Science City : ಬೆಂಗಳೂರು ವಿಮಾನ ನಿಲ್ದಾಣದ ಬಳಿ ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ - Vistara News

ವಿಜ್ಞಾನ

Science City : ಬೆಂಗಳೂರು ವಿಮಾನ ನಿಲ್ದಾಣದ ಬಳಿ ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ

Science City : ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರವನ್ನು ಬೆಂಗಳೂರಿನ ಹೊರವಲಯದಲ್ಲಿ ಸ್ಥಾಪಿಸಲಾಗುತ್ತಿದ್ದು, 25 ಎಕರೆ ಜಾಗವನ್ನು ಸರ್ಕಾರ ನಿಗದಿಪಡಿಸಿದೆ.

VISTARANEWS.COM


on

Science city
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರಕ್ಕೆ (Science City) ಅಗತ್ಯವಿದ್ದ 25 ಎಕರೆ ಜಾಗವನ್ನು ದೇವನಹಳ್ಳಿ ವಿಮಾನ ನಿಲ್ದಾಣ (Bangalore Airport) ಸಮೀಪದ ಆದಿನಾರಾಯಣ ಹೊಸಹಳ್ಳಿ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಭೋಸರಾಜು (Minister NS Bhosraju) ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ದೇಶದಲ್ಲಿ ಪ್ರಸ್ತುತ 3 ವಿಜ್ಞಾನ ನಗರಗಳಿವೆ. ಅದರಲ್ಲಿ ಪ್ರಮುಖವಾಗಿರುವುದು ಕೋಲ್ಕತ್ತಾ ನಗರದಲ್ಲಿದೆ. ದಕ್ಷಿಣ ಭಾರತದಲ್ಲಿ ಬೆಂಗಳೂರು ಪ್ರಮುಖ ನಗರವಾಗಿದ್ದು, ಭಾರತೀಯ ವಿಜ್ಞಾನ ಮಂದಿರ, ಜೆ.ಎನ್.ಸಿ.ಎ.ಎಸ್.ಆರ್‌, ರಾಮನ್‌ ಸಂಶೋಧನಾ ಸಂಸ್ಥೆ, 400ಕ್ಕೂ ಅಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು, ಐಟಿ-ಬಿಟಿ ಪಾರ್ಕ್‌ಗಳಿವೆ. ವಿಜ್ಞಾನ ನಗರ ಸ್ಥಾಪನೆಗೆ ಬೆಂಗಳೂರು ಸೂಕ್ತ ಎನ್ನುವ ಪ್ರಸ್ತಾವನೆಯನ್ನು ಆಗಸ್ಟ್‌ 3, 2023ರಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ. ಕಿಶನ್‌ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿತ್ತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಕೇಂದ್ರ ಸಚಿವರು ವಿಜ್ಞಾನ ನಗರ ಸ್ಥಾಪನೆಗೆ ಮೂಲಭೂತವಾಗಿ 25 ಎಕರೆ ಜಾಗದ ಅಗತ್ಯತೆಯನ್ನು ತಿಳಿಸಿದ್ದರು. ಮುಖ್ಯಮಂತ್ರಿಗಳು ತಮ್ಮ 2024-25ನೇ ಆಯವ್ಯಯದಲ್ಲಿ ಈ ಬಗ್ಗೆ ಘೋಷಣೆ ಮಾಡಿ ಅಗತ್ಯ ಭೂಮಿಯನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದ್ದರು. ಈ ಭರವಸೆ ಹಾಗೂ ನಮ್ಮ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳ ಪ್ರಯತ್ನದಿಂದಾಗಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಜಾಗವನ್ನು ಗುರುತಿಸಲಾಗಿದೆ.

ಇದನ್ನೂ ಓದಿ : Raja Marga Column : ಬ್ರಿಟಿಷ್ ವಿಜ್ಞಾನಿಗಳು ವಿಷ ಎಂದು ಕೊಟ್ಟ ದ್ರಾವಣವನ್ನು ಆ ವಿಜ್ಞಾನಿ ಗಟಗಟ ಕುಡಿದಿದ್ದರು!

ಇದು ಕೋಲ್ಕೋತಾದ ವಿಜ್ಞಾನ ನಗರದ ವಿಡಿಯೊ

ಜಾಗದ ಲಭ್ಯತೆಯ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ದಕ್ಷಿಣ ಭಾರತದಲ್ಲೆ ಮೊದಲ ಹಾಗೂ ಅತ್ಯುತ್ತಮ ವಿಜ್ಞಾನ ನಗರ ಸ್ಥಾಪನೆ ಆಗಲಿದೆ ಎಂದು ಸಚಿವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Isha Ambani
Koo

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

Continue Reading

ವಿದೇಶ

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sunita Williams:ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದ್ದು, “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿತ್ತು.

ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿತ್ತು. ಆದರೆ ಇನ್ನು ಒಂದೆರಡು ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ದಿನಾಂಕವವನ್ನು ಏ.17ಕ್ಕೆ ಮುಂದೂಡಲಾಗಿದೆ. ಏಪ್ರಿಲ್‌ 17ರಂದು ಸಂಜೆ 6.16ಕ್ಕೆ ಬಾಹ್ಯಾಕಾಶ ನೌಕೆ ಉಡಾವಣೆಯಾಗಲಿದೆ ಎಂದು ಇದೀಗ ನಾಸಾ ಮತ್ತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದನ್ನೂ ಓದಿ:Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading

ವಿಜ್ಞಾನ

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಇಲಿಗಳ ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ ಅಂಶವನ್ನು ಚೀನಾದ ವಿಜ್ಞಾನಿಗಳು (Chinese Scientists) ಪತ್ತೆ ಮಾಡಿದ್ದು, ಇದು ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎಂದು ಹೇಳಿದ್ದಾರೆ. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Chinese Scientists
Koo

ಚೀನಾದ ವಿಜ್ಞಾನಿಗಳು (Chinese Scientists) ಇಲಿಗಳ (mouse) ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ (anti-ageing) ಅಂಶವನ್ನು ಪತ್ತೆ ಮಾಡಿರುವುದಾಗಿ ಹೇಳಿದ್ದು, ಅವರ ಸಂಶೋಧನೆಯ ಪ್ರಕಾರ ಇಲಿಯು 1,266 ದಿನಗಳವರೆಗೆ ಜೀವಿಸುತ್ತದೆ. ಇಲಿಗಳಲ್ಲಿರುವ ವಯಸ್ಸನ್ನು ನಿಯಂತ್ರಿಸುವ ಗುಣವನ್ನು ಮಾನವನ ದೇಹಕ್ಕೆ ಸೇರಿಸಿದರೆ ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎನ್ನುತ್ತಾರೆ ಅವರು.

ನೇಚರ್ ಏಜಿಂಗ್ ಜರ್ನಲ್‌ನಲ್ಲಿ ಪ್ರಕಟವಾದ ಪೀರ್-ರಿವ್ಯೂಡ್ ಅಧ್ಯಯನದ ಪ್ರಕಾರ, 840 ದಿನಗಳ ಸರಾಸರಿ ಜೀವಿತಾವಧಿ ಹೊಂದಿರುವ 20 ತಿಂಗಳ ವಯಸ್ಸಿನ ಗಂಡು ಇಲಿಗಳು ವಯಸ್ಸನ್ನು ನಿಯಂತ್ರಿಸುವ ರಕ್ತದ ಅಂಶದ ಸಾಪ್ತಾಹಿಕ ಚುಚ್ಚುಮದ್ದನ್ನು ಸ್ವೀಕರಿಸಿದವು. 1,031 ದಿನಗಳ ಸರಾಸರಿ ಶೇ. 22.7ರಷ್ಟು ಏರಿಕೆಯಾಗಿದೆ ಎಂದು ಸಂಶೋಧಕರು ವರದಿ ಮಾಡಿದ್ದಾರೆ.

ಅಧ್ಯಯನದ ಸಹ-ಮುಖ್ಯಸ್ಥ ಜಾಂಗ್ ಚೆನ್ಯು ಪ್ರಕಾರ, ಚುಚ್ಚುಮದ್ದುಗಳು ಹಳೆಯ ಇಲಿಗಳಲ್ಲಿ ವಯಸ್ಸಿಗೆ ಸಂಬಂಧಿಸಿದ ಕ್ರಿಯಾತ್ಮಕ ಕ್ಷೀಣಿಸುವಿಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಅಭಿವೃದ್ಧಿಗೆ ಸಹಾಯಕ

ಈ ಚಿಕಿತ್ಸೆಯನ್ನು ಎಂದಾದರೂ ಪ್ರಾರಂಭಿಸಿದರೆ ಅದನ್ನು ಔಷಧಗಳ ಮೂಲಕ ನೀಡಲಾಗುತ್ತದೆ ಮತ್ತು ನೇರ ಪ್ಲಾಸ್ಮಾ ವಿನಿಮಯದ ಮೂಲಕ ಅಲ್ಲ ಎಂದವರು ಸ್ಪಷ್ಟಪಡಿಸಿದರು. ಇದು ಸುಲಭವಾದ ಉದ್ದೇಶಿತ ಚಿಕಿತ್ಸೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದರು.

ಚೀನೀ ತಂಡದ ಪ್ರಕಾರ, ಈ ಅಧ್ಯಯನವು ಏಳು ವರ್ಷಗಳ ಕಾಲ ನಡೆದಿದೆ. ನೂರಾರು ಇಲಿಗಳಿಂದ ಡೇಟಾವನ್ನು ಸಂಗ್ರಹಿಸಲಾಗಿದೆ. ಸಂಶೋಧಕರ ಪ್ರಕಾರ, ಎಲ್ಲಾ ಜೀವಕೋಶದ ಪ್ರಕಾರಗಳಿಂದ ಸಕ್ರಿಯವಾಗಿ ಬಿಡುಗಡೆಯಾಗುವ ಮತ್ತು ರಕ್ತ ಸೇರಿದಂತೆ ಅನೇಕ ದೈಹಿಕ ದ್ರವಗಳಲ್ಲಿ ಕಂಡುಬರುವ ಸಣ್ಣ ಬಾಹ್ಯಕೋಶೀಯ ಕೋಶಕಗಳು ( (sEV), ವಯಸ್ಸಾದ ಇಲಿಗಳಲ್ಲಿನ ವಯಸ್ಸಿಗೆ ಸಂಬಂಧಿಸಿದ ಕ್ಷೀಣಗೊಳ್ಳುವ ಬದಲಾವಣೆಗಳನ್ನು ಸರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಸಣ್ಣ ಬಾಹ್ಯಕೋಶೀಯ ಕೋಶಕಗಳು ಜೀವಕೋಶಗಳಾದ್ಯಂತ ನ್ಯೂಕ್ಲಿಯಿಕ್ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಸಾಗಿಸುತ್ತವೆ. ಇದು ಮಾಹಿತಿ ಪ್ರಸರಣವನ್ನು ಸಕ್ರಿಯಗೊಳ್ಳುತ್ತದೆ. ಈ ಪ್ರಕ್ರಿಯೆಯನ್ನು ಗುರುತಿಸುವ ಮತ್ತು ಬಳಸುವ ಮೂಲಕ ಪ್ರಾಣಿಗಳ ಮೇಲಿನ ಹಿಂದಿನ ಅಧ್ಯಯನಗಳಿಗಿಂತ ಹೆಚ್ಚಿನ ಬದುಕುಳಿಯುವ ಅವಧಿಗಳನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳವಾದರೆ ವಿಶ್ವ ದಾಖಲೆಯಾಗುವುದು ಎಂದು ಹೇಳಿರುವ ಚೆನ್, ಸಂಶೋಧನೆಯು ಕೇವಲ ಪ್ರಾರಂಭವಾಗಿದೆ. ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಮೌಲ್ಯಮಾಪನ ಮಾಡುವ ಮೊದಲು ಮತ್ತು ಔಷಧವಾಗಿ ಅಭಿವೃದ್ಧಿಪಡಿಸುವ ಮೊದಲು ಇನ್ನೂ ಅನೇಕ ವೈಜ್ಞಾನಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಯಾವುದೇ ನಿರೀಕ್ಷಿತ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸುವ ಮೊದಲು ಮಾನವರಿಗೆ ಹೆಚ್ಚು ಹೋಲುವ ದೊಡ್ಡ ಸಸ್ತನಿಗಳಲ್ಲಿ ಪ್ರಯೋಗಗಳನ್ನು ನಡೆಸಬೇಕು ಎಂದು ಹೇಳಿದರು

Continue Reading

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading
Advertisement
Food Tips Kannada
ಆರೋಗ್ಯ26 mins ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ1 hour ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ6 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ6 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ7 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು7 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ7 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ7 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ10 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ24 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌