Sidhu Moosewala: 58ನೇ ವಯಸ್ಸಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹತ ಪಂಜಾಬಿ ಗಾಯಕನ ಅಮ್ಮ! - Vistara News

ಬಾಲಿವುಡ್

Sidhu Moosewala: 58ನೇ ವಯಸ್ಸಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹತ ಪಂಜಾಬಿ ಗಾಯಕನ ಅಮ್ಮ!

Sidhu Moosewala: ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ( Balkaur Singh) ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಿಧು ಮೂಸೆವಾಲಾ ಅವರ ಕಿರಿಯ ಸಹೋದರನಿಗೆ ಆಶೀರ್ವಾದ ಇರಲಿ ಎಂದು ಪೋಸ್ಟ್‌ ಮೂಲಕ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Sidhu Moosewala Parents Welcome Baby Boy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022ರಲ್ಲಿ ಬರ್ಬರವಾಗಿ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moosewala) ಅವರ 58ವರ್ಷದ ತಾಯಿ ಚರಣ್ ಕೌರ್ (Charan Kaur) ಇದೀಗ ಗಂಡು ಮಗುವಿಗೆ ಜನ್ಮ (Punjabi singer Shubhdeep Singh Sidhu) ನೀಡಿದ್ದಾರೆ. ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ (Balkaur Singh) ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಿಧು ಮೂಸೆವಾಲಾನ ಕಿರಿಯ ಸಹೋದರನಿಗೆ ಆಶೀರ್ವಾದ ಇರಲಿ ಎಂದು ಪೋಸ್ಟ್‌ ಮೂಲಕ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ನಿಂದ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗಾಯಕ ಮೂಸೆವಾಲಾ ಅವರನ್ನು 2022ರ ಮೇ 29ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಗಾಯಕ ಹೆಣವಾಗಿದ್ದರು. ಇದು ಅವರ ಅಭಿಮಾನಿಗಳಿಗೆ ದೊಡ್ಡ ಆಘಾತವನ್ನು ನೀಡಿತ್ತು. ಮೂಸೆವಾಲಾ ಅವರ ತಾಯಿಗೆ 58 ವರ್ಷವಾದರೆ, ಬಾಲ್ಕೌರ್ ಸಿಂಗ್ ಅವರಿಗೆ 60 ವರ್ಷ. ಈ ವಯಸ್ಸಿನಲ್ಲಿ ಗಂಡು ಮಗುವಿಗೆ ಪೋಷಕರಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅವರ ಕುಟುಂಬದ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡಿತ್ತು. ಮೂಸೆವಾಲಾ ಅವರ ಪೋಷಕರು ಹೊಸ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 58 ವರ್ಷದ ತಾಯಿ ಗರ್ಭಿಣಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇದು ಸುಳ್ಳು ಸುದ್ದಿ ಎಂದು ವರದಿಯಾಗಿತ್ತು.

ಇದನ್ನೂ ಓದಿ: Sidhu MooseWala: ಪಂಜಾಬಿ ಸಿಂಗರ್ ಸಿಧು ಮೂಸೆವಾಲಾ ಗುಂಡಿಗೆ ಬಲಿ

ಪಂಜಾಬ್‌ನ ಮಾನ್ಸಾ ಜಿಲ್ಲೆಯ ಜವಾಹರ್ ಕೆ ಗ್ರಾಮದಲ್ಲಿ ಈ ಭೀಕರ ಹತ್ಯಾಕಾಂಡ ನಡೆದಿತ್ತು. ಸಿಧು ಅವರ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು 30ಕ್ಕೂ ಹೆಚ್ಚು ಗುಂಡುಗಳನ್ನು ಹಾರಿಸಿದ್ದರು ಒಟ್ಟು 8 ಗುಂಡುಗಳು ಇವರ ದೇಹವನ್ನು ಹೊಕ್ಕಿದ್ದವು. ಈ ಘಟನೆಯಲ್ಲಿ ಇತರ ಇಬ್ಬರೂ ಗಾಯಗೊಂಡಿದ್ದರು.

30 ವರ್ಷದ ಸಿಧು ಅವರ ಪೂರ್ಣ ಹೆಸರು ಶುಭದೀಪ್ ಸಿಂಗ್ ಸಿಧು. ಮೂಸೆವಾಲಾ ಅನ್ನೋದು ಅವರ ಗ್ರಾಮದ ಹೆಸರು. ಇವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಮುಗಿಸಿದ ಬಳಿಕ ಕೆಲ ಕಾಲ ಇವರು ಕೆನಡಾದಲ್ಲಿದ್ದರು. ತಮ್ಮ ಕಾಲೇಜು ದಿನಗಳಲ್ಲೇ ಸಂಗೀತ ಸಂಯೋಜನೆ ಮತ್ತು ಹಾಡಿನ ಪಟ್ಟುಗಳನ್ನು ಕಲಿತು ಮಿಂಚಿದ್ದರು.

ಸಿಧು ಮೂಸೆ ವಾಲಾ ಮಾಡಿದ್ದ ಕಿತಾಪತಿಗಳೇನೂ ಕಡಿಮೆ ಇರಲಿಲ್ಲ. ಹಲವಾರು ಆಕ್ಷೇಪಾರ್ಹ ಹಾಡುಗಳಿಂದ ಇವರು ವಿವಾದಕ್ಕೆ ತುತ್ತಾಗಿದ್ದರು. ತಮ್ಮ ಅನೇಕ ಹಾಡುಗಳಲ್ಲಿ ಗನ್ ಸಂಸ್ಕೃತಿಯನ್ನು ಪ್ರತಿಪಾದಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Ajay Devgn: ʻಪುಷ್ಪ’ನಿಗೆ ಹೆದರಿದ ‘ಸಿಂಗಂ’; ಅಜಯ್ ದೇವಗನ್ ಸಿನಿಮಾ ರಿಲೀಸ್​ ಪೋಸ್ಟ್‌ಪೋನ್‌?

Ajay Devgn: ಅಜಯ್‌ ದೇವಗನ್‌ ಹೊಸ ಪೋಸ್ಟರ್‌ ಹಂಚಿಕೊಂಡು ಚಿತ್ರ ರಿಲೀಸ್‌ ಡೇಟ್‌ ಮುಂದೂಡಲಾಗಿದೆ ಎಂದು ಘೋಷಿಸಿದ್ದಾರೆ. ಪೋಸ್ಟರ್‌ನಲ್ಲಿ ಚಿತ್ರದ ಶೀರ್ಷಿಕೆ ಮತ್ತು ಅದರಲ್ಲಿ ನಟಿಸಿರುವ ನಟರ ಹೆಸರುಗಳಿವೆ. ಅಜಯ್‌ ಅವರ ಮುಂಬರುವ ‘ಔರಾನ್ ಮೇ ಕಹಾನ್ ದಮ್ ಥಾ’ ಡ್ರೈಲರ್‌ ಬಿಡುಗಡೆಯ ಸಂದರ್ಭದಲ್ಲಿ, ಅಜಯ್ ದೇವಗನ್ ‘ಸಿಂಗಮ್ ಎಗೇನ್’ ಬಿಡುಗಡೆ ಬಗ್ಗೆ ಅಪ್‌ಡೇಟ್ ಕೇಳಿದಾಗ, “ನಮಗೆ ಇನ್ನೂ ಈ ಬಗ್ಗೆ ಖಚಿತವಾಗಿಲ್ಲ ಏಕೆಂದರೆ ಸಿನಿಮಾ ಕೆಲಸ ಇನ್ನೂ ನಡೆಯುತ್ತಿದೆ. ಅದು ಪೂರ್ಣಗೊಂಡಿಲ್ಲ. ಸ್ವಲ್ಪ ಚಿತ್ರೀಕರಣ ಇನ್ನೂ ಉಳಿದಿದೆʼʼಎಂದಿದ್ದರು.

VISTARANEWS.COM


on

Ajay Devgn Singham Again postponed release on Diwali 2024
Koo

ಬೆಂಗಳೂರು: ರೋಹಿತ್ ಶೆಟ್ಟಿ ನಿರ್ದೇಶನ, ಅಜಯ್‌ ದೇವಗನ್‌ ((Ajay Devgn) ) ನಟನೆಯ ‘ಸಿಂಗಂ ಅಗೇನ್‘ ರಿಲೀಸ್‌ ಡೇಟ್‌ ಮುಂದೂಡಲಾಗಿದೆ. 2024ರ ದೀಪಾವಳಿ ಸಮಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದೆ. ಈ ಹಿಂದೆ ಸಿನಿಮಾ ಅಗಸ್ಟ್‌ 15ರಂದು ರಿಲೀಸ್‌ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಇದೀಗ ಚಿತ್ರದ ರಿಲೀಸ್‌ ಡೇಟ್‌ ಪೋಸ್ಟ್‌ಪೋನ್‌ ಆಗಿದೆ ಎಂದು ಸ್ವತಃ ಅಜಯ್ ದೇವಗನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಟೈಗರ್ ಶ್ರಾಫ್, ಅರ್ಜುನ್ ಕಪೂರ್ ಸೇರಿದಂತೆ ಹಲವು ನಟರನ್ನು ಒಳಗೊಂಡು ಸಿನಿಮಾ ಇದಾಗಿದೆ. ಈ ಸಮಯದಲ್ಲಿ ಅಲ್ಲು ಅರ್ಜನ್​ ಅಭಿನಯದ, ಸುಕುಮಾರ್ ನಿರ್ದೇಶನದ ಪುಷ್ಪ 2 ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೆ ಹೆದರಿದ ಸಿಂಗಂ ಚಿತ್ರ ರಿಲೀಸ್ ಡೇಟ್​ ಮುಂದಕ್ಕೆ ಹಾಕಿದೆ.

ಇತ್ತೀಚೆಗೆ, ಅಕ್ಷಯ್ ಕುಮಾರ್, ರಣವೀರ್ ಸಿಂಗ್, ಟೈಗರ್ ಶ್ರಾಫ್, ಕರೀನಾ ಕಪೂರ್ ಮತ್ತು ದೀಪಿಕಾ ಪಡುಕೋಣೆ ಅವರ ಸಿಂಗಂ ಎಗೇನ್‌ನ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಚಿತ್ರತಂಡ ಹಂಚಿಕೊಂಡಿತ್ತು. ಕರೀನಾ ಫಸ್ಟ್ ಲುಕ್ ಹೊರಬಂದಿತ್ತು. ಇದೇ ಸಿನಿಮಾದಲ್ಲಿ ಅರ್ಜುನ್​ ಕಪೂರ್​ ಕೂಡ ನಟಿಸುತ್ತಿದ್ದಾರೆ. ಹಿಂದಿ ಚಿತ್ರರಂಗದ ಹಲವು ಪ್ರಮುಖ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇರುವುದರಿಂದ ಸಹಜವಾಗಿಯೇ ಹೈಪ್​ ಸೃಷ್ಟಿ ಆಗಿದೆ.

ಅಜಯ್‌ ದೇವಗನ್‌ ಹೊಸ ಪೋಸ್ಟರ್‌ ಹಂಚಿಕೊಂಡು ಚಿತ್ರ ರಿಲೀಸ್‌ ಡೇಟ್‌ ಮುಂದೂಡಲಾಗಿದೆ ಎಂದು ಘೋಷಿಸಿದ್ದಾರೆ. ಪೋಸ್ಟರ್‌ನಲ್ಲಿ ಚಿತ್ರದ ಶೀರ್ಷಿಕೆ ಮತ್ತು ಅದರಲ್ಲಿ ನಟಿಸಿರುವ ನಟರ ಹೆಸರುಗಳಿವೆ. ಅಜಯ್‌ ಅವರ ಮುಂಬರುವ ‘ಔರಾನ್ ಮೇ ಕಹಾನ್ ದಮ್ ಥಾ’ ಟ್ರೈಲರ್‌ ಬಿಡುಗಡೆಯ ಸಂದರ್ಭದಲ್ಲಿ, ಅಜಯ್ ದೇವಗನ್ ‘ಸಿಂಗಮ್ ಎಗೇನ್’ ಬಿಡುಗಡೆ ಬಗ್ಗೆ ಅಪ್‌ಡೇಟ್ ಕೇಳಿದ್ದಾರೆ “ನಮಗೆ ಇನ್ನೂ ಈ ಬಗ್ಗೆ ಖಚಿತವಾಗಿಲ್ಲ ಏಕೆಂದರೆ ಸಿನಿಮಾ ಕೆಲಸ ಇನ್ನೂ ನಡೆಯುತ್ತಿದೆ. ಅದು ಪೂರ್ಣಗೊಂಡಿಲ್ಲ. ಸ್ವಲ್ಪ ಚಿತ್ರೀಕರಣ ಇನ್ನೂ ಉಳಿದಿದೆʼʼಎಂದಿದ್ದರು.

ಇದನ್ನೂ ಓದಿ: Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

ಒಂದು ಮೂಲದ ಪ್ರಕಾರ ‘ಸಿಂಗಂ ಅಗೇನ್​’ ಸಿನಿಮಾದ ರಿಲೀಸ್ ಡೇಟ್​ ಮುಂದೂಡಿಕೆ ಆಗಲು ‘ಪುಷ್ಪ 2’ ತಂಡದ ಪೈಪೋಟಿ ಕಾರಣ ಎನ್ನಲಾಗಿದೆ. ಈ ಮುಂಚೆ ಚಿತ್ರತಂಡ ದೀಪಿಕಾ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ಅನಾವರಣಗೊಳಿಸಿತ್ತು. ಶಕ್ತಿ ಶೆಟ್ಟಿ ಪಾತ್ರದ ಹೆಸರು.

ರಕ್ತಸಿಕ್ತವಾಗಿ ದೀಪಿಕಾ ಕಂಡಿದ್ದು, ವ್ಯಕ್ತಿಯ ಬಾಯಿಯೊಳಗೆ ರಿವಾಲ್ವರ್ ಹಾಕಿ ಖಡಕ್‌ ಲುಕ್‌ ಕೊಟ್ಟಿದ್ದಾರೆ ದೀಪಿಕಾ. ಹಿಂದೆ ಬೆಂಕಿ, ಸುತ್ತಲೂ ಹೆಣಗಳ ರಾಶಿ, ಕಾರು ಅವಶೇಷಗಳು ಕಾಣಿಸಿಕೊಂಡವು. ನಟ-ಪತಿ ರಣವೀರ್ ಸಿಂಗ್, ಕೂಡ ದೀಪಿಕಾ ಲುಕ್‌ಗೆ ಹೊಗಳಿದ್ದಾರೆ. ಈ ಹಿಂದೆ ವರದಿಯೊಂದು ಚಿತ್ರದಲ್ಲಿ ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿತ್ತು. ಮೂಲ ಪ್ರಕಾರ, “ದೀಪಿಕಾ ಪಡುಕೋಣೆ ರೋಹಿತ್ ಶೆಟ್ಟಿಯವರ ಸಿಂಗಂ ಅಗೇನ್ ಚಿತ್ರಕ್ಕಾಗಿ ಉತ್ಸುಕರಾಗಿದ್ದಾರೆ. ಅವರು ರೋಹಿತ್ ಶೆಟ್ಟಿ ಯೂನಿವರ್ಸ್‌ನ ಮೊದಲ ಮಹಿಳಾ ಪೋಲೀಸ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಸಾಹಸಮಯ ಭಾಗಕ್ಕಾಗಿ ಈಗಾಗಲೇ ಪೂರ್ವಸಿದ್ಧತೆ ಪ್ರಾರಂಭಿಸಿದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

Continue Reading

ಸಿನಿಮಾ

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

Maharaj: ಬಾಲಿವುಡ್‌ ನಟ ಆಮೀರ್‌ ಖಾನ್‌ ಪುತ್ರ ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ಮಹಾರಾಜ್‌ ಬಿಡುಗಡೆಗೆ ಗುಜರಾತ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Maharaj
Koo

ಗಾಂಧಿನಗರ: ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಪುತ್ರ ಜುನೈದ್‌ ಖಾನ್‌ (Junaid Khan) ನಟಿಸಿರುವ ಮೊದಲ ಸಿನಿಮಾಗೇ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂಬುದಾಗಿ ಹಿಂದು ಸಂಘಟನೆಗಳು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಗುಜರಾತ್‌ ಹೈಕೋರ್ಟ್‌, ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ (Maharaj)‌ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಆಮೀರ್‌ ಖಾನ್‌ ಹಾಗೂ ಜುನೈದ್‌ ಖಾನ್‌ಗೆ ತುಸು ಹಿನ್ನಡೆಯಾದಂತಾಗಿದೆ.

ಸಿದ್ಧಾರ್ಥ್‌ ಪಿ. ಮಲ್ಹೋತ್ರಾ ಅವರು ಮಹಾರಾಜ್‌ ಸಿನಿಮಾವನ್ನು ನಿರ್ದೇಶಿಸಿದ್ದರೆ, ಆದಿತ್ಯ ಚೋಪ್ರಾ ನಿರ್ಮಾಪಕರಾಗಿದ್ದಾರೆ. ಜೂನ್‌ 14ರಂದೇ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ, ಭಗವಾನ್‌ ಕೃಷ್ಣನ ಆರಾಧಕರು ಹಾಗೂ ವಲ್ಲಭಾಚಾರ್ಯ ಅವರ ಅನುಯಾಯಿಗಳು ನ್ಯಾಯಾಲಯದ ಮೊರೆ ಹೋದ ಕಾರಣ, ನ್ಯಾಯಾಲಯವು ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ. ಹಾಗೆಯೇ, ಸಾಮಾಜಿಕ ಜಾಲತಾಣದಲ್ಲಿ ಬಾಯ್ಕಾಟ್‌ ನೆಟ್‌ಫ್ಲಿಕ್‌ ಅಭಿಯಾನವೂ ಆರಂಭವಾಗಿದೆ.

ಸಿನಿಮಾದಲ್ಲಿ ಏನಿದೆ? ಯಾಕಿಷ್ಟು ವಿವಾದ?

1862ರಲ್ಲಿ ಪುಷ್ಟಿಮಾರ್ಗ ವೈಷ್ಣವ ಪಂಥದ ಮಹಾರಾಜರ ಕುರಿತು ಕರ್ಸನ್‌ದಾಸ್‌ ಮುಲ್ಝಿ ಎಂಬ ಪತ್ರಕರ್ತ ಬರೆದ ಲೇಖನಗಳ ಪ್ರಕರಣವಾಗಿದೆ. ವೈಷ್ಣವ ಪಂಥದ ಮಹಾರಾಜರು ತಮ್ಮ ಅನುಯಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಸೇರಿ ಹಲವು ಲೇಖನಗಳನ್ನು ಗುಜರಾತಿ ವಾರಪತ್ರಿಕೆ ‘ಸತ್ಯಪ್ರಕಾಶ’ದಲ್ಲಿ ಬರೆದಿದ್ದರು.

ಮಹಾರಾಜರ ಅನುಯಾಯಿಗಳು ಸೇರಿ ಹಿಂದುಗಳು ಕರ್ಸನ್‌ದಾಸ್‌ ಮುಲ್ಝಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಬ್ರಿಟಿಷ್‌ ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿತ್ತು. 16ನೇ ಶತಮಾನದಲ್ಲಿ ವಲ್ಲಭಾಚಾರ್ಯ ಅವರು ಪುಷ್ಟಿಮಾರ್ಗವನ್ನು ಸಂಸ್ಥಾಪಿಸಿದ್ದು, ಕೃಷ್ಣನ ಆರಾಧಕರು ಈ ಮಾರ್ಗವನ್ನು ಅನುಸರಿಸುತ್ತಾರೆ. ವೈಷ್ಣವ ಪಂಥದ ಮಹಾರಾಜರ ಕುರಿತು ಅವಹೇಳನಕಾರಿಯಾಗಿ ಲೇಖನ ಬರೆದಿದ್ದ ಕರ್ಸನ್‌ದಾಸ್‌ ಮುಲ್ಝಿಯ ಪಾತ್ರವನ್ನೇ ಜುನೈದ್‌ ಖಾನ್‌ ನಿಭಾಯಿಸಿದ್ದಾರೆ.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Continue Reading

ಬಾಲಿವುಡ್

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Hamare Baarah: ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

VISTARANEWS.COM


on

Hamare Baarah Release Supreme Court has imposed a stay
Koo

ಬೆಂಗಳೂರು: ಹಮ್ ದೋ, ಹಮಾರೆ ಬಾರಾ’ (Hamare Baarah) ಚಲನಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧ ಮಾಡಿ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈಗ ಹಮಾರೆ ಬಾರಾ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು.

ಅರ್ಜಿದಾರರ ಪರ ವಕೀಲ ಫೌಜಿಯಾ ಶಕೀಲ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಅರ್ಜಿಯ ಕುರಿತು ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಬಾಂ ಬೆ ಹೈಕೋರ್ಟ್‌ಗೆ ಸೂಚಿಸಿದೆ. ನ್ಯಾಯಮೂರ್ತಿ ಮೆಹ್ತಾ ಅವರು ಚಿತ್ರದ ಟ್ರೈಲರ್‌ ಬಗ್ಗೆಯೂ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. “ಇಂದು ಬೆಳಗ್ಗೆ ನಾವು ಟೀಸರ್‌ ನೋಡಿದ್ದೇವೆ. ಆಕ್ಷೇಪಾರ್ಹವಾಗಿದೆ. ಟೀಸರ್ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ” ಎಂದು ಸಂದೀಪ್ ಮೆಹ್ತಾ ಹೇಳಿದ್ದಾರೆ. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ಈ ಹಿಂದೆ ತಿಳಿಸಿತ್ತು. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿತ್ತು. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

Continue Reading

ಬಾಲಿವುಡ್

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Sonakshi Sinha: ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Sonakshi Sinha Zaheer Iqbal confirm their wedding in leaked audio
Koo

ಬೆಂಗೂರು: ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ಜಹೀರ್ ಇಕ್ಬಾಲ್ ( Zaheer Iqbal) ಜೂನ್ 23 ರಂದು ವಿವಾಹವಾಗಲಿದ್ದಾರೆ. ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ. ಮದುವೆಯ ಆಮಂತ್ರಣದ ಆಡಿಯೊ QR ಕೋಡ್ ಸಹ ಒಳಗೊಂಡಿದೆ. ಇದರಲ್ಲಿ ಜೋಡಿ ತಮ್ಮ ಮದುವೆ ದಿನಾಂಕವನ್ನು ಖಚಿತಪಡಿಸಿದೆ. ಅಧಿಕೃತವಾಗಿ ಪತಿ-ಪತ್ನಿ ಯಾಗಲು ಸಮಯ ಬಂದಾಯ್ತು ಎಂದು ಜೋಡಿ ಹೇಳಿಕೊಂಡಿದೆ.

“ನಮ್ಮೆಲ್ಲ ಸ್ನೇಹಿತರಿಗೆ ಹಾಗೂ ಕುಟುಂಬಕ್ಕೆ, ಹಾಯ್‌. ಕಳೆದ ಏಳು ವರ್ಷಗಳಿಂದ ನಾವು ಒಟ್ಟಿಗೆ ಇದ್ದೇವೆ. ಸಂತೋಷ, ಪ್ರೀತಿ, ನಗು ಹೀಗೆ ಈ ಸುಂದರ ಕ್ಷಣಕ್ಕೆ ಕಾರಣವಾಗಿವೆ” ಎಂದು ಜಹೀರ್ ಹೇಳುತ್ತಿದ್ದಂತೆ, “ಒಬ್ಬರಿಗೊಬ್ಬರು ಗೆಳತಿ ಮತ್ತು ಗೆಳೆಯರಾಗುವ ಕ್ಷಣ” ಎಂದು ಸೋನಾಕ್ಷಿ ಹೇಳುತ್ತಾರೆ, ಅಧಿಕೃತವಾಗಿ ಪತಿ ಹಾಗೂ ಪತ್ನಿಯಾಗುವ ಸಮಯ ಬಂದಾಯ್ತು. ನೀವು ಇಲ್ಲದೆ ಈ ಆಚರಣೆ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಜೂನ್ 23 ರಂದು ನಮ್ಮೊಂದಿಗೆ ಪಾರ್ಟಿ ಮಾಡಿ. ಅಲ್ಲಿ ಸಿಗೋಣ” ಎಂದು ಜೋಡಿ ಮಾತನಾಡಿರುವ ಆಡಿಯೊ ಕ್ಲಿಪ್‌ ವೈರಲ್‌ ಆಗಿದೆ.

ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi & Zaheer, wedding confirmed on June 23! 💍
byu/FleaBird_ inBollyBlindsNGossip

ಇತ್ತೀಚಿನ ವರದಿಯ ಪ್ರಕಾರ ಸೋನಾಕ್ಷಿ ಮತ್ತು ಜಹೀರ್ ರಿಜಿಸ್ಟರ್ ಮ್ಯಾರೇಜ್ ಆಗಲಿದ್ದಾರೆ ಎನ್ನಲಾಗಿದೆ. ಜೂನ್ 23 ರಂದು ಆರತಕ್ಷತೆ ಪಾರ್ಟಿ ನಡೆಯಲಿದೆ. ಲವ್ ಬರ್ಡ್ಸ್ ಆಯುಷ್ ಶರ್ಮಾ, ಹುಮಾ ಖುರೇಷಿ ಮತ್ತು ವರುಣ್ ಶರ್ಮಾ ಅವರಿಗೆ ಈಗಾಗಲೇ ಸೋನಾಕ್ಷಿ ಆಹ್ವಾನವನ್ನು ನೀಡಿದ್ದಾರೆ ಎನ್ನಲಾಗಿದೆ. ಫರ್ದೀನ್ ಖಾನ್, ತಾಹಾ ಶಾ ಬಾದುಶಾ, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಬಾಲಿವುಡ್‌ನ ಕೆಲವು ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Self Harming
ಮೈಸೂರು52 seconds ago

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Italian Parliament
ವೈರಲ್ ನ್ಯೂಸ್7 mins ago

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

Kotee Movie release today dolly dhananjay
ಸ್ಯಾಂಡಲ್ ವುಡ್10 mins ago

Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

T20 World Cup 2024
ಕ್ರೀಡೆ13 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

Actor Darshan case comparision to serial troll
ಕಿರುತೆರೆ13 mins ago

Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

CM Award
ಪ್ರಮುಖ ಸುದ್ದಿ23 mins ago

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

Ajay Devgn Singham Again postponed release on Diwali 2024
ಬಾಲಿವುಡ್27 mins ago

Ajay Devgn: ʻಪುಷ್ಪ’ನಿಗೆ ಹೆದರಿದ ‘ಸಿಂಗಂ’; ಅಜಯ್ ದೇವಗನ್ ಸಿನಿಮಾ ರಿಲೀಸ್​ ಪೋಸ್ಟ್‌ಪೋನ್‌?

Priyanka Gandhi
ದೇಶ53 mins ago

Priyanka Gandhi: ರಾಹುಲ್ ಗಾಂಧಿ ತೆರವು ಮಾಡುವ ವಯನಾಡ್‌ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Bakrid; CM Yogi gives warning to Muslims
Latest55 mins ago

Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

Wimbledon 2024
ಕ್ರೀಡೆ57 mins ago

Wimbledon 2024: ವಿಂಬಲ್ಡನ್ ಟೂರ್ನಿಯಿಂದ ಹಿಂದೆ ಸರಿದ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌