Vistara news polling booth : ದಾವಣಗೆರೆಯಲ್ಲಿ ಕೈಗೆ ಜೈ, ಸಿದ್ದೇಶ್ವರ್‌ ಸಾಮ್ರಾಜ್ಯಕ್ಕೆ ಹಿನ್ನಡೆ? - Vistara News

ರಾಜಕೀಯ

Vistara news polling booth : ದಾವಣಗೆರೆಯಲ್ಲಿ ಕೈಗೆ ಜೈ, ಸಿದ್ದೇಶ್ವರ್‌ ಸಾಮ್ರಾಜ್ಯಕ್ಕೆ ಹಿನ್ನಡೆ?

Vistara news polling booth : ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ನಲ್ಲಿ ನಡೆದ ಕರೆಗಳನ್ನು ಆಧರಿಸಿದ ಸಮೀಕ್ಷೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಬಿಜೆಪಿಗೆ ಹಿನ್ನಡೆಯಾಗಿದೆ. ಇದು ಪ್ರಾಥಮಿಕ ಸಮೀಕ್ಷೆಯಾಗಿದ್ದು, ಚುನಾವಣಾ ಭರಾಟೆ ಇನ್ನಷ್ಟೇ ಜೋರಾಗಬೇಕಿದೆ.

VISTARANEWS.COM


on

Vistara Polling Booth Davanagere11
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಗುರುವಾರ (ಮಾ. 21) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಜನಮತಗಣನೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಅಚ್ಚರಿ ಫಲಿತಾಂಶ ಲಭ್ಯವಾಗಿದೆ. ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಇವರ ಪೈಕಿ ಶೇಕಡಾ 65ರಷ್ಟು ಮಂದಿ ಕಾಂಗ್ರೆಸ್‌ನ್ನು ಬೆಂಬಲಿಸಿದ್ದರೆ ಶೇ. 35ರಷ್ಟು ಮಂದಿ ಮಾತ್ರ ಬಿಜೆಪಿ ಪರ ಒಲವು ತೋರಿದ್ದಾರೆ. ಬಿಜೆಪಿ ಆಗಲೇ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದರೆ ಕಾಂಗ್ರೆಸ್‌ನಿಂದ ಮೂವರ ಹೆಸರು ಮುಂಚೂಣಿಯಲ್ಲಿದೆ.

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಬಂದಿರುವ ಕರೆಗಳ ಸಂಖ್ಯೆ ಸಾವಿರಾರು. ಆದರೆ ನಮಗೆ ಸ್ವೀಕರಿಸಲು ಸಾಧ್ಯವಾಗಿದ್ದು ಕೇವಲ 5362 ಕರೆಗಳನ್ನು ಮಾತ್ರ. ಅಚ್ಚರಿ ಎಂದರೆ ಹಾಲಿ ಸಂಸದರನ್ನು ಹೊಂದಿರುವ ಬಿಜೆಪಿ (BJP Karnataka) ಪರವಾಗಿ ಬಂದಿರುವ ಮತಗಳು ಕೇವಲ 1856. ಇನ್ನೂ ಅಭ್ಯರ್ಥಿಯನ್ನೇ ಅಂತಿಮಗೊಳಿಸದ ಕಾಂಗ್ರೆಸ್ (Congress Karnataka) ಪರ 3496 ಮತಗಳು ಬಂದಿವೆ. ಹೀಗಾಗಿ ಇಲ್ಲಿ ಕಾಂಗ್ರೆಸ್‌ ಸದ್ಯಕ್ಕೆ ಮುನ್ನಡೆಯಲ್ಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು : 5362
ಬಿಜೆಪಿ : 1856 (ಶೇ.35 )
ಕಾಂಗ್ರೆಸ್ : 3496 (ಶೇ.65)
ಇತರರಿಗೆ 10 ಮತಗಳು ಸಿಕ್ಕಿವೆ.

Vistara Polling Booth Davanagere

ಪೋಲಿಂಗ್‌ ಬೂತ್‌ನಲ್ಲಿ ಕಂಡ ಕದನದ ಕತೆಗಳು

ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ನೀಡಿದೆ. ಈ ಕ್ಷೇತ್ರದ ಹಾಲಿ ಸಂಸದ ಸಿದ್ದೇಶ್ವರ್‌ ಅವರ ಬಗ್ಗೆ ಕೆಲವೊಂದು ಭಿನ್ನ ಸ್ವರಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರ ಪತ್ನಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಆದರೆ, ಇದರ ವಿರುದ್ಧವೂ ಅಪಸ್ವರಗಳಿವೆ.

ಕಾಂಗ್ರೆಸ್‌ನಿಂದ ಇಲ್ಲಿ ಮೂರು ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ರಾಜ್ಯದಲ್ಲಿ ಸಚಿವರಾಗಿರುವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌, ಸಾಕಷ್ಟು ಓಡಾಟ ನಡೆಸುತ್ತಿರುವ ಜಿಬಿ ವಿನಯಕುಮಾರ್‌ ಮತ್ತು ಎಚ್‌.ಬಿ. ಮಂಜಪ್ಪ.

ಇಲ್ಲಿ ಕಾಂಗ್ರೆಸ್‌ ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಟಿಕೆಟ್‌ ನೀಡಲು ಮುಂದಾಗಿದೆ. ಎನ್ನಲಾಗಿದೆ. ಅಚ್ಚರಿ ಎಂದರೆ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ನಲ್ಲಿ ಜಿ.ಬಿ. ವಿನಯಕುಮಾರ್‌ ಅವರ ಕಡೆ ಸ್ವಲ್ಪ ಜಾಸ್ತಿ ಒಲವು ಕಂಡುಬಂದಿದೆ. ಪ್ರಭಾ ಮಲ್ಲಿಕಾರ್ಜುನ್‌ ಮತ್ತು ವಿನಯ ಕುಮಾರ್‌ ಇಬ್ಬರೂ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರೇ. ಪ್ರಭಾ ಮಲ್ಲಿಕಾರ್ಜುನ್‌ ಅವರು ಶಾಮನೂರು ಕುಟುಂಬದ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದರೆ ಜಿ.ಬಿ ವಿನಯ ಕುಮಾರ್‌ ಅವರು ಇನ್‌ಸೈಡ್‌ ಎಂಬ ಸಂಸ್ಥೆಯ ಮೂಲಕ ಐಎಎಸ್‌ ತರಬೇತಿ ನೀಡುತ್ತಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ ಕೂಡಾ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯಲ್ಲಿ ಸಿದ್ಧಹಸ್ತರು

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Prajwal Revanna Case: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ, ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ರಾಜ್ಯಪಾಲರಿಗೆ ಇಂದು ಜೆಡಿಎಸ್‌ ನಿಯೋಗವು ದೂರು ನೀಡಿದೆ. ಅಲ್ಲದೆ, 25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಎಂದು ಆರೋಪ ಮಾಡಲಾಗಿದೆ. ಜತೆಗೆ ಡಿಕೆಶಿ ವಜಾಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡುವಂತೆಯೂ ಕೋರಲಾಗಿದೆ.

VISTARANEWS.COM


on

Prajwal Revanna Case DK Shivakumar alleged mastermind in 25000 pen drive allotment
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಈ ಕೇಸ್‌ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.

ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್‌ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಪತ್ರದಲ್ಲಿನ ಎಲ್ಲ ಅಂಶಗಳನ್ನು ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು.

ವಿಶೇಷ ತನಿಖಾ ತಂಡ ಸರ್ಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ

ವಿಶೇಷ ತನಿಖಾ ತಂಡ (ಎಸ್‌ಐಟಿ) ಸರಿಯಾಗಿ ತನಿಖೆ ಮಾಡುತ್ತಿಲ್ಲ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿಲ್ಲ. ಇಡೀ ಪ್ರಕರಣವನ್ನು ದಿಕ್ಕು ತಪ್ಪಿಸುವ ರೀತಿಯಲ್ಲಿ ಅದು ನಿರ್ವಹಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆಪಾದನೆ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಎನ್ನುವ ವ್ಯಕ್ತಿ ವಿಡಿಯೋ ಹಾಗೂ ಚಿತ್ರಗಳನ್ನು ಪ್ರಜ್ವಲ್ ಅವರ ಮೊಬೈಲ್ ಕದ್ದು ಸೋರಿಕೆ ಮಾಡಿದ್ದಾರೆ. ಕಾರ್ತಿಕ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿ ಸಂಚು ರೂಪಿಸಿದ್ದರು. ಆದರೆ, ಈವರೆಗೂ ಕಾರ್ತಿಕ್‌ನನ್ನು ಬಂಧಿಸಿಲ್ಲ ಎಂದು ಜೆಡಿಎಸ್ ದೂರಿದೆ.

ಹಾಸನ ಸೇರಿದಂತೆ ರಾಜ್ಯಾದ್ಯಂತ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣದ ಆರೋಪಿಗಳ ಬಗ್ಗೆ ದೂರು ದಾಖಲಾಗಿದ್ದರೂ ಈವರೆಗೆ ಬಂಧಿಸಿಲ್ಲ. ಈ ಕೃತ್ಯದಲ್ಲಿ ನವೀನ್ ಗೌಡ ಎಂಬ ವ್ಯಕ್ತಿ ಭಾಗಿಯಾಗಿದ್ದು, ಹಾಸನದಲ್ಲಿ FIR ಆಗಿದ್ದರೂ ಅವನನ್ನು ತನಿಖಾ ತಂಡ ಬಂಧನ ಮಾಡಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿಡಿಯೊಗಳನ್ನು ಎಲ್ಲೆಡೆ ಸೋರಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧನ ಮಾಡಬೇಕು. ಈ ನಿಟ್ಟಿನಲ್ಲಿ ಎಸ್ ಐಟಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್ ಆಪಾದಿಸಿದೆ.

ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೊಗಳ ಹಂಚಿಕೆ ಮಾಡುವುದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಕರಣದಲ್ಲಿ ನೊಂದಿರುವ ಮಹಿಳೆಯರಿಗೆ ಇದರಿಂದ ಬಹಳ ಆಘಾತವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಎಸ್‌ಐಟಿ ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿಲ್ಲ ಹಾಗೂ ಏಕಪಕ್ಷೀಯವಾಗಿದೆ ಮಾತ್ರವಲ್ಲ, ಪೂರ್ವಾಗ್ರಹ ಪೀಡಿತವಾಗಿದೆ. ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿಸಲಾಗಿದ್ದ ಸುಮಾರು 25 ಸಾವಿರಕ್ಕೂ ಹೆಚ್ಚು ಪೆನ್ ಡ್ರೈವ್‌ಗಳ ಸುರಿಮಳೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇರ ಪಾತ್ರವಿದೆ. ಆ ಪೆನ್ ಡ್ರೈವ್‌ಗಳನ್ನು ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ತಂದು ಹಾಕಲಾಗಿದೆ. ಎಂದು ದೂರಿನಲ್ಲಿ ಪ್ರಮುಖವಾಗಿ ಉಲ್ಲೇಖ ಮಾಡಲಾಗಿದೆ.

ವಕೀಲ, ಬಿಜೆಪಿ ಮುಖಂಡ ದೇವರಾಜ್ ಗೌಡ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆಯಲ್ಲಿ ಪೆನ್ ಡ್ರೈವ್ ಸಂಚು ಬಹಿರಂಗವಾಗಿದೆ. ರಾಜ್ಯ ಸರ್ಕಾರ ರಚನೆ ಮಾಡಿರುವ ತನಿಖಾ ತಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಎಸ್‌ಐಟಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ನೇರವಾಗಿ ಆರೋಪಿಸಿದೆ.

ಅದರಿಂದ ಈ ಎಸ್‌ಐಟಿಯಿಂದ ಈ ಪ್ರಕರಣದ ಪಾರದರ್ಶಕ, ನ್ಯಾಯಯುತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಲು ತಾವು ಮಧ್ಯ ಪ್ರವೇಶ ಮಾಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಎಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಅಲ್ಕೊಡ್ ಹನುಮಂತಪ್ಪ, ಆನಂದ್ ಅಸ್ನೋಟಿಕರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಕರೆಮ್ಮ ನಾಯಕ್, ರಾಜುಗೌಡ ಪಾಟೀಲ್, ನೇಮಿರಾಜ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಭೋಜೆಗೌಡ, ಮಂಜೇಗೌಡ, ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಚೌಡರೆಡ್ಡಿ ತೂಪಲ್ಲಿ, ಡಾ.ಅನ್ನದಾನಿ, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಮಹದೇವು, ಪ್ರಸನ್ನ ಕುಮಾರ್, ಮುನೇಗೌಡ, ಆಂಜಿನಪ್ಪ, ಸೂರಜ್ ನಾಯಕ್ ಸೋನಿ ಮುಂತಾದವರು ನಿಯೋಗದಲ್ಲಿ ಇದ್ದರು.

Continue Reading

ಬೆಂಗಳೂರು

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

Bengaluru News: ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement in bengaluru
Koo

ಬೆಂಗಳೂರು: ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು 5 ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೇ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಅವರು ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ ವಿರುದ್ಧ ಹೋರಾಟ ನಡೆದಿತ್ತು. ಆದರೆ ಕಾಂಗ್ರೆಸ್ ಬಣ್ಣದ ಆಧಾರದಲ್ಲಿ ಜನರ ಮನಸ್ಸನ್ನು ಒಡೆದಿದೆ. 5 ಸಾವಿರ ವರ್ಷಗಳ ಇತಿಹಾಸವಿರುವ ನಮ್ಮನ್ನು ಆಫ್ರಿಕಾದವರು ಎಂದಿದ್ದಾರೆ. ಒಕ್ಕಲಿಗರು, ಲಿಂಗಾಯಿತರು, ದಲಿತರಿಗೆ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ಎಂದು ಪ್ರಶ್ನೆ ಮಾಡಿದರು.

ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾಡ್ರಾ ಯಾವ ದೇಶದಿಂದ ಬಂದಿದ್ದಾರೆ ಎಂದು ಮೊದಲು ತಿಳಿಸಬೇಕು. ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಹೇಳುತ್ತಾರೆ. ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್‌ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

ಮಹಾರಾಷ್ಟ್ರದಲ್ಲಿ ಹುಟ್ಟಿದ ಡಾ. ಬಿ. ಆರ್‌. ಅಂಬೇಡ್ಕರ್‌ ಯಾರು, ಗುಜರಾತ್‌ನಲ್ಲಿ ಹುಟ್ಟಿದ ಗಾಂಧೀಜಿ ಯಾರು, ಬೆಂಗಳೂರು ಕಟ್ಟಿದ ಕೆಂಪೇಗೌಡರು ಯಾರು ಎಂದು ‌ಕಾಂಗ್ರೆಸ್ ಹೇಳಬೇಕು. ಈಗಾಗಲೇ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ನೋಡುತ್ತಿದೆ. ಮೋದಿ ಎಂದರೆ‌ ಕಪಾಳಕ್ಕೆ ಹೊಡಿ ಎಂದವರು ಪಿತ್ರೋಡಾಗೆ ಹೇಗೆ ಹೊಡೆಯುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸ್ವಂತ ಮಕ್ಕಳಿಗೆ ಹಕ್ಕಿಲ್ಲ

ಹಿಂದೆ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತಂದು ರಾಜ್ಯಗಳನ್ನು ಕಿತ್ತುಕೊಂಡರು. ಅದೇ ರೀತಿ ಈಗಿನ ಕಾಂಗ್ರೆಸ್ ಸ್ವಂತ ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತರಲು ಮುಂದಾಗಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಲೂಟಿ ಮಾಡಿದ್ದೇವೆ ಎಂದು ಹೇಳಿದ್ದರು. ಅಂತಹ ಲೂಟಿಯ ಸಂಪತ್ತನ್ನು ನರೇಂದ್ರ ಮೋದಿ ಜನರಿಗೆ ನೀಡಲಿದ್ದಾರೆ ಎಂದರು. ದಕ್ಷಿಣ ಭಾರತದವರು ಆಫ್ರಿಕಾದವರು ಎನ್ನುವುದಾದರೆ ಸಿಎಂ ಸಿದ್ದರಾಮಯ್ಯ ಮೊದಲು ಆಫ್ರಿಕಾಗೆ ಹೋಗಿ ಅಲ್ಲಿ ಸಿಎಂ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

ಮುಖ್ಯಮಂತ್ರಿಗಳೇ ಉತ್ತರಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಲರಿ ನೀರು, ಜ್ಯೂಸ್ ಕುಡಿದುಕೊಂಡು ಎಸಿಯಲ್ಲಿ ಕುಳಿತು ಪ್ರಧಾನಿ ನರೇಂದ್ರ ‌ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಜನರಿಗೆ ನೀರು ನೀಡಿಲ್ಲ, ಹಾಲಿನ ಪ್ರೋತ್ಸಾಹಧನ ನೀಡಿಲ್ಲ, ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡಿಲ್ಲ, ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಕೊಟ್ಟಿಲ್ಲ, ನೇಹಾ ಹತ್ಯೆಗೆ 120 ದಿನಗಳಲ್ಲಿ ತೀರ್ಪು ಕೊಡುತ್ತೇನೆಂದು ಇನ್ನೂ ತನಿಖೆ ಶುರು ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ದಿನ ರಜೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಎಲ್ಲ ಬಗೆಯ ರಜೆ ಪಡೆದು ಮಜಾ ಮಾಡುತ್ತಿದ್ದಾರೆ. ಸದಾ ಕೆಲಸ ಮಾಡುವ ಮೋದಿ ಹಾಗೂ ಕೆಲಸ ಕಳ್ಳ ಸಿಎಂ ಸಿದ್ದರಾಮಯ್ಯ ಅವರ ನಡುವೆ ಎಲ್ಲಿಯ ಹೋಲಿಕೆ ಎಂದು ಅಶೋಕ್‌ ವ್ಯಂಗ್ಯವಾಡಿದರು‌.

Continue Reading

Lok Sabha Election 2024

BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

BJP Karnataka Egg video against Congress BJP social media head arrested
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊಗೆ ಸಂಬಂಧಪಟ್ಟಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಗುರುವಾರ (ಮೇ 9) ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬುಧವಾರವಷ್ಟೇ (ಮೇ 8) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನಿತ್ತು?

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

BJP Karnataka State police issues notices to JP Nadda and Amit Malviya and BY Vijayendra

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading
Advertisement
KL Rahul
ಕ್ರೀಡೆ20 mins ago

IPL 2024 : ಲಕ್ನೊ ತಂಡದ ನಾಯಕನ ಸ್ಥಾನದಿಂದ ರಾಹುಲ್ ಔಟ್​?

Prajwal Revanna Case DK Shivakumar alleged mastermind in 25000 pen drive allotment
ಹಾಸನ22 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Maldives anti-India stance
ಪ್ರಮುಖ ಸುದ್ದಿ1 hour ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ1 hour ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ2 hours ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest2 hours ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar alleged mastermind in 25000 pen drive allotment
ಹಾಸನ22 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ7 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಟ್ರೆಂಡಿಂಗ್‌