Gas Tanker Overturns : ಶಿರಾಡಿ ಘಾಟಿಯಲ್ಲಿ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ, ಸಂಚಾರ ಬಂದ್‌ - Vistara News

ಹಾಸನ

Gas Tanker Overturns : ಶಿರಾಡಿ ಘಾಟಿಯಲ್ಲಿ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ, ಸಂಚಾರ ಬಂದ್‌

Gas Tanker Overturns : ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ ಉಂಟಾಗಿದೆ. ಇದರಿಂದ ಅಪಾಯವಾಗದಂತೆ ಎಲ್ಲಾ ವಾಹನಗಳ ಸಂಚಾರವನ್ನು ಸ್ಟಾಪ್‌ ಮಾಡಲಾಗಿದೆ.

VISTARANEWS.COM


on

Gas Tanker Overturns Shiradi Ghat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಮಂಗಳೂರು ಮತ್ತು ಬೆಂಗಳೂರನ್ನು (Mangalore Hassan National high way) ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ (Shiradi Ghat) ಗ್ಯಾಸ್‌ ಟ್ಯಾಂಕರ್‌ ಒಂದು ಉರುಳಿ ಬಿದ್ದಿದ್ದು, (Gas Tanker Overturns) ಗ್ಯಾಸ್‌ ಸೋರಿಕೆ (Gas Leakage) ಆರಂಭಗೊಂಡಿದೆ. ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿದೆ (Traffic Diversion).

ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ.

ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ. ಹೀಗಾಗಿ ಭಾರಿ ಪ್ರಮಾಣದಲ್ಲಿ ವಾಹನಗಳು ಶಿರಾಡಿ ಘಾಟಿಯಲ್ಲಿ ಹಿಂದೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿವೆ.

ಇದನ್ನೂ ಓದಿ : Uttara kannada News: ಹೊನ್ನಾವರದ ಬಳಿ ಗ್ಯಾಸ್ ಟ್ಯಾಂಕರ್‌ ಪಲ್ಟಿ; ಹೆದ್ದಾರಿ ಸಂಚಾರ ಅಸ್ತವ್ಯಸ್ತ

Gas Tanker Overturns Shiradi Ghat

ಬದಲಿ ಮಾರ್ಗದಲ್ಲಿ ಸಂಚಾರ

ಈಗ ಪೊಲೀಸರು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ.

ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.

ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Rain News : ಮಳೆಯು ಅನಾಹುತವನ್ನೇ (Rain Effect) ಸೃಷ್ಟಿಸುತ್ತಿದೆ. ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಉಸಿರು ಚೆಲ್ಲಿದ್ದಾರೆ. ಇನ್ನೊಂದು ವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬಾಗಲಕೋಟೆ/ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಬಾಗಲಕೋಟೆಯ ಜಮಖಂಡಿ ನಗರದ ಮೋಮಿನ ಗಲ್ಲಿಯಲ್ಲಿ ನಿರಂತರ ಮಳೆಗೆ (Rain News) ಮಣ್ಣಿನ ಮನೆ ಕುಸಿದಿದ್ದು, ಮನೆಯೊಳಗಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟಿದ್ದಾರೆ. ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಮೃತ ದುರ್ದೈವಿ‌.

ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಈ ವೇಳೆ ಮುಸ್ತಾಕ ಮಕಬುಲ್‌ ಅವರು ಮನೆಯೊಳಗೆ ಮಲಗಿದ್ದು, ಇವರ ಮೈಮೇಲೆ ಮಣ್ಣು ಕುಸಿದ ಪರಿಣಾಮ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ- ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದಾಗ ಘಟನೆ ನಡೆದಿದೆ. ಇನ್ನೂ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರ ತೆಗೆಯಲಾಯಿತು.

ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲೂ ಮುಂದುವರಿದ ವರ್ಷಧಾರೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯು ಮುಂದುವರಿದಿದೆ. ಕೆಆರ್‌ ಸರ್ಕಲ್‌, ವಿಧಾನಸೌಧ, ಶಿವಾಜಿನಗರ, ವಸಂತ ನಗರ, ಮೆಜೆಸ್ಟಿಕ್‌, ಕೆಂಗೇರಿ, ಜ್ಞಾನಭಾರತಿ, ನಾಗರಭಾವಿ ಸುತ್ತಮುತ್ತ ಮಳೆಯಾಗಿದೆ. ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಲಘು ಮಳೆ ಸಾಧ್ಯತೆ

ಜೂನ್‌ 14ರಂದು ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

Road Accident : ರಾಜ್ಯದ ಹಲವೆಡೆ ರಸ್ತೆ ಅಪಘಾತಗಳು ಸಂಭವಿಸಿದೆ. ಕೋಲಾರದಲ್ಲಿ ಕಾರು ಡಿಕ್ಕಿ ಸವಾರ ಪ್ರಾಣ ಕಳೆದುಕೊಂಡರೆ, ಶಿವಮೊಗ್ಗದಲ್ಲಿ ತ್ರಿಬಲ್‌ ರೈಡಿಂಗ್‌ ಪ್ರಾಣಕ್ಕೆ ಕುತ್ತು ತಂದಿತ್ತು. ಇತ ಕಾರವಾರದಲ್ಲಿ ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿ ಡಿಕ್ಕಿ ಹೊಡೆದರೆ, ಹಾಸನದಲ್ಲಿ ಟ್ಯಾಂಕರ್‌ವೊಂದು ಪಲ್ಟಿಯಾಗಿತ್ತು. ದಾವಣಗೆರೆಯಲ್ಲಿ ನಿಂತಿದ್ದ ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಸವಾರರು ನರಳಾಡುವಂತಾಗಿತ್ತು.

VISTARANEWS.COM


on

By

Road Accident
Koo

ಕೋಲಾರ/ಶಿವಮೊಗ್ಗ: ಪ್ರತ್ಯೇಕ ಕಡೆಗಳಲ್ಲಿ ಅಪಘಾತಗಳು (Road Accident ) ನಡೆದಿದ್ದು, ಸಾವು-ನೋವಿಗೆ ಕಾರಣವಾಗಿದೆ. ಕೋಲಾರದ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲೂರು ಗ್ರಾಮದ ನಾಗರಾಜ (50) ಮೃತ ದುರ್ದೈವಿ.

ಚವರ್ಲೈಟ್ ಕಾರು ಹಾಗೂ ಸೂಪರ್ ಎಕ್ಸ್ ಎಲ್ ಸ್ಕೂಟರ್‌ ನಡುವೆ ಅಪಘಾತ ನಡೆದಿದೆ. ನಾಗರಾಜ ಅವರು ಸ್ಕೂಟರ್‌ನಲ್ಲಿ ಮನೆಯಿಂದ ತೋಟದ ಕಡೆಗೆ ಹೊರಟಿದ್ದರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಗರಾಜ ರಸ್ತೆ ಬದಿಯ‌ ಡಿವೈಡರ್‌ ಹಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಕಾರಿಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರರು

ಶಿವಮೊಗ್ಗ ತಾಲೂಕಿನ ಯಡೆಹಳ್ಳಿ ಗ್ರಾಮದ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ಹೋಗುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ.

ಹೊಳೆ ಬೈರನಹಳ್ಳಿ ಗ್ರಾಮದ ಮೂವರು ಯುವಕರು ಒಂದೇ ಬೈಕ್‌ ಹೊರಡುವಾಗ ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮೂವರು ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು. ಕೈ-ಕಾಲುಗಳಿಗೆ ಗಾಯವಾಗಿದ್ದು, ಮೂವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರು ರಿವರ್ಸ್‌ ತೆಗೆಯುವಾಗ ಸ್ಕೂಟಿಗೆ ಡಿಕ್ಕಿ

ಕಾರು ರಿವರ್ಸ್‌ ತೆಗೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಸಂಡೇ ಮಾರ್ಕೆಟ್ ಬಳಿ ಕಾರು ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟಿಯಲ್ಲಿದ್ದ ಎಲಿಜಬೆತ್ ಕಲ್ವಕುರಿ, ಯೇಸುದಾಸ್ ಕಲ್ವಕುರಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೊಬ್ಬರು ತಮ್ಮ ಕಾರನ್ನು ರಿವರ್ಸ್‌ ತೆಗೆಯುವಾಗ ಈ ಅವಘಡ ನಡೆದಿದೆ. ಗಾಯಾಳುಗಳು ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ ಹೊಡೆದಿದೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್, ಸಮುದ್ರವಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪಲ್ಟಿಯಾಗಿತ್ತು.

ಇತ್ತ ಗ್ಯಾಸ್ ಪಲ್ಟಿಯಾದ ವೇಳೆ ಡ್ರೈವಿಂಗ್ ಸೀಟ್‌ನಲ್ಲಿ ಚಾಲಕ ಸಿಲುಕಿಕೊಂಡಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನು ರಕ್ಷಿಸಿದರು. ಬಳಿಕ ಗ್ಯಾಸ್ ಟ್ಯಾಂಕರ್ ತೆರವುಗೊಳಿಸಿದರು. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಬೈಕ್‌ಗಳಿಗೆ ಕಾರು ಡಿಕ್ಕಿ

ರಸ್ತೆ ಬದಿ ನಿಂತಿದ್ದ ಎರಡು ಬೈಕ್‌ಗಳಿಗೆ ಕಾರೊಂದು ಡಿಕ್ಕಿ ಹೊಡೆದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ನಗರದ ವಿಮಾನ‌ಮಟ್ಟಿ ಚಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಕುಡಿದು ಕಾರು ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಹರಪ್ಪನಹಳ್ಳಿ ತಾಲೂಕಿನ ಅಣಜಿಕೆರೆ ಗ್ರಾಮದ ಪ್ರದೀಪ್, ಲೋಕೇಶ್ ಮದ್ಯಪಾನ ‌ಮಾಡಿ ಕಾರು ಚಲಾಯಿಸಿದವರು. ಸದ್ಯ ಗಾಯಗೊಂಡವರ ಗುರುತು ಪತ್ತೆಯಾಗಿಲ್ಲ. ಅಪಘಾತ ಆಗುತ್ತಿದ್ದಂತೆ ಕಾರಿ‌ನಲ್ಲಿದ್ದ ಒಬ್ಬನನ್ನು ‌ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಬ್ಬ ಕಾರಿನಲ್ಲಿ ತಪ್ಪಿಸಿಕೊಂಡು ಹೋಗುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Karnataka Rain : ಸತತ ಮಳೆಗೆ (Rain Effect) ಉತ್ತರ ಒಳನಾಡಿನ ಭಾಗ ತತ್ತರಿಸಿ ಹೋಗಿದೆ. ಗಂಟೆ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾಯಚೂರಿನಲ್ಲಿ ಮಳೆಗೆ ಶಾಲೆಯ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

By

Karnataka Rain Effect
Koo

ರಾಯಚೂರು: ಮಳೆ ಅವಾಂತರಕ್ಕೆ (Rain Effect) ಶಾಲೆ ಚಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ (Karnataka Rain)ಘಟನೆ ನಡೆದಿದೆ. ತರಗತಿ ನಡೆಯುತ್ತಿರುವಾಗಲೇ ಏಕಾಏಕಿ ಚಾವಣಿ ಕಳಚಿ ಮಕ್ಕಳ ಬಿದ್ದಿದ್ದು, ತಲೆ, ಕೈಗಳಿಗೆ ಗಾಯವಾಗಿದೆ.

ಪಾತಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾವಣಿ ಕುಸಿದು, ವಿದ್ಯಾರ್ಥಿ ಚಂದನಬಸವರಾಜ್‌ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಾಂತರ ಸೃಷ್ಟಿಯಾಗಿದೆ.

ಮಕ್ಕಳು ಜೀವ ಭಯದಲ್ಲಿ ಪಾಠ ಕಲಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿಇಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಠಡಿ ಸೋರುತ್ತಿರುವುದರಿಂದ ತಾತ್ಕಾಲಿಕವಾಗಿ ಬೇರೆ ತರಗತಿ ನಡೆಸಲು ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸಲು ಬಿಇಓ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಜಲಸಮಾಧಿಯಾದ ಬೃಹತ್‌ ಬಾವಿ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಮೀನಿನಲ್ಲಿದ್ದ ಬೃಹತ್ ಬಾವಿಯೊಂದು ಜಲಸಮಾಧಿಯಾಗಿದೆ. ಬಾವಿ ಸುತ್ತಲೂ ಕಲ್ಲಿನ ಗೋಡೆ ನಿರ್ಮಿಸಿದರೂ ಬಾವಿ ಕುಸಿದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಗ್ರಾಮದಲ್ಲಿ ಘಟನೆ ನಡೆದಿದೆ.

14 ಎಕರೆ ಜಮೀನಿಗಾಗಿ 60 ಲಕ್ಷ ರೂ. ಖರ್ಚು ಮಾಡಿ ಜಮೀನಿನಲ್ಲಿ ರೈತ ಸಿದ್ದಪ್ಪ ಸರಬಡಗಿ ಬಾವಿಯನ್ನು ಕಟ್ಟಿಸಿದ್ದರು. ಇದೀಗ ಸಂಪೂರ್ಣವಾಗಿ ಬಾವಿ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಚಿಂತೆಗೀಡಾಗಿದ್ದಾರೆ. 110 ಆಳದ ಬಾವಿಗೆ ಸುತ್ತಲೂ 45 ಅಡಿ ಕಲ್ಲಿನ ಗೋಡೆ ಕಟ್ಟಿಸಲಾಗಿತ್ತು. ಇದೀಗ ಬಾವಿಯೊಳಗೆ 7.5ಎಚ್‌ಪಿ 2 ಮೋಟಾರು ನೀರು ಪಾಲಾಗಿದೆ. ಬಾವಿ ಕುಸಿದಿರುವ ಹಿನ್ನೆಲೆ ಕೃಷಿಗೆ ನೀರು ಪೂರೈಸುವುದು ಹೇಗೆ ಎಂದು ಗೋಳಾಡುತ್ತಿದ್ದಾರೆ. ಕೂಡಲೇ ಸರ್ಕಾರ ಪರಿಹಾರ ಕೊಡಲಿಎಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ ಭರ್ತಿ

ಒಂದೇ ಮಳೆಗೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್‌ ಇದ್ದು, ಈಗಾಗಲೇ ನೀರಿನ ಮಟ್ಟ 588.11 ಮೀ ಬಂದಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧಾರವಾಗಿತ್ತು. ಗಾಜನೂರಿನ ತುಂಗಾ ಜಲಾಶಯದ 3.24 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿವಮೊಗ್ಗದ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿದ ಮಳೆಯಿಂದಾಗಿ ತುಂಗಾ ನದಿಯಲ್ಲಿ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಭರ್ತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Wild Elephant Attack:ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

VISTARANEWS.COM


on

wild elephant attack
Koo

ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ (Wild Elephant Attack) ಮಾಡಿತ್ತು. 60 ವರ್ಷದ ದಿವಾಕರ್ ಶೆಟ್ಟಿ ಗಾಯಗೊಂಡವರು.

ದಿವಾಕರ್​ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ

ಕಾಡಿನಿಂದ ನಾಡಿಗೆ ಮುಖ ಮಾಡಿರುವ ಆನೆಗಳು ಕಾಫಿ ತೋಟಗಳ ನಡುವೆ ನಿಂತಿವೆ. ಹೀಗಾಗಿ ಜೀವ ಭಯದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಮತ್ತು ಮಾನವನ ಸಂಘರ್ಷ ಹಲವಾರು ಸಮಯದಿಂದ ಈ ಪ್ರದೇಶದಲ್ಲಿ ನಡೆಯುತ್ತಿದೆ. ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಕಾಫಿ ತೋಟಗಳಿಗೆ ಆನೆಗಳು ಲಗ್ಗೆ ಇಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆನೆಗಳ ದಾಳಿಯಿಂದಾಗಿ ಹಲವಾರು ಕಾರ್ಮಿಕರು ಜರ್ಜರಿತರಾಗಿದ್ದಾರೆ. ಹೀಗಾಗಿ ಇದಕ್ಕೊಂದು ಪರಿಹಾರ ಇಲ್ಲ ಎನ್ನುವಂತಾಗಿದೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಹಂಪಿಗೆ ಬಂದ ಕರಡಿ

ಹಂಪಿ ಪರಿಸರದಲ್ಲಿ ಮತ್ತೆ ಕರಡಿ ಪ್ರತ್ಯಕ್ಷಗೊಂಡಿದ್ದು, ಇಲ್ಲಿನ ಪರಿಸರದ ಜನರಿಗೆ ಕರಡಿ ದಾಳಿಯ ಭಯ ಶುರುವಾಗಿದೆ. ಅಕ್ಕ – ತಂಗಿಯರ ಗುಡ್ಡದಿಂದ ಕಡ್ಡಿರಾಂಪುರಕ್ಕೆ ಹೋಗುವ ರಸ್ತೆಯಲ್ಲಿ ಕರಡಿಯೊಂದು ಕಂಡು ಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹಂಪಿ- ಕಡ್ಡಿರಾಂಪುರ ರಸ್ತೆಯಿದ್ದು ಕಾಡು ಪ್ರಾಣಿಯ ದಾಳಿಯ ಭಯ ಹೆಚ್ಚಾಗಿದೆ. ಸೋಮವಾರ ಸಂಜೆ ವೇಳೆ ವಿಜಯ ವಿಠ್ಠಲ ಬಜಾರ್ ನಲ್ಲಿ ಕರಡಿ ಪ್ರತ್ಯಕ್ಷ ಆಗಿತ್ತು. ಇದೀಗ ಕಡ್ಡಿರಾಂಪೂರ ಗ್ರಾಮದ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ ಕರಡಿ ಪದೇ ಪದೇ ಬರುತ್ತಿರುವ ಕಾರಣ ಹೊಲ, ಗದ್ದೆಗಳಿಗೆ ಹೋಗುವ ರೈತರಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Continue Reading
Advertisement
Amith Shah
ಪ್ರಮುಖ ಸುದ್ದಿ1 min ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ23 mins ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ1 hour ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Jammu Kashmir
ದೇಶ6 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ6 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ7 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ8 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ9 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ9 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್9 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌