Sumalatha Ambarish : ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗಿದ್ದು ಈಗಲ್ಲ, 3 ತಿಂಗಳ ಹಿಂದೆಯೇ ಡಿಸೈಡ್‌ ಆಗಿತ್ತು! - Vistara News

ರಾಜಕೀಯ

Sumalatha Ambarish : ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗಿದ್ದು ಈಗಲ್ಲ, 3 ತಿಂಗಳ ಹಿಂದೆಯೇ ಡಿಸೈಡ್‌ ಆಗಿತ್ತು!

sumalatha Ambarish : ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಮಿಸ್‌ ಆಗಿರುವುದು ಈಗಲ್ಲ.. ಮೂರು ತಿಂಗಳ ಹಿಂದೆಯೇ ಆಗಿದೆ ಎಂಬುದರ ಕ್ಲೂ ಕೊಟ್ಟಿದ್ದಾರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌. ಅವರು ಹೇಳಿದ್ದೇನು?

VISTARANEWS.COM


on

Sumalatha Ambarish Pratapsimha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Parliament Election) ಹಾಲಿ ಸಂಸದ ಪ್ರತಾಪ್‌ ಸಿಂಹ (MP Pratap Simha) ಅವರಿಗೆ ಈ ಬಾರಿ ಟಿಕೆಟ್‌ ಮಿಸ್‌ (Ticket Miss) ಆಗೋದು ಗ್ಯಾರಂಟಿ ಆಗಿದೆ. ಆದರೆ, ಇದು ಈಗ ನಿರ್ಧಾರವಾಗಿದ್ದಲ್ಲ. ಮೂರು ತಿಂಗಳ ಮೊದಲೇ ಡಿಸೈಡ್‌ ಆಗಿತ್ತು ಎಂಬ ಮಹತ್ವದ ಅಂಶ ಬೆಳಕಿಗೆ ಬಂದಿದೆ. ಅಚ್ಚರಿ ಎಂದರೆ ಇದರ ಬಗ್ಗೆ ಮೊದಲ ಕ್ಲೂ ಕೊಟ್ಟಿರುವುದು ಮಂಡ್ಯದ ಪಕ್ಷೇತರ ಸಂಸದೆ ಮತ್ತು ಈಗ ಬಿಜೆಪಿ ಟಿಕೆಟ್‌ಗಾಗಿ ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ಸುಮಲತಾ ಅಂಬರೀಷ್‌ (Sumalatha Ambarish) ಅವರು!

ವಿಸ್ತಾರ ನ್ಯೂಸ್‌ ಅಸಿಸ್ಟೆಂಟ್‌ ಎಡಿಟರ್‌ ಚಂದನ್‌ ಶರ್ಮಾ (Chandan Sharma) ಅವರು ಸಂಸದರಾದ ಸುಮಲತಾ ಅಂಬರೀಷ್‌ ಅವರ ಜತೆ ನಡೆಸಿದ ಎಕ್ಸ್‌ಕ್ಲೂಸಿವ್ ಮಾತುಕತೆಯಲ್ಲಿ ಈ ಅಂಶ ಬಯಲಾಗಿದೆ.

ಮೂರು ತಿಂಗಳ ಮೊದಲೇ ಸುಮಲತಾಗೆ ಮೈಸೂರು ಟಿಕೆಟ್‌ ಆಫರ್‌ ಮಾಡಲಾಗಿತ್ತು!

ಸುಮಲತಾ ಅವರು ಮಂಡ್ಯದ ಟಿಕೆಟ್‌ಗಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್‌ ಮೂರು ತಿಂಗಳ ಹಿಂದೆ ಅವರ ಮುಂದೆ ಮಂಡ್ಯ ಹೊರತಾದ ಇನ್ನೂ ಎರಡು ಆಯ್ಕೆಗಳನ್ನು ಇಟ್ಟಿತ್ತು. ʻʻನನ್ನ ಮುಂದೆ ಬಿಜೆಪಿ ಹೈಕಮಾಂಡ್‌ ಎರಡು ಆಯ್ಕೆಗಳನ್ನು ಇಟ್ಟಿತ್ತು. ಒಂದು ಮೈಸೂರು ಮತ್ತೊಂದು ಬೆಂಗಳೂರು ಉತ್ತರ. ಆದರೆ, ನಾನು ಇವೆರಡೂ ನನಗೆ ಬೇಡ ಎಂದು ಹೇಳಿದೆ. ನಾನು ಮಂಡ್ಯದಲ್ಲೇ ಹೋರಾಟ ನಡೆಸುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದೆʼʼ ಎಂದು ಮೂರು ತಿಂಗಳ ಹಿಂದೆ ನಡೆದ ಚರ್ಚೆಯ ಬಗ್ಗೆ ವಿವರ ನೀಡಿದ್ದಾರೆ.

ಅಂದರೆ, ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈ ತಪ್ಪುತ್ತಿರುವುದು ಆಕಸ್ಮಿಕವಲ್ಲ. ಮೂರು ತಿಂಗಳ ಹಿಂದೆಯೇ ಹೈಕಮಾಂಡ್ ಮೈಸೂರಿಗೆ ಬೇರೊಬ್ಬರನ್ನು ತರುವ ಬಗ್ಗೆ ಯೋಚನೆ ಮಾಡಿತ್ತು ಎನ್ನುವುದು ಸುಮಲತಾ ಅವರ ಮಾತಿನಿಂದ ಸ್ಪಷ್ಟವಾಗುತ್ತಿದೆ. ಸುಮಲತಾ ಅವರಿಗೆ ಮೊದಲ ಆಫರ್‌ ಆಗಿಯೇ ಮೈಸೂರನ್ನು ನೀಡಲಾಗಿತ್ತು. ಬೆಂಗಳೂರು ಉತ್ತರ ಎರಡನೇ ಆಫರ್‌ ಆಗಿತ್ತು!

ಇದನ್ನೂ ಓದಿ : MP Pratapsimha : ಯದುವೀರ್‌ಗೇ ಟಿಕೆಟ್‌ ಪಕ್ಕಾ; ಉಗ್ರಪ್ರತಾಪಿಯಂತೆ ಸಿಡಿದೆದ್ದ ಪ್ರತಾಪ್‌ಸಿಂಹ

ಹಾಗಿದ್ದರೆ ಹೈಕಮಾಂಡ್‌ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ನೀಡದಿರಲು ಹಿಂದೆಯೇ ನಿರ್ಧಾರ ಮಾಡಿತ್ತು. ಮತ್ತು ಮೈಸೂರಿಗೆ ಸೂಕ್ತವಾದ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿತ್ತು. ಮೊದಲು ಸುಮಲತಾ ಅವರನ್ನು ಕೇಳಿ ಬಳಿಕ ಬೇರೆ ಆಯ್ಕೆಗಳನ್ನು ನೋಡಿ ಇದೀಗ ಮೈಸೂರಿನ ಯದುವೀರ್‌ ಒಡೆಯರ್‌ ಅವರನ್ನು ಬಹುತೇಕ ಫೈನಲ್‌ ಮಾಡಿಧೆ ಎನ್ನುವುದು ಸ್ಪಷ್ಟ.

ಮಂಡ್ಯದ ಟಿಕೆಟ್‌ ಬಗ್ಗೆ ಖುದ್ದು ಪ್ರಧಾನಿ ಮೋದಿಯೇ ಭರವಸೆ ನೀಡಿದ್ದರೇ?

ವಿಸ್ತಾರ ನ್ಯೂಸ್‌ ಜತೆಗಿನ ಮಾತುಕತೆಯಲ್ಲಿ ಇನ್ನೊಂದು ಮಹತ್ವದ ಅಂಶವನ್ನು ಅವರು ಬಿಚ್ಚಿಟ್ಟಿದ್ದಾರೆ. ಅದೇನೆಂದರೆ, ಮಂಡ್ಯ ಕ್ಷೇತ್ರದ ಟಿಕೆಟ್‌ ಬಗ್ಗೆ ಖುದ್ದು ಪ್ರಧಾನಿ ಮೋದಿಯೇ ಭರವಸೆ ನೀಡಿದ್ದಾರೆ ಎನ್ನುವುದು.

ʻʻನಾನು ಟಿಕೆಟ್‌ ಬಗೆಗಿನ ಮಾತುಕತೆಗಾಗಿ ನೇರವಾಗಿ ಪ್ರಧಾನಿ ಅವರನ್ನೇ ಭೇಟಿಯಾಗಿದ್ದೆ. ಆಗ ಮೋದಿಯವರು ನನ್ನನ್ನು ನೋಡಿದ ಕೂಡಲೇ ನಾನು ಆಗಲೇ ಅಮಿತ್‌ ಶಾ ಅವರ ಜತೆ ಮಾತನಾಡಿದ್ದೇನೆ. ನಿಮಗೆ ಟಿಕೆಟ್‌ ಪಕ್ಕಾ ಎಂದು ಭರವಸೆ ನೀಡಿದ್ದರು. ಆ ಭರವಸೆಯನ್ನು ಈಗಲೂ ನಂಬಿದ್ದೇನೆ. ಹೈಕಮಾಂಡ್‌ ಮೇಲೆ ನನಗೆ ನಂಬಿಕೆ ಇದೆ. ನನಗೆ ಟಿಕೆಟ್‌ ದೊರೆಯುತ್ತದೆʼʼ ಎಂದು ಹೇಳಿದರು ಸುಮಲತಾ.

ಆದರೆ, ರಾಜ್ಯದಲ್ಲೂ ಎನ್‌ಡಿಎ ಮೈತ್ರಿಕೂಟವನ್ನು ರಚಿಸಿಕೊಂಡಿರುವ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಹುದು ಎಂಬ ಮಾತುಗಳು ಜೋರಾಗಿವೆ. ಹೀಗಾಗಿ ಸುಮಲತಾ ಅವರ ನಂಬಿಕೆ ನಿಜವಾಗುತ್ತಾ ಎನ್ನುವ ಕುತೂಹಲವೂ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Election Results 2024: 543ರಲ್ಲಿ 542 ಕ್ಷೇತ್ರಗಳ ಫಲಿತಾಂಶ ಘೋಷಣೆ; ಪಕ್ಷಗಳ ಅಂತಿಮ ಬಲಾಬಲ ಹೀಗಿದೆ

Election Results 2024:ಇನ್ನು ಈ ಬಾರಿ ದೇಶದಲ್ಲಿ ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನಗಳನ್ನು ಗೆದ್ದಿವೆ ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ನವೀಕರಣಗಳ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಈ ಕೆಳಗಿನಂತಿದೆ:

VISTARANEWS.COM


on

Election Results 2024
Koo

ನವದೆಹಲಿ: ಚುನಾವಣಾ ಆಯೋಗ(Election commission of India)ವು 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಫಲಿತಾಂಶ(Election Results 2024) ಪ್ರಕಟಿಸಿದ್ದು, ಬಿಜೆಪಿ 240 ಮತ್ತು ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮಹಾರಾಷ್ಟ್ರದ ಬೀಡ್ ಕ್ಷೇತ್ರದ ಫಲಿತಾಂಶ ಒಂದು ಪ್ರಕಟವಾಗಲು ಬಾಕಿ ಉಳಿದಿದೆ. ಈ ಕ್ಷೇತ್ರದಲ್ಲಿ ಎನ್‌ಸಿಪಿ (SP) ಅಭ್ಯರ್ಥಿ ಬಜರಂಗ್ ಮನೋಹರ್ ಸೋನ್ವಾನೆ ಅವರು ಬಿಜೆಪಿಯ ಪಂಕಜಾ ಮುಂಡೆ ಅವರಿಗಿಂತ ಮುನ್ನಡೆ ಸಾಧಿಸಿದ್ದು, ಫಲಿತಾಂಶಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ.

ಇನ್ನು ಈ ಬಾರಿ ದೇಶದಲ್ಲಿ ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನಗಳನ್ನು ಗೆದ್ದಿವೆ ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ನವೀಕರಣಗಳ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಈ ಕೆಳಗಿನಂತಿದೆ:

ಬಿಜೆಪಿ – 240

ಕಾಂಗ್ರೆಸ್ – 99

ಸಮಾಜವಾದಿ ಪಕ್ಷ – 37

ತೃಣಮೂಲ ಕಾಂಗ್ರೆಸ್ – 29

ಡಿಎಂಕೆ – 22

ಟಿಡಿಪಿ – 16

ಜೆಡಿಯು – 12

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) – 9

ಎನ್‌ಸಿಪಿ (ಶರದ್ ಪವಾರ್) 7, 1ರಲ್ಲಿ ಮುನ್ನಡೆ

ಶಿವಸೇನೆ – 7

ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) – 5

YSRCP – 4

ಆರ್ಜೆಡಿ – 4

ಸಿಪಿಐ(ಎಂ) – 4

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – 3

AAP – 3

ಜಾರ್ಖಂಡ್ ಮುಕ್ತಿ ಮೋರ್ಚಾ – 3

ಜನಸೇನಾ ಪಕ್ಷ – ೨

CPI(ML)(L) – 2

ಜೆಡಿ(ಎಸ್) – 2

ವಿದುತಲೈ ಚಿರುತೈಗಲ್ ಕಚ್ಚಿ – ೨

ಸಿಪಿಐ – 2

RLD – 2

ರಾಷ್ಟ್ರೀಯ ಸಮ್ಮೇಳನ – 2

ಯುನೈಟೆಡ್ ಪೀಪಲ್ಸ್ ಪಾರ್ಟಿ, ಲಿಬರಲ್ – 1

ಅಸೋಮ್ ಗಣ ಪರಿಷತ್ – 1

ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) – 1

ಕೇರಳ ಕಾಂಗ್ರೆಸ್ – 1

ಕ್ರಾಂತಿಕಾರಿ ಸಮಾಜವಾದಿ ಪಕ್ಷ – 1

NCP – 1

ಜನರ ಪಕ್ಷದ ಧ್ವನಿ – 1

ಜೋರಾಮ್ ಪೀಪಲ್ಸ್ ಮೂವ್ಮೆಂಟ್ – 1

ಶಿರೋಮಣಿ ಅಕಾಲಿದಳ – 1

ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ – 1

ಭಾರತ್ ಆದಿವಾಸಿ ಪಕ್ಷ – 1

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ – 1

ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ – ೧

ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) – 1

ಅಪ್ನಾ ದಾಲ್ (ಸೋನಿಲಾಲ್) – 1

AJSU ಪಕ್ಷ – 1

AIMIM – 1

ಸ್ವತಂತ್ರ – 7

ಇದನ್ನೂ ಓದಿ:Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Continue Reading

ದೇಶ

Election Results 2024: ಫಲಿತಾಂಶದ ಬೆನ್ನಲ್ಲೇ ಎನ್‌ಡಿಎ, ಇಂಡಿಯಾ ಬಣಗಳ ಹೈವೋಲ್ಟೇಜ್‌ ಮೀಟಿಂಗ್‌

Election Results 2024:ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನಕ್ಕಾಗಿ ಕೇಂದ್ರ ಸಚಿವ ಸಂಪುಟವು ಇಂದು ಬೆಳಗ್ಗೆ ಸಭೆ ಸೇರಲಿದ್ದು, ಪ್ರಸ್ತುತ ಲೋಕಸಭೆಯನ್ನು ವಿಸರ್ಜನೆ ಮಾಡಲು ಶಿಫಾರಸು ಮಾಡಬಹುದು. ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಬೆಳಗ್ಗೆ 11.30ಕ್ಕೆ ಆರಂಭವಾಗಲಿರುವ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ.

VISTARANEWS.COM


on

Election Results 2024
Koo

ಪಾಟ್ನಾ: 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು(Election Results 2024) ಪ್ರಕಟವಾಗುತ್ತಿದ್ದು,400ಕ್ಕೂ ಅಧಿಕ ಸ್ಥಾನಗಳ ಮೂಲಕ ಪ್ರಚಂಡ ಗೆಲುವು ಸಾಧಿಸಿ ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಬಿಜೆಪಿ (BJP) ಕನಸು ಈ ಬಾರಿ ಕನಸಾಗಿಯೇ ಉಳಿದಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಮುಖ್ಯವಾಗಿ ಬಿಹಾರದ ನಿತೀಶ್‌ ಕುಮಾರ್‌(Nitish Kumar) ಕಿಂಗ್‌ ಮೇಕರ್‌ ಆಗಿದ್ದಾರೆ. ಹೀಗಾಗಿ ಇಂದು ದೆಹಲಿಯಲ್ಲಿ ಬಿಜೆಇ ನೇತೃತ್ವದ ಎನ್‌ಡಿಎ ಮಹತ್ವದ ಸಭೆ ಕರೆದಿದ್ದು, ನಿತೀಶ್‌ ಕುಮಾರ್‌ ಕೂಡ ಆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರಣ ಅವರ ಬೇಡಿಕೆಗಳೇನು? ಎಂಬುದನ್ನು ಕಾದು ನೋಡಬೇಕಾಗಿದೆ.

ಬಿಹಾರದಲ್ಲಿ 40 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆಲ್ಲುವಲ್ಲಿ ಜೆಡಿಯು ಯಶಸ್ವಿ ಆಗಿದ್ದು, ಇಂದು ಬೆಳಗ್ಗೆ ನಿತೀಶ್‌ ಕುಮಾರ್‌ ದೆಹಲಿಗೆ ತೆರಳಲಿದ್ದಾರೆ. ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಿದ್ದ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರನ್ನು ಭೇಟಿ ಮಾಡಿದ್ದರು. ಇದೀಗ ನಿತೀಶ್‌ಗೆ ಕಾಂಗ್ರೆಸ್‌ನಿಂದಲೂ ಬಿಗ್‌ ಆಫರ್‌ ಬಂದಿದ್ದು, ಮತ್ತೆ ಎನ್‌ಡಿಎಯಿಂದ ಹೊರ ನಡೆಯುತ್ತಾರೋ ಎಂಬ ಭೀತಿ ಬಿಜೆಪಿಗೆ ಇದ್ದೇ ಇದೆ. ಆದರೆ ನಿನ್ನ ಜೆಡಿಯು ನಾಯಕರು ನಿತೀಶ್‌ ಕುಮಾರ್‌ ಎನ್‌ಡಿಎ ಜೊತೆಗೇ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಮೊದಲೇ ಹೇಳಿದ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಎನ್‌ಡಿಎಗೆ ಮತ್ತೊಮ್ಮೆ ನಾವು ಬೆಂಬಲ ಕೊಡುತ್ತೇವೆ. ಎನ್‌ಡಿಎ ಜೊತೆಗೇ ಮುಂದುವರೆಯುತ್ತೇವೆ ಎಂದು ತ್ಯಾಗಿ ಹೇಳಿದ್ದಾರೆ. ನಿತೀಶ್‌ ಕುಮಾರ್‌ ಅವರಿಗೆ ಮೈತ್ರಿಕೂಟದ ನಿಜವಾದ ಅರ್ಥವನ್ನು ಅರ್ಥೈಸಿಕೊಂಡಿದ್ದಾರೆ. ಹೀಗಾಗಿ ನಾವು ಮೈತ್ರಿಕೂಟದ ಜೊತೆಗೆ ನಮ್ಮ ಮೈತ್ರಿಯನ್ನು ಮುಂದುವರೆಸುತ್ತೇವೆ ಎಂದು ನೀರಜ್‌ ಕುಮಾರ್‌ ತಿಳಿಸಿದ್ದಾರೆ. ಇನ್ನು ಜೆಡಿಯು ಜಮಾ ಖಾನ್‌ ಪ್ರತಿಕ್ರಿಯಿಸಿದ್ದು, ನಮ್ಮ ನಾಯಕರು ಏನು ನಿರ್ಧಾರ ಮಾಡುತ್ತಾರೋ ನಾವು ಹಾಗೇಯೇ ನಡೆದುಕೊಳ್ಳುತ್ತೇವೆ. ನಿತೀಶ್‌ ಕುಮಾರ್‌ ಸದಾ ಜನರ ಹಿತಾಸಕ್ತಿಯನ್ನು ಬಯಸುತ್ತಾರೆ. ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದಿದ್ದಾರೆ.

ಇಂದೇ ನಡೆಯಲಿದೆ ಕೇಂದ್ರ ಸಚಿವ ಸಂಪುಟ ಸಭೆ

ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನಕ್ಕಾಗಿ ಕೇಂದ್ರ ಸಚಿವ ಸಂಪುಟವು ಇಂದು ಬೆಳಗ್ಗೆ ಸಭೆ ಸೇರಲಿದ್ದು, ಪ್ರಸ್ತುತ ಲೋಕಸಭೆಯನ್ನು ವಿಸರ್ಜನೆ ಮಾಡಲು ಶಿಫಾರಸು ಮಾಡಬಹುದು. ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಬೆಳಗ್ಗೆ 11.30ಕ್ಕೆ ಆರಂಭವಾಗಲಿರುವ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಮೋದಿ ಅವರು ತಮ್ಮ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆಯನ್ನು ಕರೆದಿದ್ದಾರೆ ಮತ್ತು ಜೂನ್ 16 ಕ್ಕೆ ಅವಧಿ ಮುಗಿಯುವ 17 ನೇ ಲೋಕಸಭೆಯನ್ನು ವಿಸರ್ಜನೆ ಮಾಡಲು ಶಿಫಾರಸು ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಒಕ್ಕೂಟದ ಮಹತ್ವದ ಸಭೆ

ಲೋಕಸಭೆ ಚುನಾವಣೆಯಲ್ಲಿ ಅನುಕೂಲಕರ ಫಲಿತಾಂಶ ಬಂದ ನಂತರ ಮುಂದಿನ ಕಾರ್ಯತಂತ್ರ ರೂಪಿಸಲು ಇಂಡಿಯಾ ಬಣದ ನಾಯಕರು ಬುಧವಾರ ದೆಹಲಿಯಲ್ಲಿ ಸಭೆ ಸೇರಲಿದ್ದಾರೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ರಾಜಕೀಯ ಬದಲಾವಣೆಗೆ ವಾತಾವರಣವು ಅನುಕೂಲಕರವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Election Results 2024: 25 ವರ್ಷದ ಶಾಂಭವಿ ಚೌಧರಿ ದೇಶದ ಅತ್ಯಂತ ಕಿರಿಯ ಸಂಸದೆ

Continue Reading

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading

ಕರ್ನಾಟಕ

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

R Ashok: ಎನ್‌ಡಿಎನಲ್ಲಿ ಯಾವುದೇ ಒಡಕಿಲ್ಲ. ಇಂಡಿಯಾ ಒಕ್ಕೂಟದಿಂದ ಕೆಲವರು ಎನ್‌ಡಿಎಗೆ ಬರುವ ಸಾಧ್ಯತೆಯಿದೆ. ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸಹೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

BJP celebration about lok sabha election results
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ. ಈ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೆ ಗ್ಯಾರಂಟಿ ನೀಡಿ, ಅವರ ಗಂಡಂದಿರಿಗೆ ಟ್ಯಾಕ್ಸ್‌ ಹಾಕಿದ್ದಾರೆ. ಕಾಂಗ್ರೆಸ್‌ಗೆ ಮಾನ ಮರ್ಯಾದೆ ಹೋಗಿದೆ. ಮುಸ್ಲಿಂ ತುಷ್ಟೀಕರಣ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್‌ಗೆ ಹೀಗಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಮತಗಳ ಅಂತರದ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಿಹಿ ತಿನ್ನಿಸಿ, ಅಭಿನಂದಿಸಿದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಸೇರಿ ಎನ್‌ಡಿಎಗೆ 51.66% ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ಗೆ 45.43% ಬಂದಿದೆ. ಅಂದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಎರಡಂಕಿ ದಾಟುತ್ತೇವೆ ಎಂದು ಅವರು ಹೇಳುತ್ತಲೇ ಇದ್ದರು. ಆದರೆ ಅವರು ವಿಫಲರಾಗಿದ್ದಾರೆ ಎಂದರು.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಕಾಂಗ್ರೆಸ್‌ ಈ ಬಾರಿ ದೇಶದಲ್ಲಿ 21.56% ಮತ ಪಡೆದಿದೆ. ಬಿಜೆಪಿಗೆ ಕಳೆದ ಬಾರಿ 35% ಇದ್ದು, ಈ ಬಾರಿ 36.8% ಮತ ಗಳಿಕೆಯಾಗಿದೆ. ಕಾಂಗ್ರೆಸ್‌ ಮೂರಂಕಿಗೆ ಹೋಗಲೇ ಇಲ್ಲ. 18-20 ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದು, ಆ ಹೇಳಿಕೆ ತಲೆ ಕೆಳಗಾಗಿದೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ 1.39 ಲಕ್ಷ ಅಂತರ ಬಂದಿದ್ದು, ಮುಖ್ಯಮಂತ್ರಿ ಫೇಲ್‌ ಆಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ರಾಜಕೀಯಕ್ಕೆ ಮೊದಲ ಬಾರಿಗೆ ಬಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ 2.69 ಲಕ್ಷ ಅಂತರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 206 ಸ್ಥಾನಗಳನ್ನು ಗಳಿಸಿತ್ತು. ಅದು ಕೂಡ ಸರಳ ಬಹುಮತ ಅಲ್ಲ. ಅಷ್ಟೇ ಅಲ್ಲ ಈಗ ಬಿಜೆಪಿ ಗಳಿಸಿದ್ದಷ್ಟೂ ಅಲ್ಲ. 2014 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಸ್ಥಾನ ಗಳಿಸಿತ್ತು. ಕೇವಲ ಐದು ವರ್ಷದ ದುರಾಡಳಿತದಿಂದಾಗಿ 160 ಸ್ಥಾನಗಳನ್ನು ಕಳೆದುಕೊಂಡಿತ್ತು. 2019 ರಲ್ಲಿ ಬಿಜೆಪಿ 303 ಸ್ಥಾನ ಪಡೆದಿದ್ದು, 2024 ರಲ್ಲಿ 239 ಸ್ಥಾನ ಪಡೆದು, 64 ಸ್ಥಾನ ಮಾತ್ರ ಮೈನಸ್ ಆಗಿದೆ.

2019 ರಲ್ಲಿ ಕಾಂಗ್ರೆಸ್ 52 ಸ್ಥಾನ ಪಡೆದಿದ್ದು, 2024 ರಲ್ಲಿ 99 ಸ್ಥಾನ ಪಡೆದು, 47 ಸ್ಥಾನ ಹೆಚ್ಚಿಸಿಕೊಂಡಿದೆ. ಈಗ ಇಂಡಿಯಾ ಕೂಟದಿಂದಾಗಿ ಕಾಂಗ್ರೆಸ್‌ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಕಾಂಗ್ರೆಸ್‌ಗೆ ಸಿಕ್ಕಿರುವುದು 99 ಸ್ಥಾನ ಮಾತ್ರ. ಇಂಡಿಯಾ ಒಕ್ಕೂಟಕ್ಕೆ ಸಿಕ್ಕಿರುವುದು 232 ಸ್ಥಾನಗಳು. ಬಿಜೆಪಿಗೆ 239 ಸ್ಥಾನಗಳಿವೆ. ಅಂದರೆ ಒಟ್ಟು ಇಂಡಿಯಾ ಕೂಟ ಪಡೆದ ಸ್ಥಾನಗಳು ಬಿಜೆಪಿಗಿಂತಲೂ ಕಡಿಮೆ ಇದೆ ಎಂದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 80 ಸೀಟು ಪಡೆದಿತ್ತು. ಬಿಜೆಪಿ 104 ಪಡೆದು ದೊಡ್ಡ ಪಕ್ಷವಾಗಿತ್ತು. ಆದರೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದಾಗ ಸಿದ್ದರಾಮಯ್ಯ ಕೈ ಕಟ್ಟಿಕೊಂಡು ಕೂತಿದ್ದರು. ಆಗ ನೈತಿಕತೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಕಾಂಗ್ರೆಸ್‌ ಸಚಿವರ ಮಕ್ಕಳು ಸೋತಿರುವುದು ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಜನರು ತೋರಿರುವ ವಿರೋಧ ಎಂದ ಅವರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Continue Reading
Advertisement
Election Results 2024
ದೇಶ29 mins ago

Election Results 2024: 543ರಲ್ಲಿ 542 ಕ್ಷೇತ್ರಗಳ ಫಲಿತಾಂಶ ಘೋಷಣೆ; ಪಕ್ಷಗಳ ಅಂತಿಮ ಬಲಾಬಲ ಹೀಗಿದೆ

Car Stunt
ಪ್ರಮುಖ ಸುದ್ದಿ35 mins ago

Car Stunt : ಬೈಕ್​ ವೀಲಿಂಗ್ ಆಯ್ತು; ಇದೀಗ ಬೆಂಗಳೂರು ಮಹಾನಗರದಲ್ಲಿ ಕಾರಿನಲ್ಲಿ ಸ್ಟಂಟ್​

Praveen Nettaru
ಕ್ರೈಂ58 mins ago

Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Chikkaballapur News
ಪ್ರಮುಖ ಸುದ್ದಿ59 mins ago

Chikkaballapur News : ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

Election Results 2024
ದೇಶ1 hour ago

Election Results 2024: ಫಲಿತಾಂಶದ ಬೆನ್ನಲ್ಲೇ ಎನ್‌ಡಿಎ, ಇಂಡಿಯಾ ಬಣಗಳ ಹೈವೋಲ್ಟೇಜ್‌ ಮೀಟಿಂಗ್‌

Karnataka Weather Forecast
ಮಳೆ3 hours ago

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Benefits of Poppy Seeds
ಆರೋಗ್ಯ3 hours ago

Benefits of Poppy Seeds: ಗಸೆಗಸೆ ನಿದ್ದೆಗಷ್ಟೇ ಅಲ್ಲ, ಪೌಷ್ಟಿಕಾಂಶಗಳ ಆಗರವೂ ಹೌದು!

Microplastics
ಆರೋಗ್ಯ4 hours ago

Microplastics: ನಮಗೆ ಗೊತ್ತೇ ಆಗದಂತೆ ನಮ್ಮ ದೇಹ ಸೇರುತ್ತಿದೆ ಅಪಾಯಕಾರಿ ಪ್ಲಾಸ್ಟಿಕ್‌!

narendra modi amit shah jp nadda election results 2024
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಮಿಶ್ರಫಲ ನೀಡಿದ ಫಲಿತಾಂಶ; ಆಡಳಿತ ಪಕ್ಷಕ್ಕೆ ಪಾಠ, ವಿಪಕ್ಷ ಬಲಿಷ್ಠ

World Environment Day
ಪರಿಸರ4 hours ago

World Environment Day: ಇಂದು ವಿಶ್ವ ಪರಿಸರ ದಿನ; ಭೂಮಿಗೆ ಜ್ವರ, ನಮಗೆಲ್ಲ ಬರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌