PSI Exam: ಲೋಕಸಭೆ ಚುನಾವಣೆ; ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ - Vistara News

ಶಿಕ್ಷಣ

PSI Exam: ಲೋಕಸಭೆ ಚುನಾವಣೆ; ಮೇ 8ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ. ಇದೀಗ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

VISTARANEWS.COM


on

PSI exam scheduled for May 8 postponed due to Lok Sabha elections
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು (PSI Exam) ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್)‌, ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

PSI exam scheduled for May 8 postponed due to Lok Sabha elections

ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕ‌ವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್‌ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿಯು ಮಾರ್ಚ್‌ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ. ಜೂನ್‌ 16ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಭಾರತೀಯ ಅರಣ್ಯ ಸೇವಾ ಪರೀಕ್ಷೆಯನ್ನೂ ಜೂನ್‌ 16ರಂದು ನಡೆಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್‌ 20ರಿಂದ 5 ದಿನಗಳವರೆಗೆ ನಡೆಯಲಿದೆ. ಪ್ರತಿ ವರ್ಷವೂ ಯುಪಿಎಸ್‌ಯು ಮೂರು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಸುತ್ತದೆ.

ಹೀಗಿದೆ 7 ಹಂತಗಳಲ್ಲಿ ಚುನಾವಣೆ ದಿನಾಂಕ

ಮೊದಲ ಹಂತ: ಏಪ್ರಿಲ್‌ 19102 ಕ್ಷೇತ್ರಗಳು

2ನೇ ಹಂತ: ಏಪ್ರಿಲ್‌ 2689 ಕ್ಷೇತ್ರಗಳು

3ನೇ ಹಂತ: ಮೇ 794 ಕ್ಷೇತ್ರಗಳು

4ನೇ ಹಂತ: ಮೇ 1396 ಕ್ಷೇತ್ರಗಳು

5ನೇ ಹಂತ: ಮೇ 2049 ಕ್ಷೇತ್ರಗಳು

6ನೇ ಹಂತ: ಮೇ 2557 ಕ್ಷೇತ್ರಗಳು

7ನೇ ಹಂತ: ಜೂನ್‌ 157 ಕ್ಷೇತ್ರಗಳು

ಏಪ್ರಿಲ್‌ 19ರಿಂದ ಜೂನ್‌ 1ರ ಅವಧಿಯಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನವು ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ಚುನಾವಣೆ ಮುಗಿಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

SSLC Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಶಿರಾ ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಶಿರಾ ತಾಲೂಕು ಘಟಕ ಹಾಗೂ ಶಿರಾದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

felicitation programme for SSLC student Harshita D M who got 2nd place in the state
Koo

ಶಿರಾ: ಪರೀಕ್ಷೆಯಲ್ಲಿ (SSLC Result 2024) ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರುವುದು ಹೆಮ್ಮೆಯ ಸಂಗತಿ. ಜತೆಗೆ ವಿದ್ಯಾರ್ಥಿಗಳ ಯಶಸ್ಸಿಗೆ ಶ್ರಮಿಸಿದ ಶಿಕ್ಷಕ ವೃಂದ ಹಾಗೂ ಪಾಲಕರ ಕಾರ್ಯವೂ ಶ್ಲಾಘನೀಯವಾದುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಘಟಕದ ಅಧ್ಯಕ್ಷ ದೊಡ್ಡ ಸಿದ್ದಪ್ಪ ತಿಳಿಸಿದರು.

ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಸನ್ಮಾನಿಸಿ, ಬಳಿಕ ಅವರು ಮಾತನಾಡಿದರು.

ದೃಢ ನಿರ್ಧಾರ ಮತ್ತು ಅಚಲವಾದ ನಂಬಿಕೆ ಯಶಸ್ಸಿನ ಮೆಟ್ಟಿಲುಗಳಾಗಿವೆ. ಜೀವನದಲ್ಲಿ ದೃಢ ನಿರ್ಧಾರ ತಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮೇಶ್ ಬಾಬು ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಜತೆಗೆ ಶಾಲೆಗೆ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಶಿಕ್ಷಕರು ಪ್ರಸಕ್ತ ವರ್ಷದಲ್ಲಿಯೂ ಉತ್ತಮ ಫಲಿತಾಂಶ ನೀಡುವ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಕಾರ್ಯದರ್ಶಿ ಕೋಟೆ ಚಂದ್ರಶೇಖರ್, ಖಜಾಂಚಿ ಮಂಜುಶ್ರೀ ಮಹಾಲಿಂಗಪ್ಪ, ವಾಸವಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಬಾಬು, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಖಜಾಂಚಿ ಚಂದ್ರಶೇಖರ್ ಬಾಬು, ನಿರ್ದೇಶಕರುಗಳಾದ ರಚಿತಾ ನಾಗಾರ್ಜುನ್, ಶ್ರೀಕಾಂತ್, ರಾಧಾಕೃಷ್ಣ, ವಿಜಯ್, ಜಗದೀಶ್, ಯಶೋದ ಸುರೇಶ್, ನಾಗಲಕ್ಷ್ಮಿ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಜಯನಾರಾಯಣ, ಮಂಜುನಾಥ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಚಿತ್ರದುರ್ಗ

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

SSLC Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ನಾಲ್ಕು ಸಬ್ಜೆಕ್ಟ್‌ನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ (SSLC result) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

SSLC Student Death Exam fail
ಸಾಂದರ್ಭಿಕ ಚಿತ್ರ
Koo

ಚಿತ್ರದುರ್ಗ: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC exam fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಮುಂದುವರಿದೆ. ಫೇಲ್‌ ಆಗಿದ್ದಕ್ಕೆ ಮನನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ (SSLC Student Death) ಮಾಡಿಕೊಂಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೊಬ್ಬರಿಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ.

16 ವರ್ಷದ ಧನುಶ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇತ್ತ ಮಗಳು ಫೇಲ್ ಆಗಿದ್ದರು ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.

sslc student death
ಮೃತ ಧನುಶ್ರೀ

ಆದರೂ ಮನನೊಂದ ವಿದ್ಯಾರ್ಥಿನಿ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಘಟನೆ-1 ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದ (chikkaballapur news) ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಎಂಬಾಕೆಯು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್‌ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ಎಸ್ಎಸ್ಎಲ್‌ಸಿ ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.

ಘಟನೆ -2 ಹೊಲಕ್ಕೆ ತೆರಳಿ ಮರಕ್ಕೆ ನೇಣಿಗೆ ಶರಣಾದ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ- 3 ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ.

ಘಟನೆ-4 ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ- 5 ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್‌ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್‌ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಇನ್ನೇನು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳಲ್ಲಿ ಅಡ್ಮಿಷನ್‌ ಪ್ರಕ್ರಿಯೆ ಕೂಡ ಆರಂಭವಾಗಲಿದೆ. ಇದಕ್ಕಾಗಿ ಮಕ್ಕಳು ಮಾತ್ರವಲ್ಲ ಪೋಷಕರು ಕೂಡ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ, ಶಾಲಾ ಶುಲ್ಕ ಪಡೆಯುವಾಗ ಎಚ್ಚರದಿಂದ ಇರಿ ಎಂದು ಖಾಸಗಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Madhu Bangarappa
Koo

ಶಿವಮೊಗ್ಗ: ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಫಲಿತಾಂಶ ಪ್ರಕಟವಾಗಿದೆ. ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಿದರೆ ಒಳ್ಳೆಯದು? ಎಲ್ಲಿ ಎಷ್ಟು ಫೀ ಇದೆ? ಯಾವ ಶಾಲೆಗೆ ಸೇರಿಸಬೇಕು ಎಂದರೆ ಎಷ್ಟು ಡೊನೇಷನ್‌ ಕೊಡಬೇಕು ಎಂಬುದು ಸೇರಿ ಹಲವು ರೀತಿಯಲ್ಲಿ ಯೋಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಾಥಮಿಕ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಖಾಸಗಿ ಶಾಲೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಖಾಸಗಿ ಶಾಲೆಗಳಿಗೆ ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್‌ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್‌ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ವಸೂಲಿ ಮಾಡಿದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂಬುದಾಗಿ ಅವರು ಶಿವಮೊಗ್ಗದಲ್ಲಿ ಎಚ್ಚರಿಕೆ ನೀಡಿದರು.

ಅಂಕಿತಾಗೆ ವೈಯಕ್ತಿಕ ಸಹಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೇ ಮೊದಲ ರ‍್ಯಾಂಕ್‌ ಬಂದ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊನ್ನೂರ್‌ಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. “ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ಆಕೆಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ” ಎಂಬುದಾಗಿ ಮಧು ಬಂಗಾರಪ್ಪ ಹೇಳಿದರು.

“ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನೂ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇನೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸವಾಗಿದ್ದು, ಹಂತ ಹಂತವಾಗಿ ಎಲ್ಲ ಕೆಲಸವನ್ನೂ ಮಾಡುತ್ತೇವೆ. ಮಳೆಗಾಲ ಸಮೀಪಿಸುತ್ತಿದ್ದು, ಸರ್ಕಾರಿ ಶಾಲೆಗಳ ದುರಸ್ತಿಗೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು. ಹಾಸನ ಪೆನ್‌ಡ್ರೈ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾನೂನು ಇದೆ, ಅದರ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಷ್ಟೇ ಹೇಳಿದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Continue Reading

ಕರ್ನಾಟಕ

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

UGCET 2024: ಯುಜಿಸಿಇಟಿ-2024 ಅರ್ಜಿಯಲ್ಲಿ ಆರ್‌ಡಿ ಸಂಖ್ಯೆ ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

VISTARANEWS.COM


on

KEA
Koo

ಬೆಂಗಳೂರು: ಯುಜಿಸಿಇಟಿ-2024ಕ್ಕೆ (UGCET 2024) ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕೆಇಎ ಅಂತಿಮ ಅವಕಾಶ ನೀಡಿದೆ. ಅಭ್ಯರ್ಥಿಗಳು ಮೇ 15ರ ರಾತ್ರಿ 11.59 ಗಂಟೆವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕೆಇಎ ನಡೆಸುವ ಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಆ‌ರ್‌ಡಿ ಸಂಖ್ಯೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಡಿ ಸಂಖ್ಯೆಗಳನ್ನು ಹಾಗೂ ಇತರೆ ಕ್ಲೇಮ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮೇ 15ರ ರಾತ್ರಿ 11.59 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.inಗೆ ಭೇಟಿ ನೀಡಬಹುದು.

ಯುಜಿಸಿಇಟಿ-2024 ಅರ್ಜಿ ತಿದ್ದಪಡಿ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಿದ್ದುಪಡಿ ಮಾಡಿಕೊಳ್ಳಲು ಅನುಸರಿಸಬೇಕಾದ ಕ್ರಮ

  1. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅಭ್ಯರ್ಥಿಗಳ ಲಾಗಿನ್ ಮೂಲಕ ತಿದ್ದುಪಡಿ ಮಾಡಿಕೊಳ್ಳುವುದು.
  2. ಲಿಂಕ್ ಆಯ್ಕೆ ಮಾಡಿದ ನಂತರ ಯಾವುದನ್ನು ಎಡಿಟ್ ಮಾಡಬೇಕು ಎಂಬುದನ್ನು ಸೆಲೆಕ್ಟ್ ಮಾಡಿ, ನಂತರ , (eligibility clause Update, RD details update, Course Update, Upload Documents, Reservation Claims, Special Category claims.) ತಿದ್ದುಪಡಿ ಮಾಡಿ
  3. Declaration button ಅನ್ನು ಆಯ್ಕೆ (Select) ಮಾಡುವ ಮೊದಲು ಪರಿಶೀಲಿಸಿ, ಒಂದು ಸಾರಿ Declaration button ಅನ್ನು ಆಯ್ಕೆ (Select) ಮಾಡಿದ ನಂತರ ಪುನಹ ತಿದ್ದುಪಡಿಮಾಡಿಕೊಳ್ಳಲು ಅವಕಾಶ ವಿರುವುದಿಲ್ಲ.
  4. ತಿದ್ದುಪಡಿ ಮಾಡಿಕೊಂಡ ನಂತರ ತಪ್ಪದೇ Declaration button ಅನ್ನು ಆಯ್ಕೆ (Select) ಮಾಡಿ ನಂತರ Final Submission ಅನ್ನು ಸಲ್ಲಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ಮೊದಲು ಸಲ್ಲಿಸಿದ ಮಾಹಿತಿಯನ್ನೇ ಮುಂದಿನ ಎಲ್ಲಾ ಪ್ರಕ್ರಿಯೆಗೆ ಪರಿಗಣಿಸಲಾಗುವುದು.
  5. ನಂತರ ಮಾರ್ಪಡಿಸಿದ ಅರ್ಜಿಯನ್ನು ಮುದ್ರಿಸಿ ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಮುದ್ರಿತ ಅರ್ಜಿಯ ಕನಿಷ್ಟ ಐದು ಪ್ರತಿಗಳು ತಮ್ಮಲ್ಲಿ ಇರುವುದು ಸೂಕ್ತ.

ಇದನ್ನೂ ಓದಿ | SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

Continue Reading
Advertisement
Prajwal Revanna Case
ಕರ್ನಾಟಕ1 hour ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ1 hour ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ2 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest2 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ2 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ3 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ3 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ3 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ3 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ3 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ6 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ7 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ11 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ12 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ20 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌