IPL 2024: ಅಜ್ಜಿಯನ್ನು ಕಳೆದುಕೊಂಡ ದುಖಃದಲ್ಲಿ ಐಪಿಎಲ್​ನಿಂದ ಹಿಂದೆ ಸರಿದ ಡೆಲ್ಲಿ ತಂಡದ ಸ್ಟಾರ್​ ಬ್ಯಾಟರ್​ - Vistara News

ಕ್ರೀಡೆ

IPL 2024: ಅಜ್ಜಿಯನ್ನು ಕಳೆದುಕೊಂಡ ದುಖಃದಲ್ಲಿ ಐಪಿಎಲ್​ನಿಂದ ಹಿಂದೆ ಸರಿದ ಡೆಲ್ಲಿ ತಂಡದ ಸ್ಟಾರ್​ ಬ್ಯಾಟರ್​

ಅಜ್ಜಿ ನಿಧನರಾದ ಕಾರಣ ಇಂಗ್ಲೆಂಡ್​ನ ಸ್ಟಾರ್​ ಬ್ಯಾಟರ್​ ಆಗಿರುವ ಹ್ಯಾರಿ ಬ್ರೂಕ್ (Harry Brook) ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

VISTARANEWS.COM


on

Brook grandmother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಪಿಎಲ್(IPL 2024)​ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡಕ್ಕೆ ಆಘಾತ ಉಂಟಾಗಿದೆ. ಇಂಗ್ಲೆಂಡ್​ನ ಸ್ಟಾರ್​ ಬ್ಯಾಟರ್​ ಆಗಿರುವ ಹ್ಯಾರಿ ಬ್ರೂಕ್ (Harry Brook) ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಸ್ಟಾರ್​ ಆಟಗಾರ ಸೇವೆಯನ್ನು ಡೆಲ್ಲಿ ಕಳೆದುಕೊಂಡಿದೆ. ಬ್ರೂಕ್​ ಅವರ ಅಜ್ಜಿ ನಿಧನರಾದ ಕಾರಣ ಅವರು ಐಪಿಎಲ್ 2024 ರಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.

“ಮುಂಬರುವ ಐಪಿಎಲ್‌ನಲ್ಲಿ ಆಡದಿರಲು ನಾನು ತುಂಬಾ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ಬ್ರೂಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾನು ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡಲು ತುಂಬಾ ಉತ್ಸುಕನಾಗಿದ್ದೆ ಮತ್ತು ಐಪಿಎಲ್​ಗಾಗಿ ಎದುರು ನೋಡುತ್ತಿದ್ದೆ. ಈ ನಿರ್ಧಾರದ ಹಿಂದೆ ನನ್ನ ವೈಯಕ್ತಿಕ ಕಾರಣಗಳನ್ನು ಹಂಚಿಕೊಳ್ಳುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಆದರೆ, ಏಕೆ ಎಂದು ಕೇಳುವ ಅನೇಕರು ಇರುತ್ತಾರೆ ಎಂದು ನನಗೆ ತಿಳಿದಿದೆ. ನಾನು ಇದನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನ್ನ ಪ್ರೀತಿಯ ಅಜ್ಜಿ ನಿಧನರಾದ ಕಾರಣ ನಾನು ಆಡುತ್ತಿಲ್ಲ’ ಎಂದು ಬ್ರೂಕ್ ಹೇಳಿದ್ದಾರೆ.

“ನಾನು ಕಳೆದ ತಿಂಗಳು ನನ್ನ ಅಜ್ಜಿಯನ್ನು ಕಳೆದುಕೊಂಡೆ – ಅವಳು ನನಗೆ ಸ್ಫೂರ್ತಿಯಾಗಿದ್ದಳು ಮತ್ತು ನಾನು ನನ್ನ ಬಾಲ್ಯದ ಜೀವನವನ್ನು ಅವರ ಮನೆಯಲ್ಲಿಯೇ ಕಳೆದಿದ್ದೇನೆ, ನನ್ನ ಜೀವನ ಮತ್ತು ಕ್ರಿಕೆಟ್ ಮೇಲಿನ ಪ್ರೀತಿಯನ್ನು ಹೆಚ್ಚಿಸಿದ್ದು ನನ್ನ ಅಜ್ಜಿ. ನಾನು ಇಂಗ್ಲೆಂಡ್‌ಗಾಗಿ ಕ್ರಿಕೆಟ್ ಆಡುವುದನ್ನು ಅವಳು ನೋಡಲು ಸಾಧ್ಯವಾಯಿತು. ಅವಳನ್ನು ಕಳೆದುಕೊಂಡ ನೋವಿನಲ್ಲಿ ನಾನು ಸದ್ಯ ಕ್ರಿಕೆಟ್​ ಆಡುವ ಮನಸ್ಥಿತಿಯಲ್ಲಿಲ್ಲ” ಎಂದು ಬ್ರೂಕ್​ ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಬ್ರೂಕ್​ ನಿರ್ಧಾರಕ್ಕೆ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕೂಡ ಬೆಂಬಲ ಸೂಚಿಸಿದೆ. ಸದ್ಯ ಬ್ರೂಕ್​ ಸ್ಥಾನಕ್ಕೆ ಇನ್ನೂ ಬದಲಿ ಆಟಗಾರ ಆಯ್ಕೆಯಾಗಿಲ್ಲ.

ಇದನ್ನೂ ಓದಿ IPL 2024: ಅಭ್ಯಾಸದ ವೇಳೆ ಸಿಕ್ಸರ್​ಗಳ ಸುರಿಮಳೆಗೈದ ರಿಷಭ್​ ಪಂತ್​; ವಿಡಿಯೊ ವೈರಲ್​

ಕಳೆದ ಡಿಸೆಂಬರ್‌ನಲ್ಲಿ ದುಬೈನಲ್ಲಿ ನಡೆದ ಐಪಿಎಲ್​ 2024ರ ಮಿನಿ ಹರಾಜಿನಲ್ಲಿ ಅವರನ್ನು ಡೆಲ್ಲಿ ತಂಡ 4 ಕೋಟಿ ರೂ. ನೀಡಿ ಖರೀದಿ ಮಾಡಿತ್ತು. ಕಳೆದ ಆವೃತ್ತಿಯಲ್ಲಿ ಅವರು ಸನ್​ರೈಸರ್ಸ್ ಹೈದರಾಬಾದ್​ ತಂಡದ ಪರ ಆಡಿದ್ದರು. ಇದು ಅವರ ಚೊಚ್ಚಲ ಐಪಿಎಲ್​ ಟೂರ್ನಿಯೂ ಆಗಿತ್ತು. ಬ್ರೂಕ್ ಒಟ್ಟು 11 ಪಂದ್ಯಗಳಲ್ಲಿ 123.37 ಸ್ಟ್ರೈಕ್ ರೇಟ್‌ನಲ್ಲಿ ಕೇವಲ 190 ರನ್ ಮಾತ್ರ ಬಾರಿಸಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 55 ಎಸೆತಗಳಲ್ಲಿ 100 ರನ್ ಗಳಿಸಿದ್ದು ಅವರ ಐಪಿಎಲ್​ ಶ್ರೇಷ್ಠ ಸಾಧನೆಯಾಗಿದೆ.

ಮಾರ್ಚ್ 23 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಮೊಹಾಲಿಯಲ್ಲಿ ಪಂದ್ಯವನ್ನಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ಐಪಿಎಲ್​ 2024ರ ಅಭಿಯಾನವನ್ನು ಪ್ರಾರಂಭಿಸಲಿದೆ. ನಾಯಕನಾಗಿರು ರಿಷಭ್​ ಪಂತ್​ ಅವರು ಬ್ಯಾಟಿಂಗ್​ ಜತೆಗೆ ವಿಕೆಟ್​ ಕೀಪಿಂಗ್ ಕೂಡ ಮಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

IND vs PAK T20 World Cup: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕ್​ ತಂಡದ ಮಾಜಿ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಕಮ್ರಾನ್​ ಅಕ್ಮಲ್(Kamran Akmal)​, ಪಾಕಿಸ್ತಾನವನ್ನು ಭಾರತ ಸೋಲಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

VISTARANEWS.COM


on

IND vs PAK
Koo

ಕರಾಚಿ: ಸಾಂಪ್ರದಾಯಿಕ ಬುದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK T20 World Cup) ನಡುವಣ ಟಿ20 ವಿಶ್ವಕಪ್(T20 World Cup 2024)​ ಪಂದ್ಯ ಜೂನ್ 9ರಂದು ನಡೆಯಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಅಭಿಮಾನಿಗಳು ಮಾತ್ರವಲ್ಲದೆ ಇಡೀ ವಿಶ್ವವೇ ಕಾದು ಕುಳಿತಿದೆ. ಪಂದ್ಯಕ್ಕೂ ಮುನ್ನವೇ ಯಾವ ತಂಡ ಗೆಲ್ಲಲಿದೆ ಎಂದು ಕ್ರಿಕೆಟ್​ ಪಂಡಿತರು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಭವಿಷ್ಯವೊಂದು ಅಚ್ಚರಿಗೆ ಕಾರಣವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕ್​ ತಂಡದ ಮಾಜಿ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಕಮ್ರಾನ್​ ಅಕ್ಮಲ್(Kamran Akmal)​, ಪಾಕಿಸ್ತಾನವನ್ನು ಭಾರತ ಸೋಲಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ​ ತಂಡದ ಪ್ರದರ್ಶನವನ್ನು ನೋಡುವಾಗ ಅದು ಕೂಡ ಭಾರತದಂತಹ ಬಲಿಷ್ಠ ತಂಡದ ವಿರುದ್ಧ ಗೆಲ್ಲುವುದು ಕನಸಿನ ಮಾತು. ಐರ್ಲೆಂಡ್‌ನಂತಹ ಸಣ್ಣ ತಂಡಗಳ ವಿರುದ್ಧವೇ ಪಾಕಿಸ್ತಾನ ಸೋಲು ಕಂಡಿದೆ. ಹೀಗಿರುವಾಗ ಭಾರತದ ವಿರುದ್ಧ ಗೆಲ್ಲಲು ಸಾಧ್ಯವೇ? ಗುಣಮಟ್ಟದ ಕ್ರಿಕೆಟ್ ಆಡುವ ಮತ್ತು ಎಲ್ಲಾ ತಯಾರಿಗಳೊಂದಿಗೆ ಬಂದಿರುವ ಭಾರತ ತಂಡವು ಪಾಕಿಸ್ತಾನವನ್ನು ಸೋಲಿಸುವುದರಲ್ಲಿ ಅನುಮಾನವೇ ಬೇಡ” ಎಂದು ಹೇಳಿದ್ದಾರೆ. ಅಕ್ಮಲ್ ಅವರ ಈ ಹೇಳಿಕೆ ಪಾಕಿಸ್ತಾನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಲ ಪಾಕಿಸ್ತಾನಿ ನೆಟ್ಟಿಗರು ಅಕ್ಮಲ್​ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಜಾಡಿಸಿ ದೇಶ ವಿರೋಧಿ ಎಂದು ಹೇಳಿದ್ದಾರೆ. ಪಾಕಿಸ್ತಾನ ಇಂಗ್ಲೆಂಡ್​ ವಿರುದ್ಧ ಆಡಿದ ಟಿ20 ಸರಣಿಯಲ್ಲೂ ಹೀನಾಯವಾಗಿ ಸೋಲು ಕಂಡಿತ್ತು.

ಇದನ್ನೂ ಓದಿ IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯಕ್ಕೆ ಸುಧಾರಿತ ಕಣ್ಗಾವಲು ಏರ್ಪಡಿಸಲಾಗಿದೆ.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

IND vs BAN: ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್​ ಆಡುತ್ತಿರುವ ಕಾರಣ ಟೀಮ್​ ಇಂಡಿಯಾಕ್ಕೆ ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳವ ಸವಾಲು ದೊಡ್ಡ ಮಟ್ಟದಲ್ಲಿರಲಿದೆ. ಈಗಾಗಲೇ ನಾಯಕ ರೋಹಿತ್​ ಶರ್ಮ ಕೂಡ ಈ ಮಾತನ್ನು ಒಪ್ಪಿಕೊಂಡಿದ್ದಾರೆ. ಭಾರತದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರವಾದರೂ ಕೂಡ ಈ ಪಂದ್ಯ ಅಮೆರಿಕದಲ್ಲಿ ಹಗಲು ಪಂದ್ಯವಾಗಿರಲಿದೆ.

VISTARANEWS.COM


on

IND vs BAN
Koo

ನ್ಯೂಯಾರ್ಕ್​: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್‌(T20 World Cup 2024) ಕ್ರಿಕೆಟ್‌ ಪಂದ್ಯಾವಳಿಗೆ ಕ್ಷಣಗಣನೆ ಮೊದಲ್ಗೊಂಡಿದೆ. ಇಂದು(ಶನಿವಾರ) ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾರತ(IND vs BAN) ತಂಡ ನೆರೆಯ ಬಾಂಗ್ಲಾದೇಶ(IND vs BAN Warm-up Match) ವಿರುದ್ಧ ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನಲ್ಲಿ ಈ ಪಂದ್ಯ ನಡೆಯಲಿದೆ.

ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್​ ಆಡುತ್ತಿರುವ ಕಾರಣ ಟೀಮ್​ ಇಂಡಿಯಾಕ್ಕೆ ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳವ ಸವಾಲು ದೊಡ್ಡ ಮಟ್ಟದಲ್ಲಿರಲಿದೆ. ಈಗಾಗಲೇ ನಾಯಕ ರೋಹಿತ್​ ಶರ್ಮ ಕೂಡ ಈ ಮಾತನ್ನು ಒಪ್ಪಿಕೊಂಡಿದ್ದಾರೆ. ಭಾರತದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರವಾದರೂ ಕೂಡ ಈ ಪಂದ್ಯ ಅಮೆರಿಕದಲ್ಲಿ ಹಗಲು ಪಂದ್ಯವಾಗಿರಲಿದೆ.

ಐಪಿಎಲ್​ ಆಡಿದ ಜೋಶ್​ನಲ್ಲಿರುವ ಭಾರತೀಯ ಆಟಗಾರರು ಈ ಟೂರ್ನಿಯಲ್ಲೂ ಉತ್ತಮ ಪ್ರದರ್ಶನ ತೋರುವ ನಿರೀಕ್ಷೆ ಇದೆ. ಈ ಬಾರಿಯ ಐಪಿಎಲ್​ ಕೂಟದ ಗರಿಷ್ಠ ರನ್​ ಸರದಾರ ವಿರಾಟ್​ ಕೊಹ್ಲಿ ಅವರು ಅಭ್ಯಾಸ ಪಂದ್ಯ ಆಡುವುದು ಅನುಮಾನ ಎನ್ನಲಾಗಿದೆ. ಏಕೆಂದರೆ ಅವರು ನಿನ್ನೆಯಷ್ಟೇ ನ್ಯೂಯಾರ್ಕ್ ತಲುಪಿದ್ದಾರೆ. ಹೀಗಾಗಿ ಅವರು ಆಡುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಬಾಂಗ್ಲಾದೇಶ ಈಗಾಗಲೇ ಅಮೆರಿಕ ವಿರುದ್ಧ ಆಡಿದ ಮೊದಲ ಅಭ್ಯಾಸ ಪಂದ್ಯದಲ್ಲಿ ಸೋಲು ಕಂಡಿತ್ತು. ಹೀಗಾಗಿ ತಂಡದ ಮೇಲೆ ಹೆಚ್ಚಿನ ಭರವಸೆ ಇರಿಸುವುದು ಕಷ್ಟ. ಅನುಭವಿ ಆಟಗಾರರ ಪಡೆಯೇ ಹೊಂದಿದ್ದರೂ, ಯಾರು ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಇಂದು ನಡೆಯುವ ಉದ್ಘಾಟನ ಲೀಗ್​ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಡಾ ಸೆಣಸಾಡಲಿದೆ. ಅಮೆರಿಕದಲ್ಲಿ ಈ ಪಂದ್ಯ ಶನಿವಾರ ನಡೆದರೂ ಕೂಡ ಭಾರತೀಯ ಕಾಲಮಾನದಂತೆ ಈ ಪಂದ್ಯ ಭಾನುವಾರ ಬೆಳಗ್ಗೆ 6 ಗಂಟೆಗೆ ಪ್ರಸಾರಗೊಳ್ಳಲಿದೆ.

ಭಾರತ: ರೋಹಿತ್‌ ಶರ್ಮ (ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಶಿವಂ ದುಬೆ, ರಿಷಭ್‌ ಪಂತ್‌, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಯಜುವೇಂದ್ರ ಚಹಲ್‌, ಅರ್ಷದೀಪ್‌ ಸಿಂಗ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌.

ಬಾಂಗ್ಲಾದೇಶ: ನಜ್ಮುಲ್‌ ಹುಸೇನ್‌ (ನಾಯಕ), ತಸ್ಕಿನ್‌ ಅಹ್ಮದ್‌, ಲಿಟನ್‌ ದಾಸ್‌, ಸೌಮ್ಯ ಸರ್ಕಾರ್‌, ತಾಂಜಿದ್‌ ಹಸನ್‌ ತಮೀಮ್‌, ಶಕಿಬ್‌ ಅಲ್‌ ಹಸನ್‌, ತೌಹಿದ್‌ ಹೃದಯ್‌, ಮಹ್ಮದುಲ್ಲ ರಿಯಾದ್‌, ಜಾಕರ್‌ ಅಲಿ ಅನಿಕ್‌, ತನ್ವೀರ್‌ ಇಸ್ಲಾಮ್‌, ಮಹೆದಿ ಹಸನ್‌, ರಿಷಾದ್‌ ಹುಸೇನ್‌, ಮುಸ್ತಫಿಜುರ್‌ ರೆಹಮಾನ್‌, ಶೊರೀಫುಲ್‌ ಇಸ್ಲಾಮ್‌, ತಾಂಜಿಮ್‌ ಹಸನ್‌.

Continue Reading

ಕ್ರೀಡೆ

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neeraj Chopra: ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದ ನೀರಜ್​ ಚೋಪ್ರಾ ಜುಲೈ 28 ರವರೆಗೆ ಯುರೋಪ್‌ನ ವಿವಿಧ ಸ್ಥಳಗಳಲ್ಲಿ ತರಬೇತಿ ಪಡೆಯಲಿದ್ದಾರೆ. ಕ್ರೀಡಾ ಸಚಿವಾಲಯದ ಮಹತ್ವದ ಯೋಜನೆಯಾದ ‘ಟಾರ್ಗೆಟ್ ಒಲಂಪಿಕ್ ಪೋಡಿಯಂ’ ಅಡಿಯಲ್ಲಿ ಅವರಿಗೆ ಈ ವಿದೇಶಿ ತರಬೇತಿಯ ವೆಚ್ಚವನ್ನು ಭರಿಸಲಾಗುತ್ತದೆ.

VISTARANEWS.COM


on

Neeraj Chopra
Koo

ನವದೆಹಲಿ: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್(​Paris Olympics 2024) ಆರಂಭಕ್ಕೆ ಇನ್ನು ಒಂದುವರೆ ತಿಂಗಳು ಮಾತ್ರ ಬಾಕಿ ಉಳಿದಿವೆ. ಈ ಕ್ರೀಡಾಕೂಟದ ಸಿದ್ಧತೆಯಾಗಿ ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಭಾರತದ ಸ್ಟಾರ್​ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Neeraj Chopra) ಅವರು ಕೋಚ್ ಕ್ಲಾಸ್ ಬಾರ್ಟೋನಿಯೆಟ್ಜ್ ಮತ್ತು ಫಿಸಿಯೋ ಇಶಾನ್ ಮಾರ್ವಾಹಾ ಅವರೊಂದಿಗೆ 60 ದಿನ ಯುರೋಪ್‌ನಲ್ಲಿ ತರಬೇತಿ ಪಡೆಯಲಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದ ನೀರಜ್​ ಚೋಪ್ರಾ ಜುಲೈ 28 ರವರೆಗೆ ಯುರೋಪ್‌ನ ವಿವಿಧ ಸ್ಥಳಗಳಲ್ಲಿ ತರಬೇತಿ ಪಡೆಯಲಿದ್ದಾರೆ. ಕ್ರೀಡಾ ಸಚಿವಾಲಯದ ಮಹತ್ವದ ಯೋಜನೆಯಾದ ‘ಟಾರ್ಗೆಟ್ ಒಲಂಪಿಕ್ ಪೋಡಿಯಂ’ ಅಡಿಯಲ್ಲಿ ಅವರಿಗೆ ಈ ವಿದೇಶಿ ತರಬೇತಿಯ ವೆಚ್ಚವನ್ನು ಭರಿಸಲಾಗುತ್ತದೆ.

“ನಾನು ಕಠಿಣ ತರಬೇತಿ ಪಡೆಯುತ್ತಿದ್ದೇನೆ ಮತ್ತು ಉತ್ತಮ ಭಾವನೆ ಹೊಂದಿದ್ದೇನೆ. ನನ್ನ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನವನ್ನು ನಾನು ಇನ್ನೂ ಮಾಡಿಲ್ಲ ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ಹಿಂದೆಂದೂ ತಯಾರಿಸಿದ ಅತ್ಯುತ್ತಮ ತಯಾರಿಯಾನ್ನು ನಡೆಸಲಿದ್ದೇನೆ. ಇದು ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುತ್ತದೆ ಎಂಬ ವಿಶ್ವಾಸವಿದೆ. ನಾನು ನನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುತ್ತೇನೆ. ಈ ಸ್ಪರ್ಧೆಯನ್ನು ಆನಂದಿಸುತ್ತೇನೆ” ಎಂದು ನೀರಜ್ ಹೇಳಿದರು.

ಕಳೆದ ತಿಂಗಳು ಭುನೇಶ್ವರದಲ್ಲಿ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಚಿನ್ನದ ಪದಕ ಗೆದ್ದಿದ್ದರು. ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಅಭ್ಯಾಸದ ವೇಳೆ ಈಗಾಗಲೆ ನೀರಜ್​ ಹಲವು ಬಾರಿ 90 ಮೀ. ಗಡಿ ದಾಟಿದ್ದಾರೆ. ಆದರೆ, ಸ್ಪರ್ಧೆಗಳಲ್ಲಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ಸ್ಪರ್ಧೆಯಲ್ಲಿಯೂ ಇದನ್ನು ಸಾಧಿಸಲಿದ್ದೇನೆ ಎಂದು ನೀರಜ್​ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

ಚಿನ್ನದ ವಿಶ್ವಾಸದಲ್ಲಿ ಕೋಚ್​


ನೀರಜ್ ಅವರ ಮೊದಲ ಕೋಚ್​ ಕಾಶಿನಾಥ್ ನಾಯ್ಕ್ ಅವರು ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ನೀರಜ್​ ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಇತ್ತೀಚೆಗೆ ಸಂದರ್ಶನವೊಂದಲ್ಲಿ ಭವಿಷ್ಯ ನುಡಿದಿದ್ದರು.

“ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದರು.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Paris Olympics 2024: ಏಕಪಕ್ಷಿಯವಾಗಿ ಸಾಗಿದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಭಾರತೀಯ ಬಾಕ್ಸರ್​ನ ಬಲಿಷ್ಠ ಪಂಚ್​ಗಳಿಗೆ ತಡೆಯೊಡ್ಡುವಲ್ಲಿ ಮೊಲ್ಡೊವಾದ ವಸಿಲೆ ಸೆಬೊಟಾರಿ ಸಂಪೂರ್ಣವಾಗಿ ವಿಫಲರಾದರು. ಗೆಲುವಿನ ಅಂತರ 5-0. ಮತ್ತೊಂದೆಡೆ ಮಹಿಳೆಯರ 60 ಕೆಜಿ ವಿಭಾಗದಲ್ಲಿ ಮಾಜಿ ಯೂತ್ ವರ್ಲ್ಡ್ ಚಾಂಪಿಯನ್ ಭಾರತದ ಅಂಕುಶಿತಾ ಬೊರೊ ಸೋಲು ಕಂಡರು.

VISTARANEWS.COM


on

Paris Olympics 2024
Koo

ನವದೆಹಲಿ: ಭಾರತದ ಬಾಕ್ಸರ್ ನಿಶಾಂತ್ ದೇವ್ ಅವರು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಬಾಕ್ಸಿಂಗ್ ಒಲಿಂಪಿಕ್ಸ್‌ ಅರ್ಹತಾ ಪಂದ್ಯದಲ್ಲಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ 2024ರ ಪ್ಯಾರಿಸ್(Paris Olympics 2024) ಕ್ರೀಡಾಕೂಟಕ್ಕೆ ಟಿಕೆಟ್‌ ಪಡೆದುಕೊಂಡಿದ್ದಾರೆ. ನಿಶಾಂತ್‌ ದೇವ್‌(Nishant Dev) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪುರುಷ ಬಾಕ್ಸರ್​ ಆಗಿದ್ದಾರೆ. ಒಟ್ಟಾರೆಯಾಗಿ 4ನೇ ಬಾಕ್ಸರ್ ಆಗಿದ್ದಾರೆ. ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್ (50 ಕೆಜಿ), ಪ್ರೀತ್ ಪವಾರ್ (54 ಕೆಜಿ) ಮತ್ತು ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ಈಗಾಗಲೇ ಪ್ಯಾರಿಸ್‌ಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಏಕಪಕ್ಷಿಯವಾಗಿ ಸಾಗಿದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಭಾರತೀಯ ಬಾಕ್ಸರ್​ನ ಬಲಿಷ್ಠ ಪಂಚ್​ಗಳಿಗೆ ತಡೆಯೊಡ್ಡುವಲ್ಲಿ ಮೊಲ್ಡೊವಾದ ವಸಿಲೆ ಸೆಬೊಟಾರಿ ಸಂಪೂರ್ಣವಾಗಿ ವಿಫಲರಾದರು. ಗೆಲುವಿನ ಅಂತರ 5-0. ಮತ್ತೊಂದೆಡೆ ಮಹಿಳೆಯರ 60 ಕೆಜಿ ವಿಭಾಗದಲ್ಲಿ ಮಾಜಿ ಯೂತ್ ವರ್ಲ್ಡ್ ಚಾಂಪಿಯನ್ ಭಾರತದ ಅಂಕುಶಿತಾ ಬೊರೊ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಸ್ವೀಡನ್‌ನ ಮಾಜಿ ಯುರೋಪಿಯನ್‌ ಗೇಮ್ಸ್‌ ಕಂಚಿನ ಪದಕ ವಿಜೇತೆ ಆಗ್ನೆಸ್ ಅಲೆಕ್ಸಿಸ್ಸನ್ ವಿರುದ್ಧ 2-3 ಅಂಕಗಳ ಅಂತರದ ಸೋಲು ಕಾಣುವ ಒಲಿಂಪಿಕ್ಸ್​ ಟಿಕೆಟ್​ ಪಡೆಯುವಲ್ಲಿ ವಿಫಲವಾದರು. ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ.

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಸಿಗಲಿದೆ ಭಾರೀ ನಗದು ಬಹುಮಾನ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ.

ಇಲ್ಲಿ ಗಮನಿಸಬೇಕದ ವಿಚಾರವೆಂದರೆ ಹಣಕಾಸು ವಿಷಯದಲ್ಲಿ ಪಾರದರ್ಶಕತೆ ಕಾಪಾಡದ ಕಾರಣಕ್ಕೆ ಐಒಸಿ, ಬಾಕ್ಸಿಂಗ್ ಸಂಸ್ಥೆಯನ್ನು ನಿರ್ಬಂಧಿಸಿದೆ. 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಇದನ್ನೂ ಓದಿ Paris Olympics 2024: ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಸಿಗಲಿದೆ ಭಾರೀ ನಗದು ಬಹುಮಾನ; ಮಹತ್ವದ ನಿರ್ಧಾರ ಕೈಗೊಂಡ ಐಬಿಎ

ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಬೋಟ್‌ಗಳಲ್ಲೇ ಪರೇಡ್

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading
Advertisement
shatru bhairavi yaga
ಪ್ರಮುಖ ಸುದ್ದಿ27 mins ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Bigg Boss OTT 3 Anil Kapoor Replaces Salman Khan As Host
ಒಟಿಟಿ32 mins ago

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Lok Sabha Election
Lok Sabha Election 202438 mins ago

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

IND vs PAK
ಕ್ರೀಡೆ44 mins ago

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

Lok Sabha Election 2024 Mithun Chakraborty casting his vote
ಬಾಲಿವುಡ್54 mins ago

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

IND vs BAN
ಕ್ರೀಡೆ1 hour ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 20242 hours ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್2 hours ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ2 hours ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ2 hours ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌