Lok Sabha Election 2024: ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ; ಸಿ.ಟಿ. ರವಿ ವಿರುದ್ಧ ಶೋಭಾ ಪರೋಕ್ಷ ವಾಗ್ದಾಳಿ - Vistara News

Lok Sabha Election 2024

Lok Sabha Election 2024: ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ; ಸಿ.ಟಿ. ರವಿ ವಿರುದ್ಧ ಶೋಭಾ ಪರೋಕ್ಷ ವಾಗ್ದಾಳಿ

Lok Sabha Election 2024: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಬಹುದು. ಹೀಗಾಗಿ ಬೇರೆಯವರು ಟಿಕೆಟ್ ಕೇಳುತ್ತಿದ್ದಾರೆ. ನನಗೆ ಎರಡು ಬಾರಿ ಟಿಕೆಟ್ ಕೊಟ್ಟಿದ್ದಾರೆ. ಈಗ ನನ್ನ ಮೇಲೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೆಟ್ ಕೇಳಬಾರದು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

VISTARANEWS.COM


on

Lok Sabha Election 2024 Systematic conspiracy against me Shobha Karandlaje attack on CT Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ (Udupi Chikkamagaluru Lok Sabha constituency) ಸಂಬಂಧಪಟ್ಟಂತೆ ಟಿಕೆಟ್ ಗೊಂದಲ ಇರುವುದು ನಿಜ. ಮಾಜಿ ಸಚಿವ ಸಿ.ಟಿ. ರವಿ (CT Ravi) ಟಿಕೆಟ್‌ ಕೇಳಿದ್ದಾರೆ. ಅವರು ಅಪೇಕ್ಷೆ ಪಡುವುದು ತಪ್ಪಲ್ಲ. ನನ್ನ ಮೇಲೆ ಒಂದು ಗುಂಪು ಮಾತ್ರ ವಿರೋಧ ಮಾಡುತ್ತಿದೆ. ಆದರೆ, ತಮ್ಮ ಸೋಲನ್ನು ಇನ್ನೊಬ್ಬರ ಮೇಲೆ ಹೊರಿಸಬಾರದು. ಅದು ತಾಯಿಗೆ ಮಾಡಿದ ದ್ರೋಹ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅಸಮಾಧಾನವನ್ನು ಹೊರಹಾಕಿದರು. ಈ ಮೂಲಕ ಸಿ.ಟಿ. ರವಿ ವಿರುದ್ಧ ಮೊದಲ ಬಾರಿಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಮ್ಮದು ಸಂಘ ಪರಿವಾರ ಗಟ್ಟಿ ಇರುವ ಜಿಲ್ಲೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಬಹುದು. ಹೀಗಾಗಿ ಬೇರೆಯವರು ಟಿಕೆಟ್ ಕೇಳುತ್ತಿದ್ದಾರೆ. ನನಗೆ ಎರಡು ಬಾರಿ ಟಿಕೆಟ್ ಕೊಟ್ಟಿದ್ದಾರೆ. ಈಗ ನನ್ನ ಮೇಲೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿದೆ. ಇದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ನನ್ನ ವಿರುದ್ಧ ವ್ಯವಸ್ಥಿತ ಗುಂಪಿನಿಂದ ಷಡ್ಯಂತ್ರ

ಟಿಕೆಟ್ ಪಡೆಯಲು ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ವ್ಯವಸ್ಥಿತವಾಗಿ ಒಂದು ಗುಂಪು ವಿರೋಧ ಮಾಡುತ್ತಿದೆ. ಇದರಿಂದ ನಾನು ವಿಚಲಿತಳಾಗಿಲ್ಲ. ಮಾಜಿ ಸಚಿವ ಸಿ.ಟಿ. ರವಿ ಟಿಕೆಟ್ ಕೇಳಿರುವುದು ನಿಜ. ಅವರು ಟಿಕೆಟ್‌ಗೆ ಅಪೇಕ್ಷೆಪಟ್ಟರೆ ತಪ್ಪಲ್ಲ. ಕಾರ್ಯಕರ್ತರು ನನ್ನನ್ನು ವಿರೋಧ ಮಾಡುತ್ತಿಲ್ಲ. ಒಂದು ಗುಂಪು ವಿರೋಧ ಮಾಡುತ್ತಿದೆ. ನಾನು ಹೆತ್ತ ತಾಯಿಗೆ ದ್ರೋಹ ಮಾಡಲ್ಲ, ನಾನು ಈ ಹಿಂದೆ ಸಹ ಯಾರಿಗೂ ವಿರೋಧ ಮಾಡಿಲ್ಲ. ಯಾರೇ ಆಗಲಿ ತಮ್ಮ ಸೋಲನ್ನು ಇನ್ನೊಬ್ಬರ ಮೇಲೆ ಹೊರಿಸಬಾರದು. ಅದು ತಾಯಿಗೆ ಮಾಡಿದ ದ್ರೋಹ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಯಾರಿಗೆ ಟಿಕೆಟ್‌ ಕೊಟ್ಟರೂ ಕೆಲಸ ಮಾಡುತ್ತೇವೆ

ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿಯೂ ಗೆಲ್ಲಲಿದೆ. ಮತದಾರರು ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ. ನಮ್ಮ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಆಧಾರದ ಮೇಲೆ ವೋಟು ಕೇಳುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಆಸಕ್ತಿಯೇ ಇಲ್ಲ

ಹಾವೇರಿ ಎಪಿಎಂಸಿಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಗಲಾಟೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶೋಭಾ ಕರಂದ್ಲಾಜೆ, ರಾಜ್ಯ ಸರ್ಕಾರವು ಕೃಷಿಕರನ್ನು ಮರೆತಿದೆ. ಬ್ಯಾಡಗಿ ಮೆಣಸಿನಕಾಯಿ, ಈರುಳ್ಳಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಗ್ಯಾರಂಟಿ ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಿಂದ ಸಮರ್ಪಕ ಪ್ರಸ್ತಾವನೆಯೇ ಸಲ್ಲಿಕೆಯಾಗಿಲ್ಲ. ಕೇಂದ್ರ ಸರ್ಕಾರವು ರೈತರ ಬೆನ್ನೆಲುಬಾಗಿ ನಿಲ್ಲಲು ರೆಡಿ ಇದೆ. ನಾವು ಕೋಲ್ಡ್ ಸ್ಟೋರೇಜ್ ಮಾಡಿಕೊಳ್ಳಲು ಒಂದು ಲಕ್ಷ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಯಾರೂ ಸಹ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಇದ್ಯಾವುದರ ಬಗ್ಗೆಯೂ ಆಸಕ್ತಿ ಇಲ್ಲ. ಗ್ಯಾರಂಟಿ ಬೆನ್ನು ಬಿದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಸಕ್ತಿ ಇದೆಯಾ? ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಆಸಕ್ತಿ ಇದೆಯಾ? ಎಂದು ಪ್ರಶ್ನೆ ಮಾಡಿದರು.

ಬೆಂಗಳೂರಲ್ಲಿಯೇ ಕುಡಿಯಲು ನೀರಿಲ್ಲ. ಆದರೆ, ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ಸಿಎಂ ಜತೆಗೆ ಮೀಟಿಂಗ್‌ಗೆ ನಾವು ಹೋಗಿದ್ದೆವು. ಅಲ್ಲಿ ಮೀಟಿಂಗ್‌ ಮಾಡುತ್ತಾರೆ. ಇಲ್ಲಿ ಬಂದು ನೀರು ಬಿಡುತ್ತಾರೆ ಎಂದು ಶೋಭಾ ಕರಂದ್ಲಾಜೆ ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ: Lok Sabha Election 2024: ಇಂದು ರಾಜ್ಯದಲ್ಲಿ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಸಿಗಲಿದೆ ಟಿಕೆಟ್?

ಟಿಕೆಟ್‌ ಕೊಡುವುದು ಹೈಕಮಾಂಡ್‌ ನಿರ್ಧಾರ

ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌ ಹಾಗೂ ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹ ಟಿಕೆಟ್‌ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶೋಭಾ ಕರಂದ್ಲಾಜೆ, ಇದೆಲ್ಲವನ್ನೂ ಹಿರಿಯರು ತೀರ್ಮಾನ ಮಾಡುತ್ತಾರೆ. ಅಸಮಾಧಾನವನ್ನು ಶಮನ ಮಾಡುತ್ತಾರೆ. ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಸರ್ವೆ ಮಾಡಿ ಟಿಕೆಟ್ ಕೊಡುತ್ತಾರೆ. ಟಿಕೆಟ್ ಸಿಗಲಿ ಬಿಡಲಿ, ಮೋದಿ ಗೆಲ್ಲಿಸೋದು ನಮ್ಮ ಗುರಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Lok Sabha Election 2024:ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಪಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಬಗ್ಗೆ ವರದಿಯೊಂದನ್ನು ನೀಡಿದೆ. ಈ ಬಾರಿ 400ಕ್ಕೂ ಅಧಿಕ ಸೀಟ್‌ ಪಡೆಯುವ ನಿರೀಕ್ಷೆಯಲ್ಲಿರುವ ಬಿಜೆಪಿಗೆ ಈ ವರದಿ ಶಾಕ್‌ ನೀಡಿದೆ. ಈ ವರದಿ ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ನಾಲ್ಕನೇ ಹಂತದ ಮತದಾನ ನಡೆಯುವ ಮುನ್ನ ಪಲೋಡಿ ಸಟ್ಟಾ ಬಜಾರ್‌ ಫಲಿತಾಂಶದ ಸಮೀಕ್ಷೆ ವರದಿಯೊಂದನ್ನು ನೀಡಿತ್ತು. ಅದರಲ್ಲಿ ಈ ಬಾರಿ ಬಿಜೆಪಿ 307-310 ಸ್ಥಾನಗಳನ್ನು ಗಳಿಸಲಿದೆ ಎಂಬುದು ತಿಳಿದುಬಂದಿತ್ತು. ಆದರೆ ಈಗ ಹೊಸದಾಗಿ ಒಂದು ವರದಿ ನೀಡಿದ್ದು, ಈ ಬಾರಿ ಬಿಜೆಪಿ ಕೇವಲ 296-300 ಸ್ಥಾನಗಳನ್ನು ಹಾಗೂ ಎನ್‌ಡಿಎ 329 to 332 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್‌ 58 ರಿಂದ 62 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಇನ್ನುಳಿದ 164 ಕ್ಷೇತ್ರಗಳಲ್ಲಿ ಮೇ 20, ಮೇ 25 ಮತ್ತು ಜೂ. 1 ರಂದು ಮತದಾನ ನಡೆಯಲಿದೆ.

ರಾಜ್ಯಗಳಲ್ಲಿ ಗೆಲುವಿನ ಲೆಕ್ಕಾಚಾರ ಹೇಗಿದೆ?

ಪಲೋಡಿ ಸಟ್ಟಾ ಬಜಾರ್‌ ನೀಡಿರುವ ವರದಿ ಪ್ರಕಾರ, ಗುಜರಾತ್‌ನ ಎಲ್ಲಾ 26 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವ ಸಾಧಿಸಿದರೆ, ಮಧ್ಯಪ್ರದೇಶದ 29 ಕ್ಷೇತ್ರಗಳಲ್ಲಿ 27-28 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವುದು ಖಚಿತವಾಗಿದೆ. ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ ಈ ಬಾರಿ 18-20 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆಲ್ಲಬಹುದಾಗಿದೆ. ಒಡಿಶಾದ 21 ಸ್ಥಾನಗಳಲ್ಲಿ, ಬಿಜೆಪಿ 11-12 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ .

ಪಂಜಾಬ್‌ನಲ್ಲಿ ಪಕ್ಷವು ಯಾವುದೇ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿಲ್ಲ, ರಾಜ್ಯದಲ್ಲಿ 2-3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 2 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಬಾರಿ 1೦ಸ್ಥಾನಗಳನ್ನು ಗೆದ್ದುಕೊಂಡಿದ್ದ ನೆರೆಯ ಹರಿಯಾಣದಲ್ಲಿ, ಪಕ್ಷಕ್ಕೆ 5-6 ಸ್ಥಾನಗಳು ಮಾತ್ರ ದೊರೆಯಲಿದೆ. ತೆಲಂಗಾಣದಲ್ಲಿ ಬಿಜೆಪಿಗೆ 5-6 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷವು ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ, ಕ್ಲೀನ್ ಸ್ವೀಪ್ ಆಗುವ ಸಾಧ್ಯತೆ ಇದೆ. ಪಕ್ಷ ಉತ್ತರಾಖಂಡದಲ್ಲಿ 5 ಸ್ಥಾನ ಬಿಜೆಪಿ ಬಿಜೆಪಿ ಪಾಲಾಗಾಲಿದೆ.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಪಕ್ಷವು 10-11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 2019ರ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದಿತ್ತು. ಪಕ್ಷವು ದೆಹಲಿಯಲ್ಲಿ 6-7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ – ಅದು 2019 ರಲ್ಲಿಯೂ ಎಲ್ಲಾ 7 ಸ್ಥಾನಗಳನ್ನು ಗೆದ್ದಿತ್ತು. ಸಟ್ಟಾ ಬಜಾರ್ ಪ್ರಕಾರ ತಮಿಳುನಾಡಿನಲ್ಲಿ ಪಕ್ಷವು 3-4 ಸ್ಥಾನಗಳೊಂದಿಗೆ ಕೆಲವು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಫಲೋಡಿ ಸತ್ತಾ ಬಜಾರ್ ಪ್ರಕಾರ, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸುವ ಸಾಧ್ಯತೆಯಿದೆ, ಅದರ ಅಂದಾಜಿನ ಪ್ರಕಾರ 42 ಸ್ಥಾನಗಳಲ್ಲಿ 21-22 ಸ್ಥಾನಗಳನ್ನು ಗೆಲ್ಲಬಹುದೆಂದು ಸೂಚಿಸುತ್ತದೆ.

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

Lok Sabha Election 2024

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

Yogendra Yadav: ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ ಅವರು ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಹೇಗೆ ಕಡಿಮೆ ಸೀಟುಗಳು ಲಭಿಸುತ್ತವೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಹಾಗಾದರೆ, ಯೋಗೇಂದ್ರ ಯಾದವ್‌ ಭವಿಷ್ಯ ಏನು? ಇದಕ್ಕೂ ಮೊದಲು ಅವರು ನುಡಿದ ಭವಿಷ್ಯ ಏನಾಗಿತ್ತು? ಇಲ್ಲಿದೆ ಮಾಹಿತಿ.

VISTARANEWS.COM


on

Yogendra Yadav
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು, ಎಲ್ಲ ಮೈತ್ರಿಕೂಟಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿವೆ. ಚುನಾವಣೆ ಪೂರ್ವ ಸಮೀಕ್ಷೆಗಳು, ಮತಗಟ್ಟೆಗಳಲ್ಲಿ ವ್ಯಕ್ತವಾದ ಅಭಿಪ್ರಾಯ, ಜನರ ಬೆಂಬಲ ಯಾರಿಗಿದೆ ಎಂಬುದರ ವಿಶ್ಲೇಷಣೆ ಮಾಡುತ್ತಿವೆ. ಆಂತರಿಕ ಸಮೀಕ್ಷೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ, ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ (Yogendra Yadav) ಅವರು ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ, ಈ ಬಾರಿ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಲ್ಲ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭವಿಷ್ಯ ಏನಾಗಲಿದೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ ವಿಡಿಯೊವನ್ನು ಯೋಗೇಂದ್ರ ಯಾದವ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 233 ಕ್ಷೇತ್ರಗಳನ್ನು ಮಾತ್ರ ಗೆಲ್ಲಲಿದೆ. ಇದು 70 ಸೀಟುಗಳನ್ನು ಕಳೆದುಕೊಳ್ಳಲಿದೆ. ಇನ್ನು ಬಿಜೆಪಿ ಮೈತ್ರಿ ಪಕ್ಷಗಳು 35 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿವೆ. ಅಲ್ಲಿಗೆ ಎನ್‌ಡಿಎ ಮ್ಯಾಜಿಕ್‌ ನಂಬರ್‌ ಸಮೀಪ ಬರುತ್ತದೆಯೇ ಹೊರತು, ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಾಧ್ಯಮಗಳು ಹಾಗೂ ರಾಜಕೀಯ ವಿಶ್ಲೇಷಕರು ಅಜೆಂಡಾ ಇಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ವರದಿ ನೀಡುತ್ತಿವೆ” ಎಂದು ಟಾಂಗ್‌ ಕೊಟ್ಟರು.

ಯಾವ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ?

ಯೋಗೇಂದ್ರ ಯಾದವ್‌ ಅವರ ವಿಶ್ಲೇಷಣೆ ಪ್ರಕಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ 10 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇನ್ನುಳಿದಂತೆ, ಮಹಾರಾಷ್ಟ್ರದಲ್ಲಿ 20, ರಾಜಸ್ಥಾನ ಹಾಗೂ ಗುಜರಾತ್‌ನಲ್ಲಿ ತಲಾ 10 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ. ಇನ್ನು, ಹರಿಯಾಣ, ಪಂಜಾಬ್‌, ಹಿಮಾಚಲ ಪ್ರದೇಶ ಹಾಗೂ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತಲಾ 10 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಒಟ್ಟು 100 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂಬುದಾಗಿ ಅಂದಾಜಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೈಗೊಂಡ ಬಹುತೇಕ ಸಮೀಕ್ಷೆಗಳಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಯೋಗೇಂದ್ರ ಯಾದವ್‌ ಅವರು ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

2019ರಲ್ಲಿ ನುಡಿದ ಭವಿಷ್ಯ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ಕುರಿತು 2018ರಲ್ಲಿಯೇ ಯೋಗೇಂದ್ರ ಯಾದವ್‌ ಅವರು ವಿಶ್ಲೇಷಣೆ ಮಾಡಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಚುನಾವಣೆಯಲ್ಲಿ 100 ಸೀಟುಗಳನ್ನು ಕಳೆದುಕೊಳ್ಳಲಿದೆ. ಬಿಜೆಪಿಯೊಂದೇ 65 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಬಹುಮತ ಸಾಬೀತುಪಡಿಸುವುದಿಲ್ಲ ಎಂದೇ ಹೇಳಿದ್ದರು. ಇನ್ನು, 2019ರಲ್ಲಿ ಲೇಖನ ಬರೆದಿದ್ದ ಯೋಗೇಂದ್ರ ಯಾದವ್‌, 2004ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ. ಆಗಲೂ ವಾಜಪೇಯಿ ಅವರ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನಲಾಗುತ್ತಿತ್ತು. ಆದರೆ, ಫಲಿತಾಂಶ ಉಲ್ಟಾ ಆಯಿತು. 2019ರ ಚುನಾವಣೆಯಲ್ಲೂ ಇದೇ ರೀತಿ ಆಗಲಿದೆ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಆದರೆ, ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಉಲ್ಟಾ ಆಗಿತ್ತು. ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ರೈತ ಚಳವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗುತ್ತದೆ ಎಂದು ಇವರು ಭವಿಷ್ಯ ನುಡಿದಿದ್ದರು. ಆದರೆ ಅಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಸತತ ಎರಡನೇ ಬಾರಿ ಭಾರಿ ಬಹುಮತದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Continue Reading

ದೇಶ

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi: ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Continue Reading
Advertisement
illegal hunting chikkamagaluru
ಕ್ರೈಂ18 seconds ago

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Cannes 2024 Aishwarya Rai turns lady in black in Falguni
ಸಿನಿಮಾ7 mins ago

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

These foods are really what our body needs in summer
ಆರೋಗ್ಯ30 mins ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ40 mins ago

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Medical Negligence
ದೇಶ42 mins ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ54 mins ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ1 hour ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ4 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ19 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು22 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌