'ಹನಿಟ್ರ್ಯಾಪ್‌'ಗೆ ಸಿಲುಕಿ ಪಾಕ್‌ಗೆ ರಹಸ್ಯ ಮಾಹಿತಿ ರವಾನೆ; ಮುಂಬೈನಲ್ಲಿ ಅಧಿಕಾರಿಯ ಬಂಧನ - Vistara News

ದೇಶ

‘ಹನಿಟ್ರ್ಯಾಪ್‌’ಗೆ ಸಿಲುಕಿ ಪಾಕ್‌ಗೆ ರಹಸ್ಯ ಮಾಹಿತಿ ರವಾನೆ; ಮುಂಬೈನಲ್ಲಿ ಅಧಿಕಾರಿಯ ಬಂಧನ

ಮುಂಬೈನ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈತನು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ಮಜಗಾಂವ್‌ ಡಾಕ್‌ಯಾರ್ಡ್‌ನಲ್ಲಿ (ಹಡಗು ಕಟ್ಟೆ-Dockyard) ಕೆಲಸ ಮಾಡುತ್ತಿದ್ದ (ಹಡಗುಗಳ ಮೇಲೆ ನಿಗಾ ಇರಿಸುವ ಸಿಬ್ಬಂದಿ) ಅಧಿಕಾರಿಯೊಬ್ಬನನ್ನು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ATS) ಅಧಿಕಾರಿಗಳು ಬಂಧಿಸಿದ್ದಾರೆ. ಪಾಕಿಸ್ತಾನಕ್ಕೆ (Pakistan) ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದ (Spy) ಹಿನ್ನೆಲೆಯಲ್ಲಿ ನಿಖರ ಮಾಹಿತಿ ಪಡೆದ ಎಟಿಎಸ್‌ ಅಧಿಕಾರಿಗಳು ಕಲ್ಪೇಶ್‌ ಬೈಕರ್‌ (Kalpesh Baikar) ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮಜಗಾವ್‌ ಡಾಕ್‌ಯಾರ್ಡ್‌ನಲ್ಲಿ ಆರೋಪಿಯು ಸ್ಟ್ರಕ್ಚುರಲ್‌ ಫ್ಯಾಬ್ರಿಕೇಟರ್‌ ಆಗಿದ್ದ ಕಲ್ಪೇಶ್‌ ಬೈಕರ್‌, ಕೆಲ ತಿಂಗಳಿಂದ ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಈತನು ಬೇಹುಗಾರಿಕೆ ನಡೆಸುತ್ತಿರುವ ಕುರಿತು ಎಟಿಎಸ್‌ ಅಧಿಕಾರಿಗಳು ನಿಖರ ಮಾಹಿತಿ ಪಡೆದಿದ್ದಾರೆ. ಇದಾದ ಬಳಿಕ ಆತನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಈತನು ಪಾಕಿಸ್ತಾನದ ಏಜೆಂಟ್‌ಗೆ ರವಾನಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

ಹನಿಟ್ರ್ಯಾಪ್‌ಗೆ ಅಧಿಕಾರಿ ಬಲಿ

ಪಾಕಿಸ್ತಾನದ ಮಹಿಳಾ ಏಜೆಂಟ್‌ ಜತೆ ಕಲ್ಪೇಶ್‌ ಬೈಕರ್‌ ಸಂಪರ್ಕ ಸಾಧಿಸಿದ್ದಾನೆ. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್‌ಗಳ ಮೂಲಕ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಆತ್ಮೀಯತೆ ಬೆಳೆದಿದೆ. ಪಾಕಿಸ್ತಾನದ ಮಹಿಳೆಯು ಏಜೆಂಟ್‌ ಎಂಬುದನ್ನು ಅರಿಯದ ಕಲ್ಪೇಶ್‌ ಬೈಕರ್‌, ತನ್ನ ವೈಯಕ್ತಿಕ ವಿಚಾರ, ಫೋಟೊ, ವಿಡಿಯೊಗಳನ್ನು ಕೂಡ ಆಕೆಯೊಂದಿಗೆ ಹಂಚಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ಬಲೂನ್​ ಬಿಟ್ಟ ಪಾಕಿಸ್ತಾನ; ಬೇಹುಗಾರಿಕೆ ಕುತಂತ್ರದ ಅನುಮಾನ!

ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡ ಬಳಿಕ ಪಾಕಿಸ್ತಾನದ ಮಹಿಳಾ ಏಜೆಂಟ್‌ ಈತನಿಗೆ ಬೆದರಿಕೆ ಹಾಕಿದ್ದಾಳೆ. ಅಲ್ಲದೆ, ವೈಯಕ್ತಿಕ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ತಾನು ಹನಿಟ್ರ್ಯಾಪ್‌ಗೆ ಒಳಗಾಗಿದ್ದೇನೆ ಎಂಬುದನ್ನು ಅರಿತ ಕಲ್ಪೇಶ್‌ ಬೈಕರ್‌ನು ಅನಿವಾರ್ಯವಾಗಿ ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆಕೆಯೊಂದಿಗೆ ಹಂಚಿಕೊಂಡಿದ್ದಾನೆ ಎಂದು ಎಟಿಎಸ್‌ ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
Koo

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿ (Varanasi)ಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಸುಮಾರು 9.26 ರೈತರ ಖಾತೆಗಳಿಗೆ 20,000 ಕೋಟಿ ರೂ. ಜಮೆ ಆಗಲಿದೆ.

ಮಾತ್ರವಲ್ಲ ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಮೋದಿ ಪ್ರಮಾಣಪತ್ರಗಳನ್ನೂ ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಲವು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ವಾರಣಾಸಿ ಪ್ರವಾಸದ ಸಂಪೂರ್ಣ ವಿವರ

ಮೋದಿ ಅವರು ಸುಮಾರು 5 ಗಂಟೆಗಳ ಕಾಲ ವಾರಣಾಸಿಯಲ್ಲಿ ಇರಲಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಮೋದಿ ಬಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ವಾರಣಾಸಿಯಲ್ಲಿ ಆಯೋಜಿಸಿರುವ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಮ್ಮಾನ್ ನಿಧಿಯ ಕಂತನ್ನು ಮೋದಿ ಬಿಡುಗಡೆ ಮಾಡಲಿದ್ದು, ವಾರಣಾಸಿಯಲ್ಲಿ 2,76,665 ಫಲಾನುಭವಿಗಳಿದ್ದಾರೆ. ಜತೆಗೆ 21 ರೈತರನ್ನು ಭೇಟಿ ಮಾಡಿ ಅವರ ಉತ್ಪನ್ನಗಳನ್ನು ಪರಿಶೀಲಿಸಲಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆಯಲಿರುವ ಗಂಗಾ ಆರತಿಯನ್ನು ವೀಕ್ಷಿಸಲಿರುವ ಮೋದಿ, ನಂತರ ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 25 ನಿಮಿಷಗಳ ಕಾಲ ದೇವಾಲಯದಲ್ಲಿ ಇರಲಿದ್ದಾರೆ ಎಂದು ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವ ಭೂಷಣ್ ಮಿಶ್ರಾ ತಿಳಿಸಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಸುಮಾರು 1,52,513 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

ಏನಿದು ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆ?

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

Continue Reading

ದೇಶ

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Nuclear Weapon: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದೂ ವಿವರಿಸಲಾಗಿದೆ.

VISTARANEWS.COM


on

Nuclear Weapon
Koo

ನವದೆಹಲಿ: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರ (Nuclear Weapon)ಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ವೀಡನ್ ಚಿಂತಕರ ಚಾವಡಿ ಥಿಂಕ್‌-ಟ್ಯಾಂಕ್‌ (Swedish think-tank) ಸೋಮವಾರ ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದು ವರದಿ ಹೇಳಿದೆ.

ಜಾಗತಿಕವಾಗಿ ಆವರಿಸಿರುವ ಯುದ್ಧದ ಭೀತಿಯ ನಡುವೆ, ಚೀನಾದ ಪರಮಾಣು ಶಸ್ತ್ರಾಸ್ತ್ರದ ಪ್ರಮಾಣ ಒಂದು ವರ್ಷದಲ್ಲಿ 90ರಷ್ಟು ಏರಿಕೆಯಾಗಿದೆ. 2023ರ ಜನವರಿಯಲ್ಲಿ ಚೀನಾದಲ್ಲಿ 410 ಸಿಡಿತಲೆ (Warheads) ಇದ್ದರೆ 2024ರ ಜನವರಿಯಲ್ಲಿ ಅದರ ಸಂಖ್ಯೆ 500ಕ್ಕೆ ಏರಿದೆ. ಜತೆಗೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಅಲ್ಲದೆ ಚೀನಾ ಕೆಲವು ಸಿಡಿತಲೆಗಳನ್ನು ಸರ್ವ ಸನ್ನದ್ಧ ರೀತಿಯಲ್ಲಿ ಇರಿಸಿಕೊಂಡಿದೆ ಎಂದೂ ಮೂಲಗಳು ತಿಳಿಸಿವೆ.

ಆಧುನೀಕರಣಕ್ಕೆ ಒತ್ತು

ಅಮೆರಿಕ, ರಷ್ಯಾ, ಇಂಗ್ಲೆಂಡ್‌, ಫ್ರಾನ್ಸ್, ಚೀನಾ, ಭಾರತ, ಪಾಕಿಸ್ತಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ – ಈ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ಟಾಕ್ಹೋಮ್ ಇಂಟರ್‌ನ್ಯಾಷನಲ್‌ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ (SIPRI) ವರದಿ ಮಾಡಿದೆ.

2024ರ ಜನವರಿಯಿಂದ ಜಾಗತಿಕವಾಗಿ 12,121 ಸಿಡಿತಲೆಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ ಸುಮಾರು 9,585ರಷ್ಟು ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳಲ್ಲಿವೆ. ಈ ಪೈಕಿ ಸುಮಾರು 3,904 ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳೊಂದಿಗೆ ಸಜ್ಜುಗೊಳಿಸಲಾಗಿದೆ ಎನ್ನುವ ಆಘಾತಕಾರಿ ಮಾಹಿತಿಯೂ ಬಹಿರಂಗಗೊಂಡಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಅನೇಕ ಸಿಡಿತಲೆಗಳನ್ನು ನಿಯೋಜಿಸುವ ಸಾಮರ್ಥ್ಯವನ್ನು ಈಗಾಗಲೇ ರಷ್ಯಾ, ಫ್ರಾನ್ಸ್, ಇಂಗ್ಲೆಂಡ್‌, ಅಮೆರಿಕ ಮತ್ತು ಚೀನಾ ಹೊಂದಿದ್ದು, ಇದನ್ನು ಅಭಿವೃದ್ಧಿ ಪಡಿಸಲು ಭಾರತ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾಗಳು ಮುಂದಾಗಿವೆ. ಇದು ನಿಯೋಜಿತ ಸಿಡಿತಲೆಗಳುಗೆ ಮನ್ನಷ್ಟು ಶಕ್ತಿ ತುಂಬುತ್ತದೆ ಮತ್ತು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಎಂದು ಥಿಂಕ್‌-ಟ್ಯಾಂಕ್‌ ಹೇಳಿದೆ. ಜಾಗತಿಕವಾಗಿ ಕಂಡು ಬಂದಿರುವ ಪರಮಾಣು ಶಸ್ತ್ರಾಸ್ತ್ರಗಳ ಪೈಕಿ ರಷ್ಯಾ ಮತ್ತು ಅಮೆರಿಕದಲ್ಲಿ ಸಿಂಹಪಾಲಿದೆ. ಅಂದೆ ಒಟ್ಟು ಶೇ. 90ರಷ್ಟು ಈ ಎರಡು ದೇಶಗಳಲ್ಲಿವೆ.

ಭಾರತ, ಪಾಕಿಸ್ತಾನದಲ್ಲಿ ಎಷ್ಟಿದೆ?

ಈ ವರ್ಷದ ಜನವರಿಯಲ್ಲಿ ಭಾರತದ ‘ಸಂಗ್ರಹಿತ’ ಪರಮಾಣು ಸಿಡಿತಲೆಗಳ ಸಂಖ್ಯೆ 172ರಷ್ಟಿದ್ದರೆ, ಪಾಕಿಸ್ತಾನದ ಸಂಖ್ಯೆ 170 ಎಂದು ವರದಿ ಹೇಳಿದೆ. “ಪಾಕಿಸ್ತಾನವು ಭಾರತದ ಮುಖ್ಯ ಕೇಂದ್ರಬಿಂದುವಾಗಿದ್ದರೂ, ಚೀನಾದಾದ್ಯಂತ ಗುರಿಗಳನ್ನು ತಲುಪುವ ಸಾಮರ್ಥ್ಯ ಸೇರಿದಂತೆ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳಿಗೆ ಒತ್ತು ನೀಡುತ್ತಿದೆ” ಎಂದು ಮೂಲಗಳು ತಿಳಿಸಿದೆ. ಇನ್ನು ರಷ್ಯಾ ಮತ್ತು ಅಮೆರಿಕಕ್ಕೆ ಹೋಲಿಸಿದರೆ ಚೀನಾದಲ್ಲಿ ಸಿಡಿತಲೆಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಚೀನಾ ತನ್ನ ಪರಮಾಣು ಶಸ್ತ್ರಾಗಾರವನ್ನು ಇತರ ದೇಶಗಳಿಗಿಂತ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Mission Divyastra: ʼದಿವ್ಯಾಸ್ತ್ರʼಕ್ಕೆ ಜೀವ ತುಂಬಿದ ʼದಿವ್ಯ ಪುತ್ರಿ! ಯಾರಿವರು?

Continue Reading

ರಾಜಕೀಯ

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Opposition Leader: ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಪ್ರತಿಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದರಿಂದ ಅಧಿಕೃತವಾಗಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿವೆ.

VISTARANEWS.COM


on

By

Leader of the Opposition
Koo

ಲೋಕಸಭೆ ಚುನಾವಣೆ (loksabha election) ಫಲಿತಾಂಶ ಹೊರಬಿದ್ದು ಹದಿನೈದು ದಿನ ಕಳೆದಿದೆ. ಈಗ ಭಾರಿ ಚರ್ಚೆಯಲ್ಲಿರುವ ವಿಷಯ ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನದ್ದು. ಯಾಕೆಂದರೆ 10 ವರ್ಷಗಳ ಬಳಿಕ ದೇಶದ ಕೆಳಮನೆಯಲ್ಲಿ (loksabha) ಪ್ರತಿಪಕ್ಷದ ನಾಯಕ ತನ್ನ ಸ್ಥಾನವನ್ನು ಅಲಂಕರಿಸಲಿದ್ದಾರೆ. 2014ರಿಂದ ಈ ಹುದ್ದೆ ಖಾಲಿಯಿತ್ತು. ಆದರೆ ಈ ಬಾರಿ ಕಾಂಗ್ರೆಸ್ (congress) ಸಾಕಷ್ಟು ಸ್ಥಾನಗಳನ್ನು ಗಳಿಸಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ವಿಶೇಷವೆಂದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಇಂತಹ ಘಟನೆ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿದೆ.

ವಿರೋಧ ಪಕ್ಷದ ಮೊದಲ ನಾಯಕ

ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿ ಆಗಿದ್ದ ಮೊದಲ, ಎರಡನೇ ಮತ್ತು ಮೂರನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಹುದ್ದೆ ಖಾಲಿ ಉಳಿದಿತ್ತು. ನಾಲ್ಕನೇ ಲೋಕಸಭೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ರಾಮ್ ಸುಭಾಗ್ ಅವರು ಈ ಸ್ಥಾನ ಪಡೆದರು.

ಎಂಟು ಬಾರಿ ಸ್ಥಾನ ಖಾಲಿಯಾಗಿತ್ತು

ಐದು, ಏಳು ಮತ್ತು ಎಂಟನೇ ಲೋಕಸಭೆಯಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. 16ನೇ ಲೋಕಸಭೆ ಚುನಾವಣೆ 2014 ಮತ್ತು 17ನೇ ಲೋಕಸಭೆ 2019ರಲ್ಲಿ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. 18ನೇ ಲೋಕಸಭೆಯಲ್ಲಿ ಪ್ರಪ್ರಥಮ ಬಾರಿಗೆ ನರೇಂದ್ರ ಮೋದಿ ವಿರುದ್ಧ ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅವಕಾಶ ವಿಪಕ್ಷಗಳಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಒಟ್ಟು ಎಂಟು ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಉಳಿದಿತ್ತು.

10 ವರ್ಷಗಳ ಅನಂತರ ಕಾಂಗ್ರೆಸ್‌ಗೆ ಅವಕಾಶ

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 292 ಲೋಕಸಭಾ ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಶಕ್ತವಾಗಿತ್ತು. ಆದರೆ ಈ ಬಾರಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಷ್ಟು ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ವಿರೋಧ ಪಕ್ಷದ ನಾಯಕನಿಗೆ ಸಿಗುವ ಸೌಲಭ್ಯಗಳೇನು?

ವಿರೋಧ ಪಕ್ಷದ ನಾಯಕನ ಹುದ್ದೆಯು ಕ್ಯಾಬಿನೆಟ್ ಸಚಿವರಿಗೆ ಸಮಾನವಾಗಿದೆ. ಅವರು ಕೇಂದ್ರ ಸಚಿವರಿಗೆ ಸಮಾನವಾದ ಸಂಬಳ, ಭತ್ಯೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ವಸತಿ ಮತ್ತು ಚಾಲಕನೊಂದಿಗೆ ಕಾರನ್ನು ಒದಗಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೂ ಸಿಬ್ಬಂದಿ ಸಿಗುತ್ತಾರೆ. ವಿರೋಧ ಪಕ್ಷದ ನಾಯಕರು ಸಾರ್ವಜನಿಕ ಖಾತೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಅಂದಾಜುಗಳಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ಹಲವಾರು ಇತರ ಜಂಟಿ ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ.

ಸಿಬಿಐ, ಎನ್‌ಎಚ್‌ಆರ್‌ಸಿ, ಕೇಂದ್ರ ಜಾಗೃತ ಆಯೋಗ, ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರನ್ನು ನೇಮಿಸುವ ಆಯ್ಕೆ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ಸದಸ್ಯರನ್ನಾಗಿ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಸರ್ಕಾರದ ನೀತಿಗಳನ್ನು ಟೀಕಿಸುವ ಸ್ವಾತಂತ್ರ್ಯ ವಿರೋಧ ಪಕ್ಷದ ನಾಯಕನಿಗೆ ಇರುತ್ತದೆ.

Continue Reading

ದೇಶ

ಚುನಾವಣೆಯಲ್ಲಿ ಸೋತಿದ್ದಕ್ಕೆ ನಾಲ್ವರ ಆತ್ಮಹತ್ಯೆ; ಸಾಂತ್ವನ ಹೇಳಿ ಕಣ್ಣೀರಿಟ್ಟ ಬಿಜೆಪಿ ನಾಯಕಿ

Pankaja Munde: ಈ ಲೋಕಸಭಾ ಚುನಾವಣೆಯಲ್ಲಿನ ತಮ್ಮ ಸೋಲಿನ ಆಘಾತದಿಂದ ಆತ್ಮಹತ್ಯೆ ಮಾಡಿಕೊಂಡ ಪಕ್ಷದ ನಾಲ್ವರು ಕಾರ್ಯಕರ್ತರ ಮನೆಗೆ ತೆರಳಿ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪಂಕಜಾ ಮುಂಡೆ ಸಾಂತ್ವನ ಹೇಳಿದ್ದಾರೆ. ʼʼನನ್ನ ಕಾರ್ಯಕರ್ತರು ನನಗೆ ಮುಖ್ಯ. ದಯವಿಟ್ಟು ಇಂತಹ ನಿರ್ಧಾರ ತೆಗೆದುಕೊಳ್ಳಬೇಡಿ. ಮಕ್ಕಳು, ಕುಟುಂಬವನ್ನು ಈ ರೀತಿ ದೂರ ಮಾಡಬೇಡಿʼʼ ಎಂದು ವಿನಂತಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪಕ್ಷದ ಕಾರ್ಯಕರ್ತರಾದ ಪೋಪಟ್‌ರಾವ್‌ ವೈಭಸೆ, ಸಚಿನ್‌ ಮುಂಡೆ, ಪಾಂಡುರಂಗ್‌ ಮತ್ತು ಗಣೇಶ್‌ ಬಡೆ ಅವರ ಮನೆಗಳಿಗೆ ತೆರಳಿ ದುಃಖತಪ್ತ ಕುಟುಂಬಗಳನ್ನು ಸಂತೈಸಿದ್ದಾರೆ.

VISTARANEWS.COM


on

Pankaja Munde
Koo

ಮುಂಬೈ: ಈ ಲೋಕಸಭಾ ಚುನಾವಣೆ (Lok Sabha election)ಯಲ್ಲಿ ಮಹಾರಾಷ್ಟ್ರದ ಬೀಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ನಾಯಕಿ ಪಂಕಜಾ ಮುಂಡೆ (Pankaja Munde) ಸೋತಿದ್ದು, ಈ ಆಘಾತದಿಂದ ಪಕ್ಷದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬ ಸದಸ್ಯರನ್ನು ಭೇಟಿಯಾದ ಪಂಕಜಾ ಮುಂಡೆ ಅವರಿಗೆ ಸಾಂತ್ವನ ಹೇಳಿದ್ದಾರೆ. ʼʼಜೀವನದಲ್ಲಿ ಯಾವತ್ತೂ ಎದೆಗುಂದಬೇಡಿ. ಆತ್ಮಹತ್ಯೆಯೊಂದೇ ಅಂತಿಮ ಪರಿಹಾರವಲ್ಲʼʼ ಎಂದು ಭಾವುಕರಾಗಿ ಮನವಿ ಮಾಡಿದ್ದಾರೆ.

ʼʼನನ್ನ ಕಾರ್ಯಕರ್ತರು ನನಗೆ ಮುಖ್ಯ. ದಯವಿಟ್ಟು ಇಂತಹ ನಿರ್ಧಾರ ತೆಗೆದುಕೊಳ್ಳಬೇಡಿ. ಮಕ್ಕಳು, ಕುಟುಂಬವನ್ನು ಈ ರೀತಿ ದೂರ ಮಾಡಬೇಡಿʼʼ ಎಂದು ವಿನಂತಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪಕ್ಷದ ಕಾರ್ಯಕರ್ತರಾದ ಪೋಪಟ್‌ರಾವ್‌ ವೈಭಸೆ, ಸಚಿನ್‌ ಮುಂಡೆ, ಪಾಂಡುರಂಗ್‌ ಮತ್ತು ಗಣೇಶ್‌ ಬಡೆ ಅವರ ಮನೆಗಳಿಗೆ ತೆರಳಿ ದುಃಖತಪ್ತ ಕುಟುಂಬಗಳನ್ನು ಸಂತೈಸಿದ್ದಾರೆ.

ಪೋಪಟ್‌ರಾವ್‌ ವೈಭವೆ ಅವರ ಮನೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದ ಪಂಕಜಾ ಮುಂಡೆ ಅವರು ಅಳುತ್ತಾ ಕುಟುಂಬ ಸದಸ್ಯರನ್ನು ಸಂತೈಸಿಸುತ್ತಿರುವ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ಪೋಪಟ್‌ರಾವ್‌ ಸಕ್ರಿಯ ಕಾರ್ಯಕರ್ತರಾಗಿದ್ದರು. ಪಕ್ಷದ ಪ್ರತಿಯೊಂದು ಕಾರ್ಯಕ್ಕೂ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ವಾಸ್ತವವಾಗಿ ಅವರೊಬ್ಬ ಹೋರಾಟಗಾರ. ಆದರೆ ಇಂತಹ ದುಡುಕು ನಿರ್ಧಾರ ಯಾಕೆ ತೆಗೆದುಕೊಂಡರು ಎನ್ನುವುದು ಅರ್ಥವಾಗುತ್ತಿಲ್ಲʼʼ ಎಂದು ಪಂಕಜಾ ಮುಂದೆ ಬರೆದುಕೊಂಡಿದ್ದಾರೆ. “ನಾನು ಅವರ ದುಃಖದ ಹೊರೆಯನ್ನು ಹಂಚಿಕೊಳ್ಳುತ್ತೇನೆ. ಅವರ ಮುಗ್ಧ ಮಕ್ಕಳು ಮತ್ತು ಕುಟುಂಬಗಳ ಎಲ್ಲ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ” ಎಂದು ಭರವಸೆ ನೀಡಿದ್ದಾರೆ.

“ಖಂಡಿತವಾಗಿಯೂ ನಾವು ಸೋಲಿನಿಂದ ಖಿನ್ನತೆಗೆ ಒಳಗಾಗುವಷ್ಟು ದುರ್ಬಲರಲ್ಲ. ಆದರೆ ಈ ನೋವು ನನಗೆ ಅಸಹನೀಯವಾಗಿದೆ. ಯಾವುದೇ ಕಾರಣಕ್ಕೂ, ಯಾವುದೇ ಪರಿಸ್ಥಿತಿಯಲ್ಲಿ ನಿಮ್ಮ ಜೀವನವನ್ನು ಬಿಟ್ಟುಕೊಡಬೇಡಿ. ನೀವು ಧೈರ್ಯದಿಂದ ಹೋರಾಡುವ ನಾಯಕನನ್ನು ಬಯಸಿದರೆ, ಧೈರ್ಯದಿಂದ ಹೋರಾಡುವ ಕಾರ್ಯಕರ್ತರೂ ನನಗೆ ಬೇಕು. ನಾನು ಸೋಲಿನಿಂದ ನಿರುತ್ಸಾಹಗೊಳ್ಳುವುದಿಲ್ಲ. ಆದರೆ ಅಂತಹ ಘಟನೆಗಳು ನನ್ನನ್ನು ದುರ್ಬಲಗೊಳಿಸುತ್ತದೆʼʼ ಎಂದು ಅವರು ನೋವಿನಿಂದ ಹೇಳಿದ್ದಾರೆ.

ಬೀಡ್‌ ಲೋಕಸಭಾ ಕ್ಷೇತ್ರದಲ್ಲಿ ಪಂಕಜಾ ಮುಂಡೆ ಅವರನ್ನು ಎನ್‌ಸಿಪಿ(ಶರದ್‌ ಪವಾರ್‌)ಯ ಬಜರಂಗ್‌ ಸೋನಾವಣೆ ಅವರು 6,553 ಮತಗಳ ಅಂತರದಿಂದ ಸೋಲಿಸಿದ್ದರು. ರಾಜ್ಯದ 48 ಕ್ಷೇತ್ರಗಳ ಪೈಕಿ ಪ್ರತಿಪಕ್ಷಗಳ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ 30 ಗೆದ್ದಿದೆ. ಬಿಜೆಪಿ 9 ಸೀಟಿಗೆ ಸೀಮಿತವಾಗಿದೆ.

ಇದನ್ನೂ ಓದಿ: Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

Continue Reading
Advertisement
Narendra Modi
ದೇಶ8 mins ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ24 mins ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ35 mins ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

pattanagere shed actor darshan renuka swamy murder
ಕ್ರೈಂ59 mins ago

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Beer Side Effect
ಆರೋಗ್ಯ1 hour ago

Beer Side Effect: ಬಿಯರ್‌ ಕುಡಿದರೆ ತೂಕ ಹೆಚ್ಚುತ್ತದೆ ಎನ್ನುವುದು ನಿಜವೇ?

Nuclear Weapon
ದೇಶ1 hour ago

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Neeraj Chopra
ಕ್ರೀಡೆ1 hour ago

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Euro 2024
ಕ್ರೀಡೆ2 hours ago

Euro 2024: ಉಕ್ರೇನ್​ಗೆ ಆಘಾತವಿಕ್ಕಿದ ರೊಮೇನಿಯಾ; 3-0 ಗೋಲ್​ ಅಂತರದ ಗೆಲುವು

actor darshan yashas surya
ಪ್ರಮುಖ ಸುದ್ದಿ2 hours ago

Actor Darshan: ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

Leader of the Opposition
ರಾಜಕೀಯ2 hours ago

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು21 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು22 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌