DA Hike :‌ ರಾಜ್ಯ ಸರ್ಕಾರಿ ನೌಕರರಿಗೆ Good News ; ತುಟ್ಟಿಭತ್ಯೆ ಭಾರಿ ಹೆಚ್ಚಳ - Vistara News

ನೌಕರರ ಕಾರ್ನರ್

DA Hike :‌ ರಾಜ್ಯ ಸರ್ಕಾರಿ ನೌಕರರಿಗೆ Good News ; ತುಟ್ಟಿಭತ್ಯೆ ಭಾರಿ ಹೆಚ್ಚಳ

DA Hike : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 3.50% ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆಯ ಸನಿಹದಲ್ಲಿ ಕಾಂಗ್ರೆಸ್‌ ಸರ್ಕಾರ ನೌಕರರಿಗೆ ಖುಷಿ ಸುದ್ದಿ ನೀಡಿದೆ.

VISTARANEWS.COM


on

DA HikeDA Hike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣಾ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ (Government Employees) ಗುಡ್ ನ್ಯೂಸ್‌ (Good News) ನೀಡಲಾಗಿದೆ. ರಾಜ್ಯ ಸರ್ಕಾರ (Karnataka Government) ತುಟ್ಟಿಭತ್ಯೆ ಹೆಚ್ಚಳ (DA Hike) ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಶೇಕಡಾ 3.75ರಷ್ಟು ತುಟ್ಟಿಭತ್ಯೆ (Deaness Allowance) ಹೆಚ್ಚಿಸಲು ಆದೇಶಿಸಲಾಗಿದೆ. ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ.

ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್‌ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75ರಿಂದ ಶೇಕಡ 42.5ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರದ ಆರ್ಥಿಕ ಇಲಾಖೆಗಳ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಸಹಿ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.

ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, 2023ರ ಜುಲೈ 1ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ತುಟ್ಟಿ ಭತ್ಯೆ ಶೇ 38.75ಗೆ ಏರಿಸಲಾಗಿತ್ತು.

ತುಟ್ಟಿ ಭತ್ಯೆಗೆ ಪರಿಗಣಿಸಿದ ಮೂಲ ವೇತನ ಯಾವುದು?

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ‘ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಭಡ್ತಿ..

(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ.

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ- ಎಂದು ತಿಳಿಸಲಾಗಿದೆ.

ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಇತರ ಪ್ರಮುಖ ಅಂಶಗಳು

  1. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
  2. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
  3. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
  4. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂಥ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

ಇದನ್ನೂ ಓದಿ :DA Hike:‌ ಕೇಂದ್ರ ನೌಕರರಿಗೆ ಗುಡ್‌ ನ್ಯೂಸ್;‌ ಶೇ.4ರಷ್ಟು ಡಿಎ ಹೆಚ್ಚಳದ ಜತೆಗೆ ಹಲವು ಬಂಪರ್‌!

ತುಟ್ಟಿಭತ್ಯೆಯನ್ನು ನಗದಾಗಿಯೇ ಪಾವತಿಸಬೇಕು

  1. ಮೇಲಿನ ಅಂಶಗಳ ಆಧಾರದಲ್ಲಿ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಲು ಸೂಚಿಸಲಾಗಿದೆ.
  2. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
  3. ತುಟ್ಟಿಭತ್ಯ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
  4. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

ಸರ್ಕಾರದ ಆದೇಶದಲ್ಲಿ ಏನೇನಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

Pratibha Puraskar: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

Pratibha Puraskar
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು

  • ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
  • ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
  • ವಿದ್ಯಾರ್ಥಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
  • ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್‌ಲೋಡ್ ಮಾಡುವುದು.
  • ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)

ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Continue Reading

ಕರ್ನಾಟಕ

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

MLC Election: ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಒಪಿಎಸ್ ಜಾರಿ ಮಾಡಲು ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಕೂಡ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚುನಾವಣೆಯಲ್ಲಿ (Legislative Council Elections) ಆರೂ ಸ್ಥಾನಗಳನ್ನೂ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸುತ್ತಿದೆ. ಈ ನಡುವೆ ಮತದಾರರನ್ನು ಸೆಳೆಯಲು ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಧಾನ ಸಭಾ ಚುನಾವಣೆ ಸಮಯದಲ್ಲಿ ಒಪಿಎಸ್‌ ಜಾರಿ ಮಾಡುವ ಭರವಸೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿತ್ತು. ಇದೀಗ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವ ಭಾವಿ ಸಭೆಯಲ್ಲೂ ಒಪಿಎಸ್ (Old Pension Scheme) ಜಾರಿ ಬಗ್ಗೆ ಚರ್ಚೆಯಾಗಿರುವುದು ಕಂಡುಬಂದಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪರಿಷತ್‌ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆ.ಕೆ. ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ,‌ ಮರಿತ್ತಿಬ್ಬೇಗೌಡ ಭಾಗಿಯಾಗಿದ್ದರು. ಈ ವೇಳೆ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ, ತನ್ವೀರ್ ಸೇಠ್, ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಒಪಿಎಸ್ ಮರು ಜಾರಿ ಮಾಡಿದ್ರೆ ಗೆಲುವು ಖಚಿತ

ರಾಜ್ಯದಲ್ಲಿ ಒಪಿಎಸ್ ಮರು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರೆ ಗೆಲುವು ಖಚಿತ. ಹೀಗಾಗಿ ಒಪಿಎಸ್ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಬಳಿ ಆಯನೂರು ಮಂಜುನಾಥ್ ಸೇರಿ ಕೈ ಅಭ್ಯರ್ಥಿಗಳು ಸಭೆಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ನೌಕರರ ಮತದಾರರನ್ನು ಸೆಳೆಯಲು ಒಪಿಎಸ್‌ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ‌ ಬಳಿಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗಿದ್ದು, 6 ವಿಧಾನ ಪರಿಷತ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕೈ ಅಭ್ಯರ್ಥಿಗಳ ಪಟ್ಟಿ

  1. ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  2. ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  3. ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  4. ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  5. ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  6. ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್‌ 03, 2024
ಫಲಿತಾಂಶ: ಜೂನ್‌ 06, 2024

Continue Reading

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading
Advertisement
Davanagere News
ಕರ್ನಾಟಕ17 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ26 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ41 mins ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ56 mins ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ1 hour ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest1 hour ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ1 hour ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ2 hours ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ2 hours ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ2 hours ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌