Lok Sabha Election 2024: ಲೋಕಸಭೆಯಲ್ಲಿ ಬಿಜೆಪಿಗೆ ರೆಡ್ಡಿ ಸಪೋರ್ಟ್‌? ಅಮಿತ್‌ ಶಾ ಭೇಟಿ ಹಿಂದಿನ ರಹಸ್ಯವೇನು? - Vistara News

Lok Sabha Election 2024

Lok Sabha Election 2024: ಲೋಕಸಭೆಯಲ್ಲಿ ಬಿಜೆಪಿಗೆ ರೆಡ್ಡಿ ಸಪೋರ್ಟ್‌? ಅಮಿತ್‌ ಶಾ ಭೇಟಿ ಹಿಂದಿನ ರಹಸ್ಯವೇನು?

Lok Sabha Election 2024: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಚುನಾವಣಾ ಚಾಣಕ್ಯ ಅಮಿತ್‌ ಶಾ ಅವರನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ಮಾಡಿರುವುದು ಕುತೂಹಲವನ್ನು ಕೆರಳಿಸಿದೆ. ಇದರ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳು ಇವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

VISTARANEWS.COM


on

Lok Sabha Election 2024 Janardhana Reddy meets Amit Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ರಾಜಕೀಯ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಈಗಾಗಲೇ ಕರ್ನಾಟಕ ಬಿಜೆಪಿಯ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಲಾಗಿದೆ. ಬಿಜೆಪಿ ಪಾಲಿಗೆ ಕರ್ನಾಟಕವು ಭದ್ರಕೋಟೆಯಾಗಿದ್ದು, ಸಂಪೂರ್ಣ ಹಿಡಿತ ಸಾಧಿಸಲು ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ. ಇದರ ಭಾಗವಾಗಿ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಅಮಿತ್‌ ಶಾ (Amit Shah) ಅವರು ಕೆಲವೊಂದು ವ್ಯೂಹಗಳನ್ನು ರಚನೆ ಮಾಡುತ್ತಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಶಾ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ನವ ದೆಹಲಿಗೆ ತೆರಳಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಅವರು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಫೋಟೊ ಸಹಿತ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

Lok Sabha Election 2024 Janardhana Reddy meets Amit Shah

“ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ” ಎಂದು ಜನಾರ್ದನ ರೆಡ್ಡಿ ಬರೆದುಕೊಂಡಿದ್ದಾರೆ.

ರೆಡ್ಡಿಯನ್ನು ಬಿಜೆಪಿ ದೂರ ಇಟ್ಟಿದ್ದು ಏಕೆ?

ಜನಾರ್ದನ ರೆಡ್ಡಿ ಅವರು ಬಿಜೆಪಿಯ ಹಳೇ ಕಲಿ. ಆದರೆ, ಬದಲಾದ ಸನ್ನಿವೇಶದಲ್ಲಿ ಅವರು ಸಚಿವರಾಗಿದ್ದಾಗಲೇ ಜೈಲು ಸೇರಬೇಕಾದ ಪರಿಸ್ಥಿತಿ ಬಂದೊದಗಿತು. ಅಲ್ಲದೆ, ಅಕ್ರಮ ಗಣಿಗಾರಿಕೆ ‌(Illegal mining) ಪ್ರಕರಣದಲ್ಲಿ ವರ್ಷ ಕಾಲ ಜೈಲುವಾಸವನ್ನು ಅನುಭವಿಸಿದ್ದರು. ಅಲ್ಲದೆ, 2013ರ ವಿಧಾನಸಭಾ ಚುನಾವಣೆ ವೇಳೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುವ ಮೂಲಕ ಜನಾಭಿಪ್ರಾಯವನ್ನು ಸಂಗ್ರಹ ಮಾಡಲಾಗಿತ್ತು. ಆಗ ಸಿದ್ದರಾಮಯ್ಯ ಅವರು “ರಿಪಬ್ಲಿಕ್‌ ಆಫ್‌ ಬಳ್ಳಾರಿ” ಎಂದು ಕರೆದಿದ್ದಲ್ಲದೆ, ರೆಡ್ಡಿ ಸಹೋದರರ ವಿರುದ್ಧ ತೊಡೆ ತಟ್ಟಿದ್ದರು. ಬಳಿಕ ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹೀಗಾಗಿ ಬಿಜೆಪಿ ಅವರನ್ನು ತುಸು ದೂರವೇ ಇಟ್ಟಿತ್ತು.

ಕಳೆದ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕೆಂಬ ಆಸೆ ಇತ್ತಾದರೂ ಬಿಜೆಪಿ ಅವರನ್ನು ಸೇರಿಸಿಕೊಳ್ಳಲಿಲ್ಲ. ಹೀಗಾಗಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಕಟ್ಟಿದರು. ಈ ಪಕ್ಷದಿಂದ ತಾವೊಬ್ಬರೇ ಗೆದ್ದರೂ ಹಲವು ಕಡೆ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಇದು ಬಿಜೆಪಿಗೆ ದೊಡ್ಡ ಮಟ್ಟದ ಹೊಡೆತವನ್ನೇ ಕೊಟ್ಟಿತ್ತು. ಅಲ್ಲದೆ, ಈಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿಯೂ ರೆಡಿ ಬಿಜೆಪಿಯನ್ನು ಬೆಂಬಲಿಸಲು ತಯಾರಾಗಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಒಲವು ತೋರದ ಕಾರಣ ಅವರು ಕಾಂಗ್ರೆಸ್‌ ಬೆಂಬಲಕ್ಕೆ ನಿಂತರು.

ಈ ನಡುವೆ ಮಾತನಾಡಿದ್ದ ಜನಾರ್ದನ ರೆಡ್ಡಿ, “ಈ ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಕಡೆ ಕೆಆರ್‌ಪಿಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇನೆ” ಎಂದು ಹೇಳಿದ್ದರು. ಈ ಎಲ್ಲ ಬೆಳವಣಿಗೆ ಮಧ್ಯೆ ಈಗ ಜನಾರ್ದನ ರೆಡ್ಡಿ ಅವರನ್ನು ಅಮಿತ್‌ ಶಾ ಕರೆಸಿಕೊಂಡಿದ್ದಾರೆ. ಕೆಲವು ಹೊತ್ತು ಚರ್ಚೆಯನ್ನೂ ನಡೆಸಿದ್ದಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಲು ಸೂಚನೆಯನ್ನು ನೀಡಿರಬಹುದೇ? ಮುಂದೆ ಪಕ್ಷದಿಂದ ಸಹಕಾರ ಕೊಡುವುದಾಗಿ ಹೇಳಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ‌Lok Sabha Election 2024: ಡಿ.ಕೆ.ಸುರೇಶ್‌ದು ಸ್ವಾರ್ಥ, ಸುಲಿಗೆ, ಕೆಡುಕು ರಾಜಕಾರಣ ಎಂದ ಜೆಡಿಎಸ್!

ಕಾಂಗ್ರೆಸ್‌ ದೂರುವ ಹಾಗೂ ಇಲ್ಲ!

ಒಂದು ವೇಳೆ ಜನಾರ್ದನ ರೆಡ್ಡಿ ಅವರು ಬಿಜೆಪಿಯನ್ನು ಬೆಂಬಲಿಸಿದರೆ, ಇಲ್ಲವೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿದರೂ ಸಹ ಕಾಂಗ್ರೆಸ್‌ ದೂರುವ ಅವಕಾಶವನ್ನು ಕೈಚೆಲ್ಲಿ ಕುಳಿತಿದೆ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ. ರೆಡ್ಡಿ ಜೈಲಿನಿಂದ ಬಂದವರು, ಅಕ್ರಮ ಗಣಿಗಾರಿಕೆ ಆರೋಪ ಹೊತ್ತವರು. ಇಂಥವರನ್ನು ಬಿಜೆಪಿ ಪೋಷಿಸುತ್ತಿದೆ ಎಂದು ಈ ಹಿಂದೆ ಕಾಂಗ್ರೆಸ್‌ ಆರೋಪ ಮಾಡಿತ್ತು. ಆದರೆ, ಈಚೆಗೆ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಬೆಂಬಲವನ್ನು ಕಾಂಗ್ರೆಸ್‌ ಪಡೆದುಕೊಂಡಿತ್ತು. ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ರೆಡ್ಡಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಬಳಿಕ ತಮ್ಮ ಬೆಂಬಲವನ್ನು ಕಾಂಗ್ರೆಸ್‌ಗೆ ನೀಡಿದ್ದರು. ಈಗ ಒಂದು ವೇಳೆ ರೆಡ್ಡಿ ಬಿಜೆಪಿಯನ್ನು ಬೆಂಬಲಿಸಿದರೂ ಕಾಂಗ್ರೆಸ್‌ಗೆ ಆರೋಪ ಮಾಡಲು ವಿಷಯ ಇಲ್ಲದಂತಾಗುತ್ತದೆ ಎಂಬ ತಂತ್ರಗಾರಿಕೆ ಇದರ ಹಿಂದೆ ಅಡಗಿದೆ ಎಂದೇ ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Narendra Modi: ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಆದಾಯವು 2018-19ರಲ್ಲಿ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂ.ಗೆ ಏರಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

ಪ್ರಧಾನಿ ಮೋದಿಯ ನಾಮಪತ್ರದ ​ ವಿವರ ಇಲ್ಲಿದೆ

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಒಟ್ಟು ಆದಾಯ 2018-19ರಲ್ಲಿ ಇದ್ದ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂಪಾಯಿಗೆ ಏರಿದೆ.

ಶೈಕ್ಷಣಿಕ ಅರ್ಹತೆ

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗುತ್ತಿರುವ ವಾರಾಣಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ನಾನು ಭಾವಪರವಶನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ‘ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ’ (ಇಂದು, ತಾಯಿ ಗಂಗಾ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ) ಎಂದು ಹೇಳಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು

Continue Reading

Lok Sabha Election 2024

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

CM Siddaramaiah: ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಆರೋಪ ಮಾಡಿದ್ದಾರೆ.

VISTARANEWS.COM


on

CM Siddaramaiah says Our government is stable for 5 years BJP will disintegrate
Koo

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Maharashtra CM Eknath Shinde) ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿರುಗೇಟು ನೀಡಿದ್ದು, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ. ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ ರಚನೆ

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಹತಾಶೆಯಿಂದ ಮಾತನಾಡಿರುವ ಶಿಂಧೆ

ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading
Advertisement
Swati Maliwal
ಪ್ರಮುಖ ಸುದ್ದಿ9 mins ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ28 mins ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ59 mins ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ1 hour ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ1 hour ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್2 hours ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ2 hours ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು2 hours ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ2 hours ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20248 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ8 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು9 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ16 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌