R K S Bhadauria : ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ ಬಿಜೆಪಿಗೆ ಸೇರ್ಪಡೆ - Vistara News

ಪ್ರಮುಖ ಸುದ್ದಿ

R K S Bhadauria : ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ ಬಿಜೆಪಿಗೆ ಸೇರ್ಪಡೆ

R K S Bhadauria: ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಭಾರತೀಯ ವಾಯುಪಡೆಯಲ್ಲಿ (ಐಎಎಫ್) ಬದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.

VISTARANEWS.COM


on

Bhadauria
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್​ಕೆಎಸ್​ ಬದೌರಿಯಾ (R K S Bhadauria) ಭಾನುವಾರ ಬಿಜೆಪಿಗೆ ಸೇರಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ (Vinod Thavde) ಅವರು ಭಾರತೀಯ ವಾಯುಪಡೆಯಲ್ಲಿ (IAF) ಬದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ಅವರು ಈಗ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸವನ್ನು ತಾವ್ಡೆ ವ್ಯಕ್ತಪಡಿಸಿದ್ದಾರೆ.

ಬದೌರಿಯಾ ಅವರು ಐಎಎಫ್​ನಲ್ಲಿ ಸುಮಾರು 40 ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ್ ಕಾರ್ಯಕ್ರಮಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆರ್ಕೆಎಸ್ ಭದೌರಿಯಾ ಉತ್ತರ ಪ್ರದೇಶದವರಾಗಿದ್ದಾರೆ. ಅಂತೆಯೇ ಅಲ್ಲಿನ ಲೋಕಸಭಾ ಚುನಾವಣೆಗೆ ರಾಜ್ಯದ ಹಲವಾರು ಸ್ಥಾನಗಳಿಂದ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಇನ್ನೂ ಹೆಸರಿಸಿಲ್ಲ. ಹೀಗಾಗಿ ಬದೌರಿಯಾ ಅವರು ಅಲ್ಲಿ ಚುನಾವಣೆಗೆ ನಿಲ್ಲಬಹುದು ಎಂದು ಹೇಳಲಾಗಿದೆ.

ರಾಜ್ಯದ 5 ಕ್ಷೇತ್ರ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಭಾನುವಾರ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಕರ್ನಾಟಕದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಈ ಪಟ್ಟಿಯಲ್ಲಿ ಘೋಷಿಸಬಹುದು ಎನ್ನಲಾಗಿದೆ. ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಟ್ಟಿರುವ ಹಾಸನ, ಮಂಡ್ಯ ಹಾಗೂ ಕೋಲಾರ ಹೊರತುಪಡಿಸಿ ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಚಿತ್ರದುರ್ಗ, ರಾಯಚೂರು, ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂಬುದು ಈ ಪಟ್ಟಿಯಲ್ಲಿ ಗೊತ್ತಾಗಬಹುದು.

ಇದನ್ನೂ ಓದಿ : Udhayanidhi Stalin : 28 ಪೈಸೆ ಪಿಎಂ; ಮೋದಿಯನ್ನು ಹೀಗೆಳೆದ ಉದಯನಿಧಿ ಸ್ಟಾಲಿನ್​

ಬಿಜೆಪಿ ನಾಲ್ಕನೇ ಪಟ್ಟಿಯಲ್ಲಿ ಕರ್ನಾಟಕವಲ್ಲದೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ, ಒಡಿಶಾ ಮತ್ತು ಆಂಧ್ರಪ್ರದೇಶದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸಭೆ ಶನಿವಾರ ನಡೆದಿದ್ದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಭಾನುವಾರ ಪ್ರಕಟವಾಗುವ ನಿರೀಕ್ಷೆಯಿರುವ ಪಟ್ಟಿಯ ಕುರಿತು ಬಿಜೆಪಿಯ ಪ್ರಮುಖ ನಾಯಕರು ಮೂರು ಗಂಟೆಗಳ ಚರ್ಚೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಸಭೆಯಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Anti Islam Rally: ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಇನ್ನು, ರ‍್ಯಾಲಿ ನಡೆಯುವಾಗಲೇ ದುಷ್ಕರ್ಮಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾನೆ.

VISTARANEWS.COM


on

Anti Islam Rally
Koo

ಬರ್ಲಿನ್:‌ ಜರ್ಮನಿಯ ಮ್ಯಾನ್‌ಹೆಮ್‌ನಲ್ಲಿ ನಡೆದ ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ (Anti Islam Rally) ದುಷ್ಕರ್ಮಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ರ‍್ಯಾಲಿಯ ಮಧ್ಯೆ ಏಕಾಏಕಿ ನುಗ್ಗಿ, ಚಾಕು ಇರಿದ ಕಾರಣ ಒಬ್ಬ ಪೊಲೀಸ್‌ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಾರ್ಕ್ಟ್‌ಪ್ಲಾಟ್ಜ್‌ ಪ್ರದೇಶದ ಬಳಿ ಇಸ್ಲಾಂಅನ್ನು ವಿರೋಧಿಸಿ ರ‍್ಯಾಲಿ ನಡೆಯುತ್ತಿರುವಾಗ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವ್ಯಕ್ತಿಯೊಬ್ಬರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇಸ್ಲಾಮಿಕ್‌ ಹಿಂಸಾಚಾರ ಖಂಡಿಸಿ ಅವರು ಭಾಷಣ ಮಾಡುವವರಿದ್ದರು. ಆದರೆ, ಇದೇ ವೇಳೆ ವ್ಯಕ್ತಿಯು ದಾಳಿ ಮಾಡಿದ್ದಾನೆ. ಆತನನ್ನು ಹಿಡಿಯಲು ಹೋದ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಇನ್ನು, ಮತ್ತೊಬ್ಬ ಪೊಲೀಸ್‌ ಅಧಿಕಾರಿಯು ದುಷ್ಕರ್ಮಿಯ ಮೇಲೆ ಗುಂಡು ಹಾರಿಸುವ ಮೂಲಕ ಆತನನ್ನು ಹಿಡಿದಿದ್ದಾರೆ. ಪೊಲೀಸ್‌ ಗುಂಡಿನ ದಾಳಿಗೆ ಗಾಯಗೊಂಡಿರುವ ದುಷ್ಕರ್ಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

“ಇಸ್ಲಾಂ ವಿರೋಧಿ ರ‍್ಯಾಲಿಯ ವೇಳೆ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿ ಸೇರಿ ಹಲವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಾಗೊಂದು ವೇಳೆ, ದಾಳಿಯ ಹಿಂದೆ ಇಸ್ಲಾಮಿಕ್‌ ಕೈವಾಡ ಇದೆ ಎಂಬುದು ಗೊತ್ತಾದರೆ ದೇಶದಲ್ಲಿ ಮತ್ತೊಂದು ಇಸ್ಲಾಮಿಕ್‌ ಹಿಂಸಾಚಾರ ನಡೆಯಲಿದೆ. ಇಂತಹ ಹಿಂಸಾಚಾರದ ಬಗ್ಗೆ ನಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿದ್ದೇವೆ” ಎಂಬುದಾಗಿ ಜರ್ಮನಿ ಗೃಹ ಸಚಿವ ನ್ಯಾನ್ಸಿ ಫೇಸರ್‌ ಪ್ರಕಟಣೆ ಹೊರಡಿಸಿದ್ದಾರೆ.

ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಪೂರ್ವ ಜರ್ಮನಿಯಲ್ಲಿ ಇಸ್ಲಾಂ ಧರ್ಮೀಯರ ಉಪಟಳ ಖಂಡಿಸಿ ಪೆಜಿಡಾ (PEGIDA) ಎಂಬ ಸಂಘಟನೆಯು ನಿಯಮಿತವಾಗಿ ಇಸ್ಲಾಂ ವಿರುದ್ಧ ರ‍್ಯಾಲಿಗಳನ್ನು ನಡೆಸುತ್ತಲೇ ಇರುತ್ತದೆ. ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಈ ಸಂಘಟನೆಯ ಸದಸ್ಯರೂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Continue Reading

ದೇಶ

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Modi Medidation: Modi Meditation: ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. ಇದೇ ವೇಳೆ ಅವರು ಎರಡು ದಿನವೂ ಆಹಾರ ಸೇವಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

VISTARANEWS.COM


on

Modi Meditation
Koo

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024), ಅಬ್ಬರದ ಪ್ರಚಾರ, ಸಾಲು ಸಾಲು ರ‍್ಯಾಲಿಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) ಗುರುವಾರದಿಂದ (ಮೇ 30) 45 ಗಂಟೆಗಳ ಧ್ಯಾನ (Modi Meditation) ಆರಂಭಿಸಿದ್ದಾರೆ. ಜೂನ್‌ 1ರವರೆಗೆ ಮೋದಿ ಅವರು ಧ್ಯಾನಸ್ಥರಾಗಿಯೇ ಇರಲಿದ್ದಾರೆ. ಮೋದಿ ಅವರು ಗಾಢವಾಗಿ ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು.
ನರೇಂದ್ರ ಮೋದಿ ಧ್ಯಾನದ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತ ಭದ್ರತೆಗಾಗಿ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading

ಕರ್ನಾಟಕ

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Neha Hiremath: ನೇಹಾ ಹಿರೇಮಠ ಅವರು ಬೆಂಗಳೂರಿನ ಬೇಗೂರು ರೋಡ್‌, ಹೊಂಗಸಂದ್ರದ ವಾರ್ಡ್‌ ನಂಬರ್‌ 135ರಲ್ಲಿ ವಾಸವಿರುವುದಾಗಿ ವಿಳಾಸ ನೀಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದು ಮತ್ತೊಂದು ಚರ್ಚೆಯ ವಿಷಯವಾಗಿದೆ. ಇವರು ಎಸ್‌ಸಿ ಪ್ರಮಾಣಪತ್ರ ಪಡೆದಿರುವುದಕ್ಕೆ ಹಲವು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

VISTARANEWS.COM


on

Neha Hiremath
Koo

ಬೆಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ (Neha Murder Case) ಹೊಸ ಟ್ವಿಸ್ಟ್‌ ಸಿಕ್ಕಿದೆ. ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ, ಲಿಂಗಾಯತ ಸಮುದಾಯದ ನೇಹಾ ಹಿರೇಮಠ ಅವರು ಪಡೆದಿರುವ ಪರಿಶಿಷ್ಟ ಜಾತಿ ಪ್ರಮಾಣಪತ್ರವೀಗ (Caste Certificate) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಲಿಂಗಾಯತ ಸಮುದಾಯದ ನಿರಂಜನ ಹಿರೇಮಠ ಅವರ ಪುತ್ರಿಯಾದ ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್‌ ಎಂಬಾತನನ್ನು ಬಂಧಿಸಲಾಗಿದ್ದು, ಇದು ಲವ್‌ ಜಿಹಾದ್‌ ಎಂಬ ಆರೋಪಗಳೂ ಕೇಳಿಬಂದಿದ್ದವು. ನೇಹಾಳನ್ನು ಕೊಂದಿದ್ದ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಜಾತಿ ಪ್ರಮಾಣಪತ್ರವು ವೈರಲ್‌ ಆಗಿದೆ.

Neha Murder Case

ಬೆಂಗಳೂರು ವಿಳಾಸ ನೀಡಿದ್ದೇಕೆ?

ನೇಹಾ ಹಿರೇಮಠ ಅವರು ಬೆಂಗಳೂರಿನ ಬೇಗೂರು ರೋಡ್‌, ಹೊಂಗಸಂದ್ರದ ವಾರ್ಡ್‌ ನಂಬರ್‌ 135ರಲ್ಲಿ ವಾಸವಿರುವುದಾಗಿ ವಿಳಾಸ ನೀಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದು ಮತ್ತೊಂದು ಚರ್ಚೆಯ ವಿಷಯವಾಗಿದೆ. ಮೊದಲಿಗೆ ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದೇಕೆ? ಹುಬ್ಬಳ್ಳಿಯವರಾದ ಅವರು ಅದಕ್ಕೆ, ಬೆಂಗಳೂರು ವಿಳಾಸ ನೀಡಿದ್ದೇಕೆ? ನೇಹಾ ಹಿರೇಮಠ ಅವರು ಇದ್ದಿದ್ದು ಬೆಂಗಳೂರಿನಲ್ಲಾ? ಅಥವಾ ಹುಬ್ಬಳ್ಳಿಯಲ್ಲಾ ಎಂಬುದು ಸೇರಿ ಹಲವು ಪ್ರಶ್ನೆಗಳು ಮಾಡಿವೆ.

ಸಮತಾ ಸೇನೆ ಆಕ್ರೋಶ

ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದಕ್ಕೆ ಹುಬ್ಬಳ್ಳಿಯಲ್ಲಿ ಸಮತಾ ಸೇನೆಯು ಆಕ್ರೋಶ ವ್ಯಕ್ತಪಡಿಸಿದೆ. “ಹುಬ್ಬಳ್ಳಿ ನಿವಾಸಿಯಾದ ನೇಹಾ ಹಿರೇಮಠ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಅಲ್ಲದೆ, ಅವರು ಬೆಂಗಳೂರು ವಿಳಾಸ ನೀಡಿ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಇದು ಪರಿಶಿಷ್ಟರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ” ಎಂದು ಸಂಘಟನೆಯು ದೂರಿದೆ. ಅಷ್ಟೇ ಅಲ್ಲ, ಅವರ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು ಆಗ್ರಹಿಸಿದೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ದೇಶ

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Heart Attack: ವಿದ್ಯಾರ್ಥಿಗಳು, ಯುವತಿಯರು ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಯೋಧ ಬಲವೀರ್‌ ಸಿಂಗ್‌ ಛಬ್ರಾ ಅವರು ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಪ್ರದರ್ಶನ ನೀಡುತ್ತಿದ್ದರು. ಇದೇ ವೇಳೆ ಅವರು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Heart Attack
Koo

ಭೋಪಾಲ್:‌ ಮಧ್ಯಪ್ರದೇಶದಲ್ಲಿ (Madhya Pradesh) ನಿವೃತ್ತ ಯೋಧರೊಬ್ಬರು ವೇದಿಕೆ ಮೇಲೆ ತಿರಂಗಾ ಹಿಡಿದು ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಇಂದೋರ್‌ನ ಫೂಟಿ ಖೋಟಿ ಪ್ರದೇಶದಲ್ಲಿ ನಡೆದ ಯೋಗ ಶಿಬಿರದಲ್ಲಿ ನಿವೃತ್ತ ಯೋಧ ದೇಶಭಕ್ತಿ ಗೀತೆಗೆ ನೃತ್ಯ ಮಾಡುತ್ತಿದ್ದರು. ಸೇನೆಯ ಸಮವಸ್ತ್ರ ಧರಿಸಿ, ಕೈಯಲ್ಲಿ ತಿರಂಗಾ ಹಿಡಿದು ಯೋಧ ವೇದಿಕೆ ಮೇಲೆ ಕುಣಿಯುತ್ತಿದ್ದರು. ಇದೇ ವೇಳೆ ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಮನಕಲಕುವ ವಿಡಿಯೊ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಭಾರತೀಯ ಸೇನೆಯ ನಿವೃತ್ತ ಯೋಧ, 73 ವರ್ಷದ ಬಲವೀರ್‌ ಸಿಂಗ್‌ ಛಬ್ರಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯೋಗ ಶಿಬಿರದ ಹಿನ್ನೆಲೆಯಲ್ಲಿ ಬಲವೀರ್‌ ಸಿಂಗ್‌ ಛಬ್ರಾ ಅವರನ್ನು ಶುಕ್ರವಾರ (ಮೇ 31) ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳು, ಯುವತಿಯರು ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಲವೀರ್‌ ಸಿಂಗ್‌ ಛಬ್ರಾ ಅವರು ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಪ್ರದರ್ಶನ ನೀಡುತ್ತಿದ್ದರು. ಇದೇ ವೇಳೆ ಅವರು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಿದ್ದರೂ ಚಪ್ಪಾಳೆ ತಟ್ಟುತ್ತಿದ್ದ ಜನ

ಬಲವೀರ್‌ ಸಿಂಗ್‌ ಛಬ್ರಾ ಅವರು ವೇದಿಕೆ ಮೇಲೆ ಉತ್ಸಾಹದಿಂದಲೇ ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಯೋಗ ಶಿಬಿರದಲ್ಲಿ ಪಾಲ್ಗೊಂಡವರು ಚಪ್ಪಾಳೆ ಮೂಲಕ ಹುರಿದುಂಬಿಸುತ್ತಿದ್ದರು. ಆದರೆ, ಅಸಹನೀಯ ನೋವಿನಿಂದ ನಿವೃತ್ತ ಯೋಧ ಕೆಳಗೆ ಬಿದ್ದರೂ ಜನ ಚಪ್ಪಾಳೆ ತಟ್ಟುತ್ತಲೇ ಇದ್ದರು. ನೃತ್ಯದ ಭಾಗವಾಗಿಯೇ ಬಲವೀರ್‌ ಸಿಂಗ್‌ ಛಬ್ರಾ ಅವರು ಕೆಳಗೆ ಬಿದ್ದಿದ್ದಾರೆ ಎಂಬುದಾಗಿ ತಪ್ಪು ತಿಳಿದ ಜನ ಚಪ್ಪಾಳೆ ತಟ್ಟುವುದನ್ನು ಮುಂದುವರಿಸಿದ್ದರು. ಇದಾದ ಕೆಲ ನಿಮಿಷಗಳ ಬಳಿಕವೇ ಅಲ್ಲಿದ್ದವರಿಗೆ ನಿವೃತ್ತ ಯೋಧ ನೋವು ಸಹಿಸದೆ ಕುಸಿದಿದ್ದಾರೆ ಎಂಬುದು ಗೊತ್ತಾಗಿದೆ.

“73ನೇ ವಯಸ್ಸಿನಲ್ಲೂ ಬಲವೀರ್‌ ಸಿಂಗ್‌ ಛಬ್ರಾ ಅವರು ನಮ್ಮ ಕರೆ ಓಗೊಟ್ಟು, ಉತ್ಸಾಹದಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ದೇಶಭಕ್ತಿ ಗೀತೆಗೆ ಅವರು ವೇದಿಕೆ ಮೇಲೆ ಹೆಜ್ಜೆ ಹಾಕುತ್ತಿದ್ದರು. ಇದೇ ವೇಳೆ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಶಿಬಿರದ ಆಯೋಜಕ ರಾಜ್‌ಕುಮಾರ್‌ ಜೈನ್‌ ಮಾಹಿತಿ ನೀಡಿದ್ದಾರೆ.‌

ನೇತೃದಾನ ಮಾಡಿ ಸಾರ್ಥಕತೆ ಮೆರೆದ ನಿವೃತ್ತ ಯೋಧ

ಬಲವೀರ್‌ ಸಿಂಗ್‌ ಛಬ್ರಾ ಅವರ ಪುತ್ರ ಜಗಜೀತ್‌ ಸಿಂಗ್ ಅವರು ತಂದೆಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದಾರೆ. “ಹಲವು ವರ್ಷಗಳಿಂದ ನನ್ನ ತಂದೆಯು ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸಾವಿನ ಬಳಿಕವೂ ಅವರು ನೇತ್ರದಾನ ಹಾಗೂ ಚರ್ಮದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Continue Reading
Advertisement
Anti Islam Rally
ವಿದೇಶ9 mins ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ43 mins ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು2 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ2 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ3 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ3 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ3 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ3 hours ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 20243 hours ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ3 hours ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌