Vistara News Polling Booth: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸತತ 9ನೇ ಬಾರಿಯೂ ಅರಳಲಿದೆ ಕಮಲ! - Vistara News

ಪ್ರಮುಖ ಸುದ್ದಿ

Vistara News Polling Booth: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸತತ 9ನೇ ಬಾರಿಯೂ ಅರಳಲಿದೆ ಕಮಲ!

Vistara News Polling Booth: ಬೆಂಗಳೂರು ದಕ್ಷಿಣದಲ್ಲಿ ಮತ್ತೊಮ್ಮೆ ಬಿಜೆಪಿಗೆ ಮತದಾರರು ಜೈ ಎಂದಿದ್ದು, ಯಾರಿಗೆ ಎಷ್ಟು ಮತ ಬಂದಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Bangalore south vistara News polling booth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶುಕ್ರವಾರ (ಮಾ. 22) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಜನಮತಗಣನೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ‌ ಮತ್ತೊಮ್ಮೆ ಬಿಜೆಪಿ ಮೇಲುಗೈ ಸಾಧಿಸಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 5594 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 58ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.42ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ.

ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಅದರಲ್ಲಿ ಸ್ವೀಕರಿಸಿದ ಒಟ್ಟು 5594 ಕರೆಗಳ ಪೈಕಿ ಬಿಜೆಪಿಗೆ 3245 ಮತ, ಕಾಂಗ್ರೆಸ್‌ಗೆ 2349 ಮತ ಬಂದಿವೆ. ಇದರಿಂದ ಇಲ್ಲಿ ಮತ್ತೊಮ್ಮೆ ಬಿಜೆಪಿಯೇ ವಿಜಯಭೇರಿ ಮೊಳಗಿಸಲಿದೆ ಎಂಬುವುದು ಹೆಚ್ಚಿನ ಜನರ ಅಭಿಪ್ರಾಯವಾಗಿದೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು : 5594
ಬಿಜೆಪಿ : 3245 (ಶೇ.58)
ಕಾಂಗ್ರೆಸ್ : 2349 (ಶೇ.42)
ಇತರೆ : 00

ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ತೇಜಸ್ವಿ ಸೂರ್ಯ ಕಣಕ್ಕಿಳಿಯುತ್ತಿದ್ದು, ಕಾಂಗ್ರೆಸ್‌ನಿಂದ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, 1991ರಿಂದ 2019ರವರೆಗೆ ಸತತವಾಗಿ 8 ಬಾರಿ ಬಿಜೆಪಿ ಜಯಭೇರಿ ಮೊಳಗಿಸಿದೆ.

ಬಿಜೆಪಿ ಮಾಜಿ ಸಚಿವ ದಿವಗಂತ ಅನಂತ್ ಕುಮಾರ್ ಅವರು ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಹಿಡಿತವನ್ನು ಹೊಂದಿದ್ದರು. ಅವರ ಜನಪ್ರಿಯತೆ ಹಾಗೂ ಮೋದಿ ಅವರ ನಾಮಬಲದ ಮೇಲೆ ಕಳೆದ ಎರಡು ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳಿತ್ತು. ಸತತ 6 ಬಾರಿ ಅನಂತ ಕುಮಾರ್‌ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿ, ಲೋಕಸಭೆಗೆ ಆಯ್ಕೆಯಾಗಿದ್ದರು. 2019ರಲ್ಲಿ ಸಂಸದ ತೇಜಸ್ವಿ ಸೂರ್ಯ ಗೆಲುವು ಕಂಡಿದ್ದರು.

ಕ್ಷೇತ್ರದಲ್ಲಿ ಬ್ರಾಹ್ಮಣ ಮತ-3,50,000, ಒಕ್ಕಲಿಗ ಮತ-5,00,000, ಎಸ್ ಸಿ, ಎಸ್ ಟಿ 6,00,000, ಮುಸ್ಲಿಂ 3,00,000, ಕ್ರಿಶ್ಚಿಯನ್ 2,00,000, ಇತರೆ 2 ಲಕ್ಷ ಮತದಾರರಿದ್ದಾರೆ. ಈ ಅಂಕಿ ಅಂಶಗಳನ್ನು ನೋಡಿದರೆ ಬಿಜೆಪಿಯೇತರ ಅಭ್ಯರ್ಥಿ ಗೆಲುವು ಸಾಧಿಸಬೇಕಿತ್ತಲ್ಲವೇ ಎಂದು ಮೇಲ್ನೋಟಕ್ಕೆ ಅನ್ನಿಸಬಹುದು. ಆದರೆ ಇಲ್ಲಿ ನಗರ ಕೇಂದ್ರಿತ ಮತದಾರರು ಬಿಜೆಪಿ ಜೊತೆ ಗಟ್ಟಿಯಾಗಿ ನಿಂತಿದ್ದಾರೆ.

1977ರಿಂದ 2019ರವರೆಗೆ ನಡೆದಿರುವ 12 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಒಂದು ಬಾರಿ ಮಾತ್ರ ಗೆಲುವು ಕಂಡಿದ್ದು, ಇತರ ಪಕ್ಷಗಳು ಮೂರು ಬಾರಿ ಹಾಗೂ ಬಿಜೆಪಿ 8 ಬಾರಿ ಗೆಲುವು ಕಂಡಿವೆ. ಇದೀಗ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ ಸಮೀಕ್ಷೆ ಪ್ರಕಾರ ಈ ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ | Vistara News Polling Booth: ಚಿತ್ರದುರ್ಗದಲ್ಲಿ ಮತ್ತೆ ಬಿಜೆಪಿ ಮೇಲುಗೈ; ಕಾಂಗ್ರೆಸ್‌ಗೆ ಹಿನ್ನಡೆ

ಮಾರ್ಚ್‌ 23, ಶನಿವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಚಿಕ್ಕೋಡಿ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ವಿಜಯಪುರ ಕ್ಷೇತ್ರದ ಜನ ಫೋನ್‌ ಮಾಡಿ ಓಟ್‌ ಮಾಡಬಹುದು. ಮಧ್ಯಾಹ್ನ 2 ಮತ್ತು ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

Vistara news polling booth for chikkodi

Vistara news polling booth for vijayapur

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth : ಬೀದರ್‌ನಲ್ಲಿ ಹೆಚ್ಚಿದ ಕಾಂಗ್ರೆಸ್‌ ಖದರ್‌; ಹಾಲಿ ಸಂಸದ ಖೂಬಾಗೆ ಹಿನ್ನಡೆ?

Vistara news polling booth

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Exit Poll 2024 : ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ ಕೂಡ ಬಿಜೆಪಿಗೆ 21 ಸ್ಥಾನಗಳು ಮತ್ತು ತೃಣಮೂಲ ಕಾಂಗ್ರೆಸ್​ಗೆ 19 ಸ್ಥಾನಗಳನ್ನು ನೀಡಿದೆ. ರಿಪಬ್ಲಿಕ್ ಭಾರತ್-ಮೆಟ್ರಿಜ್ ಬಿಜೆಪಿಗೆ 21 ರಿಂದ 25 ಸ್ಥಾನಗಳು ಸಿಗುತ್ತದೆ ಎಂದು ಹೇಳಿದೆ. ಮಮತಾ ಬ್ಯಾನರ್ಜಿ ಅವರ ಪಕ್ಷವು ರಾಜ್ಯದಲ್ಲಿ 16 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅದು ಭವಿಷ್ಯ ನುಡಿದಿದೆ.

VISTARANEWS.COM


on

Rakshit Shetty Richard Anthony Produce By Hombale
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election 2024) ಮತಗಟ್ಟೆ ಸಮೀಕ್ಷೆಯ (Exit Poll 2024) ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗವಾಗುವ ಸಾಧ್ಯತೆ ನಿಚ್ಚಳವಾಗಿದೆ. ಪಶ್ಚಿಮ ಬಂಗಾಳ ಟಿಎಂಸಿಯ ಭದ್ರಕೋಟೆಯಾಗಿರುವ ಹೊರತಾಗಿಯೂ ಅಲ್ಲಿ ಕಮಲ ಪಕ್ಷ ಹೆಚ್ಚು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಳ್ಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಿಜೆಪಿಗೆ 21 ರಿಂದ 26 ಸ್ಥಾನಗಳು ಮತ್ತು ಟಿಎಂಸಿಗೆ 16-18 ಸ್ಥಾನಗಳು ಸಿಗಲಿವೆ ಎಂದು ಹೇಳಿದೆ. ಹೀಗಾಗಿ ತೃಣಮೂಲ ಕಾಂಗ್ರೆಸ್​​ಗೆ ಅಸಮಾಧಾನ ಉಂಟಾಗುವುದು ಖಚಿತ.

ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ ಕೂಡ ಬಿಜೆಪಿಗೆ 21 ಸ್ಥಾನಗಳು ಮತ್ತು ತೃಣಮೂಲ ಕಾಂಗ್ರೆಸ್​ಗೆ 19 ಸ್ಥಾನಗಳನ್ನು ನೀಡಿದೆ. ರಿಪಬ್ಲಿಕ್ ಭಾರತ್-ಮೆಟ್ರಿಜ್ ಬಿಜೆಪಿಗೆ 21 ರಿಂದ 25 ಸ್ಥಾನಗಳು ಸಿಗುತ್ತದೆ ಎಂದು ಹೇಳಿದೆ. ಮಮತಾ ಬ್ಯಾನರ್ಜಿ ಅವರ ಪಕ್ಷವು ರಾಜ್ಯದಲ್ಲಿ 16 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅದು ಭವಿಷ್ಯ ನುಡಿದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಂಗಾಳದ 42 ಸ್ಥಾನಗಳಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದರೆ, ತೃಣಮೂಲ ಕಾಂಗ್ರೆಸ್ 22 ಸ್ಥಾನಗಳನ್ನು ಗಳಿಸಿತ್ತು. ಹೀಗಾಗಿ ಈ ಬಾರಿಯ ಫಲಿತಾಂಶ ಆಡಳಿತಾರೂಢ ಪಕ್ಷಕ್ಕೆ ಸಿಕ್ಕಾಪಟ್ಟೆ ನಷ್ಟ ಉಂಟು ಮಾಡಲಿದೆ.

ಇದನ್ನೂ ಓದಿ: Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

ಈ ಸಮೀಕ್ಷೆಗಳ ಪ್ರಕಾರ 2019 ರಲ್ಲಿ ಎರಡು ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ತನ್ನ ಕಾರ್ಯಕ್ಷಮತೆಯನ್ನು ಹಾಗೆಯ ಉಳಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿವೆ. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 0-2, ಇಂಡಿಯಾ ನ್ಯೂಸ್-ಡಿ-ಡೈನಾಮಿಕ್ಸ್ 2 ಮತ್ತು ರಿಪಬ್ಲಿಕ್ ಭಾರತ್-ಮೆಟ್ರಿಜ್ 0-1 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ರಿಪಬ್ಲಿಕ್ ಬಾಂಗ್ಲಾ ಚುನಾವಣೋತ್ತರ ಸಮೀಕ್ಷೆಯು ಬಂಗಾಳದಲ್ಲಿ ಪಕ್ಷವು ತನ್ನ ಖಾತೆಯನ್ನು ತೆರೆಯಲು ವಿಫಲವಾಗಲಿದೆ ಎಂದು ಹೇಳಿದೆ.

ಎನ್​ಡಿಎಗೆ ಬಹುಮತ

ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ಡಿಎಗೆ ಆರಾಮದಾಯಕ ಬಹುಮತ ಊಹಿಸಿವೆ. ಆಡಳಿತಾರೂಢ ಮೈತ್ರಿಕೂಟವು ತಮಿಳುನಾಡು ಮತ್ತು ಕೇರಳದಲ್ಲಿ ತನ್ನ ಖಾತೆ ತೆರೆಯಲಿದೆ ಮತ್ತು ಕರ್ನಾಟಕದಲ್ಲಿ ಜಯಭೇರಿ ಬಾರಿಸಲಿದೆ ಎಂದು ಅಂದಾಜಿಸಿದೆ. ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯು 543 ಸದಸ್ಯರ ಲೋಕಸಭೆಯಲ್ಲಿ ಆಡಳಿತಾರೂಢ ಮೈತ್ರಿಕೂಟವು 359 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಪ್ರತಿಪಕ್ಷ ಇಂಡಿಯಾ ಬಣವು 154 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದೆ. ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಸಮೀಕ್ಷೆಯು ಎನ್​ಡಿಎಗೆ 353-368 ಸ್ಥಾನಗಳು ಮತ್ತು ಪ್ರತಿಪಕ್ಷಗಳಿಗೆ 118-133 ಸ್ಥಾನಗಳನ್ನು ನೀಡುತ್ತದೆ ಸಮೀಕ್ಷೆ ಮಾಡಿದೆ.

ಜನ್ ಕಿ ಬಾತ್ ಸಮೀಕ್ಷೆಯು ಆಡಳಿತಾರೂಢ ಎನ್​​ಡಿಎಗೆ 362-392 ಸ್ಥಾನಗಳು ಮತ್ತು ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 141-161 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದೆ. ಜೂನ್ 4 ರಂದು ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (ಇವಿಎಂ) ಚಲಾವಣೆಯಾದ ಮತಗಳನ್ನು ಚುನಾವಣಾ ಆಯೋಗ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಿದೆ.

73 ವರ್ಷದ ಮೋದಿ ಗೆಲುವು ಸಾಧಿಸಿದರೆ ಸ್ವಾತಂತ್ರ್ಯ ಹೋರಾಟಗಾರ ಜವಾಹರಲಾಲ್ ನೆಹರೂ ನಂತರ ಸತತ ಮೂರು ಬಾರಿ ಗೆದ್ದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Continue Reading

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading

ಪ್ರಮುಖ ಸುದ್ದಿ

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Dinesh Karthik: ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಡಿಕೆ ಆಗಿದ್ದ, ಐಪಿಎಲ್‌ನಲ್ಲಿ ಬೆಸ್ಟ್‌ ಫಿನೀಶರ್‌ ಎಂಬ ಖ್ಯಾತಿ ಗಳಿಸಿದ್ದ, ಭಾರತ ಕ್ರಿಕೆಟ್‌ ತಂಡಕ್ಕೂ ಅಮೂಲ್ಯ ಕೊಡುಗೆ ನೀಡಿದ ದಿನೇಶ್‌ ಕಾರ್ತಿಕ್‌ ಅವರು ಶನಿವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಗೂ ವಿಡಿಯೊ ಹಂಚಿಕೊಂಡಿದ್ದಾರೆ.

VISTARANEWS.COM


on

Dinesh Karthik
Koo

ಚೆನ್ನೈ: ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಹಿನ್ನಡೆಗಳನ್ನು ಅನುಭವಿಸಿದರೂ, ಅವುಗಳನ್ನು ಮೆಟ್ಟಿ ನಿಂತು, ಕೊನೆಗೊಂದು ಗೆಲುವಿನ ನಗೆ ಬೀರುತ್ತಿದ್ದ, ವೃತ್ತಿಜೀವನದಲ್ಲಂತೂ ಫೀನಿಕ್ಸ್‌ನಂತೆ ಎದ್ದು ಬಂದಿದ್ದ, ಫಿನೀಶರ್‌ ಎಂದೇ ಖ್ಯಾತಿಯಾಗಿದ್ದ ಭಾರತ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ದಿನೇಶ್‌ ಕಾರ್ತಿಕ್‌ (Dinesh Karthik) ಎಲ್ಲ ಮಾದರಿಯ ಕ್ರಿಕೆಟ್‌ಗೆ ಶನಿವಾರ (ಜೂನ್‌ 1) ವಿದಾಯ ಹೇಳಿದ್ದಾರೆ. ಜನ್ಮದಿನದಂದೇ (Birthday) ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಗೂ ವಿಡಿಯೊ ಮೂಲಕ ಆರ್‌ಸಿಬಿ (RCB) ಅಭಿಮಾನಿಗಳ ಪಾಲಿನ ನೆಚ್ಚಿನ ಡಿಕೆ ನಿವೃತ್ತಿ ಘೋಷಿಸಿದ್ದಾರೆ.

“ಕೆಲವು ದಿನಗಳಿಂದ ನಾನು ಯೋಚಿಸುತ್ತಿದ್ದ ಕುರಿತು ಈಗ ಅಂತಿಮ ತೀರ್ಮಾನ ತೆಗೆದುಕೊಂಡಿದ್ದೇನೆ. ನಾನು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದು, ಮುಂಬರುವ ಸವಾಲುಗಳನ್ನು ಎದುರಿಸಲು ನಾನು ಮುಂದಡಿ ಇಡುತ್ತಿದ್ದೇನೆ. ನನ್ನ ವೃತ್ತಿ ಜೀವನ ಪಯಣಕ್ಕೆ ಸಹಕಾರ ನೀಡಿದ ನನ್ನೆಲ್ಲ ತರಬೇತುದಾರರು, ನಾಯಕರು, ಆಯ್ಕೆದಾರರು, ತಂಡದ ಸದಸ್ಯರು, ಸಿಬ್ಬಂದಿಗೆ ಧನ್ಯವಾದಗಳು. ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಕ್ಕೆ ಅದೃಷ್ಟವಂತ ಎಂದೇ ಭಾವಿಸುತ್ತೇನೆ” ಎಂಬುದಾಗಿ ಅವರು ಭಾವುಕ ಪೋಸ್ಟ್‌ ಮಾಡಿದ್ದಾರೆ.

19ನೇ ವಯಸ್ಸಿನಲ್ಲೇ ಪದಾರ್ಪಣೆ

19ನೇ ವಯಸ್ಸಿನಲ್ಲಿ ಅಂದರೆ 2004ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಪದಾರ್ಪಣೆ ಮಾಡಿದರು. 94 ಏಕದಿನ ಪಂದ್ಯಗಳನ್ನಾಡಿದ ಅವರು 9 ಅರ್ಧಶತಕಗಳೊಂದಿಗೆ 1,792 ರನ್‌ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ 42 ಇನ್ನಿಂಗ್ಸ್‌ ಆಡಿ ಅವರು ಒಂದು ಶತಕದೊಂದಿಗೆ 1,025 ರನ್‌ ಗಳಿಸಿದ್ದಾರೆ. ಇನ್ನು 60 ಟಿ-20 ಪಂದ್ಯಗಳನ್ನು ಆಡಿ 686 ರನ್‌ ಗಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲೂ ಅವರು ಛಾಪು ಮೂಡಿಸಿದ್ದಾರೆ. ಸೈಯದ್‌ ಮುಷ್ತಾಕ್‌ ಅಲಿ, ರಣಜಿಯಲ್ಲೂ ಅವರು ಆಡಿದ್ದಾರೆ. ಅವರ ನಾಯಕತ್ವದಲ್ಲಿಯೇ ತಮಿಳುನಾಡು ತಂಡವು ಎರಡು ಬಾರಿ ಮುಷ್ತಾಕ್‌ ಅಲಿ ಟ್ರೋಫಿ ಗೆದ್ದಿದೆ.

ಐಪಿಎಲ್‌ನಲ್ಲಿ ಮೈಲುಗಲ್ಲು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲೂ ದಿನೇಶ್‌ ಕಾರ್ತಿಕ್‌ ಮೈಲುಗಲ್ಲು ನೆಟ್ಟಿದ್ದಾರೆ. ಐಪಿಎಲ್‌ನಲ್ಲಿ 257 ಪಂದ್ಯಗಳನ್ನು ಆಡಿದ ದಿನೇಶ್‌ ಕಾರ್ತಿಕ್‌ 4,842 ರನ್‌ ಬಾರಿಸಿದ್ದಾರೆ. ಕೋಲ್ಕೊತಾ ನೈಟ್‌ ರೈಡರ್ಸ್‌, ಮುಂಬೈ ಇಂಡಿಯನ್ಸ್‌, ಡೆಲ್ಲಿ ಡೇರ್‌ ಡೆವಿಲ್ಸ್‌ ಪಂಜಾಬ್‌ ಕಿಂಗ್ಸ್‌ ಹಾಗೂ ಆರ್‌ಸಿಬಿ ಪರವಾಗಿ ಅವರು ಆಡಿದ್ದರು. ಅದರಲ್ಲೂ, ಆರ್‌ಸಿಬಿಯಲ್ಲಿ ಡಿ.ಕೆ. ಬೆಸ್ಟ್‌ ಫಿನೀಶರ್‌ ಎನಿಸಿದ್ದರು. ಆರ್‌ಸಿಬಿ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಕಾಣುತ್ತಿದ್ದರು. ಈ ಕುರಿತು ಹಲವು ಬಾರಿ ದಿನೇಶ್‌ ಕಾರ್ತಿಕ್‌ ಹೇಳಿದ್ದಾರೆ.

ದಿನೇಶ್‌ ಕಾರ್ತಿಕ್‌ ಅವರ ವೃತ್ತಿ ಬದುಕು ಇನ್ನೇನು ಮುಗಿಯಿತು ಎಂಬಷ್ಟರಲ್ಲಿಯೇ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಅವರು 2022ರ ಟಿ-20 ವಿಶ್ವಕಪ್‌ಗೂ ಆಯ್ಕೆಯಾಗಿದ್ದರು. ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲೂ ಡಿ.ಕೆ ಉತ್ತಮ ಆಟ ಆಡಿದ್ದರು. ಆರ್‌ಸಿಬಿ ಪರ 15 ಮ್ಯಾಚ್‌ಗಳಲ್ಲಿ ಅವರು 326 ರನ್‌ ಬಾರಿಸಿದ್ದರು. ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸಿಕ್ಸರ್‌ ಬಾರಿಸಿ ಗೆಲುವು ತಂದುಕೊಟ್ಟಿದ್ದು ಮರೆಯಲಾಗದ ಇನ್ನಿಂಗ್ಸ್‌ ಆಗಿದೆ. ಅಷ್ಟೇ ಅಲ್ಲ, ಮೊದಲ ಪತ್ನಿ ಮಾಡಿದ ಮೋಸ, ಬಳಿಕ ವಿಚ್ಛೇದನ, ಅದರಿಂದಾದ ಮಾನಸಿಕ ಖಿನ್ನತೆಯಿಂದ ಎದ್ದುಬಂದ ದಿನೇಶ್‌ ಕಾರ್ತಿಕ್‌, ದೀಪಿಕಾ ಪಳ್ಳಿಕಲ್‌ ಅವರನ್ನು ಮದುವೆಯಾಗಿ, ಈಗ ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಆ ಮೂಲಕ ಅವರು ವೈಯಕ್ತಿಕ ಜೀವನದಲ್ಲೂ ದೊಡ್ಡ ಹೋರಾಟಗಾರ ಎಂಬುದನ್ನು ಪ್ರೂವ್‌ ಮಾಡಿದ್ದಾರೆ. ಅಲ್‌ ದಿ ಬೆಸ್ಟ್‌ ಡಿ.ಕೆ.

ಇದನ್ನೂ ಓದಿ: Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Continue Reading

ಪ್ರಮುಖ ಸುದ್ದಿ

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024 : ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ.

VISTARANEWS.COM


on

Exit Poll
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

Continue Reading
Advertisement
Rakshit Shetty Richard Anthony Produce By Hombale
ಪ್ರಮುಖ ಸುದ್ದಿ2 seconds ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ29 mins ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ34 mins ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ37 mins ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ1 hour ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ2 hours ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ2 hours ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

exit poll 2024
ಪ್ರಮುಖ ಸುದ್ದಿ2 hours ago

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Union Minister Pralhad Joshi showed humanity by taking the injured to the hospital in his convoy vehicle
ಕರ್ನಾಟಕ2 hours ago

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು5 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌