Money Seize : ಮಂಡ್ಯದಲ್ಲಿ ದಾಖಲೆ ಇಲ್ಲದ 1 ಕೋಟಿ ರೂಪಾಯಿ ವಶಕ್ಕೆ - Vistara News

ರಾಜಕೀಯ

Money Seize : ಮಂಡ್ಯದಲ್ಲಿ ದಾಖಲೆ ಇಲ್ಲದ 1 ಕೋಟಿ ರೂಪಾಯಿ ವಶಕ್ಕೆ

Money Seize: ಗಿರೀಶ್ ಎಂಬುವವರು ತಮ್ಮ ಕ್ರೆಡಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆ‌ರ್.ಪೇಟೆ ಕಡೆಗೆ ನಗದು ಸಾಗಾಟ ಮಾಡುತ್ತಿದ್ದರು.

VISTARANEWS.COM


on

Money
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ (Money Seize) ಪಡೆಯಲಾಗಿದೆ. ಕ್ರೆಟಾ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗಿರೀಶ್ ಎಂಬುವವರು ತಮ್ಮ ಕ್ರೆಡಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆ‌ರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರು ಚೆಕ್‌ಪೋಸ್ಟ್ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ದೊಡ್ಡ ಚೀಲದಲ್ಲಿ ತುಂಬಿಟ್ಟಿದ್ದ ನಗದು ಪತ್ತೆಯಾಗಿದೆ.

ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ ಸೂಕ್ತ ಉತ್ತರ, ಹಣಕ್ಕೆ ಪೂರಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್‌ಸ್ಪೆಕ್ಟ‌ರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.

ಬೆಂಗಳೂರಲ್ಲಿ 13 ಲಕ್ಷ ರೂ. ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ದಿನಾಂಕ ಘೋಷಣೆಯಾಗಿದೆ. ಶನಿವಾರದಿಂದಲೇ (ಮಾರ್ಚ್‌ 16) ಮಾದರಿ ನೀತಿ ಸಂಹಿತೆ (Code Of Conduct) ಜಾರಿಯಾಗಿದೆ. ಇದರ ಮಧ್ಯೆಯೇ, ಕರ್ನಾಟಕದಲ್ಲಿ ಹಣದ ಹೊಳೆ ಹರಿಯಲು ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಂಗಳೂರಿನಲ್ಲಿ (Bengaluru) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್‌!

ಶಾಂತಿ ನಗರದ ಚೆಕ್‌ಪೋಸ್ಟ್‌ನಲ್ಲಿ ಶನಿವಾರ (ಮಾರ್ಚ್‌ 16) ರಾತ್ರಿ ಕಬ್ಬನ್‌ ಪಾರ್ಕ್‌ ಪೊಲೀಸರು ಸುಮಾರು 13 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 13 ಲಕ್ಷ ರೂ. ಸಿಕ್ಕಿದೆ. ಇದಕ್ಕೆ ದಾಖಲೆ ಇಲ್ಲದ ಕಾರಣ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಠಿಣ ಕ್ರಮ ಎಂದ ರಾಜೀವ್‌ ಕುಮಾರ್

‌ಲೋಕಸಭೆ ಚುನಾವಣೆ ವೇಳೆ ಹಣ, ಉಚಿತ ಉಡುಗೊರೆಗಳ ವಿತರಣೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಈಗಾಗಲೇ ಎಚ್ಚರಿಕೆ ನೀಡದ್ದಾರೆ. ಚುನಾವಣೆ ಆಯೋಗವು ಪಾರದರ್ಶಕವಾಗಿ, ಸುಸಜ್ಜಿತವಾಗಿ ನಡೆಸಲು ಚುನಾವಣೆ ಆಯೋಗವು ಬದ್ಧವಾಗಿದೆ. ಇದಕ್ಕಾಗಿ, ದೇಶಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಸೇರಿ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆಯನ್ನು ನಡೆಸುತ್ತೇವೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು.

ಈಗಿನಿಂದಲೇ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಯಾರು ಕೂಡ ನಿಯಮಗಳನ್ನು ಮೀರಬಾರದು. ಮಾದರಿ ನೀತಿ ಸಂಹಿತೆ ಜಾರಿ ವೇಳೆ ಹಿಂಸಾಚಾರ ಎಸಗಿದವರ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸಲಾಗುತ್ತದೆ. ಹಣ, ತೋಳ್ಬಲ, ತಪ್ಪು ಮಾಹಿತಿ ರವಾನೆಯನ್ನು ತಡೆಯಲು ಆಯೋಗವು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇನ್ನು, ರಾಜಕೀಯ ವ್ಯಕ್ತಿಗಳು ಕೂಡ ವಿಷಯಗಳ ಆಧಾರಿತವಾಗಿ ಪ್ರಚಾರ ಮಾಡಬೇಕೇ ಹೊರತು, ಗೊಂದಲ, ಗಲಾಟೆಗೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗ ಒಂದು ಬಗೆಯ ಮಾರಣ ಯಾಗವಾಗಿದೆ. ಇದರಲ್ಲಿ ಅಘೋರಿಗಳು, ಕಾಪಾಲಿಕರು, ಮಾಂತ್ರಿಕರು ಭಾಗವಹಿಸುತ್ತಿದ್ದಾರೆ.

VISTARANEWS.COM


on

Shatru Bhairavi yaga ಶತ್ರು ಭೈರವಿ ಯಾಗ
Koo

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಾಟ- ಮಂತ್ರ (Black Magic) ಪಾಲಿಟಿಕ್ಸ್ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರಿಗೆ ʼರಾಜಕಂಟಕʼ ತರಲು ಉದ್ದೇಶಿಸಿ ಕೇರಳದಲ್ಲಿ ʼಶತ್ರು ಭೈರವಿ ಯಾಗ’ (Shatru Bhairavi yaga) ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್‌ ನಿನ್ನೆ ಆರೋಪಿಸಿದ್ದರು. ಇದೀಗ ಪುರೋಹಿತರ ಸೂಚನೆಯಂತೆ, ಈ ಯಾಗದಿಂದ ಉಂಟಾಗಬಹುದಾದ ಹಾನಿಗೆ ರಕ್ಷಣಾ ಕವಚ ಮಾಡಿಸಲು ಡಿಕೆಶಿ ಮುಂದಾಗಿದ್ದಾರೆ.

ಡಿಸಿಎಂ ಅವರಿಂದ ಕೇರಳದಲ್ಲಿ ನಡೆಯುತ್ತಿರುವ ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಸುಳಿವು ದೊರೆತಿತ್ತು. ʼʼನನ್ನ ಮತ್ತು ಸಿಎಂ ವಿರುದ್ಧ ದೊಡ್ಡ ವಾಮಾಚಾರ ಪ್ರಯೋಗ ನಡೆಯುತ್ತಿದೆ” ಎಂದು ಡಿಕೆಶಿ ಹೇಳಿದ್ದರು. ಡಿಸಿಎಂ ಹಾಗೂ ಸಿಎಂ ವಿರುದ್ಧ ಶತ್ರು ಭೈರವಿ ಯಾಗ ಕೇರಳದ ಯಾವುದೋ ಊರಿನ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸೇರಿದ ನಿರ್ಜನ ಪ್ರದೇಶದಲ್ಲಿ ನಡೆಯುತ್ತಿದೆ. ಆಘೋರಿಗಳ ಮೊರೆ ಹೋಗಿ ಈ ಯಾಗ ಮಾಡಿಸಲಾಗುತ್ತಿದೆ. ನನ್ನ ವಿರುದ್ಧ ಕೆಲವು ರಾಜಕಾರಣಿಗಳೇ ಮಾಡಿಸುತ್ತಿದ್ದಾರೆ ಎಂದಿದ್ದರು ಡಿಸಿಎಂ.

“ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದು ಶತ್ರು ನಾಶಕ್ಕಾಗಿಯೇ ಮಾಡುವ ಯಾಗ!

ಯಜ್ಞಕಾಂಡ ಹಾಗೂ ಪುರಾಣಗಳಲ್ಲಿ ಹಲವು ಬಗೆಯ ಯಾಗಗಳ ಉಲ್ಲೇಖವಿದೆ. ಒಳ್ಳೆಯ ಉದ್ದೇಶದಿಂದ ಹಾಗೂ ಕೆಟ್ಟ ಉದ್ದೇಶದಿಂದ ನಡೆಯುವ ಯಾಗಗಳೆಂದು ಎರಡು ವಿಧಗಳಿವೆ. ದುಷ್ಟ ಉದ್ದೇಶದ ಯಾಗಗಳಲ್ಲಿ ಸ್ತಂಭನ ಹಾಗೂ ಮಾರಣ ಯಾಗಗಳು ಪ್ರಮುಖವಾಗಿವೆ. ಸ್ತಂಭನ ಯಾಗಗಳು ವಾಮಾಚಾರದ ಭಾಗವಾಗಿದ್ದು, ಶತ್ರುಗಳಿಗೆ ಸಂಕಷ್ಟ ನೀಡುವ ಉದ್ದೇಶದಿಂದ ನಡೆಯುತ್ತವೆ. ಮಾರಣ ಯಾಗಗಳು ಶತ್ರುವನ್ನು ನಾಶ ಮಾಡಲೆಂದೇ ನಡೆಲಾಗುತ್ತದೆ. ಶತ್ರು ಭೈರವಿ ಯಾಗವು ಒಂದು ಬಗೆಯ ಮಾರಣ ಯಾಗವಾಗಿದೆ.

ಮೂರು ಪ್ರಯೋಗಗಳು, ಪಂಚಬಲಿ

ತ್ರು ಭೈರವಿ ಎಂಬ ಶಕ್ತಿಯನ್ನು ಪ್ರಸನ್ನಗೊಳಿಸಲು ಈ ಮಾರಣ ಯಾಗ ನಡೆಯುತ್ತದೆ. ಶತ್ರು ಭೈರವಿಯನ್ನು ಬಲಿಗಳಿಂದ ಪ್ರಸನ್ನಗೊಳಿಸಿ, ವೈರಿ ನಾಶಕ್ಕಾಗಿ ಕಳಿಸಿಕೊಡಲಾಗುತ್ತದೆ. ಶತ್ರು ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ನಡೆದಿವೆ. ಮಾರಣ, ಮೋಹನ, ಸ್ತಂಭನ ಎಂಬ ಮೂರು ಪ್ರಯೋಗಗಳು ಇವೆ. ರಾಜಕಂಟಕ ತರಲು ಈ ಭೈರವಿ ಯಾಗದಲ್ಲಿ ಮೂರು ಪ್ರಯೋಗಗಳು ಇರುತ್ತವೆ. ಮೂರು ಪ್ರಯೋಗಕ್ಕೆ 50 ಪ್ರಾಣಿಗಳ ಬಲಿ ಕೊಡಲಾಗಿದೆ.

21 ಕೆಂಪು ಬಣ್ಣದ ಮೇಕೆಗಳು, 3 ಎಮ್ಮೆಗಳು, 21 ಕಪ್ಪು ಬಣ್ಣದ ಕುರಿಗಳು, 5 ಹಂದಿಗಳನ್ನು ಬಲಿ ಕೊಡಲಾಗಿದೆ. ಈ ಯಾಗದಲ್ಲಿ ಎಂಟು ಮಂದಿ ವಾಮಾಚಾರ- ಅಭಿಚಾರ ಕರ್ಮಗಳನ್ನು ಬಲ್ಲ ಜ್ಯೋತಿಷಿಗಳು ಭಾಗವಹಿಸುತ್ತಿದ್ದಾರೆ. ಮದ್ಯ ಮಾಂಸಗಳನ್ನು ಯಥೇಚ್ಛವಾಗಿ ದೇವತೆಗೆ ಕೊಡಲಾಗುತ್ತಿದ್ದು, ದೇವತೆಯನ್ನು ರೊಚ್ಚಿಗೆಬ್ಬಿಸುವ ಪ್ರಕ್ರಿಯೆ ನಡೆಯುತ್ತಿದೆ. ಕೇರಳದಲ್ಲಿ ಜ್ಯೋತಿಷಿಗಳ ಸ್ವರೂಪದಲ್ಲಿರುವ ಹಲವು ಮಂದಿ ಅಘೋರಿಗಳಿದ್ದು, ಇದನ್ನು ನೆರವೇರಿಸುವಲ್ಲಿ ಪಳಗಿದ್ದಾರೆ. ಇವರು ಅನೇಕ ಯಾಗಗಳನ್ನು ಈ ಹಿಂದೆ ನೆರವೇರಿಸಿದ ನಿದರ್ಶನಗಳಿವೆ.

ಅಘೋರಿಗಳು, ಕಾಪಾಲಿಕರು ಮಾತ್ರ ಮಾಡುತ್ತಾರೆ

ಈ ಯಾಗವನ್ನು ಸಾಮಾನ್ಯ ಪುರೋಹಿತರಿಂದ ಮಾಡಲು ಸಾಧ್ಯವಿಲ್ಲ. ಅಘೋರಿಗಳನ್ನು ಕರೆಸಿ ಸ್ಮಶಾನದಲ್ಲಿ ಯಾಗ ನಡೆಸಲಾಗುತ್ತದೆ. ಸ್ಮಶಾನ ಕಾಳಿಯನ್ನು ಪ್ರಧಾನವಾಗಿಟ್ಟು ಅಷ್ಟ ಭೈರವಿಯನ್ನು ಕರೆದು ಯಾಗ ಮಾಡಿಸಲಾಗುತ್ತದೆ. ಮೊದಲು ಪ್ರಾಣಿಯ ಮೇಲೆ ನಡೆಯುತ್ತದೆ. ಪ್ರಾಣಿ ಸತ್ತು ಬೀಳುತ್ತದೆ. ಇದಕ್ಕೆ ಮಾಮೂಲಿ ತುಪ್ಪ, ಸಮಿತ್ತುಗಳನ್ನು ಬಳಸುವುದಿಲ್ಲ. ಹಂದಿ, ಎಮ್ಮೆ ತುಪ್ಪ ಬಳಕೆ ಮಾಡಲಾಗುತ್ತದೆ. ವಿಷಯುಕ್ತ ಮರದ ಚಕ್ಕೆಗಳನ್ನು ಹೋಮಕ್ಕೆ ಹಾಕಲಾಗುತ್ತದೆ. ಮಣ್ಣಿನ ದೇವಿ ಮೂರ್ತಿಗೆ ರಕ್ತ ನೀಡಿದಾಗ ರಕ್ತ ಹೀರುತ್ತದೆ. ಈ ಯಾಗ 9 ದಿನಗಳ ಕಾಲ ಪ್ರತಿ ರಾತ್ರಿ ನಡೆಯುತ್ತದೆ. ಕಾಪಾಲಿಕರು, ಅಘೋರಿಗಳು ನಡೆಸುವ ಈ ಯಾಗದಲ್ಲಿ ಶ್ರದ್ಧೆ ಅಥವಾ ಪ್ರಯೋಗದಲ್ಲಿ ಸ್ವಲ್ಪ ವ್ಯತ್ಯಾಸವಾದ್ರೂ ಮಾಡಿಸುವ ಕರ್ತೃ ಹಾಗೂ ಮಾಂತ್ರಿಕ ಇಬ್ಬರಿಗೂ ಮಾರಣಾಂತಿಕ ಹಾನಿ ಸಂಭವಿಸಬಹುದು. ಉನ್ನತ ತಂತ್ರ ವಿದ್ಯೆ ಗೊತ್ತಿರುವ ಮಂದಿಗೆ ಮಾತ್ರ ಈ ಯಾಗ ಮಾಡುವ ಕ್ರಮ ಗೊತ್ತಿದ್ದು, ಅದರ ಅರ್ಹತೆ- ಅಧಿಕಾರ ಪಡೆದಿದ್ದಾರೆ.

ಯಾಗದಲ್ಲಿ ಭಾಗಿಯಾದವರಿಂದಲೇ ಡಿಸಿಎಂ ಡಿಕೆಶಿಗೆ ಈ ಬಗ್ಗೆ ಮಾಹಿತಿ ದೊರೆತಿದೆ ಎಂದು ಅವರು ಹೇಳಿದ್ದಾರೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್ ಪುರೋಹಿತರ ಮೊರೆ ಹೋಗಿದ್ದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸೂಕ್ತ ದಿಗ್ಬಂಧನಗಳನ್ನು ಮಾಡಿಸಿಕೊಳ್ಳುವುದು ಸೇರಿದಂತೆ ಒಂದಷ್ಟು ಮಹತ್ವದ ಸಲಹೆಗಳನ್ನು ಜ್ಯೋತಿಷಿಗಳು ಅವರಿಗೆ ನೀಡಿದ್ದಾರೆ. “ನನ್ನ ರಕ್ಷಣೆಗೆ ನನ್ನ ಶಕ್ತಿ ಇದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದು, ಈ ಶಕ್ತಿ ಹಾಗೂ ತಾವು ಕೈಗೊಳ್ಳುತ್ತಿರುವ ರಕ್ಷಣಾ ಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ದೇಶ

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

PM Narendra Modi:ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಬಂದಿಳಿಯುತ್ತಿದ್ದಂತೆ ಅವರ ಹಳೆಯ ಫೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 1991ರಲ್ಲಿ ನರೇಂದ್ರ ಮೋದಿ, ಅಂದಿನ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಷಿ(MM Joshi) ಕನ್ಯಾಕುಮಾರಿಗೆ ಭೇಟಿ ನೀಡಿದ್ದ ಫೋಟೋ ವೈರಲ್‌ ಆಗಿದೆ. ಈ 33 ವರ್ಷ ಹಳೆಯದಾದ ಈ ಅದ್ಭುತ ಚಿತ್ರಕ್ಕೆ ನೆಟ್ಟಿಗರಿಂದ ನಾನಾ ರೀತಿಯ ಕಮೆಂಟ್‌ಗಳು ಬಂದಿವೆ.

VISTARANEWS.COM


on

PM Narendra Modi
Koo

ತಮಿಳುನಾಡು: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತ ಮತದಾನದ ಬಹಿರಂಗ ಪ್ರಚಾರ ಕೊನೆಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ವಾಡಿಕೆಯಂತೆ ಪ್ರಯಾಣವನ್ನು ಕೈಗೊಂಡಿದ್ದು, ನಿನ್ನೆ ಸಂಜೆಯಿಂದಲೇ ಕನ್ಯಾಕುಮಾರಿ(Kanyakumari)ಯ ವಿವೇಕಾನಂದ ಕಲ್ಲಿನ ಸ್ಮಾರಕ(Vivekananda Rock Memorial)ದಲ್ಲಿ ಧ್ಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಬಂದಿಳಿಯುತ್ತಿದ್ದಂತೆ ಅವರ ಹಳೆಯ ಫೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 1991ರಲ್ಲಿ ನರೇಂದ್ರ ಮೋದಿ, ಅಂದಿನ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಷಿ(MM Joshi) ಕನ್ಯಾಕುಮಾರಿಗೆ ಭೇಟಿ ನೀಡಿದ್ದ ಫೋಟೋ ವೈರಲ್‌ ಆಗಿದೆ.

ಈ 33 ವರ್ಷ ಹಳೆಯದಾದ ಈ ಅದ್ಭುತ ಚಿತ್ರಕ್ಕೆ ನೆಟ್ಟಿಗರಿಂದ ನಾನಾ ರೀತಿಯ ಕಮೆಂಟ್‌ಗಳು ಬಂದಿವೆ. ಡಿ. 11, 1991 ರಂದು ಬಿಜೆಪಿ ಕೈಗೊಂಡಿದ್ದ ಏಕತಾ ಯಾತ್ರೆ ಕನ್ಯಾಕುಮಾರಿಯಿಂದ ಶುರುವಾಗಿ ಕಾಶ್ಮೀರದಲ್ಲಿ ಮುಕ್ತಾಗೊಂಡಿತ್ತು. ಈ ಯಾತ್ರೆಯಲ್ಲಿ ನರೇಂದ್ರ ಮೋದಿ, ಮುರಳಿ ಮನೋಹರ್‌ ಜೋಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಿವೇಕಾನಂದ ಪ್ರತಿಮೆ ಎದುರು ನಿಂತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

ಏನಿದು ಏಕತಾ ಯಾತ್ರೆ?

ಭಯೋತ್ಪಾದನೆ ವಿರುದ್ಧ ಭಾರತ ಬಲಿಷ್ಟವಾಗಿ ನಿಂತಿದೆ ಎಂಬ ಸಂದೇಶವನ್ನು ಪ್ರಪಂಚಕ್ಕೆ ಸಾರುವ ಉದ್ದೇಶದಿಂದ ಬಿಜೆಪಿ ಡಿ. 11, 1991 ರಂದು ಏಕತಾ ಯಾತ್ರೆಯನ್ನು ಆರಂಭಿಸಿತ್ತು. ಈ ಯಾತ್ರೆ ಜ. 26, 1992ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸಮಾಪ್ತಿಯಾಗಿತ್ತು. ಈ ಯಾತ್ರೆಯೂ ಸುಮಾರು 14 ರಾಜ್ಯಗಳಲ್ಲಿ ಸಾಗಿ, ಜನರಲ್ಲಿ ಜಾಗೃತಿ ಮೂಡಿಸಿತ್ತು.

ನಿಗದಿತ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಧ್ಯಾನ ಮಾಡಲಿದ್ದಾರೆ. ಈ ಎರಡು ದಿನ ಪ್ರವಾಸಿಗರಿಗೆ ಬೀಚ್‌ಗೆ ಹೋಗಲು ಅವಕಾಶವಿಲ್ಲ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಗುರುವಾರದಿಂದ ಶನಿವಾರದವರೆಗೆ ಪ್ರವಾಸಿಗರಿಗೆ ಬೀಚ್ ಮುಚ್ಚಲಾಗುತ್ತದೆ. ಖಾಸಗಿ ದೋಣಿಗಳಿಗೆ ಅಲ್ಲಿಗೆ ಹೋಗಲು ಅನುಮತಿ ಇಲ್ಲ.

ಇದನ್ನೂ ಓದಿ:Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ಪ್ರಮುಖ ಸುದ್ದಿ

Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

Prajwal Revanna Case : ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 (2) ಎನ್ (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್ ಬೆದರಿಕೆ), 354 (ಎ) (1) (ಅಹಿತಕರ ರೀತಿಯಲ್ಲಿ ವರ್ತಿಸುವುದು, ಅಶ್ಲೀಲ ಲೈಂಗಿಕ ನಡವಳಿಕೆ, ಲೈಂಗಿಕ ಅನುಕೂಲಗಳಿಗೆ ಒತ್ತಾಯಿಸುವುದು), 354 (ಬಿ) (ಮಹಿಳೆಯ ಮೇಲೆ ಕ್ರಿಮಿನಲ್ ಬಲ ಪ್ರಯೋಗ) ಮತ್ತು 354 (ಸಿ) (ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಹಿಳೆಯ ಚಿತ್ರವನ್ನು ಸೆರೆಹಿಡಿಯುವುದು) ಅಡಿಯಲ್ಲಿ ಕೇಸ್​ ದಾಖಲಾಗಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು : ಸೆಕ್ಸ್ ವಿಡಿಯೋ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು 31ರಂದು ರಾತ್ರಿ ಎಸ್​ಐಟಿ ಪೊಲೀಸರು (Prajwal Revanna Case) ಬಂಧಿಸಿದ್ದಾರೆ. ಅವರನ್ನು ಕಸ್ಟಡಿಗೆ ತೆಗೆದುಕೊಂಡು ಪೊಲೀಸರು ನಾಳೆ ಬಂಧನ ಪ್ರಕ್ರಿಯೆಗಳನ್ನು ಮುಗಿಸಲಿದ್ದಾರೆ. ಇದರೊಂದಿಗೆ ಇಡೀ ಭಾರತವನ್ನೇ ತಲ್ಲಣಗೊಳಿಸಿದ್ದ ಸೆಕ್ಸ್​ ಸ್ಕ್ಯಾಂಡಲ್​ ಒಂದರ ಪ್ರಮುಖ ಆರೋಪಿ ಪೊಲೀಸ್​ ಬಲೆಗೆ ಬಿದ್ದಂತಾಗಿದೆ. 33 ದಿನಗಳ ಕಾಲ ನಡೆದ ಹಲವಾರು ಬೆಳವಣಿಗೆಗಳ ಬಳಿಕ ಅವರು ಕಾನೂನಿನ ಕುಣಿಕೆಯೊಳಗೆ ಸಿಲುಕಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ 2014 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಸ್ಥಳೀಯ ಬಿಜೆಪಿ ನಾಯಕರ ಪ್ರತಿರೋಧದ ನಡುವೆ ಅವರು 2024 ರ ಲೋಕಸಭಾ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿದ್ದರು. ಈ ವೇಳೆ ಪ್ರಜ್ವಲ್​ಗೆ ಸೇರಿದ್ದ ಎನ್ನಲಾದ 2,976 ಸೆಕ್ಸ್ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ವಿಚಾರ ಬೆಳಕಿಗೆ ಬಂದಿತ್ತು. ಆದರೆ, ಏಪ್ರಿಲ್​ 26ರಂದು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುಣಾವಣೆ ಬಳಿಕ ಈ ಪ್ರಕರಣ ಕಾವು ಪಡೆಯಿತು. ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶ ಮಾಡುವಲ್ಲಿಂದ ಆರಂಭವಾದ ಈ ಪ್ರಕರಣ ಪ್ರಜ್ವಲ್​ ಬಂಧನದೊಂದಿಗೆ ಸ್ಪಷ್ಟ ಸ್ವರೂಫ ಪಡೆಯಿತು. ಹೀಗೆ ಪೆನ್​ಡ್ರೈವ್​ ಹಗರಣ ಬಯಲಿಗೆ ಬಂದಿದ್ದರಿಂದ ಹಿಡಿದು ಬಂಧನದವರೆಗಿನ ಕೆಲವು ಘಟನೆಗಳನ್ನು ಈ ಕೆಳಗೆ ನೀಡಲಾಗಿದೆ.

ಇಲ್ಲಿದೆ ನೋಡಿ ಪ್ರಕರಣದ ಸಂಕ್ಷಿಪ್ತ ರೂಪ

ಏಪ್ರಿಲ್ 19: ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪತ್ತೆಯಾದವು. ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದವು. ಅದು ದೇವೇಗೌಡರ ಕುಟುಂಬವನ್ನು ಇಕ್ಕಟ್ಟಿಗೆ ಸಿಲುಕಿಸಿದರೆ. ಬಿಜೆಪಿಗೆ ಮುಜುಗರವನ್ನುಂಟು ಮಾಡಿತು.

ಏಪ್ರಿಲ್ 24: ಮಹಿಳಾ ಸಂಘಟನೆಗಳ ವೇದಿಕೆಯಾದ ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು’ ವೀಡಿಯೊಗಳ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಿತು.

ಏಪ್ರಿಲ್ 25: ಹಗರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಜಿಪಿ ಅಲೋಕ್ ಮೋಹನ್ ಅವರಿಗೆ ಪತ್ರ ಬರೆಯಿತು.

ಏಪ್ರಿಲ್ 26: ತಮ್ಮ ವಿರುದ್ಧದ ಆರೋಪಗಳನ್ನು ಪ್ರಜ್ವಲ್ ರೇವಣ್ಣ ನಿರಾಕರಿಸಿದರು. ಯಾವುದೇ ಅಳುಕಿಲ್ಲದೆ ಮೊದಲ ಹಂತದ ಚುನಾವಣೆಯಲ್ಲಿ ಮತ ಚಲಾಯಿಸಿದರು. ಅದೇ ದಿನ ರಾತ್ರಿ, ಅವರು ಸದ್ದಿಲ್ಲದೆ ದೇಶವನ್ನು ತೊರೆದರು.

ಏಪ್ರಿಲ್ 27: ಲೈಂಗಿಕ ಕಿರುಕುಳ ಹಗರಣದಲ್ಲಿ ಪ್ರಜ್ವಲ್​ ರೇವಣ್ಣ ಭಾಗಿಯಾಗಿರುವುದನ್ನು ದೃಢಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ರಚನೆ ಮಾಡುವುದಾಗಿ ಘೋಷಿಸಿದರು.

ಏಪ್ರಿಲ್ 28: ಸರ್ಕಾರದ ಆದೇಶದಂತೆ ರಚನೆಯಾದ ಎಸ್​ಐಡಿ ಪೊಲೀಸರು ಪ್ರಜ್ವಲ್ ವಿರುದ್ಧ ಎಫ್ಐಆರ್ ದಾಖಲಿಸಿದರು.

ಏಪ್ರಿಲ್ 30: ಆರೋಪಿಗಳನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದರು. ಇದೇ ದಿನ ಒತ್ತಡಕ್ಕೆ ಮಣಿದ ಜೆಡಿಎಸ್ ಪಕ್ಷದ ವರಿಷ್ಠರು, ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದರು.

ಮೇ 1: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಣಿಸಿಕೊಂಡ ಪ್ರಜ್ವಲ್ ರೇವಣ್ಣ ‘ಸತ್ಯವೇ ಮೇಲುಗೈ ಸಾಧಿಸುತ್ತದೆ’ ಎಂದು ಹೇಳಿಕೆ ನೀಡಿದರು ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದರು.

ಮೇ 2: ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ಬಚ್ಚಿಟ್ಟುಕೊಂಡಿದ್ದು ಕುಳಿತಿದ್ದಾರೆ. ಸಂಸದರಾಗಿರುವ ಅವರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರು.

ಮೇ 3: ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಮಹಿಳಾ ಕಾರ್ಯಕರ್ತೆಯೊಬ್ಬರು ಎರಡನೇ ಎಫ್ಐಆರ್ ದಾಖಲಿಸಿದರು. ತನ್ನ ಕಚೇರಿಯಲ್ಲಿ ಪ್ರಜ್ವಲ್ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದರು. ಬ್ಲ್ಯಾಕ್​ಮೇಲ್ ಮಾಡಲು ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಎಂದು ದೂರಿದರು.

ಮೇ 4: ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿತು. ಅಪಹರಣಕ್ಕೊಳಗಾದ ಮಹಿಳೆಯನ್ನು ಎಸ್ಐಟಿ ಪತ್ತೆ ಹಚ್ಚಿ ರಕ್ಷಿಸಿತು.

ಮೇ 5: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ನಿಯೋಗದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದರು.

ಮೇ 6: ಪ್ರಜ್ವಲ್ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾದ ಸಂತ್ರಸ್ತರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್ಐಟಿ.

ಮೇ 13: ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣ ಜಾಮೀನಿನ ಮೇಲೆ ಬಿಡುಗಡೆ ಆದರು. ಅದೇ ದಿನ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್​ ಚಿಕ್ಕಪ್ಪ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ತಕ್ಷಣವೇ ಭಾರತಕ್ಕೆ ಹಿಂತಿರುಗಿ ಎಸ್ಐಟಿ ಮುಂದೆ ಹಾಜರಾಗಬೇಕು ಎಂದು ಮನವಿ ಮಾಡಿದ್ದರು.

ಮೇ 15: ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ 107 ಬುದ್ಧಿಜೀವಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದರು.

ಮೇ 23: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಜ್ವಲ್ ಗೆ ಬಹಿರಂಗ ಹೇಳಿಕೆ ನೀಡಿ ಭಾರತಕ್ಕೆ ಮರಳುವಂತೆ ಕಠಿಣ ಎಚ್ಚರಿಕೆ ನೀಡಿದರು. ಅದೇ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದು ಪ್ರಜ್ವಲ್ ಅವರ ಪಾಸ್​ಪೋರ್ಟ್​​ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಮೇ 27: ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ಅಧಿಕಾರಿಗಳ ಮುಂದೆ ಹಾಜರಾಗಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ಘೋಷಿಸುವ ಮತ್ತೊಂದು ವೀಡಿಯೊವನ್ನು ಪ್ರಜ್ವಲ್ ಬಿಡುಗಡೆ ಮಾಡಿದರು.

ಇದನ್ನೂ ಓದಿ: 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

ಮೇ 28: ಜರ್ಮನಿಯ ಮ್ಯೂನಿಚ್​ನಿಂದ ಭಾರತಕ್ಕೆ ಬರುವ ವಿಮಾನಕ್ಕೆ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್​ ರೇವಣ್ಣ

ಮೇ 30: ಮಧ್ಯಾಹ್ನ 3 ಗಂಟೆಗೆ ಜರ್ಮನಿಯ ಮ್ಯೂನಿಚ್​ನಿಂದ ವಿಮಾನ ಏರಿದ ಪ್ರಜ್ವಲ್ ರೇವಣ್ಣ.

ಮೇ 31: ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್​ನನ್ನು ಬಂಧಿಸಿದ ಪೊಲೀಸರು.

ಪ್ರಜ್ವಲ್ ವಿರುದ್ಧ ದಾಖಲಾಗಿರುವ ಐಪಿಸಿಯ ಸೆಕ್ಷನ್​ಗಳು

ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 (2) ಎನ್ (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್ ಬೆದರಿಕೆ), 354 (ಎ) (1) (ಅಹಿತಕರ ರೀತಿಯಲ್ಲಿ ವರ್ತಿಸುವುದು, ಅಶ್ಲೀಲ ಲೈಂಗಿಕ ನಡವಳಿಕೆ, ಲೈಂಗಿಕ ಅನುಕೂಲಗಳಿಗೆ ಒತ್ತಾಯಿಸುವುದು), 354 (ಬಿ) (ಮಹಿಳೆಯ ಮೇಲೆ ಕ್ರಿಮಿನಲ್ ಬಲ ಪ್ರಯೋಗ) ಮತ್ತು 354 (ಸಿ) (ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಹಿಳೆಯ ಚಿತ್ರವನ್ನು ಸೆರೆಹಿಡಿಯುವುದು) ಅಡಿಯಲ್ಲಿ ಕೇಸ್​ ದಾಖಲಾಗಿದೆ.

Continue Reading

ವಿಜಯನಗರ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

Necessary Preparation for North East Graduate Constituency Election Voting says DC M S Diwakar
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ (MLC Election) ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಪರಿಷತ್‌ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 15 ಮತಗಟ್ಟೆಗಳು ಮತ್ತು 5880 ಮತದಾರರು ಇದ್ದರು. ಈ ಬಾರಿ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಬಗ್ಗೆ ಉತ್ತಮವಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊಸಪೇಟೆ, ಹರಪನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳ ವ್ಯಾಪ್ತಿಯಲ್ಲಿನ ಒಟ್ಟು ಪುರುಷ ಮತದಾರರು 11,895 ಹಾಗೂ ಮಹಿಳಾ ಮತದಾರರು 6336 ಮತ್ತು ಇತರೆ ಇಬ್ಬರು ಸೇರಿ ಒಟ್ಟು 18,233 ಮತದಾರರು ಮತದಾನ ಮಾಡಲು ಅರ್ಹರಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 6 ತಾಲೂಕುಗಳ ಕಚೇರಿಯಲ್ಲಿ ಮತದಾರ ಸಹಾಯವಾಣಿ ಕೇಂದ್ರ ಇದ್ದು ಹರಪನಹಳ್ಳಿ – 08398-280262, ಹಡಗಲಿ- 08399-240238, ಹೊಸಪೇಟೆ- 08394-224208, ಕೂಡ್ಲಿಗಿ- 08391297121., ಕೊಟ್ಟೂರು- 08391-225400 ಮತ್ತು ಎಚ್.ಬಿ. ಹಳ್ಳಿ- 914662854 ಇದ್ದು ಈ ಸಹಾಯವಾಣಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳ ಮಾಹಿತಿಯನ್ನು ಮತದಾರದಾರರಿಗೆ ನೀಡಲಾಗಿದೆ. ಜತೆಗೆ ಮತದಾರ ಚೀಟಿಯನ್ನು ಸಹ ವಿತರಣೆ ಮಾಡಲಾಗಿದೆ. ಮತದಾರರ ಚೀಟಿಯಲ್ಲಿ ಮತಗಟ್ಟೆ ಮಾಹಿತಿಯ ಸಂಪೂರ್ಣ ವಿವರಣೆ ಮತ್ತು ಮತಗಟ್ಟೆ ಕೇಂದ್ರಗಳ ಕ್ಯೂಆರ್ ಕೋಡ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಮತದಾನ ಆದ್ಯಾತಾನುಸಾರ ಚಲಾವಣೆ ಮಾಡಬೇಕಾಗಿರುತ್ತದೆ. ಅದಕ್ಕೆ ಮತದಾನ ಚಲಾವಣೆ ಕುರಿತು ಜಿಲ್ಲಾಮಟ್ಟದ ಸ್ವೀಪ್ ಸಮಿತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭಾರತ ಚುನಾವಣೆ ಆಯೋಗವು ಮತ ಚಲಾವಣೆಗಾಗಿ ನೀಡಿರುವ ನೇರಳೆ ಬಣ್ಣದ ಸ್ಕೇಚ್‌ಪೆನ್‌ಗಳ ಮೂಲಕ ಮಾತ್ರ ಮತ ಚಲಾವಣೆ ಮಾಡಬೇಕಾಗಿರುತ್ತದೆ ಎಂದರು.

ಮತದಾನ ದಿನದಂದು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಕ್ಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮತಗಟ್ಟೆ ಇರುವ ಪ್ರದೇಶದ ವ್ಯಾಪ್ತಿಯಲ್ಲಿ ಚುನಾವಣೆಯು ಶಾಂತಿ ಹಾಗೂ ಮುಕ್ತ ನ್ಯಾಯಸಮ್ಮತವಾಗಿ ನಡೆಯುವ ಸಂಬಂಧ ಜೂನ್ 1ರ ಸಂಜೆ 6 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿವರೆಗೆ ಸಿಆರ್‌ಪಿಸಿ ಕಲಂ 144 ರಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯೋಗಿಕ ಸಂಸ್ಥೆಗಳಲ್ಲಿ ಮತ್ತು ಇತರ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್ 03ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಮೇ 29ರಂದು ಹೊರಡಿಸಿದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಚುನಾವಣಾ ಶಾಖೆಯ ಮನೋಜ್ ಲಾಡೆ ಇದ್ದರು.

Continue Reading
Advertisement
Bhavani Reavanna
ಕರ್ನಾಟಕ23 mins ago

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Gold Rate Today
ಚಿನ್ನದ ದರ24 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Physical Abuse
ಕಲಬುರಗಿ24 mins ago

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Spelling Bee
ವಿದೇಶ30 mins ago

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Nivetha Pethuraj heated argument video with cops
ಟಾಲಿವುಡ್38 mins ago

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

T20 World Cup 2024
ಕ್ರಿಕೆಟ್43 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

Rameshwaram Cafe
ವೈರಲ್ ನ್ಯೂಸ್1 hour ago

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ1 hour ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ1 hour ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ1 hour ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ24 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌