Lok Sabha Election : ಶುಕ್ರವಾರ ಮತದಾನ ಬೇಡ, ಮುಸ್ಲಿಮರಿಗೆ ತೊಂದರೆಯಾಗುತ್ತದೆ; ಕಾಂಗ್ರೆಸ್​ನಿಂದ ಪತ್ರ - Vistara News

ಪ್ರಮುಖ ಸುದ್ದಿ

Lok Sabha Election : ಶುಕ್ರವಾರ ಮತದಾನ ಬೇಡ, ಮುಸ್ಲಿಮರಿಗೆ ತೊಂದರೆಯಾಗುತ್ತದೆ; ಕಾಂಗ್ರೆಸ್​ನಿಂದ ಪತ್ರ

Lok Sabha Election : ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

VISTARANEWS.COM


on

Fact Check
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಸ್ಲಾಂನಲ್ಲಿ ವಾರದ ಅತ್ಯಂತ ಮಹತ್ವದ ದಿನವೆಂದು ಪರಿಗಣಿಸಲಾದ ಶುಕ್ರವಾರದಂದು ದಕ್ಷಿಣ ರಾಜ್ಯಗಳಲ್ಲಿ ಮತದಾನ ನಿಗದಿ (Lok Sabha Election) ಮಾಡಿರುವುದು ಸರಿಯಿಲ್ಲ. ಇಲ್ಲೆಲ್ಲ ಚುನಾವಣೆ ದಿನಾಂಕವನ್ನು ಪರಿಷ್ಕರಿಸಬೇಕು ಎಮದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಚುನಾವಣಾ ಆಯೋಗವನ್ನು (ECI) ಒತ್ತಾಯಿಸಿದೆ. ಕೆಪಿಸಿಸಿ ಹಂಗಾಮಿ ಅಧ್ಯಕ್ಷ ಎಂ.ಎಂ.ಹಸನ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ಚುನಾವಣಾ ಆಯೋಗಕ್ಕೆ ಜಂಟಿ ಪತ್ರ ಬರೆದಿದ್ದು, ಮುಸ್ಲಿಂ ಮತದಾರರಿಗೆ ಆಗುವ ತೊಂದರೆಗಳನ್ನು ಉಲ್ಲೇಖಿಸಿ ಮತದಾನದ ದಿನವನ್ನು ಏಪ್ರಿಲ್ 26 ರಿಂದ ಬದಲಾಯಿಸುವಂತೆ ವಿನಂತಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶುಕ್ರವಾರ ಅಥವಾ ಭಾನುವಾರ ಚುನಾವಣೆಗಳನ್ನು ನಡೆಸುವುದರಿಂದ ಮತದಾರರಿಗೆ ಮತ್ತು ಮತಗಟ್ಟೆ ಅಧಿಕಾರಿಗಳು ಮತ್ತು ಬೂತ್ ಏಜೆಂಟರಿಗೆ ಗಮನಾರ್ಹ ಅನಾನುಕೂಲತೆ ಉಂಟಾಗಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಕೇರಳದಲ್ಲಿ, ಶುಕ್ರವಾರ ಮತ್ತು ಭಾನುವಾರ (ಕ್ರಿಶ್ಚಿಯನ್ನರಿಗೆ) ವಿವಿd ಸಮುದಾಯಗಳಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಮತದಾನದ ದಿನಾಂಕವನ್ನು ಬದಲಾಯಿಸಬೇಕೆಂದು ನಾವು ಒತ್ತಾಯಿಸಿದ್ದೇವೆ” ಎಂದು ಹಸನ್ ತಿಳಿಸಿದ್ದಾರೆ.

ನಾನು, ಕೇಂದ್ರ ಚುನಾವಣಾ ಆಯುಕ್ತರಿಗೆ, ಯುಡಿಎಫ್​ ಅಧ್ಯಕ್ಷರಿಗೆ, ವಿರೋಧ ಪಕ್ಷದ ನಾಯಕರಿಗೆ ಮೇಲ್​ ಮಾಡಿದ್ದೇನೆ. ಅವರೂ ಕೇಂದ್ರ ಚುನಾವಣಾ ಆಯುಕ್ತರಿಗೂ ಮೇಲ್ ಕಳುಹಿಸಿದ್ದಾರೆ ಎಂದು ಹಸನ್ ಹೇಳಿದ್ದಾರೆ.

ಈ ಹಿಂದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಕೇರಳ ಮತ್ತು ತಮಿಳುನಾಡಿನಲ್ಲಿ ಮತದಾನದ ದಿನಾಂಕಗಳನ್ನು ಬದಲಾಯಿಸುವಂತೆ ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸುವ ಉದ್ದೇಶವನ್ನು ವ್ಯಕ್ತಪಡಿಸಿತ್ತು. ಕೇರಳದಲ್ಲಿ ಕಾಂಗ್ರೆಸ್​ನ ಪ್ರಮುಖ ಮಿತ್ರ ಪಕ್ಷವಾದ ಐಯುಎಂಎಲ್, ದಕ್ಷಿಣದ ಎರಡು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಬದಲಾಯಿಸಲು ಚುನಾವಣಾ ಆಯೋಗವನ್ನು ಸಂಪರ್ಕಿಸುವುದಾಗಿ ಹೇಳಿಕೊಂಡಿತ್ತು.

ಮತಗಟ್ಟೆ ಕರ್ತವ್ಯಕ್ಕೆ ಸಮಸ್ಯೆ

ಶುಕ್ರವಾರ ಮತದಾನ ಘೋಷಣೆಯಾಗುವುದರಿಂದ ಮತದಾರರು, ಅಭ್ಯರ್ಥಿಗಳು, ಮತಗಟ್ಟೆ ಏಜೆಂಟರು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳಿಗೆ ಅನಾನುಕೂಲವಾಗಲಿದೆ. ನಾವು ಚುನಾವಣಾ ಆಯೋಗದ ಮೊರೆ ಹೋಗುತ್ತೇವೆ ಎಂದು ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಎಂ.ಎ.ಸಲಾಂ ಹೇಳಿದ್ದರು.

ಇದನ್ನೂ ಓದಿ Taranjit Singh Sandhu : ಬಿಜೆಪಿ ಸೇರಿದ ಅಮೆರಿಕದ ಮಾಜಿ ರಾಯಭಾರಿ ತರಣ್​ಜಿತ್​ ಸಿಂಗ್

2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತದ ಚುನಾವಣಾ ಆಯೋಗವು ಕಳೆದ ವಾರ ಪ್ರಕಟಿಸಿದ್ದು, ಇದು ಏಳು ಹಂತಗಳ ವ್ಯವಹಾರವಾಗಿದೆ. ಏಪ್ರಿಲ್ 19 ರಂದು ಮತದಾನ ಪ್ರಾರಂಭವಾಗಲಿದ್ದು, ಬೇಸಿಗೆಯ ಗರಿಷ್ಠ ತಿಂಗಳು ಜೂನ್ ವರೆಗೆ ವಿಸ್ತರಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Prajwal Revanna Case: ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

VISTARANEWS.COM


on

prajwal revanna case airport arrest
Koo

ಬೆಂಗಳೂರು: ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ (Medical test) ಒಳಪಡಿಸಲು ಎಸ್‌ಐಟಿ (SIT) ಮುಂದಾಗಿದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ- ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಇದನ್ನೂ ಓದಿ: Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ಕರ್ನಾಟಕ

Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Prajwal Revanna Case: ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇತ್ತು. ಆದರೆ, ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಅವಧಿ ಮುಗಿಯುವ ಹಿನ್ನೆಲೆಯಲ್ಲಿ ಭಾರತಕ್ಕೆ ಬರುವುದರಿಂದ ಪ್ರಜ್ವಲ್‌ ರೇವಣ್ಣ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ದೇಶಾದ್ಯಂತ ಸುದ್ದಿಯಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case), 34 ದಿನಗಳ ಬಳಿಕ ಭಾರತಕ್ಕೆ ಆಗಮಿಸಿದ್ದಾರೆ. ಜರ್ಮನಿಯ ಮ್ಯೂನಿಕ್‌ ವಿಮಾನ ನಿಲ್ದಾಣದಿಂದ ಶುಕ್ರವಾರ ರಾತ್ರಿ (ಮೇ 31) ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ (Bengaluru Airport) ಆಗಮಿಸಿದ್ದು, ಎಸ್‌ಐಟಿ ಅಧಿಕಾರಿಗಳು (SIT Officials) ಅವರನ್ನು ಬಂಧಿಸಿದ್ದಾರೆ. ಕೋರ್ಟ್‌ ವಾರೆಂಟ್‌ ಇದ್ದ ಕಾರಣ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳುತ್ತಿದ್ದಾರೆ. ಇನ್ನು, ಕಳೆದ 33 ದಿನಗಳಿಂದಲೂ ವಿದೇಶದಲ್ಲೇ ಇರುವ ಪ್ರಜ್ವಲ್‌ ರೇವಣ್ಣ ಮೇ 31ರಂದೇ ಭಾರತಕ್ಕೆ ಬಂದಿರುವುದು ಇಂಟರೆಸ್ಟಿಂಗ್‌ ಆಗಿದೆ.

ಹೌದು, ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಸ್‌ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫೊರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿತ್ತು. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಿತ್ತು. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇತ್ತು. ಆದರೆ, ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಅವಧಿ ಮುಗಿಯುವ ಹಿನ್ನೆಲೆಯಲ್ಲಿ ಭಾರತಕ್ಕೆ ಬರುವುದರಿಂದ ಪ್ರಜ್ವಲ್‌ ರೇವಣ್ಣ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Continue Reading

ಭವಿಷ್ಯ

Dina Bhavishya : ಉದ್ಯೋಗಿಗಳಿಗೆ ತೆರೆಯಲಿದೆ ಅದೃಷ್ಟದ ಬಾಗಿಲು; ಪ್ರೇಮಿಗಳಿಗೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಶುಕ್ರವಾರ ಮೇಷ ರಾಶಿಯನ್ನು ರಾತ್ರಿ 11:28ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವೃಶ್ಚಿಕ ರಾಶಿಯವರು ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಧನಸ್ಸು ರಾಶಿಯವರು ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 09:37 ವಾರ: ಶುಕ್ರವಾರ
ನಕ್ಷತ್ರ: ಶತಭಿಷಾ 06:12 / ಪೂರ್ವ ಭಾದ್ರಪದ 28:47 ಯೋಗ: ವಿಷ್ಕುಂಭ 18:03
ಕರಣ: ಕೌಲವ 09:37 ಅಮೃತ ಕಾಲ: ರಾತ್ರಿ 09:16 ರಿಂದ 10:47 ರವರಗೆ
ದಿನದ ವಿಶೇಷ: ಕಾಲಾಷ್ಟಮಿ, ವಿಶ್ವ ಧೂಮಪಾನ ನಿಷೇಧ ದಿನ

ಸೂರ್ಯೋದಯ : 05:52   ಸೂರ್ಯಾಸ್ತ : 06:43

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬದಲ್ಲಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರ ಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ, ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು. ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ:ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ.
ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ. ಹೀಗಾಗಿ ಆರ್ಥಿಕವಾಗಿ ಸದೃಢವಾಗಿರುವಿರಿ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ. ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ, ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ. ಸಂಗಾಂತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದೆ ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು.ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ.ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

Prajwal Revanna Case : ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 (2) ಎನ್ (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್ ಬೆದರಿಕೆ), 354 (ಎ) (1) (ಅಹಿತಕರ ರೀತಿಯಲ್ಲಿ ವರ್ತಿಸುವುದು, ಅಶ್ಲೀಲ ಲೈಂಗಿಕ ನಡವಳಿಕೆ, ಲೈಂಗಿಕ ಅನುಕೂಲಗಳಿಗೆ ಒತ್ತಾಯಿಸುವುದು), 354 (ಬಿ) (ಮಹಿಳೆಯ ಮೇಲೆ ಕ್ರಿಮಿನಲ್ ಬಲ ಪ್ರಯೋಗ) ಮತ್ತು 354 (ಸಿ) (ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಹಿಳೆಯ ಚಿತ್ರವನ್ನು ಸೆರೆಹಿಡಿಯುವುದು) ಅಡಿಯಲ್ಲಿ ಕೇಸ್​ ದಾಖಲಾಗಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು : ಸೆಕ್ಸ್ ವಿಡಿಯೋ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು 31ರಂದು ರಾತ್ರಿ ಎಸ್​ಐಟಿ ಪೊಲೀಸರು (Prajwal Revanna Case) ಬಂಧಿಸಿದ್ದಾರೆ. ಅವರನ್ನು ಕಸ್ಟಡಿಗೆ ತೆಗೆದುಕೊಂಡು ಪೊಲೀಸರು ನಾಳೆ ಬಂಧನ ಪ್ರಕ್ರಿಯೆಗಳನ್ನು ಮುಗಿಸಲಿದ್ದಾರೆ. ಇದರೊಂದಿಗೆ ಇಡೀ ಭಾರತವನ್ನೇ ತಲ್ಲಣಗೊಳಿಸಿದ್ದ ಸೆಕ್ಸ್​ ಸ್ಕ್ಯಾಂಡಲ್​ ಒಂದರ ಪ್ರಮುಖ ಆರೋಪಿ ಪೊಲೀಸ್​ ಬಲೆಗೆ ಬಿದ್ದಂತಾಗಿದೆ. 33 ದಿನಗಳ ಕಾಲ ನಡೆದ ಹಲವಾರು ಬೆಳವಣಿಗೆಗಳ ಬಳಿಕ ಅವರು ಕಾನೂನಿನ ಕುಣಿಕೆಯೊಳಗೆ ಸಿಲುಕಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ 2014 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಸ್ಥಳೀಯ ಬಿಜೆಪಿ ನಾಯಕರ ಪ್ರತಿರೋಧದ ನಡುವೆ ಅವರು 2024 ರ ಲೋಕಸಭಾ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿದ್ದರು. ಈ ವೇಳೆ ಪ್ರಜ್ವಲ್​ಗೆ ಸೇರಿದ್ದ ಎನ್ನಲಾದ 2,976 ಸೆಕ್ಸ್ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ವಿಚಾರ ಬೆಳಕಿಗೆ ಬಂದಿತ್ತು. ಆದರೆ, ಏಪ್ರಿಲ್​ 26ರಂದು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುಣಾವಣೆ ಬಳಿಕ ಈ ಪ್ರಕರಣ ಕಾವು ಪಡೆಯಿತು. ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶ ಮಾಡುವಲ್ಲಿಂದ ಆರಂಭವಾದ ಈ ಪ್ರಕರಣ ಪ್ರಜ್ವಲ್​ ಬಂಧನದೊಂದಿಗೆ ಸ್ಪಷ್ಟ ಸ್ವರೂಫ ಪಡೆಯಿತು. ಹೀಗೆ ಪೆನ್​ಡ್ರೈವ್​ ಹಗರಣ ಬಯಲಿಗೆ ಬಂದಿದ್ದರಿಂದ ಹಿಡಿದು ಬಂಧನದವರೆಗಿನ ಕೆಲವು ಘಟನೆಗಳನ್ನು ಈ ಕೆಳಗೆ ನೀಡಲಾಗಿದೆ.

ಇಲ್ಲಿದೆ ನೋಡಿ ಪ್ರಕರಣದ ಸಂಕ್ಷಿಪ್ತ ರೂಪ

ಏಪ್ರಿಲ್ 19: ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪತ್ತೆಯಾದವು. ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದವು. ಅದು ದೇವೇಗೌಡರ ಕುಟುಂಬವನ್ನು ಇಕ್ಕಟ್ಟಿಗೆ ಸಿಲುಕಿಸಿದರೆ. ಬಿಜೆಪಿಗೆ ಮುಜುಗರವನ್ನುಂಟು ಮಾಡಿತು.

ಏಪ್ರಿಲ್ 24: ಮಹಿಳಾ ಸಂಘಟನೆಗಳ ವೇದಿಕೆಯಾದ ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು’ ವೀಡಿಯೊಗಳ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಿತು.

ಏಪ್ರಿಲ್ 25: ಹಗರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಜಿಪಿ ಅಲೋಕ್ ಮೋಹನ್ ಅವರಿಗೆ ಪತ್ರ ಬರೆಯಿತು.

ಏಪ್ರಿಲ್ 26: ತಮ್ಮ ವಿರುದ್ಧದ ಆರೋಪಗಳನ್ನು ಪ್ರಜ್ವಲ್ ರೇವಣ್ಣ ನಿರಾಕರಿಸಿದರು. ಯಾವುದೇ ಅಳುಕಿಲ್ಲದೆ ಮೊದಲ ಹಂತದ ಚುನಾವಣೆಯಲ್ಲಿ ಮತ ಚಲಾಯಿಸಿದರು. ಅದೇ ದಿನ ರಾತ್ರಿ, ಅವರು ಸದ್ದಿಲ್ಲದೆ ದೇಶವನ್ನು ತೊರೆದರು.

ಏಪ್ರಿಲ್ 27: ಲೈಂಗಿಕ ಕಿರುಕುಳ ಹಗರಣದಲ್ಲಿ ಪ್ರಜ್ವಲ್​ ರೇವಣ್ಣ ಭಾಗಿಯಾಗಿರುವುದನ್ನು ದೃಢಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ರಚನೆ ಮಾಡುವುದಾಗಿ ಘೋಷಿಸಿದರು.

ಏಪ್ರಿಲ್ 28: ಸರ್ಕಾರದ ಆದೇಶದಂತೆ ರಚನೆಯಾದ ಎಸ್​ಐಡಿ ಪೊಲೀಸರು ಪ್ರಜ್ವಲ್ ವಿರುದ್ಧ ಎಫ್ಐಆರ್ ದಾಖಲಿಸಿದರು.

ಏಪ್ರಿಲ್ 30: ಆರೋಪಿಗಳನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದರು. ಇದೇ ದಿನ ಒತ್ತಡಕ್ಕೆ ಮಣಿದ ಜೆಡಿಎಸ್ ಪಕ್ಷದ ವರಿಷ್ಠರು, ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದರು.

ಮೇ 1: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಣಿಸಿಕೊಂಡ ಪ್ರಜ್ವಲ್ ರೇವಣ್ಣ ‘ಸತ್ಯವೇ ಮೇಲುಗೈ ಸಾಧಿಸುತ್ತದೆ’ ಎಂದು ಹೇಳಿಕೆ ನೀಡಿದರು ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದರು.

ಮೇ 2: ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ಬಚ್ಚಿಟ್ಟುಕೊಂಡಿದ್ದು ಕುಳಿತಿದ್ದಾರೆ. ಸಂಸದರಾಗಿರುವ ಅವರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರು.

ಮೇ 3: ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಮಹಿಳಾ ಕಾರ್ಯಕರ್ತೆಯೊಬ್ಬರು ಎರಡನೇ ಎಫ್ಐಆರ್ ದಾಖಲಿಸಿದರು. ತನ್ನ ಕಚೇರಿಯಲ್ಲಿ ಪ್ರಜ್ವಲ್ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದರು. ಬ್ಲ್ಯಾಕ್​ಮೇಲ್ ಮಾಡಲು ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಎಂದು ದೂರಿದರು.

ಮೇ 4: ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿತು. ಅಪಹರಣಕ್ಕೊಳಗಾದ ಮಹಿಳೆಯನ್ನು ಎಸ್ಐಟಿ ಪತ್ತೆ ಹಚ್ಚಿ ರಕ್ಷಿಸಿತು.

ಮೇ 5: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ನಿಯೋಗದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದರು.

ಮೇ 6: ಪ್ರಜ್ವಲ್ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾದ ಸಂತ್ರಸ್ತರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್ಐಟಿ.

ಮೇ 13: ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣ ಜಾಮೀನಿನ ಮೇಲೆ ಬಿಡುಗಡೆ ಆದರು. ಅದೇ ದಿನ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್​ ಚಿಕ್ಕಪ್ಪ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ತಕ್ಷಣವೇ ಭಾರತಕ್ಕೆ ಹಿಂತಿರುಗಿ ಎಸ್ಐಟಿ ಮುಂದೆ ಹಾಜರಾಗಬೇಕು ಎಂದು ಮನವಿ ಮಾಡಿದ್ದರು.

ಮೇ 15: ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ 107 ಬುದ್ಧಿಜೀವಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದರು.

ಮೇ 23: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಜ್ವಲ್ ಗೆ ಬಹಿರಂಗ ಹೇಳಿಕೆ ನೀಡಿ ಭಾರತಕ್ಕೆ ಮರಳುವಂತೆ ಕಠಿಣ ಎಚ್ಚರಿಕೆ ನೀಡಿದರು. ಅದೇ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದು ಪ್ರಜ್ವಲ್ ಅವರ ಪಾಸ್​ಪೋರ್ಟ್​​ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಮೇ 27: ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ಅಧಿಕಾರಿಗಳ ಮುಂದೆ ಹಾಜರಾಗಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ಘೋಷಿಸುವ ಮತ್ತೊಂದು ವೀಡಿಯೊವನ್ನು ಪ್ರಜ್ವಲ್ ಬಿಡುಗಡೆ ಮಾಡಿದರು.

ಇದನ್ನೂ ಓದಿ: 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

ಮೇ 28: ಜರ್ಮನಿಯ ಮ್ಯೂನಿಚ್​ನಿಂದ ಭಾರತಕ್ಕೆ ಬರುವ ವಿಮಾನಕ್ಕೆ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್​ ರೇವಣ್ಣ

ಮೇ 30: ಮಧ್ಯಾಹ್ನ 3 ಗಂಟೆಗೆ ಜರ್ಮನಿಯ ಮ್ಯೂನಿಚ್​ನಿಂದ ವಿಮಾನ ಏರಿದ ಪ್ರಜ್ವಲ್ ರೇವಣ್ಣ.

ಮೇ 31: ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್​ನನ್ನು ಬಂಧಿಸಿದ ಪೊಲೀಸರು.

ಪ್ರಜ್ವಲ್ ವಿರುದ್ಧ ದಾಖಲಾಗಿರುವ ಐಪಿಸಿಯ ಸೆಕ್ಷನ್​ಗಳು

ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 (2) ಎನ್ (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್ ಬೆದರಿಕೆ), 354 (ಎ) (1) (ಅಹಿತಕರ ರೀತಿಯಲ್ಲಿ ವರ್ತಿಸುವುದು, ಅಶ್ಲೀಲ ಲೈಂಗಿಕ ನಡವಳಿಕೆ, ಲೈಂಗಿಕ ಅನುಕೂಲಗಳಿಗೆ ಒತ್ತಾಯಿಸುವುದು), 354 (ಬಿ) (ಮಹಿಳೆಯ ಮೇಲೆ ಕ್ರಿಮಿನಲ್ ಬಲ ಪ್ರಯೋಗ) ಮತ್ತು 354 (ಸಿ) (ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಹಿಳೆಯ ಚಿತ್ರವನ್ನು ಸೆರೆಹಿಡಿಯುವುದು) ಅಡಿಯಲ್ಲಿ ಕೇಸ್​ ದಾಖಲಾಗಿದೆ.

Continue Reading
Advertisement
Cervical Cancer
ಆರೋಗ್ಯ4 mins ago

Cervical Cancer: ಗರ್ಭಕೊರಳಿನ ಕ್ಯಾನ್ಸರ್‌ಗೆ ಮುನ್ನೆಚ್ಚರಿಕೆಯೇ ಮದ್ದು

prajwal revanna case airport arrest
ಕ್ರೈಂ20 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Karnataka Weather
ಮಳೆ34 mins ago

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Prajwal Revanna Case
ಕರ್ನಾಟಕ1 hour ago

Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

ICMR Guidelines
ಆರೋಗ್ಯ1 hour ago

ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

Prajwal revanna Case
ಪ್ರಮುಖ ಸುದ್ದಿ2 hours ago

Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

Dina Bhavishya
ಭವಿಷ್ಯ2 hours ago

Dina Bhavishya : ಉದ್ಯೋಗಿಗಳಿಗೆ ತೆರೆಯಲಿದೆ ಅದೃಷ್ಟದ ಬಾಗಿಲು; ಪ್ರೇಮಿಗಳಿಗೆ ಶುಭ ಸೂಚನೆ

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case
ಕರ್ನಾಟಕ6 hours ago

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ18 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌