Text Book Revision : ಸದ್ದಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಸರ್ಕಾರ, ಏನೇನು ಬದಲಾವಣೆ? - Vistara News

ಬೆಂಗಳೂರು

Text Book Revision : ಸದ್ದಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಸರ್ಕಾರ, ಏನೇನು ಬದಲಾವಣೆ?

Text Book Revision : ರಾಜ್ಯ ಸರ್ಕಾರ ನೇಮಿಸಿದ್ದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ತನ್ನ ವರದಿಯನ್ನು ಸಲ್ಲಿಸಿದೆ. ಇದರಲ್ಲಿ ಮೇಲ್ನೋಟಕ್ಕೆ ಮಹತ್ತರ ಬದಲಾವಣೆಗಳಿಲ್ಲ. ಆದರೆ, ಅಂತರ್ಯದಲ್ಲಿ ಏನೇನು ಬದಲಾವಣೆ ಆಗಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

VISTARANEWS.COM


on

Text book Revision Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (School Education Department) ಸದ್ದಿಲ್ಲದೆ ಪಠ್ಯ ಪುಸ್ತಕ ಪರಿಷ್ಕರಣೆ (Text book Revision) ಮಾಡಿದೆ. 2024-25ನೇ ಸಾಲಿನ ಆರರಿಂದ 10ನೇ ತರಗತಿವರೆಗಿನ ಪಠ್ಯ ಪುಸ್ತಕಗಳನ್ನು (Text books) ಪರಿಷ್ಕರಣೆ ಮಾಡಲಾಗಿದೆ. ಎಲ್ಲಾ ಪಠ್ಯಗಳನ್ನು ಎರಡು ಸಂಪುಟಗಳಾಗಿ (Two Parts book) ವಿಭಾಗಿಸಿರುವುದು ಈ ಬಾರಿಯ ಪರಿಷ್ಕರಣೆಯ ವಿಶೇಷವಾಗಿದೆ.

ಡಾ ಮಂಜುನಾಥ್ ಹೆಗಡೆ (Dr. Manjunath Hegade) ನೇತೃತ್ವದಲ್ಲಿ ರಚಿಸಲಾಗಿದ್ದ ಪಠ್ಯ ಪರಿಷ್ಕರಣೆ ಸಮಿತಿಯು ಪಠ್ಯಪುಸ್ತಕ ಪರಿಷ್ಕರಿಸಿ ವರದಿ ನೀಡಿದೆ. ಪಠ್ಯಪುಸ್ತಕದ ಪರಿಷ್ಕರಣೆ ಮಾಡಿರುವ ತಜ್ಞರು ತಾವು ಯಾವ ಅಂಶಗಳನ್ನು ಆಧರಿಸಿ, ಆದ್ಯತೆಯನ್ನು ನೀಡಿ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದಾಗಿಯೂ ವರದಿಯಲ್ಲಿ ತಿಳಿಸಿದ್ದಾರೆ.

*ಸನಾತನ ಧರ್ಮ/ಎಂಬ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ಸೇರಿಸಿ, ವ್ಯವಸ್ಥಿತವಾದ ನಿರೂಪಣೆಯನ್ನು ನೀಡಲಾಗಿದೆ ಎಂದು ಹೇಳಲಾಗಿದೆ, ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರೂಪಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಆದ್ಯತೆ ನೀಡಿದ ಅಂಶಗಳು ಯಾವುದು?

1.ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ, ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ ಎಂದು ಪಠ್ಯ ಪುಸ್ತಕ ಸಮಿತಿ ಹೇಳಿದೆ.

2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ 2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ” ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.

3. ವಿವಿಧ ಸಂಘಟನೆಗಳು, ವ್ಯಕ್ತಿಗಳು ಹಾಗೂ ಸರ್ಕಾರದ ಇಲಾಖೆಗಳು ಪಠ್ಯಪುಸ್ತಕದಲ್ಲಿ ನಿರ್ದಿಷ್ಟ ವಿಷಯಾಂಶವನ್ನು ಆಳವಡಿಸುವ/ಕೈಬಿಡುವ/ಪರಿಷ್ಕರಿಸುವ ಕುರಿತು ಮಾಡಿದ ಎಲ್ಲಾ ಮನವಿಗಳನ್ನು ಪರಿಶೀಲಿಸಿ ಸೂಕ್ತವೆನಿಸಿದ ಸಲಹೆಗಳನ್ನು ಪರಿಷ್ಕರಣೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

4. ವಿಷಯಾಂಶಗಳಿಗೆ ಸಂಬಂಧಿಸಿದಂತೆ, ಪಠ್ಯಪುಸ್ತಕದಲ್ಲಿರುವ ಅಂಕಿ ಅಂಶಗಳನ್ನೂ ಮಾಹಿತಿಗಳನ್ನು, ನಕ್ಷೆಗಳನ್ನು, ಚಿತ್ರಗಳು ಮತ್ತು ವ್ಯಾಕಾರಣಾಂಶಗಳನ್ನು ಅಗತ್ಯವಿರುವ ಕಡೆ ಪರಿಷ್ಕರಿಸಲಾಗಿದೆ.

5. ಮಕ್ಕಳ ಪಠ್ಯಪುಸ್ತಕದ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಪಠ್ಯಪುಸ್ತಕಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಎರಡು ಸಂಪುಟಗಳಾಗಿ ವಿಭಾಗಿಸುವ ಸರ್ಕಾರದ ನಿರ್ಣಯಕ್ಕೆ ಅನುಸಾರವಾಗಿ, ಎರಡೂ ಸಂಪುಟಗಳಲ್ಲಿನ ಕಲಿಕಾಂಶಗಳು/ಪಾತಗಳು ಸರಳತೆಯಿಂದ ಸಂಕೀರ್ಣತೆಯೆಡೆಗೆ ಸಾಗುವಂತೆ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

6. ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಪ್ರಮುಖ ಸಾಹಿತಿಗಳಿಗೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳಿಗೂ ಪ್ರಾಶಸ್ತ್ಯ ನೀಡಲಾಗಿರುತ್ತದೆ.

7. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ, ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಕೆಲವು ಹೊಸ ಅಧ್ಯಾಯಗಳು, ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: Text Books: ರೋಹಿತ್‌ ಚಕ್ರತೀರ್ಥ ಸಮಿತಿಯಲ್ಲಿ ಶಿಕ್ಷಣ ತಜ್ಞರೇ ಇರಲಿಲ್ಲ: ಅವರು ಮಾಡಿದ್ದನ್ನು ಕಿತ್ತು ಎಸೆಯಿರಿ ಎಂದ ದೇವನೂರು ಮಹಾದೇವ

ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಪರಿಷ್ಕರಿಸಿರುವ ಪ್ರಮುಖ ಅಂಶಗಳು

ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯಪುಸ್ತಕಗಳು ಸಂವಿಧಾನದ ಪ್ರಸ್ತಾವನೆ, ಲಿಂಗ ಸೂಕ್ಷ್ಮತೆ, ಮಕ್ಕಳ ಹಕ್ಕುಗಳ ಕುರಿತ ಮಾಹಿತಿ, ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಮೌಲ್ಯಗಳು ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ

6ನೇ ತರಗತಿ ಪಠ್ಯ ಪುಸ್ತಕದಲ್ಲಿ ಏನೇನು ಬದಲಾವಣೆ?

  1. ಇತಿಹಾಸದ ಪರಿಚಯ ಮತ್ತು ಆರಂಭಿಕ ಸಮಾಜದ ಕುರಿತ ಮಾಹಿತಿ ಇರುವ ಅಧ್ಯಾಯವನ್ನು ಹೊಸದಾಗಿ ಸೇರಿಸಲಾಗಿದೆ.
  2. ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಅಧ್ಯಾಯದಲ್ಲಿ ಎಲ್ಲಾ ಮಾಹಿತಿಗಳನ್ನು ನವೀಕರಿಸಲಾಗಿದೆ ಹಾಗೂ ಹೊಸ ಚಿತ್ರಗಳು ಮತ್ತು ವಿವರಣೆಗಳನ್ನು ಸೇರಿಸಲಾಗಿದೆ.
  3. ಚಂದ್ರಶೇಖರ್ ಕಂಬಾರ, ನಾಲ್ವಡಿ ಕೃಷ್ಣರಾಜ ಒಡೆಯರ್, ಎಚ್.ಎಲ್. ನಾಗೇಗೌಡ, ಡಾ. ಸಿದ್ದಲಿಂಗಯ್ಯ, ಶ್ರೀ ಸಿದ್ದೇಶ್ವರ ಸ್ವಾಮಿ, ಶ್ರೀ ಶಾಂತವೇರಿ ಗೋಪಾಲಗೌಡರ ಹಾಗೂ ಕೊಪ್ಪಳದ ಗವಿಮತದ ಭಾವಚಿತ್ರಗಳನ್ನು ವಿವರಗಳೊಂದಿಗೆ ಸೇರಿಸಲಾಗಿದೆ.
  4. ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು ಮತ್ತು ಉತ್ತರ ಭಾರತದ ರಾಜ ಮನೆತನಗಳನ್ನು ಕ್ರಮವಾಗಿ ಒಂದೆಡೆ ತಂದು ಚರ್ಚಿಸಿ, ರಾಜಮನೆತನಗಳ ಪಟ್ಟಿಯನ್ನು ಸೇರಿಸಲಾಗಿದೆ.
  5. ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು’ ಅಧ್ಯಾಯದಲ್ಲಿ ‘ಗುಳ್ಳಕಾಯಜ್ಜಿಯ ಕಥೆ’ ಎಂಬ ಜಾನಪದ ಕಥೆ ಪಠ್ಯಕ್ಕೆ ಪೂರಕವಾಗದ ಕಾರಣಕ್ಕೆ ಕೈಬಿಡಲಾಗಿದೆ.
  6. ತಿದ್ದೋಲೆಯ ಪ್ರಕಾರ ವೇದ ಕಾಲದ ಸಂಸ್ಕೃತಿ’ ಮತ್ತು ‘ಹೊಸ ಧರ್ಮಗಳ ಉದಯ’ ಪಾಠಗಳನ್ನು ಸೇರಿಸಲಾಗಿದೆ.
  7. ಪೌರ ಮತ್ತು ಪೌರತ್ವ ಪಾಠವನ್ನು ಲಿಂಗ ಸಮಾನತೆಯ ನೆಲೆಯಲ್ಲಿ ಪರಿಷ್ಕರಿಸಲಾಗಿದೆ. ನಮ್ಮ ಸಂವಿಧಾನ ಪಾಠದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಭಾಗಿಯಾದ ಮಹಿಳಾ ಸದಸ್ಯರ ವಿವರ ಮತ್ತು ಭಾವಚಿತ್ರವನ್ನು ಸೇರಿಸಲಾಗಿದೆ.
  8. ಸಮಾನತೆಯ ಹಕ್ಕನ್ನು ಚರ್ಚಿಸುವಾಗ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಅವಕಾಶಗಳನ್ನು ಸೇರಿಸಲಾಗಿದೆ.
  9. ಸ್ಥಳೀಯ ಆಡಳಿತ’ ದ ಬದಲಿಗೆ ಹೆಚ್ಚು ವಿಸ್ತಾರವಾದ ಹಿನ್ನೆಲೆಯನ್ನು ಒದಗಿಸುವ ‘ಪ್ರಭುತ್ವದ ಪ್ರಕಾರಗಳು’ ಆಧ್ಯಾಯವನ್ನು ಸೇರಿಸಲಾಗಿದೆ.
  10. ಸ್ಥಳೀಯ ಆಡಳಿತ’ವು 8ನೇ ತರಗತಿಯ ‘ಸ್ಥಳೀಯ ಸ್ವಯಂ ಸರ್ಕಾರ’ ಅಧ್ಯಾಯದ ಪುನರಾವರ್ತನೆ ಆಗಿರುವುದರಿಂದ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
  11. ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳು’ ಅಧ್ಯಾಯವನ್ನು ತಿದ್ದುಪಡಿ ಮಾಡಿ, ಮಕ್ಕಳ ಹಕ್ಕುಗಳನ್ನು ಸೇರಿಸಲಾಗಿದೆ.
  12. ಅಧ್ಯಾಯಗಳು ಹಾಗೂ ವಿವರಣೆಗಳನ್ನು ವಿಷಯಾನುಕ್ರಮದಲ್ಲಿ ಮರುಜೋಡಣೆ ಮಾಡಲಾಗಿದೆ.
  13. ಭೂಪಟಗಳನ್ನು ನವೀಕರಿಸಲಾಗಿದೆ. ಜಿಲ್ಲೆ, ತಾಲ್ಲೂಕು, ಹೋಬಳಿ ಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ನವೀಕರಿಸಲಾಗಿದೆ.

7ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಏನೇನು ಬದಲಾವಣೆ?

  1. ಭಾರತಕ್ಕೆ ಐರೋಪ್ಯರ ಆಗಮನ ಮತ್ತು ಬ್ರಿಟೀಷ್ ಆಳ್ವಿಕೆಯ ಪರಿಣಾಮಗಳು ಪಾಠದ ವಿವರಣೆಯಲ್ಲಿ ಸ್ಪಷ್ಟತೆಯನ್ನು ತರಲು 2017-18ರ ಪರಿಷ್ಕರಣ ಪಠ್ಯಪುಸ್ತಕದಲ್ಲಿನ ಮಾಹಿತಿಗಳನ್ನು ಪಡೆದು ಮರು ನಿರೂಪಿಸಲಾಗಿದೆ.
  • ತಿದ್ದೋಲೆಯಂತೆ ‘ಮೈಸೂರು ಮತ್ತು ಇತರ ಸಂಸ್ಥಾನಗಳು’ ಅಧ್ಯಾಯವನ್ನು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಎಂಬ ಅಧ್ಯಾಯವನ್ನು ಸೇರ್ಪಡೆ ಮಾಡುವುದರೊಂದಿಗೆ ಸ್ವಾತಂತ್ರ್ಯ ಚಳುವಳಿಯ ನಿರೂಪಣೆಯಲ್ಲಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ಸೇರಿಸಲಾಗಿದೆ.
  • ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ರೆಂದು ದಾಖಲಿಸಲಾಗಿದೆ.
  • ರಿಲಿಜಿಯನ್’ ಗಳು ಎಂಬ ಶೀರ್ಷಿಕೆಯನ್ನು ‘ಧರ್ಮಗಳು’ ಎಂದು ಬದಲಾಯಿಸಲಾಗಿದೆ..
  • ಪೌರನೀತಿಯಲ್ಲಿ ಶಾಸಕಾಂಗ, ಕಾಯಾರ್ಂಗ ಮತ್ತು ನ್ಯಾಯಾಂಗಗಳನ್ನು ಪರಿಚಯಿಸುವ ಅಧ್ಯಾಯ

ಇತಿಹಾಸ : 8ನೇ ತರಗತಿಯ ಪಠ್ಯದಲ್ಲಿ ಏನೇನು ಬದಲಾವಣೆ?

  1. ಆಧಾರಗಳು ಎಂಬ ಅಧ್ಯಾಯವನ್ನು ಪರಿಷ್ಕರಿಸಿ, ಪ್ರಾಕ್ತನ ಆಧಾರಗಳ ಅರ್ಥ ಮತ್ತು ಪ್ರಾಮುಖ್ಯತೆಯೊಂದಿಗೆ ವಿಷಯಾಂಶವನ್ನು ಸೇರ್ಪಡೆ ಮಾಡಲಾಗಿದೆ.
  2. ಭರತವರ್ಷ ಎಂಬ ಅಧ್ಯಾಯ ಶೀರ್ಷಿಕೆಯನ್ನು ಭರತ ವರ್ಷ ಭಾರತದ ಭೌಗೋಳಿಕ ಲಕ್ಷಣಗಳು ಮತ್ತು ಪ್ರಾಗೈತಿಹಾಸಿಕ ಕಾಲ ಎಂದು ನಿರ್ದಿಷ್ಟ ಪಡಿಸಲಾಗಿದೆ.
  3. ಸಿಂಧೂ-ಸರಸ್ವತಿ ನಾಗರಿಕತೆ ಎಂಬ ಅಧ್ಯಾಯ ಶೀರ್ಷಿಕೆಯನ್ನು ಪ್ರಾಚೀನ ಭಾರತದ ನಾಗರಿಕತೆಗಳು: ಸಿಂಧು-ಸರಸ್ವತಿ ನಾಗರಿಕತೆ ಮತ್ತು ವೇದಗಳ ಕಾಲ ಎಂದು ಬದಲಾಯಿಸಿದೆ.
  4. ಸನಾತನ ಧರ್ಮ/ಎಂಬ ಅಧ್ಯಾಯದಲ್ಲಿ ಕೆಲವು ಅಂಶಗಳನ್ನು ಸೇರಿಸಿ, ವ್ಯವಸ್ಥಿತವಾದ ನಿರೂಪಣೆಯನ್ನು ನೀಡಲಾಗಿದೆ.
  5. ಜೈನ ಮತ್ತು ಬೌದ್ಧ ಮತಗಳು ಶೀರ್ಷಿಕೆಯನ್ನು ಜೈನ ಮತ್ತು ಬೌದ್ಧ ಧರ್ಮಗಳು ಎಂದು ಬದಲಾಯಿಸಿ, ಈ ಧರ್ಮಗಳ ಉದಯದ ಹಿನ್ನೆಲೆಯನ್ನು ಸೇರ್ಪಡೆ ಮಾಡಲಾಗಿದೆ.
  6. ಮಾನ್ಯಖೇಟದ ರಾಷ್ಟ್ರಕೂಟರು ಮತ್ತು ಕಲ್ಯಾಣದ ಚಾಳುಕ್ಯರು ಅಧ್ಯಾಯದಲ್ಲಿ ‘ವೀರಶೈವ ಪಂಥದ ಮೌಲ್ಯಗಳು ಬದಲಾಗಿ ಬಸವಾದಿ ಶಿವಶರಣ ಮೌಲ್ಯಗಳು ಪದವನ್ನು ಬಳಸಲಾಗಿದೆ. ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕರೆಂದು ದಾಖಲಿಸಲಾಗಿದೆ.

ಇತಿಹಾಸ : 9ನೇ ತರಗತಿಯ ಪಠ್ಯದಲ್ಲಿ ಏನೇನು ಬದಲಾವಣೆ?

  1. ಪಾಶ್ಚಾತ್ಯ ರಿಲಿಜಿಯನ್ ಗಳು ಎಂబ ಶೀರ್ಷಿಕೆಯನ್ನು ಪಾಶ್ಚಾತ್ಯ ಧರ್ಮಗಳು ಎಂದು ಬದಲಾಯಿಸಲಾಗಿದೆ.
  2. ಕಾಶ್ಮೀರದ ಕಾರ್ಕೋಟರು ಮನೆತನ ಮತ್ತು ಅಹೋಮ್ ರಾಜನಮನೆತನದ ಸಂಕೀರ್ಣ ವಿವರಣೆಯನ್ನು ಸಂಕ್ಷಿಪ್ತಗೊಳಿಸಲಾಗಿದೆ.
  3. ಭಕ್ತಿಪಂಥ ಅಧ್ಯಾಯದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಸಂತ ಶಿಶುನಾಳ ಶರೀಫರ ಕುರಿತ ಮಾಹಿತಿಯನ್ನು ಸೇರಿಸಲಾಗಿದೆ.

ಇತಿಹಾಸ : 10ನೇ ತರಗತಿ ಪಠ್ಯದಲ್ಲಿ ಬದಲಾಗುವುದು ಏನು?

  1. ಭಾರತಕ್ಕೆ ಯೂರೋಪಿಯನ್ನರ ಆಗಮನ ಅಧ್ಯಾಯದಲ್ಲಿ ಮಾರ್ತಾಂಡ ವರ್ಮನ ಕುರಿತು ವಿವರಗಳನ್ನು ಸಂಕ್ಷಿಪ್ತಗೊಳಿಸಲಾಗಿದೆ.
  2. ಕರ್ನಾಟಕದಲ್ಲಿ ಬ್ರಿಟಿಷ್ ಆಳ್ವಿಕೆಗೆ ಪ್ರತಿರೋಧಗಳು ಅಧ್ಯಾಯದಲ್ಲಿ ಮೈಸೂರಿನ ಅರಸರ ಹಾಗೂ ಕಿತ್ತೂರು, ಸುರಪುರ, ಕೊಪ್ಪಳ, ಹಲಗಲಿಗಳ ಸ್ಥಳೀಯ ಬಂಡಾಯಗಳನ್ನು ಕ್ರಮಬದ್ಧವಾಗಿ ದಾಖಲಿಸಲಾಗಿದೆ.
  3. ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿಗಳು ಅಧ್ಯಾಯದಲ್ಲಿ ಸಾವಿತ್ರಿಬಾಯಿ ಫುಲೆ, ಯುವ ಬಂಗಾಳಿ ಚಳವಳಿ ಮತ್ತು ಪೆರಿಯಾರ್ ಅವರ ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

ರಾಜ್ಯಶಾಸ್ತ್ರ : 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಏನೇನು ಬದಲಾಗಲಿದೆ?

  1. ಸ್ಥಳೀಯ ಸ್ವಯಂ ಸರ್ಕಾರ ಎಂಬ ಅಧ್ಯಾಯದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕಾಯಿದೆ ಸೇರಿಸಿ, ನಕಾಶೆ ಮತ್ತು ಸ್ಥಳೀಯ ಸಂಸ್ಥೆಗಳ ಮಾಹಿತಿಯನ್ನು ನವೀಕರಿಸಲಾಗಿದೆ.

ರಾಜ್ಯ ಶಾಸ್ತ್ರ: 9ನೇ ತರಗತಿ ಪಠ್ಯದಲ್ಲಿ ಏನು ಹೊಸದು?

  1. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ನ್ಯಾಯಾಂಗ ವ್ಯವಸ್ಥೆ ಎಂಬ ಅಧ್ಯಾಯಗಳಲ್ಲಿ ಭಾರತದ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ವಿವರಗಳನ್ನು ನವೀಕರಿಸಲಾಗಿದೆ.
  2. ನೂತನ ಸಂಸತ್ ಭವನದ ಚಿತ್ರ, ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಅವರ ಕಾಲಾವಧಿಯ ಯಾದಿಯನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತಾತ್ಮಕ ನಕ್ಷೆಯನ್ನು ಸೇರಿಸಲಾಗಿದೆ.
  3. ಚುನಾವಣಾ ವ್ಯವಸ್ಥೆ ಅಧ್ಯಾಯದಲ್ಲಿ ವಿವರಗಳನ್ನು ನವೀಕರಿಸಿರುವುದರೊಂದಿಗೆ, SVEEP ಮಾಹಿತಿಯನ್ನು ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಮಾಹಿತಿಯನ್ನು ಸೇರ್ಪಡೆ ಮಾಡಲಾಗಿದೆ.
  4. ದೇಶದ ರಕ್ಷಣೆ ಅಧ್ಯಾಯದಲ್ಲಿ ಮಾಹಿತಿಯನ್ನು ನವೀಕರಿಸುವುದರೊಂದಿಗೆ ಸೇನಾ ತರಬೇತಿ ಕೇಂದ್ರಗಳು ಹಾಗೂ ಹಡಗು ನಿರ್ಮಾಣ ಕೇಂದ್ರಗಳ ಮಾಹಿತಿ ನೀಡಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಕುರಿತ ಮಾಹಿತಿ ಹೆಚ್ಚುವರಿಯಾಗಿ ನೀಡಲಾಗಿದೆ.
  5. ಅಂತಾರಾಷ್ಟ್ರೀಯ ಸಂಬಂಧಗಳನ್ನು ಪರಿಚಯಿಸುವ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ.

ರಾಜ್ಯ ಶಾಸ್ತ್ರ : 10ನೇ ತರಗತಿಗೆ ಏನೇನು ಚೇಂಜ್‌?

  1. 10ನೇ ತರಗತಿಯಲ್ಲಿ ಸಾರ್ವಜನಿಕ ಆಡಳಿತ ಎಂಬ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ. ಈ ಹಿಂದೆ ಇದ್ದ ಅನ್ಯ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧ ಎಂಬ ಅಧ್ಯಾಯವು ಹಿಂದಿನ ತರಗತಿಗಳಲ್ಲಿ ಪುನರಾವರ್ತನೆ ಆಗಿರುವುದರಿಂದ ಕೈಬಿಡಲಾಗಿದೆ

*ಭಾರತದ ವಿದೇಶಾಂಗ ನೀತಿ ಕಿರು ಶೀರ್ಷಿಕೆಯನ್ನು ವಿದ್ಯಾರ್ಥಿಗಳ ಕಲಿಕಾ ದೃಷ್ಟಿಯಿಂದ ಸೇರ್ಪಡೆ ಮಾಡಲಾಗಿದೆ. ಮಹಿಳಾ ಮೀಸಲಾತಿಯ ಬಗ್ಗೆ ಇತ್ತೀಚಿನ ಮಸೂದೆಯ ನಾರೀ ಶಕ್ತಿ ವಂದನಾ ಅಧಿನಿಯಮ, ಲಿಂಗತ್ವ ಅಲ್ಪ ಸಂಖ್ಯಾತರ ಕ್ಷೇಮ ಕುರಿತ ಮಾಹಿತಿಯನ್ನು ಸೇರ್ಪಡೆ ಮಾಡಲಾಗಿದೆ.

ವಿಷಯವಾರು ಬದಲಾವಣೆಯ ಪ್ರಮುಖಾಂಶಗಳು ಇಲ್ಲಿವೆ

1.ಸಮಾಜ ಶಾಸ್ತ್ರ: ಸಮಾಜ ಶಾಸ್ತ್ರದ ಅರ್ಥ ಮಹತ್ವ ಮತ್ತು ಪ್ರಕಾರಗಳನ್ನು ಪರಿಷ್ಕರಿಸುವುದರೊಂದಿಗೆ, ಸಾಮಾಜಿಕ ಚಳುವಳಿಗಳು ಹಾಗೂ ಸಾಮಾಜಿಕ ಸ್ತರ ವಿನ್ಯಾಸ’ದಲ್ಲಿ ಕೆಲವೊಂದು ಅಗತ್ಯ ವಿಷಯಾಂಶಗಳನ್ನು ಸೇರ್ಪಡೆ ಮಾಡುವುದರೊಂದಿಗೆ ಪೋಕ್ಸೋ ಕಾಯಿದೆಯನ್ನು ಅಳವಡಿಸಲಾಗಿದೆ

2.ಅರ್ಥಶಾಸ್ತ್ರ
1. ಅರ್ಥಶಾಸ್ತ್ರದ ಪರಿಚಯ ಮತ್ತು ವ್ಯಾಖ್ಯಾನ ಹೊಸದಾಗಿ ನೀಡಲಾಗಿದೆ.
2.ರಾಷ್ಟ್ರೀಯ ವರಮಾನ’ದ ಅರ್ಥವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
3.ಪಂಚವಾರ್ಷಿಕ ಯೋಜನೆ, ನೀತಿ ಆಯೋಗ, ಸಾರ್ವಜನಿಕ ಹಣಕಾಸು ಮತ್ತು ಆಯವ್ಯಯ ಕುರಿತ ವಿವರಗಳನ್ನು ನವೀಕರಿಸಲಾಗಿದೆ.
4.ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್. ಸ್ವಾಮಿನಾಥನ್ ರವರಿಗೆ ಗೌರವಾರ್ಥಕವಾಗಿ ನೀಡಿರುವ ಭಾರತ ರತ್ನ ಪ್ರಶಸ್ತಿಯ ಮಾಹಿತಿಯನ್ನು ಸೇರಿಸಲಾಗಿದೆ.

3.ವ್ಯವಹಾರ ಅಧ್ಯಯನ
1.ಸಹಕಾರ ಸಂಘಗಳು, ಬಹುರಾಷ್ಟ್ರೀಯ ಕಂಪನಿಗಳು, ಮಾರುಕಟ್ಟೆ ವಿಧಗಳು ಇವುಗಳಿಗೆ ವಿವರಣೆ/ ಉದಾಹರಣೆ ನವೀಕರಿಸಲಾಗಿದೆ.
2.ಬ್ಯಾಂಕ್‌ಗಳ ವಿಲೀನೀಕರಣ ಮಾಹಿತಿಯನ್ನು ನೀಡಲಾಗಿದೆ

4.ಭೂಗೋಳ

1.ಭೂಪಟಗಳು, ತಾಲ್ಲೂಕು, ಜಿಲ್ಲೆಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ವಿಷಯಾಂಶಗಳಿಗೆ ಅನುಗುಣವಾಗಿ ನವೀಕರಿಸಲಾಗಿದೆ.
2.ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ, ಮೆಟ್ರೋ ರೈಲು ಮಾಹಿತಿಗಳನ್ನು ಸೇರ್ಪಡೆ ಮಾಡಲಾಗಿದೆ..
3. ಪಕ್ಷಿಧಾಮ, ವನ್ಯ ಜೀವಿ ಧಾಮ, ರಾಷ್ಟ್ರೀಯ ಉದ್ಯಾನವನ ಹಾಗೂ ವಿಶ್ವ ಪರಂಪರೆ ತಾಣ ಇವುಗಳ ಕುರಿತ ಇತ್ತೀಚಿನ ಮಾಹಿತಿ ನೀಡಲಾಗಿದೆ.
4.ಇಸ್ರೋ‌ ಕುರಿತು ಮಾಹಿತಿಯನ್ನು ಅಳವಡಿಸಲಾಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Kannada Sahitya Sammelana: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ಕನ್ನಡ ಭಾಷೆಯ ಜ್ಞಾನ ಇಂದು ದೇಶ-ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

VISTARANEWS.COM


on

Minister Dinesh Gundurao drives for the 5th Kannada Sahitya Sammelana in Bengaluru
Koo

ಬೆಂಗಳೂರು: ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು.‌ ಬಳಿಕ ಶ್ರೀರಾಮ್‌ಪುರ ಸನ್ ರೈಸ್ ವೃತ್ತದಿಂದ ಶೇಷಾದ್ರಿಪುರಂವರೆಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಸಲಾಯಿತು.‌ ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಕನ್ನಡ ಹಬ್ಬಕ್ಕೆ ಮೆರಗು ನೀಡಿದರು.‌ ವಿವಿಧ ಸಾಂಸ್ಕೃತಿಕ ಮೇಳಗಳು ಕನ್ನಡ ಜಾಗೃತಿ ಮೆರವಣಿಗೆಯಲ್ಲಿ ಗಮನ ಸೆಳೆದವು.

ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದಲ್ಲಿ ಸಾಂಸ್ಕೃತಿಕ ಭಂಡಾರವೇ ಇದೆ. ಕನ್ನಡ ಭಾಷೆಯ ಜ್ಞಾನ ಇಂದು ದೇಶ ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಗಾಂಧಿನಗರದಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, ಕನ್ನಡಕ್ಕೆ ನಮ್ಮ ಕಡೆಯಿಂದ ಒಂದು ಸಣ್ಣ ಸೇವೆ. ಯುವಕರು ನಮ್ಮ ಕನ್ನಡ ಭಾಷೆಯಲ್ಲಿರುವ ಜ್ಞಾನವನ್ನು ಸಂಪಾದಿಸಿಕೊಂಡು, ಕನ್ನಡ ಸೇವೆಗೆ ಸದಾ ಸಜ್ಜಾಗಿರಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ವಿ.ರಾಣಿ ಗೋವಿಂದರಾಜು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ಕವಿ ಗೋಷ್ಠಿ ಸೇರಿದಂತೆ, ಕನ್ನಡ ನಾಳೆಗಳು ಹೇಗಿರಬೇಕು ಹಾಗೂ ಸರ್ವಜನಾಂಗದ ಶಾಂತಿಯ ತೋಟ- ಗಾಂಧಿನಗರ ಕ್ಷೇತ್ರ ಎಂಬ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಅಲ್ಲದೇ ಕನ್ನಡ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಕ್ಕೂ ಹೆಚ್ಚು ಗಣ್ಯರನ್ನು ಇದೇ ವೇಳೆ ಗೌರವಿಸಿ, ಸನ್ಮಾನಿಸಲಾಯಿತು.

Continue Reading

ಬೆಂಗಳೂರು

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Bengaluru News: ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ “ದೀಕ್ಷಾ ದಿನದ ” ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆಯಿಂದ ಇದೇ ಜು.28 ರಂದು ಹಾಗೂ ಆ.1,3 ಮತ್ತು 5 ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nirmala Sahaya Hasta programme by Okkaliga Yuva Brigade on 28th July and 1st 3rd and 5th August
Koo

ಬೆಂಗಳೂರು: ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ “ದೀಕ್ಷಾ ದಿನʼದ ಪ್ರಯುಕ್ತ ಒಕ್ಕಲಿಗ ಯುವ ಬ್ರಿಗೇಡ್ ಸೇವಾ ಸಂಸ್ಥೆಯಿಂದ ಇದೇ ಜು.28ರಂದು ಹಾಗೂ ಆಗಸ್ಟ್‌ 1, 3 ಮತ್ತು 5ರಂದು “ನಿರ್ಮಲ ಸಹಾಯ ಹಸ್ತ” ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದೀಕ್ಷಾ ದಿನದ ಪ್ರಯುಕ್ತ ಪ್ರತಿವರ್ಷದಂತೆ, ಈ ವರ್ಷವೂ ಕೂಡ, ಶಾಲೆಗಳಿಗೆ ಅಗತ್ಯ ಸೌಲಭಗಳನ್ನು ಒದಗಿಸುವ ಹಾಗೂ ಶಾಲೆಯ ದತ್ತು ಸ್ವೀಕಾರ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ಜು.28ರಂದು ಒಡೆಯರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100 ವಿದ್ಯಾರ್ಥಿಗಳಿಗೆ ಊಟದ ಉಪಕರಣಗಳನ್ನು ವಿತರಿಸುವ ಕಾರ್ಯಕ್ರಮ. ಆ.1 ರಂದು ಚಪ್ಪರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಆ.3ರಂದು ಗಂಗನಕುಪ್ಪೆ ಕಿರಿಯ ಮಾಧ್ಯಮಿಕ ಶಾಲೆಗೆ ಕಂಪ್ಯೂಟರ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಮತ್ತು ಆ.05 ರಂದು ಸರಗೂರು ಆದಿವಾಸಿಗಳ ಶಾಲೆಗೆ ಸ್ಕೂಲ್ ಬ್ಯಾಗ್ ಹಾಗೂ ಇತರ ಅಧ್ಯಯನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ (Heart attack) ಮನೆ ಯಜಮಾನ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಿನ್ನೆ ಶನಿವಾರ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ (80) ಎಂಬುವವರು ಅಘಾತಕ್ಕೆ ಒಳಗಾಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇತ್ತ ದಶರಥ ಕುಟುಂಬಸ್ಥರು ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆಯೇ ಮುಳುಗಿ ಹೋಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಗೋಕಾಕ್ ನಗರದ ಉಪ್ಪಾರ ಗಲ್ಲಿ ನಿವಾಸಿ‌ ಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಮಕ್ಕಳು, ನಾಯಿ ಮರಿಗಳ ಜತೆಗೆ ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮನೆ ಯಜಮಾನ ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಕಂಗಲಾಗಿದ್ದಾರೆ.

ಕಾಲು ಜಾರಿ ನದಿಗೆ ಬಿದ್ದ ವೃದ್ಧೆ ಸಾವು

ಅಪರಿಚಿತ ವೃದ್ಧೆ ಕುಮದ್ವತಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ವೃದ್ದೆ ಜೀವ ಉಳಿಸಲು ತುಂಬಿದ ನದಿಗೆ ಬಸ್‌ ಚಾಲಕ ನದಿಗೆ ಹಾರಿದ್ದರು. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ನದಿಗೆ ಬಿದ್ದ ಅಪರಿಚಿತ ವೃದ್ಧೆ ಕಂಡು ಜೀವ ಉಳಿಸಲು ಮುಂದಾದರು. ಆದರೆ ಉಸಿರಾಟದ ತೊಂದರೆಯಿಂದ ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಜೀವದ ಹಂಗು ತೊರೆದು ವೃದ್ದೆ ಕಾಪಾಡಲು ಮುಂದಾದ ಚಾಲಕ ಮಜೀದ್ ಸಾಬ್ ಗುಬ್ಬಿ ಅವರ ಪ್ರಯತ್ನ ವಿಫಲವಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

ಪ್ರವಾಹ ಭೀತಿ 10ಕ್ಕೂ ಹೆಚ್ಚು ಗರ್ಭಿಣಿಯರ ಸ್ಥಳಾಂತರ

ರಾಯಚೂರಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಗರ್ಭಿಣಿಯರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಆಂಬ್ಯುಲೆನ್ಸ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕಡದರಗಡ್ಡಿ, ಮ್ಯಾದರಗಡ್ಡಿ, ಹಂಚಿನಾಳ, ಯರಗೋಡಿ, ವಕ್ಕಂಗಡ್ಡಿ ಸೇರಿದಂತೆ ಇನ್ನಿತರ ನಡುಗಡ್ಡೆ ಗ್ರಾಮಗಳಲ್ಲಿ ಇದ್ದ 15 ಮಂದಿ ಗರ್ಭಿಣಿಯರನ್ನು ಹಂಚಿನಾಳ ಗ್ರಾಮದ ಹೆಲ್ತ್ ಸೆಂಟರ್ ಶಿಫ್ಟ್‌ ಮಾಡಲಾಗಿದೆ. ಕೃಷ್ಣಾ ನದಿಯಿಂದಾಗಿ ಪ್ರವಾಹ ಹೆಚ್ಚಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ.

ಕೃಷ್ಣಾ ನದಿಯ ಪ್ರವಾಹಕ್ಕೆ ಕೊಳ್ಳುರು ಸೇತುವೆ ಸಂಪೂರ್ಣ ಜಲಾವೃತ

ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆಗೆ ಜಲದಿಗ್ಭಂಧನ ಹಾಕಲಾಗಿದೆ. ಕೊಳ್ಳುರು ಸೇತುವೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ಎತ್ತರ ನಿರ್ಮಾಣ ಮಾಡಬೇಕೆಂದು ಬಹು ವರ್ಷಗಳ ಬೇಡಿಕೆ ಇದೆ. ಸಾಕಷ್ಟು ಜನ ಪ್ರತಿನಿಧಿ ಅಧಿಕಾರಿಗಳು ಸೇತುವೆ ಎತ್ತರ ನಿರ್ಮಾಣ ಮಾಡುತ್ತೆವೆಂದು ಕೇವಲ ಭರವಸೆ ನೀಡಿ ಹೋಗಿದ್ದಾರೆ.

ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಮೇಕೆಗಳು ಸಾವು

ಭಾರಿ ಮಳೆಗೆ ಮನೆ ಗೋಡೆ ಕುಸಿದು 7 ಮೇಕೆಗಳು ಮೃತಪಟ್ಟಿವೆ. ಚಿತ್ರದುರ್ಗದ ಭೀಮಸಮುದ್ರ ಬಳಿ ತೊರೆ ಬಯಲು ಗ್ರಾಮದಲ್ಲಿ ಘಟನೆ ನಡೆದಿದೆ. ತೊರೆ ಬಯಲು ಗ್ರಾಮದ ಜಯಣ್ಣ ಎಂಬುವವರ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಜಯಣ್ಣ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆ ಗೋಡೆ ಮಣ್ಣಿನಡಿ ಸಿಲುಕಿ ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಕಾರು, ಆಟೋ ಮೇಲೆ ಉರುಳಿ ಬಿದ್ದ ಮರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮರಗಳ ಧರಶಾಹಿ ಮುಂದುವರಿದಿದೆ. ಯಾವುದೇ ಮಳೆ ಇಲ್ಲದೆ ಇದ್ದರೂ ದಿಢೀರ್ ಬೃಹತ್‌ ಗಾತ್ರದ ಮರವೊಂದು ಉರುಳಿದೆ. ಪರಿಣಾಮ 2 ಕಾರುಗಳು, ಆಟೋವೊಂದು ಜಖಂಗೊಂಡಿದೆ. ಕ್ವೀನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಆಟೋ ಡ್ರೈವರ್‌ ದಿವಾಕರ್‌, ಪ್ರಯಾಣಿಕ ಸ್ಟಾಲಿನ್ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಬೇಕಾಯಿತು.

ಮನೆ ಮೇಲೆ ಬಿದ್ದ ತೆಂಗಿನಮರ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಗಾಬಿತವಾಡದ ಆಶಾ ಪಟೇ ಎಂಬುವವರ ಮನೆಯ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಭಟ್ಕಳದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯ ಹೇರಿಬಿಳ್ಳೂರು ಗ್ರಾಮದಲ್ಲಿ ಮಂಜುನಾಥ ನಾಯ್ಕ, ಕುಪ್ಪಯ್ಯ ನಾಯ್ಕ ಸೇರಿ ಹಲವರ ಅಡಿಕೆ ತೋಟಕ್ಕೆ ಹಾನಿಯಾಗಿದೆ. ಅಡಿಕೆ ಮರ ಬಿದ್ದು ಸುಮಾರು 8 ಎಕರೆ ತೋಟಕ್ಕೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು9 mins ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ10 mins ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ10 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು11 mins ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ12 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Drowned in water
ಬಳ್ಳಾರಿ25 mins ago

Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

HD Kumaraswamy
ಪ್ರಮುಖ ಸುದ್ದಿ48 mins ago

HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Paris Olympics 2024
ಪ್ರಮುಖ ಸುದ್ದಿ52 mins ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್54 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ1 hour ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ5 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ6 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌