NIA Raid : ಸುಳ್ಯದಲ್ಲೂ ಎನ್‌ಐಎ ದಾಳಿ; 2 ದಿನದ ಹಿಂದೆ ಕೇರಳದಿಂದ ಬಂದಿದ್ದವ ವಶಕ್ಕೆ - Vistara News

ದಕ್ಷಿಣ ಕನ್ನಡ

NIA Raid : ಸುಳ್ಯದಲ್ಲೂ ಎನ್‌ಐಎ ದಾಳಿ; 2 ದಿನದ ಹಿಂದೆ ಕೇರಳದಿಂದ ಬಂದಿದ್ದವ ವಶಕ್ಕೆ

NIA Raid : ಅವನು ಕೇವಲ ಎರಡು ದಿನಗಳ ಹಿಂದಷ್ಟೇ ಸುಳ್ಯದ ಆ ಜಾಗಕ್ಕೆ ಬಂದಿದ್ದ. ಬಾಡಿಗೆ ಮನೆ ಹಿಡಿದ ಎರಡನೇ ದಿನವೇ ಆತನನ್ನು ಎನ್‌ಐಎ ಅಧಿಕಾರಿಗಳು ಬೆನ್ನಟ್ಟಿ ವಿಚಾರಣೆ ನಡೆಸಿದ್ದಾರೆ.

VISTARANEWS.COM


on

NIA Rait Enmuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ (Blast in Bengaluru) ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (National Investigation agency) ವಹಿಸಿಕೊಂಡಿದೆ. ಈ ಪ್ರಕರಣವೂ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಎನ್‌ಐಎ (NIA Raid) ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ದೇಶದಲ ಏಳು ರಾಜ್ಯಗಳಲ್ಲಿ ಮಂಗಳವಾರ ದಾಳಿ ನಡೆಸಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada news) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಎಣ್ಮೂರಿನಲ್ಲೂ ದಾಳಿ ನಡೆದಿದೆ.

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ತುಂಬಾ ಸಕ್ರಿಯವಾಗಿದ್ದು ಎಲ್ಲ ಕಡೆ ಮಾಹಿತಿ ದಾರರನ್ನು ಇಟ್ಟು ಚಟುವಟಿಕೆಗಳನ್ನು ಹದ್ದುಗಣ್ಣಿನಿಂದ ಕಾಯುತ್ತಿದೆ. ಅದರಿಂದ ಪಡೆದ ಮಾಹಿತಿಯನ್ನೂ ಆಧರಿಸಿಯೇ ಅದು ಇಲ್ಲಿಗೆ ಲಗ್ಗೆ ಇಟ್ಟಿದೆ ಎನ್ನಲಾಗಿದೆ. ಕೇವಲ ಎರಡು ದಿನಗಳ ಹಿಂದಷ್ಟೇ ಎಣ್ಮೂರಿಗೆ ಬಂದು ಬಾಡಿಗೆ ಮನೆಯೊಂದನ್ನು ಹಿಡಿದಿದ್ದ ವ್ಯಕ್ತಿಯೊಬ್ಬನನ್ನು ಅದು ವಿಚಾರಿಸಿದ್ದು ಸ್ವತಃ ಊರಿನ ಜನರಿಗೇ ಅಚ್ಚರಿ ಮೂಡಿಸಿದೆ.

ಎನ್.ಐ.ಎ ಅಧಿಕಾರಿಗಳ ತಂಡ ಪ್ರಕರಣವೊಂದರ ಸಂಬಂಧ ಮಾ.5ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರಿನ ಕುಲಾಯಿತೋಡು ಎಂಬಲ್ಲಿನ ಬಾಡಿಗೆ ಮನೆ ಮೇಲೆ ಬೆಳಗ್ಗೆ ಎನ್ ಐ ಎ ಅಧಿಕಾರಿಗಳು ದಾಳಿ ಮಾಡಿ ಮನೆಯಲ್ಲಿ ನಡೆಸಿದರು. ಅಲ್ಲಿ ವಾಸವಾಗಿದ್ದ ಕೇರಳ ಮೂಲದ ಬಿಜು ಎಂಬಾತನಿಗೆ ಸಮನ್ಸ್ ನೀಡಿ ಮೊಬೈಲ್ ಫೋನ್ ವಶಕ್ಕೆ ಪಡೆದು ತೆರಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಮಡ್ಕ ನಿವಾಸಿ ಚಿದಾನಂದ ಎಂಬವರ ಬಾಡಿಗೆ ಮನೆ ಮೇಲೆ ಬೆಂಗಳೂರು ಬ್ರಾಂಚ್ ನ ಎನ್.ಐ.ಎ ಅಧಿಕಾರಿಗಳಾದ ಡಿವೈಎಸ್ಪಿ ರಾಜನ್ ಪಿ.ವಿ, ಸಬ್ ಇನ್ಸೆಕ್ಟರ್ ಮಂಜಪ್ಪ,
ಕಾನ್ಸ್ಟೇಬಲ್ ಸುರೇಶ್.ಸಿ ನೇತೃತ್ವದ ಮೂರು ಜನರ ತಂಡ ದಾಳಿ ಮಾಡಿ ಮನೆಯನ್ನು ಪರಿಶೀಲನೆ ನಡೆಸಿದೆ.

ಇದನ್ನೂ ಓದಿ: Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

ಯಾರಿವನು ಬಿಜು‌, ಯಾವ ಪ್ರಕರಣ?

25-10-2023 & RC- 28/2023/NIA/DLI ಯಲ್ಲಿ 120B,121,121A&122 ಜೊತೆಗೆ 3,25 ಆರ್ಮ್ 13,18 ಮತ್ತು UA(P) ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆಯ ಚಿದಾನಂದ ಎಂಬವರ ಬಾಡಿಗೆ ಮನೆಯಲ್ಲಿ ಎರಡು ದಿನದ ಹಿಂದೆ ಬಂದ ಕೇರಳ ರಾಜ್ಯದ ಇಡುಕ್ಕಿಯ ಬಿಜು ಅಬ್ರಾಹಂ @ ಬಿಜು ಎಮ್.ಎ (45) ಎಂಬಾತನ ವಾಸವಾಗಿದ್ದ. ಈ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ನಂತರ ಬಿಜುಗೆ ಸಮನ್ಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರವಾಸ

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

ಮಂಗಳೂರು ಎಂದಾಗ ನೆನಪಾಗುವುದೇ ಸಮುದ್ರ ಮತ್ತು ಸಮುದ್ರಾಹಾರ. ಇಲ್ಲಿ ಕೇವಲ ಇದಿಷ್ಟೇ ಅಲ್ಲ ಇನ್ನೂ ಹಲವು ಪ್ರವಾಸಿಗರ (Mangalore Tour) ನೆಚ್ಚಿನ ತಾಣಗಳಿವೆ. ಹೀಗಾಗಿ ಇಲ್ಲಿ ಭೇಟಿ ನೀಡಿದಾಗ ಮಿಸ್ ಮಾಡಲೇಬಾರದ ಕೆಲವು ತಾಣಗಳ ಕುರಿತು ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

By

Mangalore Tour
Koo

ನೇತ್ರಾವತಿ (netravati) ಮತ್ತು ಗುರುಪುರ (Gurupur) ನದಿಗಳ ಮುಖಜ ಭೂಮಿಯಲ್ಲಿ ಕುಳಿತಿರುವ ಮಂಗಳೂರು ಬೀಚ್ (mangaluru beach) ಪ್ರಿಯರಿಗೆ ಸೂಕ್ತ ತಾಣ. ಚಿನ್ನದ ಬಣ್ಣದ ಮರಳು ಮತ್ತು ಆಕಾಶ ನೀಲಿ ಸಮುದ್ರದ ನೋಟವನ್ನು ಕಣ್ತುಂಬಿಕೊಳ್ಳುವ ಜೊತೆಗೆ ಸಮುದ್ರಾಹಾರವನ್ನು (see food) ಸವಿಯಲು ಇಷ್ಟಪಡುವವರಿಗೆ ಮಂಗಳೂರಿನಲ್ಲಿ (Mangalore Tour) ಸಾಕಷ್ಟು ವೆರೈಟಿಗಳಿವೆ.

ನಗರದ ಸಮೀಪದಲ್ಲಿ ಹಲವಾರು ಗಿರಿಧಾಮಗಳಿವೆ. ದಕ್ಷಿಣ ಭಾರತದ (south india) ಇತರ ನಗರಗಳಂತೆ ಮಂಗಳೂರು ಆಧ್ಯಾತ್ಮಿಕ ಭಾವನೆಯನ್ನು ಹೊಂದಿದೆ. ಇಲ್ಲಿ ಎಲ್ಲರೂ ಇಷ್ಟಪಡುವ ಹಲವಾರು ತಾಣಗಳಿದ್ದು, ಅವುಗಳಲ್ಲಿ ಕೆಲವು ಅತ್ಯುತ್ತಮ ಸ್ಥಳಗಳು ಇಂತಿವೆ.


ಮಂಗಳಾದೇವಿ ದೇವಸ್ಥಾನ

ಮಂಗಳೂರು ಜನತೆಯ ಆರಾಧ್ಯ ದೈವ ಮಂಗಳಾದೇವಿ ದೇವಾಲಯದಿಂದಾಗಿಯೇ ಮಂಗಳೂರನ್ನು ಹಿಂದೆ ಮಂಗಳಾಪುರ ಎಂದು ಕರೆಯಲಾಗುತ್ತಿತ್ತು. ಬೋಳಾರ್‌ನಲ್ಲಿರುವ 19ನೇ ಶತಮಾನದ ದೇವಾಲಯವನ್ನು ಅಹೇಪಾ ರಾಜವಂಶದ ರಾಜ ಸ್ಥಾಪಿಸಿದ ಎನ್ನಲಾಗುತ್ತದೆ. ಮಂಗಳೂರಿನಲ್ಲಿ ನೋಡಬಹುದಾದ ಅತ್ಯಂತ ಜನಪ್ರಿಯ ಸ್ಥಳಗಳಲ್ಲಿ ಇದು ಒಂದಾಗಿದೆ. ದಸರಾದ ಮೊದಲು, ನವರಾತ್ರಿಯ ಸಮಯದಲ್ಲಿ ದೇವಾಲಯಕ್ಕೆ ಭೇಟಿ ನೀಡಲು ಉತ್ತಮ ಸಮಯ. ರಾತ್ರಿ 9 ಗಂಟೆಗೆ ದೇವಾಲಯವನ್ನು ಮುಚ್ಚಲಾಗುತ್ತದೆ.


ಗೋಕರ್ಣನಾಥೇಶ್ವರ ದೇವಸ್ಥಾನ

ಶಿವನಿಗೆ ಅರ್ಪಿತವಾಗಿರುವ ಗೋಕರ್ಣನಾಥೇಶ್ವರ ದೇವಾಲಯವು ಮಂಗಳೂರಿನಲ್ಲಿ ನೋಡಲೇಬೇಕಾದ ಮತ್ತೊಂದು ತಾಣ. ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಈ ದೇವಾಲಯವು ಕೊಡಿಯಾಲ್ ಬೈಲ್‌ನ ಕುದ್ರೋಳಿಯಲ್ಲಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಎಂದೂ ಕರೆಯಲ್ಪಡುವ ಈ ದೇವಾಲಯವು 60 ಅಡಿ ಎತ್ತರದ ಚಿನ್ನದ ಬಣ್ಣದ ಗೋಪುರವನ್ನು ಹೊಂದಿದೆ ಮತ್ತು ಗಾರೆ ಆಕೃತಿಗಳಿಂದ ಅಲಂಕರಿಸಲ್ಪಟ್ಟಿದೆ. ಈ ದೇವಾಲಯದ ಸೌಂದರ್ಯವನ್ನು ಹೆಚ್ಚಿಸುವ ಕೆಲವು ಸೊಗಸಾದ ರಾಕ್ ಕೆತ್ತನೆ ಮತ್ತು ಶಿಲ್ಪಗಳನ್ನು ಪ್ರದರ್ಶಿಸುತ್ತದೆ. ದೇವಾಲಯದ ಗೋಪುರವನ್ನು ಹಿಂದೂ ದಂತಕಥೆಗಳ ದೃಶ್ಯಗಳನ್ನು ಚಿತ್ರಿಸುವ ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ.

ನವರಾತ್ರಿಯ ಸಮಯದಲ್ಲಿ ಈ ದೇವಾಲಯಕ್ಕೆ ಭೇಟಿ ನೀಡಲು ಉತ್ತಮ ಸಮಯವಾಗಿದೆ. ಯಾಕೆಂದರೆ ಇಲ್ಲಿ ದಸರಾ ಹಬ್ಬವನ್ನು ಹೆಚ್ಚು ಉತ್ಸಾಹದಿಂದ ಆಚರಿಸಲಾಗುತ್ತದೆ. ದೇವಾಲಯವು ಬೆಳಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಮತ್ತು ಸಂಜೆ 4.30ರಿಂದ ರಾತ್ರಿ 9ರವರೆಗೆ ತೆರೆದಿರುತ್ತದೆ.


ಪಣಂಬೂರು ಬೀಚ್

ಮಂಗಳೂರಿನಿಂದ 13 ಕಿಲೋಮೀಟರ್ ದೂರದಲ್ಲಿರುವ ಪಣಂಬೂರು ಬೀಚ್ ಅತ್ಯಂತ ಜನಪ್ರಿಯ ತಾಣವಾಗಿದೆ. ಸೂರ್ಯೋದಯ, ಸೂರ್ಯಾಸ್ತಗಳನ್ನು ವೀಕ್ಷಿಸಲು ಪರಿಪೂರ್ಣ ಸ್ಥಳಗಳಲ್ಲಿ ಇದು ಒಂದಾಗಿದೆ. ಇಲ್ಲಿ ಜಲಕ್ರೀಡೆಯನ್ನು ಮಾಡಬಹುದು. ಬೀಚ್‌ಗೆ ಭೇಟಿ ನೀಡಲು ಪ್ಯಾರಾಸೈಲಿಂಗ್, ಜೆಟ್ ಸ್ಕೀಯಿಂಗ್, ದೋಣಿ ಸವಾರಿ ನಡೆಸಬಹುದು.
ಸೆಪ್ಟೆಂಬರ್ ಮತ್ತು ಮಾರ್ಚ್ ತಿಂಗಳ ನಡುವಿನ ಮುಂಜಾನೆ ಅಥವಾ ತಡ ಮಧ್ಯಾಹ್ನ ಪಣಂಬೂರು ಬೀಚ್‌ಗೆ ಭೇಟಿ ನೀಡಲು ಉತ್ತಮ ಸಮಯ.


ಸುರತ್ಕಲ್ ಬೀಚ್

ಕಡಲತೀರದ ಪ್ರವಾಸಿಗರಿಗೆ ಅನ್ವೇಷಿಸಲು ಮತ್ತೊಂದು ಸ್ಥಳವೆಂದರೆ ಸುರತ್ಕಲ್ ಬೀಚ್. ತನ್ನ ಪ್ರಾಚೀನ ಪರಿಸರಕ್ಕೆ ಹೆಸರುವಾಸಿಯಾದ ಸುರತ್ಕಲ್ ಮುಖ್ಯ ನಗರದಿಂದ 18 ಕಿಲೋ ಮೀಟರ್ ದೂರದಲ್ಲಿದೆ. ಇಲ್ಲಿನ ಮತ್ತೊಂದು ಆಕರ್ಷಣೆ ಕಡಲತೀರದ ದೀಪಸ್ತಂಭ. ಇದು ಬೆಟ್ಟದ ಮೇಲೆ ಇದೆ ಮತ್ತು ಸಮುದ್ರ ಮತ್ತು ಗ್ರಾಮಾಂತರದ ಕೆಲವು ಉತ್ತಮ ನೋಟವನ್ನು ಒದಗಿಸುತ್ತದೆ. ಈ ಬೀಚ್‌ಗೆ ಭೇಟಿ ನೀಡಲು ಉತ್ತಮ ಸಮಯವೆಂದರೆ ನವೆಂಬರ್ ಮತ್ತು ಫೆಬ್ರವರಿ ನಡುವೆ. ಲೈಟ್‌ಹೌಸ್ ಸಂಜೆ 4ರಿಂದ 5 ಗಂಟೆಯವರೆಗೆ ಮಾತ್ರ ತೆರೆಯುತ್ತದೆ.


ಪಿಲಿಕುಳ ನಿಸರ್ಗಧಾಮ

ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಪಿಕ್ನಿಕ್‌ಗಳಿಗೆ ಸಾಕಷ್ಟು ಸೂಕ್ತವಾಗಿದೆ. ಅಂತಹ ಒಂದು ಪರಿಪೂರ್ಣ ಸ್ಥಳವೆಂದರೆ ಪಿಲಿಕುಳ ನಿಸರ್ಗಧಾಮ. ಇದು ಸುಮಾರು 15 ಕಿಲೋಮೀಟರ್ ದೂರದಲ್ಲಿದೆ. 370 ಎಕರೆ ವಿಸ್ತೀರ್ಣದಲ್ಲಿ ಹರಡಿರುವ ಪಿಲಿಕುಳ ನಿಸರ್ಗಧಾಮ ಅಥವಾ ಪಿಲಿಕುಳವು ನಗರದ ಸಮೀಪವಿರುವ ಅತ್ಯಂತ ಆದ್ಯತೆಯ ಪಿಕ್ನಿಕ್ ತಾಣಗಳಲ್ಲಿ ಒಂದಾಗಿದೆ. ಇಲ್ಲಿ ವನ್ಯಜೀವಿ ಪ್ರಭೇದಗಳು, ಬೊಟಾನಿಕಲ್ ಗಾರ್ಡನ್, ಮೃಗಾಲಯದಲ್ಲಿ ಹುಲಿ, ಚಿರತೆ, ಕರಡಿ ಮತ್ತು ವಿವಿಧ ಸರೀಸೃಪಗಳು ಮತ್ತು ಹಾವುಗಳನ್ನು ಕಾಣಬಹುದು. ಆವರಣದಲ್ಲಿ ಗಾಲ್ಫ್ ಕೋರ್ಸ್ ಅನ್ನು ಸಹ ಕಾಣಬಹುದು.

ಅಕ್ಟೋಬರ್ ಮತ್ತು ಫೆಬ್ರುವರಿ ನಡುವೆ ಈ ಸ್ಥಳಕ್ಕೆ ಭೇಟಿ ನೀಡಲು ಉತ್ತಮ ಸಮಯ. ಪಿಲಿಕುಳ ನಿಸರ್ಗಧಾಮ ಸೋಮವಾರ ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 5.30ರವರೆಗೆ ತೆರೆದಿರುತ್ತದೆ.


ಸೇಂಟ್ ಅಲೋಶಿಯಸ್ ಚರ್ಚ್

ಮಂಗಳೂರಿನ ಸೇಂಟ್ ಅಲೋಶಿಯಸ್ ಚರ್ಚ್ ತನ್ನ ಅದ್ಭುತ ವಾಸ್ತುಶಿಲ್ಪ ಮತ್ತು ಒಳಾಂಗಣಕ್ಕೆ ಹೆಸರುವಾಸಿಯಾಗಿದೆ. ಈ ಚರ್ಚ್ 1880 ರಲ್ಲಿ ನಿರ್ಮಿಸಲಾಯಿತು. ಇಟಾಲಿಯನ್ ಕಲಾವಿದ ಆಂಟೋನಿಯೊ ಮೊಸ್ಚೆನಿ ಅವರ ವಿಶಿಷ್ಟ ವರ್ಣಚಿತ್ರಗಳು ಇಲ್ಲಿನ ಹೆಚ್ಚಿನ ಗೋಡೆಗಳನ್ನು ಅಲಂಕರಿಸಿದೆ. ಪೇಂಟಿಂಗ್‌ಗಳು ಅಲೋಶಿಯಸ್ ಅವರ ಜೀವನವನ್ನು ಚಿತ್ರಿಸುತ್ತವೆ. ಸ್ವಲ್ಪ ಕಾಲ ಶಾಂತವಾಗಿ ಕಾಲ ಕಳೆಯಲು ಬಯಸುವವರಿಗೆ ಇದು ಸೂಕ್ತ ತಾಣ.

ಚಳಿಗಾಲವು ಸೇಂಟ್ ಅಲೋಶಿಯಸ್ ಚರ್ಚ್‌ಗೆ ಭೇಟಿ ನೀಡಲು ಉತ್ತಮ ಸಮಯ. ಈ ಸಂದರ್ಭದಲ್ಲಿ ಚರ್ಚ್ ಬೆಳಗ್ಗೆ 9ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ.


ಸುಲ್ತಾನ್ ಬತ್ತೇರಿ

ಮಂಗಳೂರಿನಿಂದ ಸುಮಾರು 4 ಕಿಲೋ ಮೀಟರ್ ದೂರದಲ್ಲಿರುವ ಬೋಳೂರಿನಲ್ಲಿರುವ ಸುಲ್ತಾನ್ ಬತ್ತೇರಿ ಕ್ರಿ.ಶ. 1784 ರಲ್ಲಿ ಚಕ್ರವರ್ತಿ ಟಿಪ್ಪು ಸುಲ್ತಾನನ ಕಾಲದಲ್ಲಿ ನಿರ್ಮಿಸಲಾಗಿದೆ. ಟಿಪ್ಪು ಸುಲ್ತಾನ್ ನಾಶಪಡಿಸಿದ 23 ಚರ್ಚ್‌ಗಳ ಅದೇ ಕಲ್ಲುಗಳಿಂದ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ಇದು ಗಡಿಯಾರ ಗೋಪುರವಾಗಿದ್ದರೂ ಫಿರಂಗಿಗಳನ್ನು ಸ್ಥಾಪಿಸುವ ಸ್ಥಳಗಳನ್ನು ಹೊಂದಿರುವ ಕೋಟೆಯಂತೆ ಕಾಣುತ್ತದೆ. ಗೋಪುರದ ಅಡಿಯಲ್ಲಿ ಭೂಗತ ಶೇಖರಣಾ ಪ್ರದೇಶವಿದೆ. ಇದನ್ನು ಒಮ್ಮೆ ಗನ್‌ಪೌಡರ್ ಸಂಗ್ರಹಿಸಲು ಬಳಸಲಾಗುತ್ತಿತ್ತು. ಇದರ ಮೇಲೇರಿದರೆ ಅರಬ್ಬಿ ಸಮುದ್ರದ ವಿಹಂಗಮ ನೋಟವನ್ನು ಕಾಣಬಹುದು.

ಅದ್ಭುತವಾದ ಸೂರ್ಯಾಸ್ತವನ್ನು ಇಲ್ಲಿ ವೀಕ್ಷಿಸಬಹುದು. ಈ ಸ್ಥಳವು ಬೆಳಗ್ಗೆ 9 ರಿಂದ ಸಂಜೆ 7.30 ರವರೆಗೆ ತೆರೆದಿರುತ್ತದೆ.


ಮೂಲ್ಕಿಯಲ್ಲಿ ಸರ್ಫಿಂಗ್

ಮೂಲ್ಕಿಯಲ್ಲಿರುವ ಸರ್ಫಿಂಗ್ (ಜಲ ಕ್ರೀಡೆ) ಕೇಂದ್ರವು ಸರ್ಫರ್‌ಗಳ ಸ್ವರ್ಗವಾಗಿದೆ. ಮಂಗಳೂರಿನ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ ದೂರದಲ್ಲಿದೆ. ವರ್ಷಪೂರ್ತಿ ಸರ್ಫ್ ಮಾಡಬಹುದಾದರೂ ಮೇನಿಂದ ಜೂನ್ ಮತ್ತು ಸೆಪ್ಟೆಂಬರ್ ನಿಂದ ಅಕ್ಟೋಬರ್‌ವರೆಗೆ ಉತ್ತಮ ಸಮಯ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಸ್ವಾದಿಷ್ಟ ಆಹಾರ ಸವಿಯಲು, ಶಾಪಿಂಗ್‌ಗೆ ಸೂಕ್ತ ತಾಣ

ಮಂಗಳೂರಿಗೆ ಭೇಟಿ ನೀಡಿದರೆ ಸ್ವಾದಿಷ್ಟ ಆಹಾರ ಗ್ಯಾರಂಟಿ. ಕೆಲವು ರುಚಿಕರವಾದ ಸಮುದ್ರಾಹಾರವನ್ನು ಸವಿಯಬಹುದು. ಫಿಶ್ ಪುಲಿಮುಂಚಿ ಮತ್ತು ಏಡಿ ಘೀ ರೋಸ್ಟ್ ಇಲ್ಲಿನ ಜನಪ್ರಿಯ ಖಾದ್ಯ. ಮಂಗಳೂರಿನಲ್ಲಿ ಜನಪ್ರಿಯವಾಗಿರುವ ಇತರ ಭಕ್ಷ್ಯಗಳೆಂದರೆ ನೀರ್ ದೋಸೆ ಮತ್ತು ಚಿಕನ್ ಕರಿ. ಸಸ್ಯಾಹಾರಿಗಳು ಅಧಿಕೃತ ಮಂಗಳೂರಿನ ಸಸ್ಯಾಹಾರಿ ಆಹಾರಕ್ಕಾಗಿ ಅಯೋಧ್ಯೆಗೆ ಭೇಟಿ ನೀಡಬಹುದು.

ಶಾಪಿಂಗ್ ಪ್ರಿಯರಿಗೆ ಮಂಗಳೂರು ನಗರದಲ್ಲಿ ಹಲವು ತಾಣಗಳಿವೆ. ಸೆಂಟ್ರಲ್ ಮಾರುಕಟ್ಟೆ ಹಂಪನಕಟ್ಟಾ ಮಾರುಕಟ್ಟೆ ಬಡಂಗ್‌ಪೇಟ್ ಮಾರುಕಟ್ಟೆ ಸಮುದ್ರಾಹಾರ ಮಾರುಕಟ್ಟೆ ದುಬೈ ಮಾರ್ಕೆಟ್ ಎಂಪೈರ್ ಮಾಲ್‌ಗೆ ಭೇಟಿ ನೀಡಬಹುದು.

Continue Reading

ರಾಜಕೀಯ

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದ್ದಾರೆ.

VISTARANEWS.COM


on

Cm Siddaramaiah hits out at BJP for Gaurantee Scheme
Koo

ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ಮೀಸಲಿರಿಸಿದೆ. ಈ ಬಿಜೆಪಿಯವರಿಗೆ (BJP Karnataka) ಬಜೆಟ್‌, ಆರ್ಥಿಕತೆ ಬಗ್ಗೆ ಏನು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿನ್ನೆ (ಮೇ 20) ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಒಟ್ಟು ಮೊತ್ತ 44816 ಕೋಟಿ ರೂಪಾಯಿ ಆಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

Continue Reading

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rameshwaram Cafe Blast
ಕರ್ನಾಟಕ9 mins ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ16 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ36 mins ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ45 mins ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ54 mins ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ1 hour ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ1 hour ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ2 hours ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ2 hours ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು9 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌