Kalaburagi News: ಕಲಬುರಗಿ- ಬೈಯ್ಯಪ್ಪನಹಳ್ಳಿ "ವಂದೇ ಭಾರತ್" ವೇಳಾಪಟ್ಟಿ ಹೀಗಿದೆ - Vistara News

ಕಲಬುರಗಿ

Kalaburagi News: ಕಲಬುರಗಿ- ಬೈಯ್ಯಪ್ಪನಹಳ್ಳಿ “ವಂದೇ ಭಾರತ್” ವೇಳಾಪಟ್ಟಿ ಹೀಗಿದೆ

Kalaburagi News: ಮಾರ್ಚ್ 12ರಿಂದ ಕಲಬುರಗಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ವರೆಗೆ ಸಂಚಾರ ಪ್ರಾರಂಭಿಸಲಿರುವ ವಂದೇ ಭಾರತ್ ರೈಲಿನ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ.

VISTARANEWS.COM


on

Kalaburagi-Baiyyappanahalli Vande Bharat train timetable
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಮಾರ್ಚ್ 12ರಿಂದ ಕಲಬುರಗಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ವರೆಗೆ ಸಂಚಾರ ಪ್ರಾರಂಭಿಸಲಿರುವ “ವಂದೇ ಭಾರತ್” ರೈಲಿನ (Vande Bharat train) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು (Kalaburagi News) ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ.

ಕಲಬುರಗಿ ರೈಲ್ವೆ ನಿಲ್ದಾಣದಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ವರೆಗೆ ವಾರದಲ್ಲಿ ಆರು ದಿನ ವಂದೇ ಭಾರತ್ ರೈಲು ಓಡಾಟ ನಡೆಸಲಿದ್ದು, ಮಾ.12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: Vistara News Polling Booth : ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌: ವಿನೂತನ ಪ್ರಯೋಗಕ್ಕೆ ಡಾ. ಮಂಜುನಾಥ್‌ ಚಾಲನೆ

ಕಲಬುರಗಿಯಿಂದ ಬೆಳಗ್ಗೆ 5 .15ಕ್ಕೆ ಹೊರಟು ಮಧ್ಯಾಹ್ನ 2 ಗಂಟೆಗೆ ಬೈಯಪ್ಪನಹಳ್ಳಿ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 2.40 ಕ್ಕೆ ಹೊರಟು ರಾತ್ರಿ 11:30ಕ್ಕೆ ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ. ಬೆಂಗಳೂರು ಬೈಯ್ಯಪ್ಪನಹಳ್ಳಿಯಿಂದ ಗುರುವಾರ ಹಾಗೂ ಕಲ್ಬುರ್ಗಿಯಿಂದ ಶುಕ್ರವಾರ ವಂದೇ ಭಾರತ್ ರೈಲು ಸಂಚಾರ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ರೈಲಿನ ವೇಳಾಪಟ್ಟಿ ಹೀಗಿದೆ

ಕಲಬುರಗಿಯಿಂದ ಬೆಳಗ್ಗೆ 5 .15ಕ್ಕೆ ಹೊರಟು ವಾಡಿಗೆ 5.40ಕ್ಕೆ, ರಾಯಚೂರಿಗೆ 06.53, ಮಂತ್ರಾಲಯಂ ರೋಡ್ 07.08, ಗುಂತಕಲ್ 08.25, ಅನಂತಪುರ 09.28, ಧರ್ಮಾವರಂ 10.50, ಯಲಹಂಕ 12.45 ಕ್ಕೆ, ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಗೆ 2 ಗಂಟೆಗೆ ತಲುಪಲಿದೆ.

ಬೈಯ್ಯಪ್ಪನಹಳ್ಳಿಯಿಂದ ಮಧ್ಯಾಹ್ನ 02.40ಕ್ಕೆ ಹೊರಟು ಯಲಹಂಕಕ್ಕೆ 03.08, ಧರ್ಮಾವರಂ ಸಾಯಂಕಾಲ 5:45, ಅನಂತಪುರ 05.58, ಗುಂತಕಲ್ 7.00, ಮಂತ್ರಾಲಯಂ ರೋಡ್ ರಾತ್ರಿ 08.15, ರಾಯಚೂರು 8:45, ವಾಡಿ 11.05 ಮತ್ತು ಕಲಬುರಗಿಗೆ ರಾತ್ರಿ 11:30ಕ್ಕೆ ತಲುಪಲಿದೆ.

ಇದನ್ನೂ ಓದಿ: Oscars 2024: ಯಾರಿಗೆ, ಯಾವ ಚಿತ್ರಗಳಿಗೆ ಆಸ್ಕರ್ ಪ್ರಶಸ್ತಿ? ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ!

ಕಲಬುರಗಿಯಲ್ಲಿ ಎರಡನೇ ಪಿಟ್ ಲೈನ್ ಪೂರ್ಣಗೊಂಡು ನಿರ್ವಹಣಾ ಸೌಲಭ್ಯ ಪ್ರಾರಂಭವಾದ ಬಳಿಕ ವಂದೇ ಭಾರತ್ ರೈಲು ಕಲಬುರಗಿಯಿಂದ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದವರೆಗೆ ಸಂಚಾರ ನಡೆಸಲಿದೆ ಮತ್ತು 45 ನಿಮಿಷ ಬೇಗ ತಲುಪಲಿದೆ.

ಮೊದಲು ಬೆಂಗಳೂರಿಗೆ ಹೋಗಿ ಕೆಲಸ ಮುಗಿಸಿಕೊಂಡು ಬರಲು ಕನಿಷ್ಠ ಒಂದೂವರೆ ದಿವಸ ಆಗುತ್ತಿತ್ತು. ಆದರೆ ವಂದೇ ಭಾರತ್ ಶುರುವಾಗುವುದರಿಂದ 24 ಗಂಟೆಯೊಳಗೆ ನಾವು ಕಲಬುರಗಿಗೆ ತಲುಪಬಹುದು. ಬೆಳಗ್ಗೆ ವಂದೇ ಭಾರತ್ ರೈಲಿನಿಂದ ಬೆಂಗಳೂರಿಗೆ ತಲುಪಿ ಸಂಜೆ ಮತ್ತು ರಾತ್ರಿ ವೇಳೆ ಇರುವ ಕರ್ನಾಟಕ ಎಕ್ಸ್‌ಪ್ರೆಸ್ ಅಥವಾ ಹಾಸನ್-ಸೋಲಾಪುರ ಎಕ್ಸ್‌ಪ್ರೆಸ್ ರೈಲಿನಿಂದ ಕಲಬುರಗಿಗೆ ಮರುದಿನ ಮರಳಿ ಬರಬಹುದಾಗಿದೆ.

ಇದನ್ನೂ ಓದಿ: WPL 2024: ಸೋಲಿನ ಆಘಾತದಲ್ಲಿದ್ದ ಆರ್​ಸಿಬಿ ಆಟಗಾರ್ತಿಯರನ್ನು ಸಮಾಧಾನಿಸಿ ಕ್ರೀಡಾಸ್ಫೂರ್ತಿ ತೋರಿದ ಡೆಲ್ಲಿ ಕ್ಯಾಪಿಟಲ್ಸ್‌

ವಂದೇ ಭರತ್ ಶುರುವಾಗುವುದರಿಂದ ಈಗಿರುವ ಬಸವ ಎಕ್ಸ್‌ಪ್ರೆಸ್, ಸೋಲಾಪುರ್ ಹಾಸನ್ ಎಕ್ಸ್‌ಪ್ರೆಸ್ ಹಾಗೂ ಇತರೆ ರೈಲುಗಳಲ್ಲಿ ಓಡಾಡುವ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Viral video: ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ.

VISTARANEWS.COM


on

viral video shakti scheme women fight
Koo

ಬೀದರ್‌: ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ (Shakthi scheme women fight) ಸೀಟಿಗಾಗಿ ಕೆಲವು ಮಹಿಳೆಯರು ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (viral video) ಆಗಿದೆ. ಒಂದು ಸೀಟಿಗಾಗಿ ಪರಸ್ಪರ ಮಾನ ಮರ್ಯಾದೆ ಬಿಟ್ಟು ಚಪ್ಪಲಿ ಹಿಡಿದು ಬಡಿದಾಡಿಕೊಂಡಿದ್ದಾರೆ. ಅಂಗಿ- ರವಿಕೆ ಹರಿದುಕೊಂಡಿದ್ದಾರೆ.

ಈ ಘಟನೆ ಬೀದರ್‌ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ. ಅವಾಚ್ಯ ಬೈಗುಳಗಳು ವಿನಿಮಯ ಆಗಿದ್ದು, ಪರಸ್ಪರರ ಅಂಗಿ ಹಿಡಿದು ಎಳೆದಾಡಿಕೊಂಡಿದ್ದಾರೆ. ನಂತರ ಚಪ್ಪಲಿ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಜೊತೆಗಿದ್ದ ಹಲವರು ಇವರ ಜಗಳ ಬಿಡಿಸಲು ಯತ್ನಿಸಿದರೆ, ಇನ್ನು ಹಲವರು ತಾವೂ ಎರಡು ಪಕ್ಷ ವಹಿಸಿ ಕಿತ್ತಾಡಿಕೊಂಡಿದ್ದಾರೆ!

ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದಾರೆ. ಫನ್ನೀ ಕಾಮೆಂಟ್‌ಗಳು ಇದಕ್ಕೆ ಬಂದಿವೆ. “ಜಡೆಗಳು ಕಿತ್ತುಬರುವುದೊಂದೇ ಬಾಕಿ” ಎಂದು ಒಬ್ಬರು, “ಇದು ಗ್ಯಾರಂಟಿ ಹೊಡೆದಾಟ” ಎಂದು ಇನ್ನು ಕೆಲವರು ವಿನೋದವಾಡಿದ್ದಾರೆ. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಜಾರಿಯ ಬಳಿಕ ಇಂಥ ಹಲವಾರು ಹೊಡೆದಾಟಗಳು ಸೋಶಿಯಲ್‌ ಮೀಡಿಯಾಗಳಲ್ಲಿ ದಾಖಲಾಗಿವೆ.

ಖಾಸಗಿ ಬಸ್‌ಗಳಿಗೂ ವಿಸ್ತರಣೆ?

ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus service) ಅವಕಾಶವನ್ನು ಒದಗಿಸಿರುವ ಶಕ್ತಿ ಯೋಜನೆ (Shakthi Scheme) ಖಾಸಗಿ ಬಸ್‌ಗಳಿಗೂ (Private Buses) ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಹತ್ವದ ಸೂಚನೆ ನೀಡಿದ್ದು, ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ನಿರ್ದೇಶನ ನೀಡಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಸರ್ಕಾರಿ ಬಸ್‌ ಸೌಲಭ್ಯ ಇಲ್ಲ. ಹೀಗಾಗಿ ಅಲ್ಲಿನ ಜನರಿಗೂ ಯೋಜನೆಯ ಲಾಭ ದೊರೆಯುವಂತಾಗಲು ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ ಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಕೆಲವು ಕಡೆ ಕೇಳಿಬಂದಿತ್ತು. ಖಾಸಗಿ ಬಸ್‌ ಮಾಲೀಕರೊಬ್ಬರು ಹೈಕೋರ್ಟ್‌ ಮೆಟ್ಟಿಲು ಹತ್ತಿದ್ದಾರೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ನ್ಯಾಯಾಲಯ ಆದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

ಇದನ್ನೂ ಓದಿ: Electric Bus : ಶಕ್ತಿ ಯೋಜನೆ ಟೀಕಿಸುವ ಬಿಜೆಪಿಗೆ ಹೆಣ್ಮಕ್ಕಳೇ ಉತ್ತರ ಕೊಡಿ ಎಂದ ಸಿದ್ದರಾಮಯ್ಯ

Continue Reading

ಕ್ರೈಂ

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Murder Case: ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ.

VISTARANEWS.COM


on

woman murder case
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು (Stabbing) ಮತ್ತೊಬ್ಬ ಯುವತಿಯನ್ನು ಕೊಲೆ (Woman Murder Case) ಮಾಡಲಾಗಿದೆ. ಇದು ಕೂಡ ಪಾಗಲ್‌ ಭಗ್ನಪ್ರೇಮಿಯ ಕೃತ್ಯವಾಗಿದೆ. ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಈ ಕೊಲೆಯೂ ಘಟಿಸಿದೆ. ಕೊಲೆಗೆ ಕೆಲ ದಿನಗಳ ಮುನ್ನ ಆರೋಪಿ, ಯುವತಿಗೆ “ನೇಹಾ ಹಿರೇಮಠ ಥರ ಮಾಡ್ತೀನಿ” ಎಂದು ಬೆದರಿಸಿದ್ದ ಎಂದು ಗೊತ್ತಾಗಿದೆ.

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ಅಂಬಿಗೇರ (20) ಕೊಲೆಯಾಗಿರುವ ಯುವತಿ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಬೆಳಗಿನ ಜಾವ 5.30ಕ್ಕೆ ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ಪ್ರತಿಭಟಿಸಿದರೂ ಅವರ ಎದುರೇ ಇರಿದಿದ್ದಾನೆ.

ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು

ವಿಜಯಪುರ: ಎನ್‌ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ಆಯ ತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು (Labor death) ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯ ಕೂಡಗಿ ಬಳಿಯಿರುವ ಎನ್‌ಟಿಪಿಸಿ ಘಟಕದಲ್ಲಿ ದುರಂತ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಸಾವು ಸಂಭವಿಸಿದೆ. ಕಿಶನ್ ಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ. ಉತ್ತರ ಪ್ರದೇಶ ಮೂಲದ ಇವರು ಎನ್‌ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ ಘಟನೆ ನಡೆದಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನಿಸಲಾಗಿದೆ.

ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಕೂಡಗಿ ಎನ್‌ಟಿಪಿಸಿ ಘಟಕದ ಎದುರು ಬೆಳಿಗ್ಗೆಯಿಂದಲೇ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಕಿ ಆಕಸ್ಮಿಕದಲ್ಲಿ ಮನೆ ಭಸ್ಮ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕೀಟ್ (Short circuit) ಪರಿಣಾಮ ಕಲಬುರಗಿ ತಾಲ್ಲೂಕಿನ ಆಲಗೂಡ ಗ್ರಾಮದಲ್ಲಿ ಮನೆಯೊಂದು (Fire mishap) ಹೊತ್ತಿ ಉರಿದಿದೆ. ರೈತ ಸೈಬಣ್ಣ ಎನ್ನುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.

ಮನೆಯಲ್ಲಿದ್ದ 20 ಸಾವಿರ ನಗದು ಹಣ, 7-8 ತೊಲೆ ಚಿನ್ನಾಭರಣ, ದವಸಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮನೆ ಸರ್ವನಾಶವಾದ ಹಿನ್ನೆಲೆಯಲ್ಲಿ ಸೈಬಣ್ಣ ಕುಟುಂಬ ಅತಂತ್ರವಾಗಿದೆ. ಕಲಬುರಗಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ, ಮನೆಕೆಲಸದಾಕೆ ಬಂಧನ

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading
Advertisement
IND vs AUS Test
ಕ್ರೀಡೆ9 mins ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ18 mins ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Amit Shah
ದೇಶ34 mins ago

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Prajwal Revanna Case Will SIT team go abroad for arrest Prajwal
ಕ್ರೈಂ39 mins ago

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Rajkummar Rao
ಸಿನಿಮಾ42 mins ago

Rajkummar Rao: ಮುಂಬಯಿಗೆ ಬಂದು ಶಾರುಕ್‌ ಮನೆ ಮುಂದೆ ದಿನವಿಡೀ ಕಾದಿದ್ದರಂತೆ ನಟ ರಾಜ್‌ಕುಮಾರ್ ರಾವ್‌!

North East Graduate Constituency Election Congress party leaders and workers Meeting in Yadgiri
ರಾಜಕೀಯ55 mins ago

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

T20 World Cup 2024
ಕ್ರೀಡೆ58 mins ago

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

MLC Election
ಕರ್ನಾಟಕ1 hour ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

CAA
EXPLAINER1 hour ago

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Fortis Hospital doctors team performed a successful complex kidney transplant surgery for two patients with robotic assistance
ಕರ್ನಾಟಕ1 hour ago

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ11 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ14 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ23 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌