Oscars 2024: ಭಾರತೀಯ ಚಿತ್ರರಂಗದ ಖ್ಯಾತ ಕಲಾ ನಿರ್ದೇಶಕನನ್ನು ಸ್ಮರಿಸಿದ ಆಸ್ಕರ್‌ ವೇದಿಕೆ - Vistara News

ಸಿನಿಮಾ

Oscars 2024: ಭಾರತೀಯ ಚಿತ್ರರಂಗದ ಖ್ಯಾತ ಕಲಾ ನಿರ್ದೇಶಕನನ್ನು ಸ್ಮರಿಸಿದ ಆಸ್ಕರ್‌ ವೇದಿಕೆ

Oscars 2024: ನಿತಿನ್ ದೇಸಾಯಿ ಅವರು ಹಿಂದಿ, ಮರಾಠಿ ಕಿರುತೆರೆಯಲ್ಲೂ ಕೆಲಸ ಮಾಡಿದ್ದರು. ಕಲಾ ನಿರ್ದೇಶನಕ್ಕಾಗಿ 4 ಬಾರಿ ರಾಷ್ಟ್ರ‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಈ ಬಾರಿಯ 96ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನಿತಿನ್‌ ಅವರನ್ನು ಸ್ಮರಿಸಿಕೊಳ್ಳಲಾಗಿದೆ.

VISTARANEWS.COM


on

Indian art designer Nitin Chandrakant Desai remembered with Oscars
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಕಲಾ ನಿರ್ದೇಶಕ, ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರರಾಗಿದ್ದ ನಿತಿನ್ ದೇಸಾಯಿ (Art Director Nitin Desai) ಅವರು 2023ರ ಆಗಸ್ಟ್‌ 2ರಂದು ತಮ್ಮದೇ ಎನ್‌ಡಿ ಸ್ಟುಡಿಯೊದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಸೆಟ್‌ಗಳನ್ನು ನಿರ್ಮಿಸಿದ್ದ ನಿತಿನ್ ದೇಸಾಯಿ ಪ್ರೊಡಕ್ಷನ್ ಡಿಸೈನರ್ ಆಗಿಯೂ ಗುರುತಿಸಿಕೊಂಡಿದ್ದರು. ಹಿಂದಿ, ಮರಾಠಿ ಕಿರುತೆರೆಯಲ್ಲೂ ಕೆಲಸ ಮಾಡಿದ್ದರು. ಕಲಾ ನಿರ್ದೇಶನಕ್ಕಾಗಿ 4 ಬಾರಿ ರಾಷ್ಟ್ರ‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಈ ಬಾರಿಯ 96ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನಿತಿನ್‌ ಅವರನ್ನು ಸ್ಮರಿಸಿಕೊಳ್ಳಲಾಗಿದೆ.

ಪ್ರತಿ ವರ್ಷ, ಅಕಾಡೆಮಿ ಪ್ರಶಸ್ತಿಗಳಲ್ಲಿ ಕಳೆದ ಒಂದು ವರ್ಷದಲ್ಲಿ ನಿಧನರಾದ ಪ್ರಮುಖರ ಬಗ್ಗೆ ಸ್ಮರಿಸಿಕೊಳ್ಳಲಾಗುತ್ತದೆ. ಈ ಬಾರಿಯ ಆಸ್ಕರ್‌ ʻಮೆಮೋರಿಯಮ್ ಮಾಂಟೇಜ್‌ʼನಲ್ಲಿ (Memoriam segment) ನಿತಿನ್ ದೇಸಾಯಿ ಅವರನ್ನು ಸ್ಮರಿಸಲಾಗಿದೆ.

‘ಹಮ್ ದಿಲ್ ದೇ ಚುಕೇ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’, ‘ಲಗಾನ್’ʼ, ‘ಬಾಜಿರಾವ್ ಮಸ್ತಾನಿ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಚಿತ್ರಗಳಿಗೆ ಅದ್ಧೂರಿ ಸೆಟ್‌ಗಳನ್ನು ವಿನ್ಯಾಸಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ: Oscars 2024: ಯಾರಿಗೆ, ಯಾವ ಚಿತ್ರಗಳಿಗೆ ಆಸ್ಕರ್ ಪ್ರಶಸ್ತಿ? ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ!

ಎರಡು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ದೇಸಾಯಿ ಅವರು ಸಂಜಯ್ ಲೀಲಾ ಬನ್ಸಾಲಿ, ಅಶುತೋಷ್ ಗೋವಾರಿಕರ್, ವಿಧು ವಿನೋದ್ ಚೋಪ್ರಾ, ರಾಜ್‌ಕುಮಾರ್ ಹಿರಾನಿ ಸೇರಿದಂತೆ ಹಲವಾರು ಧೀಮಂತ ಚಲನಚಿತ್ರ ನಿರ್ಮಾಪಕರೊಂದಿಗೆ ಕೆಲಸ ಮಾಡಿದ್ದಾರೆ. 52 ಎಕರೆಯಲ್ಲಿ ಇರುವ ಇವರದ್ದೇ ಎನ್‌ಡಿ ಸ್ಟುಡಿಯೊ ಹಲವಾರು ಫಿಲ್ಮ್ ಸೆಟ್‌ಗಳಿಗೆ ನೆಲೆಯಾಗಿದೆ. ಅದರಲ್ಲಿ ಪ್ರಮುಖವಾದದ್ದು ‘ಜೋಧಾ ಅಕ್ಬರ್’.

ಚಲನಚಿತ್ರಗಳು ಮಾತ್ರವಲ್ಲದೆ, ರಿಯಾಲಿಟಿ ಶೋ ‘ಬಿಗ್ ಬಾಸ್’ ನ ಹಲವಾರು ಸೀಸನ್‌ಗಳನ್ನು ಎನ್‌ಡಿ ಸ್ಟುಡಿಯೋಸ್‌ನಲ್ಲಿ ಆಯೋಜಿಸಲಾಗಿದೆ. ನಿತಿನ್‌ ಒಂದೆರಡು ಚಿತ್ರಗಳನ್ನು ನಿರ್ದೇಶಿಸಿದ್ದರು. ‘ಹಲೋ ಜೈ ಹಿಂದ್!’ (2011) ಮತ್ತು ‘ಅಜಿಂತಾ’ (2012) ಇವರು ನಿರ್ದೇಶಿಸಿದ್ದ ಪ್ರಮುಖ ಸಿನಿಮಾಗಳು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

Kiccha Sudeep: ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

VISTARANEWS.COM


on

Kiccha Sudeep Replies To Darshan Ban Matter Entertainment
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.   ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ರಾಜ್​ಕುಮಾರ್ ಅವರು ಬ್ಯಾನ್ ಪದ ಬಳಕೆ ಮಾಡಬೇಡಿ ಎಂದಿದ್ದರಂತೆ. ಈ ಬಗ್ಗೆ ಸುದೀಪ್ ಹೇಳಿದ್ದು ಹೀಗೆ.

ಸುದೀಪ್‌ ಮಾತನಾಡಿ ʻʻಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಆಗ ನಾನು ಹುಟ್ಟೇ ಇಲ್ಲ. ಜಗ್ಗೇಶ್ ಅವರು ನಮ್ಮ ಸಹೋದರರು. ಅವರಿಗೆ ನಮಗಿಂತ ಚೆನ್ನಾಗಿ ತಿಳುವಳಿಕೆ ಇದೆ. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಬಹಳ ಮುಗ್ಧ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಮ್ಯಾಕ್ಸ್‌ ರಿಲೀಸ್‌ ಯಾವಾಗ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading

ಸ್ಯಾಂಡಲ್ ವುಡ್

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Actor Darshan: ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

VISTARANEWS.COM


on

Actor Darshan of many acquaintance unknown of darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಇನ್ನು ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾದವರ ಸಂಖ್ಯೆ 19 ಮಂದಿ. 19 ಮಂದಿಯಲ್ಲಿ ಹಲವರಿಗೆ ದರ್ಶನ್‌ ಅವರ ನೇರ ಪರಿಚಯವೇ ಇಲ್ಲ ಎಂದು ತಿಳಿದು ಬಂದಿದೆ.

ಹಲವರು ದರ್ಶನ್‌ ಅವರನ್ನು ಭೇಟಿಯಾಗಿದ್ದೇ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಎನ್ನಲಾಗಿದೆ. ದರ್ಶನ್‌ಗಾಗಿ ಕೃತ್ಯ ಎಸಗಿದವರಲ್ಲಿ ಕೆಲವರು ದರ್ಶನ್‌ ಅವರನ್ನು ಮುಖಾಮುಖಿ ನೋಡಿದ್ದೇ ಪೊಲೀಸ್ ಸ್ಟೇಷನ್ ನಲ್ಲಿ ಎನ್ನಲಾಗಿದೆ. ಪ್ರಕರಣದಲ್ಲಿ ಪವಿತ್ರಾಗೌಡ, ಪವಿತ್ರಾಗೌಡ ಮ್ಯಾನೇಜರ್ ಪವನ್‌, ಸ್ಟೋನಿಬ್ರೂಕ್ಸ್ ಮಾಲೀಕ ವಿನಯ್, ದರ್ಶನ್ ಮ್ಯಾನೇಜರ್ ನಾಗರಾಜ್, ಸ್ಕಾರ್ಪಿಯೋ ಕಾರು ಮಾಲೀಕ ಪುನೀತ್, ವಿನಯ್,ದೀಪಕ್, ಪ್ರದೋಶ್, ಚಿತ್ರದುರ್ಗದ ರಾಘವೇಂದ್ರ, ಮಂಡ್ಯದ ನಂದೀಶ್ ಮಾತ್ರ ದರ್ಶನ್‌ಗೆ ನೇರ ಪರಿಚಯ ಇದ್ದರಂತೆ. ರಾಘವೇಂದ್ರ ಜತೆ ಕಿಡ್ನಾಪ್ ಮಾಡಿದ್ದ ಅನುಕುಮಾರ್, ಈಟಿಯೋಸ್ ಕಾರು ಚಾಲಕ ರವಿ, ಲಕ್ಷ್ಮಣ್, ಜಗದೀಶ್ ಇವರುಗಳು ದರ್ಶನ್ ಅವರನ್ನು ಕಂಡಿದ್ದೆ ಪೊಲೀಸ್ ಸ್ಟೇಷನ್‌ನಲ್ಲಿ ಎಂದು ತಿಳಿದು ಬಂದಿದೆ.

ದರ್ಶನ್‌ಗಾಗಿ ರೇಣುಕಾಸ್ವಾಮಿ ಮೃತ ದೇಹ ಬಿಸಾಡಿದ್ದ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್
ದರ್ಶನ್‌ ಅವರನ್ನು ಮೊದಲು ಭೇಟಿಯಾಗಿದ್ದು ಕೊಲೆಯಾದ ಮಾರನೇ ದಿನ ಅಂದರೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಎನ್ನಲಾಗಿದೆ. ದರ್ಶನ್ ತಂಗಿದ್ದ ಮೈಸೂರಿನ ಖಾಸಗಿ ಹೋಟೆಲ್‌ಗೆ ಕೇಶವ್, ಕಾರ್ತಿಕ್, ನಿಖಿಲ್ ರನ್ನು ಕರೆದೊಯ್ದು ದೀಪಕ್ ಭೇಟಿ ಮಾಡಿಸಿದ್ದ . ದೀಪಕ್ ಸೂಚನೆಯಂತೆ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ರು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಹೋಗಿ ಹಣಕಾಸಿನ ವಿಚಾರಕ್ಕೆ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾಗಿ ಸರೆಂಡರ್ ಆಗಿದ್ದರು ಕೇಶವ್, ಕಾರ್ತಿಕ್‌, ನಿಖಿಲ್‌ನಾಯಕ್.

ಇದನ್ನೂ ಓದಿ: Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

ಮೊಬೈಲ್ ಪತ್ತೆಯಾಗಿಲ್ಲ

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

ಕಿರುತೆರೆ

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Nayana Nagaraj: ಪಾಪಾ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ಕಥಾನಾಯಕಿಯಾಗಿ ಮಿಂಚಿದ ಪ್ರತಿಭಾವಂತ ನಟಿ ನಯನ ನಾಗರಾಜ್. ಗಾಯಕಿ ಹಾಗೂ ನೃತ್ಯಗಾರ್ತಿಯೂ ಆಗಿದ್ದಾರೆ. ಈ ಹಿಂದೆ ನಯನ ನಾಗರಾಜ್ ಅವರ ಬ್ಯಾಚುಲರೇಟ್ ಪಾರ್ಟಿಯಲ್ಲಿ ‘ಲಕ್ಷ್ಮೀ ನಿವಾಸ’ ಸೀರಿಯಲ್ ಖ್ಯಾತಿಯ ಚಂದನಾ ಅನಂತಕೃಷ್ಣ ಭಾಗವಹಿಸಿದ್ದರು.

VISTARANEWS.COM


on

Nayana Nagaraj ginirama serial fame got married with suhas
Koo

ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ ನಯನ ನಾಗರಾಜ್ (Nayana Nagaraj) ದಾಂಪತ್ಯ ಜೀವನಕ್ಕೆ ಜೂ.16ರಂದು ಕಾಲಿಟ್ಟಿದ್ದಾರೆ.

ದೀರ್ಘಕಾಲದ ಗೆಳೆಯ ಸುಹಾಸ್ ಶಿವಣ್ಣ ಅವರೊಂದಿಗೆ ನಯನ ನಾಗರಾಜ್ ಸಪ್ತಪದಿ ತುಳಿದಿದ್ದಾರೆ

ಕುಟುಂಬಸ್ಥರ ಸಮ್ಮುಖದಲ್ಲಿ ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಮದುವೆಯಾದರು.

ಇದನ್ನೂ ಓದಿ: Nayana Nagaraj: ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಗಿಣಿರಾಮ’ ಖ್ಯಾತಿಯ ನಟಿ ನಯನ ನಾಗರಾಜ್

ಈ ಮುಂಚೆ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

ಹತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ . ಇದೀಗ ಜೋಡಿಗೆ ಹಲವು ನಟ ನಟಿಯರು ಶುಭ ಹಾರೈಸಿದ್ದಾರೆ.
Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Actor Darshan: ಚಿತ್ರರಂಗದಿಂದ ಒಬ್ಬರನ್ನು ಬ್ಯಾನ್ ಮಾಡುವುದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಹಾಗೆಯೇ ರೇಣುಕಾಸ್ವಾಮಿ ಸಾವಿಗೂ ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಇದನ್ನೂ ಓದಿ | Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading
Advertisement
Encounter In Bandipora
ದೇಶ18 mins ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ19 mins ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ36 mins ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್44 mins ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ46 mins ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ51 mins ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ1 hour ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್1 hour ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 20241 hour ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ2 hours ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌