಷ್ಟ ಸಚಿವರನ್ನು ಕಾಪಾಡಿಕೊಳ್ಳಲು ಇದೀಗ ಬೃಹನ್ನಳೆ ನಾಟಕ ಆರಂಭಿಸಿದೆ. ಪರಿಶಿಷ್ಟ ಪಂಗಡಕ್ಕೆ ಸೇರಬೇಕಾಗಿದ್ದ ಅಷ್ಟೊಂದು ಕೋಟಿ ಹಣ ಮುಖ್ಯಮಂತ್ರಿ ಹಾಗೂ ಸಚಿವರ ಸೂಚನೆ ಇಲ್ಲದೆ ತೆಲಂಗಾಣದ ಯಾವುದೋ ಕಂಪೆನಿಗೆ ವರ್ಗಾವಣೆ ಆಗಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯನವರೇ, ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ನೀವು ಕೂಡ ಅದೇ ಕೆಲಸ ಮಾಡುತ್ತಿದ್ದೀರಿ. ಮೊದಲು ಆ ಕೆಲಸ ಬಿಡಿ ಈ ಹಗರಣದಲ್ಲಿ ನಿಮಗೆ ಸಿಕ್ಕಿರುವ ಪಾಲೆಷ್ಟು ಹೇಳಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವ ಬದಲು, ಅಕ್ರಮ ಹಣ ವರ್ಗಾವಣೆ ಸಂಬಂಧ ಬ್ಯಾಂಕ್‌ಗಳ ಮೇಲೆ ಮತ್ತು ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಕ್ರಮ ಹಣ ವರ್ಗಾವಣೆ ಸಂಬಂಧ CBI ಗೆ ದೂರು ದಾಖಲಿಸಿದ್ದರೂ, ಸಿದ್ದರಾಮಯ್ಯ ಸರ್ಕಾರ ಮಾತ್ರ SIT, CID ತನಿಖೆ ಎಂದು ಕಾಲಹರಣ ಮಾಡಿ #ATMSarkaraಕ್ಕೆ ಕ್ಲೀನ್ ಚಿಟ್ ಕೊಟ್ಟಕೊಳ್ಳುವ ವಿಫಲ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Prajwal Revanna Case: ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

VISTARANEWS.COM


on

prajwal revanna case mobile
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ನಿನ್ನೆ ಇಡೀ ಕೋರ್ಟ್‌ ಹಾಗೂ ವೈದ್ಯಕೀಯ ಪರೀಕ್ಷೆಗಳ (medical test) ನಡುವೆ ಸಮಯ ಕಳೆದರು. ಈ ನಡುವೆ ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದು, ಅದರಲ್ಲಿ ಮುಖ್ಯವಾದುದು ಅವರು ಅಶ್ಲೀಲ ವಿಡಿಯೋಗಳನ್ನು (obscene video) ಚಿತ್ರೀಕರಿಸಿಕೊಂಡ ಮೊಬೈಲ್‌ ಎಲ್ಲಿದೆ ಎಂಬುದಾಗಿತ್ತು.

ಈ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್‌ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್‌ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.

ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಪ್ರಜ್ವಲ್‌ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್‌ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್‌ ಮಾಡಬಹುದು. ಆದರೆ ಮೊಬೈಲ್‌ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್‌ಗಳು ಸಿಗಲಾರದು. ಅದರಿಂದ ಫಾರ್‌ವರ್ಡ್‌ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್‌ ಪಡೆಯಲು ಎಸ್‌ಐಟಿ ಪ್ರಯತ್ನ ನಡೆಸಬೇಕಿದೆ.

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna back in India ) ಅವರನ್ನು 6 ದಿನಗಳ ಕಾಲ ಎಸ್​ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್​ಎಮ್​​ ನ್ಯಾಯಾಲಯದ ನ್ಯಾಯಧೀಶ ಎನ್​. ಶಿವಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿದ್ದ ಎಸ್​ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್​ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಂಗಳೂರಿನ 42ನೇ ಎಸಿಎಮ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್​ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಶುಕ್ರವಾರ ಸೇರಿದಂತೆ ಒಟ್ಟು 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಪ್ರಜ್ವಲ್ ಪರ ವಕೀಲರು 1 ದಿನ ಸಾಕು ಎಂದು ವಾದಿಸಿದ್ದರು. ಆದರೆ, ನ್ಯಾಯಾಧೀಶರು 6 ದಿನಗಳನ್ನು ಮಾನ್ಯ ಮಾಡಿದ್ದಾರೆ.

ಗುರುವಾರ ರಾತ್ರಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಳಗ್ಗೆ ತನಕ ಎಸ್​ಐಟಿ ಕಚೇರಿಯಲ್ಲೇ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದರು. ಬೆಳಗ್ಗೆ ಅವರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಅವರಿಂದ ಅಗತ್ಯ ದಾಖಲೆಗಳಿಗೆ ಸಹಿ ಮಾಡಿಕೊಂಡರು. ಆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.‌

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading

ಪ್ರಮುಖ ಸುದ್ದಿ

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Bhavani Revanna: ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

VISTARANEWS.COM


on

bhavani revanna case
Koo

ಹಾಸನ: ನಿನ್ನೆ ಭವಾನಿ ರೇವಣ್ಣ (Bhavani revanna) ಅವರ ಜಾಮೀನು ಅರ್ಜಿ (bail plea) ರದ್ದಾಗಿದ್ದು, ಇಂದು ಅವರ ಬಂಧನ (Arrest) ಸಾಧ್ಯತೆ ಇದೆ. ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸಿನಲ್ಲಿ (kidnap case) ಎಸ್‌ಐಟಿಗೆ (SIT) ಭವಾನಿ ರೇವಣ್ಣ ಬೇಕಾಗಿದ್ದು, ಇಂದು ಹೊಳೆನರಸೀಪುರದ ಅವರ ಮನೆಗೆ ತನಿಖೆಗೆ ಬರುವುದಾಗಿ ಎಸ್‌ಐಟಿ ನೋಟೀಸ್‌ (SIT Notice) ನೀಡಿತ್ತು. ಆದರೆ ಭವಾನಿ ಹೊಳೆನರಸೀಪುರದ ಮನೆಯಲ್ಲೂ, ಬೆಂಗಳೂರಿನ ಮನೆಯಲ್ಲೂ ಕಾಣಿಸಿಕೊಂಡಿಲ್ಲ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಿನ್ನೆ ರದ್ದಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದ್ದು, ಅದಕ್ಕಾಗಿ ಎಸ್ಐಟಿ ಬಲೆ ಬೀಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್ಐಟಿ ಟೀಂ ಆಗಮಿಸಲಿದೆ. ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು.

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು. ಆದರೆ ಭವಾನಿ ರೇವಣ್ಣ ತಮ್ಮ ನಿವಾಸದಲ್ಲಿ ಇಲ್ಲ ಎಂದು ತಿಳಿದುಬಂದಿರುವ ಕಾರಣ ಅವರು ಎಲ್ಲಿದ್ದಾರೆ ಎಂದು SIT ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Continue Reading
Advertisement
Valmiki Corporation Scam
ಪ್ರಮುಖ ಸುದ್ದಿ2 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ28 mins ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Actor Jaggesh talk about body shame
ಸ್ಯಾಂಡಲ್ ವುಡ್46 mins ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Modi Meditation
ದೇಶ47 mins ago

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Cristiano Ronaldo
ಕ್ರೀಡೆ49 mins ago

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Chikkamagaluru Tragedy
ಚಿಕ್ಕಮಗಳೂರು1 hour ago

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

rahul gandhi
ಪ್ರಮುಖ ಸುದ್ದಿ1 hour ago

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Salman Khan Cops arrest 4 with alleged links to Bishnoi gang
ಬಾಲಿವುಡ್2 hours ago

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Chikkalluru Siddappaji temple
ಧಾರ್ಮಿಕ2 hours ago

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌