Fraud Case : ಬ್ರಾಂಡೆಡ್‌ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಪೌಡರ್‌ಗಳ ಮಾರಾಟ! ಕಳ್ಳಾಟ ಬಯಲು ಮಾಡಿದ ಪೊಲೀಸರು - Vistara News

ಬೆಂಗಳೂರು

Fraud Case : ಬ್ರಾಂಡೆಡ್‌ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಪೌಡರ್‌ಗಳ ಮಾರಾಟ! ಕಳ್ಳಾಟ ಬಯಲು ಮಾಡಿದ ಪೊಲೀಸರು

Fake Detergent Powder : ಬ್ರಾಂಡೆಡ್‌ ಪ್ಯಾಕಿನಲ್ಲಿ ನಕಲಿ ಡಿಟರ್ಜೆಂಟ್ ಪುಡಿ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.

VISTARANEWS.COM


on

Sale of fake detergent powders in branded name! Police expose theft
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರುಕಟ್ಟೆಯಲ್ಲಿ ಈಗಂತೂ ತರಹೇವಾರಿ ಡಿಟರ್ಜೆಂಟ್‌ ಪೌಡರ್‌ಗಳು ಲಭ್ಯವಿದೆ. ಅಸಲಿ ಪೌಡರ್‌ಗಳಿಗೂ ಸೆಡ್ಡು ಹೊಡೆಯುವ ನಕಲಿ ಡಿಟರ್ಜೆಂಟ್‌ ಪೌಡರ್‌ (Fake Detergent Powder) ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಠಾಣೆಗೆ ಬಂದ ದೂರನ್ನು ಬೆನ್ನತ್ತಿದ್ದ ಪೊಲೀಸರಿಗೆ ನಕಲಿ ಉತ್ಪನ್ನಗಳ ತಯಾರಿಕಾ ಜಾಲದ ಕಳ್ಳಾಟ (Fraud Case) ಬಯಲಾಗಿದೆ.

ಲ್ಯಾಕ್ಮೆ, ಪಾಂಡ್ಸ್ , ವೀಲ್ ವಾಷಿಂಗ್ ಪೌಡರ್, ಸರ್ಫ್ ಎಕ್ಸೆಲ್, ಡೌ, ರೆಡ್ ಲೇಬಲ್ ಇವೆಲ್ಲ ಹಿಂದೂಸ್ತಾನ್ ಯುನಿಲಿವೆರ್ ಲಿಮಿಟೆಡ್ ಪರವಾನಗಿ ಹೊಂದಿರುವ ಉತ್ಪನ್ನಗಳಾಗಿವೆ. ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿ ವ್ಯಕ್ತಿಯೊಬ್ಬ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ. ನಕಲಿ ವಸ್ತುಗಳ ಮಾರಾಟವನ್ನು ಉದ್ಯೋಗಿ ಪಾನಿಕುಮಾರ್ ಎಂಬುವವರು ಗಮನಿಸಿದ್ದರು.

ಮಲ್ಲೇಶ್ವರಂ ಸಂಪಿಗೆ ರಸ್ತೆಯ ಬಳಿ ಟಾಟಾ ಏಸ್ ವಾಹನವೊಂದರಲ್ಲಿ ಆರೋಪಿಯೊಬ್ಬ ನಕಲಿ ಉತ್ಪನ್ನ ಮಾರಾಟ ಮಾಡುತ್ತಿದ್ದ. ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಪಿರೈಟ್ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಕುಡಿತದ ಚಟ ಸಹಿಸದೆ ಬೆಂಗಳೂರಿನಲ್ಲಿ ಮಗನನ್ನೇ ಕೊಂದ ತಂದೆ; ಇಲ್ಲಿದೆ ಒಂದು ಟ್ವಿಸ್ಟ್

ಥೇಟ್‌ ಒರಿಜಿನಲ್‌ ಕಂಪನಿಯಂತೆ 100 ಗ್ರಾಂನಿಂದ 1 ಕೆ.ಜಿಯ ವೆರೆಗೆ ವಿಂಗಡಿಸಿ ಪ್ಯಾಕೇಟ್ ಮಾಡಿ ಕೆಎ 04 ಎಸಿ 4409 ನೋಂದಣಿ ಸಂಖ್ಯೆಯ ಟಾಟಾ ಏಸ್ ವಾಹನದಲ್ಲಿ‌ ಉತ್ಪನ್ನಗಳ ಮಾರಾಟ ಮಾಡಲಾಗುತ್ತಿತ್ತು. ಇದರ ಹಿಂದೆ ಬಿದ್ದ ಪೊಲೀಸರು ನೇರವಾಗಿ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದರು.

ಬೆಂಗಳೂರಿನ ಹೆಗ್ಗಡದೇವನಪುರದಲ್ಲಿದ್ದ ಉತ್ಪನ್ನ ಘಟಕದ ಮೇಲೆ ದಾಳಿ ಮಾಡಿದ ಪೊಲೀಸರು ಬಹು ದೊಡ್ಡ‌ಮಟ್ಟದಲ್ಲಿ ನಕಲಿ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ತಯಾರಿಕಾ ಮೆಷಿನ್‌ ಮತ್ತು ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಅರ್ಜುನ್ ಸಿಂಗ್ ಎಂಬಾತ ತಲೆ ಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Rave Party: ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣದಲ್ಲಿ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಮಾದಕ ವಸ್ತು ಸೇವನೆ ಆರೋಪದಲ್ಲಿ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ನಾನೇನು ತಪ್ಪು ಮಾಡಿಲ್ಲ ಎಂದ ನಟಿ

ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Book Release: ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ಸಹಯೋಗದಲ್ಲಿ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜೇಂದ್ರ ಪರಿಷನ್ಮಂದಿರದಲ್ಲಿ ಇದೇ ಜೂ. 6 ರಂದು ಬುಧವಾರ ಸಂಜೆ 5.30ಕ್ಕೆ ಜ್ಞಾನಸಿಂಧು ಚಿದಾನಂದಾವಧೂತರ ವೇದಾಂತ ಕಾವ್ಯ (ಸಂ. ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ) ಗ್ರಂಥ ಲೋಕಾರ್ಪಣೆ ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Grantha Lokarpane and award ceremony on June 5 in Bengaluru
Koo

ಬೆಂಗಳೂರು: ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ಸಹಯೋಗದಲ್ಲಿ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜೇಂದ್ರ ಪರಿಷನ್ಮಂದಿರದಲ್ಲಿ ಇದೇ ಜೂ. 5ರಂದು ಬುಧವಾರ ಸಂಜೆ 5.30ಕ್ಕೆ ಜ್ಞಾನಸಿಂಧು ಚಿದಾನಂದಾವಧೂತರ ವೇದಾಂತ ಕಾವ್ಯ (ಸಂ.: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ) ಗ್ರಂಥ ಲೋಕಾರ್ಪಣೆ (Book Release) ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಧಾರವಾಡದ ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಗುರುಗಳು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ಮತ್ತು ಗ್ರಂಥ ಲೋಕಾರ್ಪಣೆ ಮಾಡುವರು. ಬೆಂಗಳೂರಿನ ಕರ್ನಾಟಕ ಗಾಂಧಿಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಪ್ರಶಸ್ತಿ ಪ್ರದಾನ ಮಾಡುವರು. ಹುಬ್ಬಳ್ಳಿ ಸಿದ್ಧಾರೂಢ ಆಶ್ರಮದ ಟ್ರಸ್ಟಿ ಶಾಮಾನಂದ ಪೂಜೇರಿ ಗ್ರಂಥ ಪರಿಚಯ ಮಾಡುವರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಬೆಂಗಳೂರಿನ ಕೃಷ್ಣರಾಜಪುರದಲ್ಲಿರುವ ಸಿಲಿಕಾನ್‌ ಸಿಟಿ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್‌.ಎಸ್‌. ಗೋವರ್ಧನ ಅವರು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಸ್ವೀಕರಿಸುವರು. ಬೆಂಗಳೂರಿನ ವರ್ತೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಚಂದ್ರಪ್ಪ, ಪ್ರೊ. ಮಲ್ಲೇಪುರಂ ಪುಸ್ತಕ ಬಹುಮಾನ (ದಿ. ಬಸಲಿಂಗಪ್ಪ ಮಲ್ಕಪ್ಪ ಕಟ್ಟಿ ಸ್ಮರಣಾರ್ಥ) ಸ್ವೀಕರಿಸುವರು.

ಇದನ್ನೂ ಓದಿ: Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

ಮುಖ್ಯ ಅತಿಥಿಯಾಗಿ ಬೆಂಗಳೂರಿನ ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್‌ ಕಂಬತ್ತಳ್ಳಿ ಪಾಲ್ಗೊಳ್ಳುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಗ್ರಂಥ ಸಂಪಾದಕರ ನುಡಿಗಳನ್ನಾಡಲಿದ್ದಾರೆ.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

Valmiki Corporation Scam: ವಾಲ್ಮೀಕಿ ನಿಗಮದ ಹಗರಣದ ತನಿಖೆ ಆಮೆ ವೇಗದಲ್ಲಿದೆ. ಆದರೆ ಹಣ ವರ್ಗಾವಣೆ ಮಾತ್ರ ರಾಕೆಟ್ ವೇಗದಲ್ಲಿ ನಡೆದಿದೆ. ಎಲ್ಲಾ ನಿಗಮ ಮಂಡಳಿ ಹಣ ವ್ಯವಹಾರದ ಬಗ್ಗೆ ತನಿಖೆ ಆಗಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು.

ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆ ಎಂದು ಅವರು ನೇರ ಆರೋಪ ಮಾಡಿದರು.

ಇದನ್ನೂ ಓದಿ | PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು? ಅದನ್ನೆಲ್ಲ ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಎಲ್ಲಾ ನಿಗಮ ಮಂಡಳಿ ಹಣ ವ್ಯವಹಾರದ ಬಗ್ಗೆ ತನಿಖೆ ಆಗಲಿ

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು? ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ? ಎಲ್ಲಾ ಹೊರಗೆ ಬರಬೇಕು ಅಲ್ಲವೇ? ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!, ಇದು ಇವರ ಕಾರ್ಯವೈಖರಿ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಛಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ಪ್ರಿಯಾಂಕ್ ಖರ್ಗೆ ಏನು ಹೇಳುತ್ತಾರೆ?

ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. KRDL ಖರ್ಗೆ ಅವರ ಇಲಾಖೆಗೆ ಸೇರಿದ್ದು. ಅಲ್ಲಿಯೂ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಪ್ರಿಯಾಂಕ್ ಮಾತಾಡ್ತಾರಾ? ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಹೈ ಕಮಾಂಡ್ ಮಾಡಿಸಿದೆ

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್‌ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ | Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

ಎಸ್‌ಐಟಿಯಿಂದ ಸಾಕ್ಷ್ಯ ನಾಶ

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್‌ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನ್‌ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈವ್‌ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಟಾಂಗ್ ಕೊಟ್ಟರು.

Continue Reading

ಮಳೆ

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಸೋಮವಾರ ಪುತ್ತೂರಿನಲ್ಲಿ ಸುರಿದ ಅರ್ಧ ಗಂಟೆ ಮಳೆಗೆ (Karnataka Weather Forecast) ನದಿಯಂತಾಗಿತ್ತು. ಬೆಳಗಾವಿಯಲ್ಲೂ ನಿರಂತರ ಮಳೆಯಾಗಿದ್ದು, ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Heavy Rain ) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast Putur rain
ಪುತ್ತೂರಿನಲ್ಲಿ ಮಳೆ ಅಬ್ಬರಕ್ಕೆ ನದಿಯಂತಾದ ರಸ್ತೆಗಳು
Koo

ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ (Heavy Rain) ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಜೂ.4ರಂದು ಗುಡುಗು ಸಹಿತ ಭಾರೀ ಮಳೆಯೊಂದಿಗೆ (Karnataka Weather forecast) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನದಿಯಂತಾದ ಪುತ್ತೂರಿನ ರಸ್ತೆಗಳು

ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ ಹಾಗೂ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಗಳು ಜಲಾವೃತಗೊಂಡಿತ್ತು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೆ ಈ ಅವಾಂತರಕ್ಕೆ ಕಾರಣ ಎಂದು ಕಿಡಿಕಾರಿದರು.

karnataka weather Forecast

ಬೆಳಗಾವಿಯಲ್ಲೂ ಧಾರಾಕಾರ ಮಳೆ

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ನಗರ ಸೇರಿ ಜಿಲ್ಲೆಯ ಹಲವಡೆ ಭಾರಿ ಮಳೆಗೆ ಬೀದಿ ಬದಿ ವ್ಯಾಪಾರಸ್ಥರು ಹೈರಾಣಾದರಿ. ಕಳೆದ ಹಲವು ದಿನಗಳಿಂದ ಬಿಸಿಲಿಗೆ ತತ್ತರಿಸಿದ ಜನಕ್ಕೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ತಂಡವು ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಆಗಿದೆ. ಈ ವೇಳೆ ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಜತೆಗೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

karnataka weather Forecast

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಇದೇ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
First PU Class Commencement Programme at Vishwadarshana College
ಉತ್ತರ ಕನ್ನಡ24 mins ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ26 mins ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ1 hour ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ1 hour ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ1 hour ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ2 hours ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ2 hours ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

K Kavitha
ದೇಶ2 hours ago

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

MS Dhoni Europe Trip
ಕ್ರೀಡೆ2 hours ago

MS Dhoni Europe Trip: ಐಪಿಎಲ್​ ಮುಗಿಸಿ ಕುಟುಂಬದ ಜತೆ ಯುರೋಪ್​ಗೆ ಪ್ರವಾಸ ಹೋದ ಧೋನಿ

Lok Sabha Election Result 2024 Live
ದೇಶ3 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ8 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌