Taranjit Singh Sandhu : ಬಿಜೆಪಿ ಸೇರಿದ ಅಮೆರಿಕದ ಮಾಜಿ ರಾಯಭಾರಿ ತರಣ್​ಜಿತ್​ ಸಿಂಗ್ - Vistara News

ಪ್ರಮುಖ ಸುದ್ದಿ

Taranjit Singh Sandhu : ಬಿಜೆಪಿ ಸೇರಿದ ಅಮೆರಿಕದ ಮಾಜಿ ರಾಯಭಾರಿ ತರಣ್​ಜಿತ್​ ಸಿಂಗ್

Taranjit Singh Sandhu : ಧಾನ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ತರುಣ್ ಚುಗ್ ಅವರ ಸಮ್ಮುಖದಲ್ಲಿ ಮಾಜಿ ರಾಯಭಾರಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು.

VISTARANEWS.COM


on

Taranjit Singh Sandhu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ : ಅಮೆರಿಕದ ವಿದೇಶಾಂಗ ವ್ಯವಹಾರಗಳ ಬಗ್ಗೆ ಅಪಾರ ಮಾಹಿತಿ ಹೊಂದಿರುವ ಅನುಭವಿ ಭಾರತೀಯ ರಾಜತಾಂತ್ರಿಕರಲ್ಲಿ ಒಬ್ಬರಾದ ಅಮೆರಿಕದ ಮಾಜಿ ರಾಯಭಾರಿ ತರಣ್​​ಜಿತ್ ಸಿಂಗ್ ಸಂಧು (Taranjit Singh Sandhu) ಮಂಗಳವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ (BJP INIDIA) ಸೇರ್ಪಡೆಗೊಂಡಿದ್ದಾರೆ. ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ತರುಣ್ ಚುಗ್ ಅವರ ಸಮ್ಮುಖದಲ್ಲಿ ಮಾಜಿ ರಾಯಭಾರಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 2024ರಲ್ಲಿ ಪಂಜಾಬ್​​ನ ಅಮೃತಸರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಎಎಪಿಯ ಕುಲದೀಪ್ ಸಿಂಗ್ ಧಲಿವಾಲ್ ವಿರುದ್ಧ ಬಿಜೆಪಿ ಸಂಧು ಅವರನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗಿದೆ.

ಭಾರತ-ಯುಎಸ್ ಸಂಬಂಧದ ಬೆಳವಣಿಗೆ ಮತ್ತು ಅಭಿವೃದ್ಧಿ ಮೋದಿ ಸರ್ಕಾರದ ಗಮನ ನೀಡುತ್ತಿದ್ದಾರೆ ಎಂದು ಬಿಜೆಪಿ ಸೇರ್ಪಡೆ ವೇಳೆ ಹೊಗಳಿದ ಸಂಧು, ರಾಷ್ಟ್ರದ ಸೇವೆಯ ಹೊಸ ಮಾರ್ಗಕ್ಕೆ” ಪ್ರೋತ್ಸಾಹಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಮೋದಿಯ ಅಭಿವೃದ್ಧಿ ರಾಜಕಾರಣ

ಕಳೆದ 10 ವರ್ಷಗಳಲ್ಲಿ, ನಾನು ಪ್ರಧಾನಿ ಮೋದಿಯವರ ನಾಯಕತ್ವದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ, ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಅಮೆರಿಕ ಮತ್ತು ಶ್ರೀಲಂಕಾದೊಂದಿಗಿನ ಸಂಬಂಧದಲ್ಲಿ ಪ್ರಧಾನಿ ಮೋದಿ ಕಾರ್ಯ ಶ್ಲಾಘನೀಯ. ಅಭಿವೃದ್ಧಿ ಇಂದು ಬಹಳ ಅಗತ್ಯ. ಈ ಬೆಳವಣಿಗೆ ಅಮೃತಸರಕ್ಕೂ ತಲುಪಬೇಕು. ಆದ್ದರಿಂದ, ನಾನು ಪ್ರವೇಶಿಸುತ್ತಿರುವ ರಾಷ್ಟ್ರದ ಸೇವೆಯ ಹೊಸ ಮಾರ್ಗಕ್ಕಾಗಿ ನನ್ನನ್ನು ಪ್ರೋತ್ಸಾಹಿಸಿದ ಪಕ್ಷದ ಅಧ್ಯಕ್ಷರು, ಪ್ರಧಾನಿ ಮತ್ತು ಗೃಹ ಸಚಿವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಂಧು ಹೇಳಿದ್ದಾರೆ.

ಇದನ್ನೂ ಓದಿ : Gujarat BJP : ಒಳಗಿನ ಕರೆಗೆ ಓಗೊಟ್ಟು ಬಿಜೆಪಿಗೆ ರಾಜೀನಾಮೆ ನೀಡಿದ ಗುಜರಾತ್ ಶಾಸಕ!

2020ರಿಂದ 24ರವರೆಗೆ ಅಮೆರಿಕದಲ್ಲಿ ಸೇವೆ

ಸಂಧು ಫೆಬ್ರವರಿ 2020 ರಿಂದ ಜನವರಿ 2024 ರವರೆಗೆ ಅಮೆರಿಕದಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದರು. ವಾಷಿಂಗ್ಟನ್ ಡಿಸಿಗೆ ನೇಮಕಗೊಳ್ಳುವ ಮೊದಲು, ಸಂಧು ಜನವರಿ 2017 ರಿಂದ ಜನವರಿ 2020 ರವರೆಗೆ ಶ್ರೀಲಂಕಾಕ್ಕೆ ಭಾರತದ ಹೈಕಮಿಷನರ್ ಆಗಿದ್ದರು. ಡಿಸೆಂಬರ್ 2000 ರಿಂದ ಸೆಪ್ಟೆಂಬರ್ 2004 ರವರೆಗೆ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕೊಲಂಬೊದ ಭಾರತೀಯ ಹೈಕಮಿಷನ್​ನಲ್ಲಿ ಸೇವೆ ಸಲ್ಲಿಸಿದ್ದರು.

ಸಂಧು ಅವರು ಸೆಪ್ಟೆಂಬರ್ 2011 ರಿಂದ ಜುಲೈ 2013 ರವರೆಗೆ ಫ್ರಾಂಕ್​ಫರ್ಟ್​​ನಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿದ್ದರು. ಅವರು ವಿದೇಶಾಂಗ ಸಚಿವಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಮಾರ್ಚ್ 2009 ರಿಂದ ಆಗಸ್ಟ್ 2011 ರವರೆಗೆ ಜಂಟಿ ಕಾರ್ಯದರ್ಶಿಯಾಗಿ (ಯುಎನ್) ; ಮತ್ತು ನಂತರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾಗಿ ಜಂಟಿ ಕಾರ್ಯದರ್ಶಿಯಾಗಿ (ಆಡಳಿತ) ಕಾರ್ಯನಿರ್ವಹಿಸಿದರು. ಡಿಸೆಂಬರ್ 1995 ರಿಂದ ಮಾರ್ಚ್ 1997 ರವರೆಗೆ ವಿದೇಶಾಂಗ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಪತ್ರಿಕಾ ಸಂಬಂಧಗಳು) ಸೇವೆ ಸಲ್ಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Encounter In Bandipora: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಬಂಡಿಪೋರಾ ಜಿಲ್ಲೆಯ ಅರಗಾಮ್ ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ.

VISTARANEWS.COM


on

Encounter In Bandipora
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆ (Security forces)ಗಳೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಬಂಡಿಪೋರಾ ಜಿಲ್ಲೆಯ ಅರಗಾಮ್ (Aragam) ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ (Encounter In Bandipora).

“ಭಯೋತ್ಪಾದಕರು ಅವಿತು ಕುಳಿತಿದ್ದ ಅಡಗುತಾಣವನ್ನು ಭದ್ರತಾ ಪಡೆಗಳು ಸುತ್ತುವರಿದಾಗ ಗುಂಡಿನ ಚಕಮಕಿ ಆರಂಭವಾಯಿತು. ಎನ್‌ಕೌಂಟರ್‌ನಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ” ಎಂದು ಅಧಿಕಾರಿಗಳು ತಿಳಿಸಿದರು. ಹತ್ಯೆಗೀಡಾದ ಭಯೋತ್ಪಾದಕನನ್ನು ಗುರುತು ಕಂಡು ಹಿಡಿಯಲು ಯತ್ನಿಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದರು.

ಆರಂಭದಲ್ಲಿ ಗ್ರಮಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಆಗಮಿಸಿ ಅವರನ್ನು ಸುತ್ತುವರಿದ ಬಳಿಕ ಸುಮ್ಮನಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಅಲ್ಲದೆ ಅಮರನಾಥ ಯಾತ್ರೆಯ ವೇಳೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳಿಗೆ ಸಲಹೆ ನೀಡಿದ್ದರು. ಸದ್ಯ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೆ ಉಗ್ರರ ಹಾವಳಿ

ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಅದಾದ ಬಳಿಕವೂ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಂತರ ಸೇಡು ತೀರಿಸಿಕೊಂಡ ಭಾರತೀಯ ಸೇನೆ ಈಗಾಗಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಡಗಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಹತರಾಗಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Kathua Terror Attack: ಯೋಧನ ಹತ್ಯೆಗೆ ಪ್ರತಿಕಾರ; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮುವಿನಿಂದ 60 ಕಿ.ಮೀ ದೂರದಲ್ಲಿರುವ, ಅಂತಾರಾಷ್ಟ್ರೀಯ ಗಡಿ ಬಳಿಯ ಗ್ರಾಮದಲ್ಲಿ ಜೂನ್‌ 11ರ ಸಂಜೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಓರ್ವ ನಾಗರಿಕ ಗಾಯಗೊಂಡಿದ್ದ. ನಂತರ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಒಬ್ಬ ಭಯೋತ್ಪಾದಕನನ್ನು ಕೊಂದಿದೆ. ಇನ್ನೊಬ್ಬನನ್ನು ಜೂನ್‌ 12ರ ಮುಂಜಾನೆ ಗುಂಡಿಕ್ಕಿ ಕೊಲ್ಲಲಾಯಿತು. ಈ ಮಧ್ಯೆ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ (BS Yediyurappa) ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

VISTARANEWS.COM


on

BS Yediyurappa pocso case
Koo

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Physical abuse) ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಇಂದು ಸಿಐಡಿ (CID) ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಅವರನ್ನು ಬಂಧಿಸದಂತೆ ಈಗಾಗಲೇ ಹೈಕೋರ್ಟ್ (High court) ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಬಂಧನದ ಭಯವಿಲ್ಲದೇ ಸಿಐಡಿ ಮುಂದೆ ಬಿಎಸ್‌ವೈ ಹಾಜರಾಗಲಿದ್ದಾರೆ.

ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ಗೊತ್ತಾಗಿದೆ. ಬಿಎಸ್‌ವೈ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಈ ಆರೋಪ ಮಾಡಿದ್ದು, ಈಕೆ ಇತ್ತೀಚೆಗೆ ನಿಧನರಾಗಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಯಾರೆಲ್ಲ ಬಂದಿದ್ದರು, ಅಂದು ಏನಾಯಿತು ಇತ್ಯಾದಿ ಪ್ರಕರಣದ ಮಾಹಿತಿಯನ್ನು ಬಿಎಸ್‌ವೈ ಅವರಿಂದ ಸಿಐಡಿ ಪಡೆಯಲಿದೆ. ಇದೊಂದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಬಿಎಸ್‌ವೈ ಈಗಾಗಲೇ ಹೇಳಿದ್ದಾರೆ.

ಬಿಎಸ್‌ವೈ ಇಂದೂ ಕೂಡ ಪ್ರತಿ ದಿನ ಏಳುವಂತೆ ಐದು ಗಂಟೆಗೆ ಎದ್ದು ಬೆಳಿಗ್ಗೆ ಮನೆಯ ಬಳಿ ವಾಕಿಂಗ್ ಮಾಡಿದ್ದು, ಬಳಿಕ ದಿನ ಪತ್ರಿಕೆ ಓದಿದ್ದಾರೆ. ಒಂಬತ್ತು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ್ದು, ಬಳಿಕ ವಕೀಲರ ಜತೆ ಬಿಎಸ್‌ವೈ ಹಾಗೂ ಬಿವೈವಿ ಚರ್ಚೆ ನಡೆಸಿದರು. ಸುಮಾರು ಹನ್ನೊಂದು ಗಂಟೆಗೆ ವಕೀಲ ಸಂದೀಪ್ ಪಾಟೀಲ್ ಜೊತೆಗೆ ಯಡಿಯೂರಪ್ಪ ಸಿಐಡಿ ಕಚೇರಿಗೆ ತೆರಳಲಿದ್ದಾರೆ.

ಎದುರಿಸುತ್ತೇವೆ: ಬಿವೈ ವಿಜಯೇಂದ್ರ

ಪೋಕ್ಸೋ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದು , ಇಂದು ವಿಎಸ್‌ವೈ ಸಿಐಡಿ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ. “ಪೋಕ್ಸೋ ಪ್ರಕರಣ ಪಬ್ಲಿಕ್ ಡೊಮೈನ್‌ನಲ್ಲಿದೆ. ಯಾರು ಬೇಕಿದ್ದರೂ ವಿವರ ಪಡೆಯಬಹುದು. ಯಡಿಯೂರಪ್ಪ ಇದರಲ್ಲಿ ನಿರ್ದೋಷಿಯಾಗಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇದೆ. ವಿಚಾರಣೆಗೆ ಹಾಜರಾಗುತ್ತಾರೆ. ಪ್ರಕರಣವನ್ನು ಎದುರಿಸ್ತೇವೆ” ಎಂದು ಹೇಳಿದ್ದಾರೆ.

ಹೈಕೋರ್ಟ್‌ ರಿಲೀಫ್‌

ಬಂಧನದ ಭೀತಿಯಲ್ಲಿದ್ದ ಬಿಎಸ್‌ವೈ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿತ್ತು. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್‌ ಸಿಕ್ಕಿದೆ. ಆದರೆ, ಜೂನ್‌ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್‌ ಸೂಚಿಸಿತ್ತು.

ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು “ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರೂ ಕೋರ್ಟ್‌ ಹೋಗಿ ಅರೆಸ್ಟ್‌ ವಾರಂಟ್‌ ತಂದಿದ್ದೀರಿ. ನಾಲ್ಕು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದರೆ ಆಕಾಶವೇನೂ ಕಳಚಿ ಬೀಳುತ್ತಿರಲಿಲ್ಲ. ಹಾಗಾಗಿ, ಅರೆಸ್ಟ್‌ ವಾರಂಟ್‌ ಬಗ್ಗೆ ನಮಗೆ ಅನುಮಾನವಿದೆ. ಮುಂದಿನ ವಿಚಾರಣೆವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು” ಎಂಬುದಾಗಿ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್

Continue Reading

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading
Advertisement
Encounter In Bandipora
ದೇಶ16 mins ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ18 mins ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ34 mins ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್42 mins ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ45 mins ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ50 mins ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ1 hour ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್1 hour ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 20241 hour ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ2 hours ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌