ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ; ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯೊಂದಿಗೆ ಚೆವಲಿಯರ್ ಗ್ರೂಪ್ ಒಡಂಬಡಿಕೆ - Vistara News

ಬೆಂಗಳೂರು

ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ; ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯೊಂದಿಗೆ ಚೆವಲಿಯರ್ ಗ್ರೂಪ್ ಒಡಂಬಡಿಕೆ

ರಷ್ಯಾ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು, ಚೆವಲಿಯರ್‌ ಗ್ರೂಪ್‌ ಮತ್ತು ರಷ್ಯಾದ ಪೆನ್ಜಾ ಸ್ಟೇಟ್ ಯೂನಿವರ್ಸಿಟಿ ಒಡಂಬಡಿಕೆ ಮಾಡಿಕೊಂಡಿವೆ.

VISTARANEWS.COM


on

Chevalier Group
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಷ್ಯಾ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ದೇಶದ ಪ್ರಮುಖ ಬಹುರಾಷ್ಟ್ರೀಯ ನಿಗಮವಾಗಿರುವ ಚೆವಲಿಯರ್‌ ಗ್ರೂಪ್‌, ರಷ್ಯಾದ ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಚೆವೆಲಿಯರ್ ಗ್ರೂಪ್‌ನ ಸಂಸ್ಥಾಪಕ ಮತ್ತು ಸಿಇಒ ಡಾ. ಯುವರಾಜ್ ಸಿಂಗ್ ಸೋಲಂಕಿ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಾನು ರಷ್ಯಾದಲ್ಲಿ ಅಧ್ಯಯನ ಮಾಡಿದ್ದು, ನನಗೆ 20 ವರ್ಷಗಳ ಅನುಭವವಿದೆ. ಅಲ್ಲದೇ, ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯ ಗೌರವ ಉಪನ್ಯಾಸಕರು ಮತ್ತು ಸಲಹೆಗಾರ ಆಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ಈ ವಿವಿ ಕೇವಲ ಎಂಬಿಬಿಎಸ್ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಭರ್ತಿಮಾಡಿಕೊಳ್ಳುವುದಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸಮಗ್ರ ಬೆಂಬಲ ಮತ್ತು ವೈದ್ಯಕೀಯ ಶಿಕ್ಷಣದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದರು.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

2013 – 2023ರ ದಶಕದಲ್ಲಿ 370 ವಿದ್ಯಾರ್ಥಿಗಳು ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯಿಂದ ಪದವಿ ಪಡೆದಿದ್ದು, 1200 ಕ್ಕೂ ಅಧಿಕ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪೈಕಿ 245 ವಿದ್ಯಾರ್ಥಿಗಳು ಯಶಸ್ವಿಯಾಗಿ ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆ (ಎಫ್.ಎಂ.ಜಿ.ಇ) ಯಲ್ಲಿ ಉತ್ತೀರ್ಣರಾಗಿದ್ದು, ತೇರ್ಗಡೆ ಪ್ರಮಾಣ ಶೇ.65 ರಷ್ಟಿದೆ. 65 ಮಂದಿ ವೈದ್ಯರು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ. ಇದು ಚೆವೆಲಿಯರ್ ಗ್ರೂಪ್‌ನೊಂದಿಗೆ ಸಹಭಾಗಿತ್ವ ಹೊಂದಿರುವ ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯ ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಹಿತ ರಕ್ಷಣೆ ಚೆವೆಲಿಯರ್ ಗ್ರೂಪ್‌ನ ಪ್ರಧಾನ ಆದ್ಯತೆಯಾಗಿದ್ದು, ವಿದ್ಯಾರ್ಥಿಯ ಪ್ರತಿಯೊಂದು ಶೈಕ್ಷಣಿಕ ಆಯಾಮಗಳನ್ನು ಎಚ್ಚರಿಕೆಯಿಂದ ನಿರ್ವಹಿಸುತ್ತದೆ. ದಾಖಲಾತಿ ಸಲ್ಲಿಕೆಯಿಂದ ಹಿಡಿದು ಪ್ರವೇಶ ಪ್ರಕ್ರಿಯೆಯ ಪ್ರತಿಯೊಂದು ಚಟುವಟಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ವಸತಿ ನಿಲಯದ ಕೊಠಡಿ ಮಂಜೂರಾತಿ, ವಿವಿಗೆ ಭೇಟಿ, ಹೀಗೆ ಸಣ್ಣ ವಿಷಯಗಳಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ನೆರವಾಗುತ್ತಿದೆ. ಪೆನ್ಜಾದಲ್ಲಿ ಚೆವೆಲಿಯರ್ ಗ್ರೂಪ್ ಎರಡು ಭಾರತೀಯ ವಸತಿ ನಿಲಯಗಳು ಮತ್ತು ಮೂರು ಹೋಟೆಲ್‌ಗಳನ್ನು ನಡೆಸುತ್ತಿದ್ದು, ಮೂರು ಹೊತ್ತು ಭಾರತೀಯ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ. ವೈದ್ಯಕೀಯ ತುರ್ತುಪರಿಸ್ಥಿತಿ ಸಂದರ್ಭಗಳಲ್ಲಿ ವೈದ್ಯಕೀಯ ನೆರವು ಒದಗಿಸುತ್ತಿದೆ ಎಂದು ವಿವರಿಸಿದರು.

ದಕ್ಷಿಣ ಭಾರತದಲ್ಲಿ ಚೆವಲಿಯರ್ ಗ್ರೂಪ್‌ನ ಅಧಿಕೃತ ಪಾಲುದಾರ IT&CS PVT LTDನ ವ್ಯವಸ್ಥಾಪಕ ನಿರ್ದೇಶಕರಾದ ಕ್ಷತ್ರಧಾರಿ ಮಂಡಲ್ ಮಾತನಾಡಿ, ಚೆವೆಲಿಯರ್ ಗ್ರೂಪ್ ಮುಂದಿನ ಪೆನ್ಜಾ ಸ್ಟೇಟ್ ಯೂನಿವರ್ಸಿಟಿಯ ಪರೀಕ್ಷೆಗೆ ಭಾರತೀಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು 10 ಮಂದಿ ಖ್ಯಾತ ಬೋಧಕ ಸಿಬ್ಬಂದಿಯನ್ನು ಸಹ ನಿಯೋಜಿಸಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆ ಹೆಚ್ಚಾಗುವ ಜೊತೆಗೆ ತಮ್ಮ ಅಧ್ಯಯನದಲ್ಲಿ ವಿಶೇಷತೆ ಸಾಧಿಸಲು ಸಾಧ್ಯವಾಗಲಿದೆ.

ಇದನ್ನೂ ಓದಿ | Scholarship : 6 ಲಕ್ಷ ಸ್ಕಾಲರ್​ಶಿಪ್​ ಸಮೇತ ಆಸ್ಟ್ರೇಲಿಯಾದಲ್ಲಿ ಪದವಿ ಮಾಡುವ ಆಸೆಯೆ? ಇಲ್ಲಿದೆ ಸುವರ್ಣಾವಕಾಶ

ಚೆವೆಲಿಯರ್ ಗ್ರೂಪ್ ಇದೀಗ ವಡೋದರದ ಪರ್ಲ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಪೆನ್ಜಾ ಸ್ಟೇಟ್ ಯೂನಿರ್ವಸಿಟಿಯ ಪ್ರಾಯೋಗಿಕ ಕಾರ್ಯಕ್ರಮಗಳನ್ನು ಇಲ್ಲಿ ನಡೆಸಲಾಗುತ್ತಿದೆ. ವೈದ್ಯಕೀಯ ಶಿಕ್ಷಣದ ಭವಿಷ್ಯದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸನ್ನದ್ಧರಾಗಲು ನೆರವಾಗುತ್ತಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Rahul Gandhi: ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Rahul Gandhi
Koo

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ (Rahul Gandhi) ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ (YouTuber Ajeet Bharti) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಯುಟ್ಯೂಬರ್‌ ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ಆ ರೀತಿ ಯಾವುದೇ ಭಾಷಣದಲ್ಲಿ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗೂ ಕೋಮು ದ್ವೇಷ ಹರಡಲು ಸ್ವಯಂ ಘೋಷಿತ ಪತ್ರಕರ್ತ, ಲೇಖಕ ಅಜಿತ್ ಭಾರತಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಯುಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಜಿತ್ ಭಾರತಿ ಅವರ ಯೂಟ್ಯೂಬ್ ಚಾನೆಲ್‌ಗೆ 5.56 ಲಕ್ಷ ಚಂದಾದಾರರು ಇದ್ದಾರೆ. ಅವರ ಇತ್ತೀಚಿನ ಹೆಚ್ಚಿನ ವಿಡಿಯೊಗಳು ಎರಡು ಲಕ್ಷಕ್ಕೂ ಹೆಚ್ಚು ವೀವ್ಸ್‌ ಕಂಡಿವೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ನಲ್ಲಿ ಅವರು ಪತ್ರಕರ್ತ ಮತ್ತು ಲೇಖಕ ಎಂದು ಬರೆದುಕೊಂಡಿದ್ದಾರೆ. ರಾಹುಲ್‌ ಗಾಂಧಿ ಅವರ ಬಗ್ಗೆ ಮಾಡಿರುವ ವಿಡಿಯೊ ಸಂಬಂಧ‌ ಇದೀಗ ಇವರ ವಿರುದ್ಧ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ!; ಇವಿಎಂ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

DK Shivakumar

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

NEETPG 2024 : ಜೂನ್‌ 23ಕ್ಕೆ ನೀಟ್‌ ಪಿಜಿ ಪರೀಕ್ಷೆ ನಡೆಯಲಿದ್ದು, ನಾಳೆ ಅಂದರೆ ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.‌

VISTARANEWS.COM


on

By

NEETPG 2024
ಸಾಂದರ್ಭಿಕ ಚಿತ್ರ
Koo

ನವದೆಹಲಿ/ಬೆಂಗಳೂರು : ದೇಶಾದ್ಯಂತ ಸುಮಾರು 259 ಕೇಂದ್ರದಲ್ಲಿ ಜೂನ್‌ 23ಕ್ಕೆ ನೀಟ್ ಪಿಜಿ 2024 (NEETPG 2024) ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿ ಕೊಂಡಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನ ಅಧಿಕೃತ ವೆಬ್ಸೈಟ್ natboard.edu.in ಡೌನ್‌ಲೋಡ್‌ ಮಾಡಬಹುದು.

ಅರ್ಹ ಅಭ್ಯರ್ಥಿಗಳು ತಮ್ಮ ಲಾಗಿನ್ ಐಡಿ ಮೂಲಕ ನೀಟ್ ಪಿಜಿ ಹಾಲ್ ಟಿಕೆಟ್ 2024 ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಬೇಕು.

ಇದನ್ನೂ ಓದಿ: PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?

  1. -ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಅಧಿಕೃತ ವೆಬ್‌ಸೈಟ್‌ಗೆ nbe.edu.in ಹೋಗಿ.
  2. -ಮುಖಪುಟದಲ್ಲಿ “ನೀಟ್ ಪಿಜಿ” ಲಿಂಕ್ ಕ್ಲಿಕ್‌ ಮಾಡಿ. ಇದು ಸಾಮಾನ್ಯವಾಗಿ “ಪರೀಕ್ಷೆಗಳು” ಅಥವಾ “ಪ್ರಮುಖ ಲಿಂಕ್‌ಗಳು” ವಿಭಾಗದಲ್ಲಿ ಕಂಡುಬರುತ್ತದೆ.
  3. -ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ ವರ್ಡ್ ನಮೂದಿಸಿ.
  4. -ಒಮ್ಮೆ ಲಾಗ್ ಇನ್ ಆದ ನಂತರ, ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವ ಆಯ್ಕೆ ಇರುತ್ತದೆ.
  5. -ಡೌನ್ಲೋಡ್ ಮಾಡುವ ಮೊದಲು, ಪ್ರವೇಶ ಪತ್ರದಲ್ಲಿನ ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ನಿಮ್ಮ ಹೆಸರು, ಛಾಯಾಚಿತ್ರ, ಪರೀಕ್ಷಾ ದಿನಾಂಕ ಮತ್ತು ಪರೀಕ್ಷಾ ಕೇಂದ್ರದ ವಿವರಗಳು ಇರಲಿದೆ.
  6. -ಪ್ರವೇಶ ಪತ್ರವನ್ನು ಸೇವ್‌ ಮಾಡಲು ಡೌನ್ಲೋಡ್ ಬಟನ್ ಕ್ಲಿಕ್ ಮಾಡಿ. ಫೈಲ್ ಸಾಮಾನ್ಯವಾಗಿ ಪಿಡಿಎಫ್ ರೂಪದಲ್ಲಿರುತ್ತದೆ.
  7. -ಪ್ರವೇಶ ಪತ್ರದ ಕನಿಷ್ಠ ಎರಡು ಪ್ರತಿಗಳ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ. ಪ್ರವೇಶ ಪತ್ರದಲ್ಲಿ ಫೋಟೋ ಅಂಟಿಸಲು ಜಾಗ ಇರಲಿದೆ.
  8. -ಪರೀಕ್ಷಾ ಕೇಂದ್ರಕ್ಕೆ ಏನು ತರಬೇಕು, ನಿಷೇಧಿತ ವಸ್ತುಗಳ ಬಗ್ಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನ ಓದಿಕೊಳ್ಳಿ. ಯಾವ ಸಮಯದೊಳಗೆ ನೀವೂ ಪರೀಕ್ಷಾ ಕೇಂದ್ರದೊಳಗೆ ಇರಬೇಕು ಎಂಬುದನ್ನೂ ಸೂಚಿಸಲಾಗುತ್ತದೆ.

ಪರೀಕ್ಷಾ ಕೇಂದ್ರದಲ್ಲಿ ಇದೆಲ್ಲವೂ ನಿರ್ಬಂಧ

ಪಠ್ಯ ಸಾಮಗ್ರಿ (ಮುದ್ರಿತ ಅಥವಾ ಲಿಖಿತ), ಟಿಪ್ಪಣಿಗಳು, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ರೈಟಿಂಗ್ ಪ್ಯಾಡ್ ಹಾಗೂ ಮೊಬೈಲ್‌ ಫೋನ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೊಫೋನ್, ಹೆಲ್ತ್ ಬ್ಯಾಂಡ್, ಎಲೆಕ್ಟ್ರಾನಿಕ್ ಪೆನ್, ಸ್ಕ್ಯಾನರ್ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಇನ್ನೂ ಹುಡುಗಿಯರು ಬ್ರೇಸ್ ಲೆಟ್ ಗಳು, ಉಂಗುರ, ಕಿವಿಯೋಲೆಗಳು, ನೋಸ್-ಪಿನ್, ಚೈನ್/ ನಂತಹ ಎಲ್ಲಾ ಆಭರಣಗಳು/ ಪೆಂಡೆಂಟ್‌, ಬ್ಯಾಡ್ಜ್, ಬ್ರೂಚ್ ಎಲ್ಲವನ್ನೂ ನಿಷೇಧಿಸಲಾಗಿದೆ. ಜತೆಗೆ ವ್ಯಾಲೆಟ್, ಕ್ಯಾಪ್ , ನೀರಿನ ಬಾಟೆಲ್‌ ಕೂಡ ಕೊಂಡೊಯ್ಯುವಂತಿಲ್ಲ.

ಜುಲೈ 15ರೊಳಗೆ ಫಲಿತಾಂಶ ಪ್ರಕಟ

ಇನ್ನೂ ನೀಟ್‌ ಪಿಜಿ ಫಲಿತಾಂಶವನ್ನು ಜುಲೈ 15ರೊಳಗಾಗಿ ಪ್ರಕಟಿಸಲಾಗುವುದು ಎಂದು ನ್ಯಾಷನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ ಮೆಡಿಕಲ್‌ ಸೈನ್ಸ್‌ ತಿಳಿಸಿದೆ. ನೀಟ್-ಪಿಜಿ 2024 ಗೆ ಅರ್ಹತೆ ಪಡೆಯಲು ಇಂಟರ್ನ್ಶಿಪ್ ಪೂರ್ಣಗೊಳಿಸಲು ಕಟ್ ಆಫ್ ದಿನಾಂಕವನ್ನು ಆಗಸ್ಟ್‌ 15ಕ್ಕೆ ನಿಗದಿ ಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

DK Shivakumar: ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading
Advertisement
International Yoga Day 2024
Latest6 mins ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ9 mins ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ21 mins ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ1 hour ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ1 hour ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ1 hour ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest2 hours ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest2 hours ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ2 hours ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ2 hours ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು7 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು8 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌