Blast in Bengaluru : ಬಾಂಬ್‌ ಸ್ಫೋಟ ನಡೆದ ರಾಮೇಶ್ವರಂ ಕೆಫೆ ಮಾ. 9ಕ್ಕೆ ರಿಓಪನ್‌ - Vistara News

ಬೆಂಗಳೂರು

Blast in Bengaluru : ಬಾಂಬ್‌ ಸ್ಫೋಟ ನಡೆದ ರಾಮೇಶ್ವರಂ ಕೆಫೆ ಮಾ. 9ಕ್ಕೆ ರಿಓಪನ್‌

Blast in Bengaluru : ಬೆಂಗಳೂರಿನ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆ ಮಾರ್ಚ್‌ 9ರಂದು ಮತ್ತೆ ತೆರೆಯಲಿದೆ. ಬಾಂಬ್‌ ಸ್ಫೋಟದ ತನಿಖೆ ಒಂದು ಹಂತಕ್ಕೆ ಪೂರ್ಣಗೊಂಡು ಹೋಟೆಲ್‌ ಆರಂಭಕ್ಕೆ ಅವಕಾಶ ನೀಡಲಾಗಿದೆ.

VISTARANEWS.COM


on

Blast in Bengaluru Rameshwara Cafe reopen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್‌ 1ರಂದು ಬಾಂಬ್‌ ಸ್ಫೋಟ (Blast in Bengaluru) ನಡೆದ ಬಳಿಕ ಮುಚ್ಚಿದ್ದ ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ಪ್ರತಿಷ್ಠಿತ ಫುಡ್‌ ಜಾಯಿಂಟ್‌ ರಾಮೇಶ್ವರಂ ಕೆಫೆ (Rameshwaram Cafe) ಮುಂದಿನ ಶನಿವಾರ ಅಂದರೆ ಮಾರ್ಚ್‌ 9ರಂದು ಮತ್ತೆ ತೆರೆಯಲಿದೆ (Rameshwaram Cafe reopen). ಈ ಮೂಲಕ ಈ ಭಾಗದ ಫುಡ್‌ ಪ್ರಿಯರಿಗೆ ಸಂತಸ ತರಲಿದೆ.

ಮಾರ್ಚ್‌ 1ರಂದು ಮಧ್ಯಾಹ್ನ 12.55ಕ್ಕೆ ರಾಮೇಶ್ವರಂ ಕೆಫೆಯಲ್ಲಿ ಕೇವಲ 10 ಸೆಕೆಂಡ್‌ಗಳ ಅಂತರದಲ್ಲಿ ಎರಡು ಬಾಂಬ್‌ ಗಳು ಸ್ಫೋಟಿಸಿದ್ದವು. ಕಸದ ಡಬ್ಬಿಯ ಸಮೀಪ ಇಟ್ಟಿದ್ದ ಬಾಂಬ್‌ಗಳು ಸ್ಫೋಟಿಸಿ 10 ಮಂದಿ ಗಾಯಗೊಂಡಿದ್ದರು. ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಫೋಟ ಎಂಬ ಎಣಿಕೆ ಇತ್ತಾದರೂ ಮುಂದೆ ಭಯೋತ್ಪಾದಕ ಕೃತ್ಯವೆನ್ನುವುದು ಸ್ಪಷ್ಟವಾಯಿತು. ಇದೀಗ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ. ಆದರೂ ಈ ಪ್ರಕರಣದ ರೂವಾರಿ ಟೋಪಿವಾಲಾನ ಜಾಡನ್ನು ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ.

Rameshwaram Cafe Divya Raghavendra Rao main

ಶಿವರಾತ್ರಿಗೆ ಕೆಫೆ ಮರು ಆರಂಭ ಎಂದಿದ್ದರು ಮತ್ತೆ ಮುಂದೂಡಿದ್ದರು

ಈ ಸ್ಫೋಟ ನಡೆದಾಗ ಹೋಟೆಲ್‌ನ ಮಾಲೀಕರಾದ ದಿವ್ಯಾ ರಾಘವೇಂದ್ರ ರಾವ್‌ ಅವರು ಮುಂಬಯಿಯಲ್ಲಿದ್ದರು. ಅವರ ಪತಿ ರಾಘವೇಂದ್ರ ರಾವ್‌ ಅವರು ಗುಜರಾತ್‌ನ ಜಾಮ್‌ ನಗರದಲ್ಲಿದ್ದರು. ಅವರು ಈ ಪ್ರಕರಣದ ತನಿಖೆಯಲ್ಲಿ ಸಹಕರಿಸಿದ್ದರು.

ಅದರ ನಡುವೆ ಮಾತನಾಡಿ, ಬಾಂಬ್‌ ಸ್ಫೋಟದಿಂದ ಹೋಟೆಲ್‌ಗೆ ಏನೂ ತೊಂದರೆಯಾಗಿಲ್ಲ. ಹೋಟೆಲ್‌ನಿಂದ ಯಾವುದೇ ತಪ್ಪು ಆಗಿಲ್ಲ. ಹೀಗಾಗಿ ಅತಿ ಶೀಘ್ರದಲ್ಲಿ ಮತ್ತೆ ಹೋಟೆಲ್‌ ತೆರೆಯಲಾಗುವುದು ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕೂಡಾ ಪೋಸ್ಟ್‌ ಹಾಕಿದ್ದರು. ಶಿವರಾತ್ರಿ ದಿನವಾದ ಮಾರ್ಚ್‌ 8ರಂದು ಮರು ಆರಂಭ ಮಾಡುವ ಬಗ್ಗೆ ಮಾತನಾಡಿದ್ದರು.

ಆದರೆ, ತನಿಖಾಧಿಕಾರಿಗಳು ಈ ಹೋಟೆಲ್‌ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ ಎಂದು ಹೇಳಿದ್ದರಿಂದ ಸದ್ಯ ಅದು ಮತ್ತೆ ತೆರೆಯುವ ಸಾಧ್ಯತೆಗಳು ಇಲ್ಲ ಎಂದು ಹೇಳಲಾಗಿತ್ತು. ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ನ್ನು ತೆಗೆದುಹಾಕಿದ್ದರು.

ಇದನ್ನೂ ಓದಿ : Rameshwaram Cafe : ರಾಮೇಶ್ವರಂ ಕೆಫೆ ಮಾಲಕಿ ದಿವ್ಯಾ ರಾಘವೇಂದ್ರ ರಾವ್‌ ಯಾರು? ಅರ್ಚಕರ ಮಗಳ ಅಡ್ವೆಂಚರ್‌!

ರಾಮೇಶ್ವರಂ ಕೆಫೆ ಎದುರು ಫ್ಲೆಕ್ಸ್‌

ಈ ನಡುವೆ, ರಾಮೇಶ್ವರಂ ಕೆಫೆನಲ್ಲಿ ರೀನೋವೇಶನ್ ಕಾರ್ಯ ಶುರುವಾಗಿದ್ದು, ಶನಿವಾರ (ಮಾರ್ಚ್‌ 9) ಬೆಳಗ್ಗೆ 6:30 ಕ್ಕೆ ಪುನಾರಂಭ ಮಾಡ್ತೇವೆ ಎಂದು ಫ್ಲೆಕ್ಸ್ ಹಾಕಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಈಗಾಗಲೇ ಇಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಕೂಡಾ ಪರಿಶೀಲನೆ ನಡೆಸಿದೆ. ನಂತರ ರಾಮೇಶ್ವರಂ ಕೆಫೆಯನ್ನು ಮಾಲೀಕರಿಗೆ ಹಸ್ತಾಂತರ ಮಾಡಿದ್ದಾರೆ. ಅದಾದ ಬಳಿಕ ಈಗ ಒಳಗಿನಿಂದ ದುರಸ್ತಿ ಮಾಡಲು ಪೊಲೀಸರು ಅನುಮತಿ ನೀಡಿದ್ದಾರೆ. ಹೀಗಾಗಿ ಮಾರ್ಚ್‌ 9ರ ಬೆಳಗ್ಗೆ 6.30ರಿಂದ ಮತ್ತೆ ಹೋಟೆಲ್‌ ತೆರೆದುಕೊಳ್ಳಲಿದೆ.

ಇನ್ನೂ ಪತ್ತೆಯಾಗದ ಸ್ಫೋಟ ಆರೋಪಿ

ಮಾರ್ಚ್‌ 1ರಂದು ಹೋಟೆಲ್‌ಗೆ ಬಂದು ಬಾಂಬ್‌ ಇಟ್ಟು ಹೋದ ದುಷ್ಕರ್ಮಿ ಆರು ದಿನವಾದರೂ ಪತ್ತೆಯಾಗಿಲ್ಲ. ಅಂದು ಬೆಳಗ್ಗೆ 11.34ಕ್ಕೆ ಟೋಪಿ ಹಾಕಿಕೊಂಡು ಹೋಟೆಲ್‌ ಪ್ರವೇಶಿಸಿದ್ದ ದುಷ್ಕರ್ಮಿ ರವಾ ಇಡ್ಲಿ ಖರೀದಿಸಿ ಅದನ್ನು ತಿಂದು ಬಾಂಬ್‌ನ್ನು ಇಟ್ಟು 11.43ಕ್ಕೆ ಹೋಟೆಲ್‌ನಿಂದ ಹೊರಬಿದ್ದಿದ್ದ. ಬಳಿಕ ಆತ ಎಲ್ಲಿ ಹೋಗಿದ್ದಾನೆ ಎಂಬ ಬಗ್ಗೆ ಎಲ್ಲೂ ದಾಖಲೆಗಳು ಇದುವರೆಗೆ ಸಿಕ್ಕಿಲ್ಲ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rave party: ರೇವ್ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು ಭಾಗಿ ವಿಚಾರವು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವೇಳೆ 103 ಮಂದಿ ಭಾಗಿಯಾಗಿದ್ದ 103 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಪ್ರಮುಖವಾಗಿ ನಟಿಯರಾದ ಹೇಮಾ ಮತ್ತು ಆಶಿ ರಾಯ್‌ ಇದ್ದರು. ಈಗ ಹೇಮಾ ವರದಿ ಪಾಸಿಟಿವ್‌ ಬಂದರೆ, ಆಶಿ ರಾಯ್‌ ಅವರದ್ದು ನೆಗೆಟಿವ್‌ ಬಂದಿದೆ.

VISTARANEWS.COM


on

Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಯಲ್ಲಿ (Rave party) ಕೇಸ್‌ಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಸೇವನೆ ಡ್ರಗ್ಸ್‌ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಆದರೆ, ಇನ್ನೊಬ್ಬ ನಟಿ ಆಶಿ ರಾಯ್ (Aashi Roy) ಅವರ ರಿಪೋರ್ಟ್‌ ನೆಗೆಟಿವ್‌ ಬಂದಿದೆ ಎಂದು ಹೇಳಲಾಗಿದೆ.

ರೇವ್ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು ಭಾಗಿ ವಿಚಾರವು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವೇಳೆ 103 ಮಂದಿ ಭಾಗಿಯಾಗಿದ್ದ 103 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಪ್ರಮುಖವಾಗಿ ನಟಿಯರಾದ ಹೇಮಾ ಮತ್ತು ಆಶಿ ರಾಯ್‌ ಇದ್ದರು. ಈಗ ಹೇಮಾ ವರದಿ ಪಾಸಿಟಿವ್‌ ಬಂದರೆ, ಆಶಿ ರಾಯ್‌ ಅವರದ್ದು ನೆಗೆಟಿವ್‌ ಬಂದಿದೆ.

ನಟಿ ಹೇಮಾ ಸೇವಿಸಿರೋದು ಯಾವ ಡ್ರಗ್ಸ್?

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಎಎಸ್‌ಐ ಸೇರಿ ಮೂವರ ಸಸ್ಪೆಂಡ್‌

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Continue Reading

ಪ್ರವಾಸ

makemytrip : ರೈಲು ಪ್ರಯಾಣದ ವೇಳೆ ಹೊಸತನ ತರಲು ವೈಶಿಷ್ಟ್ಯಗಳನ್ನು ಪರಿಚಯಿಸಿದ ಮೇಕ್‌ಮೈಟ್ರಿಪ್‌

makemytrip: ಮಹತ್ವದ ವೈಶಿಷ್ಟವೇನೆಂದರೆ, ಮೇಕ್‌ಮೈಟ್ರಿಪ್‌ ಟ್ರೇನ್ಸ್‌ನಲ್ಲಿ ಸೀಟ್ ಲಾಕ್‌ ಫೀಚರ್ ಅನ್ನು ಅಳವಡಿಸಲಾಗಿದ್ದು, ಶುಲ್ಕದ 25% ಪಾವತಿ ಮಾಡಿ ಕನ್ಫರ್ಮ್ಡ್‌ ಟಿಕೆಟ್ ಅನ್ನು ಪಡೆದುಕೊಳ್ಳಬಹುದು. ಉಳಿದ ಮೊತ್ತವನ್ನು ಪ್ರಯಾಣದ 24 ಗಂಟೆಗಳ ಮೊದಲು ಪಾವತಿ ಮಾಡಬಹುದಾಗಿರುತ್ತದೆ.

VISTARANEWS.COM


on

Makemytrip
Koo

ಬೆಂಗಳೂರು : ಭಾರತೀಯ ರೈಲ್ವೆಯು ದೇಶದ ಜೀವನಾಡಿಯ ರೀತಿಯಲ್ಲಿ ಕೆಲಸ ಮಾಡುತ್ತದೆ ಮತ್ತು ಇಡೀ ದೇಶದ ಉದ್ದಗಲಕ್ಕೂ ರೈಲುಗಳು ತನ್ನ ಬಾಹುಗಳನ್ನು ಚಾಚಿವೆ. ಭಾರತೀಯ ರೈಲಿನಲ್ಲಿ ಪ್ರತಿಯೊಬ್ಬರಿಗೂ ಪ್ರಯಾಣ ಅನುಭವmakemytripವನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಭಾರತದ ಪ್ರಮುಖ ಆನ್‌ಲೈನ್‌ ಟ್ರಾವೆಲ್ ಕಂಪನಿ ಮೇಕ್‌ಮೈಟ್ರಿಪ್‌ (makemytrip) ಹಲವು ತಂತ್ರಜ್ಞಾನ ಆಧರಿತ ಸೌಲಭ್ಯಗಳನ್ನು ಪರಿಚಯಿಸಿದ್ದು ಸಾಮಾನ್ಯವಾಗಿ ಎಲ್ಲರಿಗೂ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

ಬುಕಿಂಗ್ ಅನುಭವವನ್ನು ವಿವಿಧ ಹಂತಗಳನ್ನಾಗಿ ವಿಭಾಗಿಸಿದ್ದು, ಈ ಪ್ರತಿ ಹಂತದಲ್ಲೂ ಅನುಭವ ಸುಧಾರಣೆಗೆ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡಿದೆ. ಟ್ರೈನ್​ ಟಿಕೆಟ್ ಬುಕಿಂಗ್‌ನಲ್ಲಿ ಅತ್ಯಂತ ಸಾಮಾನ್ಯ ಸಮಸ್ಯೆಗಳೆಂದರೆ, ಕನ್ಫರ್ಮ್ಡ್‌ ಟಿಕೆಟ್‌ಗಳನ್ನು ಪಡೆದುಕೊಳ್ಳುವಲ್ಲಿ ಎದುರಾಗುವ ಸಮಸ್ಯೆಗಳಾಗಿವೆ. ದೃಢೀಕೃತ ಟಿಕೆಟ್‌ಗಳ ಬುಕಿಂಗ್ ವಿಂಡೋ 120 ದಿನಗಳಿಗೂ ಮೊದಲು ಆರಂಭವಾಗುತ್ತದೆ ಮತ್ತು ತುಂಬಾ ಬೇಗ ಭರ್ತಿಯಾಗುತ್ತದೆ. ಇದರಿಂದ ಪ್ರಯಾಣಿಕರಿ ವೇಟ್‌ಲಿಸ್ಟ್‌ನಲ್ಲಿ ಇರಬೇಕಾಗುತ್ತದೆ. ಇದರಿಂದ ತುಂಬಾ ಸವಾಲುಗಳು ಎದುರಾಗುತ್ತವೆ. ಅದರಲ್ಲೂ ಗ್ರೂಪ್ ಟ್ರಾವೆಲರ್‌ಗಳಿಗೆ ಟ್ರಾವೆಲ್‌ ಪ್ಲಾನ್‌ನಲ್ಲಿ ಖಾತರಿ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಮಹತ್ವದ ವೈಶಿಷ್ಟವೇನೆಂದರೆ, ಮೇಕ್‌ಮೈಟ್ರಿಪ್‌ ಟ್ರೇನ್ಸ್‌ನಲ್ಲಿ ಸೀಟ್ ಲಾಕ್‌ ಫೀಚರ್ ಅನ್ನು ಅಳವಡಿಸಲಾಗಿದ್ದು, ಶುಲ್ಕದ 25% ಪಾವತಿ ಮಾಡಿ ಕನ್ಫರ್ಮ್ಡ್‌ ಟಿಕೆಟ್ ಅನ್ನು ಪಡೆದುಕೊಳ್ಳಬಹುದು. ಉಳಿದ ಮೊತ್ತವನ್ನು ಪ್ರಯಾಣದ 24 ಗಂಟೆಗಳ ಮೊದಲು ಪಾವತಿ ಮಾಡಬಹುದಾಗಿರುತ್ತದೆ.

ಟ್ರೈನ್​ ಟಿಕೆಟ್ ಬುಕಿಂಗ್‌ನಲ್ಲಿ ಇನ್ನೊಂದು ಪ್ರಮುಖ ಸಮಸ್ಯೆಯೇನೆಂದರೆ, ನಿರ್ದಿಷ್ಟ ದಿನದಿಂದ ಕನ್ಫರ್ಮ್ಡ್‌ ಟಿಕೆಟ್‌ಗಳು ನಮಗೆ ಬೇಕಾದ ಟ್ರೇನ್‌ಗಳಲ್ಲಿ ಸಿಗುವುದಿಲ್ಲ. ಇದರಿಂದ ತುಂಬಾ ಸಮಸ್ಯೆಗಳಾಗುತ್ತವೆ. ಇದಕ್ಕಾಗಿ ಮೇಕ್‌ಮೈಟ್ರಿಪ್‌ ಈಗ ಕನೆಕ್ಟೆಡ್‌ ಟ್ರಾವೆಲ್ ವೈಶಿಷ್ಟ್ಯವನ್ನು ಪರಿಚಯಿಸಿದ್ದು, ಬಸ್ ಮತ್ತು ರೈಲು ಪ್ರಯಾಣವನ್ನು ಸುಲಭವಾಗಿ ಸಂಯೋಜನೆ ಮಾಡುತ್ತದೆ ಮತ್ತು ಲೇಓವರ್ ಸಮಯ ಮತ್ತು ಒಟ್ಟಾರೆ ಪ್ರಯಾಣ ಅವಧಿಯನ್ನು ಪರಿಗಣಿಸಿ ಹಲವು ಸಂಯೋಜನೆಗಳನ್ನು ಒದಗಿಸುತ್ತದೆ.

ಅನುಕೂಲಕರ ಹೆಜ್ಜೆ

ನಮ್ಮ ಹೊಸ ಸೌಲಭ್ಯಗಳನ್ನು ಪರಿಚಯಿಸಿದ ನಂತರದಲ್ಲಿ ಟ್ರೇನ್ ಬುಕಿಂಗ್‌ನಿಂದ ಪ್ರಯಾಣದವರೆಗೆ ಪ್ರತಿ ಹೆಜ್ಜೆಯೂ ಇನ್ನಷ್ಟು ಅನುಕೂಲಕರವಾಗಿರಲಿದೆ. ಪ್ರಯಾಣಿಕರಿಗೆ ಅಪಾರ ಆಯ್ಕೆ ಒದಗಿಸುವುದು, ಅನುಕೂಲ ಕಲ್ಪಿಸುವುದು, ಮನಃಶಾಂತಿ ಒದಗಿಸುವುದು, ಹೊಸ ಮಾನದಂಡಗಳನ್ನು ನಿಗದಿ ಮಾಡುವುದು ಇತ್ಯಾದಿಯನ್ನು ನಾವು ಇದಕ್ಕೆ ಆಧಾರವಾಗಿರಿಸಿಕೊಂಡಿದ್ದೇವೆ” ಎಂದು ಮೇಕ್‌ಮೈಟ್ರಿಪ್‌ನ ಸಹಸಂಸ್ಥಾಪಕ ಮತ್ತು ಗ್ರೂಪ್ ಸಿಇಒ ರಾಜೇಶ್ ಮ್ಯಾಗೋವ್ ಹೇಳಿದ್ದಾರೆ.

ಇದನ್ನೂ ಓದಿ: Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

ತೃಪ್ತಿಕರವಾದ ಊಟವಿಲ್ಲದೆ ಯಾವುದೇ ಪ್ರಯಾಣಕ್ಕೆ ಪೂರ್ಣ ವಿರಾಮ ಬೀಳುವುದಿಲ್ಲ. ಫುಡ್ ಇನ್ ಟ್ರೈನ್ ಸೌಲಭ್ಯದಲ್ಲಿ, ಪ್ರಯಾಣಿಕರು ವಿವಿಧ ರೆಸ್ಟೋರೆಂಟ್‌ಗಳನ್ನು ಹುಡುಕಬಹುದು. ಪ್ರಯಾಣ ಪ್ರಾರಂಭಿಸಿದ ನಂತರವೂ ತಮ್ಮ ಆಸನಗಳಿಗೆ ಆಹಾರ ವಿತರಣೆಯನ್ನು ಸುಲಭವಾಗಿ ಷೆಡ್ಯೂಲ್ ಮಾಡಬಹುದು. ಚಿಂತೆ ರಹಿತ ಪ್ರಯಾಣಕ್ಕಾಗಿ, ಬುಕಿಂಗ್ ಸ್ಥಿತಿ ಮತ್ತು ಪರ್ಸನಲೈಸ್ ಮಾಡಿದ ಪರ್ಯಾಯ ಪ್ರಯಾಣ ಶಿಫಾರಸುಗಳನ್ನು ನೀಡಲು ಪಿಎನ್‌ಆರ್‌ ಮತ್ತು ಲಭ್ಯತೆಯ ಎಚ್ಚರಿಕೆಗಳನ್ನೂ ಕೂಡಾ ಸಹ ಒದಗಿಸುತ್ತದೆ. ಟ್ರೈನ್ ಟ್ರ್ಯಾಕಿಂಗ್ ಮತ್ತು ಪ್ಲಾಟ್‌ಫಾರ್ಮ್ ಲೊಕೇಟರ್ ವೈಶಿಷ್ಟ್ಯಗಳು ರೈಲು ಪ್ರಯಾಣಿಕರಿಗೆ ಫೋನ್ ನೆಟ್‌ವರ್ಕ್ ಇಲ್ಲದಿದ್ದರೂ ಸಹ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ನೀಡುತ್ತದೆ..

Continue Reading

ಬೆಂಗಳೂರು

SRISHTI 2024: ಬೆಂಗಳೂರಿನಲ್ಲಿ ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ʼ

SRISHTI 2024: ಬೆಂಗಳೂರಿನ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ ಆಯೋಜಿಸಲಾಗಿದೆ. ಕಾರ್ಯಕ್ರಮದ ಭಾಗವಾಗಿ ಸೃಷ್ಟಿ ಪ್ರದರ್ಶನ, ಸೃಷ್ಟಿ ಇನ್ನೋವೇಟರ್‌, ಸೃಷ್ಟಿ ಪರಮ್‌ ಟ್ಯಾಲೆಂಟ್‌ ಕ್ವೆಸ್ಟ್‌ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.

VISTARANEWS.COM


on

SRISHTI 2024
Koo

ಬೆಂಗಳೂರು: ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ನಾವೀನ್ಯತೆಯ ಪ್ರತಿಭೆಗೆ ವೇದಿಕೆ ಒದಗಿಸಲು ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ (SRISHTI 2024) ಕಾರ್ಯಕ್ರಮವನ್ನು ನಗರದ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ವಿಎಸ್‌ಎಸ್‌ ಟ್ರಸ್ಟ್‌, ಎಬಿವಿಪಿ, ಯುವಕ ಸಂಘ, ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಎಐಸಿಟಿಇ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇ 24ರಂದು ಶುಕ್ರವಾರ ಸಂಜೆ 3.30ಕ್ಕೆ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿದ್ದು, ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ, ಗೌರವ ಅತಿಥಿಗಳಾಗಿ ಭಾರತದ ಮರ್ಸಿಡಿಸ್-ಬೆನ್ಜ್ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಮನು ಸಾಲೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್ ವಿದ್ಯಾಶಂಕರ್, ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಶ್ ಚೌಹಾಣ್ ಭಾಗವಹಿಸಿದ್ದರು.

ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಧ್ಯಕ್ಷ ಹಾಗೂ ASKB ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್‌ನ ಟ್ರಸ್ಟಿ ಸಿ.ಎಸ್.ಸುಂದರ್ ರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇನ್ನು ಕಾರ್ಯಕ್ರಮದ ಸಮಾರೋಪ ಸಮಾರಂಭ ಮೇ 26ರಂದು ಮಧ್ಯಾಹ್ನ 3ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಗೌರವ ಅತಿಥಿಗಳಾಗಿ NAAC ನಿರ್ದೇಶಕ ಪ್ರೊ. ಗಣೇಶನ್ ಕನ್ನಬೀರನ್, ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್, ವಿಟಿಯು ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎ.ಎಸ್. ಟಿ.ಎನ್.ಶ್ರೀನಿವಾಸ್‌, ಎಬಿವಿಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಎಸ್. ಬಾಲಕೃಷ್ಣ, ಎಟ್ರಿಯಾ ಎಜುಕೇಶನ್‌ನ ನಿರ್ದೇಶಕ ಕೌಶಿಕ್ ರಾಜು ಉಪಸ್ಥಿತರಿರಲಿದ್ದಾರೆ. ASKB ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್‌ನ ಟ್ರಸ್ಟಿ ಕೆ.ನಾಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ.

ವಿಎಸ್ಎಸ್ ಟ್ರಸ್ಟ್ ಕಾರ್ಯದರ್ಶಿ ಡಾ.ಡಿ.ಎಸ್.ಕೃಷ್ಣ, ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲ ಡಾ. ರಾಜೇಶ್‌. ಎಸ್, ಎಬಿವಿಪಿ ಕರ್ನಾಟಕ ಉತ್ತರ ರಾಜ್ಯಾಧ್ಯಕ್ಷ ಡಾ.ಆನಂದ ಹೊಸೂರು, ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ, ಯುವಕ ಸಂಘದ ಅಧ್ಯಕ್ಷ ಡಾ. ಟಿ.ವಿ. ರಾಜು, ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಉಪ ಪ್ರಾಂಶುಪಾಲೆ ಡಾ. ನಳಿನಾಕ್ಷಿ. ಎನ್., ಎಬಿವಿಪಿ ಕರ್ನಾಟಕ ದಕ್ಷಿಣದ ಅಧ್ಯಕ್ಷ ಡಾ. ಸತೀಶ್.ಎಚ್.ಕೆ, ರಾಜ್ಯ ಕಾರ್ಯದರ್ಶಿ ಪ್ರವೀಣ್. ಎಚ್.ಕೆ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಸೃಷ್ಟಿ-2024 ಭಾಗವಾಗಿ ವಿವಿಧ ಕಾರ್ಯಕ್ರಮ

ʼಸೃಷ್ಟಿ 2024ʼ, ಉತ್ಸಾಹಿ ವಿದ್ಯಾರ್ಥಿಗಳು ಮತ್ತು ಉದಯೋನ್ಮುಖ ವಿಜ್ಞಾನಿಗಳನ್ನು ರಚಿಸಲು ಮತ್ತು ಮುಕ್ತ ಉದ್ಯಮಶೀಲತೆಯ ಮಾರ್ಗಗಳ ಬಗ್ಗೆ ಒಳನೋಟ ನೀಡಲು ವೇದಿಕೆ ಒದಗಿಸಲಿದೆ. ಸೃಷ್ಟಿಯು ಸಂವಹನವನ್ನು ಅಭಿವೃದ್ಧಿಪಡಿಸುವ ಮತ್ತು ಉದ್ಯಮ ಮತ್ತು ಸಂಸ್ಥೆಗಳ ನಡುವಿನ ಸಮಕಾಲೀನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನವಾಗಿದೆ. ಐಐಎಸ್ಸಿ, ಐಐಟಿ, ಎನ್ಐಟಿ ಮತ್ತು ಇತರ ಪ್ರತಿಷ್ಠಿತ ಟೆಕ್ ಸಂಸ್ಥೆಗಳ ಬೋಧಕರನ್ನು ಒಳಗೊಂಡ ತಾಂತ್ರಿಕ ಸಮಿತಿಯು, ಪರಿಶೀಲನೆಯ ನಂತರ ಪ್ರತಿವರ್ಷ ಕರ್ನಾಟಕದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳ ನೂರಾರು ಉತ್ಸಾಹಿ ವಿದ್ಯಾರ್ಥಿಗಳು ಪ್ರಾಜೆಕ್ಟ್ ಎಕ್ಸಿಬಿಷನ್ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ ಭಾಗವಾಗಿ ಸೃಷ್ಟಿ ಪ್ರದರ್ಶನ, ಸೃಷ್ಟಿ ಇನ್ನೋವೇಟರ್‌, ಸೃಷ್ಟಿ ಪರಮ್‌ ಟ್ಯಾಲೆಂಟ್‌ ಕ್ವೆಸ್ಟ್‌ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.

Continue Reading

ರಾಜಕೀಯ

CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧರಿದ್ದೇವೆ. ಆದರೆ, ಲೋಕಸಭಾ ಚುನಾವಣೆ ಫಲಿತಾಂಶ ಬರಬೇಕಿದೆ ಎಂದ ಸಿಎಂ ಸಿದ್ದರಾಮಯ್ಯ, ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದ್ದಾರೆ.

VISTARANEWS.COM


on

We are ready for taluk and zilla panchayat and BBMP elections Says CM Siddaramaiah
Koo

ಮೈಸೂರು: ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ (Taluk and Zilla panchayat Election) ಹಾಗೂ ಬಿಬಿಎಂಪಿ ಚುನಾವಣೆಯನ್ನು (BBMP Election) ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಹೀಗೆ ಉತ್ತರಿಸಿದರು.

ಕ್ಷೇತ್ರ ಪುನರ್ವಿಂಗಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದರು.

ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ

ಈ ಬಾರಿ ಡಾ. ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆ ನಡೆಯುತ್ತಿರುವುದರ ಬಗ್ಗೆ ಮಾಧ್ಯಮದವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್‌ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದು ಹೇಳಿದರು.

ಪ್ರಕರಣ ದುರ್ಬಲಗೊಳಿಸಲು ಹೇಳಿಕೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೊ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌ಡಿಕೆ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ, ಆರೋಪಿ ಅಷ್ಟೇ ಎಂದಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ನಂಬಿರುವುದು ನಿಮ್ಮ ತಪ್ಪು

ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಇನ್ನು ಎಲ್ಲರಿಗೂ ಪ್ರಧಾನ ಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನೀವೆಲ್ಲ ನಂಬಿರುವುದೇ ನಿಮ್ಮ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ಚುನಾಯಿತ ಸರ್ಕಾರದ ಮುಖ್ಯಮಂತ್ರಿಯೊಬ್ಬರು ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರನ್ನು ಪ್ರಶ್ನಿಸಿ

ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ಪಾಸ್‌ಪೋರ್ಟ್‌ ರದ್ದತಿ ವಿಚಾರವಾಗಿ ವಿಳಂಬ ಧೋರಣೆಯನ್ನು ಅನುಸರಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಪ್ರಶ್ನೆಯನ್ನು ಬಿಜೆಪಿಯ ಪ್ರಲ್ಹಾದ್‌ ಜೋಶಿ ಅವರನ್ನು ಕೇಳಿ ಎಂದರು.

ಮನೆಯವರಿಗೆ ಹೇಳದೆ ವಿದೇಶಕ್ಕೆ ತೆರಳಿದರೇ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರಿಗೆ ಪತ್ರ ಬರೆದು ಶರಣಾಗಬೇಕು. ಇಲ್ಲದಿದ್ದರೆ ಒಬ್ಬಂಟಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೊರಟು ಹೋಗಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಪ್ರಚಾರಕ್ಕೆ ಏಕೆ ಹೋಗಿದ್ದರು?

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಏನು? ಇದು ಸಂಪರ್ಕವೋ? ಅಲ್ಲವೋ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ

ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ಐಟಿಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್ಐಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದು ಹೇಳಿದರು.

ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Continue Reading
Advertisement
Teacher
ವಿದೇಶ19 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ29 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ35 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ44 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ45 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ46 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

RBI Dividend
ದೇಶ58 mins ago

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

kamal haasan starrer Indian 2 movie released worldwide on July 12
ಸಿನಿಮಾ60 mins ago

Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

Makemytrip
ಪ್ರವಾಸ1 hour ago

makemytrip : ರೈಲು ಪ್ರಯಾಣದ ವೇಳೆ ಹೊಸತನ ತರಲು ವೈಶಿಷ್ಟ್ಯಗಳನ್ನು ಪರಿಚಯಿಸಿದ ಮೇಕ್‌ಮೈಟ್ರಿಪ್‌

SRISHTI 2024
ಬೆಂಗಳೂರು1 hour ago

SRISHTI 2024: ಬೆಂಗಳೂರಿನಲ್ಲಿ ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ʼ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌