Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಒಡೆಯರ್?‌ ಹೈಕಮಾಂಡ್‌ ಮಟ್ಟದಲ್ಲಿ ಭಾರಿ ಚರ್ಚೆ! - Vistara News

ಮೈಸೂರು

Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಒಡೆಯರ್?‌ ಹೈಕಮಾಂಡ್‌ ಮಟ್ಟದಲ್ಲಿ ಭಾರಿ ಚರ್ಚೆ!

Lok Sabha Election 2024: ಮೈಸೂರು ಕ್ಷೇತ್ರಕ್ಕೆ ಹೊಸ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಪ್ರತಾಪ್ ಸಿಂಹ ಹೆಸರಿನ ಜತೆಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಹೆಸರು ಮುಂಚೂಣಿಗೆ ಬಂದಿದೆ. ಅವರನ್ನು ರಾಜಕೀಯಕ್ಕೆ ಕರೆತರಲು ಬಿಜೆಪಿ ಆಲೋಚನೆ ಮಾಡುತ್ತಿದೆ.

VISTARANEWS.COM


on

Lok Sabha Elections 2024 Yaduveer Wodeyar likely to contest as BJP candidate from Mysuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಗಳು ನಡೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗ 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತಿದೆ. ಈ ಸಂಬಂಧ ಈಗ ರಾಜ್ಯ ಬಿಜೆಪಿ ನಾಯಕರ ಜತೆ ಹೈಕಮಾಂಡ್‌ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸುತ್ತಿದೆ. ಅಭ್ಯರ್ಥಿಗಳನ್ನು ಫೈನಲ್‌ ಮಾಡುವ ನಿಟ್ಟಿನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಇನ್ನು ಬಹು ಕುತೂಹಲಕಾರಿ ಕ್ಷೇತ್ರವಾಗಿರುವ ಕೊಡಗು – ಮೈಸೂರು ಲೋಕಸಭಾ ಕ್ಷೇತ್ರಕ್ಕೆ (Kodagu Mysore Lok Sabha constituency) ಪ್ರತಾಪ್‌ ಸಿಂಹ (Pratap Simha) ಜತೆಗೆ ಇನ್ನೊಂದು ಹೆಸರು ಕೇಳಿಬಂದಿದೆ. ಸಿಂಹ ಅವರ ಬದಲಾಗಿ ಯದುವೀರ್‌ ಒಡೆಯರ್‌ (Yaduveer Krishnadatta Chamaraja Wadiyar) ಅವರನ್ನು ಕಣಕ್ಕಿಳಿಸಿದರೆ ಹೇಗೆ? ಎಂಬ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಮೈಸೂರು ಕ್ಷೇತ್ರಕ್ಕೆ ಹೊಸ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಪ್ರತಾಪ್ ಸಿಂಹ ಹೆಸರಿನ ಜತೆಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಹೆಸರು ಮುಂಚೂಣಿಗೆ ಬಂದಿದೆ. ಅವರನ್ನು ರಾಜಕೀಯಕ್ಕೆ ಕರೆತರಲು ಬಿಜೆಪಿ ಆಲೋಚನೆ ಮಾಡುತ್ತಿದೆ.

ಸಭೆಯಲ್ಲಿ ಬುಧವಾರ ಚರ್ಚೆ

ಶತಾಯಗತಾಯ ಮೈಸೂರು ಕ್ಷೇತ್ರಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಲು ಕಸರತ್ತು ಮಾಡಲಾಗುತ್ತಿದೆ. ಈ ಮೂಲಕ ಹೊಸ ಮುಖವನ್ನು ಪರಿಚಯಿಸಿದಂತಾಗುತ್ತದೆ ಎಂಬ ನಿಟ್ಟಿನಲ್ಲಿ ಯಧುವೀರ್ ಹೆಸರು ಬುಧವಾರ ನಡೆದ ಸಭೆಯಲ್ಲಿ ಚರ್ಚೆಗೆ ಬಂದಿದೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಿಟ್ಟರೆ ಇವರೇ ಸೂಕ್ತ ಅಭ್ಯರ್ಥಿ ಎಂದು ಮಾತುಕತೆಯನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರತಾಪ್‌ ಸಿಂಹ ಬಗ್ಗೆ ಬಿಜೆಪಿಯಲ್ಲೇ ವಿರೋಧ?

ಪ್ರತಾಪ್ ಸಿಂಹಗೆ ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರ ವಿರೋಧ ಇದೆ ಎನ್ನಲಾಗುತ್ತಿದೆ. ಪಕ್ಷದಲ್ಲೇ ಪ್ರತಾಪ್‌ ಸಿಂಹ ಅವರಿಗೆ ಹೆಚ್ಚು ವಿರೋಧ ವ್ಯಕ್ತವಾಗಿದ್ದು, ಸಮುದಾಯ ಸಹ ನಿಲ್ಲುವುದು ಅನುಮಾನ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಯೋಗ ಮಾಡಬಹುದು ಎಂದ ಬಿಜೆಪಿ ನಾಯಕರು ಅಭಿಪ್ರಾಯಕ್ಕೆ ಬಂದಿದ್ದಾರೆ. ಅಲ್ಲದೆ, ಒಡೆಯರ್‌ಗೆ ಮೈಸೂರು ಟಿಕೆಟ್ ನೀಡಿದರೆ ಮಂಡ್ಯ, ಚಾಮರಾಜನಗರದಲ್ಲೂ ಬಿಜೆಪಿಗೆ ಲಾಭವಾಗಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಹೀಗಾಗಿ ಈ ನಿರ್ಧಾರವನ್ನು ಕೈಗೊಂಡರೆ ಹಳೇ ಮೈಸೂರು ಭಾಗದಲ್ಲೂ ಪ್ಲಸ್ ಎಂಬ ಲೆಕ್ಕಾಚಾರಕ್ಕೆ ಬಿಜೆಪಿ ಬಂದಿದೆ.

ಇದನ್ನೂ ಓದಿ: Vidhana Soudha: ವಿಧಾನಸೌಧದಲ್ಲಿನ್ನು ಪ್ರತಿಯೊಬ್ಬರ ಫೇಸ್‌ ರೀಡ್‌; ಸಂಸತ್‌ ಮಾದರಿ ಭದ್ರತೆ!

ಯುದುವೀರ್‌ ಒಡೆಯರ್‌ಗೆ ಗಾಳ ಹಾಕಲು ಸಿಎಂ ಯತ್ನ!

ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಯತ್ನ ನಡೆಸಿ ಈ ಹಿಂದೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದೆ ಎನ್ನಲಾಗಿದೆ. ಆ ವೇಳೆ ಯದುವೀರ್‌ ಸಹ ರಾಜಕೀಯಕ್ಕೆ ಬರಲು ಉತ್ಸಾಹ ತೋರಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೇ ಪ್ಲಸ್‌ ಆಗಿ ಇಟ್ಟುಕೊಂಡಿರುವ ಸಿಎಂ ಸಿದ್ದರಾಮಯ್ಯ, ಅಗತ್ಯ ಬಿದ್ದರೆ ಅವರನ್ನು ಮೈಸೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದರೆ ಹೇಗೆ ಎಂಬ ಲೆಕ್ಕಾಚಾರವನ್ನು ಮಾಡಿದ್ದಾರೆ ಎನ್ನಲಾಗಿದೆ. ಅಗತ್ಯಬಿದ್ದರೆ ತಾವೇ ಯದುವೀರ್‌ ಅವರ ಜತೆಗೆ ಮಾತನಾಡುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಬಿಜೆಪಿ ತನ್ನ ರಾಜಕೀಯ ತಂತ್ರಗಾರಿಕೆಯನ್ನು ಶುರು ಮಾಡಿದ್ದು, ಯಾರಿಗೆ ಟಿಕೆಟ್‌ ಕೊಡಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಹುಣಸೂರು ಹಾಗೂ ದಾವಣಗೆರೆಯ ಚನ್ನಗಿರಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accident) ಇಬ್ಬರು ಮೃತಪಟ್ಟಿದ್ದಾರೆ. ಚನ್ನಗಿರಿಯಲ್ಲಿ ಸ್ಥಳಿಯರು ರಸ್ತೆ ತಡೆ ನಡೆಸಿದ್ದಾರೆ.

VISTARANEWS.COM


on

hunsur road accident
Koo

ಮೈಸೂರು: ಹುಣಸೂರು ತಾಲೂಕಿನ (Mysore news) ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ (Road Accident) ಬೈಕ್‌ ಸವಾರರೊಬ್ಬರು (Bike rider) ಸಾವಿಗೀಡಾಗಿದ್ದಾರೆ ಎರಡು ಬಸ್, ಎರಡು ಕಾರುಗಳಿಗೆ ಜಖಂ ಆಗಿದೆ.

ಮೈಸೂರು- ಬಂಟ್ವಾಳ ಹೆದ್ದಾರಿ- 275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದೆ. ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇಟ್ ಭೈರಪ್ಪ ಪುತ್ರ, ಕೂಲಿ ಕಾರ್ಮಿಕ ಕರಿಯಪ್ಪ (40) ಮೃತರು. ಗ್ರಾಮದ ಹಬ್ಬ ಮುಗಿಸಿ ವಾಪಸ್ ಆಗುವ ವೇಳೆ ನಡೆದ ಅವಘಡದಲ್ಲಿ ಕರಿಯಪ್ಪ ಸ್ಥಳದಲ್ಲೇ ಸಾವಿಗೀಡಾದರು. ಸರಣಿ ಅಪಘಾತದಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ಜಖಂ ಆಗಿದ್ದು, ಕೆಲವರಿಗೆ ತರಚಿದ ಗಾಯಗಳಾಗಿವೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಪಾದಚಾರಿ ಮೃತ್ಯು, ಸ್ಥಳಿಯರಿಂದ ರಸ್ತೆ ತಡೆ

ದಾವಣಗೆರೆ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ (Car hit) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. (Davanagere news) ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ರಾಜೇಶ್ (45) ಮೃತ ದುರ್ದೈವಿ.

davanagere road accident

ದಾವಣಗೆರೆ ಹಾಗೂ ಬೀರೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ರಾಜ್ಯ ಹೆದ್ದಾರಿ ಇದ್ದರೂ ಗ್ರಾಮದಲ್ಲಿ ಸ್ಪೀಡ್ ಬ್ರೇಕರ್ಸ್( ಹಂಪ್ಸ್) ಗಳನ್ನು ಹಾಕದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣಹಾನಿ ಆಗಿದೆ ಎಂದು ಸಿಟ್ಟಿಗೆದ್ದಿರುವ ಜನರು, ರಸ್ತೆ ತಡೆ ನಡೆಸಿ ಸಾವಿಗೆ ನ್ಯಾಯ ಒದಗಿಸಿ ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲೇ ನೂರಾರು ಜನರ ಜಮಾವಣೆಯಾಗಿದ್ದು, ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಲಾರಿ ಟಯರ್‌ ಸ್ಫೋಟ, ಬೆಂಕಿಗೆ ತುತ್ತು

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ (divider) ಗುದ್ದಿದ ಲಾರಿ ಪಲ್ಟಿಯಾಗಿ ಬೆಂಕಿಗೆ ತುತ್ತಾಗಿ ಭಸ್ಮವಾಗಿದೆ. (Vijayanagar news) ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ (national highway) 50ರ ಕಮಲಾಪೂರ ಕ್ರಾಸ್ ಬಳಿ ಅಪಘಾತ ನಡೆದಿದೆ.

vijayanagara road accident

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಗೆ ಬರುತ್ತಿದ್ದ ಲಾರಿಯ ಚಕ್ರಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿವೆ. ಸ್ಪೋಟವಾಗಿ ಡಿವೈಡರ್‌ಗೆ ಗುದ್ದಿದ ಪರಿಣಾಮ ಲಾರಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಲಾರಿ ಡ್ರೈವರ್, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಮಲಾಪುರ ಬಳಿ ಘಟನೆಯಿಂದಾಗಿ ಟ್ರಾಫಿಕ್‌ ಜಾಮ್ ಆಗಿದ್ದು, ಘಟನಾ ಸ್ಥಳಕ್ಕೆ NH ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Continue Reading

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ ಕಚೇರಿನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading

ಕರ್ನಾಟಕ

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

MLC Election: ಜೆಡಿಎಸ್‌ನ ವಿವೇಕಾನಂದ.ಕೆ ಅವರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಇದೀಗ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

VISTARANEWS.COM


on

MLC Election
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರು ಜೆಡಿಎಸ್ ವರಿಷ್ಠರಾದ ಎಚ್. ಡಿ. ದೇವೇಗೌಡ ಅವರಿಂದ ಬಿ ಫಾರಂ ಪಡೆದರು.
Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ‌.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.

ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

ಜೆಡಿಎಸ್‌ನಲ್ಲೂ ಬಂಡಾಯ?

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್‌ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Continue Reading
Advertisement
KEA Department of Technical Education Director Prasanna has been appointed as the Executive Director of KEA
ಬೆಂಗಳೂರು15 mins ago

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

Udupi
ಕರ್ನಾಟಕ16 mins ago

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

UPI in Healthcare
ಆರೋಗ್ಯ18 mins ago

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

Sri Vedavyasa Jayanti Madhva Raddhanta Samvardhak Sabha 81st session at Bengaluru
ಬೆಂಗಳೂರು24 mins ago

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

CAA
ದೇಶ41 mins ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ45 mins ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Pushpa 2
ಪ್ರಮುಖ ಸುದ್ದಿ51 mins ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ1 hour ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ2 hours ago

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು8 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌