IPL 2024 : ಕೆಕೆಆರ್​ ಬೌಲರ್​ಗೆ ದಂಡ ವಿಧಿಸಿದ ಬಿಸಿಸಿಐ - Vistara News

ಪ್ರಮುಖ ಸುದ್ದಿ

IPL 2024 : ಕೆಕೆಆರ್​ ಬೌಲರ್​ಗೆ ದಂಡ ವಿಧಿಸಿದ ಬಿಸಿಸಿಐ

IPL 2024 : ಹರ್ಷಿತ್​ ರಾಣಾ ಮಯಾಂಕ್ ಅಗರ್ವಾಲ್ ಹಾಗೂ ಹೆನ್ರಿಕ್​ ಕ್ಲಾಸೆನ್ ಅವರಿಗೆ ಅನಗತ್ಯ ಸನ್ನೆ ಮಾಡಿದ್ದರು.

VISTARANEWS.COM


on

Harshit Rana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಡನ್​ಗಾರ್ಡನ್ಸ್​: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಐಪಿಎಲ್​ (IPL 2024) ಪಂದ್ಯದ ವೇಳೆ ಟೂರ್ನಿಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತಾ ನೈಟ್ ರೈಡರ್ಸ್ ಸ್ಟಾರ್ ಬೌಲರ್​ ಹರ್ಷಿತ್ ರಾಣಾಗೆ ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಎಸ್ಎಚ್​ಆರ್ ಬ್ಯಾಟರ್​ಗಳಾದ ಮಯಾಂಕ್ ಅಗರ್ವಾಲ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಔಟ್ ಮಾಡಿದ ಬಳಿಕ ಅವರು ತೋದಿದ ಸನ್ನೆಯೇ ದಂಡ ವಿಧಿಸಲು ಕಾರಣ.

ಯುವ ವೇಗಿ ಎಸ್​ಆರ್ಎಚ್​ ವಿರುದ್ಧದ ಪಂದ್ಯದ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ವಿಶೇಷವಾಗಿ ಅವರ ಅಂತಿಮ ಓವರ್ ವೀರೋಚಿತವಾಗಿತ್ತು. ಆದರೆ, ಅವರ ನಡವಳಿಕೆ ಅನೇಕರನ್ನು ನಿರಾಶೆಗೊಳಿಸಿದೆ. ಅಂತೆಯೇ ಐಪಿಎಲ್ ಅವರ ಪಂದ್ಯದ ಶುಲ್ಕದ ಶೇಕಡಾ 60 ಕಡಿತಗೊಳಿಸಿದೆ.

ಇದನ್ನೂ ಓದಿ : IPL 2024 : ಸಂಜು ಬಳಗದ ಸವಾಲು ಮೀರುವುದೇ ರಾಹುಲ್ ಪಡೆ?

“ಐಪಿಎಲ್​ನ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಅಡಿಯಲ್ಲಿ ರಾಣಾ ಎರಡು ಬಾರಿ ಲೆವೆಲ್ 1 ಅಪರಾಧಗಳನ್ನು ಮಾಡಿದ್ದಾರೆ . ಎರಡು ಅಪರಾಧಗಳಿಗಾಗಿ ಅವರಿಗೆ ಪಂದ್ಯದ ಶುಲ್ಕದ 10 ಪ್ರತಿಶತ ಮತ್ತು 50 ಪ್ರತಿಶತದಷ್ಟು ದಂಡ ವಿಧಿಸಲಾಯಿತು. ರಾಣಾ ಎರಡು ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿಯ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ನಿರ್ಧಾರವು ಅಂತಿಮ” ಎಂದು ಐಪಿಎಲ್​ ತನ್ನ ಪ್ರಕಟಣೆ ತಿಳಿಸಿದೆ.

ಅಂತಿಮ ಓವರ್​ನಲ್ಲಿ ಹರ್ಷಿತ್ 13 ರನ್​ಗಳನ್ನು ರಕ್ಷಿಸುವ ಮೂಲಕ ಎಸ್ಎಚ್​ಆರ್​ ತಂಡದ ಸೋಲಿಗೆ ಕಾರಣವಾಗಿದ್ದರು. ಕೆಕೆಆರ್ 4 ರನ್​ಗಳೀಗೆ ಗೆಲುವು ಸಾಧಿಸಿತ್ತು. ಆಂಡ್ರೆ ರಸೆಲ್ ಅವರ ಆಲ್ರೌಂಡ್ ಪ್ರದರ್ಶನದ ಹೊರತಾಗಿಯೂ, ಹೆನ್ರಿಕ್ ಕ್ಲಾಸೆನ್ ಅವರ ಏಕವ್ಯಕ್ತಿ ಪ್ರದರ್ಶನದಿಂದ ಕೆಕೆಆರ್ ಬಹುತೇಕ ಆತಂಕಕ್ಕೆ ಬಿತ್ತು. ಆದರೆ ಅವರು ಕೊನೇ ಓವರ್​​ನಲ್ಲಿ ಔಟಾಗುವ ಮೂಲಕ ಎಸ್​ಎಚ್​ಆರ್​ ಗೆ ಜಯ ಸಿಗಲಿಲ್ಲ.

ಪಂದ್ಯದ ಬಳಿಕ ಮಾತನಾಡಿದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್, “17ನೇ ಓವರ್​ನಿಂದ ತಳಮಳ ಸೃಷ್ಟಿಯಾಯಿತು. ಕೊನೆಯ ಓವರ್​ನಲ್ಲಿ ಏನು ಬೇಕಾದರೂ ಆಗಬಹುದು ಎಂದು ಭಾವಿಸಿದೆ. ಅವರಿಗೆ 13 ರನ್ ಗಳ ಅಗತ್ಯವಿತ್ತು. ನಮ್ಮಲ್ಲಿ ಅನುಭವಿ ಬೌಲರ್ ಇರಲಿಲ್ಲ. ಆದರೆ ನನಗೆ ಹರ್ಷಿತ್ ಮೇಲೆ ನಂಬಿಕೆ ಇತ್ತು. ಅವರಿಗೂ ಆತಂಕ ಇತ್ತು. ಆದಾಗ್ಯೂ ನಿಮ್ಮ ಕ್ಷಣ ಎಂದು ಹೇಳಿ ಬೌಲಿಂಗ್ ನೀಡಿದೆ. ಆಟದಲ್ಲಿ ಏನಾಗುತ್ತದೆ ಎಂಬುದು ಮುಖ್ಯವಲ್ಲ ಮತ್ತು ನಾನು ಅವರನ್ನು ಬೆಂಬಲಿಸುವುದು ಮುಖ್ಯ ಎಂದು ಹೇಳಿದರು.

ರಸೆಲ್ ಮತ್ತು ಸುನಿಲ್ ನರೈನ್ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ನರೈನ್, “ಅವರು ತಮ್ಮ ಸ್ಪೆಲ್​ನಲ್ಲಿ ಬೌಂಡರಿ ನೀಡಲಿಲ್ಲ. ಆಂಡ್ರೆ ಬ್ಯಾಟ್ ಮತ್ತು ಬಾಲ್​ನೊಂದಿಗೆ ಉತ್ತಮ ಪ್ರದರ್ಶನ ನೀಡುವುದನ್ನು ನೋಡಲು ಅದ್ಭುತವಾಗಿದೆ, ಅವರನ್ನು ಹೊಂದಿರುವುದು ಅದ್ಭುತ ಅವಕಾಶ ಎಂದು ಹೇಳಿದರು.

” ಗೆಲುವಿನೊಂದಿಗೆ ಅಭಿಯಾನ ಪ್ರಾರಂಭಿಸಿದಾಗ ನಿಮಗೆ ಪ್ರೇರಣೆ ಸಿಗುತ್ತದೆ. ಈ ಆಟವು ನಮಗೆ ಸಾಕಷ್ಟು ಕಲಿಕೆಗಳನ್ನು ನೀಡಿದೆ. ಈ ಮೈದಾನದಿಂದ ನಾವು ಬಹಳಷ್ಟು ಕಲಿಯುತ್ತೇವೆ. ಫೀಲ್ಡಿಂಗ್ ನಾವು ಸುಧಾರಿಸಬೇಕಾದ ಕ್ಷೇತ್ರವಾಗಿದೆ ಎಂದು ನಾನು ಭಾವಿಸುತ್ತೇನೆ,” ಎಂದು ಅಯ್ಯರ್ ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

Prajwal Revanna Case : ಗುರುವಾರ ಮಧ್ಯರಾತ್ರಿ 12.47ರ ಸುಮಾರಿಗೆ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಬಂದಿಳಿಯುತ್ತಿದ್ದಂತೆ ವಲಸೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಅವರು ಎಸ್​​ಐಟಿಗೆ ಹಸ್ತಾಂತರ ಮಾಡಿದರು. ಸಾವಿರಾರು ಮಹಿಳೆಯರಿಗೆ ಅನ್ಯಾಯ ಮಾಡಿ ಅವರ ಕಣ್ಣೀರಿಗೆ ಕಾರಣನಾದ ಪ್ರಜ್ವಲ್​ ರೇವಣ್ಣನನ್ನು ರೇವಣ್ಣನನ್ನು ಬಂಧಿಸಿದ್ದು ಮಹಿಳಾ ಪೊಲೀಸ್ ಅಧಿಕಾರಿಗಳು.

VISTARANEWS.COM


on

prajwal Revanna Case
Koo

ಬೆಂಗಳೂರು : ಜರ್ಮನಿಯ ಮ್ಯೂನಿಕ್​ನಿಂದ 33 ದಿನಗಳ ಕಳ್ಳಾಟದ ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಗುರುವಾರ ರಾತ್ರಿ ಬಂದಿದ್ದ ಪೆನ್​ಡ್ರೈವ್​ ಅಶ್ಲೀಲ ವಿಡಿಯೊ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna Case) ಅವರನ್ನು ಆರಂಭದಲ್ಲಿ ವಶಕ್ಕೆ ಪಡೆದುಕೊಂಡಿರುವುದು ಮಹಿಳಾ ಪೊಲೀಸರು ಎಂಬ ಮಾಹಿತಿ ಬಹಿರಂಗವಾಗಿದೆ. ಎಸ್​ಐಟಿ ಸೇರಿದಂತೆ ವಿವಿಧ ವಿಭಾಗದ ಹಲವಾರು ಪುರುಷ ಅಧಿಕಾರಿಗಳು ಏರ್​ಪೋರ್ಟ್​​ನಲ್ಲಿ ಅವರ ಬಂಧನಕ್ಕೆ ಕಾಯುತ್ತಿದ್ದ ಹೊರತಾಗಿಯೂ ಮಹಿಳಾ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿರುವುದಕ್ಕೆ ವಿಶೇಷ ಕಾರಣಗಳೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಹಿರಿಯ ಅಧಿಕಾರಿಗಳ ಈ ನಡೆ ಮಾತ್ರ ಸೋಜಿಗ ಎನಿಸಿದೆ.

ಗುರುವಾರ ಮಧ್ಯರಾತ್ರಿ 12.47ರ ಸುಮಾರಿಗೆ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಬಂದಿಳಿಯುತ್ತಿದ್ದಂತೆ ವಲಸೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಅವರು ಎಸ್​​ಐಟಿಗೆ ಹಸ್ತಾಂತರ ಮಾಡಿದರು. ಸಾವಿರಾರು ಮಹಿಳೆಯರಿಗೆ ಅನ್ಯಾಯ ಮಾಡಿ ಅವರ ಕಣ್ಣೀರಿಗೆ ಕಾರಣನಾದ ಪ್ರಜ್ವಲ್​ ರೇವಣ್ಣನನ್ನು ರೇವಣ್ಣನನ್ನು ಬಂಧಿಸಿದ್ದು ಮಹಿಳಾ ಪೊಲೀಸ್ ಅಧಿಕಾರಿಗಳು.

ಮಹಿಳಾ ಇನ್ಸ್‌ಪೆಕ್ಟರ್‌ ಸಹಿತ ಇನ್ನಿತರ ಮಹಿಳಾ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಎಸ್‌ಐಟಿ ಕಚೇರಿಗೆ ಕರೆ ತಂದಿರುವ ವಿಡಿಯೊ ವಿಸ್ತಾರನ್ಯೂಸ್​ಗೆ ಲಭ್ಯವಾಗಿದೆ. ಎಸ್‌ಐಟಿ ಕಚೇರಿಗೆ ಕರೆತರುವ ವೇಳೆ ಪೊಲೀಸರ ವಾಹನದ ಡ್ರೈವರ್‌ ಒಬ್ಬರನ್ನು ಬಿಟ್ಟರೆ ಇನ್ನೆಲ್ಲಾ ಅಧಿಕಾರಿಗಳು ಮಹಿಳೆಯರೇ ಆಗಿದ್ದರು. ಮುಂದಿನ ಸೀಟಿನಲ್ಲಿ ಪ್ರಜ್ವಲ್​ ಅವರ ಹಿಂದೆ ಹಾಗೂ ಮುಂದೆ ಅವರೇ ಇದ್ದರು.

ಇದನ್ನೂ ಓದಿ: Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ! —

ಇದಕ್ಕೆ ನಾನಾ ರೀತಿಯ ವಿಶ್ಲೇಷಣೆ ನೀಡಲಾಗುತ್ತದೆ. ಸಾವಿರಾರ ಮಹಿಳೆಯರಿಗೆ ದೌರ್ಜನ್ಯ ಮಾಡಿರುವ ಪ್ರಜ್ವಲ್​ಗೆ ಅವಮಾನ ಮಾಡಲೆಂದೇ ಅವರನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ ಎಂದು ಕೆಲವರು ಹೇಳಿದರೆ, 33 ದಿನಗಳ ಕಾಲ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಅವರಿಗೆ ಪಾಠ ಕಲಿಸಲೆಂದೇ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಅದೇ ರೀತಿ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಕೆಲವೊಂದು ಮಾಹಿತಿಯನ್ನು ಅವರಿಂದ ಸಂಗ್ರಹಿಸಲು ಅನುಕೂಲವಾಗಲು ಮಹಿಳಾ ಪೊಲೀಸರ ನೆರವು ಪಡೆಯಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಮಾಹಿತಿಯೂ ಇದೆ.

ಎಸ್​ಐಟಿ ಕಚೇರಿಯಲ್ಲಿ ವಿಶ್ರಾಂತಿ

ಏರ್​ಪೋರ್ಟ್​ನಲ್ಲಿ ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆತಂದ ಬಳಿಕ ಅಲ್ಲೇ ವಿಶ್ರಾಂತಿಗೆ ಅವಕಾಶ ಕೊಟ್ಟರು. ಶುಕ್ರವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಮೆಡಿಕಲ್ ಟೆಸ್ಟ್ ಮುಗಿಸಿದ ಬಳಿಕ ಸುಮಾರು ಹನ್ನೊಂದು ಗಂಟೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಪ್ರಜ್ವಲ್ ಪರ ವಕೀಲರು ಈ ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ. ಆದರೆ ಅವರ ಮೇಲೆ ಹಾಕಿರುವ ಕೆಲವೊಂದು ಸೆಕ್ಷನ್​​ಗಳು ಜಾಮೀನು ರಹಿತವಾಗಿದೆ. ಜತೆಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಅವಕಾಶದ ಜೊತೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐಟಿ ಕಸ್ಟಡಿ ಪಡೆಯಲಿದೆ.

ಎರಡು ಅತ್ಯಾಚಾರ ಪ್ರಕರಣ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಎಸ್‌ಐಟಿ ಅಧಿಕಾರಿಗಳು ವಿವರಣೆ ನೀಡಲಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸಿದ್ರೂ ಜಾಮೀನು ಸಿಗದು. ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಈಗಾಗಲೇ ಪ್ರಜ್ವಲ್ ರೇವಣ್ಣನ ಮೊಬೈಲ್ ಫೋನ್‌ಅನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ ಅದರಲ್ಲಿ ಎಷ್ಟು ಡೇಟಾಗಳಿವೆ ಎಂಬುದು ಅಸ್ಪಷ್ಟ.

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗೆ ಎಸ್‌ಐಟಿ? ಸಿಬಿಐ ತನಿಖೆ ತಪ್ಪಿಸಲು ಪ್ಲಾನ್

Valmiki Corporation Scam: ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಸಚಿವ ಪರಮೇಶ್ವರ್ (G Parameshwara) ಜೊತೆ ಅಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ಮತ್ತು ಹೋಂ ಮಿನಿಸ್ಟರ್ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.

VISTARANEWS.COM


on

valmiki corporation scam self harming chandrashekar ವಾಲ್ಮೀಕಿ
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki development corporation) ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ (Officer self Harming) ಪ್ರಕರಣದ (Valmiki corporation Scam) ತನಿಖೆಯನ್ನು ಸಿಐಡಿಗೆ (CID) ಒಪ್ಪಿಸಿರುವರಾಜ್ಯ ಸರ್ಕಾರ, ಇದೀಗ ಪ್ರತಿಪಕ್ಷದ ಒತ್ತಡದಿಂದ ಸಿಬಿಐ (CBI) ತನಿಖೆಗೆ ಹೋಗಬಹುದಾದ ಸನ್ನಿವೇಶ ಎದುರಿಸಲು ಎಸ್ಐಟಿ (SIT) ರಚನೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

185 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿದೆ. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಸಚಿವ ಪರಮೇಶ್ವರ್ (G Parameshwara) ಜೊತೆ ಅಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ಮತ್ತು ಹೋಂ ಮಿನಿಸ್ಟರ್ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.

ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹತ್ತು ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು ಬ್ಯಾಂಕ್‌ ಹಣದಲ್ಲಿ ಅವ್ಯವಹಾರ ಆಗಿದ್ದರೆ ಇದರಲ್ಲಿ ಸಿಬಿಐ ಎಂಟ್ರಿ ಆಗಬಹುದು. ಇದನ್ನು ಸಿಬಿಐ ಹಾಗೂ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವ ಮೊದಲೇ ಎಸ್ಐಟಿ ರಚನೆ ಮಾಡಿ ತನಿಖೆ ಇನ್ನಷ್ಟು ಚುರುಕುಗೊಳಿಸಲು ಸರ್ಕಾರ ತೀರ್ಮಾನ ಮಾಡುವ ಸಾಧ್ಯತೆ ಇದೆ. ಜೊತೆಗೆ, ಪ್ರಕರಣದಲ್ಲಿ ಕೇಳಿ ಬಂದಿರುವ ಹೆಸರಾದ ಅಧಿಕಾರಿ ನಾಗರಾಜ್‌, ಸಚಿವ ನಾಗೇಂದ್ರ ಜೊತೆ ಆಪ್ತರಾಗಿರುವುದರಿಂದಲೂ, ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ಇಷ್ಟವಿಲ್ಲದಾಗಿದೆ.

ರಿಪೋರ್ಟ್ ಬರೋತನಕ ಸಚಿವ ನಾಗೇಂದ್ರ ಸೇಫ್?

ಪ್ರಕರಣದಲ್ಲಿ ಸಚಿವ ನಾಗೇಂದ್ರ ಕೈವಾಡವಿದೆ, ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಹಾಗೇ ಸಿಎಂ ತುರ್ತಾಗಿ ಸಭೆ ನಡೆಸಿದ್ದು, ಡಿಜಿ ಅಲೋಕ್ ಮೋಹನ್‌ರಿಂದ CID ಪ್ರಾಥಮಿಕ ಮಾಹಿತಿ ಪಡೆದು‌ಕೊಂಡಿದ್ದಾರೆ. ಕಾವೇರಿ ನಿವಾಸದಲ್ಲಿ ಒಂದು ಗಂಟೆಗಳ ಕಾಲ‌ ಡಿಸಿಎಂ ಜೊತೆಯೂ ಚರ್ಚೆ ನಡೆಸಿದರು.

ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ನಿಗಮದ ಎಂಡಿ ಸೇರಿದಂತೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು CIDಗೆ ವಹಿಸಲಾಗಿದೆ. CID ರಿಪೋರ್ಟ್ ಬರೋದಿಕ್ಕಿಂತ ಮುಂಚೆ ಯಾವುದೇ ಕಾರಣಕ್ಕೂ ಸಚಿವರ ಮೇಲೆ ಕ್ರಮ ಸಲ್ಲದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. CID ರಿಪೋರ್ಟ್ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳೋಣ ಎನ್ನುವ ನಿರ್ಧಾರಕ್ಕೆ ಸಿಎಂ, ಡಿಸಿಎಂ ಬಂದಿದ್ದಾರೆ ಎನ್ನಲಾಗಿದೆ.

ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಇಂದು ಮತ್ತೊಂದು ಸುತ್ತಿನ ಸಭೆಯನ್ನು ಸಿಎಂ ಹಾಗೂ ಡಿಸಿಎಂ ನಡೆಸಲಿದ್ದಾರೆ. ಕಾವೇರಿ ನಿವಾಸದಲ್ಲಿ 11 ಗಂಟೆ ನಂತರ ಸಿಎಂ- ಡಿಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ನಾಗೇಂದ್ರ ಪ್ರಕರಣ ಸಿಬಿಐಗೆ ವರ್ಗಾವಣೆಯಾದರೆ ನಾಗೇಂದ್ರ ತಲೆದಂಡ ಎಂಬ ಚರ್ಚೆ ಶುರುವಾಗಿದೆ. ರಾಜ್ಯ ಸರ್ಕಾರ CID ತನಿಖೆ ನಂತರ ಕ್ರಮ ಕೈಗೊಳ್ಳೋಣ ಎಂಬ ನಿರ್ಧಾರಕ್ಕೆ ಬಂದಿತ್ತು. ಆದ್ರೆ RBI ರೂಲ್ಸ್ ಪ್ರಕಾರ, 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ಸಿಬಿಐ ಕೂಡ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಮುಂದಿನ ನಡೆಯ ಬಗ್ಗೆ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Continue Reading

ಉದ್ಯೋಗ

Job Alert: ಗಮನಿಸಿ; 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 30. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading
Advertisement
Bhavani Reavanna
ಕರ್ನಾಟಕ24 mins ago

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Gold Rate Today
ಚಿನ್ನದ ದರ25 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Physical Abuse
ಕಲಬುರಗಿ25 mins ago

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Spelling Bee
ವಿದೇಶ31 mins ago

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Nivetha Pethuraj heated argument video with cops
ಟಾಲಿವುಡ್39 mins ago

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

T20 World Cup 2024
ಕ್ರಿಕೆಟ್44 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

Rameshwaram Cafe
ವೈರಲ್ ನ್ಯೂಸ್1 hour ago

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ1 hour ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ1 hour ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ1 hour ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ24 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌